\v 29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. \v 30 \v 31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. \v 32 ಕಡೆಯಲ್ಲಿ ಆ ಹೆಂಗಸೂ ಸತ್ತಳು. \v 33 ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ>> ಅಂದರು.