kn_ulb/03-LEV.usfm

1702 lines
318 KiB
Plaintext

\id LEV EXO - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಯಾಜಕಕಾಂಡ
\toc1 ಮೋಶೆಯ ಧರ್ಮಶಾಸ್ತ್ರದಲ್ಲಿ ಯಾಜಕಕಾಂಡ ಎಂಬ ತೃತೀಯಭಾಗ
\toc2 ಯಾಜಕಕಾಂಡ
\toc3 lev
\mt1 ಯಾಜಕಕಾಂಡ
\is ಗ್ರಂಥಕರ್ತೃತ್ವ
\ip ಗ್ರಂಥಕರ್ತೃತ್ವದ ವಿಷಯವು ಪುಸ್ತಕದ ಮುಕ್ತಾಯದ ವಾಕ್ಯದಿಂದ ಪರಿಹರಿಸಲ್ಪಡುತ್ತದೆ, “ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.” (27:34; 7:38; 25:1; 26:46). ಈ ಪುಸ್ತಕವು ಧರ್ಮಶಾಸ್ತ್ರಕ್ಕೆ ಸಂಬಂಧಿಸಿದಂತಹ ಹಲವಾರು ಐತಿಹಾಸಿಕ ಕಥನಗಳನ್ನು ವರ್ಣಿಸುತ್ತದೆ (8:10; 24:10-23). ಯಾಜಕಕಾಂಡ (ಲೆವಿಟಿಕಸ್) ಎಂಬ ಪದವು ಲೇವಿ ಕುಲದಿಂದ ಹುಟ್ಟಿಬಂದಿರುತ್ತದೆ, ಅವರ ಸದಸ್ಯರೆಲ್ಲರೂ ಆತನ ಯಾಜಕರಾಗಿರಲು ಮತ್ತು ಆರಾಧನೆಯ ನಾಯಕರಾಗಿರಲು ಕರ್ತನಿಂದ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಈ ಪುಸ್ತಕವು ಲೇವಿಯರ ಸಮಸ್ಯೆಗಳನ್ನು, ಜವಾಬ್ದಾರಿಗಳನ್ನು ತಿಳಿಸುತ್ತದೆ, ಹೆಚ್ಚು ಗಮನಾರ್ಹವಾಗಿ, ಎಲ್ಲಾ ಯಾಜಕರು ಆರಾಧನೆಯಲ್ಲಿ ಜನರಿಗೆ ಹೇಗೆ ಸಹಾಯ ಮಾಡಬೇಕೆಂಬುದರ ಕುರಿತು ಆಜ್ಞೆಯನ್ನು ನೀಡಲಾಗಿದೆ ಮತ್ತು ಜನರು ಪರಿಶುದ್ಧವಾದ ಜೀವನವನ್ನು ಹೇಗೆ ಜೀವಿಸಬೇಕು ಎಂಬುದರ ಬಗ್ಗೆ ತಿಳಿಸಲಾಗಿದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಶ. 1446-1405 ರ ನಡುವಿನ ಸಮಯದಲ್ಲಿ ಬರೆದಿರಬಹುದು.
\ip ಯಾಜಕಕಾಂಡದಲ್ಲಿ ಕಂಡುಬಂದಿರುವ ನಿಯಮದ ಬಗ್ಗೆ ದೇವರು ಮೋಶೆಯೊಂದಿಗೆ ಇಸ್ರಾಯೇಲರು ಸ್ವಲ್ಪ ಕಾಲ ಪಾಳೆಯ ಹಾಕಿಕೊಂಡಿದ್ದ ಸೀನಾಯಿ ಬೆಟ್ಟದಲ್ಲಿ ಅಥವಾ ಅದರ ಹತ್ತಿರದಲ್ಲಿ ಮಾತನಾಡಿರಬಹುದು.
\is ಸ್ವೀಕೃತದಾರ
\ip ಈ ಪುಸ್ತಕವನ್ನು ಯಾಜಕರಿಗೂ, ಲೇವಿಯರಿಗೂ ಮತ್ತು ಮುಂಬರುವ ಇಸ್ರಾಯೇಲ್ ಜನರ ಸಂತತಿಗಳವರಿಗೂ ಬರೆಯಲಾಯಿತು.
\is ಉದ್ದೇಶ
\ip ಯಾಜಕಕಾಂಡ ಪುಸ್ತಕವು ದೇವರು ಮೋಶೆಯನ್ನು ಕರೆದು ದೇವದರ್ಶನ ಗುಡಾರದೊಳಗಿಂದ ಅವನೊಂದಿಗೆ ಮಾತನಾಡುವುದರ ಮೂಲಕ ಪ್ರಾರಂಭವಾಗುತ್ತದೆ. ಯಾಜಕಕಾಂಡ ಪುಸ್ತಕವು ಬಿಡುಗಡೆಯಾಗಿರುವ ಜನರು ಈಗ ತಮ್ಮ ಮಧ್ಯದಲ್ಲಿ ನೆಲೆಗೊಂಡಿರುವಂತಹ ಮಹಿಮೆಯುಳ್ಳ ದೇವರೊಂದಿಗೆ ಸರಿಯಾದ ಅನ್ಯೋನ್ಯತೆಯನ್ನು ಹೇಗೆ ಕಾಪಾಡಿಕೊಳ್ಳಬೇಕೆಂದು ವಿವರಿಸುತ್ತದೆ. ಈ ಜನಾಂಗವು ಐಗುಪ್ತವನ್ನು ಮತ್ತು ಅದರ ಸಂಸ್ಕೃತಿ ಮತ್ತು ಧರ್ಮವನ್ನು ಈಗತಾನೇ ಬಿಟ್ಟು ಹೊರಟುಬಂದಿದೆ ಮತ್ತು ಬೇರೆ ಸಂಸ್ಕೃತಿಗಳು ಮತ್ತು ಧರ್ಮಗಳು ಈ ಜನಾಂಗದ ಮೇಲೆ ಪ್ರಭಾವ ಬೀರುವಂತಹ ಕಾನಾನ್ ದೇಶವನ್ನು ಪ್ರವೇಶಿಸಲಿದೆ. ಈ ಸಂಸ್ಕೃತಿಗಳಿಂದ ಪ್ರತ್ಯೇಕವಾಗಿ (ಪವಿತ್ರವಾಗಿ) ಉಳಿದುಕೊಂಡಿರಲು ಮತ್ತು ಯೆಹೋವನಿಗೆ ನಂಬಿಗಸ್ತರಾಗಿರಲು ಯಾಜಕಕಾಂಡವು ಜನರಿಗೆ ಷರತ್ತುಗಳನ್ನು ಒದಗಿಸುತ್ತದೆ.
