kn_ulb/13-1CH.usfm

1737 lines
280 KiB
Plaintext

\id 1CH - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h 1 ಪೂರ್ವಕಾಲವೃತ್ತಾಂತ
\toc1 ಪೂರ್ವಕಾಲವೃತ್ತಾಂತ ಪ್ರಥಮ ಭಾಗ
\toc2 1 ಪೂರ್ವಕಾಲವೃತ್ತಾಂತ
\toc3 1ch
\mt1 ಪೂರ್ವಕಾಲವೃತ್ತಾಂತ ಪ್ರಥಮ ಭಾಗ
\is ಗ್ರಂಥಕರ್ತೃತ್ವ
\ip 1 ಪೂರ್ವಕಾಲವೃತ್ತಾಂತವು ಅದರ ಗ್ರಂಥಕರ್ತನನ್ನು ನಿರ್ದಿಷ್ಟವಾಗಿ ಹೆಸರಿಸುವುದಿಲ್ಲ, ಯೆಹೂದ್ಯ ಸಂಪ್ರದಾಯವು ಶಾಸ್ತ್ರಿಯಾದ ಎಜ್ರನನ್ನು ಗ್ರಂಥಕರ್ತನೆಂದು ಪರಿಗಣಿಸುತ್ತದೆ. 1 ಪೂರ್ವಕಾಲವೃತ್ತಾಂತವು ಇಸ್ರಾಯೇಲ್ಯರ ಕುಟುಂಬಗಳ ಪಟ್ಟಿಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಇಸ್ರಾಯೇಲ್ ಎಂದು ಕರೆಯಲ್ಪಡುವ ಸಾಮ್ರಾಜ್ಯದ ಮೇಲಿನ ದಾವೀದನ ಆಡಳಿತದ ವೃತ್ತಾಂತದೊಂದಿಗೆ ಇದು ಮುಂದುವರೆಯುತ್ತದೆ, ಈ ಪುಸ್ತಕವು ಹಳೆಯ ಒಡಂಬಡಿಕೆಯ ಅತ್ಯುನ್ನತ ವ್ಯಕ್ತಿಗಳಲ್ಲಿ ಒಬ್ಬನಾದ ಅರಸನಾದ ದಾವೀದನ ಕಥೆಯ ನಿಕಟ ಚಿತ್ರಣವಾಗಿದೆ. ಇದರ ವಿಶಾಲ ನೋಟವು ಪ್ರಾಚೀನ ಇಸ್ರಾಯೇಲಿನ ರಾಜಕೀಯ ಮತ್ತು ಧಾರ್ಮಿಕ ಇತಿಹಾಸವನ್ನು ಒಳಗೊಂಡಿದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ. ಪೂ. 450-400 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಇದು ಬಾಬೆಲಿನ ಸೆರೆವಾಸದಿಂದ ಮರಳಿಬಂದ ಇಸ್ರಾಯೇಲ್ಯರ ಹಿಂದಿರುಗುವಿಕೆಯ ನಂತರ ಎಂಬುದು ಸ್ಪಷ್ಟವಾಗಿದೆ. 1 ಪೂರ್ವಕಾಲವೃತ್ತಾಂತ 3:19-24 ರಲ್ಲಿರುವ ಪಟ್ಟಿಯು ದಾವೀದನ ವಂಶಾವಳಿಯನ್ನು ಜೆರುಬ್ಬಾಬೆಲಿನ ನಂತರದ ಆರನೇ ಪೀಳಿಗೆಯವರೆಗೆ ವಿಸ್ತರಿಸಿದೆ.
\is ಸ್ವೀಕೃತದಾರ
\ip ಪ್ರಾಚೀನ ಯೆಹೂದ್ಯ ಜನರು ಮತ್ತು ಸತ್ಯವೇದದ ಮುಂದಿನ ಓದುಗಾರರು.
\is ಉದ್ದೇಶ
\ip ಹಿಂದಿರುಗಿ ಬಂದ ಇಸ್ರಾಯೇಲ್ಯರಿಗೆ ದೇವರನ್ನು ಆರಾಧಿಸುವುದು ಹೇಗೆ ಎಂದು ತಿಳಿದುಕೊಳ್ಳುವಂತೆ ಸಹಾಯ ಮಾಡಲು 1 ಪೂರ್ವಕಾಲವೃತ್ತಾಂತ ಪುಸ್ತಕವನ್ನು ಸೆರೆವಾಸದ ನಂತರ ಬರೆಯಲ್ಪಟ್ಟಿತು. ಇದು ಯೆಹೂದ, ಬೆನ್ಯಾಮೀನ್ ಮತ್ತು ಲೇವಿಯರ ಕುಲಗಳ ದಕ್ಷಿಣ ಸಾಮ್ರಾಜ್ಯದ ಮೇಲೆ ಗಮನವನ್ನು ಕೇಂದ್ರೀಕರಿಸುತ್ತದೆ. ಈ ಕುಲಗಳು ದೇವರಿಗೆ ಹೆಚ್ಚು ನಂಬಿಗಸ್ತರಾಗಿರಬೇಕೆಂದು ಉದ್ದೇಶಿಸಲಾಗಿದೆ. ದೇವರು ದಾವೀದನ ಮನೆತನವನ್ನು ಅಥವಾ ಆಳ್ವಿಕೆಯನ್ನು ಶಾಶ್ವತವಾಗಿ ಸ್ಥಾಪಿಸಲು ದಾವೀದನೊಂದಿಗೆ ತನ್ನ ಒಡಂಬಡಿಕೆಯನ್ನು ಗೌರವಿಸಿದನು. ಭೂಲೋಕದ ಅರಸರಿಗೆ ಅದನ್ನು ಮಾಡಲು ಆಗುವುದಿಲ್ಲ, ದಾವೀದ ಮತ್ತು ಸೊಲೊಮೋನನ ಮೂಲಕ, ದೇವರು ತನ್ನ ದೇವಾಲಯವನ್ನು ಸ್ಥಾಪಿಸಿದನು, ಜನರು ಅಲ್ಲಿಗೆ ಬಂದು ಆರಾಧಿಸಬಹುದು. ಸೊಲೊಮೋನನ ದೇವಾಲಯವು ಬಾಬೆಲಿನವರ ಆಕ್ರಮಣದಿಂದ ನಾಶವಾಯಿತು.
\is ಮುಖ್ಯಾಂಶ
\ip ಇಸ್ರಾಯೇಲ್ಯರ ಆಧ್ಯಾತ್ಮಿಕ ಚರಿತ್ರೆ
\iot ಪರಿವಿಡಿ
\io1 1. ವಂಶಾವಳಿಗಳು (ಅಧ್ಯಾಯ 1-9)
\io1 2. ಸೌಲನ ಮರಣ (ಅಧ್ಯಾಯ 10)
\io1 3. ದಾವೀದನ ಅಭಿಷೇಕ ಮತ್ತು ರಾಜತ್ವ (ಅಧ್ಯಾಯ 11-29)
\s5
\c 1
\s ಆದಾಮನಿಂದ ಅಬ್ರಹಾಮನವರೆಗೆ ಬೆಳೆದು ಬಂದ ವಂಶಾವಳಿ
\p
\v 1 ಆದಾಮನ ಸಂತಾನದವರು; ಸೇತ್, ಎನೋಷ್,
\v 2 ಕೇನಾನ್, ಮಹಲಲೇಲ್, ಯೆರೆದ್,
\v 3 ಹನೋಕ್, ಮೆತೂಷೆಲಹ, ಲೆಮೆಕ್,
\v 4 ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.
