bavari_kan-x-bavari_luk_tex.../19/13.txt

1 line
1.2 KiB
Plaintext

\v 13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ನಾಣ್ಯಗಳನ್ನು ಕೊಟ್ಟು - <ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ> ಎಂದು ಹೇಳಿ ಹೊರಟು ಹೋದನು. \v 14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದನು. \v 15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ತನ್ನ ಬಳಿಗೆ ಕರೆಯಿಸಿದನು.