kn_ulb/04-NUM.usfm

2713 lines
425 KiB
Plaintext

\id NUM - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಅರಣ್ಯಕಾಂಡ
\toc1 ಮೋಶೆಯ ಧರ್ಮಶಾಸ್ತ್ರದಲ್ಲಿ ಅರಣ್ಯಕಾಂಡ ಎಂಬ ಚತುರ್ಥಭಾಗವು
\toc2 ಅರಣ್ಯಕಾಂಡ
\toc3 num
\mt1 ಅರಣ್ಯಕಾಂಡ
\is ಗ್ರಂಥಕರ್ತೃತ್ವ
\ip ಸಾರ್ವತ್ರಿಕ ಯೆಹೂದ್ಯ ಮತ್ತು ಕ್ರೈಸ್ತ ಸಂಪ್ರದಾಯಗಳು ಅರಣ್ಯಕಾಂಡ ಪುಸ್ತಕದ ಗ್ರಂಥಕರ್ತೃತ್ವವು ಮೋಶೆಗೆ ಸೇರಿದ್ದೆನ್ನುತ್ತವೆ. ಪುಸ್ತಕವು ಅನೇಕ ಅಂಕಿಅಂಶಗಳು, ಜನಸಂಖ್ಯಾ ಎಣಿಕೆಗಳನ್ನು, ಕುಲಗಳ ಮತ್ತು ಯಾಜಕತ್ವದ ಪ್ರಮುಖ ವ್ಯಕ್ತಿಗಳನ್ನು ಮತ್ತು ಇತರ ಸಂಖ್ಯಾತ್ಮಕ ದತ್ತಾಂಶಗಳನ್ನು ಒಳಗೊಂಡಿದೆ. ಅರಣ್ಯಕಾಂಡ ಪುಸ್ತಕವು ವಿಮೋಚನೆಯಾದ ನಂತರದ 2 ನೇ ವರ್ಷದಿಂದ ಅಂದರೆ ಆ ಜನಾಂಗವು ಇನ್ನೂ ಸೀನಾಯಿ ಬೆಟ್ಟದ ಬಳಿಯಲ್ಲಿ ನೆಲೆಗೊಂಡಿರುವ ಸಮಯ ಮೊದಲುಗೊಂಡು ವಿಮೋಚನೆಯಾದ ನಂತರದ 40 ನೇ ವರ್ಷದವರೆಗೆ ಅಂದರೆ ವಾಗ್ದಾನ ದೇಶವನ್ನು ಪ್ರವೇಶಿಸಲು ಸಿದ್ಧವಾಗಿರುವ ಹೊಸ ಸಂತತಿಯವರೆಗಿರುವ 38 ವರ್ಷಗಳ ಕಾಲಾವಧಿಯನ್ನು ಒಳಗೊಂಡಿದೆ. ಇದಲ್ಲದೆ, ಈ ಪುಸ್ತಕವು ವಿಮೋಚನೆಯಾದ ನಂತರದ 2 ನೆಯ ಮತ್ತು 40 ನೆಯ ವರ್ಷಗಳಲ್ಲಿನ ಘಟನೆಗಳನ್ನು ಮಾತ್ರ ವಿವರಿಸುತ್ತದೆ, 38 ವರ್ಷಗಳ ಅಲೆದಾಡುವಿಕೆಯ ಕುರಿತು ಮೌನವಾಗಿದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಶ. 1446-1405 ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಹೊರಟುಬಂದ ಎರಡನೆಯ ವರ್ಷದಲ್ಲಿ, ಅವರು ಸೀನಾಯಿ ಬೆಟ್ಟದಲ್ಲಿ ಪಾಳೆಯ ಹಾಕಿಕೊಂಡಿದ್ದರು ಎಂಬುದರೊಂದಿಗೆ ಪುಸ್ತಕದ ಘಟನೆಗಳು ಪ್ರಾರಂಭವಾಗುತ್ತವೆ (1:1).
\is ಸ್ವೀಕೃತದಾರ
\ip ವಾಗ್ದಾನ ದೇಶದ ಕಡೆಗಿರುವ ತಮ್ಮ ಪ್ರಯಾಣವನ್ನು ದಾಖಲಿಸಲು ಅರಣ್ಯಕಾಂಡವನ್ನು ಇಸ್ರಾಯೇಲ್ ಜನರಿಗೆ ಬರೆಯಲಾಗಿದೆ, ಆದರೆ ಭವಿಷ್ಯದಲ್ಲಿ ಸತ್ಯವೇದವನ್ನು ಓದುವವರೆಲ್ಲರಿಗೆ ನಾವು ಪರಲೋಕದ ಕಡೆಗೆ ಪ್ರಯಾಣಿಸುವಾಗ ದೇವರು ನಮ್ಮೊಂದಿಗಿದ್ದಾನೆಂದು ಇದು ನೆನಪಿಸುತ್ತದೆ.
\is ಉದ್ದೇಶ
\ip ಎರಡನೆಯ ತಲೆಮಾರಿನವರು ವಾಗ್ದಾನ ದೇಶವನ್ನು (ಅರಣ್ಯಕಾಂಡ 33:2) ಪ್ರವೇಶಿಸಲು ಸಿದ್ಧರಾಗಿದ್ದಾಗ, ಆ ಸಂತಾನದವರು ದೇವರ ವಾಗ್ದಾನ ದೇಶವನ್ನು ನಂಬಿಕೆಯಿಂದ ಸ್ವಾಧೀನಮಾಡಿಕೊಳ್ಳುವಂತೆ ಪ್ರೋತ್ಸಾಹಿಸಲು ಮೋಶೆಯು ಅರಣ್ಯಕಾಂಡವನ್ನು ಬರೆದನು. ಅರಣ್ಯಕಾಂಡವು ದೇವರ ಬೇಷರತ್ತಾದ ನಂಬಿಗಸ್ತಿಕೆಯನ್ನು ಆ ಜನಾಂಗದವರಿಗೆ ತೋರಿಸುತ್ತದೆ. ಮೊದಲ ತಲೆಮಾರಿನವರು ಒಡಂಬಡಿಕೆಯ ಆಶೀರ್ವಾದವನ್ನು ತಿರಸ್ಕರಿಸಿದಾಗ್ಯೂ, ದೇವರು ಒಡಂಬಡಿಕೆಗೆ ನಂಬಿಗಸ್ತನಾಗಿದ್ದಾನೆ. ಅವರ ದೂರುಗಳ ಮತ್ತು ದ್ರೋಹವನ್ನು ಹೊರತುಪಡಿಸಿ, ಆತನು ಆ ಜನಾಂಗವನ್ನು ಆಶೀರ್ವದಿಸುತ್ತಾನೆ ಮತ್ತು ಆತನು ತನ್ನ ವಾಗ್ದಾನ ದೇಶವನ್ನು ಎರಡನೇ ತಲೆಮಾರಿನವರಿಗೆ ಕೊಟ್ಟು ವಾಗ್ದಾನವನ್ನು ನೆರವೇರಿಸುತ್ತಾನೆ.
\is ಮುಖ್ಯಾಂಶ
\ip ಪ್ರಯಾಣಗಳು
\iot ಪರಿವಿಡಿ
\io1 1. ವಾಗ್ದಾನ ದೇಶಕ್ಕೆ ಹೊರಡುವ ಸಿದ್ಧತೆ (1:1—10:10)
\io1 2. ಸೀನಾಯಿಂದ ಕಾದೇಶ್ಗೆ ಪ್ರಯಾಣ (10:11—12:16)
\io1 3. ದ್ರೋಹದ ಪರಿಣಾಮವಾಗಿ ವಿಳಂಬ (13:1—20:13)
\io1 4. ಕಾದೇಶ್ನಿಂದ ಮೋವಾಬಿನ ಬಯಲು ಪ್ರದೇಶಕ್ಕೆ ಪ್ರಯಾಣ (20:14—22:1)
\io1 5. ಮೋವಾಬಿನಲ್ಲಿರುವ ಇಸ್ರಾಯೇಲರು, ವಾಗ್ದಾನ ದೇಶವನ್ನು ಸ್ವಾಧೀನಮಾಡಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ (22:2—32:42)
\io1 6. ವಿವಿಧ ವಿಷಯಗಳೊಂದಿಗೆ ವ್ಯವಹರಿಸುವ ಅನುಬಂಧಗಳು (ಅಧ್ಯಾಯ 33—36)
\s5
\c 1
\s1 ಮೊದಲನೆಯ ಜನಗಣತಿ
\p
\v 1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
\v 2 <<ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
\v 3 ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಸೈನ್ಯಸೈನ್ಯವಾಗಿ ನೀನೂ ಮತ್ತು ಆರೋನನೂ ಲೆಕ್ಕಹಾಕಬೇಕು.
\s5
\v 4 ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
\v 5 ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ:
\q ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
\q
\v 6 ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
\s5
\q
\v 7 ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
\q1
\v 8 ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
\q1
\v 9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
\s5
\q1
\v 10 ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ,
\q1 ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
\q1
\v 11 ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
\s5
\q1
\v 12 ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
\q1
\v 13 ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
\q1
\v 14 ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
\q1
\v 15 ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.>>
\s5
\p
\v 16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ
\f +
\fr 1:16
\ft ಸಹಸ್ರಾಧಿಪತಿಗಳು.
\f* ಪ್ರಮುಖರು.
\s5
\p
\v 17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
\v 18 ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
\v 19 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.
\s5
\p
\v 20 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
\v 21 ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
\s5
\p
\v 22 ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 23 ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
\s5
\p
\v 24 ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
\v 25 ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
\s5
\p
\v 26 ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 27 ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
\s5
\p
\v 28 ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 29 ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
\s5
\p
\v 30 ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 31 ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
\s5
\p
\v 32 ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 33 ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
\s5
\p
\v 34 ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 35 ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
\s5
\p
\v 36 ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 37 ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
\s5
\p
\v 38 ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 39 ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
\s5
\p
\v 40 ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 41 ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
\s5
\p
\v 42 ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
\v 43 ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
\s5
\p
\v 44 ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
\v 45 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
\v 46 ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
\s5
\p
\v 47 ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
\v 48 ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
\v 49 <<ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
\s5
\v 50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
\s5
\v 51 ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
\v 52 ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
\s5
\v 53 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.>>
\v 54 ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
\s5
\c 2
\s ಇಸ್ರಾಯೇಲರು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ
\p
\v 1 ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,
\v 2 <<ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.>>
\s5
\p
\v 3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
\v 4 ಅವನ ಸೈನಿಕರ ಸಂಖ್ಯೆ 74,600 ಮಂದಿ.
\s5
\p
\v 5 ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
\v 6 ಅವನ ಸೈನಿಕರ ಸಂಖ್ಯೆ 54,400 ಮಂದಿ.
