mr_ulb/14-2CH.usfm

1492 lines
355 KiB
Plaintext
Raw Normal View History

2019-01-21 20:20:50 +00:00
\id 2CH - Kannada Unlocked Literal Bible
2018-04-26 17:00:56 +00:00
\ide UTF-8
2019-01-21 20:20:50 +00:00
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h 2 ಪೂರ್ವಕಾಲವೃತ್ತಾಂತ
\toc1 ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ
\toc2 2 ಪೂರ್ವಕಾಲವೃತ್ತಾಂತ
2018-04-26 17:00:56 +00:00
\toc3 2ch
2019-01-21 20:20:50 +00:00
\mt1 ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ
\is ಗ್ರಂಥಕರ್ತೃತ್ವ
\ip ಯೆಹೂದ್ಯ ಸಂಪ್ರದಾಯವು ಶಾಸ್ತ್ರಿಯಾದ ಎಜ್ರನಿಗೆ ಗ್ರಂಥಕರ್ತನ ಮನ್ನಣೆಯನ್ನು ನೀಡುತ್ತದೆ. 2 ಪೂರ್ವಕಾಲವೃತ್ತಾಂತವು ಸೊಲೊಮೋನನ ಆಡಳಿತದ ವೃತ್ತಾಂತದೊಂದಿಗೆ ಪ್ರಾರಂಭವಾಗುತ್ತದೆ. ಸೊಲೊಮೋನನ ಮರಣದ ನಂತರ ಸಾಮ್ರಾಜ್ಯವು ವಿಭಜನೆಯಾಯಿತು. ಎರಡನೇ ಪೂರ್ವಕಾಲವೃತ್ತಾಂತವು, 1 ಪೂರ್ವಕಾಲವೃತ್ತಾಂತಕ್ಕೆ ಸಹಪುಸ್ತಕವಾಗಿದ್ದು, ಇಬ್ರಿಯ ಜನರ ಚರಿತ್ರೆಯನ್ನು ಅರಸನಾದ ಸೊಲೊಮೋನನ ಆಳ್ವಿಕೆಯಿಂದ ಬಾಬೆಲಿನ ಸೆರೆವಾಸದವರೆಗೂ ಮುಂದುವರಿಸುತ್ತದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 450-425 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಬಾಬೆಲಿನ ಸೆರೆವಾಸದಿಂದ ಬಂದ ಇಸ್ರಾಯೇಲಿನ ಹಿಂದಿರುಗಿರುವಿಕೆಯ ನಂತರವಿರುವಂಥದ್ದು ಎಂಬುದು ಸ್ಪಷ್ಟವಾಗಿದ್ದರು, ಪೂರ್ವಕಾಲವೃತ್ತಾಂತದ ದಿನಾಂಕವನ್ನು ನಿಗದಿಪಡಿಸುವುದು ಕಷ್ಟಸಾಧ್ಯವಾಗಿದೆ.
\is ಸ್ವೀಕೃತದಾರ
\ip ಪ್ರಾಚೀನ ಯೆಹೂದ್ಯ ಜನರು ಮತ್ತು ಸತ್ಯವೇದದ ನಂತರದ ಓದುಗಾರರು.
\is ಉದ್ದೇಶ
\ip 2 ಪೂರ್ವಕಾಲವೃತ್ತಾಂತ ಪುಸ್ತಕವು ಬಹುತೇಕ 2 ಸಮುವೇಲನ ಮತ್ತು 2 ಅರಸುಗಳ ಅದೇ ಮಾಹಿತಿಯನ್ನು ಒಳಗೊಂಡಿದೆ. 2 ಪೂರ್ವಕಾಲವೃತ್ತಾಂತ ಪುಸ್ತಕವು ಆ ಕಾಲಾವಧಿಯ ಯಾಜಕತ್ವದ ಅಂಶಕ್ಕೆ ಹೆಚ್ಚು ಗಮನಹರಿಸುತ್ತದೆ. 2 ಪೂರ್ವಕಾಲವೃತ್ತಾಂತವು ಮುಖ್ಯವಾಗಿ ದೇಶದ ಧಾರ್ಮಿಕ ಚರಿತ್ರೆಯ ಮೌಲ್ಯಮಾಪನವಾಗಿದೆ.
\is ಮುಖ್ಯಾಂಶ
\ip ಇಸ್ರಾಯೇಲಿನ ಆಧ್ಯಾತ್ಮಿಕ ಪರಂಪರೆ
\iot ಪರಿವಿಡಿ
\io1 1. ಸೊಲೊಮೋನನ ನಾಯಕತ್ವದಲ್ಲಿ ಇಸ್ರಾಯೇಲಿನ ಚರಿತ್ರೆ (ಅಧ್ಯಾಯ 1-9)
\io1 2. ರೆಹಬ್ಬಾಮನಿಂದ ಆಹಾಜನ ವರೆಗೆ (ಅಧ್ಯಾಯ 10-28)
\io1 3. ಹಿಜ್ಕೀಯನಿಂದ ಯೆಹೂದದ ಅಂತ್ಯದವರೆಗೆ (ಅಧ್ಯಾಯ 29-36)
2018-04-26 17:00:56 +00:00
\s5
\c 1
2019-01-21 20:20:50 +00:00
\s ಸೊಲೊಮೋನನಿಗೆ ಯೆಹೋವನು ಕೊಟ್ಟ ವಿಶೇಷಜ್ಞಾನ
2018-04-26 17:00:56 +00:00
\p
2019-01-21 20:20:50 +00:00
\v 1 ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
\v 3 ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
\v 4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
\v 5 ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
\v 7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, <<ನಿನಗೆ, ಯಾವ ವರ ಬೇಕು ಕೇಳಿಕೋ>> ಎಂದು ಹೇಳಲು
2018-04-26 17:00:56 +00:00
\s5
2019-01-21 20:20:50 +00:00
\v 8 ಸೊಲೊಮೋನನು ದೇವರಿಗೆ, <<ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
\v 9 ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
\v 10 ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು>> ಎಂದು ಕೇಳಿದನು.
\v 11 ಆಗ ದೇವರು ಸೊಲೊಮೋನನಿಗೆ, <<ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
2018-04-26 17:00:56 +00:00
\s5
2019-01-21 20:20:50 +00:00
\v 12 ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು>> ಎಂದನು.
