kn_ulb/19-PSA.usfm

10638 lines
671 KiB
Plaintext
Raw Permalink Blame History

This file contains ambiguous Unicode characters

This file contains Unicode characters that might be confused with other characters. If you think that this is intentional, you can safely ignore this warning. Use the Escape button to reveal them.

\id PSA - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಕೀರ್ತನೆಗಳು
\toc1 ಕೀರ್ತನೆಗಳು
\toc2 ಕೀರ್ತನೆಗಳು
\toc3 psa
\mt1 ಕೀರ್ತನೆಗಳು
\is ಗ್ರಂಥಕರ್ತೃತ್ವ
\ip ಕೀರ್ತನೆಗಳು ಸಾಹಿತ್ಯಿಕ ಕವಿತೆಗಳ ಸಂಗ್ರಹವಾಗಿದೆ, ಅನೇಕ ಲೇಖಕರನ್ನು ಒಳಗೊಂಡಿರುವ ಸಂಯೋಜಿತ ಕೃತಿಯೆಂದು ಗುರುತಿಸಲ್ಪಡುವಂಥ ಹಳೇ ಒಡಂಬಡಿಕೆಯ ಪುಸ್ತಕಗಳಲ್ಲಿ ಇದು ಒಂದಾಗಿದೆ, ಇದು ಬಹು ಲೇಖಕರಿಂದ ಬರೆಯಲ್ಪಟ್ಟಿದೆ; ದಾವೀದನು 73 ಬರೆದನು, ಆಸಾಫನು 12 ಬರೆದನು, ಕೋರಹನ ಮಕ್ಕಳು 9 ಬರೆದರು, ಸೊಲೊಮೋನನು 3 ಬರೆದನು, ಏತಾನ್ ಮತ್ತು ಮೋಶೆ ತಲಾ ಒಂದೊಂದು ಬರೆದರು (ಕೀರ್ತ. 90), ಮತ್ತು 51 ಕೀರ್ತನೆಗಳು ಅನಾಮಧೇಯ ಕೀರ್ತನೆಗಳಾಗಿವೆ. ಸೊಲೊಮೋನನನ್ನು ಮತ್ತು ಮೋಶೆಯನ್ನು ಹೊರತುಪಡಿಸಿ, ಈ ಎಲ್ಲಾ ಹೆಚ್ಚುವರಿ ಲೇಖಕರು ದಾವೀದನ ಆಳ್ವಿಕೆಯ ಸಮಯದಲ್ಲಿ ದೇವದರ್ಶನ ಗುಡಾರದ ಆರಾಧನೆಗೆ ಸಂಗೀತವನ್ನು ಒದಗಿಸಲು ಜವಾಬ್ದಾರರಾಗಿರುವ ಯಾಜಕರು ಅಥವಾ ಲೇವಿಯರು ಆಗಿದ್ದಾರೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 1440-430 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಕೆಲವೊಂದು ಕೀರ್ತನೆಗಳು ಮೋಶೆಯ ಕಾಲದಷ್ಟು ಹಿಂದಿನ ಇತಿಹಾಸದಲ್ಲಿಯೂ ಬರೆಯಲ್ಪಟ್ಟವು, ದಾವೀದನ, ಆಸಾಫನ ಮತ್ತು ಸೊಲೊಮೋನನ ಕಾಲದಲ್ಲೆಲ್ಲಾ, ಬಾಬೆಲಿನ ಸೆರೆವಾಸದ ನಂತರ ಬದುಕಿದ ಎಜ್ರಹಿಯರ ಕಾಲದವರೆಗೂ ಬರೆಯಲ್ಪಟ್ಟವು, ಇದರರ್ಥ ಪುಸ್ತಕದ ಬರವಣಿಗೆಯು ಸಾವಿರ ವರ್ಷಗಳ ಕಾಲಾವಧಿಯಾಗಿದೆ.
\is ಸ್ವೀಕೃತದಾರರು
\ip ಇಸ್ರಾಯೇಲ್ ರಾಷ್ಟ್ರವು, ದೇವರು ಇತಿಹಾಸದುದ್ದಕ್ಕೂ ಅವರಿಗೂ ಮತ್ತು ವಿಶ್ವಾಸಿಗಳಿಗೂ ಮಾಡಿರುವಂಥದ್ದರ ನೆನಪೋಲೆಯಾಗಿದೆ.
\is ಉದ್ದೇಶ
\ip ಕೀರ್ತನೆಗಳ ಗ್ರಂಥವು ದೇವರು ಮತ್ತು ಆತನ ಸೃಷ್ಟಿ, ಯುದ್ಧ, ಆರಾಧನೆ, ಜ್ಞಾನ, ಪಾಪ ಮತ್ತು ದುಷ್ಟತ್ವ, ನ್ಯಾಯತೀರ್ಪು, ನೀತಿ ಮತ್ತು ಮೆಸ್ಸೀಯ ಆಗಮನದಂತಹ ವಿಷಯಗಳನ್ನು ಒಳಗೊಂಡಿದೆ. ಕೀರ್ತನೆಗಳ ಗ್ರಂಥವು ಅದರ ಅನೇಕ ಪುಟಗಳಾದ್ಯಂತ, ತನ್ನ ಓದುಗಾರರನ್ನು ದೇವರು ಯಾರಾಗಿದ್ದಾನೆಂದು ತಿಳಿಸಿ ಮತ್ತು ಆತನು ಮಾಡಿರುವಂಥ ಕಾರ್ಯಗಳಿಗಾಗಿ ಆತನನ್ನು ಸ್ತುತಿಸಲು ಪ್ರೋತ್ಸಾಹಿಸುತ್ತದೆ. ಕೀರ್ತನೆಗಳ ಗ್ರಂಥವು ನಮ್ಮ ದೇವರ ಮಹತ್ವವನ್ನು ವಿಶದಪಡಿಸುತ್ತದೆ, ಅಪತ್ತಿನ ಕಾಲದಲ್ಲಿ ನಮ್ಮೊಂದಿಗಿನ ಆತನ ನಂಬಿಗಸ್ತಿಕೆಯನ್ನು ದೃಢಪಡಿಸುತ್ತದೆ, ಮತ್ತು ಆತನ ವಾಕ್ಯದ ಸಂಪೂರ್ಣ ಕೇಂದ್ರೀಯತೆಯ ನಮಗೆ ನೆನಪಿಸುತ್ತದೆ.
\is ಮುಖ್ಯಾಂಶ
\ip ಸ್ತುತಿ
\iot ಪರಿವಿಡಿ
\io1 1. ಮೆಸ್ಸೀಯನ ಪುಸ್ತಕ (ಅಧ್ಯಾಯ 1-41)
\io1 2. ಅಪೇಕ್ಷೆಯ ಪುಸ್ತಕ (ಅಧ್ಯಾಯ 42-72)
\io1 3. ಇಸ್ರಾಯೇಲ್ಯರ ಪುಸ್ತಕ (ಅಧ್ಯಾಯ 73-89)
\io1 4. ದೇವರ ನಿಯಮದ ಪುಸ್ತಕ (ಅಧ್ಯಾಯ 90-106)
\io1 5. ಸ್ತುತಿಯ ಪುಸ್ತಕ (ಅಧ್ಯಾಯ 107-150)
\s5
\c 1
\ms ಪ್ರಥಮ ಭಾಗವು (1 41)
\s ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು
\r (ಯೆರೆ. 17:5-8; ಮತ್ತಾ. 7:13,14)
\q
\p
\v 1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
\q ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
\q ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
\q
\v 2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,
\q ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
\s5
\q
\v 3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.
\q ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.
\q ಅದರ ಎಲೆ ಬಾಡುವುದೇ ಇಲ್ಲ.
\q ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
\s5
\q
\v 4 ದುಷ್ಟರೋ ಹಾಗಲ್ಲ;
\q ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
\q
\v 5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,
\q ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
\s5
\q
\v 6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು;
\q ದುಷ್ಟರ ಮಾರ್ಗವೋ ನಾಶವಾಗುವುದು.
\s5
\c 2
\ms ಯೆಹೋವನಿಂದ ಅಭಿಷೇಕಿಸಲ್ಪಟ್ಟವನ ಸರ್ವಾಧಿಪತ್ಯ
\q
\v 1 ಅನ್ಯಜನಾಂಗಗಳು ದಂಗೆಗೆ ಏಳುವುದೂ,
\q ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
\q
\v 2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.
\q ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
\q
\v 3 <<ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ,
\q ಬೇಡಿಗಳನ್ನು ಮುರಿದು ಬಿಸಾಡೋಣ>> ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
\s5
\q
\v 4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು;
\q ಕರ್ತನು ಅವರನ್ನು ಪರಿಹಾಸ್ಯಮಾಡುವನು.
\q
\v 5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
\s5
\q
\v 6 <<ನಾನು ನೇಮಿಸಿದ ಅರಸನನ್ನು
\q ಚೀಯೋನೆಂಬ
\f +
\fr 2:6
\fq ಚೀಯೋನ್
\ft ಸೊಲೊಮೋನನು ದೇವಾಲಯವನ್ನು ಕಟ್ಟಿದ ಬೆಟ್ಟಕ್ಕೆ (ಮೊರೀಯ ಬೆಟ್ಟ) ಚೀಯೋನ್ ಎಂಬ ಹೆಸರನ್ನು ಅನ್ವಯಿಸಲಾಗಿದೆ; ಕಾಲಾಂತರದಲ್ಲಿ ದೇವಾಲಯಕ್ಕೆ, ಯೆರೂಸಲೇಮ್ ಪಟ್ಟಣಕ್ಕೆ, ಮತ್ತು ಕೆಲವೊಮ್ಮೆ ಇಡೀ ಇಸ್ರಾಯೇಲ್ ದೇಶಕ್ಕೆ ಈ ಹೆಸರನ್ನು ಅನ್ವಯಿಸಲಾಗಿದೆ. ಬೆಟ್ಟವನ್ನು ಪವಿತ್ರ ಬೆಟ್ಟ ಎಂದು ಕರೆಯಲಾಗುತ್ತಿತ್ತು ಏಕೆಂದರೆ ಅದು ಪ್ರತ್ಯೇಕವಾಗಿ ದೇವರಿಗೆ ಸೇರಿದ್ದಾಗಿದೆ. ಯೆರೂಸಲೇಮ್ ಪಟ್ಟಣಕ್ಕೆ ಸಂಬಂಧಿಸಿದಂತೆ ಚೀಯೋನ್ ಮತ್ತು ಯೆರೂಸಲೇಮ್ ಎರಡನ್ನೂ ಕೀರ್ತನೆಗಳಲ್ಲಿ ಬಳಸಲಾಗಿರುವುದ್ದರಿಂದ, ಎರಡೂ ಪದಗಳನ್ನು "ಯೆರೂಸಲೇಮ್" ಎಂದು ಭಾಷಾಂತರಿಸುವಲ್ಲಿ ಕೆಲವು ಪ್ರಯೋಜನವಿದೆ. ನಿರ್ದಿಷ್ಟವಾಗಿ ಇಂದಿನ ಬಹುತೇಕ ಓದುಗರು ಆ ಹೆಸರುಳ್ಳ ಪಟ್ಟಣದ ಅಸ್ತಿತ್ವದ ಬಗ್ಗೆ ತಿಳಿದಿದ್ದಾರೆ. ಆದಾಗ್ಯೂ, ಚೀಯೋನ್ ಮತ್ತು ಯೆರೂಸಲೇಮ್ ವಿವಿಧ ಸಂದರ್ಭಗಳಲ್ಲಿ ಗೋಚರಿಸುತ್ತವೆ.
\f* ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು>> ಎಂದು ಹೇಳುವನು.
\q
\v 7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;
\q ಆತನು ನನಗೆ, <<ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
\s5
\q
\v 8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;
\q ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
\q
\v 9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ;
\q ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ>> ಎಂದು ಹೇಳಿದನು.
\b
\s5
\q
\v 10 ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ;
\q ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
\q
\v 11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;
\q ನಡುಗುತ್ತಾ ಉಲ್ಲಾಸಪಡಿರಿ.
\s5
\q
\v 12 ಆತನ ಮಗನಿಗೆ ಮುದ್ದಿಡಿರಿ;
\q ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ.
\q ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
\s5
\c 3
\ms ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ
\d ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ.
\b
\q
\v 1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ;
\q ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
\q
\v 2 ಅನೇಕರು ನನ್ನ ವಿಷಯದಲ್ಲಿ, <<ಅವನಿಗೆ ದೇವರಿಂದ
\f +
\fr 3:2
\ft ಅಥವಾ ರಕ್ಷಣೆಯುಂಟಾಗುವುದಿಲ್ಲ.
\f* ಸಹಾಯವು ಆಗುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ.
\qs ಸೆಲಾ
\qs*
\s5
\q
\v 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;
\q ನೀನು ನನ್ನ ಗೌರವಕ್ಕೆ ಆಧಾರನೂ,
\q ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
\q
\v 4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ,
\q ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ.
\qs ಸೆಲಾ
\f +
\fr 3:4
\fq ಸೆಲಾ
\ft ಅಂದರೆ ನಿಲ್ಲಿಸಿ ಆಲೋಚಿಸು. ಇದು ಕ್ಷಣಮಾತ್ರ ವಿರಾಮ ನೀಡಿ ಮುಂದುವರೆಸು ಎಂಬ ಸಂಗೀತದ ಚಿಹ್ನೆಯಾಗಿದೆ.
\f*
\qs*
\s5
\q
\v 5 ಯೆಹೋವನು ನನ್ನನ್ನು ಕಾಪಾಡುವವನು,
\q ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
\q
\v 6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ
\q ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
\s5
\q
\v 7 ಯೆಹೋವನೇ, ನನ್ನ ದೇವರೇ,
\q ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ,
\q ಎದ್ದು ಬಂದು ನನ್ನನ್ನು ರಕ್ಷಿಸು.
\q
\v 8
\f +
\fr 3:8
\ft ಅಥವಾ ರಕ್ಷಣೆಯು.
\f* ಜಯವು ಯೆಹೋವನಿಂದಲೇ ಉಂಟಾಗುವುದು.
\q ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ.
\qs ಸೆಲಾ.
\qs*
\s5
\c 4
\ms ವಿಶ್ವಾಸಯುಕ್ತ ಸಂಧ್ಯಾಕಾಲದ ಗೀತೆ
\d ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
\b
\q
\v 1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ;
\q ಸದುತ್ತರವನ್ನು ದಯಪಾಲಿಸು.
\q ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ,
\q ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
\s5
\q
\v 2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ,
\q ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ?
\q ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ?
\qs ಸೆಲಾ
\qs*
\q
\v 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ.
\q ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
\s5
\q
\v 4 ಭಯಪಡಿರಿ, ಪಾಪಮಾಡಬೇಡಿರಿ;
\q ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ.
\qs ಸೆಲಾ
\qs*
\q
\v 5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ;
\q ಯೆಹೋವನಲ್ಲಿಯೇ ಭರವಸವಿಡಿರಿ.
\s5
\q
\v 6 <<ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?>> ಎಂದು ಅನೇಕರು ಹೇಳಿಕೊಳ್ಳುತ್ತಾರೆ.
\q ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
\q
\v 7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ
\q ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
\q
\v 8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.
\q ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
\s5
\c 5
\ms ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ.
\b
\q
\v 1 ಯೆಹೋವನೇ ನನ್ನ ಮೊರೆಗೆ ಕಿವಿಗೊಡು;
\q ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
\q
\v 2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು;
\q ನನ್ನ ಮೊರೆಯನ್ನು ಆಲಿಸು.
\q
\v 3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
\q ಉದಯಕಾಲದಲ್ಲಿಯೇ ನನ್ನ
\f +
\fr 5:3
\ft ಅಥವಾ ಯಜ್ಞವನ್ನು.
\f* ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ,
\q ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
\s5
\q
\v 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ;
\q ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
\q
\v 5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು;
\q ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
\q
\v 6 ಸುಳ್ಳು ಹೇಳುವವರನ್ನು ನಾಶಮಾಡುವಿ;
\q ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
\s5
\q
\v 7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ
\q ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು;
\q ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ,
\q ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
\q
\v 8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ
\q ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು;
\q ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
\s5
\q
\v 9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ;
\q ಅವರು ನಾಲಿಗೆಯಿಂದ ಸವಿಮಾತನಾಡಿದರೂ,
\q ಅವರ ಹೃದಯವು ನಾಶಕರವಾದ ಗುಂಡಿ,
\q ಅವರ ಗಂಟಲು ತೆರೆದಿರುವ ಸಮಾಧಿ.
\q
\v 10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು;
\q ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು;
\q ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ;
\q ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
\s5
\q
\v 11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;
\q ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು.
\q ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
\q
\v 12 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ;
\q ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
\s5
\c 6
\ms ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ.
\b
\q
\v 1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;
\q ರೋಷದಿಂದ ನನ್ನನ್ನು ದಂಡಿಸಬೇಡ.
\q
\v 2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.
\q ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
\s5
\q
\v 3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.
\q ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
\q
\v 4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;
\q ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
\q
\v 5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;
\q ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
\s5
\q
\v 6 ನಾನು ನರಳಿ ನರಳಿ ದಣಿದಿದ್ದೇನೆ;
\q ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.
\q ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
\q
\v 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;
\q ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
\s5
\q
\v 8 ಧರ್ಮವನ್ನು ಮೀರಿ ನಡೆಯುವವರೇ,
\q ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;
\q ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
\q
\v 9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;
\q ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
\q
\v 10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;
\q ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
\s5
\c 7
\ms ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು
\d ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ.
\b
\q
\v 1 ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ;
\q ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
\q
\v 2 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು,
\q ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
\s5
\q
\v 3 ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
\q
\v 4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು,
\q ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
\s5
\q
\v 5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ;
\q ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ.
\qs ಸೆಲಾ
\qs*
\s5
\q
\v 6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು.
\q ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
\q
\v 7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ
\q ನೀನು ಪುನಃ ಆರೋಹಣಮಾಡು.
\s5
\q
\v 8 ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.
\q ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
\q
\v 9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ
\q ಪರಿಶೋಧಿಸುವ ನೀತಿಸ್ವರೂಪನಾದ ದೇವರೇ,
\q ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು;
\q ನೀತಿವಂತರನ್ನು ದೃಢಪಡಿಸು.
\s5
\q
\v 10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ;
\q ಆತನು ಯಥಾರ್ಥರನ್ನು ಕಾಪಾಡುತ್ತಾನೆ.
\q
\v 11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು;
\q ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
\s5
\q
\v 12 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ
\q ಆತನು ತನ್ನ ಕತ್ತಿಯನ್ನು ಮಸೆಯುವನು.
\q ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
\q
\v 13 ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ
\q ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
\s5
\q
\v 14 ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;
\q ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ,
\q ಶೂನ್ಯವನ್ನೇ ಹೆತ್ತನು ನೋಡಿರಿ.
\q
\v 15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ,
\q ಅದರೊಳಗೆ ತಾನೇ ಬಿದ್ದುಹೋದನಲ್ಲಾ.
\q
\v 16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು;
\q ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
\s5
\q
\v 17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,
\q ನಾನು ಆತನನ್ನು ಕೊಂಡಾಡುವೆನು.
\q ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
\s5
\c 8
\ms ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.
\b
\q
\v 1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
\q ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
\q
\v 2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ
\q ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,
\q ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ
\q ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
\s5
\q
\v 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,
\q ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
\q
\v 4 ಮನುಷ್ಯನು ಎಷ್ಟು ಮಾತ್ರದವನು,
\q ಅವನನ್ನು ನೀನು ಏಕೆ ಸ್ಮರಿಸಬೇಕು?
\q ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
\q
\v 5 ಅವನನ್ನು ದೇವರಿಗಿಂತ
\f +
\fr 8:5
\fq ದೇವರಿಗಿಂತ
\ft ಅಥವಾ ದೇವದೂತರಿಗಿಂತ.
\f* ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;
\q ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
\s5
\q
\v 6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ
\q
\f +
\fr 8:6
\ft ಇಬ್ರಿಯ 2:6-9 ಅನ್ನು ನೋಡಿರಿ.
\f* ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
\q
\v 7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
\q
\v 8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,
\q ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು,
\q ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
\s5
\q
\v 9 ನಮ್ಮ ಕರ್ತನಾದ ಯೆಹೋವನೇ,
\q ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
\s5
\c 9
\ms ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
\q ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
\q
\v 2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;
\q ನಿನ್ನ ಹೆಸರನ್ನು ಕೀರ್ತಿಸುವೆನು.
\s5
\q
\v 3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
\q
\v 4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;
\q ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
\s5
\q
\v 5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,
\q ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
\q
\v 6 ಶತ್ರುಗಳು ನಿಶ್ಶೇಷವಾದರು;
\q ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು.
\q ಅವರ ಸ್ಮರಣೆಯೇ ಇಲ್ಲವಾಯಿತು.
\s5
\q
\v 7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,
\q ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
\q
\v 8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;
\q ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
\s5
\q
\v 9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
\q ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
\q
\v 10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
\q ನಿನ್ನಲ್ಲಿ ಭರವಸವಿಡುವರು;
\q ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
\s5
\q
\v 11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;
\q ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
\q
\v 12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ
\q ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
\s5
\q
\v 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;
\q ನನ್ನನ್ನು ಉದ್ಧರಿಸುವವನೇ, ಕನಿಕರಿಸು;
\q ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
\q
\v 14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;
\q ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
\s5
\q
\v 15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;
\q ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
\q
\v 16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ;
\q ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್
\qs ಸೆಲಾ
\qs*
\s5
\q
\v 17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ
\q ಪಾತಾಳಕ್ಕೆ ಇಳಿದುಹೋಗುವರು.
\q
\v 18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;
\q ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
\s5
\q
\v 19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.
\q ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
\q
\v 20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;
\q ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ.
\qs ಸೆಲಾ.
\qs*
\s5
\c 10
\ms ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
\b
\q
\v 1 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ?
\q ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
\q
\v 2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ;
\q ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
\q
\v 3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ;
\q
\f +
\fr 10:3
\ft ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ.
\f* ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
\s5
\q
\v 4 ದುಷ್ಟನು ಸೊಕ್ಕಿನ ಮುಖದಿಂದ, <<ಯೆಹೋವನನ್ನು ವಿಚಾರಿಸುವುದಿಲ್ಲ>> ಎಂದು ಹೇಳಿಕೊಂಡು,
\q ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
\q
\v 5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ;
\q ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ
\q ಅದು ಅವನ ಗ್ರಹಿಕೆಗೆ ಬರುವುದಿಲ್ಲ;
\q ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
\s5
\q
\v 6 ಅವನು, <<ನಾನು ಕದಲುವುದೇ ಇಲ್ಲ;
\q ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ>> ಅಂದುಕೊಂಡಿದ್ದಾನೆ.
\q
\v 7 ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ;
\q ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
\s5
\q
\v 8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು,
\q ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ.
\q ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
\q
\v 9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು.
\q ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
\q
\v 10 ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ,
\q ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.
\s5
\q
\v 11 ಆ ದುಷ್ಟನು ತನ್ನೊಳಗೆ, <<ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ;
\q ಆತನು ನೋಡುವುದೇ ಇಲ್ಲ>> ಅಂದುಕೊಳ್ಳುತ್ತಾನೆ.
\q
\v 12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ;
\q ಅವನನ್ನು ರಕ್ಷಿಸುವುದಕ್ಕೆ ಕೈಚಾಚು.
\s5
\q
\v 13 <<ದೇವರು ವಿಚಾರಿಸುವುದೇ ಇಲ್ಲ>> ಎಂದು ಹೇಳುತ್ತಾ,
\q ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
\q
\v 14 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;
\q ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು;
\q ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
\s5
\q
\v 15 ದುಷ್ಟನ ಭುಜಬಲವನ್ನು ಮುರಿದುಹಾಕು,
\q ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.
\q
\v 16 ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು;
\q ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
\s5
\q
\v 17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ;
\q ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
\q
\v 18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ.
\q ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
\s5
\c 11
\ms ಯೆಹೋವನ ಶರಣರಿಗೆ ದುರ್ಗತಿಯಿಲ್ಲ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
\b
\q
\v 1 ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, <<ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ>> ಎಂದು ಹೇಳುವುದೇಕೆ?
\q
\v 2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,
\q ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
\s5
\q
\v 3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
\q
\v 4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;
\q ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ.
\q ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ;
\q ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
\s5
\q
\v 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;
\q ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
\q
\v 6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.
\q ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
\q
\v 7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.
\q ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
\s5
\c 12
\ms ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.
\q ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
\s5
\q
\v 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,
\q ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
\q
\v 3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
\q
\v 4 ಅವರು, <<ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;
\q ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?>> ಎಂದು ಹೇಳಿಕೊಳ್ಳುತ್ತಾರಲ್ಲಾ.
\s5
\q
\v 5 ಯೆಹೋವನು, <<ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;
\q ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.
\q ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.
\q ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು>> ಎಂದು ಹೇಳುತ್ತಾನೆ.
\s5
\q
\v 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ;
\q ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
\q
\v 7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,
\q ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
\q
\v 8 ಯೆಹೋವನೇ, ನೀನು
\f +
\fr 12:8
\ft ಅಥವಾ ಅವರನ್ನು.
\f* ನಮ್ಮನ್ನು ನೋಡಿದ್ದಿ,
\q ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
\s5
\c 13
\ms ಶತ್ರುಪೀಡಿತನ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ.
\b
\q
\v 1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?
\q ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
\q
\v 2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,
\q ಆಲೋಚಿಸಿಕೊಳ್ಳುತ್ತಾ ಇರಬೇಕು?
\q ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
\s5
\q
\v 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;
\q ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
\q
\v 4 ನನ್ನ ಶತ್ರುವು, <<ನಾನು ಅವನನ್ನು ಜಯಿಸಿದೆನು>> ಎಂದು ಹೇಳಿಕೊಳ್ಳಬಾರದು;
\q ವೈರಿಗಳು, <<ನನ್ನ ಎದುರಾಳಿಯು ಜಾರಿಬಿದ್ದನು>> ಎಂದು ಹಿಗ್ಗಬಾರದು.
\s5
\q
\v 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;
\q ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
\q
\v 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
\s5
\c 14
\ms ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
\b
\q
\v 1 ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, <<ದೇವರೇ ಇಲ್ಲ>> ಎಂದು ಅಂದುಕೊಳ್ಳುತ್ತಾರೆ;
\q ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ.
\q ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
\s5
\q
\v 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,
\q ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
\q
\v 3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
\q ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.
\s5
\q
\v 4 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ?
\q ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ;
\q ಯೆಹೋವನನ್ನು ಸ್ಮರಿಸುವುದಿಲ್ಲ.
\s5
\q
\v 5 ಅವರು ಫಕ್ಕನೆ ಭಯಭ್ರಾಂತರಾಗುವರು;
\q ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
\q
\v 6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ
\q ಯೆಹೋವನು ಅವರ ಆಶ್ರಯವಲ್ಲವೇ.
\s5
\q
\v 7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ.
\q ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ,
\q ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು,
\q ಇಸ್ರಾಯೇಲರು ಹರ್ಷಿಸುವರು.
\s5
\c 15
\ms ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು
\d ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?
\q ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
\q
\v 2 ಅವನು ಸಜ್ಜನನೂ, ನೀತಿವಂತನೂ,
\q ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
\s5
\q
\v 3 ಅವನು ಚಾಡಿಯನ್ನು ಹೇಳದವನೂ,
\q ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
\q ಯಾರನ್ನೂ ನಿಂದಿಸದವನೂ ಆಗಿರಬೇಕು.
\s5
\q
\v 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,
\q ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,
\q ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
\q
\v 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ,
\q ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.
\q ಇಂಥವನು ಎಂದಿಗೂ ಕದಲುವುದಿಲ್ಲ.
\s5
\c 16
\ms ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು
\d ದಾವೀದನ ಕಾವ್ಯ.
\b
\q
\v 1 ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
\q
\v 2 ನಾನು ಯೆಹೋವನನ್ನು ಕುರಿತು, <<ನೀನೇ ನನ್ನ ಒಡೆಯನು;
\q ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ>> ಎಂದು ಹೇಳುವೆನು.
\q
\v 3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,
\q <<ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು>> ಎಂದು ಹೇಳುವೆನು.
\s5
\q
\v 4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.
\q ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;
\q ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
\s5
\q
\v 5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,
\q ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
\q
\v 6 ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು;
\q ಅದು ನನಗೆ ಸಂತೃಪ್ತಿಕರವಾಗಿದೆ.
\s5
\q
\v 7 ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;
\q ನಾನು ಆತನನ್ನು ಕೊಂಡಾಡುವೆನು.
\q ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
\q
\v 8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
\q ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
\s5
\q
\v 9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;
\q ನನ್ನ ಮನವು ಉಲ್ಲಾಸಗೊಳ್ಳುತ್ತದೆ;
\q ನನ್ನ ಶರೀರವೂ ಸುರಕ್ಷಿತವಾಗಿರುವುದು.
\q
\v 10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;
\q ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
\s5
\q
\v 11 ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
\q ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
\q ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
\s5
\c 17
\ms ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ
\d ದಾವೀದನ ಪ್ರಾರ್ಥನೆ.
\b
\q
\v 1 ಯೆಹೋವನೇ, ನ್ಯಾಯವಾದುದನ್ನು ಆಲೈಸು;
\q ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು;
\q ಅದು ಕಪಟವಾದ ಬಾಯಿಂದ ಬಂದದ್ದಲ್ಲ.
\q
\v 2 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;
\q ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
\s5
\q
\v 3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
\q ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,
\q ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;
\q
\f +
\fr 17:3
\ft ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ.
\f* ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
\s5
\q
\v 4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ
\q ನಿನ್ನ ಮಾತನ್ನೇ ಅನುಸರಿಸಿದ್ದೇನೆ.
\q
\v 5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;
\q ನನ್ನ ಕಾಲು ಜಾರಲಿಲ್ಲ.
\s5
\q
\v 6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ,
\q ಕಿವಿಗೊಟ್ಟು ಕೇಳು.
\q
\v 7 ಭುಜಬಲವನ್ನು ಪ್ರಯೋಗಿಸಿ,
\q ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,
\q ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
\s5
\q
\v 8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ,
\q ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
\q
\v 9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;
\q ಕಣ್ಣು ಗುಡ್ಡಿನಂತೆಯೇ ಕಾಪಾಡು.
\q
\v 10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ;
\q ಅಹಂಕಾರದಿಂದ ಮಾತನಾಡುತ್ತಾರೆ.
\s5
\q
\v 11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;
\q ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
\q
\v 12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,
\q ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
\s5
\q
\v 13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;
\q ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
\q
\v 14 ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು
\q ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು;
\q ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ.
\q ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
\s5
\q
\v 15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.
\q ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
\s5
\c 18
\ms ಜಯಪ್ರದನಾದ ಯೆಹೋವನ ಸ್ತುತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು.
\b
\q
\v 1 ನನ್ನ ಬಲವಾಗಿರುವ ಯೆಹೋವನೇ,
\q ನಿನ್ನಲ್ಲಿಯೇ ಮಮತೆಯಿಡುತ್ತೇನೆ.
\s5
\q
\v 2 ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು,
\q ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು,
\q ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
\q
\v 3 ಯೆಹೋವನು ಸ್ತೋತ್ರಕ್ಕೆ ಅರ್ಹನು;
\q ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
\s5
\q
\v 4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು;
\q ನಾಶಪ್ರವಾಹವು ನನ್ನನ್ನು ನಡುಗಿಸಿತು.
\q
\v 5 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು;
\q ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
\s5
\q
\v 6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;
\q ನನ್ನ ದೇವರನ್ನು ಪ್ರಾರ್ಥಿಸಿದೆನು.
\q ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು;
\q ನನ್ನ ಕೂಗು ಆತನಿಗೆ ಕೇಳಿಸಿತು.
\s5
\q
\v 7 ಆಗ ಆತನಿಗೆ ಸಿಟ್ಟೇರಿದ್ದರಿಂದ,
\q ಭೂಮಿಯು ಗಡಗಡನೆ ಕಂಪಿಸಿತು,
\q ಪರ್ವತಗಳ ಬುಡಗಳು ನಡುಗಿ ಕದಲಿದವು.
\q
\v 8 ಆತನ ಮೂಗಿನಿಂದ ಹೊಗೆಯು ಎದ್ದು;
\q ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು,
\q ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
\s5
\q
\v 9 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು;
\q ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
\q
\v 10 ಕೆರೂಬಿವಾಹನನಾಗಿ
\f +
\fr 18:10
\fq ಕೆರೂಬಿವಾಹನನಾಗಿ
\ft ಹಳೆಯ ಒಡಂಬಡಿಕೆಯಲ್ಲಿರುವ ಕೆರೂಬ್ (ಬಹುವಚನ "ಕೆರೂಬಿಮ್") ರೆಕ್ಕೆಯುಳ್ಳ ಜೀವಿಯಾಗಿದ್ದು, ಯೆಹೋವನ ಸ್ವರ್ಗೀಯ ಸಿಂಹಾಸನವನ್ನು ಕಾಯುತ್ತಿದ್ದಾರೆ.
\f* ಹಾರಿ,
\q ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
\s5
\q
\v 11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು,
\q ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
\q
\v 12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು,
\q ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
\s5
\q
\v 13 ಯೆಹೋವನು ಆಕಾಶದಲ್ಲಿ ಗುಡುಗಿದನು;
\q ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
\q
\v 14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು;
\q ಸಿಡಿಲುಗಳಿಂದ ಕಳವಳಗೊಳಿಸಿದನು.
\s5
\q
\v 15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ,
\q ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು.
\q ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
\s5
\q
\v 16 ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು,
\q ಮಹಾಜಲರಾಶಿಗಳೊಳಗಿಂದ ಎಳೆದನು.
\q
\v 17 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ
\q ನನ್ನನ್ನು ಬಿಡಿಸಿ ರಕ್ಷಿಸಿದನು.
\s5
\q
\v 18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು,
\q ಆಗ ಯೆಹೋವನು ನನಗೆ ಉದ್ಧಾರಕನಾದನು.
\q
\v 19 ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು;
\q ನನ್ನನ್ನು ಮೆಚ್ಚಿ ರಕ್ಷಿಸಿದನು.
\s5
\q
\v 20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು,
\q ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
\q
\v 21 ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ;
\q ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
\s5
\q
\v 22 ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು;
\q ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
\q
\v 23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು;
\q ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
\q
\v 24 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ,
\q ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
\s5
\q
\v 25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ,
\q ದೋಷವಿಲ್ಲದವನಿಗೆ ನಿರ್ದೋಷಿಯೂ,
\q
\v 26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
\s5
\q
\v 27 ದೀನರನ್ನು ಉದ್ಧರಿಸುವವನೂ,
\q ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
\q
\v 28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ;
\q ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
\q
\v 29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು;
\q ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು
\f +
\fr 18:29
\fq ಗೋಡೆಯನ್ನು ಹಾರುವೆನು
\ft ಅಥವಾ ಗೋಡೆಯನ್ನು ತುಳಿದುಹಾಕುವೆನು.
\f* .
\s5
\q
\v 30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು;
\q ಯೆಹೋವನ ವಚನವು ಶುದ್ಧವಾದದ್ದು.
\q ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
\q
\v 31 ಯೆಹೋವನಲ್ಲದೆ ದೇವರು ಯಾರು?
\q ನಮ್ಮ ದೇವರ ಹೊರತು ಶರಣನು ಎಲ್ಲಿ?
\q
\v 32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ,
\q ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
\s5
\q
\v 33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ;
\q ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
\q
\v 34 ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ
\q ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
\s5
\q
\v 35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ.
\q ನಿನ್ನ ಬಲಗೈ ನನಗೆ ಆಧಾರ;
\q ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
\q
\v 36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ
\q ನನ್ನ ಪಾದಗಳು ಕದಲುವುದಿಲ್ಲ.
\s5
\q
\v 37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು;
\q ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
\q
\v 38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು;
\q ನನ್ನ ಪಾದದ ಕೆಳಗೆ ಬೀಳುವರು.
\q
\v 39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ;
\q ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
\s5
\q
\v 40 ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ;
\q ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
\q
\v 41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ;
\q ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
\q
\v 42 ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ
\q ಅವರನ್ನು ಪುಡಿಪುಡಿಮಾಡಿದೆನು.
\q ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
\s5
\q
\v 43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ;
\q ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
\q
\v 44 ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು;
\q ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.
