bavari_kan-x-bavari_luk_tex.../14/18.txt

1 line
1.2 KiB
Plaintext

\v 18 ಆದರೆ ಅವರೆಲ್ಲರೂ ಕ್ಷಮಿಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, <ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡುವ ಅಗತ್ಯವಿದೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬುದಾಗಿ ಹೇಳು> ಅಂದನು. \v 19 ಮತ್ತೊಬ್ಬನು - <ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬುದಾಗಿ ಹೇಳು> ಅಂದನು. \v 20 ಇನ್ನೊಬ್ಬನು - <ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವುದಕ್ಕಾಗುವುದಿಲ್ಲ> ಅಂದನು.