bavari_kan-x-bavari_luk_tex.../10/13.txt

1 line
983 B
Plaintext

\v 13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. \v 14 ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. \v 15 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.