\v 29 ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿರಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. \v 30 ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ - <<ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ ಎಂದು ಕೇಳಿದರು. \v 31 ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; \v 32 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ, ನೀತಿವಂತರನ್ನು ಕರೆಯುವುದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಎಂದು ಅವರಿಗೆ ಉತ್ತರಕೊಟ್ಟನು.