kn_ulb/02-EXO.usfm

2498 lines
446 KiB
Plaintext

\id EXO - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ವಿಮೋಚನಕಾಂಡ
\toc1 ಮೋಶೆಯ ಧರ್ಮಶಾಸ್ತ್ರದಲ್ಲಿ ವಿಮೋಚನಕಾಂಡ ಎಂಬ ದ್ವೀತಿಯಭಾಗ
\toc2 ವಿಮೋಚನಕಾಂಡ
\toc3 exo
\mt1 ಮೋಶೆಯ ಧರ್ಮಶಾಸ್ತ್ರದಲ್ಲಿ ವಿಮೋಚನಕಾಂಡ ಎಂಬ ದ್ವೀತಿಯಭಾಗ
\is ಗ್ರಂಥಕರ್ತೃತ್ವ
\ip ಮೋಶೆಯನ್ನು ಸಾಂಪ್ರದಾಯಿಕವಾಗಿ ಗ್ರಂಥಕರ್ತನೆಂದು ಹೇಳಲಾಗಿದೆ. ಮೋಶೆಯನ್ನು ಈ ಪುಸ್ತಕದ ದೈವ ಪ್ರೇರಿತ ಗ್ರಂಥಕರ್ತನೆಂದು ಪ್ರಶ್ನಾತೀತವಾಗಿ ಅಂಗೀಕರಿಸಲು ಎರಡು ಕಾರಣಗಳಿವೆ. ಮೊದಲನೆಯದಾಗಿ, ಮೋಶೆಯ ಬರವಣಿಗೆಯ ಚಟುವಟಿಕೆಯ ಬಗ್ಗೆ ಸ್ವತಃ ವಿಮೋಚನಕಾಂಡವೇ ಮಾತನಾಡುತ್ತದೆ. ವಿಮೋಚನಕಾಂಡ 34:27 ರಲ್ಲಿ "ಈ ವಾಕ್ಯಗಳನ್ನು ಬರೆ" ಎಂದು ದೇವರು ಮೋಶೆಗೆ ಆಜ್ಞಾಪಿಸುತ್ತಾನೆ. ಇನ್ನೊಂದು ವಾಕ್ಯಭಾಗವು ದೇವರ ಆಜ್ಞೆಗೆ ವಿಧೇಯನಾಗಿ "ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದನು" ಎಂದು ನಮಗೆ ಹೇಳುತ್ತದೆ (24:4). ವಿಮೋಚನಕಾಂಡ ಗ್ರಂಥದಲ್ಲಿ ಕಂಡುಬರುವ ವಿಷಯಗಳನ್ನು ಮೋಶೆಯ ಬರೆದನು ಎಂದು ಈ ವಚನಗಳು ಸೂಚಿಸುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ. ಎರಡನೆಯದಾಗಿ, ಮೋಶೆಯು ವಿಮೋಚನಕಾಂಡದಲ್ಲಿ ವಿವರಿಸಲಾಗಿರುವ ಘಟನೆಗಳಲ್ಲಿ ಪಾಲ್ಗೊಂಡಿದ್ದನು ಅಥವಾ ಸಹಭಾಗಿಯಾಗಿದ್ದನು. ಅವನು ಫರೋಹನ ಆಸ್ಥಾನದಲ್ಲಿ ವಿದ್ಯಾಭ್ಯಾಸ ಹೊಂದಿದ್ದನು ಮತ್ತು ಬರೆಯುವ ಅರ್ಹತೆಯುಳ್ಳವನಾಗಿದ್ದನು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 1446-1405 ರ ನಡುವಿನ ಸಮಯ.
\ip ಇಸ್ರಾಯೇಲರು ಈ ದಿನಾಂಕಕ್ಕಿಂತ ಮುಂಚೆ 40 ವರ್ಷಗಳು ತಮ್ಮ ಅಪನಂಬಿಗಸ್ತಿಕೆಯಿಂದ ಅರಣ್ಯದಲ್ಲಿ ಅಲೆದಾಡಿದರು. ಬಹುಶಃ ಈ ಪುಸ್ತಕದ ಬರವಣಿಗೆಯ ಅತ್ಯಂತ ಸೂಕ್ತವಾದ ಸಮಯವು ಇದಾಗಿರಬಹುದು.
\is ಸ್ವೀಕೃತದಾರ
\ip ಈ ಪುಸ್ತಕದ ಸ್ವೀಕೃತದಾರರು ವಿಮೋಚನಕಾಂಡದಲ್ಲಿ ಬಿಡುಗಡೆಯಾದ ಸಂತತಿಯವರೇ ಆಗಿರಬಹುದು. ಮೋಶೆಯು ಐಗುಪ್ತದಿಂದ ಹೊರಗೆ ಕರೆತಂದ ಸೀನಾಯಿ ಸಮುದಾಯಕ್ಕೆ ವಿಮೋಚನಕಾಂಡವನ್ನು ಬರೆದನು (ವಿಮೋ. 17:14; 24: 4; 34: 27-28).
\is ಉದ್ದೇಶ
\ip ಇಸ್ರಾಯೇಲರು ಹೇಗೆ ಯೆಹೋವನ ಜನರಾದರು ಎಂಬುದನ್ನು ನಿರೂಪಣೆಯ ರೂಪದಲ್ಲಿ ಪ್ರತಿಪಾದಿಸುತ್ತದೆ ಮತ್ತು ಆ ಜನಾಂಗವು ದೇವರ ಜನರಾಗಿ ಜೀವಿಸಲು ಬೇಕಾದ ಒಡಂಬಡಿಕೆಯ ನಿಯಮಗಳನ್ನು ಪ್ರಸ್ತಾಪಿಸುತ್ತದೆ. ವಿಮೋಚನಕಾಂಡವು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡ ನಂಬಿಗಸ್ತನು, ಪ್ರರಾಕ್ರಮಿಯು, ರಕ್ಷಿಸುವವನು, ಪರಿಶುದ್ಧನು ಆದ ದೇವರ ಗುಣಲಕ್ಷಣವನ್ನು ವರ್ಣಿಸುತ್ತದೆ. ದೇವರ ಗುಣಲಕ್ಷಣವು ದೇವರ ಹೆಸರಿನಿಂದಲೂ ದೇವರ ಕ್ರಿಯೆಗಳಿಂದಲೂ ತೋರಿಬರುತ್ತದೆ. ಅಬ್ರಹಾಮನ ವಂಶದವರನ್ನು ಐಗುಪ್ತದ ಬಂಧನದಿಂದ ಬಿಡಿಸಿದಾಗ ದೇವರು ಅಬ್ರಹಾಮನಿಗೆ ಮಾಡಿದ್ದ ವಾಗ್ದಾನವು ಹೇಗೆ ನೆರವೇರಿತ್ತು ಎಂಬುದನ್ನು ಇದು ತೋರಿಸುತ್ತದೆ (ಆದಿ. 15:12-16). ಇದು ಆದುಕೊಂಡ ಜನಾಂಗವಾದ ಒಂದು ಕುಟುಂಬದ ಕಥೆಯಾಗಿದೆ (ವಿಮೋ. 2:24; 6:5; 12:37). ಐಗುಪ್ತದಿಂದ ಹೊರಟು ಹೋದ ಇಬ್ರಿಯರ ಸಂಖ್ಯೆಯು ಎರಡು ರಿಂದ ಮೂರು ದಶಲಕ್ಷಗಳಷ್ಟು ಇರಬಹುದು.
\is ಮುಖ್ಯಾಂಶ
\ip ಬಿಡುಗಡೆ
\iot ಪರಿವಿಡಿ
\io1 1. ಪೀಠಿಕೆ (ಅಧ್ಯಾಯ 1-2)
\io1 2. ಇಸ್ರಾಯೇಲರ ಬಿಡುಗಡೆ (ಅಧ್ಯಾಯ 3-18)
\io1 3. ಸೀನಾಯಿ ಬೆಟ್ಟದಲ್ಲಿ ಕೊಟಲ್ಪಟ್ಟ ಒಡಂಬಡಿಕೆ (ಅಧ್ಯಾಯ 19-24)
\io1 4. ವೈಭವಭರಿತ ದೇವದರ್ಶನ ಗುಡಾರ (ಅಧ್ಯಾಯ 25-31)
\io1 5. ದ್ರೋಹದ ಪರಿಣಾಮವಾಗಿ ದೇವರಿಂದ ಹಿಂಜರಿಯುವಿಕೆ (ಅಧ್ಯಾಯ 32-34)
\io1 6. ವೈಭವಭರಿತ ದೇವದರ್ಶನ ಗುಡಾರದ ನಿರ್ಮಾಣ (ಅಧ್ಯಾಯ 35-40)
\s5
\c 1
\s ಐಗುಪ್ತ ದೇಶದಲ್ಲಿ ಇಸ್ರಾಯೇಲರು ಹಿಂಸಿಸಲ್ಪಟ್ಟರು
\p
\v 1 ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
\v 2 ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
\v 3 ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
\v 4 ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
\v 5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.
\s5
\p
\v 6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
\v 7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
\s5
\v 8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
\v 9 ಅರಸನು ತನ್ನ ಜನರಿಗೆ, <<ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
\v 10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ>> ಎಂದು ಹೇಳಿ
\s5
\v 11 ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
\v 12 ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
\s5
\v 13 ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
\v 14 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
\s5
\v 15 ಇದಲ್ಲದೆ ಐಗುಪ್ತ ದೇಶದ ಅರಸನು <<ಶಿಪ್ರಾ>> ಮತ್ತು <<ಪೂಗಾ>> ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
\v 16 ಅವನು ಅವರಿಗೆ, <<ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ>> ಎಂದು ಹೇಳಿದನು.
\v 17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
\s5
\v 18 ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, <<ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?>> ಎಂದು ಕೇಳಿದನು.
\v 19 ಸೂಲಗಿತ್ತಿಯರು ಫರೋಹನಿಗೆ, <<ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು>> ಎಂದು ಹೇಳಿದರು.
\s5
\v 20 ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
\v 21 ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
\p
\v 22 ತರುವಾಯ ಫರೋಹನು ತನ್ನ ಜನರಿಗೆ, <<ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು>> ಎಂದು ಆಜ್ಞೆ ಮಾಡಿದನು.
\s5
\c 2
\s ಮೋಶೆಯ ಜನನ ಮತ್ತು ಬಾಲ್ಯ
\p
\v 1 ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು.
\v 2 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
\s5
\v 3 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.
\v 4 ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.
\s5
\p
\v 5 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.
\v 6 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, <<ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು>> ಎಂದುಕೊಂಡಳು.
\s5
\v 7 ಆಗಲೇ ಮಗುವಿನ ಅಕ್ಕ ಬಂದು, <<ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?>> ಎಂದು ಕೇಳಿದಳು.
\v 8 ಫರೋಹನ ಮಗಳು ಆಕೆಗೆ, <<ಹೋಗು ಕರೆದುಕೊಂಡು ಬಾ>> ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.
\s5
\v 9 ಫರೋಹನ ಮಗಳು ಮಗುವಿನ ತಾಯಿಗೆ, <<ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು>> ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.
\v 10 ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. <<ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,>> ಎಂದು ಹೇಳಿ ಆಕೆಯು ಅವನಿಗೆ <<ಮೋಶೆ
\f +
\fr 2:10
\fq ಮೋಶೆ
\ft ಅಂದರೆ ನೀರಿನೊಳಗಿನಿಂದ ಎಳೆಯಲ್ಪಟ್ಟವನು.
\f* >> ಎಂದು ಹೆಸರಿಟ್ಟಳು.
\s ಮೋಶೆಯು ಮಿದ್ಯಾನ್ ದೇಶಕ್ಕೆ ಓಡಿಹೋದದ್ದು
\s5
\p
\v 11 ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.