\v 13 ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
\s ಸೊಲೊಮೋನನ ವೈಭವ
\p
2018-04-26 17:00:56 +00:00
\s5
2019-01-21 20:20:50 +00:00
\v 14 ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
\v 15 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
\v 16 ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
\v 17 ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
2018-04-26 17:00:56 +00:00
\s5
\c 2
2019-01-21 20:20:50 +00:00
\s ದೇವಾಲಯದ ನಿರ್ಮಾಣಕ್ಕೆ ಸಿದ್ಧತೆ
\p
\v 1 ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.
\v 2 ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.
\v 3 ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ
\f +
\fr 2:3
\fq ಹೀರಾಮನಿಗೆ
\ft ಅಥವಾ ಹೂರಾಮ
\f* , <<ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.
\s5
\v 4 ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
\v 5 ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
\s5
\v 6 ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!
\v 7 ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
\s5
\v 8 ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
\v 9 ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.
\v 10 ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 11 ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. <<ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.>>
\v 12 ಇದಲ್ಲದೆ, <<ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.
2018-04-26 17:00:56 +00:00
\s5
2019-01-21 20:20:50 +00:00
\v 13 ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ.
\v 14 ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ
2018-04-26 17:00:56 +00:00
\s5
2019-01-21 20:20:50 +00:00
\v 15 ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
\v 16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು>> ಎಂಬುದಾಗಿ ಉತ್ತರ ಕೊಟ್ಟನು.
\p
\v 17 ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
\v 18 ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.
2018-04-26 17:00:56 +00:00
\s5
\c 3
2019-01-21 20:20:50 +00:00
\s ದೇವಾಲಯವನ್ನು ಕಟ್ಟಿಸಿದ್ದು
\p
\v 1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ,
\f +
\fr 3:1
\ft ಅಥವಾ ಯೆಹೋವನು ತೋರಿಸಿದ.
\f* ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
\v 2 ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
\v 3 ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
\s5
\v 4 ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
\v 5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.
\s5
\v 6 ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.
\v 7 ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 8 ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.
\v 9 ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
\v 11 ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
\v 12 ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 13 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.
\v 14 ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.
\p
\v 15 ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.
\v 16 ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
\v 17 ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ <<ಯಾಕೀನ್>> ಎಂದೂ ಎಡಗಡೆಯಿದ್ದ ಕಂಬಕ್ಕೆ <<ಬೋವಜ್>> ಎಂದೂ ಹೆಸರಿಟ್ಟನು.
2018-04-26 17:00:56 +00:00
\s5
\c 4
2019-01-21 20:20:50 +00:00
\s ದೇವಾಲಯದ ಸಾಮಾನುಗಳು
2018-04-26 17:00:56 +00:00
\p
2019-01-21 20:20:50 +00:00
\v 1 ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.
\v 2 ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
\v 3 ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 4 ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.
\v 5 ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
\v 6 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.
2018-04-26 17:00:56 +00:00
\s5
2019-01-21 20:20:50 +00:00
\v 7 ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.
\v 8 ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.
\v 10 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.
\v 12 ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,
\v 13 ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,
2018-04-26 17:00:56 +00:00
\s5
2019-01-21 20:20:50 +00:00
\v 14 ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,
\v 15 ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
\v 16 ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 17 ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.
\v 18 ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
2018-04-26 17:00:56 +00:00
\s5
2019-01-21 20:20:50 +00:00
\v 19 ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,
\v 20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,
\v 21 ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.
\v 22 ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.
2018-04-26 17:00:56 +00:00
\s5
\c 5
\p
2019-01-21 20:20:50 +00:00
\v 1 ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
\s ಮಂಜೂಷದ ಪ್ರತಿಷ್ಠಾಪನೆ
\p
2018-04-26 17:00:56 +00:00
\s5
2019-01-21 20:20:50 +00:00
\v 2 ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.
\v 3 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
\v 5 ಯಾಜಕರಾದ ಲೇವಿಯರು ಒಡಂಬಡಿಕೆಯ ಮಂಜೂಷವನ್ನು, ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳನ್ನೂ ಹೊತ್ತುಕೊಂಡು ತಂದರು.
\v 6 ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.
\v 8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 9 ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.
\v 10 ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.
\v 12 ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.
\v 13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, <<ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು>> ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
\v 14 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
2018-04-26 17:00:56 +00:00
\s5
\c 6
2019-01-21 20:20:50 +00:00
\s ಸೊಲೊಮೋನನ ಭಾಷಣ
2018-04-26 17:00:56 +00:00
\p
2019-01-21 20:20:50 +00:00
\v 1 ತರುವಾಯ ಸೊಲೊಮೋನನು, ಯೆಹೋವನೇ <<ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;
\v 2 ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ>> ಎಂದನು.
\v 3 ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಅವನು ಹೇಳಿದ್ದೇನೆಂದರೆ, <<ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.
\v 5 ಆತನು ಹೇಳಿದ್ದೇನೆಂದರೆ, <ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
\v 6 ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಆದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
\v 8 ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, <ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.
\v 9 ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.
\v 11 ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ>> ಎಂದು ಹೇಳಿದನು.
\s ಸೊಲೊಮೋನನ ಪ್ರಾರ್ಥನೆ
\p
2018-04-26 17:00:56 +00:00
\s5
2019-01-21 20:20:50 +00:00
\v 12 ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.
\v 13 ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,
2018-04-26 17:00:56 +00:00
\s5
2019-01-21 20:20:50 +00:00
\v 14 ಹೀಗೆ ಪ್ರಾರ್ಥಿಸಿದನು, <<ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.
\v 15 ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.
2018-04-26 17:00:56 +00:00
\s5
2019-01-21 20:20:50 +00:00
\v 16 ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, <ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.>
\v 17 ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
2018-04-26 17:00:56 +00:00
\s5
2019-01-21 20:20:50 +00:00
\v 18 ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
\v 19 ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.
\v 20 ಈ ಸ್ಥಳವನ್ನು ಕುರಿತು, <ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು> >> ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
2018-04-26 17:00:56 +00:00
\s5
2019-01-21 20:20:50 +00:00
\v 21 ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
2018-04-26 17:00:56 +00:00
\s5
2019-01-21 20:20:50 +00:00
\v 22 ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,
\v 23 ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.
\p
2018-04-26 17:00:56 +00:00
\s5
2019-01-21 20:20:50 +00:00
\v 24 <<ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,
\v 25 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.
\p
2018-04-26 17:00:56 +00:00
\s5
2019-01-21 20:20:50 +00:00
\v 26 <<ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,
\v 27 ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
\p
2018-04-26 17:00:56 +00:00
\s5
2019-01-21 20:20:50 +00:00
\v 28 <<ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
\v 29 ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ,
\v 30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
\v 31 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.