\s5
\p
\v 7 ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
\v 8 ಅವನ ಸೈನಿಕರ ಸಂಖ್ಯೆ 57,400 ಮಂದಿ.
\s5
\p
\v 9 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
\s5
\p
\v 10 ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
\v 11 ಅವನ ಸೈನಿಕರ ಸಂಖ್ಯೆ 46,500 ಮಂದಿ.
\s5
\p
\v 12 ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
\v 13 ಅವನ ಸೈನಿಕರ ಸಂಖ್ಯೆ 59,300 ಮಂದಿ.
\s5
\p
\v 14 ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
\v 15 ಅವನ ಸೈನಿಕರ ಸಂಖ್ಯೆ 45,650 ಮಂದಿ.
\s5
\p
\v 16 ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
\s5
\p
\v 17 ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
\s5
\p
\v 18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
\v 19 ಅವನ ಸೈನಿಕರ ಸಂಖ್ಯೆ 40,500 ಮಂದಿ.
\s5
\p
\v 20 ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
\v 21 ಅವನ ಸೈನಿಕರ ಸಂಖ್ಯೆ 32,200 ಮಂದಿ.
\s5
\p
\v 22 ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
\v 23 ಅವನ ಸೈನಿಕರ ಸಂಖ್ಯೆ 35,400 ಮಂದಿ.
\s5
\p
\v 24 ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.
\s5
\p
\v 25 ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
\v 26 ಅವನ ಸೈನಿಕರ ಸಂಖ್ಯೆ 62,700 ಮಂದಿ.
\s5
\p
\v 27 ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
\v 28 ಅವನ ಸೈನಿಕರ ಸಂಖ್ಯೆ 41,500 ಮಂದಿ.
\s5
\p
\v 29 ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
\v 30 ಅವನ ಸೈನಿಕರ ಸಂಖ್ಯೆ 53,400 ಮಂದಿ.
\s5
\p
\v 31 ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
\s5
\p
\v 32 ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
\v 33 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.
\s5
\p
\v 34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.
\s5
\c 3
\s ಆರೋನನ ಮಕ್ಕಳ ವಿವರಣೆ
\p
\v 1 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
\v 2 ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.
\s5
\p
\v 3 ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.
\v 4 ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.
\s ಯಾಜಕರಿಗೆ ನೆರವಾಗಲು ಲೇವಿಯರನ್ನು ನೇಮಿಸಿದ್ದು
\s5
\p
\v 5 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
\v 6 <<ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.
\s5
\p
\v 7 <<ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.
\v 8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.
\s5
\p
\v 9 <<ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.
\v 10 ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು>> ಎಂದು ಹೇಳಿದನು.
\s ಜೇಷ್ಠ ಪುತ್ರರ ಸ್ಥಾನಮಾನ
\s5
\p
\v 11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,
\v 12 <<ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.
\v 13 ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು>> ಎಂದು ಹೇಳಿದನು.
\s ಲೇವಿಯರ ಎಣಿಕೆ
\s5
\p
\v 14 ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 15 <<ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು>> ಎಂದು ಆಜ್ಞಾಪಿಸಿದನು.
\v 16 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.
\s5
\p
\v 17 ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.
\v 18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.
\v 19 ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.
\v 20 ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.
\s5
\p
\v 21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.
\v 22 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.
\v 23 ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
\s5
\p
\v 24 ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.
\v 25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,
\v 26 ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.
\s5
\p
\v 27 ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.
\v 28 ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.
\v 29 ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
\s5
\p
\v 30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.
\v 31 ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
\v 32 ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.
\s5
\p
\v 33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.
\v 34 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.
\v 35 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
\s5
\p
\v 36 ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
\v 37 ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.
\s5
\p
\v 38 ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
\v 39 ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
\s ಯೆಹೋವನು ಲೇವಿಯರನ್ನು ತನ್ನ ಸೇವೆಗೆ ಆಯ್ಕೆ ಮಾಡಿಕೊಂಡದ್ದು
\s5
\p
\v 40 ಇದಲ್ಲದೆ ಯೆಹೋವನು ಮೋಶೆಗೆ, <<ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.
\v 41 ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು>> ಎಂದನು.
\s5
\p
\v 42 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.
\v 43 ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.
\s5
\p
\v 44 ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 45 <<ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.
\s5
\p
\v 46 <<ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.
\v 47 ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.
\v 48 ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು>> ಎಂದನು.
\p
\v 49 ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.
\v 50 ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
\v 51 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.
\s5
\c 4
\s ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು
\p
\v 1 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,
\v 2 <<ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
\v 3 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.
\v 4 ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.
\s5
\v 5 ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,
\v 6 ಅದರ ಮೇಲೆ
\f +
\fr 4:6
\ft ವಿಮೋ. 25:5 ನೋಡಿರಿ. ಕಡಲಪ್ರಾಣಿಯ ತೊಗಲನ್ನೂ.
\f* ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
\s5
\v 7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.
\v 8 ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
\s5
\v 9 ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
\v 10 ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
\v 11 ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
\s5
\v 12 ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
\v 13 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.
\v 14 ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
\s5
\v 15 ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
\v 16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.>>
\s5
\p
\v 17 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 18 <<ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
\v 19 ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
\v 20 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು>> ಎಂದನು.
\s ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು
\s5
\p
\v 21 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 22 <<ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
\v 23 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.
\s5
\v 24 ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;
\v 25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
\v 26 ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
\s5
\v 27 ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
\v 28 ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.
\s ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು
\s5
\p
\v 29 <<ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
\v 30 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.
\s5
\v 31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
\v 32 ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
\s5
\v 33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು>> ಎಂದನು.
\s ಲೇವಿ ಗೋತ್ರಕುಟುಂಬಗಳ ಲೆಕ್ಕ
\s5
\p
\v 34 ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
\v 35 ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
\v 36 ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
\s5
\v 37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
\s5
\v 38 ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
\v 39 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.
\v 40 ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
\s5
\v 41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
\s5
\v 42 ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
\v 43 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
\v 44 ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
\s5
\v 45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
\s5
\v 46 ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
\v 47 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
\v 48 ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
\s5
\v 49 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
\s5
\c 5
\s ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂಬ ನಿಯಮ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
\v 3 ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.>>
\v 4 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
\s ಮೋಸದಿಂದ ಪಡೆದುದನ್ನು ಹಿಂತಿರುಗಿಸಬೇಕೆಂಬ ನಿಯಮ
\s5
\p
\v 5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 6 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
\v 7 ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.
\s5
\p
\v 8 <<ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
\v 9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
\v 10 ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.>>
\s ಅಪನಂಬಿಗಸ್ತ ಪತ್ನಿಯ ಪರಿಹಾರ
\s5
\p
\v 11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 12 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: <ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
\s5
\v 13 ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
\v 14 ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
\s5
\v 15 ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
\s5
\p
\v 16 << <ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
\v 17 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
\s5
\v 18 ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
\v 19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, <<ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
\s5
\v 20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,>>
\v 21 <<ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ
\f +
\fr 5:21
\ft ಗರ್ಭಸ್ರಾವ ಅಥವಾ ಬಂಜೆ.
\f* ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
\v 22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.>> ಅದಕ್ಕೆ ಆ ಸ್ತ್ರೀಯು, <<ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ>> ಎಂದು ಹೇಳಬೇಕು.
\s5
\p
\v 23 << <ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
\s5
\v 24 ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
\v 25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
\v 26 ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.
\s5
\v 27 ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
\v 28 ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
\s5
\v 29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.
\v 30 ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ
\f +
\fr 5:30
\ft ಅಥವಾ ಯಾಜಕನು.
\f* ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
\s5
\v 31 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.> >>
\s5
\c 6
\s ನಾಜೀರನ ವ್ರತ ನಿಯಮ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ
\f +
\fr 6:2
\ft ಯೆಹೋವನಿಗಾಗಿ ಪ್ರತ್ಯೇಕಿಸಲ್ಪಟ್ಟವನು ಅಥವಾ ಪ್ರತಿಷ್ಠಿಸಲ್ಪಟ್ಟವನು.
\f* ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
\v 3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
\v 4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
\s5
\p
\v 5 <<ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
\s5
\v 6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
\v 7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
\v 8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
\s5
\v 9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
\s5
\v 10 ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
\v 11 ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
\s5
\v 12 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
\s5
\v 13 ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
\v 14 ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.
\v 15 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
\s5
\v 16 ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
\v 17 ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
\s5
\v 18 ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
\s5
\v 19 ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
\v 20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
\s5
\v 21 ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.>>
\s ಆಶೀರ್ವಾದ ವಚನ
\s5
\p
\v 22 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 23 <<ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, <ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
\v 24 ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
\s5
\v 25 ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
\v 26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ> ಎಂಬುದೇ.
\v 27 ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.>>
\s5
\c 7
\s ಗುಡಾರದ ಪ್ರತಿಷ್ಠೆಗೆ ಕೊಟ್ಟ ಕಾಣಿಕೆಯ ವಿವರ
\p
\v 1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.
\v 2 ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.
\v 3 ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
\s5
\p
\v 4 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 5 <<ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು>> ಎಂದು ಆಜ್ಞಾಪಿಸಿದನು.
\s5
\p
\v 6 ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
\v 7 ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.
\v 8 ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.
\s5
\p
\v 9 ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
\s5
\p
\v 10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
\v 11 ಆಗ ಯೆಹೋವನು ಮೋಶೆಗೆ, <<ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು>> ಎಂದು ಆಜ್ಞಾಪಿಸಿದನು.
\s5
\p
\v 12 ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.
\v 13 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ [ತೊಲೆ] ತೂಕದ ಬೆಳ್ಳಿಯ ಒಂದು ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 14 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 15 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.
\v 16 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 17 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 18 ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು.
\v 19 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\s5
\p
\v 20 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\v 21 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 23 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 24 ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.
\v 25 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
\v 26 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 27 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 29 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 30 ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು.
\v 31 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 32 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\v 33 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 35 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 36 ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
\v 37 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 38 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು.
\s5
\p
\v 39 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 40 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 41 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 42 ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.
\v 43 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 44 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 45 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 46 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 47 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೆಗೂವೇಲನ ಮಗನಾದ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 48 ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
\v 49 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 50 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 51 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 52 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 53 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
\v 55 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 56 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 57 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 58 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 59 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
\s5
\p
\v 60 ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ಯೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು.
\v 61 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 62 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 63 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 64 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 65 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 66 ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.
\v 67 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 68 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 69 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 70 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 71 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
\s5
\p
\v 72 ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
\v 73 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 74 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 75 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 76 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 77 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
\s5
\p
\v 78 ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.
\v 79 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
\v 80 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
\s5
\p
\v 81 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
\v 82 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
\v 83 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
\s5
\p
\v 84 ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
\v 85 ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.
\v 86 ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.
\s5
\p
\v 87 ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.
