\v 19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ಗೌರವಿಸುವಂತೆ ನಟಿಸಿದರು. \v 20 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. \v 21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಬಿಟ್ಟೀಹಿಡಿದರು. ಅವನು ಯಾರೆಂದರೆ – ಅಲೆಕ್ಸಾಂದ್ರ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.