kn_ulb/12-2KI.usfm

1509 lines
316 KiB
Plaintext

\id 2KI - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h 2 ಅರಸುಗಳು
\toc1 ಅರಸುಗಳು - ದ್ವಿತೀಯ ಭಾಗ
\toc2 2 ಅರಸುಗಳು
\toc3 2ki
\mt1 ಅರಸುಗಳು - ದ್ವಿತೀಯ ಭಾಗ
\is ಗ್ರಂಥಕರ್ತೃತ್ವ
\ip 1 ಅರಸುಗಳ ಮತ್ತು 2 ಅರಸುಗಳ ಪುಸ್ತಕಗಳು ಮೂಲತಃ ಒಂದೇ ಪುಸ್ತಕವಾಗಿದೆ. ಯೆಹೂದ್ಯ ಸಂಪ್ರದಾಯವು ಪ್ರವಾದಿಯಾದ ಯೆರೆಮೀಯನನ್ನು 2 ಅರಸಗಳ ಗ್ರಂಥಕರ್ತನನ್ನಾಗಿ ಪರಿಗಣಿಸುವಾಗ, ಇತ್ತೀಚಿನ ಸತ್ಯವೇದದ ಪಾಂಡಿತ್ಯವು ಈ ಕೃತಿಯು ಡ್ಯುಟೆರೊನೊಮಿಸ್ಟ್ಸ್ (ಹಳೆಯ ಒಡಂಬಡಿಕೆಯ ಮೊದಲ ಕೆಲವು ಪುಸ್ತಕಗಳ ಗ್ರಂಥಕರ್ತ ಅಥವಾ ಸಂಪಾದಕ) ಎಂದು ಕರೆಯಲ್ಪಡುವ ಅನಾಮಧೇಯ ಗ್ರಂಥಕರ್ತರ ಗುಂಪಿಗೆ ಸೇರಿದ್ದು ಎನ್ನುತ್ತಾರೆ. 2 ಅರಸುಗಳು ಧರ್ಮೋಪದೇಶಕಾಂಡದ ಪ್ರಧಾನ ವಿಷಯವನ್ನು ಅನುಸರಿಸುತ್ತದೆ: ದೇವರಿಗೆ ವಿಧೇಯತೆಯು ಆಶೀರ್ವಾದಗಳನ್ನು ಉಂಟುಮಾಡುತ್ತದೆ, ಅವಿಧೇಯತೆಯು ಶಾಪಗಳನ್ನು ಉಂಟುಮಾಡುತ್ತದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 590-538 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಮೊದಲನೆಯ ದೇವಾಲಯವು ಇನ್ನೂ ಇರುವಾಗಲೇ ಇದು ಬರೆಯಲ್ಪಟ್ಟಿತು (1 ಅರಸುಗಳು 8:8).
\is ಸ್ವೀಕೃತದಾರ
\ip ಇಸ್ರಾಯೇಲ್ ಜನರು, ಸತ್ಯವೇದದ ಎಲ್ಲಾ ಓದುಗಾರರು.
\is ಉದ್ದೇಶ
\ip 2 ಅರಸುಗಳ ಪುಸ್ತಕವು 1 ಅರಸುಗಳ ಪುಸ್ತಕದ ಮುಂದಿನ ಭಾಗವಾಗಿದೆ. ಇದು ವಿಭಜಿತ ಸಾಮ್ರಾಜ್ಯದ ಅರಸರ ಕಥೆಯನ್ನು ಮುಂದುವರಿಸುತ್ತದೆ (ಇಸ್ರಾಯೇಲ್ ಮತ್ತು ಯೆಹೂದ.) 2 ಅರಸುಗಳು ಅಂತಿಮ ಅಪಜಯದೊಂದಿಗೆ ಮತ್ತು ಇಸ್ರಾಯೇಲ್ ಜನರು ಅಶ್ಯೂರಕ್ಕೆ ಹಾಗೂ ಯೆಹೂದದ ಜನರು ಬಾಬೆಲೋನಿಗೆ ಗಡೀಪಾರು ಆಗುವುದರೊಂದಿಗೆ ಮುಕ್ತಾಯವಾಗುತ್ತದೆ.
\is ಮುಖ್ಯಾಂಶ
\ip ಚದುರುವಿಕೆ
\iot ಪರಿವಿಡಿ
\io1 1. ಎಲೀಷನ ಸೇವೆ (ಅಧ್ಯಾಯ 1-8)
\io1 2. ಅಹಾಬನ ವಂಶದ ಅಂತ್ಯ (ಅಧ್ಯಾಯ 9-11)
\io1 3. ಯೆಹೋವಾಷನಿಂದ ಇಸ್ರಾಯೇಲಿನ ಅಂತ್ಯದವರೆಗೆ (ಅಧ್ಯಾಯ 12-17)
\io1 4. ಹಿಜ್ಕೀಯನಿಂದ ಯೆಹೂದದ ಅಂತ್ಯದವರೆಗೆ (ಅಧ್ಯಾಯ 18-25)
\s5
\c 1
\s ಪ್ರವಾದಿಯಾದ ಎಲೀಯನು ಮತ್ತು ಅರಸನಾದ ಅಹಜ್ಯನು
\p
\v 1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
\v 2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, <<ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ>> ಎಂದು ಹೇಳಿಕಳುಹಿಸಿದನು.
\s5
\p
\v 3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, <<ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, <ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
\v 4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು> ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
\s5
\p
\v 5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, <<ನೀವು ಹಿಂದಿರುಗಿ ಬಂದ್ದದೇಕೆ?>> ಎಂದು ಕೇಳಿದನು.
\v 6 ಅದಕ್ಕೆ ಅವರು, <<ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, <ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ> ಯೆಹೋವನ ಹೆಸರಿನಲ್ಲಿ ಅವನಿಗೆ, <ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು> ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು>> ಎಂದು ಉತ್ತರ ಕೊಟ್ಟರು.
\s5
\p
\v 7 ಅರಸನು ತಿರುಗಿ ಅವರನ್ನು, <<ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?>> ಎಂದು ಕೇಳಲು,
\v 8 ಅವರು, <<ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು>> ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, <<ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು>> ಎಂದನು.
\s5
\p
\v 9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, <<ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ>> ಎಂದು ಹೇಳಿದನು.
\v 10 ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, <<ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ>> ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
\s5
\p
\v 11 ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ <<ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ>> ಎಂದು ಹೇಳಿದನು.
\v 12 ಆಗ ಎಲೀಯನು, <<ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ>> ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
\s5
\p
\v 13 ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, <<ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
\v 14 ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ>> ಎಂದು ಬೇಡಿಕೊಂಡನು.
\s5
\p
\v 15 ಆಗ ಯೆಹೋವನ ದೂತನು ಎಲೀಯನಿಗೆ, <<ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ>> ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
\v 16 ನಂತರ ಎಲೀಯನು ಅರಸನಿಗೆ, <<ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.
\s5
\p
\v 17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
\v 18 ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\s5
\c 2
\s ಎಲೀಯನು ಸ್ವರ್ಗಾರೋಹಣ
\p
\v 1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
\v 2 ಆಗ ಎಲೀಯನು ಎಲೀಷನಿಗೆ, <<ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು>> ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.
\s5
\p
\v 3 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, <<ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?>> ಎಂದು ಕೇಳಿದರು. ಅದಕ್ಕೆ ಅವನು, <<ಗೊತ್ತಿದೆ ನೀವು ಸುಮ್ಮನಿರಿ>> ಎಂದನು.
\v 4 ಆಗ ಎಲೀಯನು ಎಲೀಷನಿಗೆ, <<ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಆದರೆ ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.
\s5
\p
\v 5 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, <<ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?>> ಎಂದು ಕೇಳಿದರು. ಅದಕ್ಕೆ ಅವನು, ನನಗೆ <<ಗೊತ್ತುಂಟು ನೀವು ಸುಮ್ಮನಿರಿ>> ಎಂದು ಉತ್ತರ ಕೊಟ್ಟನು.
\v 6 ಎಲೀಯನು ತಿರುಗಿ ಅವನಿಗೆ, <<ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಅದಕ್ಕೆ ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
\s5
\p
\v 7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.
\v 8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.
\s5
\p
\v 9 ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, <<ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು>> ಎಂದು ಕೇಳಿದನು. ಅದಕ್ಕೆ ಎಲೀಷನು, <<ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು>> ಎಂದು ಬೇಡಿಕೊಂಡನು.
\v 10 ಆಗ ಎಲೀಯನು ಅವನಿಗೆ, <<ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ>> ಎಂದನು.