\q
\v 45 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
\s5
\q
\v 46 ಯೆಹೋವನು ಚೈತನ್ಯಸ್ವರೂಪನು;
\q ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
\q
\v 47 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು;
\q ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
\s5
\q
\v 48 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ,
\q ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ;
\q ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
\q
\v 49 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು;
\q ನಿನ್ನ ನಾಮವನ್ನು ಸಂಕೀರ್ತಿಸುವೆನು.
\s5
\q
\v 50 ಆತನು ತಾನು ನೇಮಿಸಿದ ಅರಸನಿಗೋಸ್ಕರ
\q ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ;
\q ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ
\q ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
\s5
\c 19
\ms ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;
\q ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
\q
\v 2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;
\q ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
\q
\v 3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
\s5
\q
\v 4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;
\q ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ.
\q ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
\q
\v 5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
\q ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
\q
\v 6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;
\q ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
\s5
\q
\v 7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
\q ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
\q ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
\q ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
\q
\v 8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;
\q ಮನಸ್ಸನ್ನು ಹರ್ಷಪಡಿಸುತ್ತವೆ.
\q ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
\s5
\q
\v 9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ.
\q ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
\q
\v 10 ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು.
\q ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
\s5
\q
\v 11 ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ;
\q ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
\q
\v 12 ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು?
\q ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
\s5
\q
\v 13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು.
\q ಅಂಥ ಪಾಪಗಳು ನನ್ನನ್ನು ಆಳದಿರಲಿ.
\q ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
\q
\v 14 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ,
\q ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
\s5
\c 20
\ms ಅರಸನ ಜಯಕ್ಕಾಗಿ ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;
\q ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
\q
\v 2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;
\q ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
\s5
\q
\v 3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;
\q ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ.
\qs ಸೆಲಾ
\qs*
\q
\v 4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;
\q ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
\s5
\q
\v 5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;
\q ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು.
\q ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
\q
\v 6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ
\q ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು.
\q ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು,
\q ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
\s5
\q
\v 7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;
\q ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
\q
\v 8 ಅವರು ಬಿದ್ದುಹೋಗಿದ್ದಾರೆ;
\q ನಾವಾದರೋ ಎದ್ದು ನಿಂತಿದ್ದೇವೆ.
\s5
\q
\v 9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;
\q ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
\s5
\c 21
\s ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;
\q ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
\q
\v 2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ,
\q ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ.
\qs ಸೆಲಾ
\qs*
\s5
\q
\v 3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;
\q ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
\q
\v 4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು,
\q ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
\s5
\q
\v 5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು;
\q ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
\q
\v 6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;
\q ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
\s5
\q
\v 7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;
\q ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
\q
\v 8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು;
\q ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
\s5
\q
\v 9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ.
\q ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು;
\q ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
\q
\v 10 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ;
\q ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
\s5
\q
\v 11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ,
\q ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
\q
\v 12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು,
\q ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
\s5
\q
\v 13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ;
\q ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
\s5
\c 22
\ms ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ
\d (ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.)
\r (ಕೀರ್ತ. 69; 71; 102; ಯೆಶಾ. 55)
\b
\q
\v 1 ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?
\q ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
\q
\v 2 ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ;
\q ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
\s5
\q
\v 3 ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,
\q ನೀನು ಪವಿತ್ರಸ್ವರೂಪನು.
\q
\v 4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು;
\q ನಿನ್ನನ್ನು ನಂಬಿ ಉದ್ಧಾರವಾದರು.
\q
\v 5 ನಿನಗೆ ಮೊರೆಯಿಟ್ಟು ವಿಮುಕ್ತರಾದರು;
\q ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
\s5
\q
\v 6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ;
\q ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
\q
\v 7 ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;
\q ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
\q
\v 8 <<ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;
\q ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ>> ಎಂದು ಹೇಳುತ್ತಾರೆ.
\s5
\q
\v 9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ.
\q ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
\q
\v 10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;
\q ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
\s5
\q
\v 11 ನನಗೀಗ ಕಷ್ಟವು ಪ್ರಾಪ್ತವಾಗಿದೆ;
\q ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
\q
\v 12 ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ;
\q ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
\q
\v 13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
\s5
\q
\v 14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ;
\q ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ.
\q ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
\q
\v 15
\f +
\fr 22:15
\ft ಅಥವಾ ಗಂಟಲು.
\f* ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ;
\q ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ.
\q ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
\s5
\q
\v 16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
\q ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.
\q ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
\q
\v 17 ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;
\q ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
\s5
\q
\v 18 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;
\q ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
\q
\v 19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ;
\q ಬೇಗ ಬಂದು ಸಹಾಯಮಾಡು.
\s5
\q
\v 20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು;
\q ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
\q
\v 21 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು
\f +
\fr 22:21
\ft ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.
\f* ತಪ್ಪಿಸು.
\b
\s5
\q
\v 22 ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು;
\q ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
\q
\v 23 ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ;
\q ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ.
\q ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
\s5
\q
\v 24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,
\q ಅದಕ್ಕೆ ಅಸಹ್ಯಪಡಲಿಲ್ಲ;
\q ತನ್ನ ಮುಖವನ್ನು ಅವನಿಗೆ ಮರೆಮಾಡದೆ,
\q ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
\q
\v 25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು;
\q ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
\s5
\q
\v 26 ದೀನರು ಉಂಡು ತೃಪ್ತರಾಗುವರು;
\q ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು.
\q
\f +
\fr 22:26
\ft ಅಥವಾ ನಿಮ್ಮ.
\f* ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
\q
\v 27 ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು;
\q ಯೆಹೋವನೇ, ಎಲ್ಲಾ ಜನಾಂಗಗಳವರು
\f +
\fr 22:27
\ft ಅಥವಾ ಆತನಿಗೆ.
\f* ನಿನಗೆ ಅಡ್ಡಬೀಳುವರು.
\s5
\q
\v 28 ರಾಜ್ಯವು ಯೆಹೋವನದೇ;
\q ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
\q
\v 29 ಭೂಲೋಕದಲ್ಲಿರುವ ಪುಷ್ಟರೆಲ್ಲರೂ
\f +
\fr 22:29
\ft ಅಥವಾ ಉಂಡು ಆರಾಧಿಸುವರು.
\f* ಆರಾಧಿಸುವರು;
\q ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
\s5
\q
\v 30 ಆತನನ್ನು ಸೇವಿಸುವವರ ಸಂತಾನದವರು
\q ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
\q
\v 31 ಅವರು ಬಂದು ಆತನ ನೀತಿಯನ್ನೂ,
\q ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
\s5
\c 23
\ms ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು
\d ದಾವೀದನ ಕೀರ್ತನೆ.
\q
\v 1 ಯೆಹೋವನು ನನಗೆ ಕುರುಬನು; ಕೊರತೆಪಡೆನು.
\q
\v 2 ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;
\q ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
\s5
\q
\v 3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ
\q ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
\s5
\q
\v 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
\q ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
\q ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
\s5
\q
\v 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;
\q
\f +
\fr 23:5
\ft ಲೂಕ. 7:46.
\f* ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,
\q ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
\s5
\q
\v 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
\q ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
\s5
\c 24
\ms ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು
\d ದಾವೀದನ ಕೀರ್ತನೆ.
\b
\q
\v 1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;
\q ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
\q
\v 2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು;
\q ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
\s5
\q
\v 3 ಯೆಹೋವನ ಪರ್ವತವನ್ನು
\f +
\fr 24:3
\fq ಪರ್ವತವನ್ನು
\ft ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ.
\f* ಹತ್ತತಕ್ಕವನು ಯಾರು?
\q ಆತನ ಪವಿತ್ರಸ್ಥಾನದಲ್ಲಿ
\f +
\fr 24:3
\ft ಅಥವಾ ನಿಲ್ಲುವುದಕ್ಕೆ.
\f* ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
\q
\v 4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ,
\q ಮೋಸ ಪ್ರಮಾಣಮಾಡದೆ,
\q ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
\s5
\q
\v 5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು;
\q ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
\q
\v 6 ಇಂಥವರೇ ಆತನ ದರ್ಶನವನ್ನು ಬಯಸುವವರು.
\q ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ.
\qs ಸೆಲಾ
\qs*
\s5
\q
\v 7 ದ್ವಾರಗಳೇ, ಉನ್ನತವಾಗಿರ್ರಿ!
\q ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ!
\q ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
\q
\v 8 ಮಹಾಮಹಿಮೆಯುಳ್ಳ ಈ ಅರಸನು ಯಾರು?
\q ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ,
\q ಯುದ್ಧವೀರನಾಗಿರುವ ಯೆಹೋವ.
\s5
\q
\v 9 ದ್ವಾರಗಳೇ, ಉನ್ನತವಾಗಿರ್ರಿ!
\q ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ!
\q ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
\q
\v 10 ಮಹಾಮಹಿಮೆಯುಳ್ಳ ಈ ಅರಸನು ಯಾರು?
\q ಸೇನಾಧೀಶ್ವರನಾದ ಯೆಹೋವನೇ,
\q ಮಹಾಮಹಿಮೆಯುಳ್ಳ ಅರಸನು ಈತನೇ.
\qs ಸೆಲಾ.
\qs*
\s5
\c 25
\ms ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ
\d ದಾವೀದನ ಕೀರ್ತನೆ.
\q
\v 1 ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
\q
\v 2 ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,
\q ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ.
\q ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
\q
\v 3 ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು,
\q ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
\s5
\q
\v 4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು;
\q ನೀನು ಒಪ್ಪುವ ದಾರಿಯನ್ನು ತೋರಿಸು.
\q
\v 5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;
\q ನೀನೇ ನನ್ನನ್ನು ರಕ್ಷಿಸುವ ದೇವರು;
\q ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
\s5
\q
\v 6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,
\q ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
\q
\v 7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ,
\q ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
\s5
\q
\v 8 ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ;
\q ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
\q
\v 9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು;
\q ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
\s5
\q
\v 10 ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ,
\q ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
\q
\v 11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ;
\q ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
\s5
\q
\v 12 ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ
\q ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
\q
\v 13 ಅವರು ಸುಖದಿಂದಲೇ ಇರುವರು;
\q ಅವರ ಸಂತತಿಯವರು ದೇಶವನ್ನು ಅನುಭವಿಸುವರು.
\s5
\q
\v 14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು;
\q ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
\q
\v 15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ;
\q ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
\q
\v 16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ;
\q ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
\s5
\q
\v 17 ನನ್ನ ಮನೋವ್ಯಥೆಗಳನ್ನು ನಿವಾರಿಸು;
\q ಸಂಕಟಗಳಿಂದ ನನ್ನನ್ನು ಬಿಡಿಸು.
\q
\v 18 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ,
\q ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
\q
\v 19 ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ;
\q ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
\s5
\q
\v 20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು;
\q ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
\q
\v 21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
\q ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
\s5
\q
\v 22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.
\s5
\c 26
\ms ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
\d ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.
\q ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ.
\q ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
\q
\v 2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;
\q ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
\q
\v 3 ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;
\q ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
\s5
\q
\v 4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ;
\q ಕಪಟಿಗಳನ್ನು ಸೇರುವವನಲ್ಲ.
\q
\v 5 ನನಗೆ ದುರ್ಜನರ ಕೂಟವು ಅಸಹ್ಯ;
\q ದುಷ್ಟರ ಸಂಗವು ಬೇಕಿಲ್ಲ.
\s5
\q
\v 6 ಯೆಹೋವನೇ, ನಾನು ನಿರ್ದೋಷಿ ಎಂದು,
\q ಕೈಗಳನ್ನು ತೊಳೆದುಕೊಂಡವನಾಗಿ,
\q
\v 7 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,
\q ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
\q
\v 8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ;
\q ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
\s5
\q
\v 9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ;
\q ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
\q
\v 10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ;
\q ಅವರ ಬಲಗೈ ಲಂಚದಿಂದ ತುಂಬಿದೆ.
\s5
\q
\v 11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು;
\q ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
\q
\v 12 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ;
\q ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.
\s5
\c 27
\s ಗಂಡಾಂತರದಲ್ಲಿ ಭಕ್ತನ ನಂಬಿಕೆ
\d ದಾವೀದನ ಕೀರ್ತನೆ.
\b
\q
\v 1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
\q ನಾನು ಯಾರಿಗೆ ಭಯಪಟ್ಟೆನು?
\q ಯೆಹೋವನು ನನ್ನ ಪ್ರಾಣದ ಆಧಾರವು;
\q ನಾನು ಯಾರಿಗೆ ಹೆದರೇನು?
\s5
\q
\v 2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು
\q ನನ್ನನ್ನು ನುಂಗಿಬಿಡಬೇಕೆಂದು ಬಂದು,
\q ತಾವೇ ನೆಲಕ್ಕೆ ಬಿದ್ದುಹೋದರು.
\q
\v 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;
\q ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ,
\q ಭರವಸವುಳ್ಳವನಾಗಿಯೇ ಇರುವೆನು.
\s5
\q
\v 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
\q ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
\q ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
\q ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
\q ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
\s5
\q
\v 5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
\q ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
\q ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
\q
\v 6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,
\q ನನ್ನ ತಲೆ ಎತ್ತಲ್ಪಟ್ಟಿರುವುದು;
\q ನಾನು ಯೆಹೋವನ ಗುಡಾರದಲ್ಲಿ,
\q ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು.
\q ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
\s5
\q
\v 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ;
\q ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
\q
\v 8 <<ನನ್ನ ಸಾನ್ನಿಧ್ಯಕ್ಕೆ ಬಾ>> ಎಂಬ ನಿನ್ನ ಮಾತಿಗೆ,
\q ನಾನು, <<ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು>> ಎಂದು ಉತ್ತರಕೊಟ್ಟೆನು.
\s5
\q
\v 9 ನನಗೆ ವಿಮುಖನಾಗಿರಬೇಡ;
\q ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ.
\q ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ;
\q ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
\q
\v 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
\q ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
\s5
\q
\v 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
\q ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
\q
\v 12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ;
\q ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
\s5
\q
\v 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು
\q ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
\q
\v 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
\q ನಿನ್ನ ಹೃದಯವು ಧೈರ್ಯದಿಂದಿರಲಿ;
\q ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
\s5
\c 28
\s ಭಕ್ತನ ಸ್ತುತಿ
\d ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;
\q ಕೇಳದೆ ಇರಬೇಡ.
\q ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
\q
\v 2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ
\q ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;
\q ನನ್ನ ವಿಜ್ಞಾಪನೆಯನ್ನು ಲಾಲಿಸು.
\s5
\q
\v 3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ
\q ನನ್ನನ್ನೂ ಎಳೆದುಕೊಂಡು ಹೋಗಬೇಡ.
\q ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,
\q ಒಳಗೆ ಕೇಡಾಗಲಿ ಎಂದು ಯೋಚಿಸುವವರು.
\q
\v 4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;
\q ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
\q
\v 5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು
\q ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;
\q ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
\b
\s5
\q
\v 6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;
\q ಆತನಿಗೆ ಸ್ತೋತ್ರವಾಗಲಿ.
\q
\v 7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
\q ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
\q ಆದಕಾರಣ ನನ್ನ ಹೃದಯವು ಹರ್ಷಿಸುವುದು;
\q ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
\q
\v 8 ಯೆಹೋವನು ತನ್ನ ಜನರಿಗೆ ಬಲವೂ,
\q ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
\s5
\q
\v 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು;
\q ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.
\q ನೀನು ಅವರ ಕುರುಬನಾಗಿರು;
\q ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
\s5
\c 29
\ms ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ
\d ದಾವೀದನ ಕೀರ್ತನೆ.
\r (ಯೆರೆ. 10:13; ಯೆಶಾ. 30:30)
\b
\q
\v 1 ದೇವದೂತರುಗಳಿರಾ, ಪರಮಪ್ರಭಾವವು,
\q ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
\q
\v 2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;
\q ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
\s5
\q
\v 3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;
\q ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ;
\q ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
\q
\v 4 ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು,
\q ಎಷ್ಟೋ ಗಂಭೀರವಾದದ್ದು.
\q
\v 5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ;
\q ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
\s5
\q
\v 6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು
\q ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
\q
\v 7 ಯೆಹೋವನ ಗರ್ಜನೆಗೆ ಮಿಂಚುಗಳು
\q ಥಳಥಳನೆ ಹೊಳೆಯುತ್ತವೆ.
\q
\v 8 ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ;
\q ಕಾದೇಶ್ ಅರಣ್ಯವು ಕಂಪಿಸುತ್ತದೆ.
\s5
\q
\v 9
\f +
\fr 29:9
\ft ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ
\f* ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ;
\q ಕಾಡಿನ ಮರಗಳು ಬರಿದಾಗುತ್ತವೆ.
\q ಆಗ ಆತನ ಮಂದಿರದಲ್ಲಿರುವವರೆಲ್ಲರು, <<ಎಷ್ಟೋ ಪ್ರಭಾವ!>> ಎನ್ನುತ್ತಾರೆ.
\b
\q
\v 10 ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;
\q ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
\s5
\q
\v 11 ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;
\q ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
\s5
\c 30
\ms ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು
\d ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
\r (ಕೀರ್ತ. 6; ಯೋಹಾ. 10:22)
\b
\q
\v 1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ,
\q ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
\q
\v 2 ಯೆಹೋವನೇ, ನನ್ನ ದೇವರೇ,
\q ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
\q
\v 3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ;
\q ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
\s5
\q
\v 4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ;
\q ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
\q
\v 5 ಆತನ ಕೋಪವು ಕ್ಷಣಮಾತ್ರವೇ;
\q ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
\q ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
\q ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
\s5
\q
\v 6 ನಾನಂತೂ ಸುಖದಿಂದಿದ್ದಾಗ, <<ನಾನು ಎಂದಿಗೂ ಕದಲುವುದಿಲ್ಲ>>
\q ಎಂದು ಹೇಳಿಕೊಂಡಿದ್ದೆನು.
\q
\v 7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ.
\q ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
\q
\v 8 ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
\s5
\q
\v 9 <<ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು?
\q ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
\q
\v 10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು;
\q ಯೆಹೋವನೇ, ನನ್ನ ಸಹಾಯಕ್ಕೆ ಬಾ>> ಎಂದು ಹೇಳಿದೆನು.
\s5
\q
\v 11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
\q ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು,
\q ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
\q
\v 12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;
\q ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
\s5
\c 31
\ms ಕಷ್ಟದಲ್ಲಿರುವವರ ವಿಶ್ವಾಸದ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;
\q ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ.
\q ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.
\q
\v 2 ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;
\q ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
\s5
\q
\v 3 ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ;
\q ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
\q
\v 4 ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ
\q ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
\s5
\q
\v 5 ನೀನೇ ನನಗೆ ಆಧಾರವಲ್ಲವೇ;
\q ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ.
\q ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
\q
\v 6 ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ;
\q ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
\q
\v 7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು;
\q ನಾನು ಕುಗ್ಗಿಹೋಗಿರುವುದನ್ನು ನೋಡಿ,
\q ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
\s5
\q
\v 8 ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ;
\q ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
\q
\v 9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ.
\q ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
\s5
\q
\v 10 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ;
\q ನನ್ನ
\f +
\fr 31:10
\ft ಅಥವಾ ಅಪರಾಧದಿಂದ.
\f* ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ;
\q ನನ್ನ ಎಲುಬುಗಳು ಸವೆದುಹೋಗಿವೆ.
\q
\v 11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು;
\q ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ.
\q ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು;
\q ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
\s5
\q
\v 12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು;
\q ಒಡೆದ ಬೋಕಿಯಂತಿದ್ದೇನೆ.
\q
\v 13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ;
\q ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ;
\q ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
\s5
\q
\v 14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ;
\q ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
\q
\v 15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ;
\q ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
\q
\v 16 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು;
\q ಪ್ರೀತಿಯಿಂದ ನನ್ನನ್ನು ರಕ್ಷಿಸು.
\s5
\q
\v 17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.
\q ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.
\q
\v 18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ
\q ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.
\s5
\q
\v 19 ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,
\q ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ
\q ಎಷ್ಟೋ ವಿಶೇಷವಾಗಿವೆ.
\q
\v 20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ
\q ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ;
\q ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
\s5
\q
\v 21 ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ,
\q ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.
\q
\v 22 ನಾನಂತೂ ಭಯಭ್ರಾಂತನಾಗಿ, <<ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು>> ಎಂದು ಅಂದುಕೊಂಡೆನು;
\q ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
\s5
\q
\v 23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ.
\q ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ;
\q ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.
\q
\v 24 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;
\q ನಿಮ್ಮ ಹೃದಯವು ಧೈರ್ಯದಿಂದಿರಲಿ.
\s5
\c 32
\s ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ
\d ದಾವೀದನ ಪದ್ಯ.
\b
\q
\v 1 ಯಾರ ದ್ರೋಹವು ಪರಿಹಾರವಾಗಿದೆಯೋ,
\q ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
\q
\v 2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?
\q ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
\s5
\q
\v 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
\q ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
\q
\v 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
\q ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು.
\qs ಸೆಲಾ
\qs*
\s5
\q
\v 5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
\q ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
\q ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ.
\qs ಸೆಲಾ
\qs*
\q
\v 6 ಆದುದರಿಂದ ಭಕ್ತರೆಲ್ಲರು
\f +
\fr 32:6
\ft ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ.
\f* ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;
\q ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
\s5
\q
\v 7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;
\q ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ.
\qs ಸೆಲಾ
\qs*
\q
\v 8 ಯೆಹೋವನು, <<ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
\q ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು>> ಎಂದು ಅನ್ನುತ್ತಾನಲ್ಲಾ.
\s5
\q
\v 9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ
\q ಹೇಸರಗತ್ತೆಯಂತಾಗಲಿ ಇರಬೇಡಿರಿ;
\q ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
\q
\v 10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
\q ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
\s5
\q
\v 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;
\q ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
\s5
\c 33
\ms ರಕ್ಷಕನನ್ನು ಕೀರ್ತಿಸುವ ಭಕ್ತ
\q
\v 1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;
\q ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
\q
\v 2 ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;
\q ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
\q
\v 3 ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ;
\q ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
\s5
\q
\v 4 ಯೆಹೋವನ ವಚನವು ಯಥಾರ್ಥವಾದದ್ದು;
\q ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
\q
\v 5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;
\q ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
\q
\v 6 ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು;
\q ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
\s5
\q
\v 7 ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ;
\q ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
\q
\v 8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ;
\q ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
\q
\v 9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು;
\q ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
\s5
\q
\v 10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ;
\q ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
\q
\v 11 ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು;
\q ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
\q
\v 12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ,
\q ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
\s5
\q
\v 13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
\q
\v 14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
\q
\v 15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ,
\q ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
\s5
\q
\v 16 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;
\q ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
\q
\v 17 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ;
\q ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
\s5
\q
\v 18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ;
\q ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
\q
\v 19 ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು;
\q ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
\s5
\q
\v 20 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ;
\q ನಮ್ಮ ಸಹಾಯವೂ, ಗುರಾಣಿಯೂ ಆತನೇ.
\q
\v 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು;
\q ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
\s5
\q
\v 22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ;
\q ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
\s5
\c 34
\ms ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
\d ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ.
\b
\q
\v 1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
\q ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
\s5
\q
\v 2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು;
\q ಇದನ್ನು ದೀನರು ಕೇಳಿ ಸಂತೋಷಿಸುವರು.
\q
\v 3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ;
\q ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
\s5
\q
\v 4 ನಾನು ಯೆಹೋವನ ಸನ್ನಿಧಿಯಲ್ಲಿ
\f +
\fr 34:4
\ft ಅಥವಾ ಹುಡುಕಿದೆನು.
\f* ಬೇಡಿಕೊಳ್ಳಲು,
\q ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
\q
\v 5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು;
\q ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
\q
\v 6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು,
\q ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
\s5
\q
\v 7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು,
\q ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
\q
\v 8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;
\q ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
\q
\v 9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ;
\q ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
\s5
\q
\v 10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು;
\q ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
\q
\v 11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
\q ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
\s5
\q
\v 12 ದೀರ್ಘಾಯುಷ್ಯವು ಬೇಕೋ?
\q ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
\q
\v 13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
\q ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
\q
\v 14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
\q ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
\s5
\q
\v 15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ;
\q ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
\q
\v 16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು;
\q ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
\q
\v 17 ಯೆಹೋವನು ನೀತಿವಂತರ ಕೂಗನ್ನು ಕೇಳಿ,
\q ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
\s5
\q
\v 18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
\q ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
\q
\v 19 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
\q ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
\q
\v 20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ;
\q ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
\s5
\q
\v 21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು;
\q ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
\q
\v 22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ.
\q ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
\s5
\c 35
\ms ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ
\d ದಾವೀದನ ಕೀರ್ತನೆ.
\r (ಕೀರ್ತ. 7)
\b
\q
\v 1 ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು;
\q ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
\q
\v 2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು,
\q ನನಗೆ ಸಹಾಯಕನಾಗಿ ನಿಲ್ಲು.
\q
\v 3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,
\q ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು;
\q <<ನಾನೇ ನಿನ್ನ ರಕ್ಷಣೆ>> ಎಂದು ಅಭಯಕೊಡು.
\s5
\q
\v 4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;
\q ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
\q
\v 5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ;
\q ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
\q
\v 6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ
\q ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
\s5
\q
\v 7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;
\q ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
\q
\v 8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;
\q ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ.
\q ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
\s5
\q
\v 9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು;
\q ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
\q
\v 10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,
\q ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ,
\q <<ನಿನಗೆ ಸಮಾನರು ಯಾರಿದ್ದಾರೆ?>> ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
\s5
\q
\v 11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;
\q ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
\q
\v 12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ;
\q ನಾನು ದಿಕ್ಕಿಲ್ಲದವನಾದೆನು.
\s5
\q
\v 13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;
\q ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು.
\q
\f +
\fr 35:13
\ft ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
\f* ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
\q
\v 14 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;
\q ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
\s5
\q
\v 15 ಆದರೂ ನನಗೆ ಆಪತ್ತು ಬಂದಾಗ,
\q ಅವರು ಸಂತೋಷಿಸುತ್ತಾ ಕೂಡಿಕೊಂಡರು;
\q ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು,
\q ಸೂರೆ ಮಾಡುವುದನ್ನು ಬಿಡಲೇ ಇಲ್ಲ.
\q
\v 16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ,
\q ನನ್ನ ಮೇಲೆ ಹಲ್ಲುಕಡಿಯುತ್ತಾರೆ.
\s5
\q
\v 17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?
\q ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು;
\q ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.
\q
\v 18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
\q ಬಹುಜನರ ಮುಂದೆ ಸ್ತುತಿಸುವೆನು.
\s5
\q
\v 19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;
\q ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
\q
\v 20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;
\q ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
\s5
\q
\v 21 ಅವರು ನನ್ನನ್ನು ನೋಡಿ ಬಾಯಿಕಿಸಿದು, <<ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ>> ಎಂದು ಅನ್ನುತ್ತಾರೆ.
\q
\v 22 ಯೆಹೋವನೇ, ನೀನೇ ನೋಡಿದಿಯಲ್ಲವೇ;
\q ಸುಮ್ಮನಿರಬೇಡ;
\q ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?
\q
\v 23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು;
\q ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
\s5
\q
\v 24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;
\q ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
\q
\v 25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು;
\q
\f +
\fr 35:25
\ft ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು.
\f* ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
\q
\v 26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;
\q ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು,
\q ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
\s5
\q
\v 27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು
\q ಆನಂದದೊಡನೆ ಜಯಧ್ವನಿಮಾಡಲಿ;
\q ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.
\q
\v 28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.
\s5
\c 36
\ms ದುಷ್ಟರ ದುರ್ಲಕ್ಷಣ ಮತ್ತು ದೇವರ ಮಹಾಪ್ರೀತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ.
\b
\q
\v 1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ
\q ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
\q
\v 2 ಅದು ಅವನನ್ನು ವಂಚಿಸಿ, <<ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು
\q ನಿನಗೆ ಕೇಡು ತರುವುದಿಲ್ಲ>> ಎಂದು ಊದಿಬಿಡುತ್ತದೆ.
\s5
\q
\v 3 ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ;
\q ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
\q
\v 4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು;
\q ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
\s5
\q
\v 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ;
\q ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
\q
\v 6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ,
\q ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ;
\q ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
\s5
\q
\v 7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;
\q ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
\q
\v 8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ;
\q ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
\q
\v 9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ;
\q ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
\s5
\q
\v 10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;
\q ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
\q
\v 11 ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ;
\q ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
\q
\v 12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
\s5
\c 37
\ms ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
\d ದಾವೀದನ ಕೀರ್ತನೆ.
\r (ಕೀರ್ತ. 39; 73)
\b
\q
\v 1 ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ;
\q ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
\q
\v 2 ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು;
\q ಹಸಿರು ಸಸಿಯಂತೆ ಬಾಡಿಹೋಗುವರು.
\s5
\q
\v 3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;
\q ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
\q
\v 4 ನೀನು ಯೆಹೋವನಲ್ಲಿ ಸಂತೋಷಿಸು;
\q ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
\s5
\q
\v 5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;
\q ಆತನೇ ಅದನ್ನು ಸಾಗಿಸುವನು.
\q
\v 6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,
\q ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
\s5
\q
\v 7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
\q ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
\s5
\q
\v 8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು.
\q ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
\q
\v 9 ಕೆಡುಕರು ತೆಗೆದುಹಾಕಲ್ಪಡುವರು;
\q ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
\q
\v 10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು;
\q ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
\s5
\q
\v 11 ಆದರೆ ದೀನರು ದೇಶವನ್ನು ಅನುಭವಿಸುವರು;
\q ಅವರು ಮಹಾಸೌಖ್ಯದಿಂದ ಆನಂದಿಸುವರು.
\q
\v 12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ;
\q ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
\q
\v 13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
\s5
\q
\v 14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ;
\q ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
\q
\v 15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು;
\q ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
\s5
\q
\v 16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
\q
\v 17 ದುಷ್ಟರ ತೋಳುಗಳು ಮುರಿದುಹೋಗುವವು;
\q ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
\s5
\q
\v 18 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;
\q ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
\q
\v 19 ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ;
\q ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
\s5
\q
\v 20 ದುಷ್ಟರೋ ನಾಶವಾಗಿ ಹೋಗುವರು;
\q ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು.
\q ಅವರು ಹಬೆಯಂತೆ ತೋರಿ ಅಡಗಿಹೋಗುವರು.
\q
\v 21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;
\q ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
\s5
\q
\v 22 ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು;
\q ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
\q
\v 23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
\q ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
\q
\v 24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;
\q ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
\s5
\q
\v 25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;
\q ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
\q ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
\q
\v 26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;
\q ಅವನ ಸಂತತಿಯವರು ಆಶೀರ್ವಾದ ಹೊಂದುವರು.
\q
\v 27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು;
\q ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
\s5
\q
\v 28 ಯೆಹೋವನು ನ್ಯಾಯವನ್ನು ಮೆಚ್ಚುವವನು;
\q ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು.
\q ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
\q
\v 29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ,
\q ಅದರಲ್ಲಿ ಶಾಶ್ವತವಾಗಿ ವಾಸಿಸುವರು.
\q
\v 30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,
\q ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
\s5
\q
\v 31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು;
\q ಅವನು ಜಾರುವುದೇ ಇಲ್ಲ.
\q
\v 32 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
\q
\v 33 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ;
\q ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
\s5
\q
\v 34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;
\q ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು;
\q ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
\s5
\q
\v 35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ
\f +
\fr 37:35
\fq ಹಸಿರಾಗಿ ಬೆಳೆದ ಮರದಂತೆ
\ft ಅಂದರೆ ಲೆಬನೋನ್ ದೇಶದ ದೇವದಾರಿನಂತೆ.
\f*
\q ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
\q
\v 36 ತರುವಾಯ
\f +
\fr 37:36
\ft ಅಥವಾ ಅವನು.
\f* ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ,
\q ಅವನು ಇಲ್ಲದೆ ಹೋಗಿದ್ದನು,
\q ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
\s5
\q
\v 37 ಒಳ್ಳೇ ನಡತೆಯುಳ್ಳವನನ್ನು ನೋಡು,
\q ಯಥಾರ್ಥನನ್ನು ಲಕ್ಷಿಸು;
\q ಶಾಂತನಿಗೆ ಸಂತಾನವೃದ್ಧಿ ಆಗುವುದು.
\q
\v 38 ದ್ರೋಹಿಗಳೆಲ್ಲರೂ ನಾಶವಾಗುವರು;
\q ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
\s5
\q
\v 39 ನೀತಿವಂತರ ರಕ್ಷಣೆ ಯೆಹೋವನಿಂದಲೇ;
\q ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
\q
\v 40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು;
\q ಅವರು ಆತನ ಆಶ್ರಿತರಾದುದರಿಂದ,
\q ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.
\s5
\c 38
\ms ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು
\d ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
\r (ಕೀರ್ತ. 6; ಪ್ರಲಾ. 3; ಯಾಜ. 2:2; 6:15; 24:7,8)
\b
\q
\v 1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
\q ರೋಷದಿಂದ ನನ್ನನ್ನು ದಂಡಿಸಬೇಡ.
\q
\v 2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ;
\q ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
\s5
\q
\v 3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ;
\q ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
\q
\v 4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ;
\q ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.
\s5
\q
\v 5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು,
\q ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
\q
\v 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ;
\q ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
\s5
\q
\v 7 ನನ್ನ ಸೊಂಟಕ್ಕೆ ಉರಿಬಡಿದಂತಿದೆ;
\q ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
\q
\v 8 ನನಗೆ ಜೋಮುಹಿಡಿದಂತಿದೆ;
\q ಬಹಳ ಮನಗುಂದಿದವನಾದೆನು.
\q ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
\s5
\q
\v 9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
\q ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
\q
\v 10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ;
\q ನನ್ನ ಚೈತನ್ಯವು ಕುಗ್ಗಿಹೋಯಿತು;
\q ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
\s5
\q
\v 11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು,
\q ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ;
\q ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
\q
\v 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ;
\q ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು,
\q ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
\s5
\q
\v 13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ;
\q ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
\q
\v 14 ನಾನು ಕಿವಿ ಕೇಳಿಸದವನಂತೆಯೂ,
\q ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
\s5
\q
\v 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
\q ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
\q
\v 16 <<ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು;
\q ನಾನು ಜಾರಿಬಿದ್ದರೆ ಹಿಗ್ಗಬಾರದು>> ಅಂದುಕೊಂಡೆನು.
\s5
\q
\v 17 ನನಗೆ ಆಪತ್ತೇ ಸಿದ್ಧವಾಗಿದೆ;
\q ಯಾವಾಗಲೂ ನನಗೆ ಸಂಕಟವಿದೆ.
\q
\v 18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ;
\q ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
\s5
\q
\v 19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ;
\q ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.
\q
\v 20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ,
\q ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
\s5
\q
\v 21 ಯೆಹೋವನೇ, ಕೈ ಬಿಡಬೇಡ;
\q ನನ್ನ ದೇವರೇ, ದೂರವಾಗಿರಬೇಡ.
\q
\v 22 ನನ್ನ ಕರ್ತನೇ, ನನ್ನ ರಕ್ಷಕನೇ,
\q ಬೇಗ ಬಂದು ಸಹಾಯಮಾಡು.
\s5
\c 39
\ms ಮನುಷ್ಯನ ಅಸ್ಥಿರತೆಯನ್ನು ದೇವರ ಮುಂದೆ ಅರಿಕೆಮಾಡುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ.
\b
\q
\v 1 <<ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
\q ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು>> ಅಂದುಕೊಂಡೆನು.
\s5
\q
\v 2 ನಾನು ಮೌನವಾಗಿದ್ದೆನು;
\q ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು;
\q ಆದರೆ ನನ್ನ ಸಂಕಟವು ಹೆಚ್ಚಿತು.
\q
\v 3 ನನ್ನ ಹೃದಯವು ಆತಂಕದಿಂದ ಕೂಡಿತ್ತು;
\q ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು.
\q ಆಗ ನಾನು ಬಾಯಿ ಬಿಟ್ಟು,
\s5
\q
\v 4 <<ಯೆಹೋವನೇ, ನನಗೆ ಅವಸಾನವುಂಟೆಂದೂ,
\q ನನ್ನ ಜೀವಮಾನವು ಅತ್ಯಲ್ಪವೆಂದೂ,
\q ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
\q
\v 5 ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;
\q ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ>> ಅಂದೆನು.
\q ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ.
\qs ಸೆಲಾ
\qs*
\s5
\q
\v 6 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು;
\q ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು;
\q ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ,
\q ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
\q
\v 7 <<ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ?