\v 12 ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.
\s5
\v 13 ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, <<ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?>> ಎಂದು ಕೇಳಿದನು.
\v 14 ಆ ಮನುಷ್ಯನು ಅವನಿಗೆ, <<ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?>> ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, <<ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ>> ಅಂದುಕೊಂಡನು.
\s5
\v 15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.
\p
\v 16 ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.
\v 17 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
\s5
\v 18 ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, <<ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?>> ಎಂದು ಕೇಳಿದನು.
\v 19 ಅದಕ್ಕೆ ಅವರು, <<ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು>> ಅಂದರು.
\v 20 ಆಗ ಅವನು ತನ್ನ ಮಕ್ಕಳಿಗೆ, <<ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ>> ಎಂದು ಹೇಳಿದನು.
\s5
\p
\v 21 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
\v 22 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
\s ದೇವರು ಇಸ್ರಾಯೇಲರನ್ನು ಬಿಡಿಸುವುದಕ್ಕೆ ಮೋಶೆಯನ್ನು ನೇಮಿಸಿದ್ದು
\s5
\p
\v 23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
\v 24 ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
\v 25 ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.
\s5
\c 3
\s ಮೋಶೆಯು - ಉರಿಯುತ್ತಿರುವ ಪೊದೆಯು
\p
\v 1 ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, <<ಹೋರೇಬ್>> ಎಂಬ
\f +
\fr 3:1
\ft ಪರಿಶುದ್ಧ ಬೆಟ್ಟ.
\f* ದೇವರ ಬೆಟ್ಟಕ್ಕೆ ಬಂದನು.
\v 2 ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
\v 3 ಆಗ ಮೋಶೆ, <<ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು>> ಅಂದುಕೊಂಡನು.
\s5
\v 4 ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ <<ಮೋಶೆಯೇ, ಮೋಶೆಯೇ>> ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, <<ಇಗೋ ಇದ್ದೇನೆ>> ಅಂದನು.
\v 5 ದೇವರು ಅವನಿಗೆ, <<ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ>> ಎಂದು ಹೇಳಿದನು.
\v 6 ಇದಲ್ಲದೆ ಆತನು ಅವನಿಗೆ, <<ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ>> ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
\s5
\p
\v 7 ಆಗ ಯೆಹೋವನು, <<ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
\v 8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು
\f +
\fr 3:8
\ft ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
\s5
\v 9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
\v 10 ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ>> ಅಂದನು.
\s5
\p
\v 11 ಆಗ ಮೋಶೆಯು ದೇವರಿಗೆ, <<ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?>> ಎಂದು ಹೇಳಿದನು.
\v 12 ಅದಕ್ಕೆ ದೇವರು, <<ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು>> ಅಂದನು.
\s ದೇವರು ತನ್ನ ಹೆಸರನ್ನು ಪ್ರಕಟಿಸಿದ್ದು
\s5
\p
\v 13 ಅದಕ್ಕೆ ಮೋಶೆಯು ದೇವರಿಗೆ, <<ನಾನು ಇಸ್ರಾಯೇಲರ ಬಳಿಗೆ ಹೋಗಿ, <ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ> ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು>> ಎಂದನು.
\v 14 ದೇವರು ಮೋಶೆಗೆ, <<ಇರುವಾತನೇ ಆಗಿದ್ದೇನೆ>> ಎಂದು ಹೇಳಿದನು. <<ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು>> ಅಂದನು.
\p
\v 15 ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, <<ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
\s5
\v 16 ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, <<ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
\v 17 ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ>> ಎಂಬುದಾಗಿ ಅವರಿಗೆ ಹೇಳು.
\v 18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, <<ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು>> ಎಂದು ಕೇಳಿಕೊಳ್ಳಿರಿ.
\s5
\v 19 ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
\v 20 ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
\v 21 <<ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.
\v 22 ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ>> ಅಂದನು.
\s5
\c 4
\s ದೇವರು ಮೋಶೆಗೆ ಕೊಟ್ಟ ಅದ್ಭುತ ಶಕ್ತಿ
\p
\v 1 ಅದಕ್ಕೆ ಮೋಶೆಯು ಉತ್ತರವಾಗಿ, <<ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?>> ಎಂದನು.
\v 2 ಅದಕ್ಕೆ ಯೆಹೋವನು ಅವನಿಗೆ, <<ನಿನ್ನ ಕೈಯಲ್ಲಿರುವುದೇನು?>> ಎಂದು ಕೇಳಿದನು. ಅವನು, ಇದು <<ಇದು ಒಂದು ಕೋಲು>> ಅಂದನು.
\v 3 ಯೆಹೋವನು ಅವನಿಗೆ, <<ಅದನ್ನು ನೆಲದ ಮೇಲೆ ಹಾಕು>> ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.
\s5
\v 4 ಯೆಹೋವನು ಮೋಶೆಗೆ, <<ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ>> ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.
\v 5 ಆಗ ಯೆಹೋವನು ಅವನಿಗೆ, <<ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು>> ಎಂದು ಹೇಳಿದನು.
\s5
\v 6 ಯೆಹೋವನು ತಿರುಗಿ ಅವನಿಗೆ, <<ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ>> ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
\v 7 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ <<ಸೇರಿಸು>> ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.
\s5
\v 8 ಆಗ ಯೆಹೋವನು ಅವನಿಗೆ, <<ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
\v 9 ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು>> ಎಂದು ಹೇಳಿದನು.
\s5
\p
\v 10 ಆಗ ಮೋಶೆಯು ಯೆಹೋವನಿಗೆ, <<ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ>> ಎಂದು ಹೇಳಿದನು.
\v 11 ಅದಕ್ಕೆ ಯೆಹೋವನು ಅವನಿಗೆ, <<ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
\v 12 ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು>> ಎಂದು ಹೇಳಿದನು.
\v 13 ಅದಕ್ಕೆ ಮೋಶೆಯು, <<ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು>> ಎಂದನು.
\s5
\v 14 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, <<ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
\v 15 ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
\v 16 ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.
\v 17 ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ>> ಅಂದನು.
\s ಮೋಶೆ ಐಗುಪ್ತದೇಶಕ್ಕೆ ಮರಳಿ ಬಂದದ್ದು
\s5
\p
\v 18 ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, <<ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು>> ಎಂದನು. ಇತ್ರೋನನು ಮೋಶೆಗೆ, <<ನೀನು ಸಮಾಧಾನದಿಂದ ಹೋಗು>> ಅಂದನು.
\p
\v 19 ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
\v 20 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
\s5
\p
\v 21 ಯೆಹೋವನು ಮೋಶೆಗೆ ಇಂತೆಂದನು, <<ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
\v 22 ಆಗ ನೀನು ಫರೋಹನಿಗೆ, <ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
\v 23 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ> >> ಎಂದು ತಿಳಿಸಬೇಕು.
\s5
\p
\v 24 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.
\v 25 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ
\f +
\fr 4:25
\ft ಮೋಶೆಯ ರಹಸ್ಯಾಂಗಕ್ಕೆ.
\f* ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, <<ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು>> ಎಂದಳು.
\v 26 ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, <<ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು>> ಎಂಬ ಮಾತನ್ನು ಹೇಳಿದಳು.
\s5
\p
\v 27 ಇದಲ್ಲದೆ ಯೆಹೋವನು ಆರೋನನಿಗೆ, <<ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು>> ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
\v 28 ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.
\s5
\p
\v 29 ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.
\v 30 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.
\v 31 ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
\s5
\c 5
\s ಫರೋಹನ ಮಂದೆ ಮೋಶೆ ಮತ್ತು ಆರೋನರು
\p
\v 1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, <<ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ>> ಅಂದರು.
\v 2 ಅದಕ್ಕೆ ಫರೋಹನು, <<ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ>> ಅಂದನು.
\s5
\v 3 ಆಗ ಅವರು, <<ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು>> ಎಂದು ಹೇಳಿದರು.
\p
\v 4 ಐಗುಪ್ತರ ಅರಸನು ಅವರಿಗೆ, <<ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ>> ಎಂದು ಹೇಳಿದನು.
\v 5 ಫರೋಹನು, <<ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?>> ಎಂದನು.
\s5
\v 6 ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,
\v 7 <<ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,
\v 8 ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, <ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು> ಎಂದು ಕೂಗಿಕೊಳ್ಳುತ್ತಿದ್ದಾರೆ.
\v 9 ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ>> ಎಂದು ಆಜ್ಞಾಪಿಸಿದನು.
\s ಐಗುಪ್ತ್ಯರು ಇಸ್ರಾಯೇಲರನ್ನು ಹೆಚ್ಚಾಗಿ ಬಾಧಿಸಿದ್ದು
\s5
\p
\v 10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, <<ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.
\v 11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು>> ಎಂದು ಹೇಳಿದರು.
\s5
\v 12 ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
\v 13 ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, <<ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು>> ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
\v 14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, <<ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ>> ಎಂದು ಹೇಳಿ ಅವರನ್ನು ಹೊಡೆದರು.
\s5
\v 15 ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, <<ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?
\v 16 ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ <ಇಟ್ಟಿಗೆಗಳನ್ನು ಮಾಡಿರಿ!> ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ>> ಎಂದು ಗೋಳಾಡಿದರು.
\v 17 ಅದಕ್ಕೆ ಅವನು, <<ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, <ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು> ಎಂದು ಹೇಳುತ್ತಿದ್ದೀರಿ.
\v 18 ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು>> ಅಂದನು.
\s5
\p
\v 19 ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.
\v 20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ
\v 21 ಮೋಶೆ ಹಾಗು ಆರೋನರಿಗೆ, <<ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ>> ಅಂದರು. <<ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ>> ಎಂದು ಹೇಳಿದರು.
\s ದೇವರು ಮೋಶೆಯನ್ನು ಧೈರ್ಯಪಡಿಸಿದ್ದು
\s5
\p
\v 22 ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, <<ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?
\v 23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ>> ಎಂದು ಹೇಳಿದನು.
\s5
\c 6
\s ಯೆಹೋವನು ಇಸ್ರಾಯೇಲರನ್ನು ಬಿಡುಗಡೆಗೊಳಿಸುವುದಾಗಿ ವಾಗ್ದಾನವನ್ನು ಮಾಡಿದ್ದು
\p
\v 1 ಆನಂತರ ಯೆಹೋವನು ಮೋಶೆಗೆ, <<ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು>> ಅಂದನು.
\s5
\p
\v 2 ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, <<ನಾನೇ ಯೆಹೋವನು,
\v 3 ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ
\f +
\fr 6:3
\ft ಎಲ್ ಷಡಾಯ್.
\f* ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
\v 4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
\v 5 ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
\s5
\v 6 ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, <ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
\v 7 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
\s5
\v 8 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ> ಎಂದು ಅವರಿಗೆ ಹೇಳು>> ಅಂದನು.
\v 9 ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
\s5
\v 10 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 11 <<ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು>> ಅಂದನು.
\v 12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, <<ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ
\f +
\fr 6:12
\ft ಇಬ್ರಿಯ ಭಾಷೆಯಲ್ಲಿ ಸುನ್ನತಿಯಿಲ್ಲದ ತುಟಿಗಳುಳ್ಳ ಮನುಷ್ಯನು.
\f* ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?>> ಅಂದನು.
\v 13 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.
\s ಮೋಶೆ ಮತ್ತು ಆರೋನರ ವಂಶಾವಳಿ
\s5
\p
\v 14 ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
\v 15 ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
\s5
\v 16 ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
\v 17 ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
\v 18 ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
\v 19 ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
\s5
\v 20 ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.
\v 21 ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
\v 22 ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
\s5
\v 23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
\v 24 ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
\v 25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
\s5
\v 26 ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
\v 27 ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.