\p
2018-04-26 17:00:56 +00:00
\s5
2019-01-21 20:20:50 +00:00
\v 32 <<ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,
\v 33 ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.
\p
2018-04-26 17:00:56 +00:00
\s5
2019-01-21 20:20:50 +00:00
\v 34 <<ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,
\v 35 ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.
\p
2018-04-26 17:00:56 +00:00
\s5
2019-01-21 20:20:50 +00:00
\v 36 <<ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,
\v 37 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, <ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು> ಎಂದು ವಿಜ್ಞಾಪನೆ ಮಾಡಿ,
\v 38 ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
\v 39 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.
\v 40 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.
\v 41 ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
\v 42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.>> ಎಂದು ವಿಜ್ಞಾಪನೆ ಮಾಡಿಕೊಂಡನು.
2018-04-26 17:00:56 +00:00
\s5
\c 7
2019-01-21 20:20:50 +00:00
\s ದೇವಾಲಯದ ಪ್ರತಿಷ್ಠಾಪನೆ
2018-04-26 17:00:56 +00:00
\p
2019-01-21 20:20:50 +00:00
\v 1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
\v 2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
\v 3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, <<ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು>> ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
\v 5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
\v 6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, <<ಆತನ ಕೃಪೆಯು ಶಾಶ್ವತವಾದದ್ದು>> ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
\v 9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
\v 10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
\s ಯೆಹೋವನು ಪುನಃ ಸೊಲೊಮೋನನಿಗೆ ಪ್ರತ್ಯಕ್ಷನಾದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 11 ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
\v 12 ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
2018-04-26 17:00:56 +00:00
\s5
2019-01-21 20:20:50 +00:00
\v 13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
\v 14 ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
\v 15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
2018-04-26 17:00:56 +00:00
\s5
2019-01-21 20:20:50 +00:00
\v 16 ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
\v 17 ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
\v 18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
2018-04-26 17:00:56 +00:00
\s5
2019-01-21 20:20:50 +00:00
\v 19 ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
\v 20 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
\v 21 ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, <ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು.
\v 22 ಆಗ ಅವರಿಗೆ, <ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.> >> ಎಂದು ಉತ್ತರ ಕೊಡುವರು ಎಂದನು.
2018-04-26 17:00:56 +00:00
\s5
\c 8
2019-01-21 20:20:50 +00:00
\s ಸೊಲೊಮೋನನ ಇತರ ಸಾಧನೆಗಳು
2018-04-26 17:00:56 +00:00
\p
2019-01-21 20:20:50 +00:00
\v 1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
\v 2 ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.
\v 4 ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
\v 6 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
\v 8 ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
2018-04-26 17:00:56 +00:00
\s5
2019-01-21 20:20:50 +00:00
\v 9 ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
\v 10 ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಸೊಲೊಮೋನನು, <<ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು>> ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,
\v 13 ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
\v 15 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 16 ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
\p
\v 17 ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.
\v 18 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
2018-04-26 17:00:56 +00:00
\s5
\c 9
2019-01-21 20:20:50 +00:00
\s ಶೆಬಾ ದೇಶದ ರಾಣಿಯು ಸೊಲೊಮೋನನ ಭೇಟಿಯಾದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.
\v 2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 3 ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,
\v 4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ
2018-04-26 17:00:56 +00:00
\s5
2019-01-21 20:20:50 +00:00
\v 5 ಅವನಿಗೆ, <<ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
\v 6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.
\v 8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ>> ಎಂದು ಹೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.
\v 11 ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.
\v 12 ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
\s ಸೊಲೊಮೋನನ ವೈಭವ
\p
2018-04-26 17:00:56 +00:00
\s5
2019-01-21 20:20:50 +00:00
\v 13 ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.
\v 14 ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 15 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.
\v 16 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
\v 18 ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 19 ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
\v 20 ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
\v 21 ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 22 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
\v 23 ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.
\v 24 ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 25 ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.
\v 26 ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.
\v 28 ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.
\s ಸೊಲೊಮೋನನ ಮರಣ
\p
\v 29 ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.
\v 30 ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.
\v 31 ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
2018-04-26 17:00:56 +00:00
\s5
\c 10
2019-01-21 20:20:50 +00:00
\s ಇಸ್ರಾಯೇಲರು ರೆಹಬ್ಬಾಮನ ವಿರೋಧವಾಗಿ ದಂಗೆ ಎದ್ದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
\v 2 ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
\s5
\v 3 ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
\v 4 ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು>> ಎಂದು ಹೇಳಿದರು.
\v 5 ಅದಕ್ಕೆ ರೆಹಬ್ಬಾಮನು, <<ನೀವು ಮೂರು ದಿನಗಳ ಬಳಿಕ ಬನ್ನಿರಿ>> ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.
\s5
\v 6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, <<ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?>> ಎಂದನು.
\v 7 ಅವರು ಅವನಿಗೆ, <<ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು>> ಎಂದರು.
\s5
\v 8 ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
\v 9 <<ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?>> ಎಂದು ಕೇಳಿದನು.
\s5
\v 10 ಅವರು ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, <ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.
\v 11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ
\f +
\fr 10:11
\fq ಮುಳ್ಳು ಕೊರಡೆಗಳಿಂದ
\ft ಅಥವಾ ಚೇಳುಗಳಿಂದ.
\f* ದಂಡಿಸುವೆನು> ಎಂಬುದಾಗಿ ಹೇಳಬೇಕು>> ಎಂದು ಉತ್ತರಕೊಟ್ಟರು.
\s5
\v 12 ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.
\v 13 ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
\v 14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, <<ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ
\f +
\fr 10:14
\fq ಮುಳ್ಳುಕೊರಡೆಗಳಿಂದ
\ft ಅಥವಾ ಚೇಳುಗಳಿಂದ.
\f* ದಂಡಿಸುವೆನು>> ಎಂದು ನುಡಿದನು.
\s5
\v 15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
\s5
\v 16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, <<ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
\v 17 ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.
\v 18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
\v 19 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
2018-04-26 17:00:56 +00:00
\s5
\c 11
\p
2019-01-21 20:20:50 +00:00
\v 1 ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
\s5
\v 2 ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,
\v 3 <<ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,
\v 4 ಯೆಹೋವನು ಇಂತೆನ್ನುತ್ತಾನೆ, <ನೀವು ನಿಮ್ಮ ಸಹೋದರರೊಡನೆ
\f +
\fr 11:4
\fq ಸಹೋದರರೊಡನೆ
\ft ಅಥವಾ ಸಂಬಂಧಿಕರೊಡನೆ ಅಥವಾ ಉತ್ತರ ರಾಜ್ಯದವರಾದ ಯೆಹೂದ್ಯರೊಂದಿಗೆ.