\s5
\v 11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
\v 12 ಎಲೀಷನು ಅದನ್ನು ನೋಡುತ್ತಾ, <<ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ>> ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
\s5
\p
\v 13 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,
\v 14 <<ಎಲೀಯನ ದೇವರಾದ ಯೆಹೋವನೆಲ್ಲಿ?>> ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.
\s5
\v 15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, <<ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ>> ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
\v 16 ಅನಂತರ ಅವರು ಅವನಿಗೆ, <<ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು>> ಎಂದು ಹೇಳಿದರು. ಅವನು ಅವರಿಗೆ, <<ನೀವು ಅವರನ್ನು ಕಳುಹಿಸಬೇಡಿರಿ>> ಎಂದನು.
\s5
\p
\v 17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, <<ಅವರನ್ನು ಕಳುಹಿಸಿರಿ>> ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
\v 18 ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.
\s ಎಲೀಷನು ನೀರಿನಲ್ಲಿದ್ದ ದೋಷವನ್ನು ಪರಿಹರಿಸಿದ್ದು
\s5
\p
\v 19 ಯೆರಿಕೋವಿನ ಜನರು ಎಲೀಷನಿಗೆ, <<ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ>> ಎಂದು ಹೇಳಿದರು.
\v 20 ಆಗ ಎಲೀಷನು ಅವರಿಗೆ, <<ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ>> ಎಂದು ಹೇಳಿದಾಗ, ಅವರು ತಂದುಕೊಟ್ಟರು.
\s5
\p
\v 21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, <<ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.
\v 22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.
\s ಎಲೀಷನು ಪರಿಹಾಸ್ಯ ಮಾಡಿದ ಹುಡುಗರನ್ನು ಶಪಿಸಿದ್ದು
\s5
\p
\v 23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, <<ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ>> ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
\v 24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.
\v 25 ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.
\s5
\c 3
\s ಇಸ್ರಾಯೇಲ್ಯರಿಗೂ ಮೋವಾಬ್ಯರಿಗೂ ನಡೆದ ಯುದ್ಧ
\p
\v 1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
\v 2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
\v 3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
\s5
\p
\v 4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
\v 5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
\v 6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
\s5
\p
\v 7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, <<ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?>> ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, <<ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ>> ಎಂದು ಉತ್ತರಕೊಟ್ಟನು.
\v 8 ಮತ್ತೆ ಯೆಹೋಷಾಫಾಟನು, <<ಯಾವ ಮಾರ್ಗವಾಗಿ ಹೋಗಬೇಕು?>> ಎಂದು ವಿಚಾರಿಸಿದಾಗ ಯೋರಾಮನು, <<ಎದೋಮ್ಯರ ಅರಣ್ಯ ಮಾರ್ಗವಾಗಿ>> ಎಂದನು.
\s5
\p
\v 9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
\v 10 ಇಸ್ರಾಯೇಲರ ಅರಸರು, <<ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ>> ಎಂದು ಗೋಳಾಡಿದರು.
\s5
\p
\v 11 ಆದರೆ ಯೆಹೋಷಾಫಾಟನು, <<ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?>> ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, <<ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ>> ಎಂದು ಉತ್ತರಕೊಟ್ಟನು.
\v 12 ಯೆಹೋಷಾಫಾಟನು, <<ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು>> ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
\s5
\p
\v 13 ಎಲೀಷನು ಇಸ್ರಾಯೇಲರ ಅರಸನಿಗೆ, <<ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು>> ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, <<ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?>> ಎಂದನು.
\v 14 ಆಗ ಎಲೀಷನು, <<ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
\s5
\v 15 ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ>> ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
\v 16 ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, <<ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
\v 17 <ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು> ಎಂಬುದಾಗಿ ಯೆಹೋವನು ಅನ್ನುತ್ತಾನೆ.
\s5
\p
\v 18 <<ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
\v 19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ>> ಎಂದು ನುಡಿದನು.
\s5
\v 20 ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
\s5
\p
\v 21 ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
\v 22 ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
\v 23 ಇವರು, <<ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!>> ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
\s5
\p
\v 24 ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
\v 25 ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
\s5
\p
\v 26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
\v 27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು
\f +
\fr 3:27
\fq ಕೋಪೋದ್ರೇಕ ಉಂಟಾಗಲು
\ft "ಕೋಪೋದ್ರೇಕ ಉಂಟಾಗಲು" ಎಂಬ ಅಭಿವ್ಯಕ್ತಿಯು ಕೋಪಗೊಳ್ಳುವಂಥ ದೇವರಿಗೆ ಸಂಬಂಧಿಸಿದಂತೆ ಹಳೆಯ ಒಡಂಬಡಿಕೆಯಲ್ಲಿ ಸಾಮಾನ್ಯವಾದ ನುಡಿಗಟ್ಟು ಆಗಿದೆ, ಇಂತಹ ಅಪಾಯಕರವಾದ ಕೃತ್ಯವು ಯೆಹೋವನ ಶಿಕ್ಷೆಯನ್ನು ಉಂಟುಮಾಡುತ್ತದೆಂದು ಇಸ್ರಾಯೇಲ್ಯರು ಭಯಪಟ್ಟರು. ಅಥವಾ ತಮ್ಮ ಅರಸನಾಗತಕ್ಕ ಮಗುವಿನ ಬಲಿಯನ್ನು ಪ್ರತ್ಯಕ್ಷವಾಗಿ ಕಂಡ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊಡೆದಾಡಿದರು, ಇದರಿಂದ ಇಸ್ರಾಯೇಲ್ಯರು ಯುದ್ಧವನ್ನು ತ್ಯಜಿಸಿ ಮನೆಗೆ ಹೋಗಬೇಕೆಂದು ನಿರ್ಧರಿಸಿದರು.
\f* ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
\s5
\c 4
\s ಬಡ ವಿಧವೆಗೆ ಎಣ್ಣೆದಾನ
\p
\v 1 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, <<ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ>> ಎಂದು ಮೊರೆಯಿಟ್ಟಳು.
\v 2 ಎಲೀಷನು ಆಕೆಗೆ, <<ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.>> ಅದಕ್ಕೆ ಆಕೆಯು, <<ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ>> ಎಂದು ಉತ್ತರ ಕೊಟ್ಟಳು.
\s5
\p
\v 3 ಆಗ ಎಲೀಷನು ಆಕೆಗೆ, <<ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
\v 4 ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು>> ಎಂದು ಹೇಳಿದನು.
\s5
\p
\v 5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
\v 6 ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, <<ಇನ್ನೊಂದು ಪಾತ್ರೆಯನ್ನು ತಂದಿಡು>> ಎನ್ನಲು ಅವನು, <<ಪಾತ್ರೆಗಳೆಲ್ಲ ಮುಗಿದು ಹೋದವು>> ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
\s5
\p
\v 7 ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, <<ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ>> ಎಂದನು.
\s ಶೂನೇಮ್ಯಳ ಸತ್ತುಹೋದ ಮಗನಿಗೆ ಜೀವದಾನ
\s5
\p
\v 8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
\v 9 ಆ ಸ್ತ್ರೀಯು ತನ್ನ ಗಂಡನಿಗೆ, <<ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
\s5
\v 10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ>> ಎಂದು ಹೇಳಿದಳು.
\v 11 ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
\s5
\v 12 ಅನಂತರ, <<ಆ ಶೂನೇಮ್ಯಳನ್ನು ಕರೆಯಿರಿ>> ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.
\v 13 ಆಗ ಎಲೀಷನು ಗೇಹಜಿಗೆ <<ನೀನು ಆಕೆಗೆ ಹೇಳು, <ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ> ಎಂದು ಕೇಳಲು>> ಆಕೆಯು, <<ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ>> ಎಂದು ಉತ್ತರಕೊಟ್ಟಳು.
\s5
\p
\v 14 ಆ ಮೇಲೆ ಎಲೀಷನು ಗೇಹಜಿಗೆ, <<ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು>> ಎಂದು ಕೇಳಲು ಅವನು, <<ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ>> ಎಂದನು.
\v 15 ಇದನ್ನು ಕೇಳಿ ಎಲೀಷನು, <<ಆ ಸ್ತ್ರೀಯನ್ನು ಕರೆ>> ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
\v 16 ಎಲೀಷನು ಆಕೆಗೆ, <<ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ>> ಎಂದು ಹೇಳಿದನು. ಅದಕ್ಕೆ ಆಕೆಯು, <<ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ>> ಎಂದು ನುಡಿದಳು.
