bavari_kan-x-bavari_eph_tex.../04/14.txt

1 line
1.3 KiB
Plaintext

\v 14 ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗಳಿಗೂ, ದುರ್ಬೋಧಕರ ಕುಯುಕ್ತಿಗೂ, ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರಬಾರದು. \v 15 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ಬೆಳೆದು ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. \v 16 ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ದಿಯನ್ನು ಹೊಂದುತ್ತದೆ. ದೇವರಿಂದ ಕರೆಯಿಸಿಕೊಂಡವರು ಅಜ್ಞಾನಿಗಳ ದುರ್ನಡತೆಯನ್ನು ಬಿಟ್ಟುಬಿಟ್ಟು ಯೋಗ್ಯರಾಗಿ ನಡೆಯಬೇಕು