bavari_kan-x-bavari_luk_tex.../09/37.txt

1 line
1.2 KiB
Plaintext

\v 37 ಮರುದಿವಸ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡರು. \v 38 ಆಗ ಆ ಗುಂಪಿನಲ್ಲಿದ್ದ ಒಬ್ಬನು - <<ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. \v 39 ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಡುವುದಿಲ್ಲ. \v 40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು>> ಎಂದು ಹೇಳಿದನು.