bavari_kan-x-bavari_luk_tex.../16/10.txt

1 line
978 B
Plaintext

\v 10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು. \v 11 ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? \v 12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?