bavari_kan-x-bavari_eph_tex.../06/05.txt

1 line
1.2 KiB
Plaintext

\v 5 ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ. \v 6 ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. \v 7 ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. \v 8 ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.