bavari_kan-x-bavari_luk_tex.../11/05.txt

1 line
1.6 KiB
Plaintext

\v 5 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ:ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. \v 6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, \v 7 ಆ ಸ್ನೇಹಿತನು - <ನನಗೆ ತೊಂದರೆ ಕೊಡಬೇಡ; ಈಗ ಬಾಗಿಲುಹಾಕಿದೆ; ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಟ್ಟರೂ ಕೊಡಬಹುದು, ಅದು ಸಹಜ.> \v 8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.