\s ಮೋಶೆ ಆರೋನರು ದೇವರ ಆಜ್ಞೆಗೆ ವಿಧೇಯರಾದದ್ದು
\s5
\p
\v 28 ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ
\v 29 ಆತನು ಮೋಶೆಗೆ, <<ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು>> ಎಂದನು.
\v 30 ಆದರೆ ಮೋಶೆಯು ಯೆಹೋವನಿಗೆ, <<ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು>> ಅಂದನು.
\s5
\c 7
\p
\v 1 ಆಗ ಯೆಹೋವನು ಮೋಶೆಗೆ ಇಂತೆಂದನು, <<ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.
\v 2 ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.
\s5
\v 3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
\v 4 ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.
\v 5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು>> ಅಂದನು.
\s5
\p
\v 6 ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.
\v 7 ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
\s ಆರೋನನ ಕೋಲು ಸರ್ಪವಾಗಿದ್ದು
\s5
\p
\v 8 ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ,
\v 9 <<ಫರೋಹನು ನಿಮಗೆ <ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು> ಎಂದು ಹೇಳಿದರೆ ಮೋಶೆಯು ಆರೋನನಿಗೆ, <ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು> ಎಂದು ಹೇಳಬೇಕು. ಅದು ಸರ್ಪವಾಗುವುದು>> ಎಂದು ಆಜ್ಞಾಪಿಸಿದನು.
\v 10 ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
\s5
\v 11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
\v 12 ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
\v 13 ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
\s ನೈಲನದಿಯ ನೀರು ರಕ್ತವಾದದ್ದು
\s5
\p
\v 14 ಆಗ ಯೆಹೋವನು ಮೋಶೆಗೆ, <<ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
\v 15 ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
\s5
\v 16 <ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.
\v 17 ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
\v 18 ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು> ಎಂದು ಹೇಳಬೇಕು>> ಅಂದನು.
\s5
\p
\v 19 ಯೆಹೋವನು ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ <ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು> ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು>> ಅಂದನು.
\s5
\v 20 ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
\v 21 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.
\p
\v 22 ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
\s5
\v 23 ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.
\v 24 ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.
\v 25 ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.
\s5
\c 8
\s ಕಪ್ಪೆಗಳಿಂದ ಬಾಧೆಯುಂಟಾದದ್ದು
\p
\v 1 ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, <<ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, <ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
\v 2 ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.
\v 3 ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.
\v 4 ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.> >> ಎಂದನು.
\s5
\p
\v 5 ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು>> ಎಂದು ಹೇಳಬೇಕು ಎಂದನು.
\v 6 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.
\v 7 ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
\s5
\p
\v 8 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, <<ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು>> ಎಂದನು.
\v 9 ಅದಕ್ಕೆ ಮೋಶೆ ಫರೋಹನಿಗೆ, <<ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು>> ಎಂದು ಫರೋಹನನ್ನು ವಿನಂತಿಸಿಕೊಂಡನು.
\s5
\v 10 ಫರೋಹನು ಮೋಶೆಗೆ, <<ನಾಳೆ>> ಎಂದನು. ಆಗ ಮೋಶೆಯು, <<ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.
\v 11 ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು>> ಎಂದನು.
\v 12 ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.
\s5
\v 13 ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.
\v 14 ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.
\v 15 ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
\s ಹೇನುಗಳ ಬಾಧೆ
\s5
\p
\v 16 ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ, <ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು> >> ಎಂದನು.
\v 17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
\s5
\v 18 ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
\v 19 ಆಗ ಆ ಮಂತ್ರಗಾರರು ಫರೋಹನಿಗೆ, <<ಇದು ದೇವರ ಕೈಕೆಲಸವೇ ಸರಿ>> ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.
\s ನೊಣಗಳ ಬಾಧೆ
\s5
\p
\v 20 ತರುವಾಯ ಯೆಹೋವನು ಮೋಶೆಗೆ, <<ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, <ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
\v 21 ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.
\s5
\v 22 ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.
\v 23 ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ
\f +
\fr 8:23
\ft ವಿಮುಕ್ತಗೊಳಿಸುವೆನು.
\f* ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು> ಎಂದು ಹೇಳಬೇಕು>> ಎಂದನು.
\v 24 ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.
\s5
\p
\v 25 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, <<ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ>> ಎಂದನು.
\v 26 ಆದರೆ ಮೋಶೆ, <<ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?
\v 27 ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು>> ಎಂದನು.
\s5
\v 28 ಅದಕ್ಕೆ ಫರೋಹನು ಅವರಿಗೆ, <<ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ>> ಎಂದನು.
\v 29 ಅದಕ್ಕೆ ಮೋಶೆಯು, <<ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು>> ಎಂದನು.
\s5
\v 30 ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.
\v 31 ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.
\v 32 ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.
\s5
\c 9
\s ದನಕರುಗಳಿಗೆ ಉಂಟಾದ ವ್ಯಾಧಿ
\p
\v 1 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, <ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.
\v 2 ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,
\v 3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.
\v 4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ> ಎಂದು ಹೇಳಬೇಕು>> ಎಂದನು.
\s5
\v 5 ಇದಲ್ಲದೆ ಯೆಹೋವನು, <<ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು>> ಎಂದನು.
\p
\v 6 ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
\v 7 ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
\s ಹುಣ್ಣುಬೊಕ್ಕೆಗಳ ಬಾಧೆ
\s5
\p
\v 8 ಯೆಹೋವನು ಮೋಶೆ ಮತ್ತು ಆರೋನರಿಗೆ, <<ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
\v 9 ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು>> ಎಂದು ಹೇಳಿದನು.
\v 10 ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.
\s5
\v 11 ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
\v 12 ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
\s ಆನೆಕಲ್ಲಿನ ಮಳೆಯಿಂದ ಉಂಟಾದ ಬಾಧೆ
\s5
\p
\v 13 ತರುವಾಯ ಯೆಹೋವನು ಮೋಶೆಗೆ, <<ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, <ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
\v 14 ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.
\s5
\v 15 ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
\v 16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
\v 17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
\s5
\v 18 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
\v 19 ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು> >> ಎಂದು ಹೇಳಿದನು.
\s5
\v 20 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.
\v 21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.
\s5
\v 22 ಯೆಹೋವನು ಮೋಶೆಗೆ, <<ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು>> ಎಂದು ಹೇಳಿದನು.
\v 23 ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
\v 24 ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.
\s5
\v 25 ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.
\v 26 ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
\s5
\v 27 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, <<ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.
\v 28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ>> ಎಂದನು.
\s5
\v 29 ಅದಕ್ಕೆ ಮೋಶೆ, <<ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.
\v 30 ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು>> ಎಂದನು.
\s5
\p
\v 31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.
\v 32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.
\v 33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.
\s5
\v 34 ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.
\v 35 ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.
\s5
\c 10
\s ಮಿಡತೆಗಳಿಂದ ಉಂಟಾದ ಬಾಧೆ
\p
\v 1 ತರುವಾಯ ಯೆಹೋವನು ಮೋಶೆಗೆ, <<ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.
\v 2 ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ>> ಎಂದನು.
\s5
\p
\v 3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, <<ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, <ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
\v 4 ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.
\s5
\v 5 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.
\v 6 ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ> >> ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
\s5
\p
\v 7 ಆಗ ಫರೋಹನ ಪರಿವಾರದವರು ಅವನಿಗೆ, <<ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?>> ಎಂದು ಹೇಳಿದರು.
\v 8 ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, <<ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?>> ಎಂದು ಕೇಳಿದನು.
\s5
\v 9 ಮೋಶೆ ಅವನಿಗೆ, <<ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ>> ಎಂದು ಉತ್ತರಕೊಟ್ಟನು.
\v 10 ಅದಕ್ಕೆ ಫರೋಹನು, <<ನಾನು ನಿಮ್ಮನ್ನು ಮತ್ತು ನಿಮ್ಮ ಮಕ್ಕಳನ್ನು ಹೋಗುವುದಕ್ಕೆ ಅಪ್ಪಣೆ ಕೊಡುವುದಿಲ್ಲ; ಕಳುಹಿಸಿಕೊಟ್ಟರೆ, ಯೆಹೋವನು ನಿಮ್ಮ ಸಂಗಡವಿರುವನು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು.
\v 11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ>> ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.
\s5
\p
\v 12 ಆಗ ಯೆಹೋವನು ಮೋಶೆಗೆ, <<ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ>> ಎಂದು ಹೇಳಿದನು.
\v 13 ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.
\s5
\v 14 ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.
\v 15 ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
\s5
\p
\v 16 ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ, <<ನಾನು ನಿಮ್ಮ ದೇವರಾದ ಯೆಹೋವನಿಗೂ, ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ.
\v 17 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು>> ಎಂದನು.
\v 18 ಮೋಶೆ ಫರೋಹನ ಬಳಿಯಿಂದ ಹೊರಟು ಯೆಹೋವನನ್ನು ಬೇಡಿಕೊಂಡನು.
\s5
\v 19 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.
\v 20 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.
\s ಮೂರು ದಿನ ಕಾರ್ಗತ್ತಲೆಯುಂಟಾದದ್ದು
\s5
\p
\v 21 ತರುವಾಯ ಯೆಹೋವನು ಮೋಶೆಗೆ, <<ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು>> ಎಂದು ಹೇಳಿದನು.
\v 22 ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.
\v 23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.
\s5
\v 24 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, <<ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು>> ಎಂದನು.
\v 25 ಅದಕ್ಕೆ ಮೋಶೆಯು, <<ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು.
\v 26 ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು>> ಎಂದನು.
\s5
\v 27 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
\v 28 ಆಗ ಫರೋಹನು ಮೋಶೆಗೆ, <<ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ>> ಎಂದು ಹೇಳಿದನು.
\v 29 ಅದಕ್ಕೆ ಮೋಶೆಯು, <<ನೀನು ಸರಿಯಾಗಿ ಹೇಳಿದೆ. ಇನ್ನು ಮೇಲೆ ನಾನು ನಿನ್ನ ಮುಖವನ್ನು ಪುನಃ ನೋಡುವುದಿಲ್ಲ>> ಎಂದನು.
\s5
\c 11
\s ಚೊಚ್ಚಲುಗಳ ಸಂಹಾರ
\p
\v 1 ಯೆಹೋವನು ಮೋಶೆಗೆ, <<ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
\v 2 ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು>> ಎಂದನು.
\v 3 ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.
\s5
\p
\v 4 ಆಗ ಮೋಶೆ ಫರೋಹನಿಗೆ, <<ಯೆಹೋವನು ಅಪ್ಪಣೆಮಾಡುವುದೇನೆಂದರೆ, <ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
\v 5 ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
\s5
\v 6 ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.
\v 7 ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ>
\v 8 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, <ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು> ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು>> ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
\s5
\p
\v 9 ಯೆಹೋವನು ಮೋಶೆಗೆ, <<ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ>> ಎಂದು ಹೇಳಿದನು.
\v 10 ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
\s5
\c 12
\s ಮೊದಲ ಪಸ್ಕಹಬ್ಬ
\p
\v 1 ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.
\s5
\v 3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, <ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
\v 4 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
\s5
\v 5 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
\v 6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
\v 7 ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
\v 8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
\s5
\v 9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.
\v 10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
\v 11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು,
\f +
\fr 12:11
\ft ಅಥವಾ ಹೊರಟುಹೋಗಲು ಸಿದ್ಧರಾಗುವುದು.
\f* ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ
\f +
\fr 12:11
\ft ಪಸ್ಕಹಬ್ಬ ಅಂದರೆ ಸಂಹಾರದೂತನು ಐಗುಪ್ತ್ಯ ಚೊಚ್ಚಲುಗಳನ್ನು ಸಂಹರಿಸಿದಾಗ ಇಸ್ರಾಯೇಲರನ್ನು ಸಂಹರಿಸದೆ ದಾಟಿಹೋದದ್ದನ್ನು ನೆನಪಿಸಿಕೊಳ್ಳುವುದಕ್ಕಾಗಿ ಆಚರಿಸುವ ಹಬ್ಬ.
