\v 33 <ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. \v 34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. \v 35 ಆದ್ದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. \v 36 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವುದು>> ಅಂದನು. ಯೇಸು ಫರಿಸಾಯರ ದುರ್ಗುಣಗಳನ್ನು ಖಂಡಿಸಿದ್ದು