\s5
\p
\v 17 ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
\v 18 ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
\v 19 ಅಲ್ಲಿದ್ದಾಗ ಅವನು ಪಕ್ಕನೆ, <<ಅಪ್ಪಾ, ನನ್ನ ತಲೆ, ನನ್ನ ತಲೆ>> ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, <<ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು>> ಎಂದು ಆಜ್ಞಾಪಿಸಿದನು.
\v 20 ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
\s5
\p
\v 21 ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
\v 22 ಗಂಡನನ್ನು ಕರೆಯಿಸಿ ಅವನಿಗೆ, <<ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ>> ಎಂದು ಹೇಳಿದಳು.
\s5
\p
\v 23 ಅದಕ್ಕೆ ಅವನು, <<ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?>> ಎಂದನು. ಅದಕ್ಕೆ ಆಕೆಯು, <<ಎಲ್ಲವು ಸರಿಯೇ>> ಎಂದು ಹೇಳಿದಳು.
\v 24 ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, <<ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ>> ಎಂದು ಆಜ್ಞಾಪಿಸಿದಳು.
\s5
\v 25 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, <<ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ>>
\v 26 ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, <<ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?>> ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, <<ಕ್ಷೇಮ>> ಎಂದು ಉತ್ತರ ಕೊಟ್ಟು,
\s5
\p
\v 27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, <<ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ>> ಎಂದು ಹೇಳಿದನು.
\s5
\p
\v 28 ಆಕೆಯು ದೇವರ ಮನುಷ್ಯನಿಗೆ, <<ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? <ವಂಚಿಸಬಾರದೆಂದು> ಮೊರೆಯಿಟ್ಟೆನಲ್ಲವೇ?>> ಎಂದಳು.
\v 29 ಆಗ ಎಲೀಷನು ಗೇಹಜಿಗೆ, <<ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ>> ಎಂದು ಹೇಳಿ ಕಳುಹಿಸಿದನು.
\s5
\p
\v 30 ಆದರೂ ಹುಡುಗನ ತಾಯಿ, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.
\v 31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, <<ಹುಡುಗನು ಎಚ್ಚರವಾಗಲಿಲ್ಲ>> ಎಂದನು.
\s5
\p
\v 32 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
\v 33 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
\v 34 ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
\s5
\p
\v 35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
\v 36 ಆಗ ಎಲೀಷನು ಗೇಹಜಿಗೆ, <<ಶೂನೇಮ್ಯಳನ್ನು ಕರೆ>> ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, <<ನಿನ್ನ ಮಗನನ್ನು ತೆಗೆದುಕೋ>> ಎಂದು ಹೇಳಿದನು.
\v 37 ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
\s ತಿನ್ನಲು ಯೋಗ್ಯವಾಗುವಂತೆ ಊಟವನ್ನು ಮಾರ್ಪಡಿಸಿದ್ದು
\s5
\p
\v 38 ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, <<ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು>> ಎಂದು ಆಜ್ಞಾಪಿಸಿದನು.
\v 39 ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
\s5
\p
\v 40 ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, <<ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ>> ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
\v 41 ಆಗ ಎಲೀಷನು, <<ಹಿಟ್ಟನ್ನು ತಂದು ಕೊಡಿರಿ>> ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, <<ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ>> ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.
\s ಅದ್ಭುತಕರವಾಗಿ ನೂರು ಜನರನ್ನು ಪೋಷಿಸಿದ್ದು
\s5
\p
\v 42 ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, <<ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ>> ಎಂದು ಹೇಳಿದನು.
\v 43 ಅದಕ್ಕೆ ಅವನು, <<ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ>> ಎಂದನು. ಎಲೀಷನು ಅವನಿಗೆ, <<ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ>> ಎಂದು ಹೇಳಿದನು.
\v 44 ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.
\s5
\c 5
\s ಎಲೀಷನು ಕುಷ್ಠರೋಗಿಯಾದ ನಾಮಾನನನ್ನು ವಾಸಿಮಾಡಿದ್ದು
\p
\v 1 ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
\v 2 ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.
\s5
\p
\v 3 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, <<ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು>> ಎಂದು ಹೇಳಿದಳು.
\v 4 ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.
\s5
\p
\v 5 ಅರಾಮ್ಯರ ಅರಸನು ಅವನಿಗೆ, <<ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ>> ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,
\v 6 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, <<ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ>> ಎಂಬುದಾಗಿ ಬರೆದಿತ್ತು.
\s5
\p
\v 7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, <<ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ>> ಎಂದು ಹೇಳಿದನು.
\s5
\p
\v 8 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, <<ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ>> ಎಂದು ಹೇಳಿ ಕಳುಹಿಸಿದನು.
\v 9 ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.
\v 10 ಎಲೀಷನು ಅವನಿಗೆ, <<ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ>> ಎಂದು ಹೇಳಿ ಕಳುಹಿಸಿದನು.
\s5
\p
\v 11 ನಾಮಾನನು ಇದನ್ನು ಕೇಳಿ ಕೋಪಗೊಂಡು, <<ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
\v 12 ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?>> ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.
\s5
\p
\v 13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, <<ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ <ಸ್ನಾನಮಾಡಿ ಶುದ್ಧನಾಗು> ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು>> ಎಂದು ಹೇಳಿದರು.
\v 14 ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
\s5
\p
\v 15 ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, <<ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು>> ಎಂದು ಹೇಳಿದನು.
\v 16 ಅದಕ್ಕೆ ಎಲೀಷನು, <<ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ>> ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.
\s5
\p
\v 17 ಆಗ ನಾಮಾನನು ಎಲೀಷನಿಗೆ, <<ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.
\v 18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು>> ಎಂದನು.
\v 19 ಎಲೀಷನು ಅವನಿಗೆ, <<ಸಮಾಧಾನದಿಂದ ಹೋಗು>> ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.
\s ಗೇಹಜಿಯ ದುರಾಶೆ
\s5
\p
\v 20 ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, <<ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು>> ಅಂದುಕೊಂಡು ಹೊರಟನು.
\v 21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, <<ಎಲ್ಲಾ ಕ್ಷೇಮವೋ?>> ಎಂದು ಕೇಳಿದನು.
\v 22 ಅದಕ್ಕೆ ಗೇಹಜಿಯು, <<ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ
\f +
\fr 5:22
\ft ಸುಮಾರು 34 ಕಿಲೋಗ್ರಾಂ.
\f* ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು>> ಎಂದು ಉತ್ತರ ಕೊಟ್ಟನು.
\s5
\p
\v 23 ನಾಮಾನನು, <<ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?>> ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
\v 24 ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.
\v 25 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, <<ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?>> ಎಂದು ಕೇಳಿದನು. ಅದಕ್ಕೆ ಅವನು, <<ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ>> ಎಂದು ಉತ್ತರಕೊಟ್ಟನು.
\s5
\p
\v 26 ಆಗ ಎಲೀಷನು ಗೇಹಜಿಗೆ, <<ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?
\v 27 ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು>> ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.
\s5
\c 6
\s ಮುಳುಗಿದ್ದ ಕೊಡಲಿ ತೇಲಾಡಿದ್ದು
\p
\v 1 ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, <<ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.
\v 2 ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ>> ಎಂದರು. ಎಲೀಷನು ಅವರಿಗೆ, <<ಹೋಗಿಬನ್ನಿರಿ>> ಎಂದು ಹೇಳಿದನು.
\v 3 ಅವರಲ್ಲೊಬ್ಬನು, <<ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು>> ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, <<ಬರುತ್ತೇನೆ>> ಎಂದು ಹೇಳಿ ಅವರೊಡನೆ ಹೊರಟನು.
\s5
\p
\v 4 ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,
\v 5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, <<ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು>> ಎಂದು ಕೂಗಿದನು.
\s5
\v 6 ದೇವರ ಮನುಷ್ಯನು ಅವನಿಗೆ, <<ಅದು ಎಲ್ಲಿ ಬಿದ್ದಿತು?>> ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
\v 7 ಎಲೀಷನು <<ಅದನ್ನು ತೆಗೆದುಕೋ>> ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
\s ಅರಾಮ್ಯರ ಸೋಲು
\s5
\p
\v 8 ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, <<ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು>> ಎಂದನು.
\v 9 ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, <<ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ>> ಎಂದು ತಿಳಿಸುತ್ತಿದ್ದನು.
\s5
\p
\v 10 ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
\v 11 ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, <<ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಿದನು.
\s5
\p
\v 12 ಆಗ ಅವರಲ್ಲೊಬ್ಬನು ಅವನಿಗೆ, <<ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ>> ಎಂದನು.
\v 13 ಅರಸನು ಇದನ್ನು ಕೇಳಿ, <<ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ>> ಎಂದು ಹೇಳಿದನು. <<ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ>> ಎಂದು ಅರಸನು ತಿಳಿದುಕೊಂಡನು.