\f* ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು> >> ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.
\s ಅರಸನಾದ ರೆಹಬ್ಬಾಮನು
\p
2018-04-26 17:00:56 +00:00
\s5
2019-01-21 20:20:50 +00:00
\v 5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.
\v 6 ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,
\v 7 ಬೇತ್ಚೂರ್, ಸೋಕೋ, ಅದುಲ್ಲಾಮ್,
\v 8 ಗತ್ ಊರು, ಮಾರೇಷ, ಜೀಫ್
\v 9 ಅದೋರೈಮ್, ಲಾಕೀಷ್, ಅಜೇಕ,
\v 10 ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
\v 12 ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 13 ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.
\v 14 ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
\v 15 ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
\v 17 ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.
\s ರೆಹಬ್ಬಾಮನ ಕುಟುಂಬ
\p
2018-04-26 17:00:56 +00:00
\s5
2019-01-21 20:20:50 +00:00
\v 18 ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.
\v 19 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
2018-04-26 17:00:56 +00:00
\s5
2019-01-21 20:20:50 +00:00
\v 20 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.
\v 21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
2018-04-26 17:00:56 +00:00
\s5
2019-01-21 20:20:50 +00:00
\v 22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.
\v 23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.
2018-04-26 17:00:56 +00:00
\s5
\c 12
2019-01-21 20:20:50 +00:00
\s ಯೆಹೂದದ ಮೇಲೆ ಐಗುಪ್ತರ ದಾಳಿ
2018-04-26 17:00:56 +00:00
\p
2019-01-21 20:20:50 +00:00
\v 1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
\v 3 ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,
\v 4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, <<ಯೆಹೋವನು ಹೀಗೆನ್ನುತ್ತಾನೆ, <ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ> >> ಎಂದು ಹೇಳಿದನು.
\v 6 ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 7 ಯೆಹೋವನ ವಾಕ್ಯವು ಶೆಮಾಯನಿಗೆ, <<ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.
\v 8 ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
\v 10 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.
\v 12 ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 13 ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
\v 14 ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.
\v 15 ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
\v 16 ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.
2018-04-26 17:00:56 +00:00
\s5
\c 13
2019-01-21 20:20:50 +00:00
\s ಯೆಹೂದದ ಅರಸನಾದ ಅಬೀಯನು
\p
\v 1 ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
\v 2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
\v 3 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈ ಎಂಬ ಬೆಟ್ಟದಲ್ಲಿ ನಿಂತು, <<ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
\v 5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
2018-04-26 17:00:56 +00:00
\s5
2019-01-21 20:20:50 +00:00
\v 6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.
\v 7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
\v 9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
2018-04-26 17:00:56 +00:00
\s5
2019-01-21 20:20:50 +00:00
\v 10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
\v 11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
2018-04-26 17:00:56 +00:00
\s5
2019-01-21 20:20:50 +00:00
\v 12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ>> ಎಂದು ಕೂಗಿ ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
\v 14 ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
\v 15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.
\v 17 ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
\v 18 ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
\v 19 ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
\v 20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
\p
\v 21 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
\v 22 ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.
2018-04-26 17:00:56 +00:00
\s5
\c 14
2019-01-21 20:20:50 +00:00
\s ಯೆಹೂದದ ಅರಸನಾದ ಆಸ
2018-04-26 17:00:56 +00:00
\p
2019-01-21 20:20:50 +00:00
\v 1 ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.
\v 2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
\v 3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.
\v 4 ಯೆಹೂದ್ಯರಿಗೆ, <<ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
\v 6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಇವನು ಯೆಹೂದ್ಯರಿಗೆ, <<ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ>> ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
\v 8 ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.
\v 10 ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.
\v 11 ಆಸನು ತನ್ನ ದೇವರಾದ ಯೆಹೋವನಿಗೆ, <<ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು>> ಎಂದು ಮೊರೆಯಿಡಲು.
2018-04-26 17:00:56 +00:00
\s5
2019-01-21 20:20:50 +00:00
\v 12 ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.
\v 13 ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.
\v 14 ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.
\v 15 ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.
2018-04-26 17:00:56 +00:00
\s5
\c 15
2019-01-21 20:20:50 +00:00
\s ಆಸನಿಂದ ಧಾರ್ಮಿಕ ಸುಧಾರಣೆ
2018-04-26 17:00:56 +00:00
\p
2019-01-21 20:20:50 +00:00
\v 1 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
\v 2 ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, <<ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
\v 4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
\v 5 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
\v 7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
\v 9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 10 ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
\v 11 ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 12 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
\v 13 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
2018-04-26 17:00:56 +00:00
\s5
2019-01-21 20:20:50 +00:00
\v 14 ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
\v 15 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
\v 17 ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
\v 18 ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
\v 19 ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
2018-04-26 17:00:56 +00:00
\s5
\c 16
2019-01-21 20:20:50 +00:00
\s ಅರಸನಾದ ಆಸನ ಅಂತ್ಯ
2018-04-26 17:00:56 +00:00
\p
2019-01-21 20:20:50 +00:00
\v 1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
\v 3 ಅವನಿಗೆ, <<ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು>> ಎಂದು ಹೇಳಿ ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
\v 5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
\v 6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, <<ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
\v 8 ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ>> ಎಂದು ಹೇಳಿದನು.
\v 10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
\v 12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
2018-04-26 17:00:56 +00:00
\s5
2019-01-21 20:20:50 +00:00
\v 13 ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
\v 14 ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
2018-04-26 17:00:56 +00:00
\s5
\c 17
2019-01-21 20:20:50 +00:00
\s ಯೆಹೂದದ ಅರಸನಾದ ಯೆಹೋಷಾಫಾಟನು
2018-04-26 17:00:56 +00:00
\p
2019-01-21 20:20:50 +00:00
\v 1 ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
\v 2 ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
\v 4 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.
\v 6 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
\v 8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
\v 9 ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.
\s ಯೆಹೋಷಾಫಾಟನ ವೈಭವ
\p
2018-04-26 17:00:56 +00:00
\s5
2019-01-21 20:20:50 +00:00
\v 10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.
\v 11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
\v 13 ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 14 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
\v 15 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;
\v 16 ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;
\v 17 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;
\v 18 ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.
\v 19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.