\is ಮುಖ್ಯಾಂಶ
\ip ಆಜ್ಞೆ
\iot ಪರಿವಿಡಿ
\io1 1. ಕಾಣಿಕೆಗಳ ಕುರಿತ ಆಜ್ಞೆಗಳು - 1-7.
\io1 2. ದೇವರ ಯಾಜಕರ ಕುರಿತ ಆಜ್ಞೆಗಳು - 8-10.
\io1 3. ದೇವರ ಜನರ ಕುರಿತ ಆಜ್ಞೆಗಳು - 11-15.
\io1 4. ಯಜ್ಞವೇದಿಯ ಮತ್ತು ದೋಷಪರಿಹಾರಕ ದಿನದ ಕುರಿತ ಆಜ್ಞೆಗಳು - 16.
\io1 5. ಪ್ರಾಯೋಗಿಕವಾದ ಪರಿಶುದ್ಧತೆ - 17-22.
\io1 6. ಸಬ್ಬತ್ ದಿನಗಳು, ಜಾತ್ರೆಗಳು ಮತ್ತು ಹಬ್ಬಗಳು - 23-25.
\io1 7. ದೇವರ ಆಶೀರ್ವಾದವನ್ನು ಪಡೆಯಲಿಕ್ಕಿರುವ ಷರತ್ತುಗಳು - 26-27.
\s5
\c 1
\s ಸರ್ವಾಂಗಹೋಮ ವಿಧಾನ
\p
\v 1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
\v 2 <<ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, <ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
\s5
\p
\v 3 << <ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
\v 4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
\s5
\p
\v 5 << <ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
\v 6 ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
\s5
\v 7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
\v 8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
\v 9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
\s5
\p
\v 10 << <ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
\v 11 ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
\s5
\v 12 ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
\v 13 ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
\s5
\p
\v 14 << <ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
\v 15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
\s5
\v 16 ಅದರ
\f +
\fr 1:16
\ft ಅಥವಾ ಎರೆ ಚೀಲ.
\f* ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
\v 17 ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
\s5
\c 2
\s ಧಾನ್ಯ ಸಮರ್ಪಣೆ
\p
\v 1 << <ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
\v 2 ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
\v 3 ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
\s5
\p
\v 4 << <ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
\v 5 ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
\s5
\v 6 ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
\v 7 ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
\s5
\v 8 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
\v 9 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
\v 10 ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
\s5
\p
\v 11 << <ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
\v 12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
\v 13 ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು.
\f +
\fr 2:13
\ft ಅಕ್ಷರಶಃ - ಒಡಂಬಡಿಕೆಯ ಉಪ್ಪು.
\f* ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
\s5
\p
\v 14 << <ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು,
\f +
\fr 2:14
\ft ಪುಡಿಮಾಡಿದ ಹಿಟ್ಟಿನ ಧಾನ್ಯ.
\f* ಉಮ್ಮಿಗೆಯನ್ನು ಸಮರ್ಪಿಸಬೇಕು.
\v 15 ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
\v 16 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
\s5
\c 3
\s ಸಮಾಧಾನಯಜ್ಞ
\p
\v 1 << <ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
\v 2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
\s5
\v 3 ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
\v 4 ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
\v 5 ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
\s5
\p
\v 6 << <ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
\v 7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
\v 8 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
\s5
\v 9 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
\v 10 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
\v 11 ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
\s5
\p
\v 12 << <ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
\v 13 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
\v 14 ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
\s5
\v 15 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
\v 16 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
\v 17 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ> >> ಅಂದನು.
\s5
\c 4
\s ತಿಳಿಯದೆ ತಪ್ಪುಮಾಡಿದವನ ದೋಷಪರಿಹಾರ
\p
\v 1 ಯೆಹೋವನು ಮೋಶೆಗೆ ಇಂತೆಂದನು,
\v 2 <<ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ <ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
\v 3
\f +
\fr 4:3
\ft ಮಹಾಯಾಜಕನು.
\f* ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
\s5
\v 4 ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
\v 5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
\s5
\v 6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
\v 7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
\s5
\v 8 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
\v 9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
\v 10 ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
\s5
\v 11 ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
\v 12 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
\s ಇಸ್ರಾಯೇಲ್ ಸಮೂಹದ ದೋಷಪರಿಹಾರ
\s5
\p
\v 13 << <ಇಸ್ರಾಯೇಲರ
\f +
\fr 4:13
\ft ಕೂಡಿಬಂದ ಎಲ್ಲಾ ಇಸ್ರಾಯೇಲರು.
\f* ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
\v 14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
\v 15
\f +
\fr 4:15
\ft ಕೂಡಿಬಂದ ಇಸ್ರಾಯೇಲರು.
\f* ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
\s5
\v 16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
\v 17 ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
\s5
\v 18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
\v 19 ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
\s5
\v 20 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
\v 21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
\s ಮುಖ್ಯಾಧಿಕಾರಿಯ ದೋಷಪರಿಹಾರ
\s5
\p
\v 22 << <ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
\v 23 ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
\s5
\v 24 ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
\v 25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
\s5
\v 26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
\s ಸಾಮಾನ್ಯ ಜನರ ದೋಷಪರಿಹಾರ
\s5
\p
\v 27 << <ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
\v 28 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
\s5
\v 29 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
\v 30 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
\s5
\v 31 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
\s5
\p
\v 32 << <ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
\v 33 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
\s5
\v 34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
\v 35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
\s5
\c 5
\s ಅಶುದ್ಧತೆಗೆ ಕಾರಣವಾಗುವ ಸಂಗತಿಗಳು
\p
\v 1 << <ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
\v 2 ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
\s5
\v 3 ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು
\f +
\fr 5:3
\ft 12-14 ನೋಡಿರಿ
\f* ದೋಷಿಯಾಗುವನು.