\q ನೀನೇ ನನ್ನ ನಿರೀಕ್ಷೆ.
\s5
\q
\v 8 ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು;
\q ಮೂರ್ಖರ ನಿಂದೆಗೆ ಗುರಿಮಾಡಬೇಡ.
\q
\v 9 ನೀನೇ ಇದನ್ನು ಬರಮಾಡಿದ್ದರಿಂದ
\q ನಾನು ಏನೂ ಹೇಳದೆ ಮೌನವಾಗಿರುವೆನು.
\s5
\q
\v 10 ನಿನ್ನ ದಂಡನೆಯನ್ನು ತೊಲಗಿಸು;
\q ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
\q
\v 11 ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,
\q ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ.
\q ಮನುಷ್ಯನೆಂಬವನು ಬರಿ ಉಸಿರೇ.
\qs ಸೆಲಾ
\qs*
\s5
\q
\v 12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
\q ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ.
\q ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ,
\q ಪರದೇಶದವನೂ ಆಗಿದ್ದೇನಲ್ಲಾ.
\q
\v 13 ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,
\q ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು
\q ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.>>
\s5
\c 40
\ms ರಕ್ಷಣೆಗಾಗಿ ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
\q ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
\q
\v 2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
\q ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ,
\q ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
\s5
\q
\v 3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
\q ಅದು ನಮ್ಮ ದೇವರ ಸ್ತೋತ್ರವೇ.
\q ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು
\q ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
\q
\v 4 ಯಾರು
\f +
\fr 40:4
\ft ಅಥವಾ ವಿಗ್ರಹಗಳ.
\f* ಅಹಂಕಾರಿಗಳ ಜೊತೆಯಲ್ಲಿಯೂ,
\q ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
\q ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
\s5
\q
\v 5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?
\q ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ,
\q ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ;
\q ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ;
\q ಅವು ಅಸಂಖ್ಯಾತವಾಗಿವೆ.
\q
\v 6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;
\q ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ.
\q ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
\s5
\q
\v 7 ಆಗ ನಾನು, <<ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
\q
\v 8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;
\q ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ>> ಅಂದೆನು.
\q
\v 9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,
\q ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು;
\q ಯೆಹೋವನೇ, ನೀನೇ ಬಲ್ಲೆ.
\s5
\q
\v 10 ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;
\q ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು;
\q ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
\q
\v 11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;
\q ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
\s5
\q
\v 12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;
\q ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ,
\q ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ,
\q ನಾನು ಎದೆಗುಂದಿ ಹೋದೆನು.
\q
\v 13 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು;
\q ಯೆಹೋವನೇ, ಬೇಗನೆ ಬಂದು ಸಹಾಯಮಾಡು.
\s5
\q
\v 14 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,
\q ಆಶಾಭಂಗಪಟ್ಟು ಅವಮಾನಹೊಂದಲಿ;
\q ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
\q
\v 15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು,
\q ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
\s5
\q
\v 16 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
\q ನಿನ್ನ ಜಯದಲ್ಲಿ ಆನಂದಿಸುವವರು, <<ಯೆಹೋವನು ಮಹೋನ್ನತನು>> ಎಂದು ಯಾವಾಗಲೂ ಹೇಳುವವರಾಗಲಿ.
\q
\v 17 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;
\q ಕರ್ತನೇ ನನ್ನ ಹಿತಚಿಂತಕನು.
\q ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ;
\q ತಡಮಾಡಬೇಡ.
\s5
\c 41
\ms ರೋಗ ಮತ್ತು ಶತ್ರುಬಾಧಿತನ ಮೊರೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;
\q ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
\q
\v 2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;
\q ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು;
\q ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
\q
\v 3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ,
\q ಯೆಹೋವನು ಅವನನ್ನು ಉದ್ಧರಿಸುವನು;
\q ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
\s5
\q
\v 4 ನಾನಂತೂ, <<ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ;
\q ನನ್ನನ್ನು ಕರುಣಿಸಿ ಸ್ವಸ್ಥಮಾಡು>> ಅಂದೆನು.
\q
\v 5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, <<ಅವನು ಯಾವಾಗ ಸತ್ತಾನು?
\q ಅವನ ಹೆಸರು ಯಾವಾಗ ಇಲ್ಲದೆ ಹೋದೀತು?>> ಎಂದು ಹೇಳಿಕೊಳ್ಳುತ್ತಾರೆ.
\q
\v 6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು;
\q ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
\s5
\q
\v 7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ;
\q
\f +
\fr 41:7
\ft ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ.
\f* ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
\q
\v 8 <<ಅವನನ್ನು ಅಸಾಧ್ಯರೋಗ ಹಿಡಿದಿದೆ;
\q ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ.
\q
\v 9 ನಾನು ಯಾರನ್ನು ನಂಬಿದ್ದೆನೋ,
\q ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ,
\q ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
\s5
\q
\v 10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು;
\q ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
\q
\v 11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ
\q ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
\q
\v 12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ,
\q ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
\s5
\q
\v 13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
\s5
\c 42
\ms ದ್ವಿತೀಯ ಭಾಗವು 42 - 72
\d ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
\b
\q
\v 1 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ,
\q ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
\q
\v 2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ;
\q ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
\s5
\q
\v 3 <<ನಿನ್ನ ದೇವರು ಎಲ್ಲಿ?>> ಎಂದು ಜನರು
\q ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ,
\q ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
\q
\v 4 ನಾನು ಭಜನೋತ್ಸವದಲ್ಲಿ ಸೇರಿ,
\q ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ,
\q ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು,
\q ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
\s5
\q
\v 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
\q ಹೀಗೆ ವ್ಯಥೆಪಡುವುದೇಕೆ?
\q ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ.
\q ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
\q
\v 6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ;
\q ಆದುದರಿಂದ ಯೊರ್ದನ್ ಹೊಳೆಯ ದೇಶ,
\q ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
\s5
\q
\v 7 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು
\q ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು.
\q ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು
\q ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
\q
\v 8 ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು;
\q ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು.
\q ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
\s5
\q
\v 9 ನಾನು ನನ್ನ ಶರಣನಿಗೆ, <<ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ?
\q ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?>> ಎಂದು ಮೊರೆಯಿಡುವೆನು.
\q
\v 10 ನನ್ನ ವಿರೋಧಿಗಳು, <<ನಿನ್ನ ದೇವರು ಎಲ್ಲಿ?>> ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ
\q ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
\s5
\q
\v 11 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
\q ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು;
\q ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
\q ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
\s5
\c 43
\q
\v 1 ದೇವರೇ, ನ್ಯಾಯವನ್ನು ತೀರಿಸು;
\q ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು,
\q ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
\q
\v 2 ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ;
\q ಏಕೆ ನನ್ನನ್ನು ತಳ್ಳಿಬಿಟ್ಟೆ?
\q ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
\s5
\q
\v 3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು;
\q ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
\q
\v 4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ,
\q ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ,
\q ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
\s5
\q
\v 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ?
\q ದೇವರನ್ನು ನಿರೀಕ್ಷಿಸು;
\q ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
\q ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
\s5
\c 44
\ms ನಿರಂತರ ರಕ್ಷಣೆಗಾಗಿ ಪ್ರಾರ್ಥನೆ
\d 1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
\r (ಕೀರ್ತ. 79)
\b
\q
\v 1 ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ,
\q ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ;
\q ಅವರೇ ನಮಗೆ ತಿಳಿಸಿದರು.
\q
\v 2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ,
\q ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ;
\q ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
\s5
\q
\v 3 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;
\q ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು;
\q ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
\q
\v 4
\f +
\fr 44:4
\ft ಅಥವಾ ನೀನೇ ನನ್ನ ಅರಸನು, ಓ ದೇವರೇ, ಯಾಕೋಬನಿಗೆ ಜಯವನ್ನು ಆಜ್ಞಾಪಿಸು.
\f* ದೇವರೇ, ನೀನೇ ನನ್ನ ಅರಸನು;
\q ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
\s5
\q
\v 5 ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು;
\q ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
\q
\v 6 ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ;
\q ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
\s5
\q
\v 7 ಹಿಂಸಕರಿಂದ ಬಿಡಿಸಿದವನು ನೀನೇ;
\q ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
\q
\v 8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ;
\q ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
\s5
\q
\v 9 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ;
\q ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
\q
\v 10 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ;
\q ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
\q
\v 11 ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ;
\q ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
\s5
\q
\v 12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ,
\q ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
\q
\v 13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ;
\q ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
\q
\v 14 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ;
\q ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
\s5
\q
\v 15 ದೂಷಕರ ನಿಂದಾವಚನಗಳಿಂದಲೂ,
\q ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
\q
\v 16 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ;
\q ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
\q
\v 17 ನಾವು ನಿನ್ನನ್ನು ಮರೆಯದೆಯೂ,
\q ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ;
\q ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
\s5
\q
\v 18 ನಮ್ಮ ಹೃದಯವು ಹಿಂದಿರುಗಲಿಲ್ಲ;
\q ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
\q
\v 19 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ?
\q ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
\q
\v 20 ನಾವು ನಮ್ಮ ದೇವರ ಹೆಸರನ್ನು ಮರೆತು,
\q ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
\q
\v 21 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು,
\q ವಿಚಾರಿಸುತ್ತಿರಲಿಲ್ಲವೋ?
\q
\v 22 ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ;
\q ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
\s5
\q
\v 23 ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು;
\q ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
\q
\v 24 ಏಕೆ ವಿಮುಖನಾಗಿದ್ದಿ?
\q ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
\s5
\q
\v 25 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ;
\q ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
\q
\v 26 ಎದ್ದು ಬಂದು ಸಹಾಯಮಾಡು;
\q ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.
\s5
\c 45
\ms ರಾಜನ ವಿವಾಹದ ವರ್ಣನೆ
\d 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ.
\r (ಯೆಶಾ. 61:10—62:5)
\b
\q
\v 1 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ;
\q ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು.
\q ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
\q
\v 2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು;
\q ನಿನ್ನ ಮಾತುಗಳು ಬಹು ಮಧುರ;
\q ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
\s5
\q
\v 3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು,
\q ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
\q
\v 4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ
\q ಸಕಲ ವೈಭವದೊಡನೆ ವಾಹನರೂಢನಾಗಿ,
\q ವಿಜಯೋತ್ಸವದೊಡನೆ ಹೊರಡು.
\q ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
\s5
\q
\v 5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು;
\q ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು;
\q ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
\q
\v 6
\f +
\fr 45:6
\ft ಅಥವಾ ದೇವರೇ, ನಿನ್ನ ಸಿಂಹಾಸನವು.
\f* ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;
\q ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
\q
\v 7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ;
\q ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ,
\q ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
\s5
\q
\v 8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ
\q ಎಷ್ಟೋ ಸುವಾಸನೆಯುಳ್ಳವುಗಳಾಗಿವೆ;
\q ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
\q
\v 9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ;
\q ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ,
\q ನಿನ್ನ ಬಲಭಾಗದಲ್ಲಿ ನಿಂತಿರುವಳು.
\s5
\q
\v 10 ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು;
\q ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
\q
\v 11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು.
\q ಆತನೇ ನಿನಗೆ ಒಡೆಯನು;
\q ಆತನನ್ನು ಗೌರವಿಸು.
\s5
\q
\v 12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು;
\q ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
\q
\v 13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ;
\q ಆಕೆಯು ಜರತಾರಿಯ [ಚಿನ್ನದಿಂದ ನೇಯ್ದ] ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
\s5
\q
\v 14 ಆಕೆಯು ಬೂಟೇದಾರಿ [ಕಸೂತಿ ಕೆಲಸದ] ವಸ್ತ್ರಗಳನ್ನು ಧರಿಸಿಕೊಂಡು,
\q ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ,
\q ಅರಸನ ಬಳಿಗೆ ಬರುವರು.
\q
\v 15 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು,
\q ಅರಮನೆಯೊಳಗೆ ಪ್ರವೇಶಿಸುವರು.
\s5
\q
\v 16 ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು;
\q ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
\q
\v 17 ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು;
\q ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.
\s5
\c 46
\ms ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
\d 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
\r (ಕೀರ್ತ. 76; 1 ಪೂರ್ವ. 15:20)
\b
\q
\v 1 ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
\q ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
\q
\v 2 ಆದುದರಿಂದ ಭೂಮಿಯು ಮಾರ್ಪಟ್ಟರೂ,
\q ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,
\q ನಮಗೇನೂ ಭಯವಿಲ್ಲ.
\q
\v 3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?
\q ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ?
\qs ಸೆಲಾ
\qs*
\s5
\q
\v 4 ಒಂದು ನದಿ ಇದೆ; ಅದರ ಕಾಲುವೆಗಳು,
\q ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ,
\q ದೇವರ ನಗರವನ್ನು ಸಂತೋಷಪಡಿಸುತ್ತವೆ.
\q
\v 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ.
\q ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
\s5
\q
\v 6 ಜನಾಂಗಗಳು ಕಳವಳಗೊಂಡವು;
\q ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
\q
\v 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;
\q ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ.
\qs ಸೆಲಾ
\qs*
\s5
\q
\v 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ;
\q ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
\q
\v 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ;
\q ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ;
\q
\f +
\fr 46:9
\ft ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು.
\f* ರಥಗಳನ್ನು ದಹಿಸಿಬಿಟ್ಟಿದ್ದಾನೆ.
\s5
\q
\v 10 <<
\f +
\fr 46:10
\ft ಅಥವಾ ಮೌನವಾಗಿರಿ.
\f* ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;
\q ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ>> ಎಂದು ಹೇಳಿದ್ದಾನೆ.
\q
\v 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;
\q ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ.
\qs ಸೆಲಾ.
\qs*
\s5
\c 47
\ms ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು
\d ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
\r (ಕೀರ್ತ. 93; 95—100)
\b
\q
\v 1 ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;
\q ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
\q
\v 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;
\q ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
\s5
\q
\v 3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,
\q ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
\q
\v 4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,
\q ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ.
\qs ಸೆಲಾ
\qs*
\q
\v 5 ದೇವರು ಜಯಘೋಷದಿಂದ ಏರಿದ್ದಾನೆ;
\q ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
\s5
\q
\v 6 ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;
\q ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
\q
\v 7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;
\q ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
\s5
\q
\v 8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;
\q ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
\q
\v 9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ
\q ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ;
\q ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ.
\q ಆತನೇ ಸರ್ವೋನ್ನತನು.
\s5
\c 48
\ms ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು
\d ಹಾಡು; ಕೋರಹೀಯರ ಕೀರ್ತನೆ.
\r (ಕೀರ್ತ. 46)
\b
\q
\v 1 ಯೆಹೋವನು ಮಹೋನ್ನತನು;
\q ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
\q
\v 2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು
\q ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ,
\q ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
\q
\v 3 ದೇವರು ಅದರ ಕೊತ್ತಲುಗಳಲ್ಲಿ,
\q ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
\s5
\q
\v 4 ರಾಜರು ಕೂಡಿಕೊಂಡರು;
\q ಅವರು ಒಗ್ಗಟ್ಟಾಗಿ ಬಂದರು.
\q
\v 5 ನೋಡಿ ಬೆರಗಾದರು;
\q ತಲ್ಲಣಿಸಿ ಓಡಿಹೋದರು.
\q
\v 6 ಕಂಪನವೂ ಹೆರುವವಳಂತೆ,
\q ವೇದನೆಯೂ ಅವರಿಗೆ ಉಂಟಾಯಿತು.
\s5
\q
\v 7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ
\q ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
\q
\v 8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು;
\q ನಮ್ಮ ದೇವರೂ ಸೇನಾಧೀಶನೂ ಆಗಿರುವ
\q ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.
\q ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು.
\qs ಸೆಲಾ
\qs*
\s5
\q
\v 9 ದೇವರೇ, ನಾವು ನಿನ್ನ ಆಲಯದಲ್ಲಿ,
\q ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
\q
\v 10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,
\q ಲೋಕವೆಲ್ಲಾ ನಿನ್ನನ್ನು ಹೊಗಳುವುದು.
\q ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
\s5
\q
\v 11 ಚೀಯೋನ್ ಪಟ್ಟಣದವರು
\f +
\fr 48:11
\fq ಚೀಯೋನ್ ಪಟ್ಟಣದವರು
\ft ಮೂಲತಃ ಚೀಯೋನ್ ಪುತ್ರಿಯರು.
\f* ಹರ್ಷಿಸಲಿ;
\q ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ,
\q ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
\s5
\q
\v 12 ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ,
\q ಅದರ ಬುರುಜುಗಳನ್ನು ಲೆಕ್ಕಿಸಿರಿ.
\q
\v 13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ;
\q ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
\s5
\q
\v 14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,
\q ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು,
\q ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
\s5
\c 49
\ms ಐಶ್ವರ್ಯ ವ್ಯರ್ಥ; ಮರಣ ನಿಶ್ಚಯ; ಸದ್ಭಕ್ತರಿಗೆ ನಿರೀಕ್ಷೆಯುಂಟು
\d ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
\r (ಕೀರ್ತ. 73)
\b
\q
\v 1 ಸಕಲ ದೇಶಗಳ ಜನರೇ, ಕೇಳಿರಿ;
\q ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
\q
\v 2 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ,
\q ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
\s5
\q
\v 3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು;
\q ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
\q
\v 4 ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ,
\q ಅದರ ಗೂಡಾರ್ಥವನ್ನು ಪ್ರಕಟಿಸುವೆನು.
\q
\v 5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು?
\q ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
\s5
\q
\v 6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ;
\q ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
\q
\v 7 ಆದರೆ ಯಾರಾದರೂ ತನ್ನ ಸಹೋದರನು
\f +
\fr 49:7
\fq ತನ್ನ ಸಹೋದರನು
\ft ಅಥವಾ ತನ್ನನ್ನು ತಾನು.
\f* ಸಮಾಧಿಯಲ್ಲಿ ಸೇರದಂತೆ,
\q ದೇವರಿಗೆ ಈಡನ್ನು ಕೊಡಲಾರನು.
\q
\v 8 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು,
\q ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
\s5
\q
\v 9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ,
\q ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
\q
\v 10 ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ;
\q ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ.
\q ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
\s5
\q
\v 11 ಅವರ ಸಮಾಧಿಯೇ
\f +
\fr 49:11
\fq ಸಮಾಧಿಯೇ
\ft ಅಂದರೆ ಅವರ ಅಂತರಾಲೋಚನೆಗಳು.
\f* ಶಾಶ್ವತಮಂದಿರವು;
\q ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ,
\q ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
\s5
\q
\v 12 ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ;
\q ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
\q
\v 13 ಮೂರ್ಖರಿಗೂ ಅವರ ಮಾತಿನಂತೆ
\q ನಡೆಯುವವರಿಗೂ ಇದೇ ಗತಿ.
\qs ಸೆಲಾ
\qs*
\s5
\q
\v 14 ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು;
\q ಮೃತ್ಯುವೇ ಅವರ ಪಾಲಕನು.
\q
\f +
\fr 49:14
\ft ಅಥವಾ ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡೆಸುವರು.
\f* ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು,
\q ಅವರಿಗೆ ನಿವಾಸವಿಲ್ಲದ ಹಾಗೆ,
\q ಪಾತಾಳವು ಅವರ ರೂಪವನ್ನು ನಾಶಮಾಡುವುದು.
\q
\v 15 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ,
\q ನನ್ನನ್ನು ಸ್ವೀಕಾರಮಾಡುವನು.
\qs ಸೆಲಾ
\qs*
\s5
\q
\v 16 ಒಬ್ಬನ ಐಶ್ವರ್ಯವೂ, ಗೃಹವೈಭವವೂ
\f +
\fr 49:16
\fq ಗೃಹವೈಭವವೂ
\ft ಅಥವಾ ಗೃಹಸಂಪತ್ತು.
\f*
\q ವೃದ್ಧಿಯಾದಾಗ ಕಳವಳಪಡಬೇಡ.
\q
\v 17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ;
\q ಅವನ ವೈಭವವು ಅವನೊಡನೆ ಹೋಗುವುದಿಲ್ಲ.
\s5
\q
\v 18 ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ,
\q ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ,
\q ಜನರಸ್ತುತಿಯಿಂದಲೂ ಕೂಡಿದವನಾದರೂ,
\q
\v 19 ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ,
\q ಎಂದಿಗೂ ಬೆಳಕನ್ನು ನೋಡುವುದಿಲ್ಲ.
\b
\q
\v 20 ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ,
\q ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.
\s5
\c 50
\ms ದೇವರು ಸದಾಚಾರವನ್ನೇ ಮೆಚ್ಚುವನು
\d ಆಸಾಫನ ಕೀರ್ತನೆ.
\b
\q
\v 1 ಬಲಿಷ್ಠ ದೇವರಾದ ಯೆಹೋವನು
\q ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ,
\q ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
\q
\v 2 ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ,
\q ದೇವರು ಪ್ರಕಾಶಿಸುತ್ತಾನೆ.
\s5
\q
\v 3 ನಮ್ಮ ದೇವರು ಪ್ರತ್ಯಕ್ಷನಾಗುವನು,
\q ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ;
\q ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ;
\q ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
\q
\v 4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು
\q ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
\q
\v 5 <<ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು
\q ನನ್ನ ಬಳಿಗೆ ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸುತ್ತಾನೆ.
\s5
\q
\v 6 ದೇವರು ತಾನೇ ನ್ಯಾಯಾಧಿಪತಿ;
\q ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ.
\qs ಸೆಲಾ
\qs*
\s5
\q
\v 7 ಆತನು ಆಜ್ಞಾಪಿಸುವುದು ಏನೆಂದರೆ, <<ಪ್ರಜೆಗಳಿರಾ, ಇಸ್ರಾಯೇಲ್ಯರೇ,
\q ದೇವರಾದ ನಾನೇ ನಿಮ್ಮ ದೇವರು;
\q ನಿಮಗೆ ಖಂಡಿತವಾಗಿ ಹೇಳುತ್ತೇನೆ>> ಕೇಳಿರಿ.
\q
\v 8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ;
\q ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
\s5
\q
\v 9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ;
\q ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
\q
\v 10 ಕಾಡಿನಲ್ಲಿರುವ ಸರ್ವಮೃಗಗಳೂ,
\q ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
\q
\v 11
\f +
\fr 50:11
\ft ಅಥವಾ ಆಕಾಶದ.
\f* ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ;
\q ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
\s5
\q
\v 12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ;
\q ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
\q
\v 13 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ,
\q ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
\s5
\q
\v 14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;
\q ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
\q
\v 15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು;
\q ಆಗ ನನ್ನನ್ನು ಕೊಂಡಾಡುವಿರಿ.
\s5
\q
\v 16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ,
\q <<ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು?
\q ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
\q
\v 17 ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ;
\q ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
\s5
\q
\v 18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;
\q ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
\q
\v 19 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ;
\q ನಾಲಿಗೆಯು ಮೋಸವನ್ನು ನೇಯುತ್ತದೆ.
\q
\v 20 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ;
\q ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
\s5
\q
\v 21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು.
\q ಆದುದರಿಂದ, <ದೇವರೂ ನಮ್ಮಂಥವನೇ> ಎಂದು ತಿಳಿದುಕೊಂಡಿರಿ.
\q ಈಗಲಾದರೋ ನಾನು ಎಲ್ಲವನ್ನು,
\q ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
\q
\v 22 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;
\q ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು.
\q ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
\s5
\q
\v 23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;
\q ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.>>
\s5
\c 51
\ms ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ.
\b
\p
\v 1 ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;
\q ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
\q
\v 2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
\q ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
\s5
\q
\v 3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ;
\q ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
\q
\v 4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
\q ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
\q ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
\s5
\q
\v 5 ಹುಟ್ಟಿದಂದಿನಿಂದ ನಾನು ಪಾಪಿಯೇ;
\q ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
\q
\v 6 ಯಥಾರ್ಥಚಿತ್ತವೇ ನಿನಗೆ ಸಂತೋಷ;
\q ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
\s5
\q
\v 7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ
\q ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು;
\q ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
\q
\v 8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
\q ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
\q
\v 9 ನನ್ನ ದೋಷಕ್ಕೆ ವಿಮುಖನಾಗು;
\q ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
\s5
\q
\v 10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
\q ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
\q
\v 11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
\q ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
\s5
\q
\v 12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
\q ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
\q
\v 13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು;
\q ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
\s5
\q
\v 14 ದೇವರೇ, ನನ್ನ ರಕ್ಷಣಾ ಕರ್ತನೇ,
\q ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು;
\q ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
\q
\v 15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ
\q ನನ್ನ ತುಟಿಗಳನ್ನು ತೆರೆಯಮಾಡು.
\q
\v 16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು;
\q ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
\s5
\q
\v 17
\f +
\fr 51:17
\ft ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ.
\f* ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
\q ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
\q
\v 18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು;
\q ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
\q
\v 19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ,
\q ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು.
\q ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
\s5
\c 52
\s ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
\b
\q
\v 1
\f +
\fr 52:1
\ft ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು?
\f* ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?
\q ದೇವರ ಕೃಪೆಯು ಯಾವಾಗಲೂ ಇರುವುದು.
\q
\v 2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ
\q ಅಪಾಯಗಳನ್ನೇ ಕಲ್ಪಿಸುತ್ತದೆ.
\s5
\q
\v 3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;
\q ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ.
\qs ಸೆಲಾ
\qs*
\s5
\q
\v 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
\q
\v 5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;
\q ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
\q ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
\s5
\q
\v 6 ನೀತಿವಂತರು ಅದನ್ನು ನೋಡಿ ಭಯಪಡುವರು;
\q ಅವರು ಪರಿಹಾಸ್ಯಮಾಡುತ್ತಾ,
\q
\v 7 <<ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,
\q
\f +
\fr 52:7
\ft ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು.
\f* ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ>> ಎಂದು ಹೇಳುವರು.
\s5
\q
\v 8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;
\q ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
\q
\v 9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;
\q ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
\s5
\c 53
\ms ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ.
\b
\q
\v 1 ದುರ್ಮತಿಗಳು, <<ದೇವರಿಲ್ಲ>> ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;
\q ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ;
\q ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
\q
\v 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು
\q ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
\q
\v 3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;
\q ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
\s5
\q
\v 4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ?
\q
\f +
\fr 53:4
\ft ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ;
\f* ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ;
\q ದೇವರನ್ನು ಪ್ರಾರ್ಥಿಸುವುದಿಲ್ಲ.
\q
\v 5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,
\q ಅವರು ಪಕ್ಕನೆ ಭಯಭ್ರಾಂತರಾದರು;
\q
\f +
\fr 53:5
\ft ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು.
\f* ದುಷ್ಟರನ್ನು ದೇವರು ಸಂಹರಿಸಿ
\q ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ.
\q
\f +
\fr 53:5
\ft ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ.
\f* ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
\s5
\q
\v 6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.
\q ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ,
\q ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು;
\q ಇಸ್ರಾಯೇಲರು ಹರ್ಷಿಸುವರು.
\s5
\c 54
\ms ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
\b
\q
\v 1 ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;
\q ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
\q
\v 2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
\q ನನ್ನ ಮಾತುಗಳಿಗೆ ಕಿವಿಗೊಡು.
\q
\v 3
\f +
\fr 54:3
\ft ಅಥವಾ ಅನ್ಯರು.
\f* ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;
\q ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.
\q ಅವರು ದೇವರನ್ನು ಲಕ್ಷಿಸುವುದೇ ಇಲ್ಲ.
\qs ಸೆಲಾ
\qs*
\s5
\q
\v 4 ಇಗೋ, ದೇವರೇ ನನಗೆ ಸಹಾಯಕನು;
\q
\f +
\fr 54:4
\ft ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.
\f* ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
\q
\v 5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.
\q ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
\s5
\q
\v 6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;
\q ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
\q
\v 7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,
\q ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
\s5
\c 55
\ms ದ್ರೋಹಿಗಳ ನಿರ್ಮೂಲಕ್ಕಾಗಿ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ.
\b
\q
\v 1 ದೇವರೇ, ನನ್ನ ಮೊರೆಯನ್ನು ಲಾಲಿಸು;
\q ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
\q
\v 2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
\q
\v 3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ,
\q ಹೊಯ್ದಾಡುತ್ತಾ ನರಳುತ್ತಿದ್ದೇನೆ.
\q ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ,
\q ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
\s5
\q
\v 4 ನನ್ನ ಹೃದಯವು ನೊಂದು ಬೆಂದುಹೋಗಿದೆ;
\q ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
\q
\v 5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
\s5
\q
\v 6 ನಾನು, <<ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
\q
\v 7 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
\s5
\q
\v 8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು>> ಅಂದುಕೊಂಡೆನು.
\qs ಸೆಲಾ
\qs*
\q
\v 9 ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು.
\q ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
\s5
\q
\v 10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು;
\q ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
\q
\v 11 ಅದರೊಳಗೆಲ್ಲಾ ನಾಶನವೇ;
\q ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
\s5
\q
\v 12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು;
\q ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
\q
\v 13 ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
\q
\v 14 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ
\q ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
\s5
\q
\v 15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ.
\q ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
\s5
\q
\v 16 ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು;
\q ಆತನು ನನ್ನನ್ನು ರಕ್ಷಿಸುವನು.
\q
\v 17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು.
\q ಆತನು ಹೇಗೂ ನನ್ನ ಮೊರೆಯನ್ನು ಕೇಳಿ
\q
\v 18 ನನ್ನ ವಿರೋಧಿಗಳು ಅನೇಕರಿದ್ದರೂ
\q ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
\s5
\q
\v 19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು
\q ಅವರನ್ನು ತಗ್ಗಿಸಿಬಿಡುವನು.
\qs ಸೆಲಾ
\qs*
\q ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
\s5
\q
\v 20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ
\q ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
\q
\v 21 ಅವನ ಮಾತು ಬೆಣ್ಣೆಯಂತೆ ನುಣುಪು;
\q ಹೃದಯವೋ ಕಲಹಮಯ.
\q ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
\s5
\q
\v 22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
\q ಆತನು ನಿನ್ನನ್ನು ಉದ್ಧಾರಮಾಡುವನು.
\q ನೀತಿವಂತನನ್ನು ಎಂದಿಗೂ ಕದಲಗೊಡಿಸನು.
\q
\v 23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ.
\q ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ.
\q ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
\s5
\c 56
\ms ಶತ್ರುಪೀಡಿತರಾದ ಭಕ್ತರ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ.
\b
\q
\v 1 ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ.
\q ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
\q
\v 2 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;
\q ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
\s5
\q
\v 3 ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
\q
\v 4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;
\q ದೇವರನ್ನು ನಂಬಿ ನಿರ್ಭಯದಿಂದಿರುವೆನು.
\q ನರಪ್ರಾಣಿಗಳು ನನಗೆ ಏನು ಮಾಡಾರು?
\s5
\q
\v 5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ;
\q ಅವರು ಬಗೆಯುವುದೆಲ್ಲ ನನಗೆ ಕೇಡೇ.
\q
\v 6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ,
\q ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
\s5
\q
\v 7 ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ?
\q ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
\q
\v 8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.
\q ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ;
\q ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
\s5
\q
\v 9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು;
\q
\f +
\fr 56:9
\ft ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ.
\f* ದೇವರು ನನ್ನ ಸಂಗಡ ಇರುವುದು ನಿಶ್ಚಯ.
\q
\v 10 ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
\q ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
\q
\v 11 ದೇವರನ್ನು ನಂಬಿ ನಿರ್ಭಯದಿಂದಿರುವೆನು;
\q ನರಪ್ರಾಣಿಗಳು ನನಗೆ ಏನು ಮಾಡಾರು?
\s5
\q
\v 12 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು;
\q ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
\q
\v 13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು
\q ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ,
\q ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
\s5
\c 57
\ms ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ.
\b
\q
\v 1 ದೇವರೇ, ಕರುಣಿಸು, ನನ್ನನ್ನು ಕರುಣಿಸು.
\q ನೀನೇ ನನ್ನ ಆಶ್ರಯಸ್ಥಾನವಲ್ಲವೇ!
\q ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
\s5
\q
\v 2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು,
\q ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
\q
\v 3 ಆತನು ಪರಲೋಕದಿಂದ ಆಲಿಸಿ,
\q ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು;
\qs ಸೆಲಾ
\qs*
\q ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
\s5
\q
\v 4 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ;
\q ದುರಾಶೆಯಿಂದ ಕಬಳಿಸುವಂತಹ
\f +
\fr 57:4
\fq ದುರಾಶೆಯಿಂದ ಕಬಳಿಸುವಂತಹ
\ft ಅಥವಾ ಬೆಂಕಿಕಾರುವ.
\f* ಮನುಷ್ಯರ ನಡುವೆ ಬಿದ್ದಿದ್ದೇನೆ.
\q ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ,
\q ನಾಲಿಗೆಗಳು ಹದವಾದ ಕತ್ತಿಗಳೇ.
\q
\v 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
\q ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
\s5
\q
\v 6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ;
\q ನನ್ನ ಪ್ರಾಣವು ಕುಂದಿಹೋಯಿತು.
\q ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು;
\q ತಾವೇ ಅದರಲ್ಲಿ ಬಿದ್ದುಹೋದರು.
\qs ಸೆಲಾ
\qs*
\s5
\q
\v 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ.
\q ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
\q
\v 8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ.
\q ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
\s5
\q
\v 9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;
\q ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
\q
\v 10 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ,
\q ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
\q
\v 11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
\q ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
\s5
\c 58
\ms ಅನ್ಯಾಯಾಧಿಕಾರಿಗಳಿಗೆ ಪ್ರತಿದಂಡನೆಯಾಗಬೇಕೆಂದು ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ.
\b
\q
\v 1 ಅಧಿಕಾರಿಗಳೇ
\f +
\fr 58:1
\fq ಅಧಿಕಾರಿಗಳೇ
\ft ಅಥವಾ ದೇವರುಗಳೇ ಅಥವಾ ಮೂಕರು.
\f* , ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ?
\q ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
\q
\v 2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ;
\q ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
\s5
\q
\v 3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು;
\q ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
\q
\v 4 ಅವರು ಸರ್ಪದಂತೆ ವಿಷಭರಿತರು.
\q
\v 5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ
\q ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
\s5
\q
\v 6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು;
\q ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
\q
\v 7 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ;
\q ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
\q
\v 8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ;
\q ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
\s5
\q
\v 9 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ
\q ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
\q
\v 10 ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ,
\q ಅವರ ರಕ್ತದಲ್ಲಿ ಕಾಲಾಡಿಸುವರು.
\q
\v 11 ನೀತಿವಂತನಿಗೆ ಫಲವುಂಟೆಂತಲೂ,
\q ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
\s5
\c 59
\ms ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ.
\b
\q
\v 1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು;
\q ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
\q
\v 2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
\s5
\q
\v 3 ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ;
\q ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ.
\q ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
\q
\v 4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ;
\q ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
\s5
\q
\v 5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ,
\q ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು.
\q ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ.
\qs ಸೆಲಾ
\qs*
\s5
\q
\v 6 ಅವರು ಪ್ರತಿಸಾಯಂಕಾಲವೂ ಬಂದು ಬಂದು
\q ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
\q
\v 7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ;
\q ಅವೆಲ್ಲಾ ಹರಿತವಾದ ಕತ್ತಿಗಳಂತಿವೆ,
\q ಅವರು, <<ನಮ್ಮನ್ನು ಕೇಳುವವರು ಯಾರು?>> ಅಂದುಕೊಳ್ಳುತ್ತಾರೆ.
\s5
\q
\v 8 ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ;
\q ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
\q
\v 9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ.
\q ನನ್ನ ಆಶ್ರಯದುರ್ಗವು ದೇವರೇ.
\s5
\q
\v 10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು;
\q ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
\q
\v 11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ.
\q ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ.
\q ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
\s5
\q
\v 12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ.
\q ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
\q
\v 13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ,
\q ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು.
\q
\f +
\fr 59:13
\ft ಅಥವಾ ಇಸ್ರಾಯೇಲ ದೇಶವನ್ನು.
\f* ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು,
\q ಭೂಲೋಕದಲ್ಲೆಲ್ಲಾ ಗೊತ್ತಾಗಲಿ.
\qs ಸೆಲಾ
\qs*
\s5
\q
\v 14 ಅವರು ಪ್ರತಿಸಾಯಂಕಾಲವೂ ಬಂದು ಬಂದು,
\q ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
\q
\v 15 ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ;
\q ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ
\f +
\fr 59:15
\fq ಗುಣುಗುಟ್ಟುತ್ತಾರೆ
\ft ಅಥವಾ ರಾತ್ರಿಯೆಲ್ಲಾ ಗುಣುಗುಟ್ಟುತ್ತಾರೆ.