\p
\v 88 ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
\s5
\p
\v 89 ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
\s5
\c 8
\s ದೇವಸ್ಥಾನದಲ್ಲಿನ ದೀಪಗಳನ್ನು ಹಚ್ಚುವ ಕ್ರಮ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:
\v 2 <<ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು>> ಎಂದು ಹೇಳಿದನು.
\s5
\p
\v 3 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
\v 4 ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.
\s ಲೇವಿಯರನ್ನು ಶುದ್ಧೀಕರಿಸಿ ಉದ್ಯೋಗಕ್ಕೆ ಸೇರಿಸಿದ್ದು
\s5
\p
\v 5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 6 <<ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.
\s5
\v 7 ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
\v 8 ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.
\s5
\v 9 ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.
\v 10 ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
\v 11 ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
\s5
\p
\v 12 <<ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
\v 13 ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
\s5
\v 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.
\p
\v 15 <<ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.
\s5
\v 16 ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
\v 17 ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.
\s5
\v 18 ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.
\v 19 ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.>>
\s5
\p
\v 20 ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
\v 21 ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
\s5
\p
\v 22 ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
\s5
\v 23 ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 24 <<ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.
\s5
\v 25 ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.
\v 26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.>>
\s5
\c 9
\s ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು
\p
\v 1 ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
\v 2 <<ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
\v 3 ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು>> ಎಂದು ಹೇಳಿದನು.
\s5
\p
\v 4 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.
\v 5 ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
\s5
\p
\v 6 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
\v 7 ಈ ಜನರು ಮೋಶೆಗೆ <<ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?>> ಎಂದು ಕೇಳಿದರು.
\p
\v 8 ಅದಕ್ಕೆ ಮೋಶೆ ಅವರಿಗೆ, <<ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ>> ಎಂದು ಹೇಳಿದನು.
\s5
\p
\v 9 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 10 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.>
\s5
\v 11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
\v 12 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
\s5
\v 13 ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
\p
\v 14 <<ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.>>
\s ಇಸ್ರಾಯೇಲರಿಗೆ ಮೇಘಸ್ತಂಭದ ಸೂಚನೆ
\s5
\p
\v 15 ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
\v 16 ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
\v 17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
\s5
\v 18 ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.
\v 19 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
\s5
\v 20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.
\v 21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.
\s5
\v 22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
\v 23 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.
\s5
\c 10
\s ದೇವಸ್ಥಾನದ ಬೆಳ್ಳಿಯ ತುತ್ತೂರಿಗಳು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
\v 2 <<ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
\s5
\v 3 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
\v 4 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
\v 5 ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
\s5
\v 6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
\v 7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
\p
\v 8 <<ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
\s5
\v 9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
\s5
\v 10 ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.>>
\s ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು
\s5
\p
\v 11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
\v 12 ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
\v 13 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
\s5
\p
\v 14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
\v 15 ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
\v 16 ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
\s5
\p
\v 17 ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
\v 18 ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
\v 19 ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
\v 20 ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
\s5
\p
\v 21 ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
\p
\v 22 ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
\v 23 ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
\v 24 ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
\s5
\p
\v 25 ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
\v 26 ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
\v 27 ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
\v 28 ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
\s ಯೆಹೋವನ ಮಂಜೂಷವು ಮುಂದಾಗಿ ಹೋದದ್ದು
\s5
\p
\v 29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, <<ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು>> ಎಂದು ಹೇಳಿದನು.
\p
\v 30 ಆದರೆ ಹೋಬಾಬನು ಮೋಶೆಗೆ, <<ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ>> ಎಂದು ಹೇಳಿದನು.
\s5
\p
\v 31 ಅದಕ್ಕೆ ಮೋಶೆಯು ಉತ್ತರವಾಗಿ, <<ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
\v 32 ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು>> ಎಂದು ಹೇಳಿದನು.
\s5
\p
\v 33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
\v 34 ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
\s5
\p
\v 35 ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ,
\q <<ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ>> ಎಂದು ಹೇಳುವನು.
\p
\v 36 ಅದು ನಿಂತಾಗ ಅವನು,
\q <<ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು>> ಎಂದು ಹೇಳುವನು.
\s5
\c 11
\s ತಬೇರದಲ್ಲಿ ಕಾಣಿಸಿಕೊಂಡ ಬೆಂಕಿ
\p
\v 1 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
\v 2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
\v 3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ <<
\f +
\fr 11:3
\ft ಬೆಂಕಿ ಉರಿಯುವುದು.
\f* ತಬೇರ>> ಎಂದು ಹೆಸರಾಯಿತು.
\s ಎಪ್ಪತ್ತುಮಂದಿ ಮುಖ್ಯಸ್ಥರ ಆಯ್ಕೆ
\s5
\p
\v 4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, <<ಮಾಂಸವು ನಮಗೆ ಹೇಗೆ ಸಿಕ್ಕೀತು?
\v 5 ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
\v 6 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ>> ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
\s5
\p
\v 7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
\v 8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
\s5
\v 9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
\p
\v 10 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
\s5
\v 11 ಆಗ ಮೋಶೆ ಯೆಹೋವನಿಗೆ, <<ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
\v 12 ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
\s5
\v 13 ಇವರು ನನ್ನ ಬಳಿಗೆ ಅಳುತ್ತಾ ಬಂದು, <ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು> ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
\v 14 ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
\v 15 ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ>> ಎಂದನು.
\s5
\p
\v 16 ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, <<ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
\v 17 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.>>
\s5
\p
\v 18 ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, <<ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, <ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ> ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
\v 19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
\v 20 ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, <ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ> ಎಂದು ಹೇಳು>> ಎಂದನು.
\s5
\p
\v 21 ಅದಕ್ಕೆ ಮೋಶೆ, <<ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, <ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ> ಎಂದು ಹೇಳಿದ್ದೀ.
\v 22 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?>> ಎಂದು ಕೇಳಿದನು.
\p
\v 23 ಯೆಹೋವನು ಮೋಶೆಗೆ, <<ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ>> ಎಂದು ಹೇಳಿದನು.
\s5
\p
\v 24 ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
\v 25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
\s5
\p
\v 26 ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
\v 27 ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, <<ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ>> ಎಂದು ತಿಳಿಸಿದನು.
\s5
\p
\v 28 ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, <<ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು>> ಎಂದು ಹೇಳಿದನು.
\p
\v 29 ಅದಕ್ಕೆ ಮೋಶೆ, <<ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು>> ಎಂದನು.
\v 30 ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
\s ದೇವರು ಲಾವಕ್ಕಿಗಳನ್ನು ಕಳುಹಿಸಿದ್ದು
\s5
\p
\v 31 ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
\v 32 ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ
\f +
\fr 11:32
\fq ಹೋಮೆರಿಗಿಂತ
\ft ಒಂದು ಹೋಮೆರ್ ಅಂದರೆ 2.37 ಲೀಟರ್.
\f* ಕಡಿಮೆ ಕೂಡಿಸಿಕೊಳ್ಳಲಿಲ್ಲ.
\f +
\fr 11:32
\fq ಕಡಿಮೆ ಕೂಡಿಸಿಕೊಳ್ಳಲಿಲ್ಲ.
\ft ಕಡಿಮೆ ಸಂಗ್ರಹಿಸಿದವರೂ ಸಹ ಸಾವಿರ ಕಿಲೋಗ್ರಾಂನಷ್ಟು ಸಂಗ್ರಹಿಸಿದರು.
\f* ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
\s5
\p
\v 33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
\v 34 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ <<
\f +
\fr 11:34
\ft ಅತ್ಯಾಶೆಪಟ್ಟವರ ಸಮಾಧಿ.
\f* ಕಿಬ್ರೋತ್ ಹತಾವಾ>> ಎಂದು ಹೆಸರಾಯಿತು.
\p
\v 35 ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
\s5
\c 12
\s ಮಿರ್ಯಾಮಳಿಗೆ ಉಂಟಾದ ತೊನ್ನು
\p
\v 1 ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
\v 2 ಅವರು, <<ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?>> ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
\v 3 ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
\s5
\p
\v 4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, <<ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು>> ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
\v 5 ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.
\s5
\p
\v 6 ಯೆಹೋವನು ಅವರಿಗೆ, <<ನನ್ನ ಮಾತನ್ನು ಕೇಳಿರಿ.
\q ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ
\q2 ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು,
\q2 ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
\q
\v 7 ನನ್ನ ಸೇವಕನಾದ ಮೋಶೆಯು ಅಂಥವನಲ್ಲ.
\q2 ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
\q
\v 8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ,
\q2 ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ.
\q2 ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು.
\q2 ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದನು.
\s5
\p
\v 9 ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.
\v 10 ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
\s5
\v 11 ಆಗ ಆರೋನನು ಮೋಶೆಗೆ, <<ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
\v 12 ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು>> ಎಂದು ಬೇಡಿದನು.
\s5
\v 13 ಆಗ ಮೋಶೆ ಯೆಹೋವನಿಗೆ, <<ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ>> ಎಂದು ಮೊರೆಯಿಟ್ಟನು.
\p
\v 14 ಅದಕ್ಕೆ ಯೆಹೋವನು ಮೋಶೆಗೆ, <<ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು>> ಎಂದು ಉತ್ತರಕೊಟ್ಟನು.
\v 15 ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
\s5
\v 16 ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.
\s5
\c 13
\s ಗೂಢಚಾರರನ್ನು ಕಾನಾನ್ ದೇಶಕ್ಕೆ ಕಳುಹಿಸಿದ್ದು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು>> ಎಂದು ಆಜ್ಞಾಪಿಸಿದನು.
\s5
\p
\v 3 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
\v 4 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
\li
\s5
\v 5 ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,
\li
\v 6 ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,
\li
\v 7 ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್,
\li
\v 8 ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,
\li
\s5
\v 9 ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,
\li
\v 10 ಜೆಬುಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್,
\li
\v 11 ಯೋಸೇಫ್ ಅಂದರೆ ಮನಸ್ಸೆ ಕುಲದ ಸೂಸೀಯನ ಮಗನಾದ ಗದ್ದೀ,
\li
\v 12 ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮೀಯೇಲ್,
\li
\s5
\v 13 ಆಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್,
\li
\v 14 ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ,
\li
\v 15 ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.
\p
\v 16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
\s5
\v 17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, <<ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.
\v 18 ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,
\v 19 ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?
\v 20 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು>> ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.
\s5
\p
\v 21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
\v 22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
\s5
\v 23 ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.
\v 24 ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ <<
\f +
\fr 13:24
\ft ದ್ರಾಕ್ಷಿಯ ಗೊಂಚಲು.
\f* ಎಷ್ಕೋಲ್>> ಎಂದು ಹೆಸರು ಉಂಟಾಯಿತು.
\s ಗೂಢಚಾರರು ಸಲ್ಲಿಸಿದ ವರದಿ
\s5
\p
\v 25 ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.