\f* ಪಸ್ಕಹಬ್ಬವು.
\s5
\v 12 ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ
\f +
\fr 12:12
\ft ಅಥವಾ ಐಗುಪ್ತದೇಶದ ಸಮಸ್ತ ದೇವತೆಗಳು ಸುಳ್ಳಾದ ದೇವತೆಗಳೆಂದು ನಾನು ಸಾಬೀತುಪಡಿಸುತ್ತೇನೆ.
\f* ನ್ಯಾಯತೀರಿಸುವೆನು. ನಾನೇ ಯೆಹೋವನು.
\v 13 ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.
\v 14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.
\s ಹುಳಿಯಿಲ್ಲದ ರೊಟ್ಟಿಯ ಹಬ್ಬ
\s5
\p
\v 15 << <ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
\v 16 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
\s5
\v 17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
\v 18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
\s5
\v 19 ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.
\v 20 ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು> >> ಎಂದು ಆಜ್ಞಾಪಿಸಿದನು.
\s ಮೊದಲನೆಯ ಪಸ್ಕ ಹಬ್ಬದ ಆಚರಣೆ
\s5
\p
\v 21 ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, <<ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
\v 22 ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
\s5
\v 23 ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.
\s5
\v 24 ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.
\v 25 ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.
\s5
\v 26 ಮುಂದೆ ನಿಮ್ಮ ಮಕ್ಕಳು, <ನೀವು ನಡೆಸುವ ಈ ಆಚರಣೆ ಏನು?> ಎಂದು ನಿಮ್ಮನ್ನು ಕೇಳುವಾಗ,
\v 27 ನೀವು ಅವರಿಗೆ, <ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು> >> ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
\v 28 ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.
\s ಐಗುಪ್ತ್ಯರ ಚೊಚ್ಚಲುಗಳು ಸತ್ತುಹೋದದ್ದು
\s5
\p
\v 29 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
\v 30 ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.
\s5
\p
\v 31 ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, <<ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.
\v 32 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ>> ಎಂದನು.
\s ವಿಮೋಚನೆ - ರಾಮ್ಸೇಸ್ ಪಟ್ಟಣದಿಂದ ಸುಕ್ಕೋತಿಗೆ ಪಯಣ
\p
\v 33 ಐಗುಪ್ತರು, <<ನಾವೆಲ್ಲರು ಸಾಯುತ್ತೇವೆ>> ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
\s5
\v 34 ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.
\p
\v 35 ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.
\v 36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
\s5
\v 37 ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
\v 38 ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.
\v 39 ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.
\p
\v 40 ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.
\s5
\v 41 ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
\v 42 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.
\s ಪಸ್ಕಹಬ್ಬವನ್ನು ಆಚರಿಸಬೇಕಾದ ಕ್ರಮ
\s5
\p
\v 43 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, <<ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.
\v 44 ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.
\s5
\v 45 ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.
\v 46 ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
\s5
\v 47 ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.
\v 48 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.
\s5
\v 49 ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು>> ಎಂದನು.
\p
\v 50 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
\v 51 ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.
\s5
\c 13
\s ಚೊಚ್ಚಲುಗಳ ಪ್ರತಿಷ್ಠೆ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 2 <<ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ>> ಎಂದು ಹೇಳಿದನು.
\s ಹುಳಿಯಿಲ್ಲದ ರೊಟ್ಟಿಯ ಹಬ್ಬ
\s5
\p
\v 3 ಮೋಶೆಯು ಇಸ್ರಾಯೇಲರಿಗೆ, <<ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
\v 4 ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
\v 5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು
\f +
\fr 13:5
\ft ಬಹಳಷ್ಟು ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
\s5
\v 6 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
\v 7 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
\s5
\v 8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
\v 9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
\v 10 ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
\s ಚೊಚ್ಚಲುಗಳ ಸಮರ್ಪಣೆ
\s5
\p
\v 11 <<ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
\v 12 ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
\v 13
\f +
\fr 13:13
\ft ಕುರಿಮರಿಯ ಯಜ್ಞ ಸಮರ್ಪಿಸಲು ಯೋಗ್ಯವಾದದ್ದು ಆದರೆ ಕತ್ತೆಯನ್ನು ಯಜ್ಞವಾಗಿ ಅರ್ಪಿಸುವುದು ಯೋಗ್ಯವಲ್ಲ.
\f* ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
\s5
\v 14 ಮುಂದೆ ನಿಮ್ಮ ಮಕ್ಕಳು, <ಇದರ ಅರ್ಥ ಏನು?> ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, <ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
\v 15 ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ> >> ಎಂದು ಹೇಳಬೇಕು.
\v 16 ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
\s ಮೇಘಸ್ತಂಭ ಮತ್ತು ಅಗ್ನಿಸ್ತಂಭ
\s5
\p
\v 17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, <<ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ>> ಎಂದು ಹೇಳಿದನು.
\v 18 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು
\f +
\fr 13:18
\ft ಅಥವಾ ಇಸ್ರಾಯೇಲರು ಕುಲ ಕುಲವಾಗಿ ಹೊರಟುಹೋದರು.
\f* ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
\s5
\v 19 ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, <<ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು>> ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
\v 20 ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
\p
\v 21 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
\v 22 ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
\s5
\c 14
\s ಕೆಂಪು ಸಮುದ್ರವನ್ನು ದಾಟಿಹೋದದ್ದು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ
\v 2 <<ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
\v 3 ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, <ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ> ಎಂದು ಅಂದುಕೊಳ್ಳುವನು.
\s5
\v 4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. <ನಾನೇ ಯೆಹೋವನು> ಎಂದು ಐಗುಪ್ತ್ಯರಿಗೆ ತಿಳಿದು ಬರುವುದು>> ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
\p
\v 5 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, <<ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ>> ಎಂದುಕೊಂಡರು.
\s5
\v 6 ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
\v 7 ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
\v 8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
\v 9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
\s5
\p
\v 10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
\v 11 ಅವರು ಮೋಶೆಗೆ, <<ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
\v 12 ನಾವು ಐಗುಪ್ತ ದೇಶದಲ್ಲಿರುವಾಗಲೇ, <ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು> ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ>> ಎಂದು ಹೇಳಿದರು.
\s5
\p
\v 13 ಆದರೆ ಮೋಶೆ ಆ ಜನರಿಗೆ, <<ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
\v 14 ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ>> ಎಂದು ಹೇಳಿದನು.
\s5
\v 15 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.
\v 16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
\v 17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
\v 18 ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು>> ಎಂದನು.
\s5
\p
\v 19 ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
\v 20 ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
\s5
\v 21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
\v 22 ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
\s5
\p
\v 23 ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
\v 24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
\v 25 ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, <<ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ>> ಎಂದು ಹೇಳಿಕೊಂಡರು.
\s ಹಿಂದಟ್ಟಿದ ಐಗುಪ್ತ್ಯರು ಮುಳುಗಿಹೋದದ್ದು
\s5
\p
\v 26 ಅಷ್ಟರಲ್ಲಿ ಯೆಹೋವನು ಮೋಶೆಗೆ, <<ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು>> ಎಂದು ಹೇಳಿದನು.
\v 27 ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
\v 28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
\s5
\v 29 ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
\v 30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
\v 31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
\s5
\c 15
\s ಜಯಗೀತೆ
\p
\v 1 ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು:
\q <<ಯೆಹೋವನಿಗೆ ಸ್ತೋತ್ರ ಗಾನಮಾಡೋಣ;
\q2 ಆತನು ಮಹಾಜಯಶಾಲಿಯಾದವನು.
\q3 ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
\s5
\q
\v 2 ನನ್ನ ಬಲವೂ, ಕೀರ್ತನೆಯೂ ಯಾಹುವೇ.
\q2 ಆತನಿಂದ ನನಗೆ ರಕ್ಷಣೆ ಉಂಟಾಯಿತು.
\q1 ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ,
\q2 ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
\q
\v 3 ಯೆಹೋವನು ಯುದ್ಧವೀರನು;
\q2 ಯೆಹೋವ ಎಂಬುದು ಆತನ ನಾಮವಾಗಿದೆ.
\s5
\q
\v 4 ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು.
\q2 ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.
\q
\v 5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು.
\q2 ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.
\s5
\q
\v 6 ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ.
\q2 ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.
\q
\v 7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ.
\q2 ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.
\q
\v 8 ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು;
\q2 ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು;
\q3 ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.
\s5
\q
\v 9 ಶತ್ರುವು, <ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು;
\q2 ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು.
\q3 ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು> ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
\q
\v 10 ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು;
\q2 ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.
\q
\v 11 ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು?
\q2 ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು
\q3 ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?
\s5
\q
\v 12 ನೀನು ನಿನ್ನ ಬಲಗೈಯನ್ನು ಚಾಚಿದಾಗ,
\q2 ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ.
\q
\v 13 ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ.
\q2 ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.
\s5
\q
\v 14 ಜನಾಂಗಗಳು ಇದನ್ನು ಕೇಳಿ ನಡುಗುವರು.
\q2 ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.
\q
\v 15 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು;
\q2 ಮೋವಾಬ್ಯರ ಸೈನಿಕರು ನಡುಗುವರು;
\q3 ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.
\s5
\q
\v 16 ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು.
\q2 ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
\q1 ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು
\q2 ದಾಟಿ ಹೋಗಿ ದೇಶವನ್ನು ಸೇರುವರು.
\s5
\q
\v 17 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ,
\q2 ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ
\q3 ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.
\q
\v 18 ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.>>
\s5
\p
\v 19 ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
\v 20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.
\v 21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು:
\q1 <<ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ.
\q2 ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.>>
\s ಕಹಿನೀರು ಸಿಹಿಯಾದದ್ದು
\s5
\p
\v 22 ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.
\v 23 ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ
\f +
\fr 15:23
\ft ಮಾರಾ ಅಂದರೆ ಕಹಿ.
\f* ಮಾರಾ ಎಂದು ಹೆಸರಾಯಿತು.
\s5
\v 24 ಜನರು ಮೋಶೆಗೆ, <<ನಾವೇನು ಕುಡಿಯಬೇಕು?>> ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.
\v 25 ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.
\v 26 ಯೆಹೋವನು ಅವರಿಗೆ, <<ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ>> ಎಂದನು.
\s5
\p
\v 27 ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.
\s5
\c 16
\s ದೇವರು ಲಾವಕ್ಕಿ ಮತ್ತು ಮನ್ನವನ್ನು ಕೊಟ್ಟದ್ದು
\p
\v 1 ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
\v 2 ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
\v 3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, <<ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು>> ಎಂದರು.
\s5
\v 4 ಆಗ ಯೆಹೋವನು ಮೋಶೆಗೆ, <<ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.
\v 5
\f +
\fr 16:5
\ft ಅಥವಾ ಶುಕ್ರವಾರ.
\f* ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು>> ಎಂದು ಹೇಳಿದನು.
\s5
\p
\v 6 ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, <<ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
\v 7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?>> ಎಂದು ಹೇಳಿದರು.
\v 8 ಆಗ ಮೋಶೆ, <<ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ>> ಎಂದನು.
\s5
\p
\v 9 ಮೋಶೆಯು ಆರೋನನಿಗೆ, <<ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, <ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು> >> ಎಂದು ಹೇಳಿದನು.
\v 10 ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
\p
\v 11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 12 <<ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, <ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು> >> ಎಂಬುದೇ.
\s5
\p
\v 13 ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
\v 14 ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
\v 15 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, <<ಇದೇನಿರಬಹುದು?>> ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, <<ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
\s5
\v 16
\f +
\fr 16:16
\ft 16:36 ನೋಡಿರಿ.
\f* ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ>> ಎಂದು ಹೇಳಿದನು.
\v 17 ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.
\v 18 ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.
\s5
\p
\v 19 ಅದಲ್ಲದೆ ಮೋಶೆ ಅವರಿಗೆ, <<ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು>> ಎಂದು ಹೇಳಿದನು.