\s ಯೆಫೆತರು
\s5
\p
\v 5 ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.
\v 6 ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.
\v 7 ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.
\s ಹಾಮನ್ಯರು
\s5
\p
\v 8 ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು.
\v 9 ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ತ, ರಮ್ಮ ಸಬ್ತೆಕ ಎಂಬುವರು. ರಮ್ಮನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು.
\v 10 ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.
\s5
\v 11 ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ,
\v 12 ಪತ್ರುಸ್ಯರೂ, ಕಸ್ಲುಹ್ಯರೂ, ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದರು.
\s5
\v 13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.
\v 14 ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,
\v 15 ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,
\v 16 ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು.
\s ಶೇಮನ ವಂಶಾವಳಿ
\s5
\p
\v 17 ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು.
\v 18 ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು.
\v 19 ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.
\s5
\v 20 ಯೋಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,
\v 21 ಹದೋರಾಮ್, ಊಜಾಲ್, ದಿಕ್ಲ,
\v 22 ಎಬಾಲ್, ಅಬೀಮಾಯೇಲ್, ಶೆಬಾ,
\v 23 ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು.
\s5
\v 24 ಶೇಮನ ಸಂತಾನದವರು: ಅರ್ಪಕ್ಷದ್, ಶೆಲಹ,
\v 25 ಏಬೆರ್, ಪೆಲೆಗ್, ರೆಯೂ,
\v 26 ಸೆರೂಗ್, ನಾಹೋರ್, ತೆರಹ,
\v 27 ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು.
\s ಅಬ್ರಹಾಮನ ವಂಶಾವಳಿ
\s5
\p
\v 28 ಅಬ್ರಹಾಮನ ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.
\p
\v 29 ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
\v 30 ಮಿಷ್ಮ, ದೂಮಾ, ಮಸ್ಸ, ಹದದ್, ತೇಮ,
\v 31 ಯೆಟೂರ್, ನಾಫೀಷ್ ಮತ್ತು ಕೇದೆಮ್ ಎಂಬುವರು.
\s5
\p
\v 32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.
\v 33 ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು.
\s5
\v 34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.
\s ಏಸಾವನ ವಂಶಜರು
\p
\v 35 ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ.
\v 36 ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು.
\v 37 ರೆಯೂವೇಲನ ಮಕ್ಕಳು: ನಹತ್, ಜೆರಹ, ಶಮ್ಮ ಮತ್ತು ಮಿಜ್ಜ.
\s ಎದೋಮಿನ ಮೂಲನಿವಾಸಿಗಳು
\s5
\p
\v 38 ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು.
\v 39 ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.
\v 40 ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ.
\s5
\v 41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
\v 42 ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.
\s ಎದೋಮಿನಲ್ಲಿ ಆಳುತ್ತಿದ್ದ ಅರಸರು
\s5
\p
\v 43 ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ.
\v 44 ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.
\v 45 ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು.
\s5
\v 46 ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
\v 47 ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
\v 48 ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
\s5
\v 49 ಸೌಲನು ಸತ್ತ ಮೇಲೆ ಅಕ್ಬೋರನ ಮಗನಾದ ಬಾಳ್ಹಾನಾನು ಅರಸನಾದನು.
\v 50 ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು,
\s5
\v 51 ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್,
\v 52 ಒಹೋಲಿಬಾಮ, ಏಲ, ಪೀನೋನ್,
\v 53 ಕೆನೆಜ್, ತೇಮಾನ್, ಮಿಬ್ಚಾರ್,
\v 54 ಮಗ್ದೀಯೇಲ್ ಮತ್ತು ಇರಾಮ್ ಇವರೇ.
\s5
\c 2
\s ಇಸ್ರಾಯೇಲನ ಮಕ್ಕಳು
\p
\v 1 ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
\v 2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
\s5
\p
\v 3 ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಜನರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.
\v 4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.
\s5
\p
\v 5 ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್.
\v 6 ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.
\v 7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ
\f +
\fr 2:7
\fq ಆಕಾರ
\ft ದೇವರಿಗೆ ಸಮರ್ಪಿಸಲ್ಪಟ್ಟಿದ್ದ ಕೊಳ್ಳೆಯ ವಸ್ತುಗಳನ್ನು ಕದ್ದು ಬಚ್ಚಿಡುವ ಮೂಲಕ ಇವನು ಇಸ್ರಾಯೇಲ್ಯರ ಮೇಲೆ ಕೇಡನ್ನು ಬರಮಾಡಿದನು. ಯೆಹೋಶುವ ಅಧ್ಯಾಯ 7 ನೋಡಿರಿ.
\f* ಆಕಾರನು ಕರ್ಮೀಯನ ಮಗನು.
\v 8 ಏತಾನನ ಮಗನು ಅಜರ್ಯನು.
\s5
\v 9 ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.
\s ರಾಮನ ವಂಶಾವಳಿ ಮತ್ತು ದಾವೀದನ ಪೂರ್ವಜರು
\p
\v 10 ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.
\v 11 ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.
\v 12 ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
\s5
\v 13 ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,
\v 14 ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ.
\v 15 ಆರನೆಯವನು ಓಚೆಮ್, ಏಳನೆಯವನು ದಾವೀದ್.
\s5
\v 16 ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.
\v 17 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.
\s ಕಾಲೇಬನ ವಂಶಾವಳಿ
\s5
\p
\v 18 ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ
\f +
\fr 2:18
\fq ಯೆರ್ಯೋತಳು
\ft ಕಾಲೇಬನಿಗೂ ಮತ್ತು ಅಜೂಬಳಿಗೂ ಹುಟ್ಟಿದ್ದ ಮಗಳು.
\f* ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.
\v 19 ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.
\v 20 ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.
\s5
\p
\v 21 ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.
\v 22 ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.
\s5
\v 23 ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.
\v 24 ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
\s ಯೆರಹ್ಮೇಲನ ವಂಶಾವಳಿ
\s5
\p
\v 25 ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.
\v 26 ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ.
\v 27 ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ.
\v 28 ಓನಾಮನ ಮಕ್ಕಳು ಶಮ್ಮೈ ಮತ್ತು ಯಾದ ಎಂಬುವವರು. ಶಮ್ಮೈನ ಮಕ್ಕಳು ನಾದಾಬ್ ಮತ್ತು ಅಬಿಷೂರ್.
\s5
\v 29 ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.
\v 30 ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು.
\v 31 ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ.
\v 32 ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.
\v 33 ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು.
\s5
\p
\v 34 ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.
\v 35 ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.
\s5
\v 36 ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.
\v 37 ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.
\v 38 ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.
\s5
\v 39 ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
\v 40 ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
\v 41 ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು.
\s ಕಾಲೇಬನ ಗೋತ್ರಗಳು
\s5
\p
\v 42 ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.
\v 43 ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.
\v 44 ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು.
\s5
\v 45 ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.
\p
\v 46 ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು.
\v 47 ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು.
\s5
\v 48 ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು.
\v 49 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.
\v 50 ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,
\s5
\v 51 ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.