\v 26 ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
\s5
\v 27 ಅವರು ಮೋಶೆಗೆ, <<ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ
\f +
\fr 13:27
\ft ಬಹಳಷ್ಟು ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.
\v 28 ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.
\v 29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ>> ಎಂದು ತಿಳಿಸಿದರು.
\s5
\p
\v 30 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, <<ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ>> ಎಂದು ಹೇಳಿದನು.
\v 31 ಆದರೆ ಅವನ ಜೊತೆಯಲ್ಲಿ ಹೋದವರು, <<ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ>> ಎಂದು ಹೇಳಿದರು.
\s5
\p
\v 32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, <<ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
\v 33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ
\f +
\fr 13:33
\fq ನೆಫೀಲಿಯ
\ft ರಾಕ್ಷಸಾಕಾರದವರು.
\f* ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು>> ಎಂದು ಹೇಳಿದರು.
\s5
\c 14
\s ಜನರು ಮೋಶೆಯ ವಿರುದ್ಧ ತಿರುಗಿಬಿದ್ದು ನಾಶವಾದದ್ದು
\p
\v 1 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
\v 2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, <<ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
\v 3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ>> ಎಂದು ಮಾತನಾಡಿಕೊಂಡರು.
\s5
\v 4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, <<ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ>> ಎಂದು ಮಾತನಾಡಿಕೊಂಡರು.
\p
\v 5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
\s5
\v 6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
\v 7 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, <<ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
\v 8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
\s5
\v 9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ>> ಎಂದರು.
\v 10 ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
\s5
\p
\v 11 ಯೆಹೋವನು ಮೋಶೆಗೆ, <<ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
\v 12 ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು>> ಎಂದು ಹೇಳಿದನು.
\s5
\v 13 ಅದಕ್ಕೆ ಮೋಶೆಯು ಯೆಹೋವನಿಗೆ, <<ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
\v 14 ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
\s5
\v 15 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
\p
\v 16 << <ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು> ಎಂದು ಮಾತನಾಡಿಕೊಳ್ಳುವರು.
\s5
\v 17 ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
\v 18 <ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು> ಎಂದು ಹೇಳಿದ್ದಿ.
\v 19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ>> ಎಂದು ಪ್ರಾರ್ಥಿಸಿದನು.
\s5
\p
\v 20 ಅದಕ್ಕೆ ಯೆಹೋವನು, <<ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
\v 21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
\v 22 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
\s5
\v 23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
\v 24 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
\v 25 ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು>> ಎಂದು ಹೇಳಿದನು.
\s5
\p
\v 26 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
\v 27 <<ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
\s5
\v 28 ನೀನು ಅವರಿಗೆ ಹೀಗೆ ಹೇಳಬೇಕು, <ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
\v 29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
\v 30 ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
\s5
\v 31 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
\v 32 ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
\v 33 ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
\s5
\v 34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
\v 35 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು> >> ಎಂದು ಹೇಳಿದನು.
\s5
\p
\v 36 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
\v 37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
\v 38 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
\s5
\p
\v 39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
\v 40 ಮರುದಿನ ಬೆಳಿಗ್ಗೆ ಜನರು ಎದ್ದು, <<ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ>> ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
\s5
\p
\v 41 ಆದರೆ ಮೋಶೆ ಅವರಿಗೆ, <<ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
\v 42 ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
\v 43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ>> ಎಂದು ಹೇಳಿದನು.
\s5
\p
\v 44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
\v 45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
\s5
\c 15
\s ಯಜ್ಞಪಶುಗಳೊಡನೆ ಸಮರ್ಪಿಸಬೇಕಾದ ನೈವೇದ್ಯದ್ರವ್ಯಗಳ ವಿವರಣೆ
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
\v 3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
\s5
\v 4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
\v 5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
\s5
\p
\v 6 << <ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
\v 7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
\s5
\p
\v 8 << <ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
\v 9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
\v 10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
\s5
\p
\v 11 << <ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
\v 12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
\v 13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
\s5
\v 14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
\v 15 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
\v 16 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.> >>
\s ಯಾಜಕರಿಗೆ ಪ್ರತ್ಯೇಕಿಸಬೇಕಾದ ರೊಟ್ಟಿಯ ನಿಯಮ
\s5
\p
\v 17 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 18 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
\v 19 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
\s5
\v 20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
\s ತಿಳಿಯದೆ ಮಾಡಿದ ತಪ್ಪಿಗಾಗಿ ದೋಷಪರಿಹಾರವನ್ನು ಮಾಡುವ ವಿಧಾನ
\p
\v 21 << <ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
\s5
\v 22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
\v 23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
\v 24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
\s5
\v 25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
\v 26 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
\s5
\p
\v 27 << <ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
\v 28 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
\v 29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
\s5
\v 30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
\v 31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.> >>
\s ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು
\s5
\p
\v 32 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
\v 33 ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
\v 34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
\s5
\v 35 ತರುವಾಯ ಯೆಹೋವನು ಮೋಶೆಗೆ, <<ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು>> ಎಂದು ಆಜ್ಞಾಪಿಸಿದನು.
\v 36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
\s ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು
\s5
\p
\v 37 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 38 <<ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
\v 39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
\s5
\v 40 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
\v 41 ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.>>
\s5
\c 16
\s ಕೋರಹನ, ದಾತಾನ್, ಅಬೀರಾಮರ, ವಿರೋಧ
\p
\v 1 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಕರೆದುಕೊಂಡು, ಕೆಲವು ಜನರನ್ನು ಕೂಡಿಸಿದರು.
\v 2 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
\v 3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, <<ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?>> ಎಂದು ಕೇಳಿದರು.
\s5
\p
\v 4 ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
\v 5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, <<ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
\s5
\v 6 ನೀವು ಇದನ್ನು ಮಾಡಿರಿ- ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
\v 7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು>> ಎಂದು ಹೇಳಿದನು.
\s5
\p
\v 8 ಪುನಃ ಮೋಶೆ ಕೋರಹನಿಗೆ, <<ಲೇವಿಯ ಸಂತಾನದವರೇ, ಈಗ ಕೇಳಿರಿ,
\v 9 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
\v 10 ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
\v 11 ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?>> ಎಂದು ಕೇಳಿದನು.
\s5
\p
\v 12 ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, <<ನಾವು ಬರುವುದಿಲ್ಲ.
\v 13 ನೀನು
\f +
\fr 16:13
\ft ಬಹಳಷ್ಟು ಫಲವತ್ತಾದ ದೇಶ.
\f* ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
\v 14 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ;
\f +
\fr 16:14
\ft ಮೂಲ ಭಾಷೆಯಲ್ಲಿ ಈ ಜನರ ಕಣ್ಣುಗಳನ್ನು ಕಿತ್ತುಹಾಕಬೇಕೆಂದಿದ್ದಿಯೋ?
\f* ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ>> ಎಂದು ಹೇಳಿದನು.
\s5
\p
\v 15 ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, <<ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ>> ಎಂದು ಮನವಿಮಾಡಿದನು.
\p
\v 16 ಮೋಶೆ ಕೋರಹನಿಗೆ, <<ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
\v 17 ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು>> ಎಂದು ಹೇಳಿದನು.
\s5
\v 18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
\v 19 ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
\s5
\v 20 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 21 <<ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ>> ಎಂದು ಆಜ್ಞಾಪಿಸಿದನು.
\v 22 ಅವರು ಬೋರಲುಬಿದ್ದು, <<ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?>> ಎಂದು ಬಿನ್ನೈಸಿದನು.
\s5
\p
\v 23 ಆಗ ಯೆಹೋವನು ಮೋಶೆಗೆ ಉತ್ತರವಾಗಿ,
\v 24 <<ಇಸ್ರಾಯೇಲರ ಸಮೂಹದವರಿಗೆ, <ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು> ಎಂದು ಅವರಿಗೆ ಆಜ್ಞಾಪಿಸು>> ಎಂದು ಹೇಳಿದನು.
\s5
\p
\v 25 ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
\v 26 ಅವನು ಇಸ್ರಾಯೇಲರ ಸಮೂಹದವರಿಗೆ, <<ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು>> ಎಂದು ಹೇಳಿದನು.
\v 27 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
\s5
\p
\v 28 ಆಗ ಮೋಶೆ ಜನರಿಗೆ, <<ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
\v 29 ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
\v 30 ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು>> ಎಂದು ಹೇಳಿದನು.
\s5
\v 31 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
\v 32 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
\s5
\v 33 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.
\v 34 ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, <<ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!>> ಎಂದು ಹೇಳಿ ಓಡಿಹೋದರು.
\p
\v 35 ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
\s5
\v 36 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
\v 37 <<ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
\v 38 ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು>> ಎಂದು ಹೇಳಿದನು.
\s5
\v 39 ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
\v 40 ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
\s ಜನರು ಗುಣುಗುಟ್ಟಿ ಘೋರವ್ಯಾಧಿಯಿಂದ ಸತ್ತದ್ದು
\s5
\p
\v 41 ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, <<ನೀವೇ ಯೆಹೋವನ ಜನರನ್ನು ಸಾಯಿಸಿದಿರಿ>> ಎಂದು ಹೇಳುವವರಾದರು.
\v 42 ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
\v 43 ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
\s5
\v 44 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 45 <<ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ>> ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
\v 46 ಮೋಶೆಯು ಆರೋನನಿಗೆ, <<ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು>> ಎಂದು ಹೇಳಿದನು.
\s5
\v 47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
\v 48 ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
\s5
\v 49 ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
\v 50 ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
\s5
\c 17
\s ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು
\p
\v 1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರ ಸಂಗಡ ಮಾತನಾಡಿ, <ಅವರ ಪೂರ್ವಿಕರ ಒಂದೊಂದು ಕಾಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
\s5
\v 3 ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
\v 4 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ
\f +
\fr 17:4
\ft ಮಂಜೂಷದ ಪೆಟ್ಟಿಗೆ, ವಿಮೋ 25:22; 32:15.
\f* ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
\v 5 ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು> >> ಎಂದನು.
\s5
\p
\v 6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
\v 7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
\s5
\v 8 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
\v 9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
\s5
\p
\v 10 ತರುವಾಯ ಯೆಹೋವನು ಮೋಶೆಗೆ, <<ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟುವುದನ್ನು ಸಂಪೂರ್ಣವಾಗಿ ನಿಲ್ಲಿಸಿಬಿಡಬೇಕು>> ಎಂದು ಆಜ್ಞಾಪಿಸಿದನು.
\v 11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
\s5
\p
\v 12 ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, <<ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
\v 13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?>> ಎಂದು ಕೇಳಿದರು.