\f* .
\s5
\q
\v 16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ
\q ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು;
\q ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
\q
\v 17 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
\q ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
\s5
\c 60
\ms ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು.
\b
\q
\v 1 ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;
\q ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;
\q ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
\s5
\q
\v 2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;
\q ಅದು ನಡುಗುತ್ತಿರುವುದಲ್ಲಾ.
\q ಅದರ ಒಡಕುಗಳನ್ನು ಸರಿಮಾಡು;
\q
\v 3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;
\q ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
\s5
\q
\v 4 ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು,
\q ಆದ್ದರಿಂದ ಅವರು ಬಿಲ್ಲಿನಿಂದ
\f +
\fr 60:4
\fq ಬಿಲ್ಲಿನಿಂದ
\ft ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ.
\f* ತಪ್ಪಿಸಿಕೊಳ್ಳಬಹುದು.
\qs ಸೆಲಾ
\qs*
\q
\v 5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು.
\q ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
\s5
\q
\v 6 ದೇವರು ತನ್ನ ಪವಿತ್ರಸ್ಥಳದಲ್ಲಿ
\f +
\fr 60:6
\fq ಪವಿತ್ರಸ್ಥಳದಲ್ಲಿ
\ft ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ.
\f* ನುಡಿದಿದ್ದಾನೆ.
\q ಜಯಘೋಷಮಾಡುವೆನು;
\q ಶೆಖೆಮ್ ಪ್ರದೇಶವನ್ನು ಹಂಚುವೆನು.
\q ಸುಖೋತ್ ಬಯಲನ್ನು ಅಳೆದುಕೊಡುವೆನು.
\q
\v 7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು;
\q ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.
\q ನನ್ನ ರಾಜದಂಡವು ಯೆಹೂದ ಕುಲವೇ.
\s5
\q
\v 8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;
\q ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ.
\q
\f +
\fr 60:8
\ft ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ.
\f* ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
\q
\v 9 ಕೋಟೆಕೊತ್ತಲುಗಳುಳ್ಳ ನಗರಕ್ಕೆ
\q ನನ್ನನ್ನು ಕರೆದುಕೊಂಡು ಹೋಗುವವರು ಯಾರು?
\q ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
\s5
\q
\v 10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!
\q ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
\q
\v 11 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು;
\q ಮನುಷ್ಯರ ಸಹಾಯವು ವ್ಯರ್ಥ.
\q
\v 12 ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;
\q ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
\s5
\c 61
\ms ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
\b
\q
\v 1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
\q
\v 2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ;
\q ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
\q
\v 3 ನೀನು ನನಗೆ ಶರಣನೂ,
\q ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
\s5
\q
\v 4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ;
\q ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು.
\qs ಸೆಲಾ
\qs*
\q
\v 5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ;
\q ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
\s5
\q
\v 6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು;
\q ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
\q
\v 7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು,
\q ಸದಾಕಾಲವೂ ಸಿಂಹಾಸನಾರೂಢನಾಗಿರಲಿ;
\q ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
\s5
\q
\v 8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ,
\q ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
\s5
\c 62
\ms ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ.
\b
\q
\v 1 ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.
\q ನನ್ನ ರಕ್ಷಣೆಯು ಆತನಿಂದಲೇ.
\q
\v 2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
\q ನಾನು ಕದಲಿದರೂ ಬೀಳೆನು.
\s5
\q
\v 3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು,
\q ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ
\q ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
\q
\v 4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ.
\q ಸುಳ್ಳಾಡುವುದು ಅವರಿಗೆ ಅತಿಸಂತೋಷ;
\q ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ.
\qs ಸೆಲಾ
\qs*
\s5
\q
\v 5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
\q ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
\q
\v 6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
\q ನಾನು ಕದಲುವುದಿಲ್ಲ.
\s5
\q
\v 7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ;
\q ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
\q
\v 8 ಜನರೇ, ಯಾವಾಗಲೂ ಆತನನ್ನೇ ನಂಬಿ,
\q ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
\q ದೇವರು ನಮ್ಮ ಆಶ್ರಯವು.
\qs ಸೆಲಾ
\qs*
\s5
\q
\v 9 ನರರು ಬರೀ ಉಸಿರೇ;
\q ನರಾಧಿಪತಿಗಳು ಬರೀ ಮಾಯವೇ.
\q ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
\q
\v 10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ;
\q ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ;
\q ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
\s5
\q
\v 11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ,
\q ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
\q
\v 12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ
\q ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
\s5
\c 63
\ms ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು
\d ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ.
\b
\q
\v 1 ದೇವರೇ, ನೀನೇ ನನ್ನ ದೇವರು;
\q ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ.
\q ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ;
\q ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ,
\q ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
\q
\v 2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ,
\q ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
\s5
\q
\v 3 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;
\q ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
\q
\v 4 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ,
\q ನಿನ್ನ ಹೆಸರೆತ್ತಿ ಕೈಮುಗಿಯುವೆನು.
\s5
\q
\v 5 ಮೃಷ್ಟಭೋಜನದಿಂದಲೋ ಎಂಬಂತೆ,
\q ನನ್ನ ಮನಸ್ಸು ಸಂತುಷ್ಟವಾಗಿರುವುದು;
\q ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
\q
\v 6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ,
\q ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
\s5
\q
\v 7 ನೀನು ನನಗೆ ಸಹಾಯಕನಾಗಿರುವೆಯಲ್ಲಾ;
\q ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು,
\q ಆನಂದಘೋಷ ಮಾಡುತ್ತಿರುವೆನು.
\q
\v 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು;
\q ನಿನ್ನ ಬಲಗೈ ನನಗೆ ಆಧಾರವಾಗಿರುವುದು.
\s5
\q
\v 9 ನನ್ನ ಜೀವಕ್ಕೆ ಕೇಡು ಬಗೆಯುವವರೋ,
\q ಅಧೋಲೋಕಕ್ಕೆ ಇಳಿದುಹೋಗುವರು.
\q
\v 10 ಅವರು ಕತ್ತಿಗೆ ಬಲಿಯಾಗುವರು;
\q ನರಿಗಳ ಪಾಲಾಗುವರು.
\s5
\q
\v 11 ಆದರೆ ಅರಸನೋ ದೇವರಲ್ಲಿ ಆನಂದಿಸುವನು,
\q ದೇವರ ಮೇಲೆ ಆಣೆಯಿಡುವವರೆಲ್ಲರು
\q ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.
\s5
\c 64
\ms ಸಂರಕ್ಷಣೆಗಾಗಿ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ದೇವರೇ, ನನ್ನ ಸ್ವರವನ್ನು ಕೇಳಿ,
\q ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
\q
\v 2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ,
\q ನನ್ನನ್ನು ತಪ್ಪಿಸಿ ಭದ್ರಪಡಿಸು.
\s5
\q
\v 3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ;
\q ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
\q
\v 4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ.
\q ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
\s5
\q
\v 5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು
\q ತಮ್ಮೊಳಗೆ, <<ರಹಸ್ಯವಾಗಿ ಬಲೆಗಳನ್ನು ಒಡ್ಡೋಣ;
\q ನಮ್ಮನ್ನು
\f +
\fr 64:5
\fq ನಮ್ಮನ್ನು
\ft ಅಥವಾ ಅವರನ್ನು.
\f* ನೋಡುವವರು ಯಾರು?>> ಅಂದುಕೊಳ್ಳುತ್ತಾರೆ.
\q
\v 6 ಅವರು, <<ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ>> ಅಂದುಕೊಳ್ಳುತ್ತಾರೆ;
\q ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
\s5
\q
\v 7 ಆದರೆ ದೇವರು ಬಾಣವನ್ನು ಎಸೆಯಲು,
\q ಫಕ್ಕನೆ ಅವರಿಗೆ ಗಾಯವಾಗುವುದು.
\q
\v 8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು;
\q ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
\q
\v 9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ,
\q ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
\s5
\q
\v 10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು;
\q ಸರಳಹೃದಯದವರೆಲ್ಲರೂ ಹಿಗ್ಗುವರು.
\s5
\c 65
\ms ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು.
\b
\q
\v 1 ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;
\q ಹರಕೆಗಳು ನಿನಗೆ ಸಲ್ಲುತ್ತವೆ.
\q
\v 2 ಪ್ರಾರ್ಥನೆಯನ್ನು ಕೇಳುವವನೇ,
\q ನರರೆಲ್ಲರೂ ನಿನ್ನ ಬಳಿಗೆ ಬರುವರು.
\q
\v 3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ.
\q ಆದರೆ ನಮ್ಮ ದೋಷಪರಿಹಾರಕನು ನೀನೇ.
\s5
\q
\v 4 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ,
\q ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ,
\q ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು.
\q ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ
\q ನಮಗೆ ಸಂತೃಪ್ತಿಯಾಗಲಿ.
\s5
\q
\v 5 ನಮ್ಮ ರಕ್ಷಕನಾದ ದೇವರೇ,
\q ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ,
\q ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ.
\q ಭೂಮಿಯ ಎಲ್ಲಾ ಕಡೆಯವರ,
\q ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ
\q ನಂಬಿಕೆಗೆ ಆಧಾರನು ನೀನೇ.
\s5
\q
\v 6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು,
\q ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
\q
\v 7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ,
\q ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
\s5
\q
\v 8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,
\q ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ;
\q ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
\q
\v 9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,
\q ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ.
\q ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
\s5
\q
\v 10 ನೇಗಿಲಗೆರೆಗಳನ್ನು ತೇವಗೊಳಿಸಿ,
\q ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ;
\q ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
\q
\v 11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ;
\q ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ
\q ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
\q
\v 12 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ;
\q ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
\s5
\q
\v 13 ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;
\q ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ;
\q ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
\s5
\c 66
\ms ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ.
\b
\q
\v 1 ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
\q
\v 2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ;
\q ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
\s5
\q
\v 3 ನೀವು ದೇವರಿಗೆ, <<ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ;
\q ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
\q
\v 4 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ,
\q ನಿನ್ನ ನಾಮವನ್ನು ಕೀರ್ತಿಸುವರು>> ಎಂದು ಹೇಳಿರಿ.
\qs ಸೆಲಾ
\qs*
\s5
\q
\v 5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ;
\q ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
\q
\v 6 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು;
\q ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು;
\q ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
\q
\v 7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ;
\q ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ.
\qs ಸೆಲಾ
\qs*
\s5
\q
\v 8 ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ;
\q ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
\q
\v 9 ಆತನು ನಮ್ಮನ್ನು ಜೀವದಿಂದುಳಿಸಿ,
\q ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
\s5
\q
\v 10 ದೇವರೇ, ನಮ್ಮನ್ನು ಶೋಧಿಸಿದಿ;
\q ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
\q
\v 11 ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ;
\q ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
\q
\v 12 ಮನುಷ್ಯರು ನಮ್ಮ ತಲೆಗಳ ಮೇಲೆಯೇ,
\q ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ.
\q ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು;
\q ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
\s5
\q
\v 13 ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
\q
\v 14 ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ
\q ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
\q
\v 15 ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು
\q ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು;
\q ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು.
\qs ಸೆಲಾ
\qs*
\s5
\q
\v 16 ಎಲ್ಲಾ ದೇವಭಕ್ತರೇ, ಬಂದು ಕೇಳಿರಿ;
\q ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
\q
\v 17 ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
\q
\v 18 ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ,
\q ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
\s5
\q
\v 19 ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
\q
\v 20 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ;
\q ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ.
\q ದೇವರಿಗೆ ಸ್ತೋತ್ರವಾಗಲಿ.
\s5
\c 67
\ms ದೇವಸ್ತುತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
\r (ಕೀರ್ತ. 98)
\b
\q
\v 1 ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;
\q ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ.
\qs ಸೆಲಾ
\qs*
\q
\v 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,
\q ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
\s5
\q
\v 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;
\q ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
\q
\v 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,
\q ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ
\q ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ.
\qs ಸೆಲಾ
\qs*
\s5
\q
\v 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;
\q ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
\q
\v 6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.
\q ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
\s5
\q
\v 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.
\q ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
\s5
\c 68
\ms ರಕ್ಷಕನಾದ ದೇವರ ಪ್ರತಾಪವರ್ಣನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು.
\r (ನ್ಯಾಯ. 5; ಧರ್ಮೋ. 33; ಹಬ. 3)
\b
\q
\v 1 ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ;
\q ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.
\q
\v 2 ಹೊಗೆಯು ಗಾಳಿಯಿಂದ ಹೇಗೋ,
\q ಹಾಗೆ ಅವರು ಆತನಿಂದ ಹಾರಿಹೋಗಲಿ;
\q ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ,
\q ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.
\q
\v 3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ;
\q ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.
\s5
\q
\v 4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
\q ಅರಣ್ಯದಲ್ಲಿ ಸವಾರಿಮಾಡುತ್ತಾ
\f +
\fr 68:4
\fq ಅರಣ್ಯದಲ್ಲಿ ಸವಾರಿಮಾಡುತ್ತಾ
\ft ಅಥವಾ ಮೇಘಾರೂಢನಾಗಿ.
\f* ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
\q ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
\q
\v 5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
\q ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
\q
\v 6 ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;
\q ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
\q ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
\s5
\q
\v 7 ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು,
\q ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ,
\qs ಸೆಲಾ
\qs*
\q
\v 8 ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು;
\q ಮೇಘಮಂಡಲವು ಮಳೆಸುರಿಸಿತು.
\q ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು,
\q ಆ ಸೀನಾಯ್ ಬೆಟ್ಟವು ಕದಲಿತು.
\s5
\q
\v 9 ದೇವರೇ, ನೀನು ಹೇರಳವಾಗಿ ಮಳೆಸುರಿಸಿ,
\q ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
\q
\v 10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು.
\q ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.
\s5
\q
\v 11 ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
\q
\v 12 ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ;
\q ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
\q
\v 13
\f +
\fr 68:13
\ft ಇದು ಸ್ತ್ರೀಯರು ಕೊಳ್ಳೆಯನ್ನು ತಮ್ಮಲ್ಲಿ ಹಂಚಿಕೊಳ್ಳುತ್ತಿರುವ ವಿವರಣೆಯಾಗಿದೆ. ಪಾರಿವಾಳವು ಇಸ್ರಾಯೇಲಿನ ಸಂಕೇತವಾಗಿದೆ. ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವವರಿಗಾಗಿಯೂ ಸಹ ಬೆಳ್ಳಿಯಿಂದ ಆವರಿಸಿರುವ ಪಾರಿವಾಳದ ರೆಕ್ಕೆಗಳು, ಚೊಕ್ಕ ಬಂಗಾರದಿಂದ ಆವರಿಸಿರುವ ಅದರ ಗರಿಗಳು ಇವೆ.
\f* ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು?
\q ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ,
\q ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
\s5
\q
\v 14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ,
\q ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
\q
\v 15 ಬಾಷಾನಿನ ಪರ್ವತವು ಮಹೋನ್ನತವಾಗಿದೆ;
\q ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
\q
\v 16 ಎಲೈ, ಶಿಖರೋನ್ನತಪರ್ವತಗಳೇ,
\q ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು
\q ನೀವು ಓರೆಗಣ್ಣಿನಿಂದ ನೋಡುವುದೇಕೆ?
\q ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
\s5
\q
\v 17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ.
\q ಕರ್ತನಾದ ಯೆಹೋವನು ಅವುಗಳ ಸಮೇತವಾಗಿ,
\q ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ
\f +
\fr 68:17
\fq ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ
\ft ಅಥವಾ ಯೆಹೋವನು ಅವರ ಮಧ್ಯದಲ್ಲಿ ವಾಸಿಸುತ್ತಾನೆ, ಸೀನಾಯ್ ಬೆಟ್ಟವು ಪವಿತ್ರಸ್ಥಳದಲ್ಲಿದೆ.
\f* .
\q
\v 18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ,
\q ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ,
\q ದೇವನಾದ ಯಾಹುವು ಅಲ್ಲೇ ವಾಸಿಸುವಂತೆ,
\q ಉನ್ನತಸ್ಥಾನಕ್ಕೆ ಏರಿದ್ದೀ.
\s5
\q
\v 19 ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ.
\q ನಮ್ಮನ್ನು ರಕ್ಷಿಸುವ ದೇವರು ಆತನೇ.
\qs ಸೆಲಾ
\qs*
\q
\v 20 ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ;
\q ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
\q
\v 21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ,
\q ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
\s5
\q
\v 22 ಕರ್ತನು, <<ನಾನು ಅವರನ್ನು ಬಾಷಾನಿನಿಂದಲೂ,
\q ಸಮುದ್ರ ತಳದಿಂದಲೂ ಹಿಡಿದು ತರುವೆನು.
\q
\v 23 ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ.
\q ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು>> ಎಂದು ನುಡಿದನು.
\s5
\q
\v 24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ;
\q ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
\q
\v 25 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ,
\q ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
\s5
\q
\v 26 <<ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ>> ಎಂದು ಹಾಡುತ್ತಾರೆ.
\q
\v 27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ,
\q ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ,
\q ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
\s5
\q
\v 28 ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು
\f +
\fr 68:28
\fq ಆಜ್ಞಾಪಿಸು
\ft ಅಥವಾ ತೋರ್ಪಡಿಸು
\f* .
\q ನಿನ್ನ ಮಂದಿರದಲ್ಲಿ ಆಸೀನನಾಗಿ
\q ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.
\q
\v 29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.
\s5
\q
\v 30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು,
\q ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು.
\q ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ.
\q ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
\q
\v 31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು;
\q ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
\s5
\q
\v 32 ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ;
\q ಕರ್ತನನ್ನು ಸಂಕೀರ್ತಿಸಿರಿ.
\qs ಸೆಲಾ
\qs*
\q
\v 33 ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ
\q ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ.
\q ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.
\s5
\q
\v 34 ದೇವರ ಪ್ರತಾಪವನ್ನು ಕೊಂಡಾಡಿರಿ.
\q ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ;
\q ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
\q
\v 35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು.
\q ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು.
\q ದೇವರಿಗೆ ಸ್ತೋತ್ರ.
\s5
\c 69
\ms ಸ್ವರಕ್ಷಣೆ ಮತ್ತು ವೈರಿಶಿಕ್ಷೆಗಾಗಿ ಭಕ್ತನ ವಿಜ್ಞಾಪನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.
\r (ಕೀರ್ತ. 22; 35; 40; 45)
\b
\q
\v 1 ದೇವರೇ, ರಕ್ಷಿಸು;
\q ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
\q
\v 2 ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ.
\q ಜಲರಾಶಿಯೊಳಗೆ ಮುಳುಗುತ್ತಿದ್ದೇನೆ;
\q ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
\s5
\q
\v 3 ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ;
\q ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
\q
\v 4 ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ;
\q ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ.
\q ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
\s5
\q
\v 5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು;
\q ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
\q
\v 6 ಸೇನಾಧೀಶ್ವರನೇ, ಯೆಹೋವನೇ,
\q ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ;
\q ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು
\q ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
\s5
\q
\v 7 ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ;
\q ನಾಚಿಕೆಯು ನನ್ನ ಮುಖವನ್ನು ಕವಿದಿದೆ.
\q
\v 8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು;
\q ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
\q
\v 9 ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ.
\q ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
\s5
\q
\v 10
\f +
\fr 69:10
\ft ಕೆಲವು ಹಸ್ತಪ್ರತಿಗಳಲ್ಲಿ ನಾನು ನನ್ನನ್ನು ಉಪವಾಸದಿಂದ ತಗ್ಗಿಸಿಕೊಂಡಿದ್ದೇನೆ ಎಂದು ಇದೆ.
\f* ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ,
\q ಪರಿಹಾಸ್ಯಕ್ಕೆ ಕಾರಣವಾಯಿತು.
\q
\v 11 ನಾನು ಗೋಣಿತಟ್ಟು ಕಟ್ಟಿಕೊಂಡದ್ದು,
\q ಅವರ ಗಾದೆಗೆ ಆಸ್ಪದವಾಯಿತು.
\q
\v 12 ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ.
\q ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
\s5
\q
\v 13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ;
\q ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ,
\q ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
\q
\v 14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು;
\q ವೈರಿಗಳ ಕೈಯೊಳಗಿಂದ ಬಿಡಿಸು;
\q ಮಹಾಜಲರಾಶಿಯಿಂದ ಎಳೆದುಕೋ.
\q
\v 15 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ;
\q ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ;
\q ಪಾತಾಳವು ನನ್ನನ್ನು ನುಂಗದಿರಲಿ.
\s5
\q
\v 16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು;
\q ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ.
\q ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
\q
\v 17 ನಿನ್ನ ದಾಸನಿಗೆ ವಿಮುಖನಾಗಬೇಡ,
\q ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
\s5
\q
\v 18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು.
\q ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
\q
\v 19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು;
\q ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
\s5
\q
\v 20 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ.
\q ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ.
\q ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
\q
\v 21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ,
\q ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
\s5
\q
\v 22
\f +
\fr 69:22
\ft ಕೆಲವು ಹಸ್ತಪ್ರತಿಗಳಲ್ಲಿ ಅವರ ಯಜ್ಞಸಮರ್ಪಿತ ಊಟವು ಅವರ ಸ್ನೇಹಿತರಿಗೆ ಉರುಲಾಗಿರಲಿ.
\f* ಅವರ ಸಂಪತ್ತು ಅವರಿಗೆ ಉರುಲಾಗಲಿ;
\q ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
\q
\v 23 ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ;
\q ಅವರ ನಡುವು ಯಾವಾಗಲೂ ನಡಗುತ್ತಿರಲಿ.
\s5
\q
\v 24 ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು;
\q ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
\q
\v 25 ಅವರ ಪಾಳೆಯವು ಹಾಳುಬೀಳಲಿ;
\q ಅವರ ನಿವಾಸಗಳು ಜನಶೂನ್ಯವಾಗಲಿ.
\s5
\q
\v 26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;
\q ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
\q
\v 27 ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ.
\q ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
\s5
\q
\v 28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,
\q ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
\q
\v 29 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ,
\q ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
\s5
\q
\v 30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;
\q ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
\q
\v 31 ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ,
\q ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
\s5
\q
\v 32 ದೀನರು ಇದನ್ನು ನೋಡಿ ಹರ್ಷಿಸುವರು.
\q ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
\q
\v 33 ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು;
\q ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
\s5
\q
\v 34 ಭೂಮ್ಯಾಕಾಶಗಳೂ, ಸಮುದ್ರಗಳೂ,
\q ಜಲಚರಗಳೂ ಆತನನ್ನು ಕೊಂಡಾಡಲಿ.
\q
\v 35 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ,
\q ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು;
\q ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
\q
\v 36 ಅವರ ಸಂತತಿಗೇ ಅದರ ಹಕ್ಕಿರುವುದು;
\q ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
\s5
\c 70
\ms ಸಂರಕ್ಷಣೆಗಾಗಿ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
\r (ಕೀರ್ತ. 40:13-17)
\b
\q
\v 1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.
\q ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
\q
\v 2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;
\q ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
\q
\v 3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು
\q ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
\s5
\q
\v 4 ನಿನ್ನ ದರ್ಶನವನ್ನು ಕೋರುವವರೆಲ್ಲರು
\q ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
\q ನಿನ್ನ ಜಯದಲ್ಲಿ ಆನಂದಿಸುವವರು, <<ದೇವರು ಮಹೋನ್ನತನು>> ಎಂದು ಯಾವಾಗಲೂ ಹೇಳಲಿ.
\q
\v 5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;
\q ದೇವರೇ, ಬೇಗನೆ ಬಾ.
\q ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
\s5
\c 71
\ms ವೃದ್ಧಾಪ್ಯದ ಪ್ರಾರ್ಥನೆ
\q
\v 1 ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ;
\q ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.
\q
\v 2 ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು;
\q ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
\q
\v 3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು;
\q ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ.
\q ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
\s5
\q
\v 4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ,
\q ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
\q
\v 5 ಕರ್ತನಾದ ಯೆಹೋವನೇ,
\q ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
\s5
\q
\v 6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
\q ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
\q ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
\q
\v 7 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ;
\q ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
\s5
\q
\v 8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;
\q ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
\q
\v 9 ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ;
\q ನನ್ನ ಬಲವು ಕುಂದಿದಾಗ ಕೈಬಿಡಬೇಡ.
\s5
\q
\v 10 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
\q
\v 11 <<ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ;
\q ಬಿಡಿಸುವವರು ಯಾರೂ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ.
\s5
\q
\v 12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
\q
\v 13 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ;
\q ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
\s5
\q
\v 14 ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು;
\q ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
\q
\v 15 ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು;
\q ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
\q
\v 16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ
\q ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
\s5
\q
\v 17 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.
\q ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
\q
\v 18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ;
\q ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು,
\q ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
\s5
\q
\v 19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ.
\q ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
\q
\v 20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು;
\q ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
\s5
\q
\v 21 ನನ್ನ ಗೌರವವನ್ನು ಹೆಚ್ಚಿಸು;
\q ನನಗೆ ಅಭಿಮುಖನಾಗಿ ಸಂತೈಸು.
\q
\v 22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು;
\q ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು.
\q ಇಸ್ರಾಯೇಲರ ಪರಿಶುದ್ಧ ದೇವರು,
\q ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
\s5
\q
\v 23 ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ
\q ನಿನ್ನನ್ನು ಹಾಡಿಹರಸುವವು.
\q
\v 24 ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.
\q ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.
\s5
\c 72
\ms ರಾಜಾಶೀರ್ವಾದ
\d ಸೊಲೊಮೋನನ ಕೀರ್ತನೆ.
\r (ಕೀರ್ತ. 21; 45)
\b
\q
\v 1 ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು;
\q ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
\q
\v 2 ಅವನು ನಿನ್ನ ಜನರಿಗೆ ನೀತಿಯಿಂದಲೂ,
\q ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
\q
\v 3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ,
\q ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
\s5
\q
\v 4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ;
\q ದೀನರ ಮಕ್ಕಳನ್ನು ಉದ್ಧರಿಸಲಿ;
\q ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
\q
\v 5 ಸೂರ್ಯನು, ಚಂದ್ರನು ಇರುವವರೆಗೂ,
\q ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ,
\q
\f +
\fr 72:5
\ft ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ.
\f* ತಲತಲಾಂತರಗಳವರೆಗೂ ಅವನು ಜೀವಿಸುವನು.
\s5
\q
\v 6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ,
\q ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
\q
\v 7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ
\f +
\fr 72:7
\fq ನೀತಿಯು ವೃದ್ಧಿಯಾಗಲಿ
\ft ಅಥವಾ ನೀತಿವಂತರು ವೃದ್ಧಿಯಾಗಲಿ.
\f* ;
\q ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
\s5
\q
\v 8 ಅವನು ಸಮುದ್ರದಿಂದ ಸಮುದ್ರದ ವರೆಗೂ,
\q ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
\q
\v 9 ಅರಣ್ಯವಾಸಿಗಳು
\f +
\fr 72:9
\fq ಅರಣ್ಯವಾಸಿಗಳು
\ft ಅಥವಾ ಅವನ ಶತ್ರುಗಳು.
\f* ಅವನಿಗೆ ಅಡ್ಡಬೀಳಲಿ;
\q ಅವನ ವೈರಿಗಳು ಮಣ್ಣುಮುಕ್ಕಲಿ.
\q
\v 10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;
\q ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
\s5
\q
\v 11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ;
\q ಸರ್ವಜನಾಂಗಗಳು ಆತನನ್ನು ಸೇವಿಸಲಿ.
\q
\v 12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ,
\q ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
\s5
\q
\v 13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
\q
\v 14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;
\q ಅವರ ಜೀವವು
\f +
\fr 72:14
\fq ಅವರ ಜೀವವು
\ft ಅಥವಾ ಅವರ ರಕ್ತವು.
\f* ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
\s5
\q
\v 15 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.
\q ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ;
\q ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
\q
\v 16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ;
\q ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ.
\q ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
\s5
\q
\v 17 ಅವನ ನಾಮವು ಸ್ಥಿರವಾಗಿರಲಿ;
\q ಅವನ ಹೆಸರು ಸೂರ್ಯನಿರುವವರೆಗೆ ಇರಲಿ.
\q ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ,
\q ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
\s5
\q
\v 18 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ,
\q ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
\q
\v 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;
\q ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
\b
\q
\v 20 ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
\s5
\c 73
\ms ತೃತೀಯ ಭಾಗವು 73-89
\s ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ
\d ಆಸಾಫನ ಕೀರ್ತನೆ.
\r (ಕೀರ್ತ. 49)
\b
\q
\v 1 ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
\q
\v 2 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.
\q
\v 3 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು
\q ಸೊಕ್ಕಿನವರ ಮೇಲೆ ಉರಿಗೊಂಡೆನು.
\s5
\q
\v 4 ಅವರ ಮರಣವು ನಿರ್ಬಾಧಕವಾಗಿದೆ;
\q ಅವರ ದೇಹವು ಕೊಬ್ಬಿದೆ.
\q
\v 5 ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ;
\q ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
\s5
\q
\v 6 ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ;
\q ಬಲಾತ್ಕಾರವು ಉಡುಪಾಗಿದೆ.
\q
\v 7 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ;
\q ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
\s5
\q
\v 8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ;
\q ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
\q
\v 9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ.
\q ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
\s5
\q
\v 10 ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ;
\q
\f +
\fr 73:10
\ft ಅಥವಾ ಅವರಿಗೆ ಪಾನವು ಯಥೇಚ್ಛವಾಗಿ ದೊರಕುವುದು.
\f* ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
\q
\v 11 ಅವರು <<ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ>> ಅಂದುಕೊಳ್ಳುತ್ತಾರೆ.
\q
\v 12 ನೋಡಿರಿ, ದುಷ್ಟರು ಇಂಥವರೇ;
\q ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
\s5
\q
\v 13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ,
\q ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
\q
\v 14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು,
\q ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
\q
\v 15 ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ,
\q ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.
\s5
\q
\v 16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ
\q ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
\q
\v 17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
\s5
\q
\v 18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು,
\q ಬೀಳಿಸಿ, ನಾಶಮಾಡಿಬಿಡುತ್ತೀ.
\q
\v 19 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ;
\q ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
\q
\v 20 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ
\q ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
\s5
\q
\v 21 ನನ್ನ ಮನಸ್ಸು ನೊಂದುಹೋಗಿತ್ತು;
\q ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
\q
\v 22 ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ,
\q ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
\s5
\q
\v 23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ.
\q ನೀನು ನನ್ನ ಬಲಗೈಯನ್ನು ಹಿಡಿದು,
\q
\v 24 ನಿನ್ನ ಚಿತ್ತವನ್ನು ತಿಳಿಯಪಡಿಸಿ,
\q ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
\s5
\q
\v 25 ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ?
\q ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
\q
\v 26 ತನುಮನಗಳು ಕ್ಷಯಿಸಿದರೂ
\q ನನ್ನ ಆತ್ಮಕ್ಕೆ ಬಲವು
\f +
\fr 73:26
\fq ಬಲವು
\ft ಅಥವಾ ಬಂಡೆ.
\f*
\q ನನ್ನ ಶಾಶ್ವತವಾದ ಪಾಲೂ ದೇವರೇ.
\s5
\q
\v 27 ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು;
\q ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.
\q
\v 28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು.
\q ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ
\q ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
\s5
\c 74
\ms ದೇವಾಲಯವನ್ನು ಹಾಳುಮಾಡಿದ ಶತ್ರುಗಳನ್ನು ತಗ್ಗಿಸಬೇಕೆಂಬ ಪ್ರಾರ್ಥನೆ
\d ಆಸಾಫನ ಪದ್ಯ.
\r (ಕೀರ್ತ. 79)
\b
\q
\v 1 ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ?
\q ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
\q
\v 2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು
\q ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ;
\q ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
\s5
\q
\v 3 ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು.
\q ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
\q
\v 4 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ;
\q ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
\q
\v 5 ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
\q
\v 6 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,
\q ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
\s5
\q
\v 7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,
\q ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
\q
\v 8 <<ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ>> ಅಂದುಕೊಂಡಿದ್ದಾರೆ;
\q ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
\s5
\q
\v 9 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ.
\q ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ;
\q ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
\q
\v 10 ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು?
\q ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
\q
\v 11 ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ?
\q ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
\b
\s5
\q
\v 12 ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ,
\q ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
\q
\v 13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು;
\q ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
\s5
\q
\v 14 ಲಿವ್ಯಾತಾನನ
\f +
\fr 74:14
\fq ಲಿವ್ಯಾತಾನನ
\ft ಲಿವ್ಯಾತಾನ್ (104:26; ಯೆಶಾ. 27:1) ಎಂಬುದು ಪೌರಾಣಿಕ ಘಟಸರ್ಪದ ಹೆಸರಾಗಿದೆ, ಇತರ ಸ್ಥಳಗಳಲ್ಲಿ ಬೇರೆ ಹೆಸರಿನಿಂದ ಕರೆಯಲ್ಪಟ್ಟಿದೆ. ಇದು ಅನೇಕ ತಲೆಗಳನ್ನು ಹೊಂದಿದೆಯೆಂದು ಭಾವಿಸಲಾಗಿದೆ. ಕೆಲವೊಮ್ಮೆ ನೀರಿನಲ್ಲಿರುವ ಘಟಸರ್ಪಗಳನ್ನು "ಕಡಲ ಮಹಾ ಹಾವುಗಳು" ಅಥವಾ "ಸಮುದ್ರದಲ್ಲಿ ವಾಸಿಸುವ ಮಹಾ ಪ್ರಾಣಿಗಳು" ಎಂದು ಅನುವಾದಿಸಲಾಗಿದೆ.
\f* ಶಿರಚ್ಛೇದನೆಮಾಡಿ,
\q ಅಡವಿಯ ಮೃಗಸಮುದಾಯಕ್ಕೆ
\f +
\fr 74:14
\fq ಮೃಗಸಮುದಾಯಕ್ಕೆ
\ft ಅಥವಾ ಜನರಿಗೆ.
\f* ಆಹಾರ ಕೊಟ್ಟವನು ನೀನು.
\q
\v 15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು;
\q ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
\s5
\q
\v 16 ಹಗಲಿರುಳುಗಳನ್ನು ನೇಮಿಸಿದವನು ನೀನು;
\q ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
\q
\v 17 ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು;
\q ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
\s5
\q
\v 18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು,
\q ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
\q
\v 19 ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ;
\q ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
\s5
\q
\v 20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ.
\q ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
\q
\v 21 ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ;
\q ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
\s5
\q
\v 22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು;
\q ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
\q
\v 23 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ,
\q ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.
\s5
\c 75
\ms ನ್ಯಾಯಾಧೀಶನಾದ ದೇವರಿಗೆ ಸ್ತುತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.
\r (ಕೀರ್ತ. 57)
\b
\q
\v 1 ದೇವರೇ, ಕೊಂಡಾಡುತ್ತೇವೆ;
\q ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು;
\q ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
\q
\v 2 ದೇವರು ನುಡಿದದ್ದು, <<ನಿಯಮಿತ ಕಾಲವು ಬಂದಾಗ,
\q ನಾನೇ ನೀತಿಯಿಂದ ತೀರ್ಪುಕೊಡುವೆನು.
\q
\v 3 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ,
\q ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ>> ಎಂಬುದು.
\qs ಸೆಲಾ
\qs*
\s5
\q
\v 4 ನಾನು ಹೆಮ್ಮೆಗಾರರಿಗೆ, <<ಕೊಚ್ಚಿಕೊಳ್ಳಬೇಡಿರಿ>> ಎಂದು;
\q ದುಷ್ಟರಿಗೆ, <<ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
\q
\v 5 ಕೊಂಬುಗಳನ್ನು ಮೇಲೆತ್ತಬೇಡಿರಿ;
\q ಸೊಕ್ಕಿನಿಂದ ಮಾತನಾಡಬೇಡಿರಿ>> ಎಂದು ಹೇಳುವೆನು.
\q
\v 6 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ,
\q ಅರಣ್ಯದಿಂದಾಗಲಿ ಬರುವುದಿಲ್ಲ.
\s5
\q
\v 7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು,
\q ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
\q
\v 8 ಯೆಹೋವನ ಕೈಯಲ್ಲಿ ಪಾತ್ರೆ ಇದೆ;
\q ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ.
\q ಅದರಿಂದ ಹೊಯ್ದು ಹಂಚುತ್ತಾನೆ.
\q ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
\s5
\q
\v 9 ನಾನಾದರೋ ಸದಾ ವರ್ಣಿಸುವವನಾಗಿ,
\q ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
\q
\v 10 ದುಷ್ಟರ ಕೊಂಬುಗಳನ್ನೆಲ್ಲಾ
\f +
\fr 75:10
\fq ಕೊಂಬುಗಳನ್ನೆಲ್ಲಾ
\ft ಅಥವಾ ಬಲವನ್ನು.
