dommary_te-x-dommara_rev_te.../20/11.txt

1 line
1.1 KiB
Plaintext

\v 11 ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಅವುಗಳು ಮತ್ತೆ ಕಾಣಿಸಲೇ ಇಲ್ಲ. \v 12 ಸತ್ತವರಾದ - ಶ್ರೇಷ್ಠರಿಂದ ಕನಿಷ್ಠರವರೆಗೂ ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.