\v 29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ - <<ನನ್ನ ನೆರೆಯವನು ಯಾರು?>> ಎಂದು ಯೇಸುವನ್ನು ಕೇಳಲು \v 30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - <<ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರ್ಧಜೀವಮಾಡಿ ಬಿಟ್ಟುಹೋದರು.