\s5
\v 52 ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,
\v 53 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.
\s5
\v 54 ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.
\v 55 ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
\s5
\c 3
\s ದಾವೀದನ ವಂಶಾವಳಿ
\p
\v 1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
\v 2 ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
\v 3 ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
\s5
\v 4 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
\v 5 ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
\s5
\v 6 ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
\v 7 ನೋಗ, ನೆಫೆಗ್, ಯಾಫೀಯ,
\v 8 ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
\v 9 ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
\s ಸೊಲೊಮೋನನ ವಂಶಜರು
\s5
\p
\v 10 ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
\v 11 ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
\v 12 ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
\s5
\v 13 ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
\v 14 ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
\s5
\v 15 ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
\v 16 ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.
\s ಯೆಹೋಯಾಕೀಮನ ವಂಶಜರು
\s5
\p
\v 17 ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
\v 18 ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
\s5
\v 19 ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
\v 20 ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
\v 21 ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
\s5
\v 22 ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
\v 23 ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
\v 24 ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
\s5
\c 4
\s ಯೆಹೂದನ ವಂಶಾವಳಿ
\p
\v 1 ಯೆಹೂದನ ಸಂತಾನದವರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.
\v 2 ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು.
\s5
\p
\v 3 ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ.
\v 4 ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.
\s5
\p
\v 5 ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯರಿದ್ದರು.
\v 6 ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು.
\v 7 ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.
\v 8 ಕೋಚನಿಂದ ಅನೂಬ್‌ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.
\s5
\v 9 ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.
\v 10 ಯಾಬೇಚನು ಇಸ್ರಾಯೇಲಿನ ದೇವರಿಗೆ, <<ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?>> ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
\s5
\p
\v 11 ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ.
\v 12 ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.
\s5
\v 13 ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.
\v 14 ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.
\v 15 ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್‌.
\p
\v 16 ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.
\s5
\v 17 ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.
\v 18 ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.
\s5
\v 19 ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.
\v 20 ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್.
\s5
\p
\v 21 ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,
\v 22 ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)
\v 23 ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.
\s ಸಿಮೆಯೋನನ ವಂಶಾವಳಿ
\s5
\p
\v 24 ಸಿಮೆಯೋನನ ಮಕ್ಕಳು: ನೆಮೂವೇಲ್, ಯಾಮೀನ್, ಯಾರೀಬ್, ಜೆರಹ ಮತ್ತು ಸೌಲ.
\v 25 ಸೌಲನ ಮಗ ಶಲ್ಲುಮ್. ಇವನ ಮಗ ಮಿಬ್ಸಾಮ್. ಮಿಬ್ಸಾಮನ ಮಗ ಮಿಷ್ಮ.
\v 26 ಮಿಷ್ಮಾನ ಸಂತಾನದವರು: ಇವನ ಮಗ ಹಮ್ಮೂವೇಲ್, ಇವನ ಮೊಮ್ಮಗ ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ.
\s5
\v 27 ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.
\p
\v 28 ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,
\s5
\v 29 ಬಿಲ್ಹ, ಎಚೆಮ್, ತೋಲಾದ್,
\v 30 ಬೆತೂವೇಲ್, ಹೊರ್ಮ, ಚಿಕ್ಲಗ್,
\v 31 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್.
\s5
\v 32 ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.
\v 33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.
\s5
\p
\v 34 ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,
\v 35 ಯೋವೇಲ್, ಯೊಷಿಬ್ಯನ ಮಗನೂ, ಸೆರಾಯನ ಮೊಮ್ಮಗನೂ, ಅಸಿಯೇಲನ ಮರಿಮಗನೂ ಆಗಿರುವ ಯೇಹೂ,
\v 36 ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು
\v 37 ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.
\v 38 ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು.
\s5
\v 39 ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.
\v 40 ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.
\v 41 ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.
\s5
\v 42 ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.
\v 43 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.
\s5
\c 5
\s ರೂಬೇನನ ವಂಶಾವಳಿ
\p
\v 1 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.
\v 2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.
\v 3 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.
\s5
\v 4 ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.
\v 5 ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.
\v 6 ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.
\s5
\v 7 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.
\v 8 ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.
\v 9 ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.
\s5
\v 10 ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.
\s ಗಾದನ ವಂಶಾವಳಿ
\s5
\p
\v 11 ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:
\v 12 ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.
\v 13 ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.
\s5
\v 14 ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.
\v 15 ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.
\s5
\p
\v 16 ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.
\v 17 ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.
\s5
\p
\v 18 ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.
\v 19 ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.
\s5
\v 20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
\v 21 ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.
\v 22 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.
\s ಯೊರ್ದನಿನ ಪೂರ್ವದಿಕ್ಕಿನಲ್ಲಿದ್ದ ಮನಸ್ಸೆಯ ವಂಶಜರು
\s5
\p
\v 23 ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.
\v 24 ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.
\s5
\v 25 ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.
\v 26 ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ಮಾಡಿದ್ದಾನೆ ದೇವರು.
\s5
\c 6
\s ಲೇವಿಯರ ಕುಟುಂಬಗಳು
\p
\v 1 ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.
\v 2 ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
\v 3 ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
\s5
\v 4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;
\v 5 ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀಯನು ಉಜ್ಜೀಯನನ್ನು ಪಡೆದನು.
\v 6 ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತನನ್ನು ಪಡೆದನು.
\s5
\v 7 ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.
\v 8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.
\v 9 ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು.
\s5
\v 10 ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ.
\v 11 ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.
\v 12 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು.
\s5
\v 13 ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.
\v 14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.
\v 15 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.
\s ಲೇವಿಯರ ಇತರ ವಂಶಾವಳಿ
\s5
\p
\v 16 ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.
\v 17 ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.
\v 18 ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.
\s5
\v 19 ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.
\v 20 ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,
\v 21 ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ರೈ.
\s5
\p
\v 22 ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,
\v 23 ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್.
\v 24 ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್.
\s5
\v 25 ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು.
\v 26 ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್.
\v 27 ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್.
\s5
\v 28 ಸಮುವೇಲನ ಮಕ್ಕಳು ಯೋವೇಲ್
\f +
\fr 6:28
\fq ಯೋವೇಲ್
\ft ಅಥವಾ ವಷ್ಣಿ.
\f* ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು.
\p
\v 29 ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ.
\v 30 ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.
\s ಗಾಯಕರಾದ ಲೇವಿಯರ ವಂಶಾವಳಿ
\s5
\p
\v 31 ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.
\v 32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.
\s5
\p
\v 33 ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.
\v 34 ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.
\v 35 ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ.
\s5
\v 36 ಎಲ್ಕಾನನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ,
\v 37 ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.
\v 38 ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.
\s5
\p
\v 39 ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.
\v 40 ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ.
\v 41 ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು.
\v 42 ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ.
\v 43 ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.
\s5
\p
\v 44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.
\v 45 ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ.
\v 46 ಹಿಲ್ಕೀಯನು ಅಮ್ಚೀಯನ ಮಗ, ಇವನು ಬಾನೀಯನ ಮಗ, ಬಾನೀಯು ಶೆಮೆರನ ಮಗ.
\v 47 ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.
\s ಮಹಾಯಾಜಕನಾದ ಆರೋನನ ವಂಶಾವಳಿ
\s5
\p
\v 48 ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.
\s5
\v 49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.
\s5
\v 50 ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.