\v 20 ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
\v 21 ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.
\s5
\p
\v 22 ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
\v 23 ಅದಕ್ಕೆ ಅವನು, <<ಇದು ಯೆಹೋವನು ಹೇಳಿದ ಮಾತು, <ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ> >> ಎಂದನು.
\s5
\v 24 ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
\v 25 ಆಗ ಮೋಶೆ ಅವರಿಗೆ, <<ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
\s5
\v 26 ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ>> ಎಂದು ಹೇಳಿದನು.
\v 27 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
\s5
\v 28 ಆಗ ಯೆಹೋವನು ಮೋಶೆಗೆ, <<ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?
\v 29 ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು>> ಎಂದು ಹೇಳಿದನು.
\v 30 ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.
\s5
\p
\v 31 ಇಸ್ರಾಯೇಲರು ಆ ಆಹಾರಕ್ಕೆ <<ಮನ್ನ>> ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
\v 32 ಮೋಶೆಯು ಜನರಿಗೆ, <<ಯೆಹೋವನು ಆಜ್ಞಾಪಿಸಿದ್ದು ಇದೇ, <ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು> >> ಎಂದು ಹೇಳಿದನು.
\s5
\v 33 ಆದಕಾರಣ ಮೋಶೆಯು ಆರೋನನಿಗೆ, <<ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು>> ಎಂದು ಹೇಳಿದನು.
\v 34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು
\f +
\fr 16:34
\ft ಇದು ಮಂಜೂಷ ಪೆಟ್ಟಿಗೆ. 25:10-12 ಅನ್ನು ನೋಡಿರಿ.
\f* ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.
\p
\v 35 ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
\v 36
\f +
\fr 16:36
\ft 23 ಲೀಟರುಗಳು.
\f* ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.
\s5
\c 17
\s ದೇವರು ಬಂಡೆಯೊಳಗಿಂದ ನೀರನ್ನು ಬರಮಾಡಿದ್ದು
\p
\v 1 ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ <<ಸೀನ್>> ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
\p
\v 2 ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, <<ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು>> ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, <<ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?>> ಎಂದನು.
\p
\v 3 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, <<ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?>> ಎಂದರು.
\s5
\p
\v 4 ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, <<ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ>> ಎಂದನು.
\v 5 ಅದಕ್ಕೆ ಯೆಹೋವನು ಮೋಶೆಗೆ, <<ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
\v 6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು>> ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
\v 7 ಇಸ್ರಾಯೇಲರು, <<ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?>> ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ
\f +
\fr 17:7
\ft ಮಸ್ಸಾ ಅಂದರೆ ಪರೀಕ್ಷೆ.
\f* ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ
\f +
\fr 17:7
\ft ಮೆರೀಬಾ ಅಂದರೆ ತರ್ಕ ಅಥವಾ ವಾಗ್ವಾದ.
\f* ಮೆರೀಬಾ ಎಂತಲೂ ಹೆಸರಿಟ್ಟನು.
\s ಅಮಾಲೇಕ್ಯರನ್ನು ಸೋಲಿಸಿದ್ದು
\s5
\p
\v 8 ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
\v 9 ಆಗ ಮೋಶೆಯು
\f +
\fr 17:9
\ft ಯೆಹೋಶುವನು ಇಸ್ರಾಯೇಲರ ಸೇನಾಧಿಪತಿ. 33:11 ಅನ್ನು ನೋಡಿರಿ.
\f* ಯೆಹೋಶುವನಿಗೆ, <<ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು>> ಎಂದು ಹೇಳಿದನು.
\v 10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
\s5
\v 11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
\v 12 ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
\v 13 ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
\s5
\p
\v 14 ಆಗ ಯೆಹೋವನು ಮೋಶೆಗೆ, <<ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು>> ಎಂದು ಹೇಳಿದನು.
\p
\v 15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ <<
\f +
\fr 17:15
\ft ಯೆಹೋವನು ನನ್ನ ಜಯಧ್ವಜ.
\f* ಯೆಹೋವ ನಿಸ್ಸಿ>> ಎಂದು ಹೆಸರಿಟ್ಟನು.
\v 16 ಮೋಶೆಯು, <<ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು>> ಎಂದನು.
\s5
\c 18
\s ಇತ್ರೋವನು ಮೋಶೆಯನ್ನು ಭೇಟಿಮಾಡಿದ್ದು
\p
\v 1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.
\v 2 ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು.
\v 3 ಆ ಪುತ್ರರಲ್ಲಿ ಒಬ್ಬನಿಗೆ <<
\f +
\fr 18:3
\ft ಗೇರ್ಷೋಮ್ ಎಂದರೆ ಅನ್ಯದೇಶದವನು.
\f* ಗೇರ್ಷೋಮ್>> ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, <<ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ>> ಎಂದು ಹೇಳಿದನು.
\v 4 ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, <<ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು>> ಎಂದು ಹೇಳಿ, ಆ ಮಗನಿಗೆ <<
\f +
\fr 18:4
\ft ನನ್ನ ದೇವರು ಸಹಾಯಕನು.
\f* ಎಲೀಯೆಜೆರ್>> ಎಂದು ಹೆಸರಿಟ್ಟನು.
\s5
\v 5 ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.
\v 6 ಅವನು ಮೋಶೆಗೆ, <<ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ>> ಎಂದು ಹೇಳಿ ಕಳುಹಿಸಿದನು.
\s5
\v 7 ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
\p
\v 8 ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.
\s5
\v 9 ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
\v 10 ಇತ್ರೋವನು, <<ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.
\v 11 ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ>> ಅಂದನು.
\s5
\v 12 ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.
\s ನ್ಯಾಯಾಧಿಪತಿಗಳನ್ನು ನೇಮಿಸಿದ್ದು
\r (ಧರ್ಮೋ. 1:9-18)
\s5
\p
\v 13 ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
\v 14 ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, <<ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?>> ಎಂದು ಕೇಳಿದನು.
\s5
\v 15 ಮೋಶೆ ತನ್ನ ಮಾವನಿಗೆ, <<ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.
\v 16 ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ>> ಎಂದು ಹೇಳಿದನು.
\s5
\p
\v 17 ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, <<ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.
\v 18 ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.
\v 19 ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.
\v 20 ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.
\s5
\v 21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
\v 22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
\v 23 ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು>> ಎಂದು ಹೇಳಿದನು.
\s5
\p
\v 24 ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು.
\v 25 ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
\v 26 ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
\v 27 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.
\s5
\c 19
\s ಇಸ್ರಾಯೇಲರು ಸೀನಾಯಿ ಬೆಟ್ಟಕ್ಕೆ ಬಂದದ್ದು
\p
\v 1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
\v 2 ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
\s5
\p
\v 3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, <<ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
\v 4 <ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
\v 5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
\v 6 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ> ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ>> ಅಂದನು.
\s5
\p
\v 7 ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
\v 8 ಜನರೆಲ್ಲರೂ ಒಗ್ಗಟ್ಟಾಗಿ, <<ಯೆಹೋವನು ಹೇಳಿದಂತೆಯೇ ಮಾಡುವೆವು>> ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
\p
\v 9 ಯೆಹೋವನು ಮೋಶೆಗೆ, <<ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ>> ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
\s5
\v 10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
\v 11 ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
\s5
\v 12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, <ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.>
\v 13 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು>> ಎಂದು ಹೇಳು ಎಂದನು.
\s5
\v 14 ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
\v 15 ಆಗ ಮೋಶೆ ಜನರಿಗೆ, <<ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು>> ಎಂದು ಹೇಳಿದನು.
\s5
\v 16 ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
\v 17 ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
\v 18 ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ
\f +
\fr 19:18
\ft ಜನರೆಲ್ಲರು ಬಹಳವಾಗಿ ನಡುಗಿದರು.
\f* ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
\s5
\p
\v 19 ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
\v 20 ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
\v 21 ಆಗ ಯೆಹೋವನು ಮೋಶೆಗೆ, <<ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
\v 22 ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು>> ಎಂದು ಹೇಳಿದನು.
\s5
\v 23 ಅದಕ್ಕೆ ಮೋಶೆ ಯೆಹೋವನಿಗೆ, <<ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ <ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು> >> ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
\v 24 ಯೆಹೋವನು ಮೋಶೆಗೆ, <<ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು>> ಎಂದು ಹೇಳಿದನು.
\v 25 ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.
\s5
\c 20
\s ದಶಾಜ್ಞೆಗಳು
\r (ಧರ್ಮೋ. 5:1-21)
\p
\v 1 ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
\v 2 <<ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ <ನಾನೇ ನಿನ್ನ ದೇವರು>
\v 3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.
\s5
\p
\v 4 <<ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
\v 5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
\v 6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
\s5
\v 7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
\s5
\p
\v 8 <<ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
\v 9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
\v 10 ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
\v 11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
\s5
\p
\v 12 <<ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
\p
\v 13 <<ಕೊಲೆ ಮಾಡಬಾರದು.
\p
\v 14 <<ವ್ಯಭಿಚಾರಮಾಡಬಾರದು.
\s5
\p
\v 15 <<ಕದಿಯಬಾರದು.
\p
\v 16 <<ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
\p
\v 17 <<ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.>>
\s ಜನರು ಭಯಪಟ್ಟಿದ್ದು
\s5
\p
\v 18 ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
\v 19 ಅವರು ಮೋಶೆಗೆ, <<ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ>> ಎಂದು ಹೇಳಿದರು.
\v 20 ಅದಕ್ಕೆ ಮೋಶೆಯು ಜನರಿಗೆ, <<ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ>> ಎಂದನು.
\v 21 ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
\s ಯಜ್ಞವೇದಿಯ ಬಗ್ಗೆ ನಿಯಮಗಳು
\s5
\p
\v 22 ಯೆಹೋವನು ಮೋಶೆಗೆ ಹೀಗೆಂದನು, <<ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; <ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
\v 23 ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
\s5
\v 24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
\v 25 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
\v 26 ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು> >> ಎಂದು ಆಜ್ಞಾಪಿಸಿದನು.
\s5
\c 21
\s ದಾಸತ್ವದ ಕುರಿತಾದ ನ್ಯಾಯವಿಧಿಗಳು
\r (ಧರ್ಮೋ. 15:12-18)
\p
\v 1 <<ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
\s5
\p
\v 2 << <ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
\v 3 ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
\v 4 ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.> >>
\s5
\p
\v 5 ಆದರೆ ದಾಸನು, <<ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ>> ಎಂದು ಸ್ಪಷ್ಟವಾಗಿ ಹೇಳಿದರೆ,
\v 6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
\s5
\p
\v 7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
\v 8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
\s5
\p
\v 9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.
\v 10 ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
\v 11 ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
\s ಹಿಂಸಾಚಾರಗಳ ಕುರಿತಾದ ನ್ಯಾಯವಿಧಿಗಳು
\s5
\p
\v 12 ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
\v 13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
\v 14 ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
\s5
\p
\v 15 ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
\p
\v 16 ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
\p
\v 17 ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
\s5
\p
\v 18 ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
\p
\v 19 ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
\s5
\v 20 ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
\p
\v 21 ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
\s5
\p
\v 22 ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
\v 23 ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
\v 24 ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
\v 25 ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
\s5
\p
\v 26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
\v 27 ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.
\s ಅಸ್ತಿಪಾಸ್ತಿಗಳ ಕುರಿತಾದ ನ್ಯಾಯವಿಧಿಗಳು
\s5
\p
\v 28 ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
\v 29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
\p
\v 30 ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
\s5
\v 31 ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
\v 32 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ
\f +
\fr 21:32
\ft 342 ಗ್ರಾಂ ಬೆಳ್ಳಿ.
\f* ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
\s5
\p
\v 33 ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
\v 34 ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
\s5
\p
\v 35 ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
\v 36 ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
\s5
\c 22
\s ಅಸ್ತಿಪಾಸ್ತಿಯನ್ನು ಕಾಪಾಡಿಕೊಳ್ಳುವುದರ ಕುರಿತು
\p
\v 1 ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.
