bavari_kan-x-bavari_luk_tex.../14/31.txt

1 line
1.1 KiB
Plaintext

\v 31 ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವದಿಲ್ಲವೇ? \v 32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. \v 33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.