\v 4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
\s5
\v 5 ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
\v 6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
\s5
\p
\v 7 << <ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
\v 8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
\v 9 ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
\s5
\v 10 ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
\s5
\p
\v 11 << <ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ
\f +
\fr 5:11
\ft ಒಂದು ಕಿಲೋಗ್ರಾಂ.
\f* ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
\s5
\v 12 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.
\v 13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.> >>
\s ಪ್ರಾಯಶ್ಚಿತ್ತ ಯಜ್ಞ
\s5
\p
\v 14 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 15 <<ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
\v 16 ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
\s5
\p
\v 17 <<ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
\v 18 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
\v 19 ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.>>
\s5
\c 6
\s ಇತರ ಪಾಪ ಅಪರಾಧಗಳಿಗೆ ಪ್ರಾಯಶ್ಚಿತ್ತ ಯಜ್ಞ
\p
\v 1 ಯೆಹೋವನು ಮೋಶೆಗೆ,
\v 2 <<ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
\v 3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
\v 4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
\s5
\v 5 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
\v 6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
\v 7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು>> ಎಂದು ಹೇಳಿದನು.
\s ಸರ್ವಾಂಗಹೋಮ ವಿಷಯವಾದ ನಿಯಮಗಳು
\s5
\p
\v 8 ಅನಂತರ ಯೆಹೋವನು ಮೋಶೆಗೆ,
\v 9 <<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, <ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
\s5
\v 10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
\v 11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
\s5
\v 12 ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
\v 13 ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
\s ಧಾನ್ಯನೈವೇದ್ಯ
\s5
\p
\v 14 << <ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
\v 15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
\s5
\v 16 ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
\v 17 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
\v 18 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು> >> ಎಂದು ಹೇಳಿದನು.
\s5
\p
\v 19 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
\v 20 <<ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ
\f +
\fr 6:20
\ft ಸುಮಾರು ಒಂದು ಕಿಲೋಗ್ರಾಂ.
\f* ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
\s5
\v 21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
\v 22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
\v 23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು>> ಎಂದು ಹೇಳಿದನು.
\s ದೋಷಪರಿಹಾರಕ ಯಜ್ಞದ ನಿಯಮಗಳು
\s5
\p
\v 24 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
\v 25 <<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, <ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
\v 26 ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
\s5
\v 27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
\v 28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
\s5
\v 29 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
\v 30 ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
\s5
\c 7
\s ಪ್ರಾಯಶ್ಚಿತ್ತಯಜ್ಞದ ನಿಯಮಗಳು
\p
\v 1 << <ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
\v 2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
\v 3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,
\v 4 ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
\s5
\v 5 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
\v 6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.
\s5
\v 7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.
\v 8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
\s5
\v 9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
\v 10 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
\s5
\p
\v 11 << <ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
\v 12 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
\s5
\v 13 ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
\v 14 ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
\s5
\v 15 ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
\p
\v 16 << <ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
\s5
\v 17 ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
\v 18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
\s5
\v 19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
\v 20 ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.
\s5
\v 21 ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು> >> ಎಂದು ಹೇಳಿದನು.
\s ಕೊಬ್ಬು ಮತ್ತು ರಕ್ತ ಭೋಜನವನ್ನು ನಿಷೇಧಿಸಿದ್ದು
\s5
\p
\v 22 ಯೆಹೋವನು ಮೋಶೆಗೆ,
\v 23 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
\v 24 ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
\s5
\v 25 ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
\v 26 ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
\v 27 ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು> >> ಎಂದು ಹೇಳಿದನು.
\s ಯಾಜಕನ ಪಾಲು
\s5
\p
\v 28 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 29 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
\v 30 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
\s5
\v 31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
\v 32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.
\s5
\v 33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.
\v 34 ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ> >> ಎಂದು ಹೇಳಿದನು.
\s5
\v 35 ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
\v 36 ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.
\s5
\p
\v 37 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.
\v 38 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.
\s5
\c 8
\s ಆರೋನನ ಹಾಗು ಅವನ ಮಕ್ಕಳ ಯಾಜಕಾಭಿಷೇಕ
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
\v 3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ>> ಎಂದು ಹೇಳಿದನು.
\s5
\v 4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
\v 5 ಆಗ ಮೋಶೆ ಅವರಿಗೆ, <<ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು>> ಎಂದು ಹೇಳಿದನು.
\s5
\p
\v 6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
\v 7 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
\s5
\v 8 ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
\v 9 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
\s5
\p
\v 10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
\v 11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
\s5
\v 12 ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
\v 13 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.
\s ದೋಷಪರಿಹಾರಕ ಯಜ್ಞ
\s5
\p
\v 14 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
\v 15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
\s5
\v 16 ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
\v 17 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
\s ಸರ್ವಾಂಗಹೋಮ ಸಮರ್ಪಣೆ
\s5
\p
\v 18 ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
\v 19 ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
\s5
\v 20 ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.
\v 21 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
\s ಪಟ್ಟಾಭಿಷೇಕ ಯಜ್ಞ
\s5
\p
\v 22 ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
\v 23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
\v 24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
\s5
\v 25 ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
\v 26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
\v 27 ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.
\s5
\v 28 ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.
\v 29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
\s5
\p
\v 30 ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
\s5
\p
\v 31 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, <<ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. <ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು> ಎಂಬುದೇ ನನಗಾದ ಅಪ್ಪಣೆ.
\v 32 ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
\v 33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
\s5
\v 34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
\v 35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ>> ಎಂದು ಹೇಳಿದನು.
\v 36 ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.
\s5
\c 9
\s ಆರೋನನು ಪ್ರಥಮಯಜ್ಞವನ್ನು ಸಮರ್ಪಿಸಿದ್ದು
\p
\v 1 ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.
\v 2 ಅವನು ಆರೋನನಿಗೆ, <<ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
\s5
\v 3 ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, <ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,
\v 4 ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು> >> ಅಂದನು.
