bavari_kan-x-bavari_luk_tex.../06/31.txt

1 line
1.2 KiB
Plaintext

\v 31 ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. \v 32 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. \v 33 ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. \v 34 ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.