\s5
\p
\v 14 ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
\v 15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, <<ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?>> ಎಂದನು.
\v 16 ಆಗ ಎಲೀಷನು ಅವನಿಗೆ, <<ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ>> ಎಂದು ಹೇಳಿ,
\s5
\p
\v 17 <<ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ>> ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
\v 18 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, <<ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು>> ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
\v 19 ಆಗ ಎಲೀಷನು ಅವರಿಗೆ, <<ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ>> ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.
\s5
\p
\v 20 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, <<ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ>> ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
\v 21 ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, <<ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?>> ಎಂದು ಕೇಳಿದನು.
\s5
\p
\v 22 ಅದಕ್ಕೆ ಅವನು, <<ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ>> ಎಂದು ಉತ್ತರಕೊಟ್ಟನು.
\v 23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.
\s ಯೆಹೋವನು ಪಟ್ಟಣವನ್ನು ರಕ್ಷಿಸಿದ್ದು
\s5
\p
\v 24 ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
\v 25 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
\v 26 ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, <<ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು>> ಎಂದು ಮೊರೆಯಿಟ್ಟಳು.
\s5
\p
\v 27 ಅರಸನು ಆಕೆಗೆ, <<ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ>> ಎಂದು ಕೇಳಿ,
\v 28 <<ನಿನಗಿರುವ ದುಃಖ ಯಾವುದು>> ಎಂದು ಅರಸನು ಕೇಳಿದನು. ಆಗ ಆಕೆಯು, <<ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ>> ಎಂದು ಹೇಳಿದ್ದರಿಂದ,
\v 29 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, <<ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು>> ಎಂದು ಹೇಳಿದಳು.
\s5
\p
\v 30 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
\v 31 ಇದಲ್ಲದೆ ಅವನು, <<ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಆಣೆಯಿಟ್ಟುಕೊಂಡನು.
\s5
\p
\v 32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, <<ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ>> ಎಂದು ಹೇಳಿದನು.
\v 33 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, <<ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು>> ಎಂದನು.
\s5
\c 7
\p
\v 1 ಆಗ ಎಲೀಷನು ಅವನಿಗೆ, <<ಯೆಹೋವನ ವಾಕ್ಯವನ್ನು ಕೇಳು, ಆತನು, <ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು> >> ಎನ್ನುತ್ತಾನೆ ಎಂದು ಹೇಳಿದನು.
\v 2 ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, <<ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು>> ಎನ್ನಲು ಎಲೀಷನು ಅವನಿಗೆ, <<ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ>> ಎಂದು ಹೇಳಿದನು.
\s ಅರಾಮ್ಯರ ಪಲಾಯನ
\s5
\p
\v 3 ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, <<ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
\v 4 ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ>> ಎಂದು ಮಾತನಾಡಿಕೊಂಡರು.
\s5
\p
\v 5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
\v 6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, <<ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ>> ಅಂದುಕೊಂಡು,
\s5
\v 7 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
\v 8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
\s5
\p
\v 9 ಅನಂತರ ಅವರು, <<ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ>> ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
\v 10 ಊರಬಾಗಿಲಿಗೆ ಬಂದು ಕಾವಲುಗಾರರಿಗೆ, <<ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ>> ಎಂದು ಕೂಗಿ ಹೇಳಿದರು.
\v 11 ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
\s5
\p
\v 12 ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, <<ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ>> ಎಂದನು.
\v 13 ಆಗ ಅವರಲ್ಲೊಬ್ಬನು ಅರಸನಿಗೆ, <<ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ>> ಎಂದು ಹೇಳಿದನು.
\s5
\p
\v 14 ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
\v 15 ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
\s5
\p
\v 16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
\v 17 ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
\s5
\p
\v 18 ದೇವರ ಮನುಷ್ಯನು ಅರಸನಿಗೆ, <<ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು>> ಎಂದು ಹೇಳಿದನು.
\v 19 ಆ ಸರದಾರನು ದೇವರ ಮನುಷ್ಯನಿಗೆ, <<ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?>> ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, <<ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ>> ಎಂದು ನುಡಿದಿದ್ದನು.
\v 20 ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.
\s5
\c 8
\s ಶೂನೇಮ್ಯಳಾದ ಸ್ತ್ರೀಯು ಸ್ವತ್ತನ್ನು ತಿರುಗಿ ಪಡೆದುಕೊಂಡದ್ದು
\p
\v 1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, <<ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು>> ಎಂದು ಹೇಳಿದನು.
\v 2 ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
\s5
\v 3 ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.
\v 4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, <<ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು>> ಎಂದು ಆಜ್ಞಾಪಿಸಿದ್ದನು.
\s5
\p
\v 5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, <<ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ>> ಎಂದು ಹೇಳಿದನು.
\v 6 ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು>> ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
\s ಎಲೀಷನೂ ಹಜಾಯೇಲನೂ
\s5
\p
\v 7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. <<ದೇವರ ಮನುಷ್ಯನು ಬಂದಿದ್ದಾನೆ>> ಎಂಬ ವರ್ತಮಾನವನ್ನು ಅರಸನು ಕೇಳಿ,
\v 8 ಅರಸನು
\f +
\fr 8:8
\ft ಅರಸನ ಅಧಿಕಾರಿಗಳಲ್ಲಿ ಒಬ್ಬನು.
\f* ಹಜಾಯೇಲನಿಗೆ, <<ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು>> ಎಂದು ಆಜ್ಞಾಪಿಸಿದನು.
\v 9 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, <<ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ>> ಎಂದು ಹೇಳಿದನು.
\s5
\p
\v 10 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, <<ಹೇಗೂ ನಿನಗೆ ವಾಸಿಯಾಗುವುದು>> ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.
\v 11 ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.
\v 12 ಹಜಾಯೇಲನು ಅವನನ್ನು, <<ನನ್ನ ಒಡೆಯಾ, ಯಾಕೆ ಅಳುತ್ತಿ?>> ಎಂದು ಕೇಳಿದನು. ಅದಕ್ಕೆ ಅವನು, <<ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ>> ಎಂದು ಉತ್ತರಕೊಟ್ಟನು.
\s5
\p
\v 13 ಹಜಾಯೇಲನು ಎಲೀಷನಿಗೆ, <<ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?>> ಎಂದು ಕೇಳಲು ಅವನು, <<ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ>> ಎಂದನು.
\v 14 ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, <<ಎಲೀಷನು ಏನು ಹೇಳಿದನು?>> ಎಂದು ಕೇಳಿದನು. ಅದಕ್ಕೆ ಇವನು, <<ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು>> ಎಂಬುದಾಗಿ ಉತ್ತರಕೊಟ್ಟನು.
\v 15 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
\s ಯೆಹೂದ್ಯರ ಅರಸನಾದ ಯೆಹೋರಾಮ್ ಅಹಜ್ಯ
\s5
\p
\v 16 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
\v 17 ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
\s5
\v 18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\v 19 ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.
\s5
\p
\v 20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.
\v 21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
\s5
\p
\v 22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.
\v 23 ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
\v 24 ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.
\s ಯೆಹೂದ್ಯರ ಅರಸನಾದ ಅಹಜ್ಯ
\s5
\p
\v 25 ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
\v 26 ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
\v 27 ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\p
\v 28 ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
\v 29 ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
\s5
\c 9
\s ಯೇಹುವಿನ ರಾಜಾಭಿಷೇಕ
\p
\v 1 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, <<ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.>>
\v 2 ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
\v 3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, <<ಯೆಹೋವನು ಹೀಗೆ ಅನ್ನುತ್ತಾನೆ, <ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ> ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು>> ಎಂದು ಆಜ್ಞಾಪಿಸಿದನು.
\s5
\p
\v 4 ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
\v 5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, <<ನಾಯಕನೇ ನಿನಗೊಂದು ಮಾತು ಹೇಳುವುದಿದೆ>> ಎಂದನು. ಯೇಹುವು ಅವನಿಗೆ, <<ನಮ್ಮಲ್ಲಿ ಯಾರಿಗೆ?>> ಎಂದು ಕೇಳಲು ಅವನು, <<ಸೇನಾಧಿಪತಿಯಾದ ನಿನಗೆ>> ಎಂದು ಉತ್ತರಕೊಟ್ಟನು.
\v 6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, <<ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, <ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
\s5
\v 7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
\v 8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
\s5
\v 9 ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
\v 10 ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು> >> ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
\s5
\p
\v 11 ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, <<ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?>> ಎಂದು ಕೇಳಿದರು. ಅದಕ್ಕೆ ಯೇಹುವು, <<ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ>> ಎಂದು ಉತ್ತರಕೊಟ್ಟನು.