\p
\v 5 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
\s5
\v 6 ಆಗ ಮೋಶೆ ಅವರಿಗೆ, <<ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು>> ಎಂದು ಹೇಳಿದನು.
\p
\v 7 ಆಗ ಮೋಶೆ ಆರೋನನಿಗೆ, <<ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು>> ಎಂದು ಹೇಳಿದನು.
\s5
\v 8 ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
\v 9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.
\s5
\v 10 ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
\v 11 ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.
\s5
\v 12 ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
\v 13 ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
\v 14 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.
\s5
\p
\v 15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.
\v 16 ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು.
\v 17 ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
\s5
\v 18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
\v 19 ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,
\s5
\v 20 ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
\v 21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
\s5
\v 22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
\p
\v 23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.
\v 24 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
\s5
\c 10
\s ನಾದಾಬ್ ಹಾಗೂ ಅಬೀಹೂರ ಮರಣ
\p
\v 1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
\v 2 ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
\s5
\v 3 ಆಗ ಮೋಶೆ ಆರೋನನಿಗೆ, <<ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ,
\q <ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು,
\q ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ> >> ಎಂದು ಹೇಳಿದನು.
\p ಅದಕ್ಕೆ ಆರೋನನು ಮೌನವಾಗಿದ್ದನು.
\v 4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, <<ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು>> ಅಂದನು.
\s5
\v 5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
\p
\v 6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, <<ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
\v 7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ>> ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
\s ಯಾಜಕರಿಗೆ ನಿಷಿದ್ಧವಾದ ಕಾರ್ಯಗಳು
\s5
\p
\v 8 ಯೆಹೋವನು ಆರೋನನೊಂದಿಗೆ ಮಾತನಾಡಿ,
\v 9 <<ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
\v 10 ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
\v 11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ>> ಎಂದು ಹೇಳಿದನು.
\s5
\p
\v 12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, <<ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
\v 13 ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
\s5
\v 14 ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
\v 15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ>> ಎಂದು ಹೇಳಿದನು.
\s5
\p
\v 16 ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
\v 17 <<ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
\v 18 ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು>> ಅಂದನು.
\s5
\v 19 ಅದಕ್ಕೆ ಆರೋನನು ಮೋಶೆಗೆ, <<ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?>>
\v 20 ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.
\s5
\c 11
\s ಶುದ್ಧ ಮತ್ತು ಅಶುದ್ಧವಾದ ಪ್ರಾಣಿಗಳು
\p
\v 1 ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 2 <<ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, <ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,
\s5
\v 3 ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
\v 4 ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
\s5
\v 5 ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.
\v 6 ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
\v 7 ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
\v 8 ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
\s ಶುದ್ಧ ಮತ್ತು ಅಶುದ್ಧವಾದ ಜಲಜಂತುಗಳು
\s5
\p
\v 9 << <ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
\v 10 ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
\s5
\v 11 ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
\v 12 ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
\s ಶುದ್ಧ ಮತ್ತು ಅಶುದ್ಧವಾದ ಪಕ್ಷಿಗಳು
\s5
\p
\v 13 << <ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
\v 14 ಕ್ರೌಂಚ, ಹದ್ದು,
\v 15 ಸಕಲವಿಧವಾದ ಗಿಡುಗ,
\v 16 ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
\s5
\v 17 ಗೂಬೆ, ಹೆಗ್ಗೂಬೆ, ನೀರುಕಾಗೆ,
\v 18 ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
\v 19 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
\s ನಿಷಿದ್ಧವಾದ ಕ್ರಿಮಿಕೀಟಗಳು
\s5
\p
\v 20 << <ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
\v 21 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
\v 22 ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
\v 23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
\s ಅಪವಿತ್ರತೆಯನ್ನು ಉಂಟುಮಾಡುವ ಪ್ರಾಣಿಗಳು
\s5
\p
\v 24 << <ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
\v 25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
\s5
\v 26 ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
\v 27 ಚತುಷ್ಪಾದ [ನಾಲ್ಕುಕಾಳುಗಳ] ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವರು.
\v 28 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
\s ಅಶುದ್ಧವಾದ ಜಂತುಗಳು
\s5
\p
\v 29 << <ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
\v 30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
\s5
\v 31 ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
\v 32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
\v 33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
\s5
\v 34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
\v 35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
\s5
\v 36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
\v 37 ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
\v 38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
\s5
\p
\v 39 << <ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
\v 40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
\s ತಿನ್ನಬಾರದ ಕ್ರಿಮಿಕೀಟಗಳು
\s5
\p
\v 41 << <ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
\v 42 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
\s5
\v 43 ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.
\v 44 ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
\v 45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
\s5
\p
\v 46 << <ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
\v 47 ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.> >>
\s5
\c 12
\s ಬಾಣಂತಿಯರ ಶುದ್ಧೀಕರಣ
\p
\v 1 ಯೆಹೋವನು ಮೋಶೆಗೆ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
\v 3 ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.
\s5
\v 4 ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
\v 5 ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
\s5
\p
\v 6 << <ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
\s5
\v 7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.
\v 8 ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು> >> ಎಂಬುದೆ.
\s5
\c 13
\s ಕುಷ್ಠರೋಗದಿಂದ ಉಂಟಾಗುವ ಅಪವಿತ್ರತೆ
\p
\v 1 ಯೆಹೋವನು ಮೋಶೆ ಮತ್ತು ಆರೋನರಿಗೆ,
\v 2 <<ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
\s5
\v 3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
\v 4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.
\s5
\v 5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
\v 6 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
\s5
\v 7 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
\v 8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
\s5
\p
\v 9 <<ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
\v 10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
\v 11 ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು.
\s5
\p
\v 12 <<ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,
\v 13 ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.
\v 14 ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
\s5
\v 15 ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
\v 16 ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
\v 17 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
\s5
\p
\v 18 <<ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
\v 19 ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
\v 20 ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
\s5
\v 21 ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
\v 22 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
\v 23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
\s5
\p
\v 24 <<ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
\v 25 ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
\s5
\v 26 ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
\v 27 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
\v 28 ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.
