\v 32 ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. \v 33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು - <<ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದ್ದಕ್ಕೆ \v 34 ಅವರು - <<ಇದು ಕರ್ತನಿಗೆ ಬೇಕಾಗಿದೆ>> ಎಂದು ಹೇಳಿದರು. \v 35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. \v 36 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.