\f* ಮುರಿದುಬಿಡುವೆನು;
\q ಆದರೆ ನೀತಿವಂತರ ಕೊಂಬುಗಳನ್ನು
\f +
\fr 75:10
\fq ಕೊಂಬುಗಳನ್ನು
\ft ಅಥವಾ ಬಲವನ್ನು.
\f* ಉನ್ನತಮಟ್ಟಕ್ಕೆ ಎತ್ತಲ್ಪಡುವವು.
\s5
\c 76
\ms ಮಹಾಭಯಂಕರನಾದ ದೇವರಿಗೆ ಸ್ತುತಿ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು.
\r (ಕೀರ್ತ. 75)
\b
\q
\v 1 ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು;
\q ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
\q
\v 2 ಸಾಲೇಮಿನಲ್ಲಿ
\f +
\fr 76:2
\fq ಸಾಲೇಮಿನಲ್ಲಿ
\ft ಅಥವಾ ಯೆರೂಸಲೇಮಿನಲ್ಲಿ.
\f* ಆತನ ಬಿಡಾರವಿದೆ;
\q ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
\q
\v 3 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ,
\q ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ.
\qs ಸೆಲಾ
\qs*
\s5
\q
\v 4 ನೀನು ತೇಜೋಮಯನು;
\q ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
\q
\v 5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ;
\q ಎಲ್ಲಾ ಶೂರರ ಕೈಗಳು ಬಿದ್ದುಹೋದವು.
\s5
\q
\v 6 ಯಾಕೋಬ ವಂಶದವರ ದೇವರೇ,
\q ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
\q
\v 7 ನೀನು ಮಹಾಶಕ್ತಿಶಾಲಿ;
\q ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
\s5
\q
\v 8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
\q
\v 9 ದೇವರು ಲೋಕದ ದೀನರನ್ನು ರಕ್ಷಿಸಿ,
\q ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು
\q ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು.
\qs ಸೆಲಾ
\qs*
\s5
\q
\v 10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು;
\q ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ
\f +
\fr 76:10
\fq ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ
\ft ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ.
\f* .
\s5
\q
\v 11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ;
\q ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
\q
\v 12 ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ
\q ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
\s5
\c 77
\ms ದೇವರ ಮಹತ್ಕಾರ್ಯಗಳ ಧ್ಯಾನ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ.
\b
\q
\v 1 ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು;
\q ಆತನು ನನಗೆ ಕಿವಿಗೊಡುವನು.
\s5
\q
\v 2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು;
\q ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು.
\q ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
\q
\v 3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;
\q ಮನಗುಂದಿದವನಾಗಿಯೇ ಹಂಬಲಿಸುವೆನು.
\b
\s5
\q
\v 4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ.
\q ತಳಮಳಗೊಂಡು ಮಾತನಾಡಲಾರದೆ ಇದ್ದೆನು.
\q
\v 5 ಹಳೆಯ ದಿನಗಳನ್ನೂ,
\q ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
\s5
\q
\v 6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು,
\q ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು
\q ನನ್ನ ಮನಸ್ಸಿನಲ್ಲಿ,
\q
\v 7 <<ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ?
\q ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
\s5
\q
\v 8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ?
\q ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
\q
\v 9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?
\q ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?>> ಎಂದು ಅಂದುಕೊಂಡೆನು
\qs ಸೆಲಾ
\qs*
\s5
\q
\v 10 ಪುನಃ ನಾನು,
\q <<ಹೀಗೆ ನೆನಸುವುದು ನನ್ನ ಬಲಹೀನತೆಯೇ.
\q ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
\s5
\q
\v 11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು;
\q ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
\q
\v 12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;
\q ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು>> ಅಂದುಕೊಂಡೆನು.
\s5
\q
\v 13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು.
\q ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
\q
\v 14 ಅದ್ಭುತಗಳನ್ನು ನಡೆಸುವ ದೇವರು ನೀನೇ;
\q ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
\q
\v 15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು,
\q ಭುಜಬಲದಿಂದ ಬಿಡುಗಡೆಮಾಡಿದಿ.
\qs ಸೆಲಾ
\qs*
\s5
\q
\v 16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು;
\q ಕಾಣುತ್ತಲೇ ತಳಮಳಗೊಂಡು
\q ತಳದವರೆಗೂ ಅಲ್ಲಕಲ್ಲೋಲವಾದವು.
\q
\v 17 ಮೇಘಮಂಡಲವು ಮಳೆಗರೆಯಿತು;
\q ಆಕಾಶವು ಗರ್ಜಿಸಿತು;
\q ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
\s5
\q
\v 18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು;
\q ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು;
\q ಭೂಮಿಯು ಅಲ್ಲಾಡಿ ಕಂಪಿಸಿತು.
\q
\v 19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;
\q ಮಹಾಜಲರಾಶಿಗಳನ್ನು ದಾಟಿದಿ;
\q ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
\q
\v 20 ಕುರುಬನು ಕುರಿಹಿಂಡನ್ನು ಹೇಗೋ,
\q ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ,
\q ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
\s5
\c 78
\ms ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ
\d ಆಸಾಫನ ಪದ್ಯ.
\r (ಕೀರ್ತ. 105; 106; ಧರ್ಮೋ. 32)
\b
\q
\v 1 ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;
\q ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
\q
\v 2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.
\q ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
\s5
\q
\v 3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,
\q ಅವರ ಸಂತಾನದವರಿಗೆ ಮರೆಮಾಡದೆ,
\q
\v 4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
\q ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
\s5
\q
\v 5 ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,
\q ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು,
\q ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, <<ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
\q
\v 6 ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ,
\q ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
\s5
\q
\v 7 ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,
\q ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
\q
\v 8 ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು,
\q ನನ್ನ ಆಜ್ಞೆಗಳನ್ನು ಕೈಗೊಳ್ಳುವರು>> ಎಂಬುದೇ.
\s5
\q
\v 9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ,
\q ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
\q
\v 10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ,
\q ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
\q
\v 11 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ
\q ಅದ್ಭುತಗಳನ್ನು ಮರೆತುಬಿಟ್ಟರು.
\s5
\q
\v 12 ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ,
\q ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
\q
\v 13 ಆತನು ಸಮುದ್ರವನ್ನು ವಿಭಾಗಿಸಿ,
\q ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
\q
\v 14 ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ,
\q ಆತನು ಅವರನ್ನು ಕರೆದೊಯ್ದನು.
\s5
\q
\v 15 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ,
\q ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
\q
\v 16 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ,
\q ನದಿಗಳಾಗಿ ಹರಿಯಮಾಡಿದನು.
\s5
\q
\v 17 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ,
\q ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
\q
\v 18 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ,
\q ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
\s5
\q
\v 19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ,
\q <<ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
\q
\v 20 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ,
\q ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ?
\q ಆತನು ರೊಟ್ಟಿಯನ್ನು ಕೊಡಲು ಶಕ್ತನೋ?
\q ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ>> ಎಂಬುದೇ.
\s5
\q
\v 21 ಯೆಹೋವನು ಇದನ್ನು ಕೇಳಿ ರೋಷಗೊಂಡನು.
\q ಅವರು ದೇವರಲ್ಲಿ ಭರವಸವಿಡದೆಯೂ,
\q ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
\q
\v 22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು;
\q ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
\s5
\q
\v 23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
\q
\v 24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ,
\q ಉಣ್ಣಲಿಕ್ಕೆ ಕೊಟ್ಟನು.
\q
\v 25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು.
\q ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
\s5
\q
\v 26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ,
\q ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
\q
\v 27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು;
\q ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
\q
\v 28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
\s5
\q
\v 29 ಅವರು ತಿಂದು ಸಂತೃಪ್ತರಾದರು;
\q ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
\q
\v 30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು,
\q ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
\s5
\q
\v 31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು,
\q ಅವರಲ್ಲಿ ಕೊಬ್ಬಿದವರನ್ನು ವಧಿಸಿ,
\q ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
\q
\v 32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು;
\q ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
\s5
\q
\v 33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ,
\q ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
\q
\v 34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ,
\q ಪುನಃ ಆತನ ಪ್ರಸನ್ನತೆಯನ್ನು ಬಯಸಿ,
\s5
\q
\v 35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು,
\q ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
\q
\v 36 ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ,
\q ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
\q
\v 37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ;
\q ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
\s5
\q
\v 38 ಆದರೂ ಆತನು ಕರುಣಾಳುವೂ,
\q ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ,
\q ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
\s5
\q
\v 39 ಅವರು ಮಾಂಸಮಾತ್ರದವರೂ,
\q ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
\q
\v 40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ,
\q ಅಲ್ಲಿ ಆತನನ್ನು ನೋಯಿಸಿದರು.
\q
\v 41 ಆತನನ್ನು ಪದೇಪದೇ ಪರೀಕ್ಷಿಸಿ,
\q ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
\s5
\q
\v 42 ಅವರು ಆತನ ಭುಜಬಲವನ್ನೂ,
\q ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
\q
\v 43 ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು,
\q ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
\s5
\q
\v 44 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ,
\q ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
\q
\v 45 ಅವರನ್ನು ನಾಶಮಾಡುವ ವಿಷದ ಹುಳಗಳನ್ನು,
\q ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
\q
\v 46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ,
\q ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
\s5
\q
\v 47 ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ,
\q ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
\q
\v 48 ಅವರ ದನಗಳನ್ನು ಕಲ್ಮಳೆಗೂ,
\q ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
\q
\v 49 ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು,
\q ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
\s5
\q
\v 50 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ,
\q ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
\q
\v 51 ಹಾಮನ ವಂಶದವರ
\f +
\fr 78:51
\fq ಹಾಮನ ವಂಶದವರ
\ft ಅಥವಾ ಹಾಮನ ಡೇರೆಗಳು ಐಗುಪ್ತದ ಬಗ್ಗೆ ಮಾತನಾಡುವ ರೀತಿಯಾಗಿದೆ (ನೋಡಿರಿ 105:23,27; 106:22, ಅಲ್ಲಿ ಐಗುಪ್ತವನ್ನು "ಹಾಮನ ದೇಶ" ಎಂದು ಕರೆಯಲಾಗಿದೆ). ಹಾಮನು, ನೋಹನ ಮಕ್ಕಳಲ್ಲಿ ಒಬ್ಬನಾಗಿದ್ದನು, ಅವನನ್ನು ಐಗುಪ್ತದವರ ಪೂರ್ವಜನೆಂದು ಪರಿಗಣಿಸಲ್ಪಟ್ಟಿದ್ದಾನೆ (ಆದಿ. 10:6 ನೋಡಿರಿ).
\f* ಪ್ರಥಮಫಲವಾಗಿರುವ
\q ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
\s5
\q
\v 52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು,
\q ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
\q
\v 53 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ;
\q ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
\s5
\q
\v 54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ
\q ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
\q
\v 55 ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು,
\q ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು,
\q ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
\s5
\q
\v 56 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು.
\q ಆತನ ವಿಧಿಗಳನ್ನು ಕೈಗೊಳ್ಳದೆ,
\q
\v 57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು.
\q ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
\s5
\q
\v 58 ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ,
\q ವಿಗ್ರಹಗಳಿಂದ ರೇಗಿಸಿದರು.
\q
\v 59 ದೇವರು ಇದನ್ನು ತಿಳಿದು ರೌದ್ರನಾಗಿ
\q ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
\s5
\q
\v 60 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ,
\q ಶಿಲೋವ್
\f +
\fr 78:60
\fq ಶಿಲೋವ್
\ft ಶಿಲೋವ್ ಎಫ್ರಾಯೀಮ್ ಕುಲದ ಪ್ರದೇಶದಲ್ಲಿರುವ ಪಟ್ಟಣವಾಗಿದೆ, ಯೆರೂಸಲೇಮಿನ ಉತ್ತರ ಭಾಗಕ್ಕೆ 32 ಕಿಲೋಮೀಟರ್ ದೂರವಿದೆ, ಇಸ್ರಾಯೇಲಿನ ಇತಿಹಾಸದ ಆರಂಭಿಕ ದಿನಗಳಲ್ಲಿ ಮಂಜೂಷ ಪೆಟ್ಟಿಗೆಯನ್ನು ಅಲ್ಲಿ ಇಡಲಾಗಿತ್ತು (ಯೆಹೋ. 18:1; 1 ಸಮು. 1:3 ನೋಡಿರಿ).
\f* ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು
\f +
\fr 78:60
\fq ನಿವಾಸಸ್ಥಾನವನ್ನು
\ft ಅಥವಾ ಗುಡಾರವನ್ನು.
\f* ತ್ಯಜಿಸಿಬಿಟ್ಟು,
\q
\v 61 ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ,
\q ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
\s5
\q
\v 62 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ,
\q ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
\q
\v 63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು;
\q ಅವರ ಕನ್ಯೆಯರು ವಿವಾಹವಾಗಲಿಲ್ಲ.
\s5
\q
\v 64 ಯಾಜಕರು ಕತ್ತಿಯಿಂದ ಸಂಹೃತರಾದರು;
\q ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
\q
\v 65 ಆ ವರೆಗೆ ನಿದ್ರಿಸುವವನಂತೆಯೂ,
\q ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,
\q
\v 66 ತನ್ನ ಶತ್ರುಗಳನ್ನು ಸದೆಬಡಿದು,
\q ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.
\s5
\q
\v 67 ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ,
\q ಎಫ್ರಾಯೀಮ್ ಕುಲವನ್ನು ತ್ಯಜಿಸಿ,
\q
\v 68 ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
\q
\v 69 ಆತನು ತನ್ನ ಆಲಯವನ್ನು ಪರ್ವತದಂತೆಯೂ,
\q ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.
\s5
\q
\v 70 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು,
\q ಕುರಿಹಟ್ಟಿಯಿಂದ ತೆಗೆದುಕೊಂಡು,
\q
\v 71 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ,
\q ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ
\q ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
\q
\v 72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ,
\q ತನ್ನ ಹಸ್ತಕೌಶಲ್ಯದಿಂದ ನಡೆಸಿದನು.
\s5
\c 79
\ms ಮ್ಲೇಚ್ಛರಿಗೆ ದಂಡನೆಯಾಗಬೇಕೆಂಬ ಪ್ರಾರ್ಥನೆ
\d ಆಸಾಫನ ಕೀರ್ತನೆ.
\r (ಕೀರ್ತ. 74)
\b
\q
\v 1 ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು,
\q ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು;
\q ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
\q
\v 2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು;
\q ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
\q
\v 3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು;
\q ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
\s5
\q
\v 4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು;
\q ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
\q
\v 5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ?
\q ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
\s5
\q
\v 6 ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ,
\q ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ,
\q ನಿನ್ನ ರೌದ್ರವನ್ನು ಸುರಿದುಬಿಡು.
\q
\v 7 ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು,
\q ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
\s5
\q
\v 8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ.
\q ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ;
\q ಬಹಳವಾಗಿ ಕುಗ್ಗಿಹೋಗಿದ್ದೇವೆ.
\q
\v 9 ನಮ್ಮನ್ನು ರಕ್ಷಿಸುವ ದೇವರೇ,
\q ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು;
\q ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
\s5
\q
\v 10 ಮ್ಲೇಚ್ಛರು, <<ಅವರ ದೇವರು ಎಲ್ಲಿ?>> ಎಂದು ಕೇಳುವುದೇಕೆ?
\q ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು,
\q ಜನಾಂಗಗಳಿಗೆ ಗೊತ್ತಾಗಲಿ.
\q
\v 11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ;
\q ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
\s5
\q
\v 12 ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ,
\q ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
\q
\v 13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ,
\q ಸದಾ ನಿನ್ನನ್ನು ಸ್ತುತಿಸುವವರಾಗಿ,
\q ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
\s5
\c 80
\ms ದ್ರಾಕ್ಷಾಲತೆಯಂತಿರುವ ಇಸ್ರಾಯೇಲರನ್ನು ಪುನಃ ಸ್ಥಾಪಿಸಬೇಕೆಂಬ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ.
\b
\q
\v 1 ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು;
\q ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ,
\q ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
\q
\v 2 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ,
\q ನಿನ್ನ ಶೌರ್ಯವನ್ನು ತೋರ್ಪಡಿಸು;
\q ಬಂದು ನಮಗೆ ಜಯಪ್ರದನಾಗು.
\q
\v 3 ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.
\q ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
\s5
\q
\v 4 ಸೇನಾಧೀಶ್ವರನಾದ ಯೆಹೋವ ದೇವರೇ,
\q ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
\q
\v 5 ರೋದನವೇ ಅವರ ಆಹಾರವಾಗುವಂತೆಯೂ,
\q ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
\q
\v 6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ,
\q ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
\s5
\q
\v 7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.
\q ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
\q
\v 8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು,
\q ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
\s5
\q
\v 9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ,
\q ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
\q
\v 10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು.
\q ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
\q
\v 11 ಅದರ ಕೊಂಬೆಗಳು ಸಮುದ್ರದವರೆಗೂ,
\q ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
\s5
\q
\v 12 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ?
\q ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
\q
\v 13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ;
\q ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
\s5
\q
\v 14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು;
\q ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
\q
\v 15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
\q
\v 16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ.
\q ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
\s5
\q
\v 17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ,
\q ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು,
\q ನಿನ್ನ ಹಸ್ತದಿಂದ ಹಿಡಿದಿರು.
\q
\v 18 ಆಗ ನಾವು ನಿನ್ನಿಂದ ಅಗಲುವುದಿಲ್ಲ.
\q ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
\s5
\q
\v 19 ಸೇನಾಧೀಶ್ವರನಾದ ಯೆಹೋವ ದೇವರೇ,
\q ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು;
\q ಆಗ ಉದ್ಧಾರವಾಗುವೆವು.
\s5
\c 81
\ms ದೇವಭಕ್ತಿಯ ವಿಷಯದಲ್ಲಿ ಪ್ರೋತ್ಸಾಹ ಮತ್ತು ಎಚ್ಚರಿಕೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ.
\r (ಧರ್ಮೋ. 32; ಕೀರ್ತ. 8; 84)
\b
\q
\v 1 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ;
\q ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
\q
\v 2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ;
\q ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
\q
\v 3 ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
\s5
\q
\v 4 ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ;
\q ಇದು ಯಾಕೋಬ್ಯರ ದೇವರು ವಿಧಿಸಿದ್ದು.
\q
\v 5 ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ,
\q ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು.
\q ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
\s5
\q
\v 6 <<ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು;
\q ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
\q
\v 7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು;
\q ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು;
\q ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು.
\qs ಸೆಲಾ.
\qs*
\b
\s5
\q
\v 8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ,
\q ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
\q
\v 9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು;
\q ಪರರ ದೇವತೆಗಳನ್ನು ಪೂಜಿಸಬಾರದು;
\q
\v 10 ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು;
\q ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
\s5
\q
\v 11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ;
\q ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
\q
\v 12 ಆದುದರಿಂದ ಇವರು ಹಟಮಾರಿಗಳು;
\q ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
\s5
\q
\v 13 ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ,
\q ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
\q
\v 14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ,
\q ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
\s5
\q
\v 15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು;
\q ಅವರಾದರೋ ಸದಾಕಾಲವೂ ಇರುವರು.
\q
\v 16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು,
\q ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು>> ಎಂಬುದೇ.
\s5
\c 82
\s ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
\d ಆಸಾಫನ ಕೀರ್ತನೆ.
\r (ಕೀರ್ತ. 58)
\b
\q
\v 1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,
\q ದೇವರುಗಳೆಂದು
\f +
\fr 82:1
\fq ದೇವರುಗಳೆಂದು
\ft ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು.
\f* ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
\q
\v 2 <<ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,
\q ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
\qs ಸೆಲಾ.
\qs*
\b
\s5
\q
\v 3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
\q ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
\q
\v 4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.>>
\s5
\q
\v 5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.
\q ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
\s5
\q
\v 6 <<ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
\q
\v 7 ಆದರೂ ನರರಂತೆ ಸತ್ತೇ ಹೋಗುವಿರಿ,
\q ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ>>
\q ಎಂದು ನಾನು ಹೇಳಿದೆನು.
\s5
\q
\v 8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.
\q ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
\s5
\c 83
\ms ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ
\d ಆಸಾಫನ ಕೀರ್ತನೆ; ಗೀತೆ.
\b
\q
\v 1 ದೇವರೇ, ಸುಮ್ಮನಿರಬೇಡ!
\q ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
\q
\v 2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ;
\q ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.
\s5
\q
\v 3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ,
\q ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
\q
\v 4 <<ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ,
\q ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ,
\q ಅವರನ್ನು ಸಂಹರಿಸೋಣ>> ಅಂದುಕೊಳ್ಳುತ್ತಾರೆ.
\q
\v 5 ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು,
\q ಮೋವಾಬ್ಯರು, ಹಗ್ರೀಯರು,
\s5
\q
\v 6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು,
\q ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
\q
\v 7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ,
\q ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
\s5
\q
\v 8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು,
\q ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ.
\qs ಸೆಲಾ
\qs*
\s5
\q
\v 9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು.
\q ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ,
\q ಇವರಿಗೂ ಮಾಡು.
\q
\v 10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು,
\q ಹೊಲದ ಗೊಬ್ಬರವಾಗಿ ಹೋದರಲ್ಲಾ.
\s5
\q
\v 11 ಓರೇಬ್ ಮತ್ತು ಜೇಬ್ ಎಂಬವರ ಗತಿಯು,
\q ಇವರ ಶ್ರೀಮಂತರಿಗೂ ಸಂಭವಿಸಲಿ;
\q ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
\q
\v 12 ಅವರು <<ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ>>
\q ಅಂದುಕೊಳ್ಳುತ್ತಾರಲ್ಲಾ.
\s5
\q
\v 13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ,
\q ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
\q
\v 14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ,
\q ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
\q
\v 15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು;
\q ತುಫಾನಿನಿಂದ ಅವರನ್ನು ಕಳವಳಗೊಳಿಸು.
\s5
\q
\v 16 ನಾಚಿಕೆಯು ಅವರ ಮುಖವನ್ನು ಕವಿಯಲಿ.
\q ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
\q
\v 17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ;
\q ಅಪಮಾನದಿಂದ ನಾಶವಾಗಲಿ.
\s5
\q
\v 18 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ
\q ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
\s5
\c 84
\ms ದೇವಾಲಯದ ಯಾತ್ರಿಕರ ಕೀರ್ತನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ.
\r (ಕೀರ್ತ. 8; 81)
\b
\q
\v 1 ಸೇನಾಧೀಶ್ವರನಾದ ಯೆಹೋವನೇ,
\q ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
\q
\v 2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು,
\q ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು.
\q ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ
\q ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
\s5
\q
\v 3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ,
\q ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ,
\q ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
\q
\v 4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು.
\q ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ.
\qs ಸೆಲಾ
\qs*
\s5
\q
\v 5 ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು.
\q ಅವರು ಯಾತ್ರಿಕರಾಗಿ,
\q
\v 6 ಕಣ್ಣೀರಿನ ತಗ್ಗನ್ನು ದಾಟುವಾಗ,
\q ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ.
\q ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
\s5
\q
\v 7 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ,
\q ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
\q
\v 8 <<ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು;
\q ಯಾಕೋಬ್ಯರ ದೇವರೇ, ಕಿವಿಗೊಡು>> ಅನ್ನುತ್ತಾರೆ.
\qs ಸೆಲಾ
\qs*
\q
\v 9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು;
\q ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
\q
\v 10 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು,
\q ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ.
\q ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ
\q ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
\s5
\q
\v 11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ.
\q ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು;
\q ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
\q
\v 12 ಸೇನಾಧೀಶ್ವರನಾದ ಯೆಹೋವನೇ,
\q ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
\s5
\c 85
\ms ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
\b
\q
\v 1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ;
\q ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
\q
\v 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ;
\q ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ.
\qs ಸೆಲಾ
\qs*
\s5
\q
\v 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ;
\q ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
\q
\v 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು;
\q ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
\q
\v 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ?
\q ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
\s5
\q
\v 6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ,
\q ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
\q
\v 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು;
\q ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
\s5
\q
\v 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ.
\q ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ.
\q ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
\q
\v 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ.
\q ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
\s5
\q
\v 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು;
\q ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
\q
\v 11 ಸತ್ಯತೆಯು ಭೂಮಿಯಿಂದ ಹುಟ್ಟುವುದು;
\q ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
\s5
\q
\v 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು;
\q ನಮ್ಮ ದೇಶವು ತನ್ನ ಬೆಳೆ ಕೊಡುವುದು.
\q
\v 13 ನೀತಿಯು ಆತನ ಮುಂದೆ ಹೋಗುತ್ತಾ,
\q ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
\s5
\c 86
\ms ಶತ್ರಪೀಡಿತನ ವಿಜ್ಞಾಪನೆ
\d ದಾವೀದನ ಕೀರ್ತನೆ.
\r (ಕೀರ್ತ. 25)
\b
\q
\v 1 ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು;
\q ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
\q
\v 2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು;
\q ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
\s5
\q
\v 3 ಕರ್ತನೇ, ಕರುಣಿಸು;
\q ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
\q
\v 4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು;
\q ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
\s5
\q
\v 5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,
\q ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
\q
\v 6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು;
\q ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
\q
\v 7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ,
\q ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
\s5
\q
\v 8 ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ;
\q ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
\q
\v 9 ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು,
\q ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
\s5
\q
\v 10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು;
\q ನೀನೊಬ್ಬನೇ ದೇವರು.
\q
\v 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
\q ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು.
\q ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
\q
\v 12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
\q ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
\s5
\q
\v 13 ನೀನು ಬಹಳವಾಗಿ ಕನಿಕರಿಸಿ,
\q ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
\q
\v 14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;
\q ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ.
\q ಅವರು ನಿನ್ನನ್ನು ಲಕ್ಷಿಸುವುದಿಲ್ಲ.
\s5
\q
\v 15 ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು;
\q ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
\q
\v 16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು;
\q ನಿನ್ನ ಸೇವಕಳ ಮಗನನ್ನು ರಕ್ಷಿಸು.
\q
\v 17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು;
\q ನನ್ನ ಶತ್ರುಗಳು ನೋಡಿ, <<ಯೆಹೋವನು ಸಹಾಯಕನಾಗಿ
\q ಇವನನ್ನು ಸಂತೈಸಿದ್ದಾನೆ>> ಎಂದು ನಾಚಿಕೆಪಡಲಿ.
\s5
\c 87
\ms ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ
\d ಕೋರಹೀಯರ ಕೀರ್ತನೆ; ಗೀತೆ.
\r (ಯೆಶಾ. 2:2-4; 19:19-24)
\b
\q
\v 1 ಯೆಹೋವನು ಸ್ಥಾಪಿಸಿದ ಪಟ್ಟಣವು
\q ಪರಿಶುದ್ಧ ಪರ್ವತದ ಮೇಲಿದೆ.
\q
\v 2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,
\q ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
\q
\v 3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
\s5
\q
\v 4 <<ರಹಬ
\f +
\fr 87:4
\fq ರಹಬ
\ft ಅಥವಾ ಐಗುಪ್ತ.
\f* , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.
\q ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು>> ಎಂಬುದೇ.
\s5
\q
\v 5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;
\q ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
\q
\v 6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,
\q <<ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು>> ಎಂದು ಬರೆಯುವನು.
\qs ಸೆಲಾ
\qs*
\s5
\q
\v 7 ಇವರು ಹಾಡುತ್ತಾ, ಕುಣಿಯುತ್ತಾ,
\q <<ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ>> ಎಂದು ಹೇಳುವರು.
\s5
\c 88
\s ದುಃಖತಪ್ತನ ಮೊರೆ
\d ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ.
\r (ಪ್ರಲಾ. 3)
\b
\q
\v 1 ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ,
\q ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
\q
\v 2 ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ;
\q ಕಿವಿಗೊಟ್ಟು ನನ್ನ ಕೂಗನ್ನು ಕೇಳು.
\s5
\q
\v 3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು;
\q ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.
\q
\v 4 ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ;
\q ನಿತ್ರಾಣ ಮನುಷ್ಯನಂತಿದ್ದೇನೆ.
\s5
\q
\v 5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ;
\q ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ.
\q ಹತರಾದವರು ನಿನ್ನ ಪರಿಪಾಲನೆ ಇಲ್ಲದವರು;
\q ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.
\q
\v 6 ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ,
\q ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
\s5
\q
\v 7 ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ;
\q ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ.
\qs ಸೆಲಾ
\qs*
\s5
\q
\v 8 ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು,
\q ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ;
\q ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.
\s5
\q
\v 9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ.
\q ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
\q
\v 10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ?
\q ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ?
\qs ಸೆಲಾ
\qs*
\s5
\q
\v 11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ,
\q ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
\q
\v 12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ,
\q ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
\s5
\q
\v 13 ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
\q ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
\q
\v 14 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ?
\q ನಿನ್ನ ಮುಖವನ್ನು ಮರೆಮಾಡಿದ್ದೇಕೆ?
\s5
\q
\v 15 ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ,
\q ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
\q
\v 16 ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ;
\q ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.
\s5
\q
\v 17 ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ;
\q ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.
\q
\v 18 ನನ್ನ ಆಪ್ತಮಿತ್ರರನ್ನು ದೂರಮಾಡಿದಿ;
\q ಅಂಧಕಾರವೇ ನನ್ನ ಒಡನಾಡಿ.
\s5
\c 89
\ms ಸರ್ವಶಕ್ತನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಪ್ರಾರ್ಥನೆ
\d ಜೇರಹ ಕುಲದವನಾದ ಏತಾನನ ಪದ್ಯ.
\r (2 ಸಮು. 7; ಕೀರ್ತ. 44; 80)
\b
\q
\v 1 ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು;
\q ನನ್ನ ಬಾಯಿ ನಿನ್ನ ಸತ್ಯವನ್ನು,
\q ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
\q
\v 2 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು;
\q ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
\b
\s5
\q
\v 3 ನೀನು ನುಡಿದದ್ದೇನೆಂದರೆ, <<ನಾನು ಆರಿಸಿಕೊಂಡ
\q ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
\q
\v 4 <ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು,
\q ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು
\q ಎಂದು ಹೇಳಿದ್ದೇನೆ> >> ಎಂಬುವುದೇ.
\qs ಸೆಲಾ
\qs*
\s5
\q
\v 5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು;
\q ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
\q
\v 6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು?
\q ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
\s5
\q
\v 7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು;
\q ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
\q
\v 8 ಯೆಹೋವನೇ, ಸೇನಾಧೀಶ್ವರನಾದ ದೇವರೇ,
\q ನಿನಗೆ ಸಮಾನರು ಯಾರು?
\q ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
\s5
\q
\v 9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;
\q ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
\q
\v 10 ರಹಬನ್ನು
\f +
\fr 89:10
\fq ರಹಬನ್ನು
\ft ಪೌರಾಣಿಕ ಸಮುದ್ರ ದೈತ್ಯ ರಹಬನು ಯೋಬ. 9:13; 26:2; ಯೆಶಾ. 51:9 ರಲ್ಲಿ ಕೂಡ ಉಲ್ಲೇಖಿಸಲಾಗಿದೆ; 87:4 ರಲ್ಲಿ ಅದರ ಬಳಕೆಯು ಭಿನ್ನವಾಗಿದೆ, ಇಲ್ಲಿ ರಹಬ ಕಡಲ ಪೌರಾಣಿಕ ಸರ್ಪವನ್ನು ಸೂಚಿಸುತ್ತದೆ.
\f* ಛೇದಿಸಿ ಸಾಯಿಸಿದವನು ನೀನು;
\q ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
\s5
\q
\v 11 ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ;
\q ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
\q
\v 12 ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು.
\q ತಾಬೋರ್
\f +
\fr 89:12
\fq ತಾಬೋರ್
\ft ತಾಬೋರ್ ಗಲಿಲಾಯ ಸರೋವರದ ದಕ್ಷಿಣದ ತುದಿಯಲ್ಲಿರುವ ಪರ್ವತವಾಗಿದೆ, 555 ಮೀಟರ್ ಎತ್ತರವಿದೆ.
\f* , ಹೆರ್ಮೋನ್
\f +
\fr 89:12
\fq ಹೆರ್ಮೋನ್
\ft ಹೆರ್ಮೋನ್ ಪರ್ವತವು ಗಲಿಲಾಯ ಸರೋವರದಿಂದ 75 ಕಿಲೋಮೀಟರ್ (45 ಮೈಲುಗಳು) ಈಶಾನ್ಯ ಭಾಗದಲ್ಲಿದೆ, ಸುಮಾರು 2,750 ಮೀಟರ್ (8,940 ಅಡಿ) ಎತ್ತರವಿದೆ.
\f* ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
\s5
\q
\v 13 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು;
\q ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
\q
\v 14 ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು;
\q ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
\s5
\q
\v 15 ಉತ್ಸಾಹಧ್ವನಿಯನ್ನು
\f +
\fr 89:15
\fq ಉತ್ಸಾಹಧ್ವನಿಯನ್ನು
\ft ಅಂದರೆ ದೇವರನ್ನು ಆರಾಧಿಸುವಾಗ ಮಾಡುವ ಶಬ್ದ.
\f* ತಿಳಿದಿರುವ ಜನರು ಧನ್ಯರು;
\q ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
\q
\v 16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ;
\q ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
\s5
\q
\v 17 ಅವರು ಹಿಗ್ಗುವ ಬಲವು ನೀನೇ.
\q ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು
\f +
\fr 89:17
\fq ಕೊಂಬು
\ft ಅಂದರೆ ಬಲ.
\f* ಎತ್ತಲ್ಪಟ್ಟಿರುವುದು.
\q
\v 18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ;
\q ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
\b
\s5
\q
\v 19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ,
\q <<ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ;
\q ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
\q
\v 20 ನನ್ನ ಸೇವಕನಾದ ದಾವೀದನನ್ನು ಕಂಡು,
\q ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
\q
\v 21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು;
\q ನನ್ನ ಭುಜವು ಅವನನ್ನು ಬಲಪಡಿಸುವುದು.
\q
\v 22 ವೈರಿಯ ಕುತಂತ್ರವು ಅವನಲ್ಲಿ ಸಾಗದು;
\q ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
\q
\v 23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು;
\q ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
\s5
\q
\v 24 ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು;
\q ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
\q
\v 25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
\q
\v 26 ಅವನು ನನಗೆ, <ನನ್ನ ತಂದೆಯೂ, ದೇವರೂ,
\q ಆಶ್ರಯದುರ್ಗವೂ ನೀನೇ> ಎಂದು ಹೇಳುವನು.
\s5
\q
\v 27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ,
\q ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
\q
\v 28 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು;
\q ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
\q
\v 29 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು.
\q ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
\s5
\q
\v 30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು,
\q ನನ್ನ ಆಜ್ಞೆಗಳಲ್ಲಿ ನಡೆಯದೆ,
\q
\v 31 ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
\q
\v 32 ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು;
\q ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
\s5
\q
\v 33 ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ;
\q ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
\q
\v 34 ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ;
\q ನನ್ನ ಮಾತನ್ನು ಬದಲಿಸುವುದಿಲ್ಲ.
\s5
\q
\v 35 ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ;
\q ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
\q
\v 36 ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು;
\q ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
\q
\v 37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು.
\q ಪರಲೋಕದ ಸಾಕ್ಷಿ ಸತ್ಯವೇ ಸರಿ.>>
\qs ಸೆಲಾ.
\qs*
\b
\s5
\q
\v 38 ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ,
\q ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
\q
\v 39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ,
\q ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
\q
\v 40 ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
\s5
\q
\v 41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ;
\q ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
\q
\v 42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ;
\q ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
\q
\v 43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ;
\q ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
\s5
\q
\v 44 ಅವನ ವೈಭವವನ್ನು
\f +
\fr 89:44
\fq ವೈಭವವನ್ನು
\ft ಅಂದರೆ ರಾಜದಂಡ.
\f* ತಡೆದುಬಿಟ್ಟಿದ್ದೀ;
\q ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
\q
\v 45 ಅವನ ಯೌವನದ ದಿನಗಳನ್ನು ಬೇಗ ಮುಗಿಸಿ,
\q ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ.
\qs ಸೆಲಾ
\qs*
\s5
\q
\v 46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ?
\q ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
\q
\v 47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ,
\q ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
\q
\v 48 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ
\q ಚಿರಂಜೀವಿಯಾಗಿರುವವರು ಯಾರು?