\s5
\p
\v 29 <<ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
\v 30 ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
\s5
\v 31 ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
\s5
\v 32 ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
\v 33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
\s5
\v 34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
\s5
\v 35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
\v 36 ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
\v 37 ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
\s5
\p
\v 38 <<ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
\v 39 ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
\s5
\p
\v 40 <<ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
\v 41 ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.
\s5
\v 42 ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
\v 43 ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
\v 44 ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
\s5
\p
\v 45 <<ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು <ನಾನು ಅಶುದ್ಧನು, ಅಶುದ್ಧನು> ಎಂದು ಕೂಗಿಕೊಳ್ಳಬೇಕು.
\v 46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
\s ಕುಷ್ಠ ಸೋಂಕಿದ ಬಟ್ಟೆಬರೆ
\s5
\p
\v 47 <<ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
\v 48 ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,
\v 49 ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
\s5
\v 50 ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
\v 51 ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
\v 52 ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
\s5
\v 53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
\v 54 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
\v 55 ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
\s5
\v 56 ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
\v 57 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
\v 58 ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.
\s5
\p
\v 59 <<ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು>> ಎಂದು ಹೇಳಿದನು.
\s5
\c 14
\s ಚರ್ಮರೋಗದ ಕುಷ್ಠರೋಗದ ಶುದ್ಧೀಕರಣ
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
\s5
\v 3 ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
\v 4 ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
\v 5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
\s5
\p
\v 6 <<ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
\v 7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
\s5
\v 8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
\v 9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
\s5
\p
\v 10 <<ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ
\f +
\fr 14:10
\ft ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ.
\f* ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
\v 11 ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
\s5
\v 12 ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
\v 13 ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
\s5
\v 14 ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
\v 15 ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
\v 16 ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
\s5
\v 17 ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
\v 18 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
\s5
\p
\v 19 <<ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
\v 20 ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
\s5
\p
\v 21 <<ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ
\f +
\fr 14:21
\ft ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ.
\f* ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
\v 22 ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
\v 23 ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
\s5
\v 24 ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
\v 25 ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
\s5
\v 26 ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
\v 27 ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
\s5
\v 28 ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
\v 29 ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
\s5
\v 30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
\v 31 ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
\p
\v 32 <<ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ>> ಎಂದು ಹೇಳಿದನು.
\s ಕುಷ್ಠ ಹತ್ತಿದ ಮನೆ
\s5
\p
\v 33 ಯೆಹೋವನು ಮೋಶೆ ಮತ್ತು ಆರೋನರಿಗೆ,
\v 34 <<ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
\v 35 ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, <ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ> ಎಂದು ಅವನಿಗೆ ತಿಳಿಸಬೇಕು.
\s5
\v 36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
\v 37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
\v 38 ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
\s5
\v 39 ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
\v 40 ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
\s5
\v 41 ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
\v 42 ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
\s5
\p
\v 43 <<ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
\v 44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
\s5
\v 45 ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
\v 46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\v 47 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
\s5
\p
\v 48 <<ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
\s5
\v 49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
\v 50 ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
\v 51 ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
\s5
\v 52 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
\v 53 ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
\s5
\p
\v 54 <<ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
\v 55 ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
\v 56 ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
\v 57 ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ>> ಎಂದು ಹೇಳಿದನು.
\s5
\c 15
\s ಜನನೇಂದ್ರಿಯದ ಸ್ರಾವದಿಂದುಂಟಾಗುವ ಅಶುದ್ಧತೆ
\p
\v 1 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ,
\v 2 <<ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, <ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
\v 3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
\s5
\v 4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
\v 5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
\s5
\v 6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\v 7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\s5
\v 8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
\v 9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
\s5
\v 10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\v 11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\v 12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
\s5
\p
\v 13 << <ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
\v 14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
\v 15 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
\s5
\p
\v 16 << <ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
\v 17 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
\v 18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
\s5
\p
\v 19 << <ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
\v 20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
\s5
\v 21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\v 22 ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
\v 23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
\s5
\v 24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
\s5
\p
\v 25 << <ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
\v 26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
\v 27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
\s5
\v 28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
\v 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
\v 30 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
\s5
\p
\v 31 << <ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
\s5
\p
\v 32 << <ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
\v 33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ> >> ಎಂದು ಹೇಳಿದನು.
\s5
\c 16
\s ದೋಷಪರಿಹಾರಕದ ಮಹಾದಿನ
\p
\v 1 ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 2 <<ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
\s5
\v 3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
\v 4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
\v 5 ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
\s5
\v 6 ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
\v 7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
\s5
\v 8 ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.
\v 9 ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
\v 10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.
\s5
\p
\v 11 <<ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
\s5
\v 12 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.
\v 13 ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
\s5
\v 14 ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.
\s5
\p
\v 15 <<ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
\v 16 ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.
\s5
\v 17 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.
\v 18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
\v 19 ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.
\s5
\p
\v 20 <<ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.
\v 21 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
\v 22 ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.
\s5
\p
\v 23 <<ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.
\v 24 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
\s5
\v 25 ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.
\p
\v 26 <<ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.
\s5
\v 27 ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
\v 28 ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.
\s ಪ್ರಾಯಶ್ಚಿತ್ತ ದಿನಾಚರಣೆ
\s5
\p
\v 29 <<ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
\v 30 ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
\v 31 ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.
\s5
\p
\v 32 <<ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
\v 33 ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
\s5
\v 34 ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ>> ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
\s5
\c 17
\s ಯಜ್ಞಪಶುಗಳನ್ನು ದೇವಸ್ಥಾನದಲ್ಲಿಯೇ ವಧಿಸಬೇಕೆಂಬ ನಿಯಮ
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
\v 3 ಯೆಹೋವನು ಆಜ್ಞಾಪಿಸುವುದೇನೆಂದರೆ, <ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,
\v 4 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
\s5
\v 5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
\v 6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
\s5
\v 7 ಅವರು ಇದುವರೆಗೆ ಪೂಜಿಸುತ್ತಿದ್ದ
\f +
\fr 17:7
\ft ಆಡುಗಳ ವಿಗ್ರಹ.
\f* ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು
\f +
\fr 17:7
\ft ಅಕ್ಷರಶಃವಾಗಿ ವ್ಯಭಿಚಾರಿಗಳಂತೆ ವರ್ತಿಸುವುದು.
