bavari_kan-x-bavari_mrk_tex.../14/47.txt

1 line
1.2 KiB
Plaintext
Raw Normal View History

\v 47 ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. \v 48 ಯೇಸುವನ್ನು ಹಿಡಿದಾಗ ಆತನು ಅವರಿಗೆ <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? \v 49 ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. \v 50 ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು.