johnsons_kn-x-handijog_act_.../24/10.txt

1 line
1.4 KiB
Plaintext

\v 10 \v 11 \v 12 \v 13 ದೇಶಾಧಿಪತಿಯು ಪೌಲನಿಗೆ - ನೀನು ಮಾತನಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - <<ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ. 11ನಾನು ದೇವಾರಾಧನೆಮಾಡುವುದಕ್ಕೆ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು. 12ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ. 13ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.