\v 6 \v 7 \v 8 \v 9 6ಆದರೆ ಯೇಸು – <<ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. 9ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು.