\v 10 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; \v 11 ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.