\v 51 ಅಬೀಷೂವನ ಮಗ ಬುಕ್ಕೀ, ಬುಕ್ಕೀಯ ಮಗ ಉಜ್ಜೀ, ಇವನ ಮಗ ಜೆರಹ್ಯಾಹ, ಇವನ ಮಗ ಮೆರಾಯೋತ್.
\v 52 ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್.
\v 53 ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್.
\s ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು
\s5
\p
\v 54 ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.
\v 55 ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು.
\v 56 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.
\s5
\v 57 ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು, ಲಿಬ್ನ ಮತ್ತು ಅದರ ಗೋಮಾಳಗಳು, ಯತ್ತೀರ್, ಎಷ್ಟೆಮೋವ, ಅವುಗಳ ಉಪನಗರಗಳೂ,
\v 58 ಹೀಲೇನ್, ದೆಬೀರ್
\s5
\v 59 ಆಷಾನ್, ಬೇತ್‌ಷೆಮೆಷ್‌ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ,
\v 60 ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.
\s5
\p
\v 61 ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.
\v 62 ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.
\s5
\v 63 ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.
\v 64 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.
\v 65 ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು.
\s5
\p
\v 66 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ
\v 67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,
\v 68 ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು,
\v 69 ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು.
\s5
\v 70 ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.
\s5
\p
\v 71 ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
\v 72 ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,
\v 73 ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
\s5
\v 74 ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್.
\v 75 ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
\v 76 ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
\s5
\v 77 ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,
\v 78 ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.
\v 79 ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.
\s5
\p
\v 80 ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್,
\v 81 ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.
\s5
\c 7
\s ಇಸ್ಸಾಕಾರನ ಕುಲ
\p
\v 1 ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.
\v 2 ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
\v 3 ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.
\s5
\v 4 ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.
\v 5 ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.
\s ಬೆನ್ಯಾಮೀನ್ ಕುಲ
\s5
\p
\v 6 ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು.
\v 7 ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು.
\s5
\v 8 ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.
\v 9 ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.
\v 10 ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
\s5
\v 11 ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.
\s ದಾನ್ ಕುಲ
\p
\v 12 ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.
\s ನಫ್ತಾಲಿ ಕುಲ
\s5
\p
\v 13 ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.
\s ಮನಸ್ಸೆ ಕುಲ
\s5
\p
\v 14 ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
\v 15 ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.
\v 16 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್.
\s5
\v 17 ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.
\v 18 ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು.
\v 19 ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
\s ಎಫ್ರಾಯೀಮ್ ಕುಲ
\s5
\p
\v 20 ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;
\v 21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.
\v 22 ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.
\s5
\v 23 ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.
\v 24 ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.
\s5
\v 25 ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್.
\v 26 ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.
\v 27 ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.
\s5
\p
\v 28 ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.
\v 29 ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.
\s ಅಶೇರ ಕುಲ
\s5
\p
\v 30 ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ.
\v 31 ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್.
\v 32 ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು.
\s5
\v 33 ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು.
\v 34 ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು.
\v 35 ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ.
\s5
\v 36 ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ,
\v 37 ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ.
\v 38 ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು.
\s5
\v 39 ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು.
\v 40 ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.
\s5
\c 8
\s ಬೆನ್ಯಾಮೀನ್ ಕುಲ
\p
\v 1 ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,
\v 2 ನೋಹ ನಾಲ್ಕನೆಯವನು, ರಾಫ ಐದನೆಯವನು.
\v 3 ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,
\v 4 ಅಬೀಷೂವ, ನಾಮಾನ್, ಅಹೋಹ,
\v 5 ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.
\s5
\v 6 ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.
\v 7 ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.
\s5
\v 8 ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,
\v 9 ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.
\v 10 ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.
\v 11 ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
\s5
\v 12 ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
\v 13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.
\s5
\v 14 ಅಹಿಯೋ, ಶಾಷಕ್, ಯೆರೇಮೋತ್,
\v 15 ಜೆಬದ್ಯ, ಅರಾದ್, ಎದೆರ್,
\v 16 ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.
\v 17 ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,
\v 18 ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.
\s5
\v 19 ಯಾಕೀಮ್, ಜಿಕ್ರೀ, ಜಬ್ದೀ,
\v 20 ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
\v 21 ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.
\s5
\v 22 ಇಷ್ಪಾನ್, ಏಬೆರ್, ಎಲೀಯೇಲ್,
\v 23-24 ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,
\v 25 ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.
\s5
\v 26 ಶಂಷೆರೈ, ಶೆಹರ್ಯ, ಅತಲ್ಯ,
\v 27 ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.
\v 28 ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
\s5
\p
\v 29 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
\v 30 ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,
\v 31 ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.
\s5
\v 32 ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.
\s ಸೌಲನ ಕುಟುಂಬ
\p
\v 33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.
\v 34 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.
\s5
\v 35 ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
\v 36 ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
\v 37 ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.
\s5
\v 38 ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
\p
\v 39 ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.
\v 40 ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.
\s5
\c 9
\s ಸೆರೆವಾಸದಿಂದ ಹಿಂದಿರುಗಿದವರು
\p
\v 1 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬೆಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
\v 2 ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
\p
\v 3 ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
\s5
\v 4 ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
\v 5 ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.
\v 6 ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.
\s5
\p
\v 7 ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.
\v 8 ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
\v 9 ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.
\s ಯೆರೂಸಲೇಮಿನಲ್ಲಿ ನೆಲೆಸಿದ ಯಾಜಕರು
\s5
\p
\v 10 ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;
\v 11 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.
\s5
\v 12 ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.
\v 13 ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.
\s ಯೆರೂಸಲೇಮಿನಲ್ಲಿ ನೆಲೆಸಿದ ಲೇವಿಯರು
\s5
\p
\v 14 ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ
\v 15 ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
\v 16 ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
\s ಯೆರೂಸಲೇಮಿನಲ್ಲಿ ನೆಲೆಸಿದ ದ್ವಾರಪಾಲಕರು
\s5
\p
\v 17 ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.
\v 18 ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.
\v 19 ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.
\s5
\v 20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
\v 21 ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
\s5
\v 22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.
\v 23 ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.
\v 24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.
\s5
\v 25 ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.
\v 26 ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.
\v 27 ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.
\s ಇತರ ಲೇವಿಯರು
\s5
\p
\v 28 ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
\v 29 ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
\s5
\v 30 ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
\v 31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
\v 32 ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.
\s5
\v 33 ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
\v 34 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
\s ಅರಸನಾದ ಸೌಲನ ವಂಶಾವಳಿ
\s5
\p
\v 35 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
\v 36 ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
\v 37 ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.
\s5
\v 38 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
\v 39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
\v 40 ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.
\s5
\v 41 ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
\v 42 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
\v 43 ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
\v 44 ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
\s5
\c 10
\s ಸೌಲನ ಮರಣ
\p
\v 1 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.
\v 2 ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.
\v 3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.
\s5
\v 4 ಆಗ ಸೌಲನು ತನ್ನ ಆಯುಧ ಹೊರುವವನಿಗೆ, <<ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು>> ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.
\s5
\v 5 ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.
\v 6 ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು.
\s5
\v 7 ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
\p
\v 8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.
\s5
\v 9 ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
\v 10 ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು.
\s5
\v 11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.
\v 12 ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.
\s5
\p
\v 13 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
\v 14 ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
\s5
\c 11
\s ದಾವೀದನ ರಾಜಾಭಿಷೇಕ
\p
\v 1 ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, <<ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.
\v 2 ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, <ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ> ಎಂದು ವಾಗ್ದಾನ ಮಾಡಿದ್ದಾನೆ.>> ಎಂದು ಹೇಳಿದರು.