\qs ಸೆಲಾ
\qs*
\s5
\q
\v 49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು,
\q ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
\q
\v 50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ;
\q ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
\q
\v 51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ,
\q ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
\b
\s5
\q
\v 52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
\s5
\c 90
\ms ಚತುರ್ಥ ಭಾಗ (90-106)
\s ಪಾಪಾತ್ಮರಿಗೆ ದೇವರ ದಯವೇ ಆಶ್ರಯ
\d ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
\r (ಧರ್ಮೋ. 32)
\b
\q
\v 1 ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
\q
\v 2 ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,
\q ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ,
\q ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
\s5
\q
\v 3 <<ಮನುಷ್ಯರೇ, ಸಾಯಿರಿ>> ಎಂದು ಆಜ್ಞಾಪಿಸಿ,
\q ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
\q
\v 4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ
\q ಗತಿಸಿಹೋದ ನಿನ್ನೆಯ ದಿನದಂತೆಯೂ,
\q ರಾತ್ರಿಯ ಜಾವದಂತೆಯೂ ಇವೆ.
\s5
\q
\v 5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ;
\q ಅವರು ನಿದ್ರೆಗೆ ಸಮಾನರೇ.
\q ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
\q
\v 6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ;
\q ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
\s5
\q
\v 7 ನಿನ್ನ ಕೋಪದಿಂದ ನಾವು ಇಲ್ಲವಾದೆವು;
\q ನಿನ್ನ ರೌದ್ರದಿಂದ ತಲ್ಲಣಗೊಂಡೆವು.
\q
\v 8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ,
\q ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
\s5
\q
\v 9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು;
\q ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
\q
\v 10 ನಮ್ಮ ಆಯುಷ್ಕಾಲವು
\f +
\fr 90:10
\fq ಆಯುಷ್ಕಾಲವು
\ft ಅಥವಾ ಪ್ರತಾಪ.
\f* ಎಪ್ಪತ್ತು ವರ್ಷ,
\q ಬಲ ಹೆಚ್ಚಿದರೆ ಎಂಭತ್ತು;
\q ಕಷ್ಟಸಂಕಟಗಳೇ ಅದರ ಆಡಂಬರ.
\q ಅದು ಬೇಗನೆ ಗತಿಸಿಹೋಗುತ್ತದೆ;
\q ನಾವು ಹಾರಿ ಹೋಗುತ್ತೇವೆ.
\s5
\q
\v 11 ನಿನ್ನ ಕೋಪದ ಬಲವನ್ನೂ,
\q ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
\q
\v 12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
\q ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
\q
\v 13 ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ;
\q ಎಷ್ಟರವರೆಗೆ ಕೋಪ ಮಾಡುವಿ?
\q ನಿನ್ನ ಸೇವಕರ ಮೇಲೆ ಕರುಣೆಯಿರಲಿ.
\s5
\q
\v 14 ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು;
\q ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
\q
\v 15 ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ,
\q ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
\q
\v 16 ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ,
\q ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
\s5
\q
\v 17 ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.
\q ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;
\q ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
\s5
\c 91
\ms ದೇವಾಶ್ರಿತನು ಸುರಕ್ಷಿತನು
\r (ವಿಮೋ. 23:20-26)
\q
\v 1 ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
\q ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
\q
\v 2 ನಾನು ಯೆಹೋವನಿಗೆ, <<ನೀನೇ ನನ್ನ ಶರಣನು, ನನ್ನ ದುರ್ಗವು,
\q ನಾನು ಭರವಸವಿಟ್ಟಿರುವ ನನ್ನ ದೇವರು>> ಎಂದು ಹೇಳುವೆನು.
\s5
\q
\v 3 ನನ್ನನ್ನು ಬೇಟೆಗಾರನ ಬಲೆಯಿಂದಲೂ,
\q ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
\q
\v 4 ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;
\q ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.
\q ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
\s5
\q
\v 5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,
\q ಹಗಲಲ್ಲಿ ಹಾರಿಬರುವ ಬಾಣಕ್ಕೂ,
\q
\v 6 ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
\q ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
\q
\v 7 ನಿನ್ನ ಮಗ್ಗುಲಲ್ಲಿ ಸಾವಿರ ಜನರು,
\q ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
\s5
\q
\v 8 ನೀನು ಅದನ್ನು ಕಣ್ಣಾರೆ ಕಂಡು,
\q ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
\q
\v 9 ಯೆಹೋವನೇ ನನ್ನ ಶರಣನು!
\q ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
\s5
\q
\v 10 ಯಾವ ಕೇಡೂ ನಿನಗೆ ಸಂಭವಿಸದು;
\q ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
\q
\v 11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ
\q ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
\s5
\q
\v 12 ನಿನ್ನ ಕಾಲು ಕಲ್ಲಿಗೆ ತಗಲದಂತೆ,
\q ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
\q
\v 13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ;
\q ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
\s5
\q
\v 14 ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು;
\q ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
\q
\v 15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು;
\q ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
\q
\v 16 ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು;
\q ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
\s5
\c 92
\ms ದೇವರ ನೀತಿಸಾಧನೆಗಳನ್ನು ಹೊಗಳುವುದು
\d ಕೀರ್ತನೆ; ಸಬ್ಬತ್ ದಿನದ ಗೀತೆ.
\b
\q
\v 1 ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
\q ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
\q
\v 2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
\q
\v 3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,
\q ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
\s5
\q
\v 4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;
\q ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
\q
\v 5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;
\q ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
\s5
\q
\v 6 ಪಶುಪ್ರಾಯನು ಅರಿಯನು;
\q ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
\q
\v 7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ,
\q ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
\s5
\q
\v 8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
\q
\v 9 ಯೆಹೋವನೇ, ಇಗೋ ನಿನ್ನ ಶತ್ರುಗಳು!
\q ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
\s5
\q
\v 10 ಆದರೆ ನನ್ನ ಕೊಂಬನ್ನು
\f +
\fr 92:10
\fq ಕೊಂಬನ್ನು
\ft ಅಥವಾ ಬಲ.
\f* ಕಾಡುಕೋಣದ ಕೊಂಬಿನಂತೆ
\f +
\fr 92:10
\fq ಕೊಂಬಿನಂತೆ
\ft ಅಥವಾ ಬಲ.
\f* ಎತ್ತಿದ್ದಿ;
\q
\f +
\fr 92:10
\ft ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ.
\f* ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
\q
\v 11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;
\q ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
\s5
\q
\v 12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;
\q ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
\q
\v 13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,
\q ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
\s5
\q
\v 14 ಮುಪ್ಪಿನಲ್ಲಿಯೂ ಫಲಿಸುವರು;
\q ಪುಷ್ಟಿಯಾಗಿದ್ದು ಶೋಭಿಸುವರು.
\q
\v 15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.
\q ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
\s5
\c 93
\ms ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
\r (ವಿಮೋ. 15; ಯೆಶಾ. 52:7; ಕೀರ್ತ. 96; 97; 99)
\b
\q
\v 1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
\q ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ,
\q ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ;
\q ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
\q
\v 2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;
\q ಯುಗಯುಗಾಂತರದಿಂದಲೂ ನೀನು ಇರುವಿ.
\s5
\q
\v 3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;
\q ನದಿಗಳು ಘೋಷಿಸುತ್ತವೆ.
\q
\v 4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,
\q ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
\s5
\q
\v 5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;
\q ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
\s5
\c 94
\ms ದೇವರ ಶಿಕ್ಷೆ ಮತ್ತು ರಕ್ಷಣೆಗೆ ಒಳಗಾದವನು ಧನ್ಯನು
\q
\v 1 ಯೆಹೋವನೇ, ಮುಯ್ಯಿತೀರಿಸುವ ದೇವರೇ,
\q ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
\f +
\fr 94:1
\fq ಕೋಪವನ್ನು ತೋರ್ಪಡಿಸು.
\ft ಅಥವಾ ಪ್ರಕಾಶಿಸು.
\f*
\q
\v 2 ಲೋಕದ ನ್ಯಾಯಾಧಿಪತಿಯೇ, ಏಳು;
\q ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
\s5
\q
\v 3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ,
\q ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
\q
\v 4 ಕೆಡುಕರೆಲ್ಲರು ಉಬ್ಬಿಕೊಂಡು,
\q ಅಹಂಕಾರವನ್ನು ಕಕ್ಕುತ್ತಾರೆ.
\s5
\q
\v 5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ;
\q ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
\q
\v 6 ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ;
\q ಅನಾಥರನ್ನು ಹತಮಾಡುತ್ತಾರೆ.
\q
\v 7 ಅವರು, <<ಯಾಹುವು ನೋಡುವುದೇ ಇಲ್ಲ;
\q ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ>> ಅನ್ನುತ್ತಾರೆ.
\s5
\q
\v 8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ;
\q ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
\q
\v 9 ಕಿವಿಮಾಡಿದವನು ಕೇಳನೋ?
\q ಕಣ್ಣುಕೊಟ್ಟವನು ನೋಡನೋ?
\s5
\q
\v 10 ಜನಾಂಗಗಳನ್ನು ಶಿಕ್ಷಿಸುವವನೂ,
\q ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
\q
\v 11 ಮನುಷ್ಯನ ಯೋಚನೆಗಳು, <<ಉಸಿರೇ>> ಎಂದು ಯೆಹೋವನು ತಿಳುಕೊಳ್ಳುತ್ತಾನೆ.
\s5
\q
\v 12 ಯಾಹುವೇ, ನೀನು ಯಾರನ್ನು ಶಿಕ್ಷಿಸಿ,
\q ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
\q
\v 13 ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ,
\q ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
\s5
\q
\v 14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ;
\q ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
\q
\v 15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು;
\q ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
\q
\v 16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು?
\q ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
\s5
\q
\v 17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
\q
\v 18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ,
\q ನಿನ್ನ ಕೃಪೆಯು ನನಗೆ ಆಧಾರವಾಯಿತು.
\q
\v 19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ,
\q ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
\s5
\q
\v 20 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ,
\q ನಿನಗೂ ಸಂಬಂಧವೇನು?
\q
\v 21 ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ;
\q ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
\s5
\q
\v 22 ಆದರೆ ಯೆಹೋವನು ನನ್ನ ದುರ್ಗವೂ,
\q ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
\q
\v 23 ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು;
\q ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು.
\q ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
\s5
\c 95
\ms ದೇವರನ್ನು ವಿಶ್ವಾಸದಿಂದ ಆರಾಧಿಸುವುದು
\r (ಕೀರ್ತ. 81; 96—100)
\q
\v 1 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
\q ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
\q
\v 2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
\q ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
\q
\v 3 ಯೆಹೋವನು ಮಹಾದೇವರೂ,
\q ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
\s5
\q
\v 4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
\q ಪರ್ವತಶಿಖರಗಳು ಆತನವೇ.
\q
\v 5 ಆತನೇ ಸಮುದ್ರವನ್ನು ನಿರ್ಮಿಸಿದವನು;
\q ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
\s5
\q
\v 6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
\q ಸಾಷ್ಟಾಂಗವೆರಗಿ ಆರಾಧಿಸೋಣ.
\q
\v 7 ಆತನು ನಮ್ಮ ದೇವರು;
\q ನಾವೋ ಆತನು ಪಾಲಿಸುವ ಪ್ರಜೆಯೂ,
\q ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
\q ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
\s5
\q
\v 8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ
\f +
\fr 95:8
\fq ಮೆರೀಬ
\ft ಅಂದರೆ ವಾಗ್ವಾದ.
\f* ,
\q ಮಸ್ಸಾದಲ್ಲಿ
\f +
\fr 95:8
\fq ಮಸ್ಸಾದಲ್ಲಿ
\ft ಅಂದರೆ ಪರೀಕ್ಷೆ, ವಿಮೋ. 17:1-17, ಅರಣ್ಯ. 20:1-13, ಧರ್ಮೋ. 6:16, 33:8.
\f* ಮಾಡಿದ ದಿನದಂತೆ,
\q ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
\q
\v 9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
\q ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
\s5
\q
\v 10 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
\q <<ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
\q ನನ್ನ ಆಜ್ಞೆಗಳಿಗೆ ವಿಧೇಯರಾಗದವರು
\f +
\fr 95:10
\fq ನನ್ನ ಆಜ್ಞೆಗಳಿಗೆ ವಿಧೇಯರಾಗದವರು
\ft ಅಥವಾ ನನ್ನ ಮಾರ್ಗವನ್ನು ತಿಳಿಯದವರು.
\f* >> ಎಂದು ಹೇಳಿದೆನು.
\q
\v 11 ಆದುದರಿಂದ ಇವರು, <<ನನ್ನ ವಿಶ್ರಾಂತಿಯಲ್ಲಿ ಸೇರಬಾರದು>> ಎಂದು
\q ಕೋಪಗೊಂಡು ಪ್ರಮಾಣಮಾಡಿದೆನು.
\s5
\c 96
\ms ರಾಜಾಧಿರಾಜನಾದ ಯೆಹೋವನ ಆಗಮನ
\r (1 ಪೂರ್ವ. 16:23-33)
\b
\q
\v 1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
\q ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
\q
\v 2 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
\q ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
\s5
\q
\v 3 ಜನಾಂಗಗಳಲ್ಲಿ ಆತನ ಘನತೆಯನ್ನೂ,
\q ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
\q
\v 4 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ;
\q ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
\s5
\q
\v 5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ;
\q ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
\q
\v 6 ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ,
\q ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
\s5
\q
\v 7 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ,
\q ಎಂದು ಹೇಳಿ ಆತನನ್ನು ಘನಪಡಿಸಿರಿ.
\q
\v 8 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ;
\q ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
\s5
\q
\v 9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ;
\q ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
\q
\v 10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
\q ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ;
\q ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು
\q ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
\s5
\q
\v 11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ;
\q ಭೂಲೋಕವು ಸಂತೋಷಿಸಲಿ;
\q ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
\q
\v 12 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ;
\q ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
\q
\v 13 ಆತನು ಬರುತ್ತಾನೆ;
\q ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ.
\q ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
\q ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
\s5
\c 97
\ms ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
\q
\v 1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
\q ಭೂಲೋಕವು ಸಂತೋಷಿಸಲಿ;
\q ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
\q
\v 2 ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;
\q ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ
\f +
\fr 97:2
\fq ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ
\ft ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.
\f* .
\s5
\q
\v 3 ಬೆಂಕಿಯು ಆತನ ಮುಂದೆ ಹೋಗಿ,
\q ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
\q
\v 4 ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;
\q ಭೂಮಿಯು ಅದನ್ನು ಕಂಡು ನಡುಗಿತು.
\q
\v 5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
\q ಪರ್ವತಗಳು ಮೇಣದಂತೆ ಕರಗಿಹೋದವು.
\s5
\q
\v 6 ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;
\q ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
\q
\v 7 ವಿಗ್ರಹಗಳಲ್ಲಿ ಹಿಗ್ಗುವವರೂ,
\q ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು;
\q
\f +
\fr 97:7
\ft ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ.
\f* ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
\q
\v 8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
\q ಚೀಯೋನ್ ಪಟ್ಟಣವು ಹರ್ಷಿಸಿತು;
\q ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
\s5
\q
\v 9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
\q ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
\q
\v 10
\f +
\fr 97:10
\ft ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ.
\f* ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
\q ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
\q ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
\q
\v 11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು
\f +
\fr 97:11
\fq ಪ್ರಕಾಶಿಸುವುದು
\ft ಅಥವಾ ಬಿತ್ತಲ್ಪಟ್ಟಿದೆ.
\f* ,
\q ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
\s5
\q
\v 12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;
\q ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
\f +
\fr 97:12
\fq ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
\ft ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.
\f*
\s5
\c 98
\ms ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು
\r (ಕೀರ್ತ. 67)
\q
\v 1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
\q ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ.
\q ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
\q
\v 2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ;
\q ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
\s5
\q
\v 3 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,
\q ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ.
\q ಭೂಲೋಕದ ಎಲ್ಲಾ ಕಡೆಯವರೂ,
\q ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
\q
\v 4 ಸಮಸ್ತ ಭೂನಿವಾಸಿಗಳೇ,
\q ಯೆಹೋವನಿಗೆ ಜಯಘೋಷಮಾಡಿರಿ;
\q ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
\s5
\q
\v 5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ;
\q ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
\q
\v 6 ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ,
\q ಯೆಹೋವರಾಜನಿಗೆ ಜಯಘೋಷಮಾಡಿರಿ.
\s5
\q
\v 7 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ,
\q ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
\q
\v 8 ನದಿಗಳು ಚಪ್ಪಾಳೆ ಹೊಡೆಯಲಿ;
\q ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
\q
\v 9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ;
\q ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
\q ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
\s5
\c 99
\ms ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು
\r (ಯೆಶಾ. 6)
\q
\v 1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
\q ಜನಾಂಗಗಳು ನಡುಗಲಿ.
\q ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;
\q ಭೂಮಿಯು ಕಂಪಿಸಲಿ.
\q
\v 2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು;
\q ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
\q
\v 3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ;
\q ಆತನು ಪರಿಶುದ್ಧನು.
\b
\s5
\q
\v 4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ
\f +
\fr 99:4
\fq ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ
\ft ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ.
\f* ;
\q ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ,
\q ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
\q
\v 5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
\q ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ.
\q ಆತನು ಪರಿಶುದ್ಧನು.
\b
\s5
\q
\v 6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,
\q ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ,
\q ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
\q
\v 7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;
\q ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
\s5
\q
\v 8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.
\q ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ,
\q ಕ್ಷಮಿಸುವ ದೇವರಾಗಿದ್ದಿ.
\q
\v 9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
\q ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ.
\q ನಮ್ಮ ಯೆಹೋವ ದೇವರು ಪರಿಶುದ್ಧನು.
\s5
\c 100
\ms ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
\d ಕೃತಜ್ಞತಾಯಜ್ಞ ಕೀರ್ತನೆ.
\r (ಕೀರ್ತ. 95)
\b
\q
\v 1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
\q
\v 2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
\q ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
\s5
\q
\v 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
\q ನಮ್ಮನ್ನು ಉಂಟುಮಾಡಿದವನು ಆತನೇ;
\q ನಾವು ಆತನವರು, ಆತನ ಪ್ರಜೆಯೂ,
\q ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
\s5
\q
\v 4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
\q ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
\q ಆತನ ಉಪಕಾರಗಳನ್ನು ಸ್ಮರಿಸಿರಿ;
\q ಆತನ ನಾಮವನ್ನು ಕೊಂಡಾಡಿರಿ.
\q
\v 5 ಯೆಹೋವನು ಒಳ್ಳೆಯವನು;
\q ಆತನ ಕೃಪೆಯು ಯುಗಯುಗಕ್ಕೂ,
\q ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
\s5
\c 101
\ms ರಾಜಶ್ರೇಷ್ಠನ ಪ್ರತಿಜ್ಞೆ
\d ದಾವೀದನ ಕೀರ್ತನೆ.
\r (ಕೀರ್ತ. 15; 24)
\b
\q
\v 1 ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;
\q ಯೆಹೋವನೇ, ನಿನ್ನನ್ನು ಕೊಂಡಾಡುವೆನು.
\s5
\q
\v 2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;
\q ನನಗೆ ಯಾವಾಗ ದರ್ಶನಕೊಡುವಿ?
\q ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
\q
\v 3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;
\q ದುರಾಚಾರವನ್ನು ಹಗೆಮಾಡುತ್ತೇನೆ,
\q ಅದರ ಗೊಡವೆಯೇ ನನಗೆ ಬೇಡ.
\s5
\q
\v 4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;
\q ಕೆಟ್ಟತನವನ್ನು ಅರಿಯದಿರುವೆನು.
\q
\v 5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;
\q ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
\q
\v 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;
\q ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,
\q ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
\s5
\q
\v 7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;
\q ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
\q
\v 8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,
\q ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
\s5
\c 102
\ms ದುಃಖಿತನಾದ ದೀನನ ಪ್ರಾರ್ಥನೆ
\q
\v 1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು;
\q ನನ್ನ ಕೂಗು ನಿನಗೆ ಮುಟ್ಟಲಿ.
\q
\v 2 ನನ್ನ ಕಷ್ಟದಲ್ಲಿ ವಿಮುಖನಾಗಬೇಡ;
\q ನನ್ನ ಮೊರೆಗೆ ಕಿವಿಗೊಡು;
\q ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
\s5
\q
\v 3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ;
\q ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
\q
\v 4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ;
\q ಊಟವನ್ನು ಮರೆತೆನು.
\s5
\q
\v 5 ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
\q
\v 6 ಅಡವಿಯ ಬಕಪಕ್ಷಿಯಂತಿದ್ದೇನೆ;
\f +
\fr 102:6
\fq ಬಕಪಕ್ಷಿ;
\ft ಅಥವಾ ರಣಹದ್ದು.
\f*
\q ಹಾಳೂರಿನ ಗೂಬೆಯಂತಿದ್ದೇನೆ.
\s5
\q
\v 7 ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ,
\q ಒಂಟಿಯಾದ ಪಕ್ಷಿಯಂತಿದ್ದೇನೆ.
\q
\v 8 ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ;
\q ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ,
\q ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.
\s5
\q
\v 9 ಬೂದಿಯೇ ನನಗೆ ಆಹಾರವಾಯಿತು;
\q ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.
\q
\v 10 ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ,
\q ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!
\s5
\q
\v 11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ;
\q ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.
\b
\q
\v 12 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ;
\q ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.
\s5
\q
\v 13 ನೀನು ಎದ್ದು ಚೀಯೋನನ್ನು ಕರುಣಿಸುವಿ.
\q ಅದಕ್ಕೆ ಕೃಪೆತೋರಿಸುವ ಸಮಯ ಇದೇ;
\q ನಿಯಮಿತ ಕಾಲವು ಬಂದಿದೆ.
\q
\v 14 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ,
\q ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ;
\q ಅದರ ಧೂಳಿಗೆ ಅವರು ಮರಗುತ್ತಾರೆ.
\q
\v 15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,
\q
\v 16 ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,
\s5
\q
\v 17 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ,
\q ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
\q
\v 18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ,
\q ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
\s5
\q
\v 19 <<ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ;
\q ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.
\q
\v 20 ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,
\s5
\q
\v 21 ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ,
\q ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.
\q
\v 22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು
\q ಇವರೊಡನೆ ಯೆಹೋವನನ್ನು ಸೇವಿಸುತ್ತವೆ>> ಎಂದು ಹೇಳುವುದು.
\b
\s5
\q
\v 23 ಆತನು ಯೌವನಪ್ರಾಯದಲ್ಲಿಯೇ
\f +
\fr 102:23
\fq ಯೌವನಪ್ರಾಯದಲ್ಲಿಯೇ
\ft ಅಥವಾ ದಾರಿಯಲ್ಲಿಯೇ.
\f* ನನ್ನ ಬಲವನ್ನು ಕುಂದಿಸಿದ್ದಾನೆ;
\q
\v 24 ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ.
\q ಆದುದರಿಂದ, <<ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ;
\q ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
\s5
\q
\v 25 ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ;
\q ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
\q
\v 26 ಅವು ನಾಶವಾಗುವವು;
\q ಆದರೆ ನೀನು ಶಾಶ್ವತವಾಗಿರುತ್ತಿ.
\q ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
\q ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
\q
\v 27 ನೀನಾದರೋ ಏಕರೀತಿಯಾಗಿರುತ್ತಿ;
\q ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.
\s5
\q
\v 28 ನಿನ್ನ ಸೇವಕರ ಮಕ್ಕಳು ಬಾಳುವರು.
\q ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು>> ಎಂದು ಮೊರೆಯಿಡುತ್ತೇನೆ.
\s5
\c 103
\ms ದೇವರ ಕೃಪೆಯನ್ನು ಕೊಂಡಾಡುವುದು
\d ದಾವೀದನ ಕೀರ್ತನೆ.
\b
\q
\v 1 ನನ್ನ ಮನವೇ, ಯೆಹೋವನನ್ನು ಕೊಂಡಾಡು;
\q ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
\q
\v 2 ನನ್ನ ಮನವೇ, ಯೆಹೋವನನ್ನು ಕೊಂಡಾಡು;
\q ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
\s5
\q
\v 3 ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,
\q ಸಮಸ್ತ ರೋಗಗಳನ್ನು ವಾಸಿಮಾಡುವವನೂ,
\q
\v 4 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,
\q
\f +
\fr 103:4
\ft ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ.
\f* ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
\q
\v 5 ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ;
\q ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
\s5
\q
\v 6 ಯೆಹೋವನು ನೀತಿಯನ್ನು ಸಾಧಿಸುವವನಾಗಿ,
\q ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
\q
\v 7 ಆತನು ಮೋಶೆಗೆ ತನ್ನ ಮಾರ್ಗವನ್ನೂ,
\q ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
\q
\v 8 ಯೆಹೋವನು ಕನಿಕರವೂ, ದಯೆಯೂ,
\q ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
\s5
\q
\v 9 ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ;
\q ನಿತ್ಯವೂ ಕೋಪಿಸುವವನಲ್ಲ.
\q
\v 10 ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;
\q ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
\s5
\q
\v 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
\q ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
\q
\v 12 ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,
\q ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
\q
\v 13 ತಂದೆಯು ಮಕ್ಕಳನ್ನು ಕನಿಕರಿಸುವಂತೆ,
\q ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
\s5
\q
\v 14 ನಾವು ರೂಪಗೊಂಡಿದ್ದನ್ನು ಆತನು ಬಲ್ಲನು;
\q ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
\q
\v 15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ;
\q ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
\q
\v 16 ಗಾಳಿ ಬಡಿಯುತ್ತಲೇ ಅದು ಹೋಗುವುದು;
\q ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
\s5
\q
\v 17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,
\q ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
\q
\v 18 ಆತನ ನಿಬಂಧನೆಗಳನ್ನು ಕೈಕೊಂಡು,
\q ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
\q ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
\q
\v 19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ;
\q ಆತನು ಸಮಸ್ತವನ್ನೂ ಆಳುತ್ತಾನೆ.
\s5
\q
\v 20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ
\q ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ,
\q ಯೆಹೋವನನ್ನು ಕೊಂಡಾಡಿರಿ.
\q
\v 21 ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ,
\q ಯೆಹೋವನನ್ನು ಕೊಂಡಾಡಿರಿ.
\q
\v 22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ,
\q ಯೆಹೋವನನ್ನು ಕೊಂಡಾಡಿರಿ.
\q ನನ್ನ ಮನವೇ, ಯೆಹೋವನನ್ನು ಕೊಂಡಾಡು.
\s5
\c 104
\ms ಯೆಹೋವನ ಸೃಷ್ಟಿಯ ಮಹತ್ವ
\r (ಆದಿ. 1)
\q
\v 1 ನನ್ನ ಮನವೇ, ಯೆಹೋವನನ್ನು ಕೊಂಡಾಡು.
\q ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು;
\q ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
\q
\v 2 ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ;
\q ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.
\q
\v 3 ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು;
\q ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ;
\q ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
\s5
\q
\v 4
\f +
\fr 104:4
\ft ಅಥವಾ ಆತನು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿ ಮಾಡಿಕೊಳ್ಳುತ್ತಾನೆ.
\f* ಗಾಳಿಯನ್ನು ನಿನ್ನ ದೂತರನ್ನಾಗಿಯೂ,
\q ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
\q
\v 5 ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ
\q ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
\s5
\q
\v 6 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ;
\q ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
\q
\v 7 ನೀನು ಗದರಿಸಲು ಅದು ಓಡಿಹೋಯಿತು;
\q ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,
\s5
\q
\v 8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
\q
\v 9 ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ,
\q ನೀನು ಮೇರೆಗಳನ್ನು ಗೊತ್ತುಮಾಡಿದಿ.
\s5
\q
\v 10 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ;
\q ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.
\q
\v 11 ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ;
\q ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
\q
\v 12 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
\s5
\q
\v 13 ನೀನು ನಿನ್ನ ಮೇಲಂತಸ್ತುಗಳಿಂದ
\f +
\fr 104:13
\fq ಮೇಲಂತಸ್ತುಗಳಿಂದ
\ft ಅಥವಾ ಆಕಾಶದಿಂದ.
\f* ಪರ್ವತಗಳಿಗೆ ನೀರು ಕೊಡುತ್ತೀ;
\q ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.
\q
\v 14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ;
\q ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ.
\q ಅವರು ಭೂವ್ಯವಸಾಯಮಾಡಿ ಆಹಾರವನ್ನು,
\q
\v 15 ಹೃದಯಾನಂದಕರವಾದ ದ್ರಾಕ್ಷಾರಸವನ್ನು,
\q ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು,
\q ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
\s5
\q
\v 16 ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ
\q ಬೇಕಾದಷ್ಟು ಜಲವಿರುತ್ತದೆ.
\q
\v 17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ;
\q ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
\q
\v 18 ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ,
\q ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
\s5
\q
\v 19 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ;
\q ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
\q
\v 20 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ.
\q ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.
\s5
\q
\v 21 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ;
\q ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
\q
\v 22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
\s5
\q
\v 23 ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ;
\q ಸಾಯಂಕಾಲದವರೆಗೆ ದುಡಿಯುತ್ತಾನೆ.
\q
\v 24 ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ.
\q ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ;
\q ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
\s5
\q
\v 25 ಇಗೋ, ಬಹುವಿಶಾಲವಾದ ಸಮುದ್ರವು!
\q ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
\q
\v 26 ಅದರಲ್ಲಿ ಹಡಗುಗಳು ಸಂಚರಿಸುತ್ತವೆ
\q ನೀನು ಉಂಟುಮಾಡಿದ
\f +
\fr 104:26
\ft ಕೀರ್ತನೇ. 74:14 ಅನ್ನು ನೋಡಿರಿ
\f* ಲಿವ್ಯಾತಾನವು ಅದರಲ್ಲಿ ಆಡುತ್ತದೆ.
\s5
\q
\v 27 ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.
\q
\v 28 ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ;
\q ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
\s5
\q
\v 29 ನೀನು ವಿಮುಖನಾಗಲು ತಲ್ಲಣಿಸುತ್ತವೆ;
\q ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
\q
\v 30 ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ.
\q ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
\s5
\q
\v 31 ಯೆಹೋವನ ಮಹಿಮೆಯು ಸದಾಕಾಲವೂ ಇರಲಿ;
\q ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.
\q
\v 32 ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ;
\q ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.
\s5
\q
\v 33 ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು;
\q ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.
\q
\v 34 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ;
\q ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
\s5
\q
\v 35 ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ;
\q ದುಷ್ಟರು ನಿರ್ಮೂಲವಾಗಲಿ.
\q ನನ್ನ ಮನವೇ, ಯೆಹೋವನನ್ನು ಕೊಂಡಾಡು;
\q ಯೆಹೋವನಿಗೆ ಸ್ತೋತ್ರ.
\s5
\c 105
\ms ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
\r (ಕೀರ್ತ. 78; 106)
\q
\v 1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;
\q ಆತನ ನಾಮದ ಮಹತ್ವವನ್ನು ವರ್ಣಿಸಿರಿ;
\q ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
\q
\v 2 ಆತನನ್ನು ಕೀರ್ತಿಸಿರಿ, ಭಜಿಸಿರಿ;
\q ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
\q
\v 3 ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ;
\q ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
\s5
\q
\v 4 ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;
\q ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
\q
\v 5 ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ,
\q ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,
\q
\v 6 ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ,
\q ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
\s5
\q
\v 7 ಯೆಹೋವನೆಂಬಾತನೇ ನಮ್ಮ ದೇವರು;
\q ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
\q
\v 8 ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ,
\q ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
\s5
\q
\v 9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು;
\q ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
\q
\v 10 ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
\q
\v 11 ಅವರಲ್ಲಿ ಸ್ವಲ್ಪ ಜನರು
\q ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
\s5
\q
\v 12 ಆತನು, <<ನಿಮಗೆ ಈ ದೇಶವನ್ನು ಕೊಡುವೆನು;
\q ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು>> ಎಂದು ಹೇಳಿದನು.
\q
\v 13 ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
\s5
\q
\v 14 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ.
\q ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,
\q
\v 15 <<ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು,
\q ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು>> ಎಂದು ಹೇಳಿದನು.
\s5
\q
\v 16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ,
\q
\f +
\fr 105:16
\ft ಅಥವಾ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.
\f* ಆಹಾರವನ್ನು ನಾಶಮಾಡಿಬಿಟ್ಟನು.
\q
\v 17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು;
\q ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
\s5
\q
\v 18 ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು;
\q ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.
\q
\v 19 ಅವನು ತನ್ನ ಮಾತು ನೆರವೇರುವ ತನಕ
\q ಯೆಹೋವನ ವಾಕ್ಯದಿಂದ ಶೋಧಿತನಾದನು.
\s5
\q
\v 20 ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು;
\q ಜನಾಧಿಪತಿಯು ಅವನನ್ನು ಬಿಡಿಸಿದನು.
\q
\v 21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ,
\q ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
\q
\v 22 ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ,
\q ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.
\q
\v 23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು;
\q ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.
\s5
\q
\v 24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ,
\q ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.
\q
\v 25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ,
\q ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
\q
\v 26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ,
\q ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.
\q
\v 27 ಅವರು ಹಾಮನ ದೇಶದವರ ಮಧ್ಯದಲ್ಲಿ,
\q ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.
\s5
\q
\v 28 ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು.
\q ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
\q
\v 29 ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.
\q
\v 30 ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು;
\q ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
\s5
\q
\v 31 ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ,
\q ವಿಷದ ಹುಳಗಳೂ, ಹೇನುಗಳೂ ಉಂಟಾದವು.
\q
\v 32 ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,
\q
\v 33 ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ,
\q ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
\s5
\q
\v 34 ಆತನು ಆಜ್ಞಾಪಿಸಲು ಮಿಡತೆಗಳೂ,
\q ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,
\q
\v 35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು,
\q ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.
\q
\v 36 ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ,
\q ಚೊಚ್ಚಲ ಮಕ್ಕಳನ್ನು ಸಂಹರಿಸಿದನು.
\s5
\q
\v 37 ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು;
\q ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
\q
\v 38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ,
\q ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.
\q
\v 39 ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು,
\q ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.
\s5
\q
\v 40 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು;
\q ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.
\q
\v 41 ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು,
\q ಅರಣ್ಯದಲ್ಲಿ ನದಿಯಾಗಿ ಹರಿಯಿತು.
\q
\v 42 ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ,
\q ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
\s5
\q
\v 43 ತನ್ನ ಪ್ರಜೆಯು ಉಲ್ಲಾಸದಿಂದಲೂ,
\q ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
\q
\v 44 ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು;
\q ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.
\q
\v 45 ಅವರು ತನ್ನ ವಿಧಿಗಳನ್ನು ಕೈಕೊಂಡು,
\q ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.
\q ಯೆಹೋವನಿಗೆ ಸ್ತೋತ್ರ!
\s5
\c 106
\ms ಯೆಹೋವನ ಕ್ಷಮಾಯಾಚನೆ
\r (ಕೀರ್ತ. 78; 105)
\q
\v 1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
\q ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
\q
\v 2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು?
\q ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
\s5
\q
\v 3 ಯಾವಾಗಲೂ ನ್ಯಾಯವನ್ನು ಕಾಪಾಡುವವರೂ,
\q ನೀತಿಯನ್ನು ಪಾಲಿಸುವವರೂ ಧನ್ಯರು.
\q
\v 4 ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು,
\q ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು.
\q ನನ್ನನ್ನು ರಕ್ಷಿಸಲಿಕ್ಕೆ ಬಾ,
\q
\v 5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ,
\q ನಾನೂ ಅವರೊಂದಿಗೆ ಸಂತೋಷಿಸುವೆನು;
\q ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
\s5
\q
\v 6 ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು;
\q ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
\q
\v 7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ;
\q ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ.
\q ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
\s5
\q
\v 8 ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ,
\q ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
\q
\v 9 ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು;
\q ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
\s5
\q
\v 10 ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು;
\q ವೈರಿಯ ಹಸ್ತದಿಂದ ಬಿಡಿಸಿದನು.
\q
\v 11 ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು;
\q ಒಬ್ಬನೂ ಉಳಿಯಲಿಲ್ಲ.
\q
\v 12 ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
\s5
\q
\v 13 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು,
\q ಆತನ ನಡೆಸುವಿಕೆಗೆ ಕಾದಿರದೆ,
\q
\v 14 ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ,
\q ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
\q
\v 15 ಆತನು ಅವರ ಆಶೆಯನ್ನು ಪೂರೈಸಿದರೂ,
\q ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
\s5
\q
\v 16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ,
\q ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
\q
\v 17 ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು;
\q ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
\q
\v 18 ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು;
\q ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
\s5
\q
\v 19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ,
\q ಅದಕ್ಕೆ ಅಡ್ಡಬಿದ್ದರು.