\f* ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.>
\s ರಕ್ತವನ್ನು ಭುಜಿಸಲೇ ಬಾರದೆಂಬ ನಿಯಮ
\s5
\p
\v 8 <<ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, <ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
\v 9 ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
\s5
\p
\v 10 << <ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
\v 11 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
\s5
\v 12 ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
\p
\v 13 << <ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
\s5
\v 14 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
\s5
\p
\v 15 << <ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
\v 16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು> >> ಎಂದು ಹೇಳಿದನು.
\s5
\c 18
\s ಧರ್ಮವಿರುದ್ಧವಾದ ಲೈಂಗಿಕ ನಿಯಮಗಳು
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ದೇವರಾಗಿರುವ ಯೆಹೋವನು.
\v 3 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.
\s5
\v 4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
\v 5 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
\s5
\p
\v 6 << <ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
\v 7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
\v 8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
\s5
\v 9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
\v 10 ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
\v 11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
\s5
\v 12 ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
\v 13 ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
\v 14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
\s5
\v 15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
\v 16 ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
\s5
\v 17 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
\v 18 ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
\s5
\p
\v 19 << <ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
\v 20 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
\s5
\p
\v 21 << <ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
\s5
\p
\v 22 << <ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
\v 23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
\s5
\p
\v 24 << <ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
\v 25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
\s5
\v 26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
\v 27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
\v 28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
\s5
\v 29 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
\v 30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು> >> ಎಂದು ಹೇಳಿದನು.
\s5
\c 19
\s ಇಸ್ರಾಯೇಲರು ಅನುಸರಿಸಬೇಕಾದ ಧರ್ಮ ನಿಯಮಗಳು
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, <ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
\p
\v 3 << <ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
\p
\v 4 << <ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 5 << <ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
\v 6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
\v 7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
\v 8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
\s5
\p
\v 9 << <ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
\v 10 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 11 << <ಕದಿಯಬಾರದು,
\p << <ಮೋಸಮಾಡಬಾರದು,
\p << <ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
\p
\v 12 << <ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
\s5
\p
\v 13 << <ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
\v 14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
\s5
\p
\v 15 << <ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
\p
\v 16 << <ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು.
\f +
\fr 19:16
\ft ನೆರೆಯವರಿಗೆ ಅಥವಾ ಇತರರಿಗೆ ಅಪಾಯವುಂಟಾಗುವಂಥದ್ದನ್ನು ಮಾಡಬೇಡಿರಿ.
\f* ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
\s5
\p
\v 17 << <ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
\p
\v 18 << <ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
\s5
\p
\v 19 << <ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು.
\p << <ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು;
\p << <ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು;
\p << <ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
\s5
\p
\v 20 << <ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
\v 21 ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
\v 22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
\s5
\p
\v 23 << <ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
\v 24 ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
\v 25 ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 26 << <ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು.
\p << <ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
\p
\v 27 << <ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
\p
\v 28 << <ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
\s5
\p
\v 29 << <ಮಗಳನ್ನು
\f +
\fr 19:29
\ft ಕಾನಾನ್ಯರ ಧಾರ್ಮಿಕ ದೇವಾಲಯಗಳಲ್ಲಿ ವೇಶ್ಯೆಯರು ಇರುತ್ತಿದ್ದರು ಅಲ್ಲಿ ಫಲವತ್ತತೆಯ ದೇವಾನುದೇವತೆಗಳನ್ನು ಪೂಜಿಸಲಾಗುತ್ತಿತ್ತು. ಆರಾಧಕರು ತಮ್ಮ ಹೊಲಗಳು ಮತ್ತು ಹಿಂಡುಗಳು ಫಲವತ್ತಾಗಿರಲು ಅಲ್ಲಿನ ವೇಶ್ಯೆಯರೊಂದಿಗೆ ಸಂಭೋಗ ಮಾಡುತ್ತಿದ್ದರು.
\f* ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
\p
\v 30 << <ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
\s5
\p
\v 31 << <ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 32 << <ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
\s5
\p
\v 33 << <ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
\v 34 ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 35 << <ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
\v 36 ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
\v 37 ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು> >> ಎಂದು ಹೇಳಿದನು.
\s5
\c 20
\s ದೈವಾಜ್ಞೆಮೀರಿ ದುರಾಚಾರ ಮಾಡುವವರಿಗೆ ನೇಮಕವಾದ ಶಿಕ್ಷೆಗಳು
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
\s5
\v 3 ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
\v 4 ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
\v 5 ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
\s5
\p
\v 6 << <ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
\v 7 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
\s5
\v 8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
\p
\v 9 << <ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
\s5
\p
\v 10 << <ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
\v 11 ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
\v 12 ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
\s5
\v 13 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
\v 14 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
\s5
\v 15 ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
\v 16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
\s5
\v 17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
\v 18 ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
\s5
\v 19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
\v 20 ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
\v 21 ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
\s5
\p
\v 22 << <ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
\v 23 ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
\s5
\v 24 ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ,
\f +
\fr 20:24
\ft ಬಹಳಷ್ಟು ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
\p
\v 25 << <ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
\s5
\v 26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
\s5
\p
\v 27 << <ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು> >> ಎಂದು ಹೇಳಿದನು.
\s5
\c 21
\s ದೇವರ ಘನತೆ ಗೌರವವನ್ನು ಉಳಿಸುವಂತೆ ಯಾಜಕರಿಗೆ ಎಚ್ಚರಿಕೆ
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, <<ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, <ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
\v 2 ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
\v 3 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
\s5
\v 4 ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು
\f +
\fr 21:4
\ft ಮದುವೆಯ ಮೂಲಕ ಅವನು ತನ್ನನ್ನು ತಾನು ಅಪವಿತ್ರಮಾಡಿಕೊಳ್ಳಬಾರದು.
\f* ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
\v 5
\f +
\fr 21:5
\ft 19:27-28 ವಚನಗಳನ್ನು ಓದಿರಿ.
\f* ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
\v 6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
\s5
\v 7 ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
\v 8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
\v 9 ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
\s5
\p
\v 10 << <ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
\v 11 ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
\v 12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
\s5
\v 13 ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
\v 14 ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
\v 15 ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.