\v 3 ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
\s ದಾವೀದನು ಯೆರೂಸಲೇಮನ್ನು ಸ್ವಾಧೀನಮಾಡಿಕೊಂಡದ್ದೂ
\s5
\p
\v 4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
\v 5 ಯೆಬೂಸಿಯರು ದಾವೀದನಿಗೆ, <<ನೀನು ಒಳಗೆ ಬರಲು ಸಾಧ್ಯವಿಲ್ಲ>> ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.
\v 6 ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು <<ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು>> ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
\s5
\v 7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.
\v 8 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
\v 9 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.
\s ದಾವೀದನ ರಣವೀರರು
\s5
\p
\v 10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
\v 11 ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
\s5
\v 12 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.
\v 13 ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,
\v 14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.
\s5
\p
\v 15 ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
\v 16 ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.
\v 17 ದಾವೀದನು ಲವಲವಿಕೆಯಿಂದ, <<ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು>> ಎಂದು ಹೇಳಿದನು.
\s5
\v 18 ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
\v 19 ಆದರೆ ದಾವೀದನು <<ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ>> ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
\s5
\p
\v 20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
\v 21 ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.
\s5
\v 22 ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
\v 23 ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
\s5
\v 24 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
\v 25 ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
\s5
\p
\v 26 ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,
\v 27 ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,
\v 28 ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,
\v 29 ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,
\s5
\v 30 ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,
\v 31 ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,
\v 32 ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,
\v 33 ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.
\s5
\v 34 ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,
\v 35 ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,
\v 36 ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,
\v 37 ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,
\s5
\v 38 ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,
\v 39 ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,
\v 40 ಇತ್ರೀಯರಾದ ಈರ, ಗಾರೇಬರು,
\v 41 ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,
\s5
\v 42 ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ
\v 43 ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,
\v 44 ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,
\s5
\v 45 ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,
\v 46 ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,
\v 47 ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.
\s5
\c 12
\s ದಾವೀದನನ್ನು ಸೇರಿಕೊಂಡ ಬೆನ್ಯಾಮೀನ್ಯರು
\p
\v 1 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ
\v 2 ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ.
\s5
\p
\v 3 ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,
\v 4 ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,
\s5
\v 5 ಹರೀಫ್ಯರಾದ ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯರು,
\v 6 ಕೋರಹಿಯರಾದ ಎಲ್ಕಾನ್, ಇಷ್ಷೀಯ, ಅಜರೇಲ್, ಯೋವೆಜೆರ್, ಯಾಷೊಬ್ಬಾಮರು,
\v 7 ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.
\s ದಾವೀದನನ್ನು ಹಿಂಬಾಲಿಸಿದ ಗಾದ್ಯರು
\s5
\p
\v 8 ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:
\s5
\v 9 ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,
\v 10 ನಾಲ್ಕನೆಯವನು ಮಷ್ಮನ್ನ, ಐದನೆಯವನು ಯೆರೆಮೀಯ,
\v 11 ಆರನೆಯವನು ಅತ್ತೈ, ಏಳನೆಯವನು ಎಲೀಯೇಲ್,
\v 12 ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್,
\v 13 ಹತ್ತನೆಯವನು ಯೆರೆಮೀಯನು, ಹನ್ನೊಂದನೆಯವನು ಮಕ್ಬನ್ನೈ ಇವರೇ.
\s5
\v 14 ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.
\v 15 ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.
\s ದಾವೀದನನ್ನು ಹಿಂಬಾಲಿಸಿದ ಯೂದ ಕುಲದವರು
\s5
\p
\v 16 ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,
\v 17 <<ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ>> ಎಂದು ಹೇಳಿದನು.
\s5
\v 18 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, <<ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ>> ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
\s5
\p
\v 19 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, <<ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು>> ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
\v 20 ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.
\s5
\v 21 ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.
\v 22 ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.
\s ದಾವೀದನ ಪಟ್ಟಾಭಿಷೇಕಕ್ಕೋಸ್ಕರ ಹೆಬ್ರೋನಿಗೆ ಬಂದ ಭಟರು
\s5
\p
\v 23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;
\v 24 ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.
\v 25 ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.
\s5
\v 26 ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,
\v 27 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;
\v 28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,
\s5
\v 29 ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು.
\v 30 ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,
\v 31 ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.
\s5
\v 32 ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.
\v 33 ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.
\s5
\v 34 ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,
\v 35 ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.
\s5
\v 36 ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,
\v 37 ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.
\s5
\p
\v 38 ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
\v 39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.
\v 40 ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.
\s5
\c 13
\s ಮಂಜೂಷವನ್ನು ಕಿರ್ಯಾತ್ಯಾರೀಮಿನಿಂದ ತಂದದ್ದು ಮತ್ತು ಸಂಭವಿಸಿದ ಆಪತ್ತು
\p
\v 1 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
\v 2 <<ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
\v 3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ>> ಎಂದು ಹೇಳಿದನು.
\v 4 ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.
\s5
\v 5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
\v 6 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.
\s5
\v 7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
\v 8 ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
\s5
\v 9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.
\v 10 ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
\v 11 ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
\s5
\v 12 ಆ ದಿನ ದಾವೀದನು ದೇವರಿಗೆ ಭಯಪಟ್ಟು, <<ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ>> ಎಂದುಕೊಂಡು
\v 13 ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
\v 14 ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
\s5
\c 14
\s ದಾವೀದನು ಅರಮನೆಯನ್ನು ಕಟ್ಟಿಸಿಕೊಂಡದ್ದು
\p
\v 1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.
\v 2 ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
\s5
\p
\v 3 ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
\v 4 ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
\v 5 ಇಬ್ಹಾರ್, ಎಲೀಷೂವ, ಎಲ್ಪೆಲೆಟ್,
\v 6 ನೋಗಹ, ನೆಫೆಗ್, ಯಾಫೀಯ,
\v 7 ಎಲೀಷಾಮ್, ಬೇಲ್ಯಾದ ಮತ್ತು ಎಲೀಫೆಲೆಟ್.
\s ಫಿಲಿಷ್ಟಿಯರ ಮೇಲೆ ದಾವೀದನ ವಿಜಯ
\s5
\p
\v 8 ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.
\v 9 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.
\s5
\v 10 ದಾವೀದನು ದೇವರಾದ ಯೆಹೋವನನ್ನು, <<ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ>> ಎಂದು ಕೇಳಿದನು. ಅದಕ್ಕೆ ಯೆಹೋವನು, <<ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು>> ಎಂದು ಉತ್ತರ ಕೊಟ್ಟನು.
\v 11 ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, <<ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ>> ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.
\v 12 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.
\s5
\p
\v 13 ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.
\v 14 ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, <<ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.
\s5
\v 15 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು>> ಎಂದನು.
\v 16 ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.
\v 17 ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.
\s5
\c 15
\s ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು
\p
\v 1 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
\v 2 ಆ ಕಾಲದಲ್ಲಿ ದಾವೀದನು, <<ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ>> ಎಂದು ಹೇಳಿದನು.
\v 3 ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
\s5
\v 4 ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,
\v 5 ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,
\v 6 ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,
\s5
\v 7 ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,
\v 8 ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,
\v 9 ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು
\v 10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.
\s5
\p
\v 11 ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, <<ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
\v 12 ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
\s5
\v 13 ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು>> ಎಂದು ಹೇಳಿದನು.
