mr_ulb/32-JON.usfm

142 lines
22 KiB
Plaintext
Raw Normal View History

2019-01-21 20:20:50 +00:00
\id JON - Kannada Unlocked Literal Bible
2018-04-26 17:00:56 +00:00
\ide UTF-8
2019-01-21 20:20:50 +00:00
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಯೋನನು
\toc1 ಯೋನನ ಪ್ರವಾದನೆಯ ಗ್ರಂಥ
\toc2 ಯೋನನು
2018-04-26 17:00:56 +00:00
\toc3 jon
2019-01-21 20:20:50 +00:00
\mt1 ಯೋನನು
\is ಗ್ರಂಥಕರ್ತೃತ್ವ
\ip ಪ್ರವಾದಿಯಾದ ಯೋನನನ್ನು ಯೋನ ಪುಸ್ತಕದ ಗ್ರಂಥಕರ್ತನೆಂದು ಯೋನ 1:1 ವಿಶೇಷವಾಗಿ ಗುರುತಿಸುತ್ತದೆ. ಯೋನನು ಗತ್-ಹೆಫೆರ್ ಎಂಬ ಊರಿನಿಂದ ಬಂದವನು, ಇದು ನಜರೇತಿನ ಬಳಿಯಲ್ಲಿರುವ ಪ್ರದೇಶದಲ್ಲಿದ್ದು, ನಂತರ ಅದು ಗಲಿಲಾಯ ಎಂದು ಅರಿಯಲ್ಪಟ್ಟಿತು (2 ಅರಸು 14:25). ಇದು ಇಸ್ರಾಯೇಲಿನ ಉತ್ತರದ ರಾಜ್ಯದಿಂದ ಬಂದಂಥ ಕೆಲವು ಪ್ರವಾದಿಗಳಲ್ಲಿ ಯೋನನನ್ನು ಒಬ್ಬನನ್ನಾಗಿ ಮಾಡುತ್ತದೆ. ಯೋನನ ಪುಸ್ತಕವು ದೇವರ ತಾಳ್ಮೆಯನ್ನು ಮತ್ತು ಪ್ರೀತಿಯನ್ನು, ಮತ್ತು ಆತನಿಗೆ ಅವಿಧೇಯರಾಗಿರುವವರಿಗೆ ಎರಡನೇ ಅವಕಾಶವನ್ನು ಕೊಡುವ ಆತನ ಇಚ್ಛೆಯನ್ನು ಎತ್ತಿತೋರಿಸುತ್ತದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ. ಪೂ. 793-450 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಈ ಕಥೆಯು ಇಸ್ರಾಯೇಲಿನಲ್ಲಿ ಆರಂಭವಾಗಿ, ಯೊಪ್ಪದ ಮೆಡಿಟರೇನಿಯನ್ ಬಂದರಿನವರೆಗೆ ಸಾಗುತ್ತದೆ ಮತ್ತು ಟೈಗ್ರಿಸ್ ನದಿಯ ಬಳಿಯಲ್ಲಿರುವ ಅಶ್ಶೂರ್ಯ ಸಾಮ್ರಾಜ್ಯದ ರಾಜಧಾನಿಯಾದ ನಿನವೆಯಲ್ಲಿ ಮುಕ್ತಾಯವಾಗುತ್ತದೆ.
\is ಸ್ವೀಕೃತದಾರರು
\ip ಯೋನ ಪುಸ್ತಕದ ಪ್ರೇಕ್ಷಕರು ಇಸ್ರಾಯೇಲ್ ಜನರು ಮತ್ತು ಸತ್ಯವೇದದ ಭವಿಷ್ಯದ ಓದಗಾರರೆಲ್ಲರು.
