bavari_kan-x-bavari_luk_tex.../08/11.txt

1 line
1.0 KiB
Plaintext

\v 11 ಈ ಸಾಮ್ಯದ ಅರ್ಥವೇನಂದರೆ - ಆ ಬೀಜವೆಂದರೆ ದೇವರ ವಾಕ್ಯ. \v 12 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ; ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. \v 13 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ; ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.