bavari_kan-x-bavari_luk_tex.../06/06.txt

1 line
951 B
Plaintext

\v 6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. \v 7 ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. \v 8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - <<ಎದ್ದು ನಡುವೆ ಬಂದು ನಿಂತುಕೋ>> ಎಂದು ಹೇಳಿದನು.