\is ಉದ್ದೇಶ
\ip ಅವಿಧೇಯತೆಯು ಮತ್ತು ಪುನರುಜ್ಜೀವನವು ಈ ಪುಸ್ತಕದಲ್ಲಿರುವ ಪ್ರಮುಖ ವಿಷಯಗಳಾಗಿವೆ. ತಿಮಿಂಗಿಲದ ಹೊಟ್ಟೆಯಲ್ಲಿನ ಯೋನನ ಅನುಭವವು, ಅವನು ಪಶ್ಚಾತ್ತಾಪಪಡುತ್ತಾ ವಿಶಿಷ್ಟವಾದ ಬಿಡುಗಡೆಯನ್ನು ಹೊಂದಿಕೊಳ್ಳಲು ವಿಶಿಷ್ಟವಾದ ಅವಕಾಶವನ್ನು ಅವನಿಗೆ ಒದಗಿಸಿಕೊಟ್ಟಿತು. ಅವನ ಆರಂಭಿಕ ಅವಿಧೇಯತೆಯು ಅವನ ವೈಯಕ್ತಿಕ ಉಜ್ಜೀವನಕ್ಕೆ ಮಾತ್ರವಲ್ಲ, ಆದರೆ ನಿನವೆಯರ ಉಜ್ಜೀವನಕ್ಕೂ ಸಹ ಕಾರಣವಾಯಿತು. ದೇವರ ಸಂದೇಶ ನಾವು ಇಷ್ಟಪಡುವ ಅಥವಾ ನಮ್ಮಂತೆಯೇ ಇರುವ ಜನರಿಗೆ ಮಾತ್ರವಲ್ಲ, ಆದರೆ ಆ ಸಂದೇಶವು ಇಡೀ ಪ್ರಪಂಚಕ್ಕೆ ಅನ್ವಯವಾಗುತ್ತದೆ. ದೇವರು ಹೃತ್ಪೂರ್ವಕವಾದ ಪಶ್ಚಾತ್ತಾಪವನ್ನು ಬಯಸುತ್ತಾನೆ. ಆತನು ನಮ್ಮ ಹೃದಯ ಮತ್ತು ನಿಜವಾದ ಭಾವನೆಗಳ ಬಗ್ಗೆ ಕಾಳಜಿ ವಹಿಸುತ್ತಾನೆ ಹೊರತು, ಇತರರನ್ನು ಮೆಚ್ಚಿಸುವ ಒಳ್ಳೆಯ ಕಾರ್ಯಗಳ ಬಗ್ಗೆ ಅಲ್ಲ.
\is ಮುಖ್ಯಾಂಶ
\ip ದೇವರ ಕೃಪೆಯು ಸಕಲ ಜನರಿಗೆ
\iot ಪರಿವಿಡಿ
\io1 1. ಯೋನನ ಅವಿಧೇಯತೆ (1:1-14)
\io1 2. ದೊಡ್ಡ ಮೀನು ಯೋನನನ್ನು ನುಂಗಿದ್ದು (1:15-16)
\io1 3. ಯೋನನ ಪಶ್ಚಾತ್ತಾಪ (1:17—2:10)
\io1 4. ಯೋನನು ನಿನೆವೆಯಲ್ಲಿ ಬೋಧಿಸಿದ್ದು (3:1-10)
\io1 5. ಯೋನನು ದೇವರ ಕರುಣೆಯ ಕುರಿತು ಕೋಪಗೊಂಡಿದ್ದು (4:1-11)
2018-04-26 17:00:56 +00:00
\s5
\c 1
2019-01-21 20:20:50 +00:00
\s ಯೋನನ ಅವಿಧೇಯತೆ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,
\v 2 <<ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ>> ಎಂದು ಅಪ್ಪಣೆಮಾಡಿದನು.
\v 3 ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
\v 5 ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, <<ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು>> ಎಂದು ಹೇಳಿದನು.
\v 7 ಅನಂತರ ನಾವಿಕರೆಲ್ಲರು <<ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ>> ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.
2018-04-26 17:00:56 +00:00
\s5
2019-01-21 20:20:50 +00:00
\v 8 ಆಗ ಅವರು ಯೋನನಿಗೆ ಅಯ್ಯಾ, <<ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?>> ಎಂದು ಅವನನ್ನು ಕೇಳಲು
\v 9 ಅವನು ಅವರಿಗೆ <<ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು>> ಎಂದು ಹೇಳಿ,
\v 10 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ <<ಇದೇನು ನೀನು ಮಾಡಿದ್ದು?>> ಎಂದು ಕೇಳಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 11 ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ <<ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?>> ಎಂದು ಕೇಳಿದರು.