\s5
\c 18
\s ಯಾಜಕರ ಮತ್ತು ಲೇವಿಯರ ಕರ್ತವ್ಯ
\p
\v 1 ಆಗ ಯೆಹೋವನು ಆರೋನನಿಗೆ, <<ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
\v 2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
\s5
\v 3 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
\v 4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
\v 5 ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
\s5
\v 6 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
\v 7 ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು>> ಎಂದನು.
\s ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು
\s5
\p
\v 8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, <<ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
\v 9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
\s5
\v 10 ನೀವು
\f +
\fr 18:10
\ft ಅಥವಾ ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
\f* ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
\p
\v 11 <<ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
\s5
\v 12 ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
\v 13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
\s5
\v 14 ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
\v 15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
\v 16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ
\f +
\fr 18:16
\ft 55 ಗ್ರಾಂ ಬೆಳ್ಳಿ.
\f* ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
\s5
\p
\v 17 <<ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
\v 18 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
\s5
\v 19 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು>> ಎಂದು ಹೇಳಿದನು.
\v 20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, <<ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.
\s ಲೇವಿಯರ ಪಾಲು
\s5
\p
\v 21 <<ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
\v 22 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
\s5
\v 23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
\v 24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ <ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ> >> ಎಂದು ಹೇಳಿದ ಮಾತಿಗೆ ಇದೇ ಕಾರಣ.
\s5
\p
\v 25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 26 <<ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
\v 27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
\s5
\v 28 ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
\v 29 ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು>
\s5
\v 30 ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, <ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
\v 31 ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
\v 32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ> >> ಎಂದನು.
\s5
\c 19
\s ಮನುಷ್ಯನ ಶವವು ಸೋಂಕಿದಾಗ ಮಾಡಬೇಕಾದ ಆಚಾರವನ್ನು ಕುರಿತದ್ದು
\p
\v 1 ಯೆಹೋವನು ಮೋಶೆ ಮತ್ತು ಆರೋನರಿಗೆ ಹೀಗೆ ಆಜ್ಞಾಪಿಸಿದನು,
\v 2 <<ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
\s5
\v 3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.
\v 4 ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
\v 5 ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
\v 6 ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
\s5
\v 7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
\v 8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
\s5
\p
\v 9 <<ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
\v 10 ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
\s5
\p
\v 11 <<ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
\v 12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
\v 13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
\s5
\p
\v 14 <<ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
\v 15 ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
\v 16 ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
\s5
\p
\v 17 <<ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
\v 18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
\v 19 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.
\s5
\v 20 ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.
\p
\v 21 <<ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
\v 22 ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.>>
\s5
\c 20
\s ಯೆಹೋವನು ಬಂಡೆಯೊಳಗಿಂದ ಇಸ್ರಾಯೇಲರಿಗೋಸ್ಕರ ನೀರು ಬರಮಾಡಿದ್ದು
\p
\v 1 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು <<ಚಿನ್>> ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
\s5
\p
\v 2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
\v 3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, <<ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
\s5
\v 4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?
\v 5 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ>> ಎಂದು ಹೇಳುತ್ತಿದ್ದರು.
\s5
\p
\v 6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
\s5
\v 7 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,
\v 8 <<ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು>> ಎಂದು ಹೇಳಿದನು.
\p
\v 9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
\s5
\v 10 ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, <<ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?>>
\v 11 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
\s5
\p
\v 12 ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, <<ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು>> ಎಂದು ಹೇಳಿದನು.
\p
\v 13 ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ <<
\f +
\fr 20:13
\ft ಜಗಳ ಅಥವಾ ವಾಗ್ವಾದ.
\f* ಮೆರೀಬಾ>> ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
\s ಎದೋಮ್ಯರು ದೇಶವನ್ನು ದಾಟಲು ನಿರಾಕರಣೆ
\s5
\p
\v 14 ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, <<ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
\v 15 ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
\v 16 ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
\s5
\v 17 ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ>> ಎಂದು ಹೇಳಿಸಿದನು.
\s5
\p
\v 18 ಆದರೆ ಎದೋಮ್ಯರು, <<ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ>> ಎಂದು ಉತ್ತರಕೊಟ್ಟರು.
\p
\v 19 ಅದಕ್ಕೆ ಇಸ್ರಾಯೇಲರು, <<ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು>> ಎಂದು ಹೇಳಿದರು.
\s5
\p
\v 20 ಆದರೆ ಎದೋಮ್ಯರು, <<ನೀವು ದಾಟಲೇ ಬಾರದು>> ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
\v 21 ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
\s ಆರೋನನು ಹೋರ್ ಬೆಟ್ಟದ ಮೇಲೆ ಸತ್ತದ್ದು
\s5
\p
\v 22 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
\v 23 ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
\v 24 <<ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
\s5
\v 25 ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
\v 26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು>> ಎಂದು ಆಜ್ಞಾಪಿಸಿದನು.
\s5
\p
\v 27 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
\v 28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
\v 29 ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
\s5
\c 21
\s ಇಸ್ರಾಯೇಲರು ಅರಾದಿನ ಅರಸನನ್ನು ಜಯಿಸಿದ್ದು
\p
\v 1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
\v 2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, <<ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ>> ಎಂದು ಹೇಳಿದರು.
\v 3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ
\f +
\fr 21:3
\ft ಹೊರ್ಮಾ ಅಂದರೆ ನಾಶ.
\f* ಹೊರ್ಮಾ ಎಂದು ಹೆಸರಾಯಿತು.
\s ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು
\s5
\p
\v 4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
\v 5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, <<ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು>> ಎಂದು ಹೇಳಿದರು.
\s5
\v 6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
\v 7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, <<ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು>> ಎಂದು ಬೇಡಿಕೊಂಡರು.
\s5
\v 8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, <<ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು>> ಎಂದು ಆಜ್ಞಾಪಿಸಿದನು.
\v 9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
\s ಮೋವಾಬ್ ಕಡೆಗೆ ಪ್ರಯಾಣ
\s5
\p
\v 10 ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
\v 11 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
\s5
\v 12 ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
\v 13 ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
\s5
\p
\v 14 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ,
\q <<ಸೂಫಕ್ಕೆ ಸೇರಿದ ವಾಹೇಬನ್ನೂ,
\q ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
\q
\v 15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ
\q ಕೊರಕಲನ್ನೂ ದಾಟಿದ್ದಾಯಿತು>> ಎಂದು ಬರೆದದೆ.
\s5
\p
\v 16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, <<ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು>> ಅಂದನು.
\s5
\p
\v 17 ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು;
\q <<ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
\q
\v 18 ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ,
\q ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ>> ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
\s5
\p
\v 19 ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
\v 20 ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
\s ಸೀಹೋನ್, ಓಗ್ ಅರಸರ ಸೋಲು
\s5
\p
\v 21 ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
\v 22 <<ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು>> ಎಂದು ಹೇಳಿದರು.
\v 23 ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
\s5
\v 24 ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
\v 25 ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
\v 26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
\s5
\p
\v 27 ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ;
\q2 <<ಹೆಷ್ಬೋನಿಗೆ ಬನ್ನಿರಿ.
\q2 ಅದನ್ನು ಹೊಸದಾಗಿ ಕಟ್ಟಬೇಕು,
\q2 ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
\q
\v 28 ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು,
\q2 ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ
\q2 ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
\s5
\q
\v 29 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ!
\q2 ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು.
\q2 ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು.
\q2 ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ.
\q2 ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
\q
\v 30 ನಾವು ಅವರನ್ನು ಬಾಣದಿಂದ ಹೊಡೆದೆವು;
\q2
\f +
\fr 21:30
\ft ಹೆಷ್ಬೋನಿನಿಂದ ದೀಬೋನಿವರೆಗೂ ನಾವು ಕಲ್ಲೆಸೆದು ಅವರೆಲ್ಲರನ್ನು ಕೊಂದೆವು.
\f* ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು.
\q2 ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.>>
\s5
\p
\v 31 ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
\v 32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
\s5
\p
\v 33 ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
\v 34 ಯೆಹೋವನು ಮೋಶೆಗೆ, <<ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು>> ಎಂದು ಹೇಳಿದನು.
\v 35 ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
\s5
\c 22
\s ಬಾಲಾಕನು ಬಿಳಾಮನನ್ನು ಕರೆಯಿಸಿದ್ದು
\p
\v 1 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
\s5
\p
\v 2 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
\v 3 ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
\p
\v 4 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, <<ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ>> ಎಂದು ಹೇಳಿದರು.
\s5
\v 5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, <<ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
\v 6 ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು>> ಎಂದು ಕಳುಹಿಸಿದನು.
\s5
\p
\v 7 ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
\v 8 ಬಿಳಾಮನು ಅವರಿಗೆ, <<ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು>> ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
\s5
\p
\v 9 ದೇವರು ಬಿಳಾಮನಿಗೆ, <<ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?>> ಎಂದು ಕೇಳಲು,
\v 10 ಬಿಳಾಮನು ದೇವರಿಗೆ, <<ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
\v 11 <ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು> >> ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
\s5
\p
\v 12 ಅದಕ್ಕೆ ದೇವರು ಬಿಳಾಮನಿಗೆ, <<ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು>> ಎಂದು ಹೇಳಿದನು.
\p
\v 13 ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, <<ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ>> ಎಂದು ಹೇಳಿದನು.
\p
\v 14 ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, <<ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ>> ಎಂದು ತಿಳಿಸಿದರು.
\s5
\v 15 ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.
\v 16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, <<ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, <ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.
\v 17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು> >> ಎಂದನು.
\s5
\p
\v 18 ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, <<ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
\v 19 ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ>> ಎಂದು ಉತ್ತರಕೊಟ್ಟನು.
\v 20 ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, <<ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು>> ಎಂದನು.
\s ಬಿಳಾಮನ ಕತ್ತೆ ಮಾತನಾಡಿದ್ದು
\s5
\p
\v 21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
\v 22 ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
\v 23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
\s5
\p
\v 24 ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
\v 25 ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
\s5
\p
\v 26 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
\v 27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
\s5
\v 28 ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, <<ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ>> ಎಂದು ಕೇಳಿತು.
\p
\v 29 ಅದಕ್ಕೆ ಬಿಳಾಮನು ಕತ್ತೆಗೆ, <<ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ>> ಎಂದನು.
\v 30 ಅದಕ್ಕೆ ಆ ಕತ್ತೆಯು ಬಿಳಾಮನಿಗೆ, <<ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?>> ಎಂದಾಗ ಬಿಳಾಮನು <<ಇಲ್ಲ>> ಎಂದನು.
\s5
\p
\v 31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.
\v 32 ಯೆಹೋವನ ದೂತನು ಅವನಿಗೆ, <<ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
\v 33 ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು>> ಎಂದು ಹೇಳಿದನು.
\s5
\p
\v 34 ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, <<ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ>> ಎಂದನು.