\v 2 ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.
\v 3 ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು.
\p ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
\v 4 ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.
\s5
\p
\v 5 ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.
\s5
\p
\v 6 ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
\s5
\p
\v 7 ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.
\v 8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ
\f +
\fr 22:8
\ft ಅಥವಾ ನ್ಯಾಯಾಧಿಪತಿಯ ಬಳಿಗೆ ಬರಬೇಕು.
\f* ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
\v 9 ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು
\f +
\fr 22:9
\ft ಅಥವಾ ನ್ಯಾಯಾಧಿಪತಿಯ ಬಳಿಗೆ ಬರಬೇಕು.
\f* ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
\s5
\p
\v 10 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
\v 11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
\v 12 ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.
\v 13 ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
\s5
\p
\v 14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.
\v 15 ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
\s ಸಮುದಾಯದಲ್ಲಿನ ನೈತಿಕ ನಿಯಮಗಳು
\s5
\p
\v 16 ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.
\v 17 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
\s5
\p
\v 18 ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
\p
\v 19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.
\s5
\p
\v 20 ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
\v 21 ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
\s5
\p
\v 22 ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.
\v 23 ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
\v 24 ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
\s5
\p
\v 25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
\v 26 ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
\v 27 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
\s5
\p
\v 28 ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
\s5
\p
\v 29 ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
\v 30 ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
\v 31 ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
\s5
\c 23
\s ನ್ಯಾಯ ಮತ್ತು ಕರುಣೆಯ ಕುರಿತು ನಿಯಮಗಳು
\p
\v 1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
\v 2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
\v 3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
\s5
\p
\v 4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
\v 5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
\s5
\p
\v 6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
\v 7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
\v 8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು
\f +
\fr 23:8
\ft ಅಧಿಕಾರಿಗಳು.
\f* ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
\p
\v 9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
\s ಸಬ್ಬತ್ ದಿನ ಮತ್ತು ಸಬ್ಬತ್ ವರ್ಷದ ಕುರಿತಾದ ನಿಯಮಗಳು
\s5
\p
\v 10 ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
\v 11 ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
\s5
\p
\v 12 ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
\p
\v 13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
\s ವಾರ್ಷಿಕ ಹಬ್ಬಗಳು
\r (ವಿಮೋ. 34:18-26; ಧರ್ಮೋ. 16:1-17)
\s5
\p
\v 14 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
\v 15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
\s5
\p
\v 16 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
\v 17 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
\s5
\p
\v 18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
\v 19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
\s ಕಾನಾನ್ ದೇಶವನ್ನು ಗೆಲ್ಲುವುದರ ವಾಗ್ದಾನಗಳು
\s5
\p
\v 20 ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
\v 21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು.
\f +
\fr 23:21
\ft ನಾನು ನನ್ನ ಪೂರ್ಣ ಅಧಿಕಾರವನ್ನು ಆತನಿಗೆ ಕೊಡುವೆನು.
\f* ನನ್ನ ನಾಮಮಹಿಮೆ ಆತನಲ್ಲಿ ಇರುವುದು.
\v 22 ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
\s5
\v 23 ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
\p
\v 24 ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
\v 25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
\s5
\v 26 ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
\p
\v 27 ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
\v 28 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
\v 29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
\s5
\v 30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
\v 31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
\v 32 ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
\v 33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು.
\f +
\fr 23:33
\ft ಅವರು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.
\f* ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
\s5
\c 24
\s ಒಡಂಬಡಿಕೆಯ ರಕ್ತ
\p
\v 1 ಯೆಹೋವನು ಮೋಶೆಗೆ, <<ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
\v 2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು>> ಎಂದು ಹೇಳಿದನು.
\s5
\p
\v 3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, <<ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು>> ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
\v 4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
\s5
\v 5 ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
\v 6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
\s5
\v 7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, <<ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು>> ಅಂದರು.
\v 8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, <<ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ>> ಅಂದನು.
\s ಬೆಟ್ಟದಲ್ಲಿ ದೇವರೊಂದಿಗೆ
\s5
\p
\v 9 ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
\v 10 ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
\v 11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
\s ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು
\s5
\p
\v 12 ಯೆಹೋವನು ಮೋಶೆಗೆ, <<ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ>> ಎಂದು ಹೇಳಿದನು.
\v 13 ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
\s5
\v 14 ಇದಕ್ಕೆ ಮೊದಲು ಅವನು ಹಿರಿಯರಿಗೆ, <<ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ>> ಎಂದು ಹೇಳಿದನು.
\p
\v 15 ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.
\s5
\v 16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
\v 17 ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
\v 18 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
\s5
\c 25
\s ದೇವದರ್ಶನದ ಗುಡಾರವೂ ಅದರ ಕಾಣಿಕೆಗಳೂ
\p
\v 1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 2 <<ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
\s5
\v 3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,
\v 4 ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,
\v 5 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು,
\f +
\fr 25:5
\ft ಕೆಲವು ಅನುವಾದಗಳಲ್ಲಿ ಕಡಲ ಹಂದಿ.
\f* ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,
\v 6 ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,
\v 7 ಮಹಾಯಾಜಕನ
\f +
\fr 25:7
\ft ಏಫೊದ್.
\f* ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.
\s5
\p
\v 8 <<ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.
\v 9 ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.
\s ಒಡಂಬಡಿಕೆಯ ಪೆಟ್ಟಿಗೆ
\s5
\p
\v 10 <<ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.
\v 11 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
\s5
\v 12 ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.
\v 13 ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
\v 14 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
\s5
\v 15 ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.
\v 16 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
\v 17 ಚೊಕ್ಕ ಬಂಗಾರದ
\f +
\fr 25:17
\ft ಮುಚ್ಚಳ.
\f* ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
\v 18 ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
\s5
\v 19 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.
\v 20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
\v 21 ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು
\s5
\v 22 ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
\s ರೊಟ್ಟಿಯ ಮೇಜು
\s5
\p
\v 23 <<ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
\v 24 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
\s5
\v 25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.
\v 26 ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
\v 27 ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
\s5
\v 28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.
\v 29 ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
\v 30 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.
\s ದೀಪ ಸ್ತಂಭ
\s5
\p
\v 31 <<ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.
\v 32 ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.
\s5
\v 33 ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.
\v 34 ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.
\s5
\v 35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.
\v 36 ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
\s5
\v 37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.
\v 38 ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
\v 39 ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು
\f +
\fr 25:39
\ft 35 ಕಿಲೋಗ್ರಾಂ.
\f* ತಲಾಂತು ಚೊಕ್ಕ ಬಂಗಾರವಾಗಿರಬೇಕು.
\v 40 ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.>>
\s5
\c 26
\s ದೇವದರ್ಶನದ ಗುಡಾರ
\r (36:8-38)
\p
\v 1 ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
\v 2 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
\v 3 ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
\s5
\v 4 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
\v 5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
\v 6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
\s5
\p
\v 7 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
\v 8 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
\v 9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
\s5
\v 10 ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
\v 11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
\s5
\v 12 ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
\v 13 ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
\v 14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು
\f +
\fr 26:14
\ft ಕೆಲವು ಅನುವಾದಗಳಲ್ಲಿ ಕಡಲು ಹಂದಿ.
\f* ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
\s ದೇವದರ್ಶನದ ಗುಡಾರದ ನಿರ್ಮಾಣ
\s5
\p
\v 15 ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
\v 16 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
\v 17 ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
\v 18 ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
\s5
\v 19 ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
\v 20 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
\v 21 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
\s5
\v 22 ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
\v 23 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
\v 24 ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
\v 25 ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
\s5
\v 26 ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
\v 27 ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
\v 28 ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
\s5
\v 29 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
\v 30 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
\s5
\p
\v 31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
\v 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
\v 33 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
\s5
\v 34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
\v 35 ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
\s5
\v 36 ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
\v 37 ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
\s5
\c 27
\s ಯಜ್ಞವೇದಿ
\r (ವಿಮೋ. 38:1-7)
\p
\v 1 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
\v 2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
\s5
\v 3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
\v 4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
\s5
\v 5 ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
\v 6 ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
\s5
\v 7 ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
\v 8 ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.
\s ಗುಡಾರದ ಅಂಗಳ
\r (ವಿಮೋ. 38:9-20)
\s5
\p
\v 9 ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
\v 10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
\s5
\v 11 ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
\v 12 ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
\v 13 ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
\s5
\v 14 ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
\v 15 ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು
\v 16 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.
\s5
\v 17 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
\v 18 ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.
\v 19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
\s ದೀಪಸ್ತಂಭದ ಎಣ್ಣೆ
\r (ಯಾಜ. 24:1-4)
\s5
\p
\v 20 ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
\v 21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
\s5
\c 28
\s ಯಾಜಕರ ದೀಕ್ಷಾವಸ್ತ್ರಗಳು
\r (ವಿಮೋ. 39:1-7)
\p
\v 1 ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
\v 2 ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.
\v 3 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.
\s5
\v 4 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ
\f +
\fr 28:4
\fq ಎದೆಯ ಪದಕದ ಚೀಲ
\ft ಎದೆಯ ಕವಚ.
\f* , ಏಫೋದ್,
\f +
\fr 28:4
\fq ಏಫೋದ್,
\ft ಮಹಾಯಾಜಕನ ಕವಚ
\f* ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
\v 5 ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು.
\s ಏಫೋದ್
\s5
\p
\v 6 ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.
\v 7 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.
\v 8 ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
\v 9 ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
\s5
\v 10 ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.
\v 11 ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.
\v 12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
\s5
\v 13 ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.
\v 14 ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.
\s ಎದೆಯ ಪದಕದ ಕವಚ
\r (ವಿಮೋ. 39:8-21)
\s5
\p
\v 15 ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.
\v 16 ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.
\s5
\v 17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.
\v 18 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.
\v 19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು.
\v 20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.
\s5
\v 21 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
\p
\v 22 ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.
\v 23 ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.
\v 24 ಆ ಎರಡು ಸರಪಣಿಗಳನ್ನು ಎದೆಯ ಪದಕದ ಕವಚದ ಮೂಲೆಗಳಲ್ಲಿರುವ ಕೊಂಡಿಗಳಿಗೆ ಸಿಕ್ಕಿಸಬೇಕು.
\s5
\v 25 ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.
\v 26 ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.
\s5
\v 27 ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
\v 28 ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.
\s5
\v 29 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.
\v 30 ದೈವನಿರ್ಣಯವನ್ನು ತಿಳಿಸುವ
\f +
\fr 28:30
\ft ಅಥವಾ ದೈವನಿರ್ಣಯವನ್ನು ತಿಳಿದುಕೊಳ್ಳಲು ಯಾಜಕರಿಗೆ ಉಪಯುಕ್ತವಾಗಿರುವ ವಸ್ತು.
\f* ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.
\s ಯಾಜಕರ ಇತರ ವಸ್ತ್ರಗಳು
\r (ವಿಮೋ. 39:22-31)
\s5
\p
\v 31 ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.
\v 32 ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.
\s5
\v 33 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.
\v 34 ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.
\v 35 ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.
\s5
\p
\v 36 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ <<ಯೆಹೋವನಿಗೆ ಮೀಸಲು>> ಎಂಬ ಲಿಪಿಯನ್ನು ಕೆತ್ತಿಸಬೇಕು.
\v 37 ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.
\v 38 ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.
\s5
\p
\v 39 ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.
\s5
\v 40 ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
\p
\v 41 ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.
\s5
\p
\v 42 ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.
\v 43 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.
\s5
\c 29
\s ಯಾಜಕರನ್ನು ಪ್ರತಿಷ್ಠಿಸಬೇಕಾದ ಕ್ರಮ
\r (ಯಾಜ. 8:1-26)
\p
\v 1 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.
\v 2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
\s5
\v 3 ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.