\s ಅಂಗಹೀನರು ಯಾಜಕ ಉದ್ಯೋಗವನ್ನು ನಡೆಸಬಾರದೆಂಬ ನಿಯಮ
\s5
\p
\v 16 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 17 <<ನೀನು ಆರೋನನಿಗೆ ಹೀಗೆ ಆಜ್ಞಾಪಿಸು, <ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
\s5
\v 18 ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
\v 19 ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
\v 20 ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
\v 21 ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
\s5
\v 22 ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
\v 23 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.
\p
\v 24 ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
\s5
\c 22
\s ಪರಿಶುದ್ಧ ದ್ರವ್ಯಗಳನ್ನು ಸಾಧಾರಣವೆಂದೆಣಿಸಿಬಾರದೆಂಬ ಯೆಹೋವನ ನಿಯಮ
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.
\v 3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, <ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
\s5
\v 4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
\v 5 ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
\p
\v 6 << <ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
\s5
\v 7 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
\v 8 ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.
\v 9 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
\s5
\p
\v 10 << <ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
\v 11 ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
\s5
\v 12 ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
\v 13 ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
\s5
\v 14 ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
\v 15 ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
\v 16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ
\f +
\fr 22:16
\ft ಅಥವಾ ಆ ನೈವೇದ್ಯಪದಾರ್ಥಗಳನ್ನು.
\f* ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.
\s ಪೂರ್ಣಾಂಗವಾದ ಪಶುಗಳನ್ನೇ ಸಮರ್ಪಿಸಬೇಕೆಂಬ ನಿಯಮ
\s5
\p
\v 17 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 18 <<ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
\v 19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
\s5
\v 20 ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.
\v 21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
\s5
\v 22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
\v 23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
\s5
\v 24 ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
\v 25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು
\f +
\fr 22:25
\ft ಆ ಪಶುಗಳ ಮಾಲೀಕರು ಅವುಗಳ ಬೀಜಹೊಡೆದ ಕಾರಣ ಯಜ್ಞವಾಗಿ ಸಮರ್ಪಿಸಲು ಅವುಗಳು ಯೋಗ್ಯವಾದವುಗಳಲ್ಲ.
\f* ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ> >> ಅಂದನು.
\s5
\p
\v 26 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 27 <<ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
\s5
\v 28 ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
\p
\v 29 <<ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
\v 30 ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
\s5
\p
\v 31 <<ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
\v 32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
\v 33 ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು>> ಎಂದು ಹೇಳಿದನು.
\s5
\c 23
\s ಇಸ್ರಾಯೇಲರು ಆಚರಿಸಬೇಕಾದ ಹಬ್ಬ ಉತ್ಸವಗಳು
\p
\v 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.
\s ಸಬ್ಬತ್
\s5
\p
\v 3 << <ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
\s5
\p
\v 4 << <ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
\s ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ
\p
\v 5 << <ಮೊದಲನೆಯ ತಿಂಗಳಿನ
\f +
\fr 23:5
\ft ಮಾರ್ಚ್ 16 ರಿಂದ ಏಪ್ರಿಲ್ 15 ರ ನಡುವಿನ ಸಮಯವಾಗಿರಬಹುದು.
\f* ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
\v 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
\s5
\v 7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
\v 8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು> >> ಅಂದನು.
\s ಪ್ರಥಮಫಲದ ಸಮರ್ಪಣೆ
\s5
\p
\v 9 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 10 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
\v 11 ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
\s5
\v 12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
\v 13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು
\f +
\fr 23:13
\ft ಒಂದು ಕಿಲೋಗ್ರಾಂ. ವಿಮೋ. 29:40 ನೋಡಿರಿ.
\f* ಒಂದುವರೆ ಸೇರು ದ್ರಾಕ್ಷಾರಸ.
\v 14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
\s ಸುಗ್ಗಿ ಹಬ್ಬ
\s5
\p
\v 15 << <ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
\v 16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
\s5
\v 17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
\v 18 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
\s5
\v 19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
\v 20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
\v 21 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
\s5
\p
\v 22 << <ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು> >> ಎಂದು ಹೇಳಿದನು.
\s ತುತ್ತೂರಿಗಳ ಹಬ್ಬ
\s5
\p
\v 23 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 24 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
\v 25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು> >> ಅಂದನು.
\s ಪಾಪಪರಿಹಾರಕ ದಿನ
\s5
\p
\v 26 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 27 <<ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
\s5
\v 28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
\v 29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
\s5
\v 30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
\v 31 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
\v 32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು>> ಎಂದು ಹೇಳಿದನು.
\s ಪರ್ಣಶಾಲೆಗಳ ಹಬ್ಬ
\s5
\p
\v 33 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
\v 34 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
\s5
\v 35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.
\v 36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
\s5
\p
\v 37 << <ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
\v 38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.
\s5
\p
\v 39 << <ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
\s5
\v 40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
\v 41 ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
\s5
\v 42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.
\v 43 ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು> >> ಅಂದನು.
\p
\v 44 ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.
\s5
\c 24
\s ದೇವಸ್ಥಾನದ ದೀಪಸ್ತಂಭ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 2 <<ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
\s5
\v 3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
\v 4 ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
\s ಪವಿತ್ರವಾದ ರೊಟ್ಟಿ
\s5
\p
\v 5 <<ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು
\f +
\fr 24:5
\fq ಆರಾರು ಸೇರಿನದಾಗಿರಬೇಕು
\ft ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ.
\f* .
\v 6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
\s5
\v 7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
\v 8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
\v 9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು>> ಅಂದನು.
\s ದೇವದೂಷಕನಿಗೆ ಮರಣಶಿಕ್ಷೆ
\s5
\p
\v 10 ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
\v 11 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
\v 12 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
\s5
\p
\v 13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 14 <<ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
\s5
\v 15 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, <ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
\v 16 ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
\s5
\p
\v 17 << <ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
\v 18 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
\s5
\v 19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
\v 20 ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
\v 21 ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
\s5
\v 22 ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು> >> ಎಂಬುದೇ.