\v 35 ಯೆಹೋವನ ದೂತನು ಬಿಳಾಮನಿಗೆ, <<ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು>> ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
\s ಬಿಳಾಮ ಮತ್ತು ಬಾಲಾಕನ ಭೇಟಿ
\s5
\p
\v 36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
\v 37 ಬಾಲಾಕನು ಬಿಳಾಮನನ್ನು ಕಂಡಾಗ, <<ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?>> ಎಂದನು.
\s5
\p
\v 38 ಅದಕ್ಕೆ ಬಿಳಾಮನು ಬಾಲಾಕನಿಗೆ, <<ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು>> ಎಂದು ಹೇಳಿದನು.
\v 39 ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
\v 40 ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
\s5
\p
\v 41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು <<ಬಾಳ್>> ಎಂಬ ದೇವತೆಯ
\f +
\fr 22:41
\ft ಇಬ್ರಿಯ ಪದ ಬಾಮೋತ್ ಬಾಳ್.
\f* ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
\s5
\c 23
\s ಬಿಳಾಮನ ಮೊದಲನೆಯ ದೈವವಾಣಿ
\p
\v 1 ಆಗ ಬಿಳಾಮನು ಬಾಲಾಕನಿಗೆ, <<ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು>> ಎಂದು ಹೇಳಿದನು.
\v 2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
\v 3 ಬಿಳಾಮನು ಬಾಲಾಕನಿಗೆ, <<ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು>> ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
\s5
\p
\v 4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, <<ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ>> ಎಂದು ಹೇಳಿದನು.
\v 5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, <<ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು>> ಎಂದು ಆಜ್ಞಾಪಿಸಿದನು.
\v 6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
\s5
\p
\v 7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
\q <<ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು,
\q2 ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು,
\q <ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.>
\q2 <ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.>
\q
\v 8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ?
\q2 ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
\s5
\q
\v 9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ;
\q2 ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ.
\q ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು.
\q2 ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
\s5
\q
\v 10 ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು?
\q2 ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು?
\q ನೀತಿವಂತನು ಸಾಯುವಂತೆ ನಾನು ಸಾಯಬೇಕು.
\q2 ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!>> ಎಂದನು.
\m
\s5
\v 11 ಬಾಲಾಕನು ಬಿಳಾಮನಿಗೆ, <<ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ>> ಎಂದು ಹೇಳಿದನು.
\v 12 ಅದಕ್ಕೆ ಬಿಳಾಮನು, <<ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?>> ಎಂದನು.
\s ಬಿಳಾಮನ ಎರಡನೆಯ ದೈವವಾಣಿ
\s5
\p
\v 13 ಆಗ ಬಾಲಾಕನು, <<ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು>> ಎಂದನು.
\v 14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
\v 15 ಬಿಳಾಮನು ಬಾಲಾಕನಿಗೆ, <<ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು>> ಎಂದು ಹೇಳಿದನು.
\s5
\p
\v 16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, <<ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು>> ಎಂದನು.
\v 17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, <<ಯೆಹೋವನು ಏನು ಹೇಳಿದ್ದಾನೆ?>> ಎಂದನು.
\v 18 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
\q <<ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು.
\q2 ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
\s5
\q
\v 19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
\q2 ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
\q ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
\q2 ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
\q
\v 20 ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು.
\q2 ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
\s5
\q
\v 21 ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ
\q2 ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ.
\q ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ,
\q2 ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
\q
\v 22 ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ,
\q2 ಅವರು ಕಾಡುಕೋಣದಷ್ಟು ಬಲವುಳ್ಳವರು.
\s5
\q
\v 23 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ,
\q2 ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ.
\q ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು.
\q2 <ದೇವರು ಮಾಡುವ ಕೆಲಸವನ್ನು ನೋಡಿರಿ!>
\s5
\q
\v 24 ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ;
\q2 ಸಿಂಹವು ಮೃಗವನ್ನು ಕೊಂದು
\q2 ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ
\q2 ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.>>
\m
\s5
\v 25 ಆಗ ಬಾಲಾಕನು ಬಿಳಾಮನಿಗೆ, <<ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ>> ಎಂದು ಹೇಳಿದನು.
\v 26 ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, <<ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?>> ಎಂದನು.
\s ಬಿಳಾಮನ ಮೂರನೆಯ ದೈವವಾಣಿ
\p
\v 27 ತರುವಾಯ ಬಾಲಾಕನು ಬಿಳಾಮನಿಗೆ, <<ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು>> ಎಂದು ಹೇಳಿದನು.
\s5
\p
\v 28 ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
\v 29 ಆಗ ಬಿಳಾಮನು ಬಾಲಾಕನಿಗೆ, <<ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು>> ಎಂದು ಹೇಳಿದನು
\v 30 ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
\s5
\c 24
\p
\v 1 ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
\s5
\v 2 ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
\v 3 ಹೀಗೆ ಪ್ರವಾದಿಸಿದನು,
\q <<ಬೆಯೋರನ ಮಗನಾದ ಬಿಳಾಮನು ಹೇಳಿದ್ದು,
\q2 ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
\s5
\q
\v 4 ದೇವರ ಮಾತುಗಳನ್ನು ಕೇಳುವವನಾಗಿಯೂ,
\q2 ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ
\q ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
\q
\v 5 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ,
\q2 ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
\s5
\q
\v 6 ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ.
\q2 ನದಿಯ ಬಳಿಯಲ್ಲಿರುವ ತೋಟಗಳಂತೆಯೂ,
\q2 ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ
\q2 ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
\s5
\q
\v 7 ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ,
\q2 ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು.
\q ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು.
\q2 ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
\s5
\q
\v 8 ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು.
\q2 ಅವರು ಕಾಡುಕೋಣದಷ್ಟು ಬಲವುಳ್ಳವರು.
\q2 ಅವರು ಶತ್ರುಜನರನ್ನು ನಿರ್ಮೂಲಮಾಡುವರು.
\q2 ವೈರಿಗಳ ಎಲುಬುಗಳನ್ನು ಮುರಿದುಹಾಕುವರು.
\q2 ಅವರನ್ನು ಬಾಣಗಳಿಂದ ಗಾಯಪಡಿಸುವರು.
\s5
\q
\v 9 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ,
\q2 ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು?
\q ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ,
\q2 ಶಪಿಸುವವನಿಗೆ ಶಾಪವೂ ಉಂಟಾಗುವುದು>> ಎಂದನು.
\s5
\p
\v 10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, <<ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
\v 11 ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ>> ಎಂದು ಹೇಳಿದನು.
\s5
\p
\v 12 ಅದಕ್ಕೆ ಬಿಳಾಮನು ಬಾಲಾಕನಿಗೆ, <<ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
\v 13 <ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?>
\v 14 ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ>> ಎಂದನು.
\s ಬಿಳಾಮನ ನಾಲ್ಕನೆಯ ದೈವವಾಣಿ
\s5
\p
\v 15 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು,
\q2 <<ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ,
\q2 ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
\q
\v 16 ದೇವರ ಮಾತುಗಳನ್ನು ಕೇಳುವವನೂ,
\q2 ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ,
\q2 ಪರವಶವಾಗಿ ಕಣ್ಣುತೆರೆದು,
\q2 ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
\s5
\q
\v 17 ನಾನು ಅವನನ್ನು ನೋಡುವೆನು, ಈಗಲ್ಲ.
\q2 ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ.
\q2 ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು.
\q2 ಇಸ್ರಾಯೇಲರಲ್ಲಿ ರಾಜದಂಡವು ಏಳುವುದು.
\q2 ಅದು
\f +
\fr 24:17
\ft ಅಥವಾ ಮೋವಾಬ್ಯರ ಹಣೆ. ಅಕ್ಷರಶಃವಾಗಿ ಮೋವಾಬ್ಯರ ಮೇರೆ.
\f* ಮೋವಾಬ್ಯರ ತಲೆಯನ್ನು ಸೀಳಿಹಾಕುವುದು
\q2
\f +
\fr 24:17
\ft ಕಲಹ ಉಂಟುಮಾಡುವವರನ್ನು.
\f* ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
\s5
\q
\v 18 ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ,
\q2 ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
\q
\v 19 ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು,
\q2 ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು>> ಎಂದನು.
\s ಬಿಳಾಮನ ಅಂತಿಮ ದೈವವಾಣಿ
\m
\s5
\v 20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,
\q <<ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ,
\q ಆದರೂ ನಾಶನವೇ ಅವರ ಗತಿ.>>
\m
\s5
\v 21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,
\q <<ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ,
\q ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
\q
\v 22 ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ?
\q ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.>>
\s5
\p
\v 23 ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ,
\q <<ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
\q
\v 24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು
\q ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು;
\q ಅವರಿಗೂ ನಾಶನವುಂಟಾಗುವುದು>> ಎಂದನು.
\m
\v 25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.
\s5
\c 25
\s ಮೋವಾಬ್ ಸ್ತ್ರೀಯರು ಇಸ್ರಾಯೇಲರನ್ನು ದ್ರೋಹಿಗಳನ್ನಾಗಿ ಮಾಡಿದ್ದು
\p
\v 1 ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
\v 2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
\v 3 ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
\s5
\p
\v 4 ಆದುದರಿಂದ ಯೆಹೋವನು ಮೋಶೆಗೆ, <<ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ
\f +
\fr 25:4
\ft ಅಥವಾ ಸೂರ್ಯನ ಬೆಳಕಿನಲ್ಲಿ.
\f* ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು>> ಎಂದು ಹೇಳಿದನು.
\v 5 ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, <<ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು>> ಎಂದು ಆಜ್ಞಾಪಿಸಿದನು.
\s5
\p
\v 6 ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
\v 7 ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
\s5
\v 8 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
\v 9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
\s5
\p
\v 10 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 11 <<ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
\s5
\v 12 ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.
\v 13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ>> ಎಂದು ಹೇಳಿದನು.
\s5
\p
\v 14 ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.
\v 15 ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.
\s5
\p
\v 16 ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
\v 17 <<ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.
\v 18 ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.>>
\s5
\c 26
\s ಎರಡನೆಯ ಜನಗಣತಿ
\p
\v 1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
\v 2 <<ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು>> ಎಂದು ಆಜ್ಞಾಪಿಸಿದನು.
\s5
\v 3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
\v 4 <<ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ>> ಎಂದನು.
\s5
\v 5 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
\v 6 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
\p
\v 7 ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
\s5
\p
\v 8 ಪಲ್ಲೂವಿನ ಮಗನು ಎಲೀಯಾಬ್.
\v 9 ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
\s5
\p
\v 10 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
\v 11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
\s5
\p
\v 12 ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ:
\q1 ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು,
\q1 ಯಾಮೀನನ ವಂಶಸ್ಥರಾದ ಯಾಮೀನ್ಯರು,
\q1 ಯಾಕೀನನ ವಂಶಸ್ಥರಾದ ಯಾಕೀನ್ಯರು,
\q1
\v 13 ಜೆರಹನ ವಂಶಸ್ಥರಾದ ಜೆರಹಿಯರು,
\q1 ಸೌಲನ ವಂಶಸ್ಥರಾದ ಸೌಲ್ಯರು ಇವರೇ.