\v 4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
\s5
\v 5 ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,
\v 6
\f +
\fr 29:6
\ft 28:36 ನೋಡಿರಿ.
\f* ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,
\v 7 ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.
\s5
\p
\v 8 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ
\v 9 ಆರೋನನಿಗೂ ಅವನ ಮಕ್ಕಳಿಗೂ
\f +
\fr 29:9
\ft ಯಾಜಕತ್ವವು ಸದಾಕಾಲವಿರುವ ಆಜ್ಞೆಯಾಗಿದೆ.
\f* ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
\s5
\p
\v 10 ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.
\v 11 ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.
\s5
\v 12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.
\v 13 ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
\v 14 ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
\s5
\p
\v 15 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
\v 16 ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.
\v 17 ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.
\v 18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
\s5
\v 19 ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
\v 20 ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.
\s5
\v 21 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.
\s5
\p
\v 22 ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,
\v 23 ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,
\s5
\v 24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.
\v 25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
\s5
\p
\v 26 ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.
\v 27 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
\v 28 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.
\s5
\p
\v 29 ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.
\v 30 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.
\s5
\p
\v 31 ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.
\v 32 ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
\v 33 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು
\f +
\fr 29:33
\ft ಅಥವಾ ಪಾಪ ಕ್ಷಮಾಪಣೆಗಾಗಿ.
\f* ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.
\v 34 ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.
\s5
\p
\v 35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
\v 36 ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
\v 37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
\s ಪ್ರತಿನಿತ್ಯವೂ ಮಾಡಬೇಕಾದ ಸರ್ವಾಂಗಹೋಮದ ಕ್ರಮ
\r (ಅರಣ್ಯ. 28:1-8)
\s5
\p
\v 38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
\v 39 ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.
\s5
\v 40
\f +
\fr 29:40
\ft ಸುಮಾರು ಒಂದು ಕಿಲೋಗ್ರಾಂ ಒಲೀವ್ ಎಣ್ಣೆ.
\f* ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
\s5
\v 41 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.
\p
\v 42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.
\s5
\v 43 ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
\v 44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.
\s5
\v 45 ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.
\v 46 ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.
\s5
\c 30
\s ಧೂಪವೇದಿ
\r (ವಿಮೋ. 37:25-28)
\p
\v 1 <<ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
\v 2 ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
\s5
\v 3 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
\v 4 ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
\s5
\v 5 ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
\v 6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
\s5
\p
\v 7 <<ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ
\v 8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
\v 9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
\s5
\v 10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.>>
\s ಗುಡಾರಕ್ಕಾಗಿ ಕೊಡಬೇಕಾದ ಕಾಣಿಕೆ
\s5
\p
\v 11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 12 <<ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
\v 13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು
\f +
\fr 30:13
\ft ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ.
\f* ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
\v 14 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
\s5
\v 15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
\v 16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.>>
\s ತ್ರಾಮದ ತೊಟ್ಟಿಯ
\s5
\p
\v 17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 18 <<ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.
\s5
\v 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
\v 20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
\v 21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.>>
\s ಅಭಿಷೇಕ ತೈಲ
\s5
\p
\v 22 ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,
\v 23 <<ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ
\f +
\fr 30:23
\ft ಸುಮಾರು 6 ಕಿಲೋಗ್ರಾಂ.
\f* ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
\v 24 ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್
\f +
\fr 30:24
\fq ಹೀನ್
\ft ಸುಮಾರು ನಾಲ್ಕು ಲೀಟರು.
\f* ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,
\v 25 ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
\s5
\v 26 ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,
\v 27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,
\v 28 ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.
\s5
\v 29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
\v 30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.>>
\p
\v 31 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, <<ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
\s5
\v 32 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
\v 33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.>>
\s ಪರಿಮಳ ಧೂಪ
\s5
\p
\v 34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, <<ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
\v 35 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
\v 36 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
\s5
\v 37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
\v 38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.>>
\s5
\c 31
\s ಗುಡಾರದ ನಿರ್ಮಾಣಕ್ಕೆ ಕೆಲಸಗಾರರ ಆಯ್ಕೆ
\r (ವಿಮೋ. 35:30—36:1)
\p
\v 1 ಯೆಹೋವನು ಮೋಶೆಗೆ ಹೀಗೆಂದನು,
\v 2 <<ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
\s5
\v 3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
\v 4 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
\v 5 ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
\s5
\v 6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
\v 7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
\v 8 ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,
\v 9 ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
\s5
\v 10 ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,
\v 11 ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.>>
\s ಸಬ್ಬತ್ ದಿನದ ನಿಯಮ
\s5
\p
\v 12 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
\v 13 <<ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
\v 14 ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
\v 15 ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
\s5
\v 16 ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
\v 17 ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?>>
\s5
\p
\v 18 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
\s5
\c 32
\s1 ಬಂಗಾರದ ಹೋರಿಕರು
\r (ಧರ್ಮೋ. 9:6-29)
\p
\v 1 ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, <<ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ>> ಎಂದು ಹೇಳಿದರು.
\v 2 ಅದಕ್ಕೆ ಆರೋನನು ಅವರಿಗೆ, <<ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ>> ಎಂದು ಹೇಳಿದನು.
\s5
\v 3 ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.
\v 4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು <<ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು>> ಎಂದು ಹೇಳಿದರು.
\s5
\v 5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, <<ನಾಳೆ ಯೆಹೋವನಿಗೆ ಹಬ್ಬವಾಗಬೇಕು>> ಎಂದು ಪ್ರಕಟಿಸಿದನು.
\v 6 ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
\s5
\p
\v 7 ಹೀಗಿರಲಾಗಿ ಯೆಹೋವನು ಮೋಶೆಗೆ, <<ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.
\v 8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, <ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ> >> ಎಂದು ಹೇಳಿದನು.
\s5
\p
\v 9 ಅದಲ್ಲದೆ ಯೆಹೋವನು ಮೋಶೆಗೆ, <<ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು
\f +
\fr 32:9
\ft ಅಥವಾ ಕಠಿಣ ಹೃದಯವುಳ್ಳವರು.
\f* ಮೊಂಡುತನವುಳ್ಳ ಜನರಾಗಿದ್ದಾರೆ
\v 10 ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು>> ಎಂದು ಹೇಳಿದನು.
\p
\v 11 ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, <<ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
\s5
\v 12 ಐಗುಪ್ತ್ಯರು ನಿನ್ನ ವಿಷಯದಲ್ಲಿ, <ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?> ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
\v 13 ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, <ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ> >> ಅಂದನು.
\v 14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
\s5
\p
\v 15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.
\v 16 ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.
\s5
\p
\v 17 ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, <<ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ>> ಎಂದು ಮೋಶೆಗೆ ಹೇಳಿದನು.
\v 18 ಅದಕ್ಕವನು,
\q1 <<ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ
\q1 ಸೋತು ಗೋಳಾಡುವವರ ಧ್ವನಿಯೂ ಅಲ್ಲ,
\q1 ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ>> ಅಂದನು.
\s5
\p
\v 19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
\v 20 ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
\s5
\p
\v 21 ಆಗ ಮೋಶೆ ಆರೋನನನ್ನು ಕುರಿತು, <<ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?>> ಎಂದು ವಿಚಾರಿಸಲು,
\v 22 ಆರೋನನು, <<ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
\v 23 ಅವರು ನನ್ನ ಬಳಿಗೆ ಬಂದು, <ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ> ಅಂದರು.
\v 24 ಅದಕ್ಕೆ ನಾನು <ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು> ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು>> ಅಂದನು.
\s5
\p
\v 25 ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
\v 26 ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, <<ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು>> ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
\v 27 ಮೋಶೆ ಅವರಿಗೆ, <<ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, <ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು> >> ಎಂದು ಹೇಳಿದನು.
\s5
\p
\v 28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
\v 29 ಮೋಶೆಯು ಲೇವಿಯರಿಗೆ, <<ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು>> ಎಂದು ಹೇಳಿದನು.
\s ಮೋಶೆಯು ಇಸ್ರಾಯೇಲರಿಗಾಗಿ ಬೇಡಿಕೊಂಡದ್ದು
\s5
\p
\v 30 ಮರುದಿನದಲ್ಲಿ ಮೋಶೆಯು ಜನರಿಗೆ, <<ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ>> ಎಂದು ಹೇಳಿದನು.
\p
\v 31 ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, <<ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
\v 32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ>> ಎಂದು ಪ್ರಾರ್ಥಿಸಿದನು.
\s5
\p
\v 33 ಅದಕ್ಕೆ ಯೆಹೋವನು ಮೋಶೆಗೆ, <<ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.
\v 34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.>>
\v 35 ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.
\s5
\c 33
\s ಸೀನಾಯಿ ಬೆಟ್ಟವನ್ನು ಬಿಟ್ಟುಹೋಗಬೇಕೆಂಬ ಆಜ್ಞೆ
\p
\v 1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, <ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು> ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
\v 2 ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.
\v 3
\f +
\fr 33:3
\ft ಬಹಳಷ್ಟು ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು
\f +
\fr 33:3
\ft ಕಠಿಣ ಹೃದಯವುಳ್ಳವರು.
\f* ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು>> ಅಂದನು.
\s5
\p
\v 4 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
\v 5 ಯೆಹೋವನು ಮೋಶೆಗೆ ಹೀಗೆಂದನು. <<ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, <ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು> >> ಅಂದನು.
\v 6 ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
\s ದೇವದರ್ಶನ ಗುಡಾರ
\s5
\p
\v 7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
\v 8 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
\v 9 ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
\s5
\v 10 ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
\v 11 ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
\s ಮೋಶೆಯ ಪ್ರಾರ್ಥನೆ
\s5
\p
\v 12 ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, << <ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು> ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. <ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ> ನೀನು ನನಗೆ ಹೇಳಿರುವೆಯಲ್ಲಾ.
\v 13 ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ>> ಎಂದು ಅರಿಕೆಮಾಡಿದನು.
\s5
\p
\v 14 ಅದಕ್ಕೆ ಯೆಹೋವನು, <<ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು>> ಅಂದನು.
\v 15 ಮೋಶೆಯು ಆತನಿಗೆ, <<ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
\v 16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು>> ಅಂದನು.
\s5
\p
\v 17 ಯೆಹೋವನು ಮೋಶೆಗೆ, <<ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು>> ಎಂದು ಹೇಳಿದನು.
\v 18 ಅದಕ್ಕೆ ಮೋಶೆಯು, <<ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು>> ಎಂದು ಕೇಳಿದನು.
\s5
\v 19 ಸರ್ವೋತ್ತಮತ್ವವನ್ನು ಅದಕ್ಕೆ ಆತನು, <<ನಾನು ನನ್ನ
\f +
\fr 33:19
\ft ಸರ್ವೋತ್ತಮತ್ವವನ್ನು.
\f* ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು>> ಅಂದನು.
\v 20 ಆದರೆ ಆತನು ಅವನಿಗೆ, <<ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು>> ಎಂದು ಹೇಳಿದನು.
\s5
\v 21 ಮತ್ತು ಯೆಹೋವನು ಅವನಿಗೆ, <<ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
\v 22 ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
\v 23 ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ>> ಎಂದು ಯೆಹೋವನು ಆಜ್ಞಾಪಿಸಿದನು.
\s5
\c 34
\s ಮೋಶೆಯು ಹೊಸ ಕಲ್ಲಿನ ಹಲಗೆಗಳನ್ನು ಮಾಡಿದ್ದು.
\r (ಧರ್ಮೋ. 10:1-5)
\p
\v 1 ಯೆಹೋವನು ಮೋಶೆಗೆ, <<ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
\v 2 ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.
\s5
\v 3 ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು>> ಎಂದು ಹೇಳಿದನು.
\v 4 ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
\s5
\v 5 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
\p
\v 6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; <<ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
\v 7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ>> ಎಂಬುದೇ.
