bavari_kan-x-bavari_luk_tex.../15/17.txt

1 line
1.0 KiB
Plaintext

\v 17 ಆಗ ಅವನಿಗೆ ಬುದ್ಧಿಬಂದು ಅವನು - <ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. \v 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ; \v 19 ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು> ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.