bavari_kan-x-bavari_luk_tex.../12/57.txt

1 line
1.2 KiB
Plaintext
Raw Normal View History

\v 57 <<ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? \v 58 ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. \v 59 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ>> ಅಂದನು.