2018-04-26 17:00:56 +00:00
\s5
\c 18
2019-01-21 20:20:50 +00:00
\s ಮೀಕನಿಗೆ ಯೆಹೋವನ ಪ್ರವಾದನೆ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
\v 2 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
\v 3 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, <<ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?>> ಎಂದು ಕೇಳಿದನು. ಅದಕ್ಕೆ ಅವನು, <<ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, <<ಇಂದು ಯೆಹೋವನ ಆಲೋಚನೆಯನ್ನು ಕೇಳು>> ಎಂದು ಕೇಳಿಕೊಂಡನು.
\v 5 ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, <<ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?>> ಎಂದು ಕೇಳಿದನು. ಅವರು, <<ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು>> ಎಂದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, <<ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?>> ಎಂದು ಕೇಳಿದನು.
\v 7 ಅವನು, <<ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ>> ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, <<ಅರಸನು ಹಾಗನ್ನಬಾರದು>> ಎಂದನು.
\v 8 ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
\v 10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, <<ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ>> ಎಂದನು.
\v 11 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, <<ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, <<ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು>> ಎಂದು ಹೇಳಿದನು.
\v 13 ಅದಕ್ಕೆ ಮೀಕಾಯೆಹುವು, <<ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ>> ಎಂದು ಉತ್ತರಕೊಟ್ಟನು.
\v 14 ಅವನು ಅರಸನ ಬಳಿಗೆ ಬಂದಾಗ ಅರಸನು, <<ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಗ ಅರಸನು ಅವನಿಗೆ, <<ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?>> ಎಂದನು
\v 16 ಆಗ ಅವನು, <<ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> >> ಎಂಬುದಾಗಿ ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 17 ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?>> ಎಂದನು.
\v 18 ಅದಕ್ಕೆ ಮಿಕಾಯೆಹುವು, <<ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
2018-04-26 17:00:56 +00:00
\s5
2019-01-21 20:20:50 +00:00
\v 19 ಯೆಹೋವನು ತನ್ನ ಹತ್ತಿರ ನಿಂತವರನ್ನು, <ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?> ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 20 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, <ನಾನು ಹೋಗಿ ಅವನನ್ನು ಪ್ರೇರೇಪಿಸುವೆನು> ಎಂದಿತು. <ಹೇಗೆ ಪ್ರೇರೇಪಿಸುವಿ?> ಎಂದು ಯೆಹೋವನು ಕೇಳಲು,
\v 21 ಅದು, <ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು> ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, <ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, <<ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?>> ಎಂದನು.
\v 24 ಅದಕ್ಕೆ ಮೀಕಾಯೆಹುವು, <<ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 25 ಆಗ ಇಸ್ರಾಯೇಲರ ಅರಸನು ಸೇವಕರಿಗೆ, <<ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
\v 26 ಅವರಿಗೆ, <ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ> ಎಂದು ಹೇಳಿರಿ>> ಎಂಬುದಾಗಿ ಆಜ್ಞಾಪಿಸಿದನು.
\v 27 ಮೀಕಾಯೆಹುವು ಅರಸನಿಗೆ, <<ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ>> ಎಂದು ಹೇಳಿ, <<ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ>> ಎಂದು ಕೂಗಿ ಹೇಳಿದನು.
\s ಆಹಾಬನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 28 ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
\v 29 ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ>> ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
\v 30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, <<ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ>> ಎಂದು ಆಜ್ಞಾಪಿಸಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 31 ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
\v 32 ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 33 ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, <<ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ>> ಎಂದು ಹೇಳಿದನು.
\v 34 ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
2018-04-26 17:00:56 +00:00
\s5
\c 19
2019-01-21 20:20:50 +00:00
\s ಯೆಹೋಷಾಫಾಟನ ಖಂಡನೆ
\p
\v 1 ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
\v 2 ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, <<ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
\v 3 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ>> ಎಂಬುದಾಗಿ ಹೇಳಿದನು.
\s ನ್ಯಾಯಾಲಯಗಳ ಸ್ಥಾಪನೆ
2018-04-26 17:00:56 +00:00
\p
\s5
2019-01-21 20:20:50 +00:00
\v 4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
\v 5 ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಅವನು ಅವರಿಗೆ, <<ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
\v 7 ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ>> ಎಂದು ಎಚ್ಚರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
\v 9 ಅವರಿಗೆ, <<ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,
2018-04-26 17:00:56 +00:00
\s5
2019-01-21 20:20:50 +00:00
\v 10 ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.
2018-04-26 17:00:56 +00:00
\s5
2019-01-21 20:20:50 +00:00
\v 11 ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು>> ಎಂದು ಹೇಳಿದನು.
2018-04-26 17:00:56 +00:00
\s5
\c 20
2019-01-21 20:20:50 +00:00
\s ಯೆಹೋಷಾಫಾಟನು ಮೋವಾಬ್ಯರನ್ನೂ ಅಮ್ಮೋನಿಯರನ್ನೂ ಸೋಲಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
\v 2 ದೂತರು ಬಂದು ಯೆಹೋಷಾಫಾಟನಿಗೆ, <<ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ <ಏಂಗೆದಿ> ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ>> ಎಂದು ತಿಳಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
\v 4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 5 ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,
\v 6 <<ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
\v 7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.
2018-04-26 17:00:56 +00:00
\s5
2019-01-21 20:20:50 +00:00
\v 8 ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.
\v 9 ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
2018-04-26 17:00:56 +00:00
\s5
2019-01-21 20:20:50 +00:00
\v 10 ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.
\v 11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.
2018-04-26 17:00:56 +00:00
\s5
2019-01-21 20:20:50 +00:00
\v 12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ>> ಎಂದು ಪ್ರಾರ್ಥಿಸಿದನು.
\v 13 ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
\v 15 ಅವನು, <<ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
2018-04-26 17:00:56 +00:00
\s5
2019-01-21 20:20:50 +00:00
\v 16 ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
\v 17 ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
\v 19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, <<ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ>> ಎಂದು ಹೇಳಿದನು.
\v 21 ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, <<ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, <ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು> ಎಂದು ಭಜಿಸಿರಿ>> ಎಂಬುದಾಗಿ ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
\v 23 ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 25 ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
\v 26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
2018-04-26 17:00:56 +00:00
\s5
2019-01-21 20:20:50 +00:00
\v 27 ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
\v 28 ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 29 ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
\v 30 ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
\s ಯೆಹೋಷಾಫಾಟನ ಅಂತ್ಯ
\p
2018-04-26 17:00:56 +00:00
\s5
2019-01-21 20:20:50 +00:00
\v 31 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
\v 32 ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
\v 33 ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
2018-04-26 17:00:56 +00:00
\s5
2019-01-21 20:20:50 +00:00
\v 35 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
\v 36 ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.
