bavari_kan-x-bavari_luk_tex.../13/12.txt

1 line
1.0 KiB
Plaintext

\v 12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - <<ನಿನ್ನ ರೋಗವು ಬಿಡುಗಡೆಯಾಯಿತು>> ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; \v 13 ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು \v 14 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ - <<ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ>> ಎಂದು ಹೇಳಿದನು.