bavari_kan-x-bavari_luk_tex.../10/25.txt

1 line
1.4 KiB
Plaintext

\v 25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ - <<ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?>> ಎಂದು ಕೇಳಲು ಆತನು ಅವನಿಗೆ - \v 26 <<ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?>> ಎಂದು ಹೇಳಿದನು. \v 27 ಅದಕ್ಕೆ ಅವನು - <<ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ>> ಅಂದನು. \v 28 ಆತನು ಅವನಿಗೆ - <<ನೀನು ಸರಿಯಾಗಿ ಉತ್ತರಕೊಟ್ಟಿರುವಿ; ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ>> ಎಂದು ಹೇಳಿದನು.