bavari_kan-x-bavari_luk_tex.../10/17.txt

1 line
1.2 KiB
Plaintext

\v 17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - <<ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ>> ಅಂದರು. \v 18 ಯೇಸು ಅವರಿಗೆ - <<ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. \v 19 ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಅವು ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. \v 20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ>> ಎಂದು ಹೇಳಿದನು.