\p
\v 23 ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
\s5
\c 25
\s ಸಬ್ಬತ್ ಸ್ವತಂತ್ರ ವರ್ಷ
\p
\v 1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
\s5
\v 3 ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
\v 4 ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
\s5
\v 5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
\v 6 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
\v 7 ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
\s ಜೂಬಿಲಿ ಎಂಬ ಬಿಡುಗಡೆಯ ಸಂವತ್ಸರ
\s5
\p
\v 8 << <ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
\v 9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
\s5
\v 10 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು
\f +
\fr 25:10
\ft ಇಬ್ರಿಯ ಪದದ ಅರ್ಥ ಟಗರಿನ ಕೊಂಬು. ಇದನ್ನು ಸಂಗೀತದ ಉಪಕರಣವಾಗಿ ಬಳಸುತ್ತಿದ್ದರು. ಪುನಃಸ್ಥಾಪನೆಯ ವರ್ಷವನ್ನು ಪ್ರಚುರಪಡಿಸುವಾಗ ಇದನ್ನು ಊದುತ್ತಿದ್ದರು.
\f* ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
\s5
\v 11 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
\v 12 ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
\s5
\p
\v 13 << <ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
\v 14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
\s5
\v 15 ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
\v 16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
\v 17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
\s5
\p
\v 18 << <ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
\v 19 ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
\s5
\p
\v 20 << <ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?> ಎಂದು ವಿಚಾರಿಸುತ್ತೀರೋ
\v 21 ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
\v 22 ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
\s ಸ್ಥಿರ ಆಸ್ತಿಗಳ ಬಿಡುಗಡೆ
\s5
\p
\v 23 << <ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
\v 24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
\p
\v 25 << <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
\s5
\v 26 ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
\v 27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
\v 28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
\s5
\p
\v 29 << <ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
\v 30 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
\s5
\v 31 ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
\v 32 ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
\s5
\v 33 ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
\v 34 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
\s ಬಡವರ ವಿಮೋಚನೆ
\s5
\p
\v 35 << <ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
\v 36 ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
\v 37 ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
\v 38 ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
\s5
\p
\v 39 << <ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
\v 40 ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
\v 41 ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
\s5
\v 42 ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
\v 43 ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
\v 44 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
\s5
\v 45 ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
\v 46 ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
\s5
\p
\v 47 << <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
\v 48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
\s5
\v 49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
\v 50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
\s5
\v 51 ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
\v 52 ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
\s5
\v 53 ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
\v 54 ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
\v 55 ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು> >> ಎಂದು ಹೇಳಿದನು.
\s5
\c 26
\s ವಿಗ್ರಹಾರಾಧನೆಯನ್ನು ಮಾಡಬಾರದೆಂಬ ನಿಯಮ
\p
\v 1 <<ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
\v 2 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
\s ವಿಧೇಯತೆ ತರುವ ಆಶೀರ್ವಾದ
\s5
\p
\v 3 <<ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,
\v 4 ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
\s5
\v 5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
\v 6 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
\s5
\v 7 ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.
\v 8 ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
\s5
\v 9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
\v 10 ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
\s5
\v 11 ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.
\v 12 ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.
\v 13 ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.
\s ಅವಿಧೇಯತೆಗೆ ಶಿಕ್ಷೆ
\s5
\p
\v 14 <<ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
\v 15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
\s5
\v 16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
\v 17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.
\s5
\p
\v 18 <<ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
\v 19 ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.
\v 20 ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.
\s5
\p
\v 21 <<ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
\v 22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.
\s5
\p
\v 23 <<ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,
\v 24 ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
\s5
\v 25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
\v 26 ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
\s5
\p
\v 27 <<ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
\v 28 ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
\s5
\v 29 ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.
\v 30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
\s5
\v 31 ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
\v 32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
\v 33 ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
\s5
\v 34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.
\v 35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.
\p
\v 36 <<ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
\s5
\v 37 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.
\v 38 ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.
\v 39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.
\s5
\p
\v 40 <<ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
\v 41 ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,
\v 42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.
\s5
\v 43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.
\s5
\v 44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
\v 45 ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು>> ಎಂಬುದೇ.
\s5
\p
\v 46 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.
\s5
\c 27
\s ಯೆಹೋವನಿಗೆ ತೀರಿಸಬೇಕಾದ ಹರಕೆಗಳು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
\s5
\v 3 ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ
\f +
\fr 27:3
\ft ಇದು ಯಾಜಕನಿಂದ ನಿರ್ಣಯಿಸಲ್ಪಟ್ಟ ಶೆಕೆಲ್. ಶೆಕೆಲ್ ಅಂದರೆ ಸುಮಾರು 6 ಕಿಲೋಗ್ರಾಂ.
\f* ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
\v 4 ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
\s5
\v 5 ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
\v 6 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
\s5
\v 7 ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
\v 8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
\s5
\p
\v 9 << <ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
\v 10 ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
\s5
\v 11 ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
\v 12 ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
\v 13 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
\s5
\p
\v 14 << <ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
\v 15 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
\s5
\p
\v 16 << <ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು
\f +
\fr 27:16
\ft ಆ ಹೊಲದಲ್ಲಿ ಸುಗ್ಗಿಯಿಂದ ಬಂದಷ್ಟು ಬೀಜದ ಬೆಲೆಯನ್ನು ನಿರ್ಣಯಿಸಬೇಕು.
\f* ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು
\f +
\fr 27:16
\ft ಎರಡು ಖಂಡುಗ. ಹೋಮೆರ್ ಅಂದರೆ 10 ಏಫಾ ಅಥವಾ 300 ಕಿಲೋಗ್ರಾಂ.
\f* ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
\s5
\v 17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
\v 18 ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
\s5
\v 19 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
\v 20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
\v 21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
\s5
\p
\v 22 << <ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
\v 23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
\s5
\v 24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
\v 25
\f +
\fr 27:25
\ft ವಿಮೋ. 30:13 ನೋಡಿರಿ.
\f* ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
\s5
\p
\v 26 << <ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
\v 27 ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
\s5
\p
\v 28 << <ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
\v 29 ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
\s ಯೆಹೋವನಿಗೆ ಸಲ್ಲಿಸಬೇಕಾದ ದಶಮಾಂಶ
\s5
\p
\v 30 << <ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
\v 31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
\s5
\v 32 ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
\v 33 ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ> >> ಎಂದು ಹೇಳಿದನು.
\s5
\p
\v 34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.