\v 37 ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ – <<ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? \v 38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು>> ಎಂದು ಹೇಳಿದನು. \v 39 ಮೇಲೆ ತಿರುಗಿ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.