\s5
\p
\v 8 ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
\v 9 <<ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು
\f +
\fr 34:9
\ft ಕಠಿಣ ಹೃದಯವುಳ್ಳವರು.
\f* ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು>> ಎಂದನು.
\s ಒಡಂಬಡಿಕೆಯ ನವೀಕರಣ
\r (ವಿಮೋ. 23:14-19; ಧರ್ಮೋ. 7:1-5; 16:1-17)
\s5
\p
\v 10 ಯೆಹೋವನು ಹೇಳಿದ್ದೇನೆಂದರೆ, <<ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
\v 11 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
\s5
\v 12 ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
\v 13 ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
\v 14 ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
\s5
\v 15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
\v 16 ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
\v 17 ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.
\s5
\p
\v 18 <<ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
\s5
\p
\v 19 <<ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
\v 20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.
\s5
\p
\v 21 <<ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
\p
\v 22 <<ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
\s5
\v 23 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.
\v 24 ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.
\s5
\p
\v 25 <<ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
\v 26 ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.>>
\s5
\p
\v 27 ಯೆಹೋವನು ಮೋಶೆಗೆ, <<ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ>> ಎಂದು ಅಜ್ಞಾಪಿಸಿದನು.
\v 28 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
\s ಪ್ರಕಾಶಮಾನವಾದ ಮೋಶೆಯ ಮುಖ
\s5
\p
\v 29 ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
\v 30 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
\v 31 ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
\s5
\v 32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
\v 33 ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.
\s5
\v 34 ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
\v 35 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
\s5
\c 35
\s ಸಬ್ಬತ್ ದಿನದ ನಿಯಮಗಳು
\p
\v 1 ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, <<ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
\v 2 ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;
\v 3 ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು>> ಹೇಳಿದನು.
\s ದೇವದರ್ಶನ ಗುಡಾರದ ನಿರ್ಮಾಣಕ್ಕೆ ಬೇಕಾದ ವಸ್ತುಗಳು
\r (ವಿಮೋ. 25:1-9)
\s5
\p
\v 4 ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: <<ಯೆಹೋವನು ಆಜ್ಞಾಪಿಸಿದ್ದೇನೆಂದರೆ,
\v 5 ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
\v 6 ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,
\v 7 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,
\v 8 ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
\v 9 ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ.
\s ದೇವದರ್ಶನ ಗುಡಾರದ ನಿರ್ಮಾಣಕ್ಕೆ ಬೇಕಾದ ಉಪಕರಣಗಳು
\r (ವಿಮೋ. 39:32-43)
\s5
\p
\v 10 <<ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
\v 11 ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
\v 12 ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,
\s5
\v 13 ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,
\v 14 ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,
\v 15 ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,
\v 16 ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,
\s5
\v 17 ಅಂಗಳದ ತೆರೆಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ,
\v 18 ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,
\v 19 ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ>> ಅಂದನು.
\s ದೇವದರ್ಶನ ಗುಡಾರದ ನಿರ್ಮಾಣಕ್ಕೆ ಕಾಣಿಕೆಗಳು
\s5
\p
\v 20 ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.
\v 21 ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
\v 22 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
\s5
\v 23 ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.
\v 24 ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
\s5
\v 25 ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
\v 26 ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.
\s5
\v 27 ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,
\v 28 ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
\v 29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
\s ಗುಡಾರದ ಶಿಲ್ಪಿಗಳು
\r (ವಿಮೋ. 31:1-11)
\s5
\p
\v 30 ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, <<ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
\v 31 ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
\v 32 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,
\v 33 ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
\s5
\v 34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.
\v 35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.>>
\s5
\c 36
\p
\v 1 <<ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು>> ಅಂದನು.
\s ಇಸ್ರಾಯೇಲ್ಯರು ಮನಃಪೂರ್ವಕವಾಗಿ ಕಾಣಿಕೆಗಳನ್ನು ಕೊಟ್ಟದ್ದು
\s5
\p
\v 2 ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
\v 3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
\v 4 ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,
\s5
\v 5 ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, <<ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು>> ಹೇಳಿದರು.
\v 6 ಆಗ ಮೋಶೆಯು ಇದನ್ನು ಗಮನಿಸಿ, <<ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು>> ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
\v 7 ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.
\s ದೇವದರ್ಶನ ಗುಡಾರದ ನಿರ್ಮಾಣ
\r (ವಿಮೋ. 26:1-37)
\s5
\p
\v 8 ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
\v 9 ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.
\v 10 ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.
\s5
\v 11 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ
\v 12 ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
\v 13 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.
\s5
\p
\v 14 ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
\v 15 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.
\v 16 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.
\v 17 ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
\s5
\v 18 ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
\v 19 ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
\s5
\p
\v 20 ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.
\v 21 ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
\v 22 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.
\v 23 ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;
\s5
\v 24 ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
\v 25 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
\v 26 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
\s5
\v 27 ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.
\v 28 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.
\s5
\v 29 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
\v 30 ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
\s5
\v 31 ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.
\v 32 ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
\v 33 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
\v 34 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
\s5
\p
\v 35 ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
\v 36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.
\s5
\p
\v 37 ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
\v 38 ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.
\s5
\c 37
\s ಆಜ್ಞಾಶಾಸನಗಳ ಪೆಟ್ಟಿಗೆ
\r (ವಿಮೋ. 25:10-22)
\p
\v 1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.
\v 2 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.
\v 3 ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
\s5
\v 4 ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
\v 5 ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.
\p
\v 6 ಇದಲ್ಲದೆ ಚೊಕ್ಕಬಂಗಾರದಿಂದ
\f +
\fr 37:6
\ft ಮುಚ್ಚಳ.
\f* ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.
\s5
\v 7 ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.
\v 8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.
\v 9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
\s ರೊಟ್ಟಿಯ ಮೇಜನ್ನು ಮಾಡಿದ್ದು
\r (ವಿಮೋ. 25:23-30)
\s5
\p
\v 10 ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
\v 11 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.
\v 12 ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.
\v 13 ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.
\s5
\v 14 ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.
\v 15 ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
\v 16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
\s ಬಂಗಾರದ ದೀಪಸ್ತಂಭವನ್ನು ಮಾಡಿದ್ದು
\r (ವಿಮೋ. 25:31-40)
\s5
\p
\v 17 ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.
\v 18 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
\v 19 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.
\s5
\v 20 ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.
\v 21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.
\v 22 ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.
\s5
\v 23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
\v 24 ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ
\f +
\fr 37:24
\ft 35 ಕಿಲೋಗ್ರಾಂ.
\f* ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
\s ಧೂಪವೇದಿಯನ್ನು ಮಾಡಿದ್ದು
\r (ವಿಮೋ. 30:1-5)
\s5
\p
\v 25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
\v 26 ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
\s5
\v 27 ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.
\v 28 ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
\s ಅಭಿಷೇಕ ತೈಲವನ್ನು ಧೂಪದ್ರವ್ಯವನ್ನು ಮಾಡಿದ್ದು
\r (ವಿಮೋ. 30:22-38)
\p
\v 29 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
\s5
\c 38
\s ಯಜ್ಞವೇದಿಯನ್ನು ಕಟ್ಟಿದ್ದು
\r (ವಿಮೋ. 27:1-8)
\p
\v 1 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
\v 2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
\v 3 ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
\s5
\v 4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
\v 5 ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
\s5
\v 6 ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
\v 7 ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.
\s5
\p
\v 8 ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
\s ಗುಡಾರದ ಅಂಗಳವನ್ನು ಮಾಡಿದ್ದು
\r (ವಿಮೋ. 27:9-19)
\s5
\p
\v 9 ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
\v 10 ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
\s5
\v 11 ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
\v 12 ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
\s5
\v 13 ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
\v 14-15 ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
\v 16 ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
\s5
\v 17 ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
\v 18 ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
\v 19 ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
\v 20 ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
\s ಗುಡಾರವನ್ನು ನಿರ್ಮಿಸುವುದರಲ್ಲಿ ಉಪಯೋಗಿಸಿದ ಸಾಮಗ್ರಿಗಳು
\s5
\p
\v 21 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
\p
\v 22 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
\v 23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
\s5
\p
\v 24 ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ
\f +
\fr 38:24
\ft ಸುಮಾರು 1,050 ಕಿಲೋಗ್ರಾಂ ಬಂಗಾರ.
\f* ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
\v 25 ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ
\f +
\fr 38:25
\ft 3,500 ಕಿಲೋಗ್ರಾಂ ಮತ್ತು 30 ಕಿಲೋಗ್ರಾಂ ಬೆಳ್ಳಿ.
\f* ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
\v 26 ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು <<ಬೆಕಾ>> ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
\s5
\v 27 ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
\v 28 ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
\p
\v 29 ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
\s5
\v 30 ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
\v 31 ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
\s5
\c 39
\s ಯಾಜಕರಿಗೆ ದೀಕ್ಷಾವಸ್ತ್ರಗಳನ್ನು ಮಾಡಿದ್ದು
\r (ವಿಮೋ. 28:1-14)
\p
\v 1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.
\s5
\p
\v 2 ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.
\v 3 ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
\s5
\v 4 ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.
\v 5 ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
\s5
\p
\v 6 ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.
\v 7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.
\s ಏಫೋದ್ ಕವಚವನ್ನು ಮಾಡಿದ್ದು
\r (ವಿಮೋ. 38:1-7)
\s5
\p
\v 8 ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
\v 9 ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
\s5
\v 10 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
\v 11 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.
\v 12 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು.
\v 13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.
\s5
\v 14 ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು.
\v 15 ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.
\v 16 ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.
\s5
\v 17 ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.
\v 18 ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.
\s5
\v 19 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.
\v 20 ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
\s5
\v 21 ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು.
\s ಯಾಜಕರ ಇತರ ವಸ್ತ್ರಗಳ ತಯಾರಿಕೆ
\r (ವಿಮೋ. 28:31-43)
\s5
\p
\v 22 ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.
\v 23 ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.
\v 24 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
\s5
\v 25 ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.
\v 26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
\s5
\p
\v 27 ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,
\v 28 ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,
\v 29 ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
\s5
\p
\v 30 ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
\v 31 ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
\s ಕೆಲಸದ ಮುಕ್ತಾಯ
\r (ವಿಮೋ. 35:10-19)
\s5
\p
\v 32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.
\p
\v 33 ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
\v 34 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,
\v 35 ಆಜ್ಞಾಶಾಸನಗಳ ಮಂಜೂಷವನ್ನು, ಅದರ ಕೋಲುಗಳನ್ನು, ಕೃಪಾಸನವನ್ನು,
\s5
\v 36 ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
\v 37 ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
\v 38 ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
\v 39 ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,
\s5
\v 40 ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,
\v 41 ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.
\s5
\p
\v 42 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.
\v 43 ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.
\s5
\c 40
\s ದೇವದರ್ಶನ ಗುಡಾರದ ಪ್ರತಿಷ್ಠೆ
\p
\v 1 ಆಗ ಯೆಹೋವನು ಮೋಶೆಗೆ,
\v 2 <<ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.
\s5
\v 3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.
\v 4 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.
\s5
\v 5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.
\v 6 ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.
\v 7 ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.
\s5
\v 8 ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.
\p
\v 9 <<ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
\v 10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
\v 11 ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
\s5
\p
\v 12 <<ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
\v 13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
\s5
\v 14 ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ
\v 15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು>> ಎಂದು ಹೇಳಿದನು.
\v 16 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
\s5
\p
\v 17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
\v 18 ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
\v 19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
\p
\v 20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
\s5
\v 21 ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
\p
\v 22 ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
\v 23 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.
\s5
\p
\v 24 ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
\v 25 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
\s5
\p
\v 26 ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
\v 27 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
\s5
\v 28 ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.
\v 29 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.
\p
\v 30 ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
\s5
\v 31 ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
\v 32 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
\p
\v 33 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
\s ಯೆಹೋವನ ತೇಜಸ್ಸು
\r (ಅರಣ್ಯ. 9:15-23)
\s5
\p
\v 34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
\v 35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
\s5
\p
\v 36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
\v 37 ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
\v 38 ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.