\v 12 ಆದರೆ ಅವರು, <<ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು>> ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, <<ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.>>
\v 13 ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
\s ಇಸ್ರಾಯೇಲಿನ ಅರಸನಾದ ಯೋರಾಮನ ಕೊಲೆ
\s5
\p
\v 14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
\v 15 ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, <<ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ>> ಎಂದು ಹೇಳಿದನು.
\p
\v 16 ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
\s5
\v 17 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, <<ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ>> ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, <<ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು>> ಎಂಬುದಾಗಿ ಆಜ್ಞಾಪಿಸಿದನು.
\v 18 ರಾಹುತನು ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ>> ಎಂದು ಹೇಳಿದನು. ಕಾವಲುಗಾರನು ಅರಸನಿಗೆ, <<ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ>> ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.
\s5
\p
\v 19 ಅವನು ಹೋಗಿ ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ>> ಎಂದನು.
\v 20 ಕಾವಲುಗಾರನು ತಿರುಗಿ ಅರಸನಿಗೆ, <<ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು>> ಎಂದು ಹೇಳಿದನು.
\s5
\v 21 ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
\v 22 ಯೋರಾಮನು ಅವನನ್ನು ಕಂಡ ಕೂಡಲೆ, <<ಯೇಹುವೇ, ಶುಭವೋ?>> ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, <<ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?>> ಎಂದು ಉತ್ತರಕೊಟ್ಟನು.
\s5
\v 23 ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, <<ಅಹಜ್ಯನೇ, ಇದು ಒಳಸಂಚು>> ಎಂದು ಹೇಳಿ ಓಡಿಹೋದನು.
\v 24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
\s5
\p
\v 25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, <<ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
\v 26 ಯೆಹೋವನು ಅಹಾಬನಿಗೆ, <ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು> ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು>> ಎಂದು ಹೇಳಿದನು.
\s ಯೆಹೂದ್ಯರ ಅರಸನಾದ ಅಹಜ್ಯನ ಕೊಲೆ
\s5
\p
\v 27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, <<ಅವನನ್ನೂ ರಥದಲ್ಲಿಯೇ ಹೊಡೆಯಿರಿ>> ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
\v 28 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
\s5
\v 29 ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
\s ಈಜೆಬೆಲಳ ಕೊಲೆ
\s5
\p
\v 30 ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
\p
\v 31 ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, <<ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?>> ಎಂದು ಕೇಳಿದಳು.
\v 32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, <<ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?>> ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.
\s5
\p
\v 33 ಅವನು ಅವರಿಗೆ, <<ಆಕೆಯನ್ನು ಕೆಳಗೆ ದೊಬ್ಬಿರಿ>> ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
\v 34 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, <<ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ>> ಎಂದು ಆಜ್ಞಾಪಿಸಿದನು.
\s5
\p
\v 35 ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
\v 36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, <<ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
\v 37 ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು>> ಎಂದನು.
\s5
\c 10
\s ಅಹಾಬನ ಕುಟುಂಬದವರೆಲ್ಲರ ಕೊಲೆ
\p
\v 1 ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
\v 2 ಪತ್ರಗಳಲ್ಲಿ, <<ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
\v 3 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ>> ಎಂಬುದಾಗಿ ಬರೆದಿತ್ತು.
\s5
\p
\v 4 ಅವರು ಬಹಳವಾಗಿ ಭಯಪಟ್ಟು, <<ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?>> ಅಂದುಕೊಂಡರು.
\v 5 ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, <<ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ>> ಎಂದು ಹೇಳಿ ಕಳುಹಿಸಿದರು.
\s5
\p
\v 6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, <<ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ>> ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
\v 7 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
\s5
\p
\v 8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, <<ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ>> ಎಂದು ಆಜ್ಞಾಪಿಸಿದನು.
\v 9 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, <<ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
\s5
\v 10 ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ>> ಎಂದು ಹೇಳಿದನು.
\v 11 ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
\s5
\p
\v 12 ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
\v 13 ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, <<ನೀವು ಯಾರು?>> ಎಂದು ಕೇಳಿದನು. ಅದಕ್ಕೆ ಅವರು, <<ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ>> ಎಂದು ಉತ್ತರ ಕೊಟ್ಟರು.
\v 14 ಆಗ ಯೇಹುವು ತನ್ನ ಸೇವಕರಿಗೆ, <<ಅವರನ್ನು ಜೀವಸಹಿತ ಹಿಡಿಯಿರಿ>> ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
\s5
\p
\v 15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, <<ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?>> ಎಂದು ಕೇಳಿದನು. ಅವನು, <<ಹೌದು>> ಎಂದು ಉತ್ತರ ಕೊಟ್ಟನು. ಆಗ ಯೇಹುವು, <<ಹಾಗಾದರೆ ನಿನ್ನ ಕೈಯನ್ನು ಕೊಡು>> ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
\v 16 ಯೇಹುವು ಅವನಿಗೆ, <<ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು>> ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
\v 17 ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
\s ಬಾಳ್ ದೇವತೆಯ ಆರಾಧಕರ ಹತ್ಯೆ
\s5
\p
\v 18 ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, <<ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
\v 19 ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು>> ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
\v 20 ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, <<ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು>> ಎಂದು ಹೇಳಿದನು.
\s5
\p
\v 21 ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
\v 22 ಯೇಹುವು ವಸ್ತ್ರಗಾರದ ಅಧಿಪತಿಗೆ, <<ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು>> ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
\s5
\p
\v 23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, <<ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು>> ಎಂದು ಹೇಳಿದನು.
\v 24 ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, <<ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು>> ಎಂಬುದಾಗಿ ಆಜ್ಞಾಪಿಸಿದ್ದನು.
\s5
\p
\v 25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, <<ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು>> ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
\v 26 ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
\v 27 ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
\p
\v 28 ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
\s5
\v 29 ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
\v 30 ಯೆಹೋವನು ಯೇಹುವಿಗೆ, <<ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು>> ಎಂದು ಹೇಳಿದನು.
\v 31 ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
\s ಯೇಹುವಿನ ಮರಣ
\s5
\p
\v 32 ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
\v 33 ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
\s5
\p
\v 34 ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\v 35 ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
\v 36 ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.
\s5
\c 11
\s ಅತಲ್ಯ
\p
\v 1 ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
\v 2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
\v 3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
\s5
\p
\v 4 ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
\v 5 ಯೆಹೋಯಾದಾವನು ಅವರಿಗೆ, <<ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
\v 6 ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
\s5
\v 7 ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
\v 8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ>> ಎಂದು ಹೇಳಿದನು.
\s5
\v 9 ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
\v 10 ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
\s5
\p
\v 11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
\v 12 ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, <<ಅರಸನು ಚಿರಂಜೀವಿಯಾಗಿರಲಿ>> ಎಂದು ಕೂಗಿದರು.
\s5
\p
\v 13 ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
\v 14 ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ! ದ್ರೋಹ!>> ಎಂದು ಕೂಗಿದಳು.
\s5
\p
\v 15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, <<ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ>> ಎಂದು ಆಜ್ಞಾಪಿಸಿದನು.
\v 16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
\s ಯೆಹೋಯಾದಾವನಿಂದ ಧಾರ್ಮಿಕ ಸುಧಾರಣೆ
\s5
\p
\v 17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
\v 18 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
\s5
\p
\v 19 ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
\v 20 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
\s5
\v 21 ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.
\s5
\c 12
\s ಯೆಹೂದದ ಅರಸನಾದ ಯೆಹೋವಾಷನು
\p
\v 1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
\v 2 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
\v 3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
\s5
\p
\v 4 ಯೆಹೋವಾಷನು ಯಾಜಕರಿಗೆ, <<ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
\v 5 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು>> ಎಂದು ಆಜ್ಞಾಪಿಸಿದನು.
\s5
\p
\v 6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
\v 7 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, <<ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ>> ಎಂದು ಹೇಳಿದನು.
\v 8 ಆಗ ಯಾಜಕರು ಅವನಿಗೆ, <<ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ>> ಎಂಬುದಾಗಿ ಮಾತುಕೊಟ್ಟರು.
\s5
\p
\v 9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
\v 10 ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
\s5
\p
\v 11 ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
\v 12 ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
\s5
\p
\v 13 ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
\v 14 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
\s5
\p
\v 15 ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
\v 16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
\s5
\p
\v 17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
\v 18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
\s5
\p
\v 19 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 20 ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ <<ಸಿಲ್ಲಾ>> ಊರಿಗೆ ಇಳಿದು ಹೋಗುವ ಮಾರ್ಗವಾದ <<ಮಿಲ್ಲೋ>> ಗೃಹದಲ್ಲಿ ಯೆಹೋವಾಷನನ್ನು ಕೊಂದರು.