\q
\v 20 ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು,
\q ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
\q
\v 21 ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
\s5
\q
\v 22 ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ,
\q ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
\q
\v 23 ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು,
\q ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ,
\q ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
\s5
\q
\v 24 ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು,
\q ಆತನ ಮಾತನ್ನು ನಂಬಲಿಲ್ಲ.
\q
\v 25 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ,
\q ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
\s5
\q
\v 26 ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
\q
\v 27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ,
\q ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
\s5
\q
\v 28 ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ,
\q ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
\q
\v 29 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು;
\q ಅವರಲ್ಲಿ ವ್ಯಾಧಿಯುಂಟಾಯಿತು.
\s5
\q
\v 30 ಫೀನೆಹಾಸನು ಎದ್ದು ಅವರನ್ನು ದಂಡಿಸಲು,
\q ಆ ವ್ಯಾಧಿಯು ನಿಂತುಹೋಯಿತು.
\q
\v 31 ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
\s5
\q
\v 32 ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು.
\q ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
\q
\v 33 ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ,
\q ಮೋಶೆ ದುಡುಕಿ ಮಾತನಾಡಿದನು.
\q
\v 34 ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ,
\q ಯೆಹೋವನ ಆಜ್ಞೆಗೆ ಅವಿಧೇಯರಾಗಿ,
\q
\v 35 ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
\q
\v 36 ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
\s5
\q
\v 37 ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
\q
\v 38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ,
\q ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು;
\q ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
\q
\v 39 ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು.
\q ದುರಾಚಾರಗಳಿಂದ ದೇವದ್ರೋಹಿಗಳಾದರು.
\s5
\q
\v 40 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು;
\q ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
\q
\v 41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು.
\q ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
\s5
\q
\v 42 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
\q
\v 43 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ,
\q ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು;
\q ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
\s5
\q
\v 44 ಆದರೆ ಆತನು ಕಷ್ಟದಲ್ಲಿದ್ದ,
\q ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
\q
\v 45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು,
\q ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
\q
\v 46 ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
\b
\s5
\q
\v 47 ಯೆಹೋವನೇ, ನಮ್ಮ ದೇವರೇ, ರಕ್ಷಿಸು;
\q ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು.
\q ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು;
\q ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
\b
\q
\v 48 ಇಸ್ರಾಯೇಲ್ ದೇವರಾದ ಯೆಹೋವನಿಗೆ,
\q ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ;
\q ಸರ್ವಜನರೂ <<ಆಮೆನ್>> ಎನ್ನಲಿ.
\q ಯೆಹೋವನಿಗೆ ಸ್ತೋತ್ರ!
\s5
\c 107
\ms ಪಂಚಮ ಭಾಗ (107-150)
\s ವಿಮುಕ್ತರ ಕೊಂಡಾಟ
\q
\v 1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
\q ಆತನು ಒಳ್ಳೆಯವನು.
\q ಆತನ ಕೃಪೆಯು ಶಾಶ್ವತವಾಗಿರುವುದು.
\q
\v 2 ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
\q
\v 3 ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ,
\q ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
\b
\s5
\q
\v 4 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ,
\q ದಾರಿತಪ್ಪಿ ಅಲೆಯುವವರಾಗಿ,
\q ಜನವಿರುವ ಊರನ್ನು ಕಾಣದೆ,
\q
\v 5 ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
\q
\v 6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
\q ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
\q
\v 7 ಜನವಿರುವ ಊರನ್ನು ಸೇರುವಂತೆ,
\q ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
\s5
\q
\v 8 ಅವರು ಯೆಹೋವನ ಕೃಪೆಗೋಸ್ಕರವೂ,
\q ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
\q ಆತನನ್ನು ಕೊಂಡಾಡಲಿ.
\q
\v 9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ,
\q ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
\b
\q
\v 10 ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ,
\q ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
\s5
\q
\v 11 ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು,
\q ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
\q
\v 12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು;
\q ನಿರಾಶ್ರಯರಾಗಿ ಬಿದ್ದುಹೋದರು.
\q
\v 13 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
\q ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
\s5
\q
\v 14 ಆತನು ಅವರ ಬಂಧನಗಳನ್ನು ತೆಗೆದುಹಾಕಿ,
\q ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
\q
\v 15 ಅವರು ಯೆಹೋವನ ಕೃಪೆಗೋಸ್ಕರವೂ,
\q ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
\q ಆತನನ್ನು ಕೊಂಡಾಡಲಿ.
\q
\v 16 ಆತನು ತಾಮ್ರದ ಕದಗಳನ್ನು ಒಡೆದು,
\q ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
\b
\s5
\q
\v 17 ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
\q
\v 18 ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
\q
\v 19 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
\q ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
\s5
\q
\v 20 ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ,
\q ಅವರನ್ನು ಗುಣಪಡಿಸಿದನು;
\q ಸಮಾಧಿಗೆ ಸೇರದಂತೆ ಮಾಡಿದನು.
\q
\v 21 ಅವರು ಯೆಹೋವನ ಕೃಪೆಗೋಸ್ಕರವೂ,
\q ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
\q ಆತನನ್ನು ಕೊಂಡಾಡಲಿ.
\q
\v 22 ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ,
\q ಉತ್ಸಾಹಧ್ವನಿಮಾಡುತ್ತಾ
\q ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
\b
\s5
\q
\v 23 ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ,
\q ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
\q
\v 24 ಯೆಹೋವನ ಮಹತ್ಕಾರ್ಯಗಳನ್ನೂ,
\q ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
\s5
\q
\v 25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ,
\q ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
\q
\v 26 ಜನರು
\f +
\fr 107:26
\fq ಜನರು
\ft ಅಥವಾ ನಾವಿಕರು.
\f* ಆಕಾಶಕ್ಕೆ ಏರುತ್ತಲೂ,
\q ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
\q
\v 27 ಅವರು ದಿಕ್ಕುತೋರದವರಾಗಿ ಸುತ್ತುತ್ತಾ,
\q ಕುಡುಕರಂತೆ ಹೊಯ್ದಾಡುತ್ತಿದ್ದರು.
\s5
\q
\v 28 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
\q ಆತನು ಅವರನ್ನು ಕಷ್ಟದಿಂದ ಹೊರತಂದನು.
\q
\v 29 ಆತನು ಬಿರುಗಾಳಿಯನ್ನು ಶಾಂತಪಡಿಸಿದನು;
\q ತೆರೆಗಳು ನಿಂತವು.
\q
\v 30 ಸಮುದ್ರವು ಶಾಂತವಾದುದರಿಂದ,
\q ಹಡಗಿನವರು ಸಂತೋಷಪಟ್ಟರು,
\q ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
\s5
\q
\v 31 ಅವರು ಯೆಹೋವನ ಕೃಪೆಗೋಸ್ಕರವೂ
\q ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ
\q ಆತನನ್ನು ಕೊಂಡಾಡಲಿ.
\q
\v 32 ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ;
\q ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
\b
\s5
\q
\v 33 ಆತನು ನಿವಾಸಿಗಳ ದುಷ್ಟತನಕ್ಕಾಗಿ
\q ನದಿಗಳನ್ನು ಅರಣ್ಯವಾಗುವಂತೆಯೂ,
\q
\v 34 ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ,
\q ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
\q
\v 35 ಅರಣ್ಯವನ್ನು ಕೆರೆಯಾಗಿಯೂ,
\q ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
\s5
\q
\v 36 ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು;
\q ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
\q
\v 37 ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು,
\q ಆದಾಯವನ್ನು ಕೂಡಿಸಿಕೊಂಡರು.
\q
\v 38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು.
\q ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
\s5
\q
\v 39 ಅವರು ಕೇಡು ತೊಂದರೆಗಳಿಂದಲೂ,
\q ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
\q
\v 40 ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ,
\q ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
\s5
\q
\v 41 ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ,
\q ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
\q
\v 42 ಯಥಾರ್ಥರು ಇದನ್ನು ನೋಡಿ ಹಿಗ್ಗುವರು;
\q ಕೆಡುಕುಬಾಯಿ ಮುಚ್ಚಿಹೋಗುವುದು.
\q
\v 43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ,
\q ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
\s5
\c 108
\ms ಜಯದ ವಾಗ್ದಾನ ನೆರವೇರಬೇಕೆಂಬ ಪ್ರಾರ್ಥನೆ
\d ದಾವೀದನ ಕೀರ್ತನೆ.
\b
\q
\v 1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ;
\q ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
\q
\v 2 ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ.
\q ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
\s5
\q
\v 3 ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;
\q ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
\q
\v 4 ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ,
\q ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
\s5
\q
\v 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
\q ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
\q
\v 6 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು,
\q ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
\s5
\q
\v 7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ.
\q ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು.
\q ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
\q
\v 8 ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು.
\q ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.
\q ನನ್ನ ರಾಜದಂಡವು ಯೆಹೂದ ಕುಲವೇ.
\s5
\q
\v 9 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ;
\q ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ.
\q ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
\q
\v 10 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು?
\q ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
\s5
\q
\v 11 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!
\q ದೇವರೇ, ನಮ್ಮನ್ನು ಕೈಬಿಟ್ಟಿಯಾ?
\q
\v 12 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು.
\q ಮನುಷ್ಯರ ಸಹಾಯವು ವ್ಯರ್ಥ.
\q
\v 13 ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು;
\q ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
\s5
\c 109
\ms ರಕ್ಷಣೆಗಾಗಿ ಭಕ್ತನ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\r (ಯಾಜ. 26; ಧರ್ಮೋ. 28; ಕೀರ್ತ. 35; 69; ಮತ್ತಾ. 5:38-44)
\b
\q
\v 1 ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
\q
\v 2 ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ.
\q ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
\q
\v 3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು,
\q ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
\s5
\q
\v 4 ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ;
\q ನಾನಾದರೋ ನಿನಗೆ ಮೊರೆಯಿಡುತ್ತೇನೆ.
\q
\v 5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ;
\q ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
\s5
\q
\v 6 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು;
\q ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
\q
\v 7 ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ;
\q ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.
\s5
\q
\v 8 ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ;
\q ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
\q
\v 9 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
\q
\v 10 ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು,
\q ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
\s5
\q
\v 11 ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ;
\q ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
\q
\v 12 ಅವನಿಗೆ ಯಾರೂ ಕೃಪೆತೋರಿಸದಿರಲಿ,
\q ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
\q
\v 13 ಅವನ ಸಂತತಿಯು ನಿರ್ಮೂಲವಾಗಲಿ;
\q ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
\s5
\q
\v 14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ;
\q ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
\q
\v 15 ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ.
\q ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
\q
\v 16 ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು,
\q ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
\s5
\q
\v 17 ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ!
\q ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!
\q
\v 18 ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ,
\q ಅದು ನೀರಿನಂತೆ ಅವನ ಅಂತರಂಗದಲ್ಲಿಯೂ,
\q ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
\s5
\q
\v 19 ಶಾಪವೇ ಅವನ ಹೊದಿಕೆಯಂತೆಯೂ,
\q ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.
\q
\v 20 ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ
\q ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
\s5
\q
\v 21 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ;
\q ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.
\q
\v 22 ನಾನು ಬಡವನೂ, ದೀನನೂ ಆಗಿದ್ದೇನಲ್ಲಾ!
\q ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.
\q
\v 23 ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ;
\q ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
\s5
\q
\v 24 ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು;
\q ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
\q
\v 25 ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ;
\q ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.
\s5
\q
\v 26 ಯೆಹೋವನೇ, ನನ್ನ ದೇವರೇ, ಸಹಾಯಮಾಡು;
\q ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.
\q
\v 27 ಆಗ ಅವರು ಇದು ನಿನ್ನ ಕೈಕೆಲಸವೆಂದೂ,
\q ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.
\s5
\q
\v 28 ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ.
\q ಅವರು ಎದ್ದು ಅಪಮಾನ ಹೊಂದುವರು.
\q ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
\q
\v 29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ;
\q ನಾಚಿಕೆಯೇ ಅವರ ಹೊದಿಕೆಯಾಗಲಿ.
\s5
\q
\v 30 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು;
\q ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.
\q
\v 31 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು,
\q ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
\s5
\c 110
\ms ಯೆಹೋವನಿಂದ ಆರಿಸಲ್ಪಟ್ಟ ಚೀಯೋನಿನ ಅರಸ
\d ದಾವೀದನ ಕೀರ್ತನೆ.
\r (ಕೀರ್ತ. 2; 21)
\b
\q
\v 1 ಯೆಹೋವನು ನನ್ನ ಒಡೆಯನಿಗೆ,
\q <<ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ,
\q ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು>> ಎಂದು ನುಡಿದನು.
\s5
\q
\v 2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು
\q ಚೀಯೋನಿನ ಹೊರಗೂ ಹಬ್ಬಿಸುವನು;
\q ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
\q
\v 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ,
\q ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು.
\q ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು,
\q ಉದಯಕಾಲದ ಇಬ್ಬನಿಯಂತಿರುವರು.
\s5
\q
\v 4 <<ನೀನು ಸದಾಕಾಲವೂ
\f +
\fr 110:4
\ft ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ.
\f* ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ>> ಎಂದು
\q ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ;
\q ಪಶ್ಚಾತ್ತಾಪಡುವುದಿಲ್ಲ.
\s5
\q
\v 5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ
\q ರಾಜರನ್ನು ಖಂಡಿಸುವನು.
\q
\v 6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ,
\q ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ,
\q ಹೆಣಗಳಿಂದ ಅದನ್ನು ತುಂಬಿಸುವನು.
\s5
\q
\v 7 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
\s5
\c 111
\ms ದೇವಸ್ತುತಿ
\r (ಕೀರ್ತ. 112)
\q
\v 1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು;
\q ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ,
\q ಮನಃಪೂರ್ವಕವಾಗಿ ಕೀರ್ತಿಸುವೆನು.
\q
\v 2 ಯೆಹೋವನ ಕೃತ್ಯಗಳು ಮಹತ್ತಾದವುಗಳು;
\q ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
\q
\v 3 ಆತನ ಕಾರ್ಯವು ಘನ, ಮಾನಗಳುಳ್ಳದ್ದು;
\q ಆತನ ನೀತಿಯು ಸದಾಕಾಲವೂ ಇರುವುದು.
\s5
\q
\v 4 ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ.
\q ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
\q
\v 5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ;
\q ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
\q
\v 6 ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ
\q ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
\s5
\q
\v 7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ;
\q ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
\q
\v 8 ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು.
\q ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
\q
\v 9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ;
\q ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ;
\q ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
\s5
\q
\v 10 ಯೆಹೋವನ ಭಯವೇ ಜ್ಞಾನಕ್ಕೆ ಮೂಲ;
\q ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
\q ಆತನ ಸ್ತುತಿಯು ನಿರಂತರವಾದದ್ದು.
\s5
\c 112
\ms ಭಕ್ತರ ಧನ್ಯತೆ
\r (ಕೀರ್ತ. 111)
\q
\v 1 ಯೆಹೋವನಿಗೆ ಸ್ತೋತ್ರ!
\q ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
\q ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
\q
\v 2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು;
\q ನೀತಿವಂತನ ವಂಶವು ಶುಭಹೊಂದುವುದು.
\s5
\q
\v 3 ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು;
\q ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
\q
\v 4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು;
\q ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
\q
\v 5 ದಯಾಳುವಾಗಿ ಧನಸಹಾಯ ಮಾಡುವವನೂ,
\q ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
\s5
\q
\v 6 ಅವನು ಎಂದಿಗೂ ಕದಲುವುದಿಲ್ಲ;
\q ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
\q
\v 7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;
\q ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,
\q ಅವನ ಮನಸ್ಸು ಸ್ಥಿರವಾಗಿರುವುದು.
\s5
\q
\v 8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ
\q ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
\q
\v 9 ಬಡವರಿಗೆ ಉದಾರವಾಗಿ ಕೊಡುತ್ತಾನೆ;
\q ಅವನ ನೀತಿಯ ಫಲವು ಸದಾಕಾಲವೂ ಇರುವುದು.
\q
\f +
\fr 112:9
\ft ಅಥವಾ ಅವನು ಬಲಿಷ್ಠನಾಗುವನು.
\f* ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
\s5
\q
\v 10 ದುಷ್ಟನು ನೋಡಿ ವ್ಯಥೆಪಡುವನು;
\q ಅವನು ಹಲ್ಲುಕಡಿಯುತ್ತಾ ನಾಶವಾಗುವನು.
\q ದುಷ್ಟರ ನಿರೀಕ್ಷೆಯು ಭಂಗವಾಗುವುದು.
\s5
\c 113
\ms ಯೆಹೋವನನ್ನು ಸ್ತುತಿಸುವುದು
\q
\v 1 ಯೆಹೋವನಿಗೆ ಸ್ತೋತ್ರ!
\q ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
\q ಯೆಹೋವನ ನಾಮವನ್ನು ಸ್ತುತಿಸಿರಿ.
\q
\v 2 ಈಗಿನಿಂದ ಯುಗಯುಗಕ್ಕೂ,
\q ಯೆಹೋವನ ನಾಮವು ಕೀರ್ತಿಸಲ್ಪಡಲಿ.
\s5
\q
\v 3 ಯೆಹೋವನ ನಾಮವು ಪೂರ್ವದಿಂದ,
\q ಪಶ್ಚಿಮದವರೆಗೂ ಸ್ತುತಿಹೊಂದಲಿ.
\q
\v 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು;
\q ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
\s5
\q
\v 5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು?
\q ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
\q
\v 6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
\s5
\q
\v 7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ,
\q ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
\q
\v 8 ಪ್ರಭುಗಳ ಜೊತೆಯಲ್ಲಿ,
\q ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
\s5
\q
\v 9 ಬಂಜೆಯು ಮಕ್ಕಳೊಂದಿಗೆ,
\q ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
\q ಯೆಹೋವನಿಗೆ ಸ್ತೋತ್ರ!
\s5
\c 114
\ms ಇಸ್ರಾಯೇಲರ ರಕ್ಷಕನ ಮಹತ್ವ
\q
\v 1 ಇಸ್ರಾಯೇಲರು ಐಗುಪ್ತ ದೇಶವನ್ನೂ,
\q ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
\q
\v 2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ,
\q ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
\s5
\q
\v 3 ಸಮುದ್ರವು ಕಂಡು ಓಡಿಹೋಯಿತು;
\q ಯೊರ್ದನ್ ಹೊಳೆಯು ಹಿಂದಿರುಗಿತು.
\q
\v 4 ಪರ್ವತಗಳು ಟಗರುಗಳಂತೆಯೂ,
\q ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
\s5
\q
\v 5 ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ?
\q ಯೊರ್ದನೇ, ಏಕೆ ಹಿಂದಿರುಗುತ್ತೀ?
\q
\v 6 ಪರ್ವತಗಳೇ, ನೀವು ಟಗರುಗಳಂತೆಯೂ,
\q ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
\q
\v 7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ,
\q ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
\s5
\q
\v 8 ಆತನು ಬಂಡೆಯನ್ನು ಕೆರೆಯನ್ನಾಗಿಯೂ,
\q ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.
\s5
\c 115
\ms ಯೆಹೋವನೊಬ್ಬನೇ ರಕ್ಷಕನು
\d ದಾವೀದನ ಕೀರ್ತನೆ.
\b
\q
\v 1 ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ
\q ನಿನ್ನ ಹೆಸರನ್ನೇ ಘನಪಡಿಸು.
\q
\v 2 <<ಅವರ ದೇವರು ಎಲ್ಲಿದ್ದಾನೆ?>> ಎಂದು ಅನ್ಯರು ಏಕೆ ಹೇಳಬೇಕು?
\s5
\q
\v 3 ನಮ್ಮ ದೇವರು ಪರಲೋಕದಲ್ಲಿದ್ದಾನೆ;
\q ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
\q
\v 4 ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ;
\q ಅವು ಮನುಷ್ಯರ ಕೈಕೆಲಸವಷ್ಟೇ.
\s5
\q
\v 5 ಅವು ಬಾಯಿದ್ದರೂ ಮಾತನಾಡುವುದಿಲ್ಲ;
\q ಕಣ್ಣಿದ್ದರೂ ನೋಡುವುದಿಲ್ಲ.
\q
\v 6 ಕಿವಿಯಿದ್ದರೂ ಕೇಳುವುದಿಲ್ಲ;
\q ಮೂಗಿದ್ದರೂ ಮೂಸುವುದಿಲ್ಲ.
\s5
\q
\v 7 ಕೈಯುಂಟು ಮುಟ್ಟುವುದಿಲ್ಲ;
\q ಕಾಲುಂಟು ನಡೆಯುವುದಿಲ್ಲ;
\q ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
\q
\v 8 ಅವುಗಳನ್ನು ಮಾಡುವವರೂ,
\q ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
\s5
\q
\v 9 ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ.
\q ಅವರ ಸಹಾಯಕನು, ಗುರಾಣಿಯು ಆತನೇ.
\q
\v 10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ.
\q ಅವರ ಸಹಾಯಕನು, ಗುರಾಣಿಯು ಆತನೇ.
\q
\v 11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ.
\q ಅವರ ಸಹಾಯಕನು, ಗುರಾಣಿಯು ಆತನೇ.
\s5
\q
\v 12 ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ;
\q ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
\q
\v 13 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು;
\q ಆರೋನನ ಮನೆತನದವರನ್ನು ಆಶೀರ್ವದಿಸುವನು.
\q ತನ್ನ ಭಕ್ತರನ್ನು ಆಶೀರ್ವದಿಸುವನು.
\q
\v 14 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
\s5
\q
\v 15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ.
\q ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
\q
\v 16 ಪರಲೋಕವು ಯೆಹೋವನದು;
\q ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
\s5
\q
\v 17 ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ;
\q ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
\q
\v 18 ನಾವೋ ಇಂದಿನಿಂದ ಸದಾಕಾಲವೂ
\q ಯೆಹೋವನನ್ನು ಕೊಂಡಾಡುವೆವು.
\q ಯೆಹೋವನಿಗೆ ಸ್ತೋತ್ರ!
\s5
\c 116
\ms ಕೃತಜ್ಞತಾಯಜ್ಞ ಕೀರ್ತನೆ
\r (ಯೆಶಾ. 38)
\q
\v 1 ಯೆಹೋವನನ್ನು ಪ್ರೀತಿಸುತ್ತೇನೆ;
\q ಆತನು ನನ್ನ ಮೊರೆಯನ್ನು ಕೇಳುವನು.
\q
\v 2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ;
\q ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
\s5
\q
\v 3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು;
\q ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು.
\q ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.
\q
\v 4 ಆಗ ಯೆಹೋವನ ಹೆಸರನ್ನು ಹೇಳಿ,
\q <<ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು>> ಎಂದು ಪ್ರಾರ್ಥಿಸಿದೆನು.
\s5
\q
\v 5 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ;
\q ನಮ್ಮ ದೇವರು ಕನಿಕರವುಳ್ಳವನು.
\q
\v 6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು;
\q ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
\s5
\q
\v 7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು.
\q ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
\q
\v 8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
\s5
\q
\v 9 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ,
\q ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
\q
\v 10 <<ನಾನು ಬಹಳವಾಗಿ ಕುಗ್ಗಿಹೋದೆ>> ಎಂದು ಹೇಳಿದಾಗಲೂ,
\q
\v 11 <<ಮನುಷ್ಯರೆಲ್ಲಾ ಸುಳ್ಳುಗಾರರು>> ಎಂದು ಭ್ರಾಂತಿಯಿಂದ ಹೇಳಿದಾಗಲೂ,
\q ಭರವಸವುಳ್ಳವನಾಗಿಯೇ ಇದ್ದೆನು.
\s5
\q
\v 12 ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
\q
\v 13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು,
\q ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
\q
\v 14 ಯೆಹೋವನಿಗೆ ಹೊತ್ತ ಹರಕೆಗಳನ್ನು,
\q ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
\q
\v 15 ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
\s5
\q
\v 16 ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು;
\q ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ.
\q ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
\q
\v 17 ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು;
\q ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
\s5
\q
\v 18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ,
\q ಯೆಹೋವನ ಮಂದಿರದ ಅಂಗಳಗಳಲ್ಲಿ,
\q
\v 19 ಆತನಿಗೆ ಹೊತ್ತ ಹರಕೆಗಳನ್ನು,
\q ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
\q ಯೆಹೋವನಿಗೆ ಸ್ತೋತ್ರ!
\s5
\c 117
\ms ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
\r (ಕೀರ್ತ. 66)
\q
\v 1 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ;
\q ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
\q
\v 2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ;
\q ಯೆಹೋವನ ಸತ್ಯತೆಯು ಸದಾ ಇರುವುದು.
\q ಯೆಹೋವನಿಗೆ ಸ್ತೋತ್ರ!
\s5
\c 118
\ms ಹಬ್ಬದ ಗೀತೆ
\r (ನೆಹೆ. 8:14-18; ಯೆಶಾ. 12)
\q
\v 1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
\q ಆತನು ಒಳ್ಳೆಯವನು.
\q ಆತನ ಕೃಪೆಯು ಶಾಶ್ವತವಾಗಿದೆ.
\q
\v 2 ಇಸ್ರಾಯೇಲರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ.
\s5
\q
\v 3 ಆರೋನನ ಮನೆತನದವರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ.
\q
\v 4 ಯೆಹೋವನ ಭಕ್ತರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ.
\s5
\q
\v 5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
\q ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
\q
\v 6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು.
\q ಮನುಷ್ಯನು ನನಗೆ ಏನು ಮಾಡಾನು?
\q
\v 7 ಯೆಹೋವನು ನನಗೆ ಇದ್ದಾನೆ;
\q ಆತನೇ ನನಗೆ ಸಹಾಯಕನು;
\q ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
\s5
\q
\v 8 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
\q ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
\q
\v 9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
\q ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
\s5
\q
\v 10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು;
\q ಯೆಹೋವನ ಬಲದಿಂದ
\f +
\fr 118:10
\fq ಬಲದಿಂದ
\ft ಅಥವಾ ಹೆಸರಿನಿಂದ.
\f* ಅವರನ್ನು ಸಂಹರಿಸುವೆನು.
\q
\v 11 ಅವರು ನನ್ನನ್ನು ಸುತ್ತಲೂ ಮುತ್ತಿದರು;
\q ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
\q
\v 12 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ;
\q ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು.
\q ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
\s5
\q
\v 13 ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ;
\q ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
\q
\v 14 ನನ್ನ ಬಲವು, ಕೀರ್ತನೆಯು ಯೆಹೋವನೇ;
\q ಆತನಿಂದ ನನಗೆ ರಕ್ಷಣೆಯುಂಟಾಯಿತು.
\s5
\q
\v 15 ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ;
\q ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
\q
\v 16 ಯೆಹೋವನ ಬಲಗೈ ಉನ್ನತವಾಗಿದೆ;
\q ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
\s5
\q
\v 17 ನಾನು ಸಾಯುವುದಿಲ್ಲ;
\q ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
\q
\v 18 ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು;
\q ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
\s5
\q
\v 19 ನೀತಿದ್ವಾರಗಳನ್ನು
\f +
\fr 118:19
\fq ನೀತಿದ್ವಾರಗಳನ್ನು
\ft ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ.
\f* ತೆರೆಯಿರಿ;
\q ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
\q
\v 20 ಇದು ಯೆಹೋವನ ಮಂದಿರದ್ವಾರವು;
\q ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
\q
\v 21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ,
\q ನಿನ್ನನ್ನು ಕೊಂಡಾಡುತ್ತೇನೆ.
\s5
\q
\v 22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ,
\q ಮುಖ್ಯವಾದ ಮೂಲೆಗಲ್ಲಾಯಿತು;
\q
\v 23 ಇದು ಯೆಹೋವನಿಂದಲೇ ಆಯಿತು;
\q ನಮಗೆ ಆಶ್ಚರ್ಯವಾಗಿ ತೋರುತ್ತದೆ.
\s5
\q
\v 24 ಈ ದಿನವು ಯೆಹೋವನಿಂದಲೇ ನೇಮಕವಾದದ್ದು;
\q ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
\q
\v 25 ಯೆಹೋವನೇ, ದಯವಿಟ್ಟು ರಕ್ಷಿಸು;
\q ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
\s5
\q
\v 26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;
\q ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
\q
\v 27 ಯೆಹೋವನೇ ದೇವರು;
\q ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ.
\q ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ
\q ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
\q
\v 28 ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
\q ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
\s5
\q
\v 29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
\q ಆತನು ಒಳ್ಳೆಯವನು.
\q ಆತನ ಕೃಪೆಯು ಶಾಶ್ವತವಾದದ್ದು.
\b
\s5
\c 119
\ms ಧರ್ಮಶಾಸ್ತ್ರದ ಮಹತ್ವವನ್ನು ವರ್ಣಿಸುವ ಇಬ್ರಿಯ ಅಕ್ಷರ ಕ್ರಮಾನುಸಾರವಾದ ಕೀರ್ತನೆ
\r (ಕೀರ್ತ. 19:7-11)
\d ಆಲೆಫ್.
\s ಧರ್ಮಶಾಸ್ತ್ರದ ಅನುಕರಣೆ
\q
\v 1 ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,
\q ಸದಾಚಾರಿಗಳಾಗಿ ನಡೆಯುವವರು ಧನ್ಯರು.
\q
\v 2 ಆತನ ಕಟ್ಟಳೆಗಳನ್ನು ಕೈಕೊಂಡು,
\q ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
\s5
\q
\v 3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ,
\q ಅನ್ಯಾಯ ಮಾಡುವುದೇ ಇಲ್ಲ.
\q
\v 4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು,
\q ನೀನೇ ಆಜ್ಞಾಪಿಸಿರುತ್ತಿ.
\s5
\q
\v 5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ,
\q ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
\q
\v 6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ,
\q ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
\s5
\q
\v 7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ,
\q ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
\q
\v 8 ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು,
\q ಸಂಪೂರ್ಣವಾಗಿ ಕೈಬಿಡಬೇಡ.
\b
\d ಬೇತ್.
\s ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
\s5
\q
\v 9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
\q ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
\q
\v 10 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
\q ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
\s5
\q
\v 11 ನಿನಗೆ ವಿರುದ್ಧವಾಗಿ ಪಾಪಮಾಡದಂತೆ,
\q ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
\q
\v 12 ಸ್ತುತಿಪಾತ್ರನಾದ ಯೆಹೋವನೇ,
\q ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
\s5
\q
\v 13 ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು,
\q ನನ್ನ ತುಟಿಗಳು ವರ್ಣಿಸುತ್ತವೆ.
\q
\v 14 ಸರ್ವಸಂಪತ್ತಿನಲ್ಲಿ ಹೇಗೋ,
\q ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
\s5
\q
\v 15 ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ,
\q ನಿನ್ನ ದಾರಿಯನ್ನು ಲಕ್ಷಿಸುವೆನು.
\q
\v 16 ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು,
\q ನಿನ್ನ ವಾಕ್ಯವನ್ನು ಮರೆಯುವುದಿಲ್ಲ.
\b
\d ಗಿಮೆಲ್.
\s ದೇವರಾಜ್ಞೆಗಳಲ್ಲಿ ಸಂತೋಷಿಸುವುದು
\s5
\q
\v 17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು,
\q ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.
\q
\v 18 ನನ್ನ ಕಣ್ಣುಗಳನ್ನು ತೆರೆ,
\q ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
\s5
\q
\v 19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ,
\q ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.
\q
\v 20 ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ
\q ನನ್ನ ಪ್ರಾಣವು ಜಜ್ಜಿಹೋಗಿದೆ.
\s5
\q
\v 21 ನೀನು ಗರ್ವಿಷ್ಠರನ್ನು ಗದರಿಸುತ್ತಿ,
\q ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
\q
\v 22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ,
\q ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.
\s5
\q
\v 23 ಪ್ರಭುಗಳು ಕುಳಿತುಕೊಂಡು,
\q ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ,
\q ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
\q
\v 24 ನಿನ್ನ ಕಟ್ಟಳೆಗಳು ನನ್ನ ಪರಮಾನಂದ,
\q ಅವೇ ನನ್ನ ಮಾರ್ಗದರ್ಶನ.
\b
\d ದಾಲಿತ್.
\s ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ
\s5
\q
\v 25 ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ,
\q ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
\q
\v 26 ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ,
\q ನನಗೆ ಸದುತ್ತರವನ್ನು ದಯಪಾಲಿಸಿದಿ,
\q ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
\s5
\q
\v 27 ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು,
\q ಆಗ ನಿನ್ನ ಬೋಧನೆಗಳನ್ನು
\f +
\fr 119:27
\fq ಬೋಧನೆಗಳನ್ನು
\ft ಅದ್ಭುತಕೃತ್ಯಗಳನ್ನು.
\f* ಧ್ಯಾನಿಸುವೆನು.
\q
\v 28 ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ,
\q ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
\s5
\q
\v 29 ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು,
\q ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
\q
\v 30 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
\q ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
\s5
\q
\v 31 ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ,
\q ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
\q
\v 32 ನೀನು ನನ್ನ ಅಂತರಾತ್ಮವನ್ನು ವಿಮೋಚಿಸು,
\q ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.
\b
\d ಹೇ.
\s ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ
\s5
\q
\v 33 ಯೆಹೋವನೇ, ನಿನ್ನ ಕಟ್ಟಳೆಗಳ
\q ಮಾರ್ಗವನ್ನು ನನಗೆ ಉಪದೇಶಿಸು,
\q ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
\q
\v 34 ನನಗೆ ತಿಳಿವಳಿಕೆಯನ್ನು ದಯಪಾಲಿಸು,
\q ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
\s5
\q
\v 35 ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು,
\q ಅದೇ ನನ್ನ ಇಷ್ಟ.
\q
\v 36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ,
\q ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
\s5
\q
\v 37 ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು,
\q ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
\q
\v 38 ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು,
\q ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
\s5
\q
\v 39 ನನ್ನ ಅವಮಾನವನ್ನು ತೊಲಗಿಸು,
\q ಅದಕ್ಕೋಸ್ಕರ ಅಂಜುತ್ತಿದ್ದೇನೆ.
\q ನಿನ್ನ ಕಟ್ಟಳೆಗಳು ಹಿತಕರವಾಗಿವೆ.
\q
\v 40 ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ,
\q ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
\b
\d ವಾವ್.
\s ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು
\s5
\q
\v 41 ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ,
\q ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
\q
\v 42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,
\q ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
\s5
\q
\v 43 ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ.
\q ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
\q
\v 44 ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
\s5
\q
\v 45 ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
\q ಸರಾಗವಾಗಿ ನಡೆಯುವೆನು.
\q
\v 46 ನಿನ್ನ ಕಟ್ಟಳೆಗಳ ವಿಷಯವಾಗಿ,
\q ಅರಸುಗಳ ಮುಂದೆಯೂ ಮಾತನಾಡುವೆನು,
\q ನಾಚಿಕೆಪಡುವುದಿಲ್ಲ.
\s5
\q
\v 47 ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ,
\q ಅವು ನನಗೆ ಇಷ್ಟವಾಗಿವೆ.
\q
\v 48 ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ,
\q ಅವುಗಳನ್ನು ನಾನು ಪ್ರೀತಿಸುತ್ತೇನೆ,
\q ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
\b
\d ಸಾಯಿನ್.
\s ಚೈತನ್ಯಗೊಳಿಸುವ ಯೆಹೋವನ ನುಡಿ
\s5
\q
\v 49 ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ,
\q ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
\q
\v 50 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,
\q ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
\s5
\q
\v 51 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು,
\q ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
\q
\v 52 ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು,
\q ನನ್ನನ್ನು ಸಂತೈಸಿಕೊಂಡಿದ್ದೇನೆ.
\s5
\q
\v 53 ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
\q
\v 54 ನನ್ನ ಪ್ರವಾಸದ ಮನೆಯಲ್ಲಿ
\q ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.
\s5
\q
\v 55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ,
\q ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.
\q
\v 56 ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.
\b
\d ಹೇತ್.
\s ಯೆಹೋವನ ನೀತಿವಿಧಿಗಳಲ್ಲಿ ಆಸಕ್ತಿ
\s5
\q
\v 57 ಯೆಹೋವನೇ, ನನ್ನ ಪಾಲು ನೀನೇ,
\q ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
\q
\v 58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ,
\q ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
\s5
\q
\v 59 ನನ್ನ ನಡತೆಯನ್ನು ಶೋಧಿಸಿದೆನು,
\q ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
\q
\v 60 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು,
\q ಆಲಸ್ಯಮಾಡಲಿಲ್ಲ.
\s5
\q
\v 61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು,
\q ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
\q
\v 62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು,
\q ಮಧ್ಯರಾತ್ರಿಯಲ್ಲಿ ಏಳುವೆನು.