\v 37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, <<ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು>> ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
2018-04-26 17:00:56 +00:00
\s5
\c 21
2019-01-21 20:20:50 +00:00
\s ಅರಸನಾದ ಯೆಹೋರಾಮನು
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.
\v 2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.
\v 3 ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
\v 5 ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 7 ಆದರೂ ಯೆಹೋವನು ದಾವೀದನಿಗೆ, <<ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ>> ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
\v 9 ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
\v 10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, <<ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
\v 13 ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
\v 14 ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.
\v 15 ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು>> ಎಂದು ತಿಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
\v 17 ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 18 ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.
\v 19 ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
\p
\v 20 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
2018-04-26 17:00:56 +00:00
\s5
\c 22
2019-01-21 20:20:50 +00:00
\s ಅರಸನಾದ ಅಹಜ್ಯನು
2018-04-26 17:00:56 +00:00
\p
2019-01-21 20:20:50 +00:00
\v 1 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
\v 2 ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
\v 3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.
\v 5 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
\v 8 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, <<ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ>> ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
\s ರಾಣಿಯಾದ ಅತಲ್ಯಳು
\p
2018-04-26 17:00:56 +00:00
\s5
2019-01-21 20:20:50 +00:00
\v 10 ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
\v 11 ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
\v 12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
2018-04-26 17:00:56 +00:00
\s5
\c 23
2019-01-21 20:20:50 +00:00
\s ರಾಣಿಯಾದ ಅತಲ್ಯಳ ವಿರುದ್ಧ ದಂಗೆ
2018-04-26 17:00:56 +00:00
\p
2019-01-21 20:20:50 +00:00
\v 1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.
\v 2 ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
\v 3 ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, <<ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
2018-04-26 17:00:56 +00:00
\s5
2019-01-21 20:20:50 +00:00
\v 4 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
\v 5 ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
2018-04-26 17:00:56 +00:00
\s5
2019-01-21 20:20:50 +00:00
\v 6 ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
\v 7 ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
\v 9 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 10 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
\v 11 ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, <<ಅರಸನು ಚಿರಂಜೀವಿಯಾಗಿರಲಿ>> ಎಂದು ಹರಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
\v 13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ, ದ್ರೋಹ>> ಎಂದು ಕೂಗಿದಳು.
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, <<ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ>> ಎಂದು ಆಜ್ಞಾಪಿಸಿದನು.
\v 15 ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.
\s ಯೆಹೋಯಾದನಿಂದ ಧಾರ್ಮಿಕ ಸುಧಾರಣೆ
\p
2018-04-26 17:00:56 +00:00
\s5
2019-01-21 20:20:50 +00:00
\v 16 ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
\v 17 ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
\v 19 ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
\v 21 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
2018-04-26 17:00:56 +00:00
\s5
\c 24
2019-01-21 20:20:50 +00:00
\s ಯೆಹೂದದ ಅರಸನಾದ ಯೆಹೋವಾಷನು
\p
\v 1 ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
\v 2 ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
\v 3 ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
\v 5 ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, <<ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ>> ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 6 ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, <<ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
\v 7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
\v 9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
\v 10 ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
2018-04-26 17:00:56 +00:00
\s5
2019-01-21 20:20:50 +00:00
\v 11 ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
\v 12 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 13 ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
\v 14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
\v 16 ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
\s ಯೆಹೋವಾಷನ ದುಷ್ಟತನ
\p
2018-04-26 17:00:56 +00:00
\s5
2019-01-21 20:20:50 +00:00
\v 17 ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
\v 18 ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
\v 19 ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, <<ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ>> ಎಂದನು.
\v 21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
\v 22 ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, <<ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
\v 24 ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
\v 26 ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
2018-04-26 17:00:56 +00:00
\s5
2019-01-21 20:20:50 +00:00
\v 27 ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
2018-04-26 17:00:56 +00:00
\s5
\c 25
2019-01-21 20:20:50 +00:00
\s ಯೆಹೂದದ ಅರಸನಾದ ಅಮಚ್ಯನು
2018-04-26 17:00:56 +00:00
\p
2019-01-21 20:20:50 +00:00
\v 1 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
\v 2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
\v 4 ಆದರೆ, <<ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು>> ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
\v 6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, <<ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
\v 8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಅಮಚ್ಯನು ದೇವರ ಮನುಷ್ಯನನ್ನು, <<ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?>> ಎಂದು ಕೇಳಲು ಅವನು, <<ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು>> ಎಂದನು.
\v 10 ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
\v 12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
2018-04-26 17:00:56 +00:00
\s5
2019-01-21 20:20:50 +00:00
\v 13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು
2018-04-26 17:00:56 +00:00
\s5
2019-01-21 20:20:50 +00:00
\v 14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.
\v 15 ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, <<ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, <<ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?>> ಎಂದನು. ಅವನು, <<ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ>> ಎಂದು ಹೇಳಿ ಸುಮ್ಮನಾದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, <<ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ>> ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, <<ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, <ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು> ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.
\v 19 ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.
\v 21 ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
\v 22 ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
\v 24 ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
\v 26 ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.
2018-04-26 17:00:56 +00:00
\s5
2019-01-21 20:20:50 +00:00
\v 27 ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
\v 28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.
2018-04-26 17:00:56 +00:00
\s5
\c 26
2019-01-21 20:20:50 +00:00
\s ಯೆಹೂದದ ಅರಸನಾದ ಉಜ್ಜೀಯನು
\p
\v 1 ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
\v 2 ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
\v 3 ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
\s5
\v 4 ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
\v 5 ದೈವಭಕ್ತಿಯನ್ನು
\f +
\fr 26:5
\ft ಅಥವಾ ಜೆಕರ್ಯನು ದೈವೋಕ್ತಿಗಳಲ್ಲಿ ಪರಿಣಿತನಾಗಿದ್ದನು.
\f* ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
\s5
\v 6 ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
\v 7 ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
\v 8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
\s5
\v 9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
\v 10 ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
\s5
\v 11 ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
\v 12 ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
\v 13 ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
\s5
\v 14 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
\v 15 ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
\s ಉಜ್ಜೀಯನ ಪಾಪವೂ ಶಿಕ್ಷೆಯೂ
2018-04-26 17:00:56 +00:00
\p
\s5
2019-01-21 20:20:50 +00:00
\v 16 ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
\v 17 ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
\v 18 ಅರಸನ ಎದುರಿಗೆ ನಿಂತು ಅವನಿಗೆ, <<ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು>> ಎಂದರು.