\v 21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
\s5
\c 13
\s ಇಸ್ರಾಯೇಲರ ಅರಸನಾದ ಯೆಹೋವಾಹಾಜನು
\p
\v 1 ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.
\v 2 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\p
\v 3 ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
\v 4 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
\v 5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
\s5
\p
\v 6 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
\v 7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
\s5
\p
\v 8 ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 9 ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
\s ಇಸ್ರಾಯೇಲರ ಅರಸನಾದ ಯೋವಾಷನು
\s5
\p
\v 10 ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
\v 11 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\v 12 ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 13 ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.
\s ಎಲೀಷನ ಮರಣ
\s5
\p
\v 14 ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, <<ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ>> ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
\v 15 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಿಲ್ಲನ್ನೂ, ಬಾಣಗಳನ್ನೂ ತರಿಸು>> ಎಂದು ಹೇಳಿದನು. ಅವನು ತೆಗೆದುಕೊಂಡನು.
\v 16 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಿಲ್ಲನ್ನು ಹಿಡಿದುಕೋ>> ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.
\s5
\p
\v 17 ಎಲೀಷನು, <<ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ>> ಎಂದನು. ಅವನು ತೆರೆದನು. ಅನಂತರ ಎಲೀಷನು, <<ಬಾಣವನ್ನು ಎಸೆ>> ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, <<ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ>> ಎಂದು ಹೇಳಿದನು.
\v 18 ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಾಣಗಳನ್ನು ತೆಗೆದುಕೋ>> ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, <<ಇವುಗಳಿಂದ ನೆಲವನ್ನು ಹೊಡಿ>> ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
\v 19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, <<ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ>> ಎಂದು ಹೇಳಿದನು.
\s5
\p
\v 20 ಎಲೀಷನು ಮೃತಿ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
\v 21 ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.
\s ಇಸ್ರಾಯೇಲ್ಯರಿಗೂ ಅರಾಮ್ಯರಿಗೂ ನಡೆದ ಯುದ್ಧ
\s5
\p
\v 22 ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
\v 23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
\p
\v 24 ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
\v 25 ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
\s5
\c 14
\s ಯೆಹೂದದ ಅರಸನಾದ ಅಮಚ್ಯನು
\p
\v 1 ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
\v 2 ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.
\v 3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.
\s5
\p
\v 4 ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
\v 5 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.
\s5
\p
\v 6 ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, <<ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು>> ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
\v 7 ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
\s5
\p
\v 8 ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ>> ಎಂದು ಹೇಳಿದನು.
\v 9 ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, <<ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, <ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು> ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.
\v 10 ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?>> ಎಂದು ಉತ್ತರ ಕೊಟ್ಟುಕಳುಹಿಸಿದನು.
\s5
\p
\v 11 ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
\v 12 ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
\s5
\p
\v 13 ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.
\v 14 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
\s5
\v 15 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\v 16 ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.
\s5
\p
\v 17 ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
\v 18 ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
\v 19 ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
\s5
\p
\v 20 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.
\v 21 ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.
\v 22 ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.
\s ಇಸ್ರಾಯೇಲರ ಅರಸನಾದ ಎರಡನೆಯ ಯಾರೊಬ್ಬಾಮನು
\s5
\p
\v 23 ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.
\v 24 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\v 25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.
\s5
\p
\v 26 ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
\v 27 ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.
\s5
\p
\v 28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
\v 29 ಯಾರೊಬ್ಬಾಮನು ಇಸ್ರಾಯೇಲರ ರಾಜರಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆಕರ್ಯನು ಅರಸನಾದನು.
\s5
\c 15
\s ಯೆಹೂದದ ಅರಸನಾದ ಅಜರ್ಯ
\p
\v 1 ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
\v 2 ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
\v 3 ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
\s5
\p
\v 4 ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
\v 5 ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
\s5
\p
\v 6 ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 7 ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.
\s ಇಸ್ರಾಯೇಲರ ಅರಸನಾದ ಜೆಕರ್ಯ
\s5
\p
\v 8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.
\v 9 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\p
\v 10 ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
\v 11 ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 12 <<ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು>> ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.
\s ಇಸ್ರಾಯೇಲರ ಅರಸನಾದ ಶಲ್ಲೂಮನು
\s5
\p
\v 13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
\v 14 ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
\s5
\v 15 ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
\v 16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
\s ಇಸ್ರಾಯೇಲರ ಅರಸನಾದ ಮೆನಹೇಮನು
\s5
\p
\v 17 ಯೆಹೂದದ ಅರಸನಾದ
\f +
\fr 15:17
\ft ಅಂದರೆ ಉಜ್ಜೀಯ.
\f* ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
\v 18 ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\v 19 ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ
\f +
\fr 15:19
\ft ಸುಮಾರು 34,000 ಕಿಲೋಗ್ರಾಂ.
\f* ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
\v 20 ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ
\f +
\fr 15:20
\ft ಸುಮಾರು 570 ಕಿಲೋಗ್ರಾಂ.
\f* ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.
\s5
\p
\v 21 ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 22 ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು.
\s ಇಸ್ರಾಯೇಲರ ಅರಸನಾದ ಪೆಕಹ್ಯ
\s5
\p
\v 23 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
\v 24 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\p
\v 25 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
\v 26 ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\s ಇಸ್ರಾಯೇಲರ ಅರಸನಾದ ಪೆಕಹ
\s5
\p
\v 27 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
\v 28 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\p
\v 29 ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
\v 30 ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
\v 31 ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\s ಇಸ್ರಾಯೇಲರ ಅರಸನಾದ ಯೋತಾಮನು
\s5
\p
\v 32 ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.
\v 33 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
\s5
\v 34 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
\v 35 ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
\v 36 ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\p
\v 37 ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
\v 38 ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
\s5
\c 16
\s ಯೆಹೂದದ ಅರಸನಾದ ಆಹಾಜನು
\p
\v 1 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
\v 2 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
\s5
\v 3 ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
\v 4 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
\s5
\v 5 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
\v 6 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
\s5
\v 7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು>> ಎಂದು ಕೇಳಿಕೊಂಡನು.
\v 8 ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
\v 9 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
\s5
\p
\v 10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
\v 11 ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
\v 12 ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
\s5
\v 13 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
\v 14 ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
\s5
\v 15 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, <<ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು>> ಎಂದು ಹೇಳಿದನು.
\p
\v 16 ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
\s5
\v 17 ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
\v 18 ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
\s5
\v 19 ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
\v 20 ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
\s5
\c 17
\s ಇಸ್ರಾಯೇಲರ ಕೊನೆಯ ಅರಸನಾದ ಹೋಶೇಯನು
\p
\v 1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
\v 2 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
\v 3 ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
\s5
\v 4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
\s ಸಮಾರ್ಯದ ಪತನ
\p
\v 5 ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
\v 6 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
\s ಇಸ್ರಾಯೇಲರ ಸೋಲಿಗೆ ಕಾರಣಗಳು
\s5
\p
\v 7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
\v 8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
\s5
\v 9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
\v 10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
\s5
\v 11 ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
\v 12 <<ನೀವು ಇಂತಹ ಕೃತ್ಯಗಳನ್ನು ಮಾಡಬಾರದು>> ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
\s5
\v 13 ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, <<ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ>> ಎಂದು ಖಂಡಿತವಾಗಿ ಹೇಳಿಸಿದನು.
\s5
\v 14 ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
\v 15 ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
\s5
\v 16 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
\v 17 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
\v 18 ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
\s5
\v 19 ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
\v 20 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
\s5
\v 21 ಆತನು
\f +
\fr 17:21
\ft ಉತ್ತರ ರಾಜ್ಯ.
\f* ಇಸ್ರಾಯೇಲರ ರಾಜ್ಯವನ್ನು
\f +
\fr 17:21
\ft ದಕ್ಷಿಣ ರಾಜ್ಯವಾದ ಯೆಹೂದ.
\f* ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
\v 22 ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
\v 23 ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
\s ಸಮಾರ್ಯದವರೆನ್ನಿಸಿಕೊಳ್ಳುವ ಮಿಶ್ರಜನಾಂಗದವರ ಉತ್ಪತ್ತಿ
\s5
\p
\v 24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
\v 25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
\v 26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, <<ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ>> ಎಂದು ತಿಳಿಸಿದರು.
\s5
\v 27 ಆಗ ಅಶ್ಶೂರದ ಅರಸನು ಅವರಿಗೆ, <<ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ>> ಎಂದು ಆಜ್ಞಾಪಿಸಿದನು.
\v 28 ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
\s5
\v 29 ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
\v 30 ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
\v 31 ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
\s5
\v 32 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
\v 33 ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
\s5
\p
\v 34 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
\v 35 ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, <<ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
\s5
\v 36 ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
\v 37 ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
\v 38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
\s5
\v 39 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು>> ಎಂದು ಹೇಳಿದನು.