\v 14 ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.
\v 15 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.
\s5
\p
\v 16 ಆಗ ದಾವೀದನು ಲೇವಿಯರ ಪ್ರಧಾನರಿಗೆ, <<ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ>> ಎಂದು ಆಜ್ಞಾಪಿಸಿದನು.
\v 17 ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,
\v 18 ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.
\s5
\v 19 ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
\v 20 ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.
\v 21 ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.
\s5
\v 22 ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.
\v 23 ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.
\v 24 ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
\s5
\p
\v 25 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
\v 26 ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
\s5
\v 27 ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.
\v 28 ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
\s5
\v 29 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
\s5
\c 16
\p
\v 1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
\v 2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
\v 3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
\s ಮಂಜೂಷದ ಮುಂದೆ ಹಾಡಿದ ಕೀರ್ತನೆ
\s5
\p
\v 4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
\v 5 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
\v 6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
\s5
\v 7 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
\q
\v 8 <<ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
\q
\v 9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
\s5
\q
\v 10 ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
\q
\v 11 ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
\s5
\q
\v 12 ಆತನ ಸೇವಕನಾದ ಇಸ್ರಾಯೇಲಿನ
\f +
\fr 16:12
\fq ಇಸ್ರಾಯೇಲಿನ
\ft ಅಥವಾ ಅಬ್ರಹಾಮನ.
\f* ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
\q
\v 13 ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
\q
\v 14 ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
\s5
\q
\v 15 ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
\q
\v 16 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
\q
\v 17 ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
\q
\v 18 ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
\s5
\q
\v 19 ಆತನು, <ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು> ಎಂದು ವಾಗ್ದಾನ ಮಾಡಿದನು.
\q
\v 20 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
\q
\v 21 ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
\q
\v 22 <ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು> ಎಂದು ಹೇಳಿದನು.
\s5
\q
\v 23 ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
\q
\v 24 ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
\s5
\q
\v 25 ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
\q
\v 26 ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
\q
\v 27 ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
\s5
\q
\v 28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
\q
\v 29 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
\s5
\q
\v 30 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
\q
\v 31 ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
\s5
\q
\v 32 ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
\q
\v 33 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
\s5
\q
\v 34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
\q
\v 35 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
\s5
\q
\v 36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ>> ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
\s ಯೆರೂಸಲೇಮ್ ಮತ್ತು ಗಿಬ್ಯೋನಿನಲ್ಲಿ ಆರಾಧನೆ
\s5
\p
\v 37 ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
\v 38 ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
\v 39 ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
\s5
\v 40 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
\v 41 ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
\s5
\v 42 ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
\p
\v 43 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
\s5
\c 17
\s ದೇವರು ದಾವೀದನಿಗೆ ವಾಗ್ದಾನಮಾಡಿದ್ದು
\p
\v 1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, <<ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ>> ಎಂದು ಹೇಳಿದನು.
\v 2 ನಾತಾನನು ದಾವೀದನಿಗೆ, <<ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ>> ಎಂದನು.
\s5
\p
\v 3 ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,
\v 4 <<ಹೋಗಿ ನನ್ನ ಸೇವಕನಾದ ದಾವೀದನಿಗೆ, <ನೀನು ನನಗೆ ಆಲಯವನ್ನು ಕಟ್ಟಬಾರದು.
\v 5 ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.
\v 6 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ> >> ಎಂದು ಹೇಳು ಎಂದನು.
\s5
\p
\v 7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, <<ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
\v 8 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
\s5
\v 9 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.
\v 10 ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.
\s5
\v 11 ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
\v 12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
\s5
\v 13 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.
\v 14 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು>> ಎಂಬುದೇ.
\v 15 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
\s ದಾವೀದನ ಪ್ರಾರ್ಥನೆ
\s5
\p
\v 16 ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, <<ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?
\v 17 ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.
\v 18 ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.
\s5
\v 19 ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.
\v 20 ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.
\v 21 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.
\s5
\v 22 ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.
\v 23 ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
\v 24 ಜನರು <ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ> ಎಂದು ನಿನ್ನ ನಾಮವನ್ನು ಕೊಂಡಾಡಲಿ.
\s5
\v 25 ನನ್ನ ದೇವರೇ, ನೀನು ನಿನ್ನ ಸೇವಕನಿಗೆ, <ನಾನು ನಿನಗೊಂದು ಮನೆಯನ್ನು ಕಟ್ಟುವೆನು> ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
\v 26 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.
\v 27 ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು>> ಎಂದು ಪ್ರಾರ್ಥಿಸಿದನು.
\s5
\c 18
\s ದಾವೀದನು ಸಾಧಿಸಿದ ದಿಗ್ವಿಜಯಗಳು
\p
\v 1 ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
\v 2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
\s5
\p
\v 3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
\v 4 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
\s5
\v 5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
\v 6 ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
\s5
\v 7 ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
\v 8 ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.
\s5
\p
\v 9 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
\v 10 ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
\v 11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
\s5
\p
\v 12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
\v 13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
\s ದಾವೀದನ ಸರದಾರರು
\s5
\p
\v 14 ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
\v 15 ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
\v 16 ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
\v 17 ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ
\f +
\fr 18:17
\ft ಅಥವಾ ಯಾಜಕರಾಗಿದ್ದರು.
\f* ಪ್ರಧಾನರಾಗಿದ್ದರು.
\s5
\c 19
\s ದಾವೀದನು ಅಮ್ಮೋನಿಯರನ್ನು ಸೋಲಿಸಿದ್ದು
\p
\v 1 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
\v 2 ದಾವೀದನು, <<ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು>> ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
\v 3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, <<ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ>> ಎಂದು ಹೇಳಿದರು.
\s5
\v 4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
\v 5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, <<ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ>> ಎಂದು ಹೇಳಿಸಿದನು.
\s ದಾವೀದನ ಯುದ್ಧಭಟರ ಶೂರಕೃತ್ಯಗಳು
\s5
\p
\v 6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.
\v 7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
\s5
\v 8 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
\v 9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
\s5
\v 10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
\v 11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,
\s5
\v 12 <<ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
\v 13 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ>> ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
\s5
\v 14 ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
\v 15 ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
\s5
\p
\v 16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
\v 17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
\s5
\v 18 ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.
\v 19 ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.
\s5
\c 20
\s ದಾವೀದನು ರಬ್ಬ ಪಟ್ಟಣವನ್ನು ವಶಪಡಿಸಿಕೊಂಡಿದ್ದು
\p
\v 1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
\s5
\v 2 ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
\v 3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
\s ಫಿಲಿಷ್ಟಿಯರೊಡನೆ ಯುದ್ಧ
\s5
\p
\v 4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
\v 5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
\s5
\p
\v 6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
\v 7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
\v 8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
\s5
\c 21
\s ದಾವೀದನು ಮಾಡಿಸಿದ ಜನಗಣತಿ
\p
\v 1 ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
\v 2 ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, <<ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ>> ಎಂದು ಆಜ್ಞಾಪಿಸಿದನು.
\v 3 ಆಗ ಯೋವಾಬನು, <<ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ>> ಎಂದನು.
\s5
\v 4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
\v 5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
\s5
\v 6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
\s ದಾವೀದನ ಪಾಪಕ್ಕೆ ಶಿಕ್ಷೆ
\p
\v 7 ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
\v 8 ಆಗ ದಾವೀದನು, <<ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು>> ಎಂದು ದೇವರನ್ನು ಪ್ರಾರ್ಥಿಸಿದನು.
\s5
\v 9 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
\v 10 ಯೆಹೋವನು ಇಂತೆನ್ನುತ್ತಾನೆ, <<ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು>> ಎಂದನು.
\s5
\v 11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, <<ಯೆಹೋವನು ಹೇಳುವುದೇನೆಂದರೆ,
\v 12 <ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ> ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು>> ಎಂದು ಹೇಳಿದನು.
\s5
\v 13 ಅದಕ್ಕೆ ದಾವೀದನು ಗಾದನಿಗೆ, <<ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು>> ಎಂದು ಹೇಳಿದನು.
\p
\v 14 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
\v 15 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, <<ಸಾಕು ನಿನ್ನ ಕೈಯನ್ನು ಹಿಂದೆಗೆ>> ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
\s5
\v 16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.
\v 17 ಮತ್ತು ದಾವೀದನು ದೇವರಿಗೆ, <<ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ>> ಎಂದು ಬೇಡಿಕೊಂಡನು.
\s ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು
\s5
\p
\v 18 ಆಗ ಯೆಹೋವನ ದೂತನು ಗಾದನಿಗೆ, <<ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು>> ಎಂದು ಆಜ್ಞಾಪಿಸಿದನು.
\v 19 ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
\v 20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
\s5
\v 21 ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.
\v 22 ದಾವೀದನು ಅವನಿಗೆ, <<ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು>> ಎಂದು ಹೇಳಿದನು.
\s5
\v 23 ಆಗ ಒರ್ನಾನನು ದಾವೀದನಿಗೆ, <<ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ>> ಎಂದು ಹೇಳಿದನು.
\v 24 ಅರಸನಾದ ದಾವೀದನು ಒರ್ನಾನನಿಗೆ <<ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ>> ಎಂದು ಹೇಳಿದನು.
\s5
\v 25 ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
\v 26 ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,
\v 27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
\s ದಾವೀದನು ದೇವಾಲಯಕ್ಕೋಸ್ಕರ ಸ್ಥಳವನ್ನು ಗೊತ್ತುಮಾಡಿದ್ದು
\s5
\p
\v 28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
\v 29 ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
\v 30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.
\s5
\c 22
\p
\v 1 ಆಗ ದಾವೀದನು, <<ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ>> ಎಂದು ಹೇಳಿದನು.
\s ದೇವಾಲಯ ಕಟ್ಟುವುದಕ್ಕಾಗಿ ಮಾಡಿದ ಸಿದ್ಧತೆ
\p
\v 2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
\s5
\v 3 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
\v 4 ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
\v 5 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
\s5
\p
\v 6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
\v 7 ದಾವೀದನು ಸೊಲೊಮೋನನಿಗೆ, <<ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
\v 8 ಆದರೆ ಯೆಹೋವನು ನನಗೆ, <ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
\s5
\v 9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
\v 10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು>.
\s5
\v 11 ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
\v 12 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
\v 13 ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
\s5
\v 14 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
\s5
\v 15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
\v 16 ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ>> ಎಂದು ಹೇಳಿದನು.
\s5
\p
\v 17 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
\v 18 ಆತನು ಅವರಿಗೆ, <<ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
\v 19 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ>> ಎಂದು ಹೇಳಿದನು.
\s5
\c 23
\s ಲೇವಿಯರ ಕರ್ತವ್ಯಗಳು
\p
\v 1 ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
\v 2 ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.
\p
\v 3 ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.
\s5
\v 4 ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,
\v 5 ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.
\p
\v 6 ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.
\s ಗೇರ್ಷೋನ್ಯರು
\s5
\p
\v 7 ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.
\v 8 ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.
\v 9 ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
\s5
\v 10 ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.
\v 11 ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.
\s ಕೆಹಾತ್ಯರು
\s5
\p
\v 12 ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.
\v 13 ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
\v 14 ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
\s5
\v 15 ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.
\v 16 ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.
\v 17 ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.
\v 18 ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ.
\s5
\v 19 ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
\v 20 ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.
\s ಮೆರಾರೀಯರು
\s5
\p
\v 21 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.
\v 22 ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
\v 23 ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.
\s5
\p
\v 24 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.
\v 25 ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ,
\f +
\fr 23:25
\ft ಅಥವಾ ಇಸ್ರಾಯೇಲ ಜನರು.
\f* ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,
\v 26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.
\s5
\v 27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.
\v 28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,
\v 29 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,
\s5
\v 30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ
\v 31 ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.
\s5
\v 32 ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.
\s5
\c 24
\s ಯಾಜಕರ ಕರ್ತವ್ಯಗಳು
\p
\v 1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
\v 2 ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
\v 3 ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
\s5
\v 4 ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
\v 5 ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
\s5
\v 6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
\s5
\p
\v 7 ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,
\v 8 ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,
\v 9 ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,
\v 10 ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,
\s5
\v 11 ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,
\v 12 ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,
\v 13 ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,
\v 14 ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
\s5
\v 15 ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,
\v 16 ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,
\v 17 ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,
\v 18 ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.
\s5
\v 19 ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.
\s ಉಳಿದ ಲೇವಿಯರು
\s5
\p
\v 20 ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.
\v 21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,
\v 22 ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.
\s5
\v 23 ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,
\v 24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,
\v 25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.
\s5
\v 26 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.
\v 27 ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.
\v 28 ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.
\s5
\v 29 ಕೀಷನಿಂದ ಯೆರಹ್ಮೇಲನು ಹುಟ್ಟಿದನು.
\v 30 ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.
\p
\v 31 ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
\s5
\c 25
\s ದೇವಾಲಯದ ಸಂಗೀತ ಮಂಡಳಿ
\p
\v 1 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
\v 2 ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.
\v 3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
\s5
\v 4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.
\v 5 ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, <<ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು>> ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
\s5
\v 6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
\v 7 ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.
\p
\v 8 ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.
\s5
\v 9 ಚೀಟಿನ ಪ್ರಕಾರವಾಗಿ,
\q ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು.
\q ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 10 ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 11 ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 12 ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\q
\v 13 ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 14 ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 15 ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 16 ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\q
\v 17 ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 18 ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 19 ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 20 ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\q
\v 21 ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.
\q
\v 22 ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 23 ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 24 ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\q
\v 25 ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 26 ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 27 ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 28 ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\q
\v 29 ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 30 ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\q
\v 31 ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
\s5
\c 26
\s ದೇವಾಲಯದ ದ್ವಾರಪಾಲಕರು
\p
\v 1 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ:
\q ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.
\q
\v 2 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.
\v 3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.
\s5
\q
\v 4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
\v 5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.
\v 6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
\s5
\q
\v 7 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
\v 8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.
\v 9 ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.
\s5
\p
\v 10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
\v 11 ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
\s5
\v 12 ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
\v 13 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.
\v 14 ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
\s5
\v 15 ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,
\v 16 ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.
\s5
\v 17 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,
\v 18 ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
\v 19 ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.
\s ದೇವಾಲಯ ಭಂಡಾರದ ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು
\s5
\p
\v 20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
\v 21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,
\v 22 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.
\s5
\v 23 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,
\v 24 ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.
\v 25 ಎಲೀಯೆಜೆರನ ಮಗ ರೆಹಬ್ಯ,
\q ರೆಹಬ್ಯನ ಮಗ ಯೆಶಾಯ
\q ಯೆಶಾಯನ ಮಗ ಯೋರಾಮ
\q ಯೋರಾಮನ ಮಗ ಜಿಕ್ರೀ
\q ಜಿಕ್ರೀಯನ ಮಗ ಶೆಲೋಮೋತನು.
\s5
\p
\v 26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
\v 27 ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.
\v 28 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.
\s5
\p
\v 29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
\v 30 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
\s5
\v 31 ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.
\v 32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
\s5
\c 27
\s ಸೈನಿಕರ ವರ್ಗಗಳು
\p
\v 1 ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ:
\p ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
\v 2 ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.
\v 3 ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
\s5
\v 4 ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
\v 5 ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
\v 6 ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.
\s5
\v 7 ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 8 ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 9 ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\s5
\v 10 ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 11 ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 12 ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\s5
\v 13 ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 14 ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\v 15 ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
\s ಕುಲ ಪ್ರಭುಗಳು
\s5
\p
\v 16 ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
\v 17 ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;
\v 18 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;
\s5
\v 19 ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;
\v 20 ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
\v 21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;
\v 22 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.
\s5
\p
\v 23 ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
\v 24 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದ ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ಇತಿಹಾಸ ಗ್ರಂಥದಲ್ಲಿ ದಾಖಲಿಸಲಿಲ್ಲ.
\s ಅರಸನ ಆಸ್ತಿಯ ಮೇಲ್ವಿಚಾರಕರು
\s5
\p
\v 25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳನ್ನು ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆ ಇದ್ದ ಉಗ್ರಾಣಗಳನ್ನು ಉಜ್ಜೀಯನ ಮಗನಾದ ಯೋನಾತಾನನು ಇದ್ದನು.
\v 26 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಕೆಲೂಬನ ಮಗನಾದ ಎಜ್ರೀ ಇದ್ದನು.
\v 27 ದ್ರಾಕ್ಷಿ ತೋಟಗಳ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳನ್ನು ಶಿಪ್ಮೀಯನಾದ ಜಬ್ದೀ ಇದ್ದನು.
\s5
\v 28 ಎಣ್ಣೇ ಮರದ ತೋಪುಗಳನ್ನೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳನ್ನು ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳನ್ನು ನೋಡಿಕೊಳ್ಳಲು ಯೋವಾಷ್ ಇದ್ದನು.
\v 29 ಶಾರೋನಿನಲ್ಲಿ ಮೇಯುವ ಹಸುಗಳನ್ನು ಶಾರೋನ್ಯನಾದ ಶಿಟ್ರೈ ಇದ್ದನು. ತಗ್ಗುಗಳಲ್ಲಿ ಮೇಯುವ ಹಸುಗಳನ್ನು ಅದ್ಲೈಯ ಮಗನಾದ ಶಾಫಾಟನು ಇದ್ದನು.
\s5
\v 30 ಒಂಟೆಗಳನ್ನು ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳನ್ನು ಮೇರೊನೋತ್ಯನಾದ ಯೆಹ್ದೆಯ.
\v 31 ಆಡುಕುರಿಗಳನ್ನು ಹಗ್ರೀಯನಾದ ಯಾಜೀಜ್ ನೋಡಿಕೊಳ್ಳುತ್ತಿದ್ದರು.
\s5
\p
\v 32 ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.
\v 33 ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅರಸನ ಮಿತ್ರನಾಗಿದ್ದನು.
\v 34 ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ನಂತರದ ಉತ್ತರಾಧಿಕಾರಿಗಳು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.
\s5
\c 28
\s ದೇವಾಲಯದ ನಿರ್ಮಾಣಕ್ಕೆ ದಾವೀದನ ಯೋಜನೆ
\p
\v 1 ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.
\s5
\v 2 ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, <<ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
\v 3 ಆಗ ದೇವರು ನನಗೆ, <ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು> ಎಂದು ಹೇಳಿದನು.
\s5
\v 4 ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.
\v 5 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
\s5
\v 6 ಆತನು ನನಗೆ, <ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.
\v 7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.>
\s5
\v 8 ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.
\s5
\v 9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
\v 10 ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು>> ಎಂಬುದೇ.
\s ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟದ್ದು
\s5
\p
\v 11 ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.
\v 12 ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,
\s5
\v 13 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು
\v 14 ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.
\v 15 ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,
\s5
\v 16 ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,
\v 17 ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,
\s5
\v 18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.
\v 19 ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.
\s5
\p
\v 20 ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, <<ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
\v 21 ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು>> ಎಂದು ಹೇಳಿದನು.
\s5
\c 29
\s ದೇವಾಲಯಕ್ಕಾಗಿ ಕೊಟ್ಟ ಕಾಣಿಕೆಗಳು
\p
\v 1 ತರುವಾಯ ಅರಸನಾದ ದಾವೀದನು, <<ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
\v 2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.
\s5
\v 3 ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
\v 4 ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.
\v 5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ>> ಎಂದು ನೆರೆದ ಸಭೆಗೆ ಹೇಳಿದನು.
\s5
\v 6 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ
\v 7 ಐದು ಸಾವಿರ ತಲಾಂತು,
\f +
\fr 29:7
\fq ಐದು ಸಾವಿರ ತಲಾಂತು,
\ft ಅಂದರೆ ಸುಮಾರು 188 ಟನ್ ಬಂಗಾರ.
\f* ಹತ್ತು ಸಾವಿರ ಪವನು ಬಂಗಾರವನ್ನೂ
\f +
\fr 29:7
\fq ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ
\ft ಅಂದರೆ ಹತ್ತು ಸಾವಿರ ಬಂಗಾರದ ನಾಣ್ಯಗಳು.
\f* , ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ
\f +
\fr 29:7
\fq ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ
\ft ಅಂದರೆ ಸುಮಾರು 375 ಟನ್ ಬೆಳ್ಳಿ.
\f* , ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ,
\f +
\fr 29:7
\fq ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ,
\ft ಅಂದರೆ ಸುಮಾರು 675 ಟನ್ ತಾಮ್ರ.
\f* ಒಂದು ಲಕ್ಷ ತಲಾಂತು ಕಬ್ಬಿಣವನ್ನೂ
\f +
\fr 29:7
\fq ಒಂದು ಲಕ್ಷ ತಲಾಂತು ಕಬ್ಬಿಣವನ್ನೂ
\ft ಅಂದರೆ ಸುಮಾರು 3,750 ಟನ್ ಕಬ್ಬಿಣ.
\f* ಕೊಟ್ಟರು.
\s5
\v 8 ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.
\v 9 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
\s ದಾವೀದನ ಪ್ರಾರ್ಥನೆ
\s5
\p
\v 10 ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, <<ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.
\v 11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
\s5
\v 12 ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
\v 13 ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
\s5
\v 14 ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
\v 15 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
\s5
\v 16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.
\v 17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
\s5
\v 18 ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
\v 19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು>> ಎಂದು ಪ್ರಾರ್ಥಿಸಿದನು.
\s5
\p
\v 20 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, <<ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ>> ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
\p
\v 21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.
\s ಸೊಲೊಮೋನನ ಪಟ್ಟಾಭಿಷೇಕ
\s5
\p
\v 22 ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.
\v 23 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
\s5
\v 24 ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.
\v 25 ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
\s ದಾವೀದನ ಮರಣ
\s5
\p
\v 26 ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು.
\v 27 ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು.
\v 28 ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
\s5
\p
\v 29 ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.
\v 30 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.