bavari_kan-x-bavari_luk_tex.../18/15.txt

1 line
1.2 KiB
Plaintext

\v 15 ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಕಂಡು ಅವರನ್ನು ಗದರಿಸಿದರು. \v 16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - <<ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ. \v 17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ>> ಅಂದನು. ನಿತ್ಯಜೀವವನ್ನು ಹೇಗೆ ಪಡೆಯಬೇಕೆಂದು ಒಬ್ಬ ಐಶ್ವರ್ಯವಂತನು ಕೇಳಿದ್ದಕ್ಕೆ ಯೇಸು ಹಣದ ಭ್ರಾಂತಿಯಿಂದಾಗುವ ಕೇಡನ್ನು ತೋರಿಸಿದ್ದು.