\v 40 ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
\v 41 ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
\s5
\c 18
\s ಯೆಹೂದದ ಅರಸನಾದ ಹಿಜ್ಕೀಯನು
\p
\v 1 ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
\v 2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
\v 3 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
\s5
\v 4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ <<ನೆಹುಷ್ಟಾನ್
\f +
\fr 18:4
\fq ನೆಹುಷ್ಟಾನ್
\ft ಅಂದರೆ ತಾಮ್ರದ ಸರ್ಪ.
\f* >> ಎಂಬ ಹೆಸರಿತ್ತು.
\v 5 ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
\s5
\v 6 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
\v 7 ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
\v 8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.
\s5
\p
\v 9 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.
\v 10 ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
\s5
\v 11 ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
\v 12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
\s ಅಶ್ಶೂರದವರು ಹಾಕಿದ ಬೆದರಿಕೆ
\s5
\p
\v 13 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
\v 14 ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ>> ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ
\f +
\fr 18:14
\fq ಮುನ್ನೂರು ತಲಾಂತು ಬೆಳ್ಳಿಯನ್ನೂ
\ft 10,000 ಕಿಲೋಗ್ರಾಂ.
\f* , ಮೂವತ್ತು ತಲಾಂತು ಬಂಗಾರವನ್ನೂ
\f +
\fr 18:14
\fq ಮೂವತ್ತು ತಲಾಂತು ಬಂಗಾರವನ್ನೂ
\ft ಒಂದು ಸಾವಿರ ಕಿಲೋಗ್ರಾಂ
\f* ಕೊಡಬೇಕೆಂದು ಆಜ್ಞಾಪಿಸಿದನು.
\v 15 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.
\s5
\v 16 ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
\p
\v 17 ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.
\v 18 ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.
\s5
\v 19 ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, <<ನಿನ್ನ ಭರವಸಕ್ಕೆ ಯಾವ ಆಧಾರವುಂಟು?
\v 20 ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
\v 21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.
\s5
\v 22 ಒಂದು ವೇಳೆ ನೀವು, <ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ> ಎಂದು ಹೇಳುವುದಾದರೆ ಹಿಜ್ಕೀಯನು, <ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು> ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
\v 23 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
\s5
\v 24 ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.
\v 25 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? <ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ> >> ಎಂದನು.
\s5
\p
\v 26 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, <<ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ
\f +
\fr 18:26
\fq ಯೂದಾಯ ಭಾಷೆಯಲ್ಲಿ
\ft ಅಂದರೆ ಇಬ್ರಿಯ ಭಾಷೆಯಲ್ಲಿ.
\f* ಮಾತನಾಡಬೇಡ>> ಎಂದು ಹೇಳಿದರು.
\v 27 ಅದಕ್ಕೆ ರಬ್ಷಾಕೆಯು, <<ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು>> ಎಂದು ಉತ್ತರಕೊಟ್ಟನು.
\s5
\v 28 ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, <<ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
\v 29 ಅರಸನು ನಿಮಗೆ, <ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು>
\v 30 ಹಿಜ್ಕೀಯನು ನಿಮಗೆ, <ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ> ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ>>
\s5
\v 31 ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, <<ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
\v 32 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
\s5
\v 33 ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ?
\v 34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
\v 35 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?>> ಎಂದು ಹೇಳಿದನು.
\s5
\v 36 ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.
\v 37 ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
\s5
\c 19
\s ಹಿಜ್ಕೀಯನು ಪ್ರವಾದಿಯಾದ ಯೆಶಾಯನನ್ನು ವಿಚಾರಿಸಿದ್ದು
\p
\v 1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
\v 2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
\s5
\v 3 ಅವರು ಹಿಜ್ಕೀಯನಿಗೆ, <<ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
\v 4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ>> ಎಂದು ಹೇಳಿರಿ ಅಂದನು.
\s5
\v 5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
\v 6 ಯೆಶಾಯನು ಅವರಿಗೆ, <<ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, <ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
\v 7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು> ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ>> ಎಂದು ಉತ್ತರಕೊಟ್ಟನು.
\s ಅಶ್ಶೂರದವರು ಹಾಕಿದ ಇನ್ನೊಂದು ಬೆದರಿಕೆ
\s5
\p
\v 8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
\v 9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
\s5
\v 10 ಅವರ ಮುಖಾಂತರ, <<ಯೆಹೂದದ ಅರಸನಾದ ಹಿಜ್ಕೀಯನಿಗೆ, <ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
\v 11 ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
\s5
\v 12 ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
\v 13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.> >>
\s ಹಿಜ್ಕೀಯನ ಪ್ರಾರ್ಥನೆ
\s5
\p
\v 14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
\v 15 ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, <<ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
\s5
\v 16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
\v 17 ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
\v 18 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
\s5
\v 19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು>> ಎಂದು ಪ್ರಾರ್ಥಿಸಿದನು.
\s ಸನ್ಹೇರೀಬನ ಪತನವನ್ನು ಯೆಶಾಯನು ಮುಂತಿಳಿಸಿದ್ದು
\s5
\p
\v 20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, <<ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, <ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.>
\v 21 ಯೆಹೋವನು ಅವನನ್ನು ಕುರಿತು,
\q1 <<ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ.
\q2 ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
\q
\v 22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ?
\q2 ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ?
\q ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ
\q2 ಸದಮಲಸ್ವಾಮಿಯನ್ನಲ್ಲವೇ!
\s5
\q
\v 23 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ,
\q2 ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ.
\q ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ
\q2 ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ.
\q ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ,
\q2 ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
\q
\v 24 ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ!
\q2 ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?>>
\b
\s5
\q
\v 25 ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ?
\q2 ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ.
\q ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು
\q2 ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
\q
\v 26 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ
\q2 ಹೆದರಿ ಆಶಾಭಂಗಪಟ್ಟು ಕಳವಳಗೊಂಡರು;
\q ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ
\q2 ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ
\q ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
\b
\s5
\q
\v 27 <<ನೀನು ಕುಳಿತುಕೊಳ್ಳುವುದು,
\q ಹೋಗುವುದು, ಬರುವುದೂ ನನಗೆ ಗೊತ್ತುಂಟು.
\q2 ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
\q
\v 28 ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ,
\q2 ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ.
\q ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ
\q2 ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು>> ಎಂಬುದಾಗಿ ಹೇಳಿದ್ದಾನೆ.
\s5
\p
\v 29 ಈ ಮಾತುಗಳು ನೆರವೇರುವವು ಎಂಬುದಕ್ಕೆ
\q2 ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ
\q ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ,
\q2 ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು,
\q ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
\q
\v 30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು
\q2 ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
\q
\v 31 ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು,
\q2 ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
\s5
\p
\v 32 ಯೆಹೋವನು ಅಶ್ಶೂರದ ಅರಸನ ವಿಷಯವಾಗಿ,
\q1 <<ನನ್ನ ಮಾತನ್ನು ಕೇಳು
\q2 ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ.
\q ಅದಕ್ಕೆ ಬಾಣವನ್ನೆಸೆಯುವುದಿಲ್ಲ.
\q2 ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ.
\q ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
\q2
\v 33 ಅವನು ಬಂದ ದಾರಿಯಿಂದಲೇ
\q ಹಿಂದಿರುಗಿ ಹೋಗುವನು.
\q2 ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
\q
\v 34 ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು>> ಎಂದು ವಾಗ್ದಾನ ಮಾಡಿದ್ದಾನೆ.
\s5
\p
\v 35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
\v 36 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
\v 37 ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
\s5
\c 20
\s ಹಿಜ್ಕೀಯನ ರೋಗ ನಿವಾರಣೆ
\p
\v 1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, << <ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ> ಎಂದು ಯೆಹೋವನು ತಿಳಿಸಿದ್ದಾನೆ>> ಎಂದು ಹೇಳಿದನು.
\v 2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
\v 3 <<ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ>> ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
\s5
\p
\v 4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
\v 5 <<ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, <ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
\s5
\v 6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು> ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು>> ಅಂದನು.
\v 7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
\s5
\p
\v 8 ಹಿಜ್ಕೀಯನು ಯೆಶಾಯನಿಗೆ, <<ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?>> ಎಂದು ಕೇಳಿದನು.
\v 9 ಅದಕ್ಕೆ ಯೆಶಾಯನು, <<ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ?ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?>> ಎಂದು ಕೇಳಿದನು.
\s5
\p
\v 10 ಅದಕ್ಕೆ ಹಿಜ್ಕೀಯನು, <<ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು>> ಎಂದು ಹೇಳಿದನು.
