BCS_India_kn_irv_1pe_book/1pe/1.json

30 lines
10 KiB
JSON

{
"1": "ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ ",
"2": "ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ವಿಧೇಯರಾಗುವುದಕ್ಕಾಗಿ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ ",
"3": "ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ ",
"4": "ನಮ್ಮನ್ನು ಲಯ ಕಳಂಕ ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ ",
"5": "ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ ",
"6": "ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಹರ್ಷಿಸುವವರಾಗಿದ್ದೀರಿ ",
"7": "ನಾಶವಾಗುವಂತಹದ್ದೂ ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಮಾನ ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ ",
"8": "",
"9": "",
"10": "ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು ",
"11": "ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು ",
"12": "ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ ",
"13": "ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ ",
"14": "ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ",
"15": "ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ ",
"16": "ಏಕೆಂದರೆ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದಿದೆಯಲ್ಲಾ ",
"17": "ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ ",
"18": "ನಿಮ್ಮ ಪಿತೃಗಳಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ ",
"19": "ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ ",
"20": "ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು ",
"21": "ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ ",
"22": "ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ ಯಥಾರ್ಥವಾಗಿಯೂ ಪ್ರೀತಿಸಿರಿ ",
"23": "ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ ಆದರೆ ನಾಶವಾಗದಂಥ ವಾಕ್ಯದಿಂದಲೇ ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು ",
"24": "ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ ಹುಲ್ಲು ಒಣಗಿ ಹೋಗುವುದು ಅದರ ಹೂವು ಉದುರಿ ಹೋಗುವುದು ",
"25": "ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು ಸುವಾರ್ತಾವಾಕ್ಯವೇ",
"front": "\\s1 ಪೀಠಿಕೆ\n\\p",
"8-9": "\\f + \\fr 1:8 \\ft 1 ಯೋಹಾ 4:20:\\f*ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. \\f + \\fr 1:8 \\ft ಇಬ್ರಿ. 11:27; ಯೋಹಾ 20:29:\\f*ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ \\f + \\fr 1:9 \\ft ರೋಮಾ. 6:22:\\f*ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.\n\\p"
}