\p
\v 14 ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
\s5
\p
\v 15 ಗಾದ್ ಕುಲದ ಕುಟುಂಬಗಳು ಯಾವುವೆಂದರೆ:
\q1 ಚೆಫೋನನ ವಂಶಸ್ಥರಾದ ಚೆಫೋನ್ಯರು,
\q1 ಹಗ್ಗೀಯ ವಂಶಸ್ಥರಾದ ಹಗ್ಗೀಯರು,
\q1 ಶೂನೀಯ ವಂಶಸ್ಥರಾದ ಶೂನೀಯರು,
\q1
\v 16 ಒಜ್ನೀಯ ವಂಶಸ್ಥರಾದ ಒಜ್ನೀಯರು,
\q1 ಏರೀಯ ವಂಶಸ್ಥರಾದ ಏರೀಯರು,
\q1
\v 17 ಅರೋದನ ವಂಶಸ್ಥರಾದ ಅರೋದ್ಯರು,
\q1 ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
\p
\v 18 ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
\s5
\p
\v 19 ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
\v 20 ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:
\q1 ಶೇಲಹನ ವಂಶಸ್ಥರಾದ ಶೇಲಾನ್ಯರು,
\q1 ಪೆರೆಹನ ವಂಶಸ್ಥರಾದ ಪೆರೆಚ್ಯರು,
\q1 ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
\v 21 ಪೆರೆಚನಿಂದುಂಟಾದ ಕುಟುಂಬಗಳು:
\q1 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ
\q1 ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
\v 22 ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
\s5
\p
\v 23 ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ:
\q1 ತೋಲನ ವಂಶಸ್ಥರಾದ ತೋಲಾಯರು,
\q1 ಪುವ್ವನ ವಂಶಸ್ಥರಾದ ಪೂನ್ಯರು,
\q1
\v 24 ಯಾಶೂಬನ ವಂಶಸ್ಥರಾದ ಯಾಶೂಬ್ಯರು,
\q1 ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
\v 25 ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
\s5
\p
\v 26 ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:
\q1 ಸೆರೆದನ ವಂಶಸ್ಥರಾದ ಸೆರೆದ್ಯರು,
\q1 ಏಲೋನನ ವಂಶಸ್ಥರಾದ ಏಲೋನ್ಯರು,
\q1 ಯಹಲೇಲನ ವಂಶಸ್ಥರಾದ ಯಹಲೇಲ್ಯರು.
\v 27 ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
\s5
\p
\v 28 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
\v 29 ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:
\q1 ಮಾಕೀರನ ವಂಶಸ್ಥರಾದ ಮಾಕೀರ್ಯರು,
\q1 ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
\s5
\q1
\v 30 ಗಿಲ್ಯಾದನ ವಂಶದವರು ಯಾರೆಂದರೆ:
\q1 ಈಯೆಜೆರನ ವಂಶಸ್ಥರಾದ ಈಯೆಜೆರ್ಯರು,
\q1 ಹೇಲೆಕನ ವಂಶಸ್ಥರಾದ ಹೇಲೆಕ್ಯರು,
\q1
\v 31 ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು,
\q1 ಶೆಕೆಮನ ವಂಶಸ್ಥರಾದ ಶೆಕೆಮ್ಯರು,
\q1
\v 32 ಶೆಮೀದಾಯನ ವಂಶಸ್ಥರಾದ ಶೆಮೀದಾಯರು,
\q1 ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
\s5
\p
\v 33 ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
\p
\v 34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
\s5
\p
\v 35 ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
\v 36 ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
\v 37 ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
\s5
\p
\v 38 ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ:
\q1 ಬೆಲಗನ ವಂಶಸ್ಥರಾದ ಬೆಲಗ್ಯರು,
\q1 ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು,
\q1 ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
\q1
\v 39 ಶೂಫಾಮನ ವಂಶಸ್ಥರಾದ ಶೂಫಾಮ್ಯರು,
\q1 ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
\m
\v 40 ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
\v 41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
\s5
\p
\v 42 ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
\v 43 ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
\s5
\p
\v 44 ಆಶೇರ್ ಕುಲದ ಕುಟುಂಬಗಳು:
\q1 ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು,
\q1 ಇಷ್ವೀಯ ವಂಶಸ್ಥರಾದ ಇಷ್ವೀಯರು,
\q1 ಬೆರೀಯನ ವಂಶಸ್ಥರಾದ ಬೆರೀಯರು.
\m
\v 45 ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು:
\q1 ಹೇಬೆರನ ವಂಶಸ್ಥರಾದ ಹೇಬೆರ್ಯರು,
\q1 ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
\m
\v 46 ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
\v 47 ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
\s5
\p
\v 48 ನಫ್ತಾಲಿ ಕುಲದ ಕುಟುಂಬಗಳು:
\q1 ಯಹಚೇಲನ ವಂಶಸ್ಥರಾದ ಯಹಚೇಲ್ಯರು,
\q1 ಗೂನೀಯ ವಂಶಸ್ಥರಾದ ಗೂನೀಯರು,
\q1
\v 49 ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
\p
\v 50 ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
\s5
\p
\v 51 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 601,730.
\s5
\p
\v 52 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
\v 53 <<ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
\s5
\v 54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
\v 55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
\v 56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.>>
\s ಲೇವಿಯರ ಜನಗಣತಿ
\s5
\p
\v 57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು:
\q1 ಗೇರ್ಷೋನನ ವಂಶದವರಾದ ಗೇರ್ಷೋನ್ಯರು,
\q1 ಕೆಹಾತನ ವಂಶದವರಾದ ಕೆಹಾತ್ಯರು,
\q1 ಮೆರಾರೀಯ ವಂಶದವರಾದ ಮೆರಾರೀಯರು.
\m
\v 58 ಲೇವಿ ಕುಲದವರ ಕುಟುಂಬಗಳು:
\q1 ಲಿಬ್ನೀಯರ ಕುಟುಂಬ,
\q1 ಹೆಬ್ರೋನ್ಯರ ಕುಟುಂಬ,
\q1 ಮಹ್ಲೀಯರ ಕುಟುಂಬ,
\q1 ಮೂಷೀಯರ ಕುಟುಂಬ,
\q1 ಕೋರಹಿಯರ ಕುಟುಂಬ ಇವುಗಳೇ.
\q1 ಕೆಹಾತನು ಅಮ್ರಾಮನನ್ನು ಪಡೆದನು.
\p
\v 59 ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
\s5
\p
\v 60 ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
\v 61 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
\v 62 ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
\s5
\p
\v 63 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
\v 64 ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
\s5
\v 65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
\s5
\c 27
\s ಚಲ್ಪಹಾದನ ಹೆಣ್ಣುಮಕ್ಕಳ ವಿನಂತಿ
\p
\v 1 ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
\s5
\v 2 ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
\v 3 <<ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
\s5
\v 4 ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು>> ಎಂದು ಕೇಳಿಕೊಂಡರು.
\p
\v 5 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.
\s5
\v 6 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 7 <<ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
\p
\v 8 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
\s5
\v 9 ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
\v 10 ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.
\v 11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.> >>
\s ಮೋಶೆಯ ತರುವಾಯ ಯೆಹೋವನು ಯೆಹೋಶುವನನ್ನು ನೇಮಿಸಿದ್ದು
\s5
\p
\v 12 ಯೆಹೋವನು ಮೋಶೆಗೆ, <<ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
\v 13 ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
\v 14 ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು>> ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
\s5
\p
\v 15 ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
\v 16 <<ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
\v 17 ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು>> ಎಂದು ಬೇಡಿದನು.
\s5
\p
\v 18 ಅದಕ್ಕೆ ಯೆಹೋವನು ಮೋಶೆಗೆ, <<ನನ್ನ ಆತ್ಮವುಳ್ಳ ನೂನನ ಮಗನಾದ ಯೆಹೋಶುವನು ನನ್ನ ಆತ್ಮ ಸಂಪತ್ತು ಉಳ್ಳವನು ಅವನ ಮೇಲೆ ಇಡು.
\v 19 ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
\s5
\v 20 ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.
\v 21 ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ
\f +
\fr 27:21
\ft ದೇವರ ಚಿತ್ತವನ್ನು ತಿಳಿದುಕೊಳ್ಳುವುದಕ್ಕಾಗಿರುವ ವಸ್ತು.
\f* ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.>> ಎಂದು ಆಜ್ಞಾಪಿಸಿದನು.
\s5
\p
\v 22 ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
\v 23 ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
\s5
\c 28
\s ದೈನಿಕ ಯಜ್ಞಸಮರ್ಪಣೆಗಳು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, <ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.>
\s5
\v 3 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, <ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
\v 4 ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
\v 5 ನೀವು ಧಾನ್ಯನೈವೇದ್ಯಕ್ಕಾಗಿ
\f +
\fr 28:5
\ft ಸುಮಾರು ಒಂದು ಕಿಲೋಗ್ರಾಂ.
\f* ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
\s5
\v 6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
\v 7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
\v 8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.
\s ಸಬ್ಬತ್ ದಿನದ ಯಜ್ಞಸಮರ್ಪಣೆ
\s5
\p
\v 9 << <ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
\v 10 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
\s ಮಾಸಿಕ ಯಜ್ಞಸಮರ್ಪಣೆ
\s5
\p
\v 11 << <ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
\v 12 ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
\v 13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
\s5
\v 14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
\v 15 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.
\s ಪಸ್ಕ ಹಬ್ಬದ ಯಜ್ಞಸಮರ್ಪಣೆ
\s5
\p
\v 16 << <ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
\v 17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
\v 18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
\s5
\v 19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
\v 20 ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
\v 21 ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
\v 22 ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
\s5
\v 23 ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
\v 24 ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
\v 25 ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
\s ಸುಗ್ಗಿ ಹಬ್ಬದ ಯಜ್ಞಸಮರ್ಪಣೆ
\s5
\p
\v 26 << <ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
\v 27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
\v 28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
\s5
\v 29 ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
\v 30 ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
\v 31 ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.> >>
\s5
\c 29
\s ತುತ್ತೂರಿಗಳ ಹಬ್ಬದ ಯಜ್ಞಸಮರ್ಪಣೆ
\p
\v 1 << <ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
\s5
\v 2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
\s5
\v 3 ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
\v 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,
\v 5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
\s5
\v 6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
\s ದೋಷಪರಿಹಾರಕ ದಿನದ ಯಜ್ಞಸಮರ್ಪಣೆ
\s5
\p
\v 7 << <ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು
\f +
\fr 29:7
\ft ಉಪವಾಸಾಚರಣೆ.
\f* ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆ ಸಭೆಕೂಡಬೇಕು.