2018-04-26 17:00:56 +00:00
\s5
2019-01-21 20:20:50 +00:00
\v 19 ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
\v 20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 21 ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
\v 23 ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
2018-04-26 17:00:56 +00:00
\s5
\c 27
2019-01-21 20:20:50 +00:00
\s ಯೆಹೂದದ ಅರಸನಾದ ಯೋತಾಮನು
2018-04-26 17:00:56 +00:00
\p
2019-01-21 20:20:50 +00:00
\v 1 ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
\v 2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
\v 4 ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.
\v 7 ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
2018-04-26 17:00:56 +00:00
\s5
2019-01-21 20:20:50 +00:00
\v 8 ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
\v 9 ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
2018-04-26 17:00:56 +00:00
\s5
\c 28
2019-01-21 20:20:50 +00:00
\s ಯೆಹೂದದ ಅರಸನಾದ ಆಹಾಜನು
2018-04-26 17:00:56 +00:00
\p
2019-01-21 20:20:50 +00:00
\v 1 ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.
\v 2 ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ
2018-04-26 17:00:56 +00:00
\s5
2019-01-21 20:20:50 +00:00
\v 3 ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
\v 4 ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
\v 6 ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 7 ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
\v 8 ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, <<ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.
\v 10 ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
\v 11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,
\v 13 ಅವರಿಗೆ, <<ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ>> ಎಂದು ಹೇಳಿದರು.
2018-04-26 17:00:56 +00:00
\s5
2019-01-21 20:20:50 +00:00
\v 14 ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.
\v 15 ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.
\v 17 ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.
\v 18 ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿವ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 19 ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.
\v 20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.
\v 21 ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 22 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
\v 23 ಹೇಗೆಂದರೆ <<ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು>> ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 24 ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
\v 25 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
\v 27 ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
2018-04-26 17:00:56 +00:00
\s5
\c 29
2019-01-21 20:20:50 +00:00
\s ಯೆಹೂದದ ಅರಸನಾದ ಹಿಜ್ಕೀಯನು ದೇವಾಲಯವನ್ನು ಪುನಃ ಪ್ರತಿಷ್ಠಿಸಿದ್ದು
\p
\v 1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
\v 2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
\v 4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
\v 5 ಅವರಿಗೆ, <<ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
2018-04-26 17:00:56 +00:00
\s5
2019-01-21 20:20:50 +00:00
\v 6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
\v 7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
\v 9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
\v 11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
\v 13 ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
\v 14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
2018-04-26 17:00:56 +00:00
\s5
2019-01-21 20:20:50 +00:00
\v 15 ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
\v 16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
\v 17 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, <<ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
\v 19 ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
\v 21 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
\v 23 ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
\v 24 ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
\v 26 ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 27 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
\v 28 ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 29 ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
\v 30 ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಆಮೇಲೆ ಹಿಜ್ಕೀಯನು ಸಮೂಹದವರಿಗೆ, <<ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ>> ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 32 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
\v 33 ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
2018-04-26 17:00:56 +00:00
\s5
2019-01-21 20:20:50 +00:00
\v 34 ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು
\f +
\fr 29:34
\fq ಶ್ರದ್ಧೆಯುಳ್ಳವರಾಗಿದ್ದರು
\ft ಅಥವಾ ನಂಬಿಗಸ್ತರಾಗಿದ್ದರು
\f* .
2018-04-26 17:00:56 +00:00
\s5
2019-01-21 20:20:50 +00:00
\v 35 ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
\p
\v 36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
2018-04-26 17:00:56 +00:00
\s5
\c 30
2019-01-21 20:20:50 +00:00
\s ಪಸ್ಕಾಚರಣೆಗೆ ಸಿದ್ಧತೆ
2018-04-26 17:00:56 +00:00
\p
2019-01-21 20:20:50 +00:00
\v 1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
\v 2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
\v 3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 4 ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
\v 5 ಅವರು, <<ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು>> ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: <<ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
2018-04-26 17:00:56 +00:00
\s5
2019-01-21 20:20:50 +00:00
\v 7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
\v 8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
\v 9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.>>
\s ಪಸ್ಕ ಆಚರಣೆ
\p
2018-04-26 17:00:56 +00:00
\s5
2019-01-21 20:20:50 +00:00
\v 10 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
\v 11 ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
\v 12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
\v 14 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
\v 15 ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
\v 17 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 18 ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, <<ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು>> ಎಂದು ವಿಜ್ಞಾಪನೆ ಮಾಡಿದನು.
\v 19 ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
\v 20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
\v 22 ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 23 ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
\v 24 ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 25 ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
\v 26 ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
\v 27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
2018-04-26 17:00:56 +00:00
\s5
\c 31
2019-01-21 20:20:50 +00:00
\s ಹಿಜ್ಕೀಯನು ಕೈಗೊಂಡ ಧಾರ್ಮಿಕ ಸುಧಾರಣೆಗಳು
\p
\v 1 ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
2018-04-26 17:00:56 +00:00
\p
\s5
2019-01-21 20:20:50 +00:00
\v 2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
\v 3 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
\v 5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.
\v 7 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ
\v 8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 9 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,
\v 10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, <<ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ>> ಎಂದನು.
\p
\v 11 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
\v 12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
\v 13 ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
\v 15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 17 ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,
\v 18 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.
\v 19 ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
\v 21 ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
2018-04-26 17:00:56 +00:00
\s5
\c 32
2019-01-21 20:20:50 +00:00
\s ಅರಸನಾದ ಸನ್ಹೇರೀಬನು ಯೆರೂಸಲೇಮಿಗೆ ಬೆದರಿಕೆ ಹಾಕಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
2018-04-26 17:00:56 +00:00
\s5
2019-01-21 20:20:50 +00:00
\v 2 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
\v 3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
\v 4 ಆಗ ಅನೇಕರು ಸೇರಿ, <<ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?>> ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
\v 7 <<ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
\v 8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು>> ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
\v 10 <<ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
2018-04-26 17:00:56 +00:00
\s5
2019-01-21 20:20:50 +00:00
\v 11 ಹಿಜ್ಕೀಯನು, <ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು> ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
\v 12 ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
2018-04-26 17:00:56 +00:00
\s5
2019-01-21 20:20:50 +00:00
\v 13 ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
\v 14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
\v 15 ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?>> ಎಂದು ಹೇಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
\v 17 ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, <<ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು>> ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
\v 19 ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
\v 21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
2018-04-26 17:00:56 +00:00
\s5
2019-01-21 20:20:50 +00:00
\v 22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
\v 23 ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
\s ಹಿಜ್ಕೀಯನ ರೋಗ ಮತ್ತು ಅಹಂಕಾರ
\p
2018-04-26 17:00:56 +00:00
\s5
2019-01-21 20:20:50 +00:00
\v 24 ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
\v 25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
\v 26 ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ
\f +
\fr 32:27
\fq ಆಭರಣ
\ft ಅಥವಾ ಪಾತ್ರೆ.