\v 11 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
\s ಬಾಬೆಲಿನಿಂದ ಬಂದ ದೂತರು
\s5
\p
\v 12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
\v 13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
\s5
\p
\v 14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, <<ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?>> ಎಂದು ಕೇಳಲು ಅವನು, <<ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು>> ಎಂದು ಉತ್ತರ ಕೊಟ್ಟನು.
\v 15 ಯೆಶಾಯನು ತಿರುಗಿ ಹಿಜ್ಕೀಯನನ್ನು, <<ಅವರು ನಿನ್ನ ಮನೆಯಲ್ಲಿ ಏನು ನೋಡಿದರು?>> ಎಂದು ಕೇಳಲು ಅವನು, <<ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ>> ಎಂದನು.
\s5
\p
\v 16 ಆಗ ಯೆಶಾಯನು ಹಿಜ್ಕೀಯನಿಗೆ, <<ಯೆಹೋವನ ಮಾತನ್ನು ಕೇಳು,
\v 17 <ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬೆಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
\v 18 ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ> >> ಎಂದು ಹೇಳಿದನು.
\s5
\p
\v 19 ಹಿಜ್ಕೀಯನು ಯೆಶಾಯನಿಗೆ, <<ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?>> ಎಂದು ಕೊಂಡನು.
\v 20 ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 21 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
\s5
\c 21
\s ಯೆಹೂದದ ಅರಸನಾದ ಮನಸ್ಸೆಯು
\p
\v 1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
\v 2 ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 3 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
\s5
\v 4 ಇದಲ್ಲದೆ, <<ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು>> ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.
\v 5 ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
\v 6 ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
\s5
\v 7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, <<ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು
\v 8 ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು>> ಎಂದು ಹೇಳಿದನು.
\v 9 ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
\s5
\v 10 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,
\v 11 <<ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,
\v 12 ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.
\s5
\v 13 ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.
\v 14 ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.
\v 15 ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ>> ಎಂದು ಹೇಳಿಸಿದನು.
\s5
\v 16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
\v 17 ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 18 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.
\s ಯೆಹೂದದ ಅರಸನಾದ ಆಮೋನನು
\s5
\p
\v 19 ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
\v 20 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\s5
\v 21 ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
\v 22 ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
\v 23 ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
\s5
\v 24 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
\v 25 ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 26 ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
\s5
\c 22
\s ಯೆಹೂದದ ಅರಸನಾದ ಯೋಷೀಯನು
\p
\v 1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
\v 2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
\s5
\p
\v 3 ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ
\f +
\fr 22:3
\fq ಲೇಖಕನೂ
\ft ಕಾರ್ಯದರ್ಶಿ.
\f* ಆದ ಶಾಫಾನನನ್ನು ಕರೆದು ಅವನಿಗೆ,
\v 4 <<ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
\v 5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
\s5
\v 6 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
\v 7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು>> ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
\s ಧರ್ಮೋಪದೇಶಗ್ರಂಥವು ದೊರೆತದ್ದು
\s5
\p
\v 8 ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, <<ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ>> ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
\v 9 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, <<ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
\v 10 ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
\s5
\p
\v 11 ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
\v 12 ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
\v 13 <<ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ>> ಎಂದು ಆಜ್ಞಾಪಿಸಿದನು.
\s5
\v 14 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು <<ಹುಲ್ದ>> ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ
\f +
\fr 22:14
\fq ಯಾಜಕವಸ್ತ್ರಾಗಾರದ
\ft ಅಥವಾ ರಾಜವಸ್ತ್ರಾಗಾರದ.
\f* ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
\v 15 ಹುಲ್ದಳು ಅವರಿಗೆ, <<ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
\v 16 ಯೆಹೋವನು, <ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
\s5
\v 17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ> ಎನ್ನುತ್ತಾನೆ.
\v 18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
\v 19 <ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು>
\s5
\v 20 ಆದುದರಿಂದ, <ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು> ಎಂದು ಹೇಳಿದ್ದನ್ನು ತಿಳಿಸಿರಿ>> ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
\s5
\c 23
\s ಧರ್ಮಸಂಸ್ಥಾಪನೆ
\p
\v 1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
\v 2 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
\s5
\v 3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
\s5
\v 4 ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
\v 5 ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
\s5
\v 6 ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
\v 7 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
\s5
\v 8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
\v 9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
\s5
\v 10 ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ <<ತೋಫೆತ್>> ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
\v 11 ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ <<ಪರ್ವರೀಮ್>> ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
\s5
\v 12 ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
\v 13 ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
\v 14 ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
\s5
\v 15 ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
\v 16 ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
\s5
\v 17 ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, <<ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ>> ಎಂದು ಉತ್ತರಕೊಟ್ಟರು.
\v 18 ಆಗ ಯೋಷೀಯನು, <<ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು>> ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
\s5
\v 19 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
\v 20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
\s ಪಸ್ಕಹಬ್ಬದ ಆಚರಣೆ
\s5
\p
\v 21 ಅನಂತರ ಅರಸನು ಎಲ್ಲಾ ಜನರಿಗೆ, <<ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು>> ಎಂದು ಆಜ್ಞಾಪಿಸಿದನು.
\v 22 ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
\v 23 ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
\s5
\v 24 ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
\v 25 ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
\s5
\v 26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
\v 27 ಯೆಹೋವನು, <<ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು>> ಎಂದು ಹೇಳಿದನು.
\s5
\p
\v 28 ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.
\v 29 ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
\v 30 ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
\s ಯೆಹೂದದ ಅರಸನಾದ ಯೆಹೋವಾಹಾಜನು
\s5
\p
\v 31 ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
\v 32 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\v 33 ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ
\f +
\fr 23:33
\fq ನೂರು ತಲಾಂತು ಬೆಳ್ಳಿಯನ್ನೂ
\ft ಮೂರು ಸಾವಿರದ ನಾಲ್ಕು ನೂರು ಕಿಲೋಗ್ರಾಂ.
\f* , ಒಂದು ತಲಾಂತು ಬಂಗಾರವನ್ನೂ
\f +
\fr 23:33
\fq ಒಂದು ತಲಾಂತು ಬಂಗಾರವನ್ನೂ
\ft ಮೂವತ್ತನಾಲ್ಕು ಕಿಲೋಗ್ರಾಂ.
\f* ದಂಡ ತೆರಬೇಕಾಯಿತು.
\s5
\v 34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
\v 35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
\s ಯೆಹೂದದ ಅರಸನಾದ ಯೆಹೋಯಾಕೀಮನು
\s5
\p
\v 36 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
\v 37 ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
\s5
\c 24
\p
\v 1 ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
\v 2 ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
\s5
\v 3 ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
\v 4 ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
\s5
\v 5 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 6 ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
\s5
\v 7 ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.
\s ಯೆಹೂದದ ಅರಸನಾದ ಯೆಹೋಯಾಖೀನನು
\s5
\p
\v 8 ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
\v 9 ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
\s5
\v 10 ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
\v 11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.
\v 12 ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.
\s5
\v 13 ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
\v 14 ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
\s5
\v 15 ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.
\v 16 ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬೆಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.
\v 17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.
\s ಯೆಹೂದದ ಅರಸನಾದ ಚಿದ್ಕೀಯನು
\s5
\p
\v 18 ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
\v 19 ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
\v 20 ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
\s5
\c 25
\s ಯೆರೂಸಲೇಮಿನ ಪತನ
\p
\v 1 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
\v 2 ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
\v 3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
\s5
\v 4 ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
\v 5 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
\s5
\v 6 ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
\v 7 ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬೆಲೋನಿಗೆ ತೆಗೆದುಕೊಂಡು ಹೋದರು.
\s5
\p
\v 8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
\v 9 ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
\v 10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
\s5
\v 11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
\v 12 ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
\s5
\v 13 ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬೆಲೋನಿಗೆ ತೆಗೆದುಕೊಂಡು ಹೋದರು.
\v 14 ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
\v 15 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
\s5
\v 16 ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ
\f +
\fr 25:16
\fq ಕಡಲೆನಿಸಿಕೊಂಡ
\ft ಕಡಲಿನಾಕರದ.
\f* ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
\v 17 ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
\s5
\v 18 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
\v 19 ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
\s5
\v 20 ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
\v 21 ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
\s ದೇಶಾಧಿಪತಿಯಾದ ಗೆದಲ್ಯನು
\s5
\p
\v 22 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
\v 23 ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
\v 24 ಗೆದಲ್ಯನು ಇವರಿಗೂ ಇವರ ಜನರಿಗೂ, <<ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು>> ಎಂದು ಹೇಳಿದನು.
\s5
\v 25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
\v 26 ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
\s ಯೆಹೋಯಾಖೀನನು ಬಿಡುಗಡೆ ಹೊಂದಿದ್ದು
\s5
\p
\v 27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
\s5
\v 28 ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
\v 29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
\v 30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.