|
\v 26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು. \v 27 ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು. |