1 line
1.1 KiB
Plaintext
1 line
1.1 KiB
Plaintext
\v 7 <<ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದಕೈಯುಳ್ಳವನೂ ಯಾರಿಂದಲೂ ಮುಚ್ಚಲು ಸಾಧ್ಯವಾಗದಂತೆ ತೆರೆಯುವವನೂ ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ - \v 8 ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು. |