bavari_kan-x-bavari_luk_tex.../07/06.txt

1 line
1.5 KiB
Plaintext

\v 6 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - <<ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ; ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ. \v 7 ಕಾರಣದಿಂದ ನಾನು ನನ್ನನ್ನು ನಿಮ್ಮ ಬಳಿಗೆ ಬರುವುದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. \v 8 ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ <ಹೋಗು> ಎಂದು ಹೇಳಿದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ <ಬಾ> ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ <ಇಂಥಿಂಥದನ್ನು ಮಾಡು> ಎಂದು ಹೇಳಿದರೆ ಮಾಡುತ್ತಾನೆ>> ಎಂಬುದಾಗಿ ಹೇಳಿಸಿದನು.