\v 8 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
\s5
\v 9 ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
\v 10 ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,
\v 11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
\s ಗುಡಾರ ಹಬ್ಬದ ಯಜ್ಞಸಮರ್ಪಣೆ
\s5
\p
\v 12 << <ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
\v 13 ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,
\s5
\v 14 ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
\v 15 ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.
\v 16 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
\s5
\p
\v 17 << <ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
\v 18 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,
\v 19 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 20 << <ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
\v 21 ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\v 22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 23 << <ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
\v 24 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\v 25 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 26 << <ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
\v 27 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\v 28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 29 << <ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
\v 30 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\v 31 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 32 << <ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
\v 33 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\v 34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 35 << <ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.
\v 36 ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
\s5
\p
\v 37 << <ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
\v 38 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
\s5
\p
\v 39 << <ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.> >>
\v 40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.
\s5
\c 30
\s ಹರಕೆಯ ನಿಯಮಗಳು ಮತ್ತು ತೀರಿಸುವ ವಿಧಾನ
\p
\v 1 ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, <<ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
\v 2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
\s5
\p
\v 3 <<ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
\v 4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
\s5
\v 5 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
\s5
\p
\v 6 <<ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
\v 7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
\s5
\v 8 ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
\s5
\p
\v 9 <<ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.
\p
\v 10 <<ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
\v 11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.
\s5
\v 12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
\s5
\v 13 ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
\v 14 ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
\s5
\v 15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.>>
\p
\v 16 ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
\s5
\c 31
\s ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
\v 2 <<ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು>> ಎಂದು ಹೇಳಿದನು.
\s5
\p
\v 3 ಆಗ ಮೋಶೆಯು ಇಸ್ರಾಯೇಲರಿಗೆ, <<ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
\v 4 ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.>>
\v 5 ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.
\s5
\p
\v 6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
\p
\v 7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
\v 8 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.
\s5
\p
\v 9 ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
\v 10 ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.
\s5
\v 11 ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.
\v 12 ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.
\s5
\p
\v 13 ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.
\p
\v 14 ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
\p
\v 15 ಮೋಶೆಯು ಅವರಿಗೆ, <<ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
\s5
\v 16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
\v 17 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.
\s5
\v 18 ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.
\v 19 ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
\v 20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು>> ಎಂದು ಹೇಳಿದನು.
\s5
\p
\v 21 ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, <<ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
\v 22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
\v 23 ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
\v 24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು>> ಎಂದು ಹೇಳಿದನು.
\s ಕೊಳ್ಳೆಹೊಡೆದವುಗಳ ಹಂಚಿಕೆ
\s5
\p
\v 25 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 26 <<ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
\v 27 ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
\s5
\v 28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
\v 29 ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
\s5
\v 30 ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು>> ಎಂದು ಆಜ್ಞಾಪಿಸಿದನು.
\v 31 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.
\s5
\p
\v 32 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 675,000,
\p
\v 33 ದನಗಳು - 72,000,
\p
\v 34 ಕತ್ತೆಗಳು - 61,000,
\p
\v 35 ಕನ್ಯೆಯರು - 32,000.
\s5
\p
\v 36 ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.
\p
\v 37 ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
\p
\v 38 ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
\s5
\p
\v 39 ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
\v 40 16,000 ಕನ್ಯೆಯರಲ್ಲಿ- ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
\v 41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.
\s5
\p
\v 42 ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಹಂಚಿದ ಅರ್ಧ ಭಾಗದ
\v 43 ಎಷ್ಟೆಂದರೆ - 337,500 ಆಡುಕುರಿಗಳು.
\p
\v 44 ಎತ್ತುಗಳು - 36,000,
\p
\v 45 ಕತ್ತೆಗಳು - 30,500,
\p
\v 46 ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.
\s5
\p
\v 47 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
\s5
\p
\v 48 ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,
\v 49 <<ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
\s5
\v 50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ>> ಎಂದರು.
\v 51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.
\s5
\p
\v 52 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
\v 53 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.
\v 54 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
\s5
\c 32
\s ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು
\p
\v 1 ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
\v 2 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
\v 3 <<ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
\s5
\v 4 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.
\v 5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು>> ಎಂದು ಕೇಳಿಕೊಂಡರು.
\s5
\p
\v 6 ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, <<ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
\v 7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?
\s5
\v 8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
\v 9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
\s5
\v 10 ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,
\v 11 <ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
\v 12 ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ> >> ಎಂದು ಖಂಡಿತವಾಗಿ ಹೇಳಿದನು.
\s5
\p
\v 13 ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
\v 14 <<ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
\v 15 ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ>> ಎಂದು ಹೇಳಿದನು.
\s5
\p
\v 16 ಆಗ ಅವರು ಮೋಶೆಯ ಬಳಿಗೆ ಬಂದು, <<ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
\v 17 ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
\s5
\v 18 ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
\v 19 ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ>> ಎಂದರು.
\s5
\p
\v 20 ಅದಕ್ಕೆ ಮೋಶೆ ಅವರಿಗೆ, <<ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
\v 21 ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
\v 22 ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.
\s5
\p
\v 23 <<ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
\v 24 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ>> ಎಂದನು.
\v 25 ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, <<ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
\s5
\v 26 ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.
\v 27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು>> ಎಂದು ಉತ್ತರ ಕೊಟ್ಟರು.
\s5
\p
\v 28 ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
\v 29 ಮೋಶೆಯು ಅವರಿಗೆ, <<ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
\v 30 ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು>> ಎಂದು ಹೇಳಿದನು.
\s5
\p
\v 31 ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, <<ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
\v 32 ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು>> ಎಂದರು.
\s5
\p
\v 33 ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
\s5
\p
\v 34 ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
\v 35 ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,
\v 36 ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
\s5
\p
\v 37 ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
\v 38 ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
\v 39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
\s5
\p
\v 40 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
\v 41 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ
\f +
\fr 32:41
\ft ಇಬ್ರಿಯ ಪದ ಹವ್ವೋತ್ ಯಾಯೀರ್.
\f* ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
\v 42 ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
\s5
\c 33
\s ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ
\p
\v 1 ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
\v 2 ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.
\s5
\p
\v 3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
\v 4 ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು
\f +
\fr 33:4
\ft ಅಥವಾ ಐಗುಪ್ತ್ಯರ ದೇವತೆಗಳಿಗೆ ನ್ಯಾಯತೀರಿಸಿ ಅವುಗಳಿಗಿಂತ ತಾನು ಮಾತ್ರವೇ ಅತಿ ಶಕ್ತಿವಂತನಾದ ದೇವರು ಎಂದು ಯೆಹೋವನು ಸಾಬೀತುಪಡಿಸಿದನು.
\f* ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.
\s5
\p
\v 5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
\v 6 ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
\v 7 ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.
\s5
\p
\v 8 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
\v 9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.
\p
\v 10 ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
\s5
\v 11 ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
\v 12 ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
\v 13 ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
\v 14 ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
\s5
\p
\v 15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
\v 16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
\v 17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
\v 18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
\s5
\p
\v 19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
\v 20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
\v 21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
\v 22 ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.
\s5
\p
\v 23 ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
\v 24 ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
\v 25 ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
\v 26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
\s5
\p
\v 27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
\v 28 ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
\v 29 ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
\v 30 ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
\s5
\p
\v 31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
\v 32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
\v 33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
\v 34 ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
\s5
\v 35 ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
\v 36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
\p
\v 37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
\s5
\v 38 ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
\v 39 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
\s5
\p
\v 40 ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
\s5
\v 41 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
\v 42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
\v 43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
\s5
\v 44 ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
\v 45 ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
\v 46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
\s5
\v 47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.
\v 48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
\v 49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
\s ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ
\s5
\p
\v 50 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
\v 51 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,
\v 52 ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
\s5
\v 53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
\v 54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
\s5
\v 55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
\v 56 ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.> >>
\s5
\c 34
\s ಕಾನಾನ್ ದೇಶದ ಮೇರೆಗಳು
\p
\v 1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.
\v 3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.
\s5
\v 4 ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರಬೇಕು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
\v 5 ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.
\s5
\v 6 ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.
\s5
\v 7 ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ,
\v 8 ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.
\v 9 ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.
\s5
\v 10 ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು.
\v 11 ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
\v 12 ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು> >> ಎಂದನು.
\s5
\v 13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, <<ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
\v 14 ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ.
\v 15 ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.>>
\s ಕಾನಾನ್ ದೇಶವನ್ನು ಹಂಚಿಕೊಡುವುದಕ್ಕೆ ನೇಮಿಸಲ್ಪಟ್ಟವರ ಹೆಸರುಗಳು
\s5
\p
\v 16 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
\v 17 <<ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.
\v 18 ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.
\s5
\v 19 ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,
\v 20 ಸಿಮೆಯೋನ್ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್,
\s5
\v 21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,
\v 22 ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ಕುಲಾಧಿಪತಿ,
\v 23 ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,
\s5
\v 24 ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,
\v 25 ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫಾನ್ ಕುಲಾಧಿಪತಿ,
\v 26 ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟೀಯೇಲ್ ಕುಲಾಧಿಪತಿ,
\s5
\v 27 ಆಶೇರ್ ಕುಲದಿಂದ ಶೆಲೋಮಮೀಯ ಮಗ ಅಹೀಹೂದ್ ಕುಲಾಧಿಪತಿ,
\v 28 ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.>>
\v 29 ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
\s5
\c 35
\s ಲೇವಿಯರಿಗೆ ಕೊಡಲಾದ ಊರುಗಳು
\p
\v 1 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 2 <<ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
\s5
\v 3 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
\v 4 ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
\s5
\v 5 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
\s5
\v 6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
\v 7 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
\s5
\v 8 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.>>
\s ಆಶ್ರಯ ಪಟ್ಟಣಗಳು
\s5
\p
\v 9 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
\v 10 <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
\v 11 ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
\s5
\v 12 ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
\v 13 ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
\s5
\v 14 ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
\v 15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.
\s5
\p
\v 16 << <ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
\v 17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
\v 18 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
\s5
\v 19 ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
\v 20 ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
\v 21 ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
\s5
\p
\v 22 << <ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
\v 23 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
\s5
\v 24 ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
\v 25 ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
\s5
\p
\v 26 << <ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
\v 27 ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
\v 28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
\s5
\p
\v 29 << <ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
\v 30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
\s5
\p
\v 31 << <ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
\v 32 ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
\s5
\p
\v 33 << <ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
\v 34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.> >>
\s5
\c 36
\s ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ
\p
\v 1 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
\v 2 <<ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
\s5
\v 3 ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
\v 4 ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು>> ಎಂದು ಹೇಳಿದರು.
\s5
\v 5 ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, <<ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
\v 6 ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, <ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು> ಎಂಬುದೇ.
\s5
\v 7 ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
\s5
\v 8 ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
\v 9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು>> ಎಂದು ಆಜ್ಞಾಪಿಸಿದನು.
\s5
\v 10 ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
\v 11 ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
\v 12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
\s5
\v 13 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.