bavari_kan-x-bavari_luk_tex.../08/16.txt

1 line
1.2 KiB
Plaintext

\v 16 <<ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ; ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. \v 17 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ. ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ. \v 18 ಆದ್ದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು>> ಅಂದನು. ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು