bavari_kan-x-bavari_mrk_tex.../05/21.txt

1 line
1.2 KiB
Plaintext
Raw Normal View History

\v 21 \v 22 \v 23 \v 24 21ಯೇಸು ತಿರುಗಿ ದೋಣಿಯಲ್ಲಿ ಆಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. 22ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯಿರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು 23<<ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು>> ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. 24ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. ಒಬ್ಬ ಸ್ತ್ರೀಯ ರಕ್ತಕುಸುಮರೋಗವನ್ನು ವಾಸಿಮಾಡಿದ್ದು