\f* ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
\v 28 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
\v 29 ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
\v 31 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
2018-04-26 17:00:56 +00:00
\s5
2019-01-21 20:20:50 +00:00
\v 32 ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
\v 33 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
2018-04-26 17:00:56 +00:00
\s5
\c 33
2019-01-21 20:20:50 +00:00
\s ಯೆಹೂದದ ಅರಸನಾದ ಮನಸ್ಸೆಯು
2018-04-26 17:00:56 +00:00
\p
2019-01-21 20:20:50 +00:00
\v 1 ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
\v 2 ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
\v 5 ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
\v 6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, <<ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
\v 8 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು>> ಎಂದು ಹೇಳಿದನು.
\v 9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
\v 11 ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲೋನಿಗೆ ಒಯ್ದರು.
2018-04-26 17:00:56 +00:00
\s5
2019-01-21 20:20:50 +00:00
\v 12 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
\v 13 ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
\v 15 ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
\v 17 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
\v 19 ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
\v 20 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
\s ಯೆಹೂದದ ಅರಸನಾದ ಆಮೋನನು
\p
2018-04-26 17:00:56 +00:00
\s5
2019-01-21 20:20:50 +00:00
\v 21 ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
\v 22 ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
\v 23 ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
\v 25 ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
2018-04-26 17:00:56 +00:00
\s5
\c 34
2019-01-21 20:20:50 +00:00
\s ಯೆಹೂದದ ಅರಸನಾದ ಯೋಷೀಯನು
\p
\v 1 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
\v 2 ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
2018-04-26 17:00:56 +00:00
\p
2019-01-21 20:20:50 +00:00
\v 3 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
\v 5 ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
\v 7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
\v 9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
2018-04-26 17:00:56 +00:00
\s5
2019-01-21 20:20:50 +00:00
\v 10 ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
\v 11 ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
\v 13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
\s ಧರ್ಮೋಪದೇಶ ಗ್ರಂಥವು ದೊರೆತದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
\v 15 ಹಿಲ್ಕೀಯನು ಲೇಖಕನಾದ ಶಾಫಾನನಿಗೆ, <<ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ>> ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
\v 16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, <<ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
2018-04-26 17:00:56 +00:00
\s5
2019-01-21 20:20:50 +00:00
\v 17 ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು>> ಎಂದು ತಿಳಿಸಿದನು.
\v 18 ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, <<ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
\p
\v 19 ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 20 ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
\v 21 <<ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು>> ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
2018-04-26 17:00:56 +00:00
\s5
2019-01-21 20:20:50 +00:00
\v 23 ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
\v 24 ಯೆಹೋವನು ಹೇಳಿದ್ದೇನೆಂದರೆ, <<ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
\v 25 ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ>> ಎನ್ನುತ್ತಾನೆ.
2018-04-26 17:00:56 +00:00
\s5
2019-01-21 20:20:50 +00:00
\v 26 ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
\v 27 <<ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
\v 28 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ>> ಎಂದು ಹೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 29 ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
\v 30 ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 31 ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
\v 32 ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
2018-04-26 17:00:56 +00:00
\s5
2019-01-21 20:20:50 +00:00
\v 33 ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
2018-04-26 17:00:56 +00:00
\s5
\c 35
2019-01-21 20:20:50 +00:00
\s ಯೋಷೀಯನ ಕಾಲದಲ್ಲಿ ನಡೆದ ಪಸ್ಕಹಬ್ಬ
2018-04-26 17:00:56 +00:00
\p
2019-01-21 20:20:50 +00:00
\v 1 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.
\v 2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, <<ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.
\v 4 ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,
2018-04-26 17:00:56 +00:00
\s5
2019-01-21 20:20:50 +00:00
\v 5 ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ
\v 6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ>> ಎಂದು ಆಜ್ಞಾಪಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
\v 8 ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.
\v 9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;
\v 11 ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.
\v 12 ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.
\v 14 ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.
\v 17 ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 18 ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.
\v 19 ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.
\s ಯೋಷೀಯನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 20 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
\v 21 ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, <<ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು>> ಎಂದು ಹೇಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, <<ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ>> ಎಂದನು.
\v 24 ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.
\v 26 ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,
\v 27 ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.
2018-04-26 17:00:56 +00:00
\s5
\c 36
2019-01-21 20:20:50 +00:00
\s ಯೆಹೂದದ ಅರಸನಾದ ಯೆಹೋವಾಹಾಜನು
2018-04-26 17:00:56 +00:00
\p
2019-01-21 20:20:50 +00:00
\v 1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
\v 2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
\v 4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
\s ಯೆಹೂದದ ಅರಸನಾದ ಯೆಹೋಯಾಕೀಮನು
\p
2018-04-26 17:00:56 +00:00
\s5
2019-01-21 20:20:50 +00:00
\v 5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬೆಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
\v 7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
\s ಯೆಹೂದದ ಅರಸನಾದ ಯೆಹೋಯಾಕೀನನು
\p
2018-04-26 17:00:56 +00:00
\s5
2019-01-21 20:20:50 +00:00
\v 9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 10 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬೆಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ
\f +
\fr 36:10
\fq ಚಿಕ್ಕಪ್ಪನಾದ
\ft ಅಥವಾ ಸಹೋದರನಾದ.
\f* ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
\s ಯೆಹೂದದ ಅರಸನಾದ ಚಿದ್ಕೀಯನು
\p
2018-04-26 17:00:56 +00:00
\s5
2019-01-21 20:20:50 +00:00
\v 11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
\v 12 ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
\v 14 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
\s ಯೆರೂಸಲೇಮಿನ ಪತನ
\p
2018-04-26 17:00:56 +00:00
\s5
2019-01-21 20:20:50 +00:00
\v 15 ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
\v 16 ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 17 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬೆಲೋನಿಗೆ ಒಯ್ದನು.
\v 19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
\v 21 ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
\s ಕೋರೆಷನ ಪ್ರಕಟಣೆ
\p
2018-04-26 17:00:56 +00:00
\s5
2019-01-21 20:20:50 +00:00
\v 22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
\v 23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, <<ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು>> ಎಂದು ಪ್ರಕಟಿಸಿದನು.