\v 12 ಯೋನನು ಅವರಿಗೆ <<ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು>> ಎಂದು ಉತ್ತರಕೊಟ್ಟನು.
\v 13 ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
2018-04-26 17:00:56 +00:00
\p
\s5
2019-01-21 20:20:50 +00:00
\v 14 ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, <<ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ>> ಎಂದು ಬಿನ್ನವಿಸಿದರು.
\v 15 ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.
\v 16 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 17 ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.
2018-04-26 17:00:56 +00:00
\s5
\c 2
2019-01-21 20:20:50 +00:00
\s ಯೋನನ ಪ್ರಾರ್ಥನೆ
\p
\v 1 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
\q1
\v 2 <<ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
\q2 ಆತನು ನನಗೆ ಸದುತ್ತರವನ್ನು ದಯಪಾಲಿಸಿದನು;
\q2 ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು!
\q2 ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
\q1
\s5
\v 3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ;
\q2 ಪ್ರವಾಹವು ನನ್ನನ್ನು ಸುತ್ತಿಕೊಂಡಿತು;
\q2 ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
\q1
\v 4 <ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು;
\q2 ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?>
\q1
\s5
\v 5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು,
\q2 ಮಹಾಸಾಗರವು ನನ್ನನ್ನು ಆವರಿಸಿತು,
\q2 ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
\q1
\v 6 ಪರ್ವತಗಳ ತಳಹದಿಗೆ ಇಳಿದುಹೋದೆನು,
\q2 ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು;
\q2 ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
\b
\q1
\s5
\v 7 <<ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು;
\q2 ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
\b
\q1
\v 8 <<ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು
\q2 ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
\q1
\s5
\v 9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,
\q2 ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.
\q2 ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.>>
\p
\v 10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.
2018-04-26 17:00:56 +00:00
\s5
\c 3
2019-01-21 20:20:50 +00:00
\s ಯೋನನ ವಿಧೇಯತೆಯೂ ನಿನೆವೆಯರ ಮನಃಪರಿವರ್ತನೆಯೂ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
\v 2 ಅದೇನೆಂದರೆ <<ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು>> ಎಂದು ಹೇಳಿದನು.
\v 3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ <<ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು>> ಎಂದು ಸಾರತೊಡಗಿದನು.
\v 5 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
\v 7 ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: <<ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
2018-04-26 17:00:56 +00:00
\s5
2019-01-21 20:20:50 +00:00
\v 8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
\v 9 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು>> ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 10 ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
2018-04-26 17:00:56 +00:00
\s5
\c 4
2019-01-21 20:20:50 +00:00
\s ಯೋನನ ಕೋಪವೂ ದೇವರ ಕನಿಕರವೂ
2018-04-26 17:00:56 +00:00
\p
2019-01-21 20:20:50 +00:00
\v 1 ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.
\v 2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, <<ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
\v 3 ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು>> ಎಂದು ವಿಜ್ಞಾಪಿಸಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 4 ಅದಕ್ಕೆ ಯೆಹೋವನು, <<ನೀನು ಸಿಟ್ಟುಗೊಳ್ಳುವುದು ಸರಿಯೋ?>> ಎಂದು ಕೇಳಿದನು.
\v 5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
\v 7 ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
2018-04-26 17:00:56 +00:00
\s5
2019-01-21 20:20:50 +00:00
\v 8 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ <<ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು>> ಎಂದು ಸಾಯಲು ಬಯಸಿದನು.
\v 9 ಆಗ ದೇವರು ಯೋನನಿಗೆ, <<ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?>> ಎಂದು ಕೇಳಲು ಯೋನನು <<ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 10 ಅದಕ್ಕೆ ಯೆಹೋವನು <<ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
\v 11 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?>> ಎಂದನು.