\s5
\q
\v 63 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ
\q ನಾನು ಸಂಗಡಿಗನು.
\q
\v 64 ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ,
\q ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು.
\b
\d ಟೇತ್.
\s ದೇವರಾಜ್ಞೆಗಳ ಮೌಲ್ಯ
\s5
\q
\v 65 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ,
\q ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.
\q
\v 66 ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು,
\q ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.
\s5
\q
\v 67 ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು,
\q ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
\q
\v 68 ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ,
\q ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.
\s5
\q
\v 69 ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ,
\q ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
\q
\v 70 ಅವರ ಹೃದಯದಲ್ಲಿ ಸತ್ಯವಿಲ್ಲ
\f +
\fr 119:70
\fq ಅವರ ಹೃದಯದಲ್ಲಿ ಸತ್ಯವಿಲ್ಲ
\ft ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು
\f* ,
\q ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.
\s5
\q
\v 71 ಕಷ್ಟಾನುಭವವು ಹಿತಕರವಾಯಿತು,
\q ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
\q
\v 72 ನೀನು ಕೊಟ್ಟ ಧರ್ಮಶಾಸ್ತ್ರವು,
\q ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.
\b
\d ಯೋದ್.
\s ನ್ಯಾಯಬದ್ಧವಾದ ಕಟ್ಟಳೆಗಳು
\s5
\q
\v 73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು,
\q ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
\q
\v 74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ,
\q ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.
\s5
\q
\v 75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ,
\q ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.
\q
\v 76 ನಿನ್ನ ಸೇವಕನಿಗೆ ನುಡಿದ ಪ್ರಕಾರ,
\q ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
\s5
\q
\v 77 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ,
\q ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
\q
\v 78 ಗರ್ವಿಷ್ಠರು ಮಾನಭಂಗ ಹೊಂದಲಿ,
\q ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ.
\q ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.
\s5
\q
\v 79 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು,
\q ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
\q
\v 80 ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ,
\q ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
\b
\d ಕಾಫ್.
\s ವಿಮೋಚನೆಗಾಗಿ ವಿಜ್ಞಾಪನೆ
\s5
\q
\v 81 ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು,
\q ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.
\q
\v 82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ?
\q ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.
\s5
\q
\v 83 ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ,
\q ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
\q
\v 84 ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ!
\q ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?
\s5
\q
\v 85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು
\q ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
\q
\v 86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ,
\q ಅವರು ಮೋಸದಿಂದ ಹಿಂಸಿಸುತ್ತಾರೆ,
\q ನನಗೆ ಸಹಾಯಮಾಡು.
\s5
\q
\v 87 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು,
\q ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
\q
\v 88 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು,
\f +
\fr 119:88
\fq ನನ್ನನ್ನು ಕಾಪಾಡು,
\ft ನನ್ನನ್ನು ಚೈತನ್ಯಗೊಳಿಸು
\f*
\q ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.
\b
\d ಲಾಮೆದ್.
\s ಘನವಾದ ಆಜ್ಞಾಶಾಸನ
\s5
\q
\v 89 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
\q
\v 90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು.
\q ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
\s5
\q
\v 91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ,
\q ಸ್ಥಿರವಾಗಿ ನಿಂತಿರುತ್ತವೆ.
\q ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
\q
\v 92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ,
\q ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
\s5
\q
\v 93 ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ,
\q ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
\q
\v 94 ನಾನು ನಿನ್ನವನು, ರಕ್ಷಿಸು,
\q ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.
\s5
\q
\v 95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ,
\q ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
\q
\v 96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು,
\q ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು.
\f +
\fr 119:96
\fq ಅಪರಿಮಿತವಾದದ್ದು.
\ft ವಿಶಾಲವಾದದ್ದು.
\f*
\b
\d ಮೆಮ್.
\s ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ
\s5
\q
\v 97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,
\q ದಿನವೆಲ್ಲಾ ಅದೇ ನನ್ನ ಧ್ಯಾನ.
\q
\v 98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,
\q ಸದಾಕಾಲವೂ ಅವೇ ನನಗಿವೆ.
\s5
\q
\v 99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ,
\q ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
\q
\v 100 ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ,
\q ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.
\s5
\q
\v 101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು,
\q ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
\q
\v 102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ,
\q ಏಕೆಂದರೆ ನೀನು ನನಗೆ ಬೋಧಿಸಿದ್ದೀ.
\s5
\q
\v 103 ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ,
\q ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
\q
\v 104 ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು,
\q ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
\b
\d ನೂನ್.
\s ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು
\s5
\q
\v 105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,
\q ನನ್ನ ದಾರಿಗೆ ಬೆಳಕೂ ಆಗಿದೆ.
\q
\v 106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ,
\q ಅದನ್ನು ನೆರವೇರಿಸುವೆನು.
\s5
\q
\v 107 ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ,
\q ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
\q
\v 108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು,
\q ದಯವಿಟ್ಟು ಅಂಗೀಕರಿಸು,
\q ನಿನ್ನ ವಿಧಿಗಳನ್ನು ನನಗೆ ಕಲಿಸು.
\s5
\q
\v 109
\f +
\fr 119:109
\ft ನನ್ನ ಜೀವವನ್ನು ಕೈಯಲ್ಲೇ ಹಿಡಿದಿದ್ದೇನೆ.
\f* ನನ್ನ ಜೀವವು ಅಪಾಯದಲ್ಲಿದ್ದೆ,
\q ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
\q
\v 110 ದುಷ್ಟರು ಬಲೆಯೊಡ್ಡಿದ್ದಾರೆ,
\q ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
\s5
\q
\v 111 ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ,
\q ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
\q
\v 112 ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.
\b
\d ಸಾಮೆಕ್.
\s ಆಶ್ರಯವಾಗಿರುವ ದೇವರಾಜ್ಞೆಗಳು
\s5
\q
\v 113 ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ,
\q ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
\q
\v 114 ನನ್ನ ಆಶ್ರಯವೂ, ಗುರಾಣಿಯೂ ನೀನೇ,
\q ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
\s5
\q
\v 115 ದುಷ್ಟರೇ, ತೊಲಗಿರಿ,
\q ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
\q
\v 116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು,
\q ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ,
\q ನನ್ನನ್ನು ನಿರಾಶೆಪಡಿಸಬೇಡ.
\s5
\q
\v 117 ನೀನು ನನಗೆ ಆಧಾರವಾಗಿರು,
\q ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
\q
\v 118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ,
\q ಅವರ ಕುಯುಕ್ತಿಯು ವ್ಯರ್ಥವಾದದ್ದೇ.
\s5
\q
\v 119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ,
\q ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
\q
\v 120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ,
\q ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
\b
\d ಆಯಿನ್.
\s ಅಪರಂಜಿಗಿಂತಲೂ ಶ್ರೇಷ್ಠವಾದ ದೇವರ ವಾಕ್ಯಗಳು
\s5
\q
\v 121 ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ,
\q ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
\q
\v 122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು,
\q ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
\s5
\q
\v 123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ,
\q ನನ್ನ ದೃಷ್ಟಿ ಮೊಬ್ಬಾಯಿತು.
\q
\v 124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು,
\q ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
\s5
\q
\v 125 ನಾನು ನಿನ್ನ ಸೇವಕನು,
\q ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
\q
\v 126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ,
\q ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
\s5
\q
\v 127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ,
\q ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
\q
\v 128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ,
\q ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
\b
\d ಪೆ.
\s ಕಟ್ಟಳೆಗಳನ್ನು ಪಾಲಿಸುವ ತವಕ
\s5
\q
\v 129 ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ,
\q ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
\q
\v 130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
\q ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
\s5
\q
\v 131 ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ,
\q ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
\q
\v 132 ನನಗೆ ಅಭಿಮುಖನಾಗಿ ಕರುಣಿಸು,
\q ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
\s5
\q
\v 133 ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,
\q ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
\q
\v 134 ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು,
\q ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.
\s5
\q
\v 135 ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ,
\q ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
\q
\v 136 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ,
\q ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
\b
\d ಸಾದ್ದಿ.
\s ಯೆಹೋವನ ನ್ಯಾಯ ವಿಧಿಗಳು
\s5
\q
\v 137 ಯೆಹೋವನೇ, ನೀನು ನೀತಿಸ್ವರೂಪನು,
\q ನಿನ್ನ ವಿಧಿಗಳು ನ್ಯಾಯವಾಗಿವೆ.
\q
\v 138 ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,
\s5
\q
\v 139 ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ
\q ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
\q
\v 140 ನಿನ್ನ ನುಡಿಯು ಪರಿಶುದ್ಧವಾದದ್ದು,
\q ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
\s5
\q
\v 141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ,
\q ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
\q
\v 142 ನಿನ್ನ ನೀತಿಯು ನಿತ್ಯವಾಗಿದೆ,
\q ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.
\s5
\q
\v 143 ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ,
\q ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
\q
\v 144 ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು,
\q ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.
\b
\d ಖೋಫ್.
\s ಯೆಹೋವನಿಗೆ ಮೊರೆಯಿಡುವುದು
\s5
\q
\v 145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ,
\q ಸದುತ್ತರವನ್ನು ದಯಪಾಲಿಸು,
\q ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
\q
\v 146 ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು.
\q ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.
\s5
\q
\v 147 ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು,
\q ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.
\q
\v 148 ನಿನ್ನ ನುಡಿಯನ್ನು ಧ್ಯಾನಿಸಲು,
\q ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
\s5
\q
\v 149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು,
\q ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
\q
\v 150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು,
\q ನನ್ನ ಸಮೀಪಕ್ಕೆ ಬಂದಿದ್ದಾರೆ.
\s5
\q
\v 151 ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ,
\q ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
\q
\v 152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು,
\q ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
\b
\d ರೇಷ್.
\s ಸಂರಕ್ಷಣೆಗಾಗಿ ವಿಜ್ಞಾಪನೆ
\s5
\q
\v 153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು,
\q ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
\q
\v 154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು,
\q ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
\s5
\q
\v 155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
\q
\v 156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ,
\q ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
\s5
\q
\v 157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ,
\q ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
\q
\v 158 ನಿನ್ನ ನುಡಿಯನ್ನು ಕೈಗೊಳ್ಳದ
\q ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
\s5
\q
\v 159 ಯೆಹೋವನೇ, ನೋಡು,
\q ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ,
\q ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
\q
\v 160 ನಿನ್ನ ವಾಕ್ಯದ ಸಾರಾಂಶವು ಸತ್ಯವೇ,
\q ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
\b
\d ಷಿನ್.
\s ಎಷ್ಟೋ ಪ್ರಿಯವಾದ ನೀತಿವಿಧಿಗಳು
\s5
\q
\v 161 ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,
\q ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
\q
\v 162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ,
\q ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
\s5
\q
\v 163 ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ,
\q ಅದು ನನಗೆ ಅಸಹ್ಯವಾಗಿದೆ,
\q ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
\q
\v 164 ನಿನ್ನ ನೀತಿವಿಧಿಗಳಿಗೋಸ್ಕರ,
\q ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
\s5
\q
\v 165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,
\q ಸಂಪೂರ್ಣ ಸಮಾಧಾನವಿರುತ್ತದೆ,
\q ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
\q
\v 166 ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು,
\q ನಿರೀಕ್ಷಿಸುತ್ತಾ ಇದ್ದೇನೆ,
\q ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
\s5
\q
\v 167 ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ,
\q ಅವು ನನಗೆ ಬಹುಪ್ರಿಯವಾಗಿವೆ.
\q
\v 168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ,
\q ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
\b
\d ತಾವ್.
\s ಯೆಹೋವನ ಸಹಾಯಕ್ಕಾಗಿ ಬೇಡಿಕೊಳ್ಳುವುದು
\s5
\q
\v 169 ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ,
\q ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
\q
\v 170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ,
\q ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
\s5
\q
\v 171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ.
\q ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
\q
\v 172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ,
\q ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
\s5
\q
\v 173 ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ,
\q ನಿನ್ನ ಕೈ ನನಗೆ ನೆರವಾಗಲಿ.
\q
\v 174 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ,
\q ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
\s5
\q
\v 175 ನನ್ನ ಪ್ರಾಣವನ್ನು ಉಳಿಸು,
\q ಅದು ನಿನ್ನನ್ನು ಕೊಂಡಾಡಲಿ.
\q ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
\q
\v 176 ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ,
\q ನಿನ್ನ ಸೇವಕನನ್ನು ಪರಾಂಬರಿಸು.
\q ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
\s5
\c 120
\ms ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ
\d ಯಾತ್ರಾಗೀತೆ.
\b
\q
\v 1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
\q ಆತನು ಸದುತ್ತರವನ್ನು ದಯಪಾಲಿಸಿದನು.
\q
\v 2 ಯೆಹೋವನೇ, ಸುಳ್ಳು ಬಾಯಿಯೂ,
\q ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
\s5
\q
\v 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?
\q ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
\q
\v 4 ಶೂರನ
\f +
\fr 120:4
\fq ಶೂರನ
\ft ಬಲಿಷ್ಠನ.
\f* ಹದವಾದ ಬಾಣಗಳನ್ನೂ,
\q ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
\s5
\q
\v 5 ಅಯ್ಯೋ, ನಾನು ಮೇಷೆಕಿನವರಲ್ಲಿ
\f +
\fr 120:5
\fq ಮೇಷೆಕಿನವರಲ್ಲಿ
\ft ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು.
\f* ತಂಗಬೇಕಲ್ಲಾ!
\q ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
\q
\v 6 ಸಮಾಧಾನವನ್ನು ದ್ವೇಷಿಸುವವರೊಳಗೆ,
\q ಇದ್ದು ಇದ್ದು ಸಾಕಾಯಿತು.
\q
\v 7 ನಾನು ಸಮಾಧಾನಪ್ರಿಯನು;
\q ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.
\s5
\c 121
\ms ಯೆಹೋವನ ಭಕ್ತಪಾಲನೆ
\d ಯಾತ್ರಾಗೀತೆ.
\r (ಆದಿ. 28:15)
\b
\q
\v 1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;
\q ನನ್ನ ಸಹಾಯವು ಎಲ್ಲಿಂದ ಬರುವುದು?
\q
\v 2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ,
\q ನನ್ನ ಸಹಾಯವು ಬರುತ್ತದೆ.
\b
\s5
\q
\v 3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ;
\q ನಿನ್ನನ್ನು ಕಾಯುವವನು ತೂಕಡಿಸದಿರಲಿ.
\q
\v 4 ಇಗೋ, ಇಸ್ರಾಯೇಲರನ್ನು ಕಾಯುವಾತನು,
\q ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
\s5
\q
\v 5 ನಿನ್ನನ್ನು ಕಾಯುವವನು ಯೆಹೋವನೇ;
\q ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
\q
\v 6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ,
\q ನಿನ್ನನ್ನು ಬಾಧಿಸುವುದಿಲ್ಲ.
\s5
\q
\v 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು;
\q ನಿನ್ನ ಪ್ರಾಣವನ್ನು ಕಾಯುವನು.
\q
\v 8 ನೀನು ಹೋಗುವಾಗಲೂ, ಬರುವಾಗಲೂ,
\q ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
\s5
\c 122
\ms ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು
\d ಯಾತ್ರಾಗೀತೆ; ದಾವೀದನ ಕೀರ್ತನೆ.
\b
\q
\v 1 <<ಯೆಹೋವನ ಮಂದಿರಕ್ಕೆ ಹೋಗೋಣ ಬಾ!>>
\q ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
\q
\v 2 ಯೆರೂಸಲೇಮೇ! ನಮ್ಮ ಕಾಲುಗಳು,
\q ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
\q
\v 3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ,
\q ಕಟ್ಟಲ್ಪಟ್ಟ ನಗರವಾಗಿದ್ದಿ.
\s5
\q
\v 4 ಕುಲಗಳು ಅಂದರೆ ಯೆಹೋವನ ಕುಲದವರು,
\q ಯೆಹೋವನ ನಾಮದ ಕೀರ್ತನೆಗೋಸ್ಕರ,
\q ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು.
\q ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
\q
\v 5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ,
\q ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
\s5
\q
\v 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ.
\q <<ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
\q
\v 7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ;
\q ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.>>
\s5
\q
\v 8 ನನ್ನ ಬಂಧುಮಿತ್ರರ ನಿಮಿತ್ತವಾಗಿ,
\q <<ನಿನಗೆ ಸಮಾಧಾನವಾಗಲಿ>> ಎಂದು ಹೇಳುತ್ತೇನೆ.
\q
\v 9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ,
\q ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
\s5
\c 123
\ms ಬಾಧಿಸಲ್ಪಟ್ಟವನ ನಿರೀಕ್ಷೆ
\d ಯಾತ್ರಾಗೀತೆ.
\r (ನೆಹೆ. 4:1-6)
\b
\q
\v 1 ಪರಲೋಕದಲ್ಲಿ ಆಸೀನನಾಗಿರುವಾತನೇ,
\q ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
\q
\v 2 ಯಜಮಾನನ ಕೈಯನ್ನು ದಾಸನ ಕಣ್ಣುಗಳು,
\q ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
\q ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
\q ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
\s5
\q
\v 3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು.
\q ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
\q
\v 4 ಲೋಕಭೋಗಿಗಳ ಹಾಸ್ಯದಿಂದಲೂ,
\q ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
\s5
\c 124
\ms ಯೆಹೋವನೊಬ್ಬನೇ ರಕ್ಷಕನು
\d ಯಾತ್ರಾಗೀತೆ; ದಾವೀದನದು.
\r (ಕೀರ್ತ. 129; ನೆಹೆ. 4:7-23)
\b
\q
\v 1 <<ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?>>,
\q ಎಂದು ಇಸ್ರಾಯೇಲರೇ ಹೇಳಲಿ.
\q
\v 2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,
\q ಯೆಹೋವನು ನಮಗಿಲ್ಲದಿದ್ದರೆ,
\q
\v 3 <<ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,
\q ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
\s5
\q
\v 4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
\q ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
\q
\v 5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.>>
\s5
\q
\v 6 ಯೆಹೋವನಿಗೆ ಕೊಂಡಾಟವಾಗಲಿ;
\q ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
\q
\v 7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
\q ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
\s5
\q
\v 8 ಭೂಮಿ, ಆಕಾಶಗಳನ್ನು ಉಂಟುಮಾಡಿದ,
\q ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
\s5
\c 125
\ms ಯೆಹೋವನೇ ವಿಶ್ವಾಸಿಗಳ ಆಶ್ರಯ
\d ಯಾತ್ರಾಗೀತೆ.
\b
\q
\v 1 ಯೆಹೋವನಲ್ಲಿ ಭರವಸೆ ಇಡುವವರು,
\q ಚೀಯೋನ್ ಪರ್ವತದ ಹಾಗೆ ಇದ್ದಾರೆ;
\q ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
\q
\v 2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
\q ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
\q
\v 3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ;
\q ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
\s5
\q
\v 4 ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ,
\q ಆಗಿರುವವರಿಗೆ ಉಪಕಾರಮಾಡು.
\q
\v 5 ಯೆಹೋವನು ಡೊಂಕುದಾರಿ ಹಿಡಿದವರನ್ನು,
\q ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು.
\q ಇಸ್ರಾಯೇಲರಿಗೆ ಶುಭವುಂಟಾಗಲಿ.
\s5
\c 126
\ms ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ
\d ಯಾತ್ರಾಗೀತೆ.
\r (ಕೀರ್ತ. 85)
\b
\q
\v 1
\f +
\fr 126:1
\ft ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್.
\f* ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
\q ನಾವು ಕನಸು ಕಂಡವರಂತೆ ಇದ್ದೆವು.
\s5
\q
\v 2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ,
\q ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
\q ಅನ್ಯಜನರು, <<ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ>> ಎಂದು
\q ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
\q
\v 3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;
\q ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
\s5
\q
\v 4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,
\q
\f +
\fr 126:4
\ft ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು.
\f* ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
\q
\v 5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
\q
\v 6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
\q ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
\s5
\c 127
\ms ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು
\d ಯಾತ್ರಾಗೀತೆ; ಸೊಲೊಮೋನನದು.
\r (ನೆಹೆ. 7:3-4)
\b
\q
\v 1 ಯೆಹೋವನು ಮನೆಯನ್ನು ಕಟ್ಟದಿದ್ದರೆ,
\q ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ;
\q ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
\q ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
\q
\v 2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ,
\q ಹೊತ್ತು ಮೀರಿ ಮಲಗುವವರೇ,
\q ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ;
\q
\f +
\fr 127:2
\ft ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ.
\f* ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
\s5
\q
\v 3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
\q ಗರ್ಭಫಲವು ಆತನ ಬಹುಮಾನವೇ.
\q
\v 4 ಯೌವನದಲ್ಲಿ ಹುಟ್ಟಿದ ಮಕ್ಕಳು,
\q ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
\q
\v 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
\q ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
\q ಅಂಥವರು ಅವಮಾನ ಹೊಂದುವುದಿಲ್ಲ.
\s5
\c 128
\ms ಭಕ್ತನ ಭಾಗ್ಯ
\d ಯಾತ್ರಾಗೀತೆ.
\r (ಕೀರ್ತ. 127; 144:12-15)
\b
\q
\v 1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
\q ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
\q
\v 2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
\q ನೀನು ಧನ್ಯನು, ನಿನಗೆ ಶುಭವಿರುವುದು.
\s5
\q
\v 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
\q ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
\q ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
\q ಎಣ್ಣೇಮರದ ಸಸಿಗಳ ಹಾಗೆ ಇರುವರು.
\q
\v 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು,
\q ಈ ರೀತಿಯಾಗಿ ಆಶೀರ್ವಾದ ಹೊಂದುವನು.
\q
\v 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ;
\q ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
\q
\v 6 ಮಕ್ಕಳ ಮಕ್ಕಳನ್ನು ಕಾಣುವವನಾಗು.
\q ಇಸ್ರಾಯೇಲರಿಗೆ ಶುಭವಾಗಲಿ.
\s5
\c 129
\ms ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ
\d ಯಾತ್ರಾಗೀತೆ.
\r (ಕೀರ್ತ. 124)
\b
\q
\v 1 <<ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ>>
\q ಎಂದು ಇಸ್ರಾಯೇಲರು ಹೇಳಲಿ.
\q
\v 2 <<ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ,
\q ಅವರು ನಮ್ಮನ್ನು ಜಯಿಸಲಿಲ್ಲ.
\q
\v 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ,
\q ಉದ್ದವಾದ ಗೆರೆಗಳನ್ನು ಹಾಕಿದರು.>>
\s5
\q
\v 4 ಆದರೆ ನೀತಿಸ್ವರೂಪನಾದ ಯೆಹೋವನು,
\q
\f +
\fr 129:4
\ft ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು.
\f* ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
\q
\v 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
\s5
\q
\v 6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ;
\q ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
\q
\v 7 ಅದನ್ನು ಕೊಯ್ಯುವವನ ಹಿಡಿಯೂ,
\q ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
\q
\v 8 ಹಾದುಹೋಗುವವರು, <<ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು,
\q ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ>> ಎಂದೂ ಹೇಳುವುದಿಲ್ಲ.
\s5
\c 130
\ms ಪಾಪಪರಿಹಾರಕ್ಕಾಗಿ ಪ್ರಾರ್ಥನೆ
\d ಯಾತ್ರಾಗೀತೆ.
\r (ನೆಹೆ. 1:4-11)
\b
\q
\v 1 ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
\q
\v 2 ಕರ್ತನೇ, ನನ್ನ ಮೊರೆಯನ್ನು ಕೇಳು;
\q ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
\s5
\q
\v 3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ
\q ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
\q
\v 4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ,
\q ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
\s5
\q
\v 5 ನಾನು ಯೆಹೋವನನ್ನು ಎದುರುನೋಡುತ್ತೇನೆ;
\q ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
\q ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
\q
\v 6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
\q ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
\q ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
\s5
\q
\v 7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;
\q ಯೆಹೋವನು ಕೃಪಾಸಂಪನ್ನನು;
\q ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
\q
\v 8 ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
\s5
\c 131
\ms ಭಕ್ತರ ದೀನಭಾವ
\d ಯಾತ್ರಾಗೀತೆ; ದಾವೀದನದು.
\r (ಜ್ಞಾನೋ. 23:26; ಮತ್ತಾ. 18:3)
\b
\q
\v 1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;
\q ನನಗೆ ಸೊಕ್ಕಿನ ಕಣ್ಣುಗಳಿಲ್ಲ;
\q ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
\s5
\q
\v 2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;
\q ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
\q ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
\q
\v 3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ
\q ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
\s5
\c 132
\ms ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ
\d ಯಾತ್ರಾಗೀತೆ.
\r (ಕೀರ್ತ. 89; 2 ಸಮು. 7)
\b
\q
\v 1 ಯೆಹೋವನೇ, ದಾವೀದನ ಹಿತಕ್ಕೋಸ್ಕರ,
\q ಅವನ ಶ್ರಮೆಗಳನ್ನು ನೆನಪುಮಾಡಿಕೋ.
\q
\v 2 ಯಾಕೋಬನ ಶೂರನಾದ ಯೆಹೋವನಿಗಾಗಿ
\q ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
\s5
\q
\v 3 <<ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ,
\q ಮಂಚವನ್ನು ಹತ್ತುವುದಿಲ್ಲ,
\q
\v 4 ಕಣ್ಣುಗಳನ್ನು ಮುಚ್ಚುವುದಿಲ್ಲ,
\q ರೆಪ್ಪೆಗಳನ್ನು ಕೂಡಿಸುವುದಿಲ್ಲ>> ಎಂದು
\q
\v 5 ಅವನು ಯೆಹೋವನಿಗೆ ಪ್ರಮಾಣಮಾಡಿ,
\q ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
\s5
\q
\v 6 ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು;
\q ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
\q
\v 7 <<ಬನ್ನಿರಿ, ಆತನ ಮಂದಿರಕ್ಕೆ ಹೋಗಿ
\q ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!>>
\q
\v 8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ,
\q ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
\s5
\q
\v 9 ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ;
\q ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
\q
\v 10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ;
\q ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
\s5
\q
\v 11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ;
\q ಆತನು ಅದನ್ನು ಬದಲಿಸುವುದಿಲ್ಲ.
\q <<ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
\q
\v 12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ,
\q ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ,
\q ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.>>
\s5
\q
\v 13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ,
\q ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
\q
\v 14 ಆತನು, <<ಇದು ನನ್ನ ಶಾಶ್ವತ ವಾಸಸ್ಥಾನ;
\q ಇಲ್ಲೇ ಇರುವೆನು; ಇದು ನನಗೆ ಇಷ್ಟ.
\s5
\q
\v 15 ಇದರ ಆದಾಯವನ್ನು ಆಶೀರ್ವದಿಸುವೆನು;
\q ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
\q
\v 16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು;
\q ಭಕ್ತರು ಉತ್ಸಾಹಧ್ವನಿ ಮಾಡುವರು.
\s5
\q
\v 17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು;
\q ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
\q
\v 18 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು;
\q ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.>>
\s5
\c 133
\ms ಐಕಮತ್ಯವು ಶ್ರೇಷ್ಠವಾದುದು
\d ಯಾತ್ರಾಗೀತೆ; ದಾವೀದನದು.
\b
\q
\v 1 ಆಹಾ, ಸಹೋದರರು ಒಂದಾಗಿರುವುದು,
\q ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
\s5
\q
\v 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು,
\q ಅವನ ಗಡ್ಡದ ಮೇಲೆಯೂ,
\q ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
\q
\v 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ,
\q ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ.
\q ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು,
\q ಯೆಹೋವನು ಆಜ್ಞಾಪಿಸಿದ್ದಾನೆ.
\s5
\c 134
\ms ಸಂಧ್ಯಾಸೇವಕರಿಗೆ ಎಚ್ಚರಿಕೆ
\d ಯಾತ್ರಾಗೀತೆ.
\b
\q
\v 1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ,
\q ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
\q
\v 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ,
\q ಯೆಹೋವನನ್ನು ಕೊಂಡಾಡಿರಿ.
\s5
\q
\v 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು,
\q ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
\s5
\c 135
\ms ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
\r (ಕೀರ್ತ. 136)
\q
\v 1 ಯೆಹೋವನಿಗೆ ಸ್ತೋತ್ರ!
\q ಯೆಹೋವನ ನಾಮವನ್ನು ಸ್ತುತಿಸಿರಿ.
\q ಯೆಹೋವನ ಸೇವಕರೇ,
\q
\v 2 ಯೆಹೋವನ ಮಂದಿರದಲ್ಲಿಯೂ,
\q ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ,
\q ಆತನನ್ನು ಕೀರ್ತಿಸಿರಿ.
\s5
\q
\v 3 ಯೆಹೋವನಿಗೆ ಸ್ತೋತ್ರ!
\q ಯೆಹೋವನು ಒಳ್ಳೆಯವನು.
\q ಆತನ ನಾಮವನ್ನು ಕೊಂಡಾಡಿರಿ;
\q ಆತನು ಕೃಪಾಪೂರ್ಣನು.
\q
\v 4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ,
\q ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
\s5
\q
\v 5 ಯೆಹೋವನು ದೊಡ್ಡವನೆಂದೂ,
\q ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
\q
\v 6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,
\q ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ
\q ತನಗೆ ಬೇಕಾದದ್ದನ್ನು ಮಾಡುತ್ತಾನೆ.
\s5
\q
\v 7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;
\q ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ;
\q ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
\s5
\q
\v 8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ,
\q ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
\q
\v 9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ,
\q ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು,
\q ಮಹತ್ಕಾರ್ಯಗಳನ್ನು ನಡೆಸಿದನು.
\s5
\q
\v 10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು;
\q ಬಲಿಷ್ಠ ರಾಜರನ್ನು ಕೊಂದುಹಾಕಿದನು.
\q
\v 11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ,
\q ಬಾಷಾನಿನ ಅರಸನಾದ ಓಗನೂ ಇದ್ದರು.
\q ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
\s5
\q
\v 12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು;
\q ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
\q
\v 13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು;
\q ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
\s5
\q
\v 14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು,
\q ತನ್ನ ಸೇವಕರನ್ನು ಕನಿಕರಿಸುವನು.
\b
\q
\v 15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ;
\q ಅವು ಮನುಷ್ಯರ ಕೈಕೆಲಸವಷ್ಟೇ.
\q
\v 16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ,
\q ಕಣ್ಣಿದ್ದರೂ ನೋಡುವುದಿಲ್ಲ,
\q
\v 17 ಕಿವಿಯಿದ್ದರೂ ಕೇಳುವುದಿಲ್ಲ,
\q ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
\q
\v 18 ಅವುಗಳನ್ನು ಮಾಡುವವರು,
\q ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
\s5
\q
\v 19 ಇಸ್ರಾಯೇಲನ ಮನೆತನದವರೇ,
\q ಯೆಹೋವನನ್ನು ಕೊಂಡಾಡಿರಿ;
\q ಆರೋನನ ಮನೆತನದವರೇ,
\q ಯೆಹೋವನನ್ನು ಕೊಂಡಾಡಿರಿ.
\q
\v 20 ಲೇವಿಯ ಮನೆತನದವರೇ,
\q ಯೆಹೋವನನ್ನು ಕೊಂಡಾಡಿರಿ;
\q ಯೆಹೋವನ ಭಕ್ತರೇ,
\q ಯೆಹೋವನನ್ನು ಕೊಂಡಾಡಿರಿ.
\q
\v 21 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ,
\q ಕೀರ್ತಿ ಉಂಟಾಗಲಿ,
\q ಯೆಹೋವನಿಗೆ ಸ್ತೋತ್ರ!
\s5
\c 136
\ms ಯೆಹೋವನ ಸ್ತುತಿ
\r (ಕೀರ್ತ. 135)
\q
\v 1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
\q ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
\q
\v 2 ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 8 ಸೂರ್ಯನು ಹಗಲನ್ನು ಆಳುತ್ತಾನೆ,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 9 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 10 ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 11 ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 13 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 14 ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 17 ದೊಡ್ಡ ಅರಸರನ್ನು ಹೊಡೆದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 18 ಶ್ರೇಷ್ಠ ರಾಜರನ್ನು ಸಂಹರಿಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 19 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 20 ಬಾಷಾನಿನ ಅರಸನಾದ ಓಗನು ಇನ್ನೊಬ್ಬನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 21 ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 22 ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 23 ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\q
\v 24 ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 25 ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ,
\q ಆತನ ಪ್ರೀತಿಯು ಶಾಶ್ವತವಾದದ್ದು.
\q
\v 26 ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ,
\q ಆತನ ಪ್ರೀತಿಯು ಶಾಶ್ವತವಾದದ್ದು.
\s5
\c 137
\ms ಸೆರೆಯವರ ಪ್ರಲಾಪ
\r (2 ಪೂರ್ವ. 36)
\q
\v 1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು,
\q ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
\q
\v 2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
\s5
\q
\v 3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,
\q <<ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ>> ಎಂದು ಹೇಳುತ್ತಿದ್ದರು.
\q
\v 4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
\s5
\q
\v 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ
\q
\f +
\fr 137:5
\ft ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ.
\f* ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
\q
\v 6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,
\q ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ,
\q
\f +
\fr 137:6
\ft ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ.
\f* ನನ್ನ ನಾಲಿಗೆಯು ಸೇದಿಹೋಗಲಿ.
\s5
\q
\v 7 ಯೆಹೋವನೇ, ಎದೋಮ್ಯರ ಹಾನಿಗಾಗಿ,
\q ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ.
\q ಅವರು, <<ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ>> ಎಂದು ಹೇಳಿದರಲ್ಲಾ.
\s5
\q
\v 8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ,
\q ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
\q
\v 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
\s5
\c 138
\ms ರಕ್ಷಣಾ ಕರ್ತನ ಸ್ತುತಿ
\d ದಾವೀದನ ಕೀರ್ತನೆ.
\r (ಕೀರ್ತ. 102:13-23)
\b
\q
\v 1 ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;
\q ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
\q
\v 2 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;
\q ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ.
\q
\f +
\fr 138:2
\ft ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
\f* ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
\s5
\q
\v 3 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
\q ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
\q
\v 4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ
\q ನಿನ್ನನ್ನು ಸ್ತುತಿಸುವರು.
\s5
\q
\v 5 ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು;
\q ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
\q
\v 6 ಯೆಹೋವನು ಮಹೋನ್ನತನು;
\q ಆದರೂ ದೀನರನ್ನು ಲಕ್ಷಿಸುತ್ತಾನೆ;
\q ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
\s5
\q
\v 7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ,
\q
\f +
\fr 138:7
\ft ಅಥವಾ ನನ್ನನ್ನು ಕಾಪಾಡುವಿ.
\f* ನನ್ನನ್ನು ಚೈತನ್ಯಗೊಳ್ಳಿಸುವಿ,
\q ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ,
\q ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
\q
\v 8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.
\q ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು,
\q ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
\s5
\c 139
\ms ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
\b
\q
\v 1 ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
\q
\v 2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,
\q ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
\s5
\q
\v 3 ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ,
\q ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
\q
\v 4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,
\q ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
\q
\v 5 ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
\q
\v 6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ;
\q ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
\s5
\q
\v 7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ?
\q ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
\q
\v 8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ,
\q ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
\s5
\q
\v 9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ,
\q ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
\q
\v 10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು;
\q ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
\s5
\q
\v 11 ಕಾರ್ಗತ್ತಲೆಯು ನನ್ನನ್ನು ಕವಿಯುವುದು,
\q <<ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು>> ಎಂದು ಹೇಳಿಕೊಂಡರೇನು?
\q
\v 12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ,
\q ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
\s5
\q
\v 13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
\q ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
\q
\v 14 ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
\q ನಿನ್ನನ್ನು ಕೊಂಡಾಡುತ್ತೇನೆ.
\q ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
\q ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
\s5
\q
\v 15 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,
\q ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
\q ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
\q
\v 16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ,
\q ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
\q ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
\q ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
\s5
\q
\v 17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ,
\q ಅವುಗಳು ಎಷ್ಟೋ ಅಸಂಖ್ಯವಾಗಿವೆ.
\q
\v 18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,
\q ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
\s5
\q
\v 19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ,
\q ಎಷ್ಟೋ ಒಳ್ಳೆಯದು.
\q
\f +
\fr 139:19
\ft ರಕ್ತಪ್ರಿಯರೇ
\f* ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
\q
\v 20 ದೇವರೇ, ಅವರು ನಿನ್ನ ಶತ್ರುಗಳು,
\q ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
\s5
\q
\v 21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ?
\q ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
\q
\v 22 ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ,
\q ಅವರು ನನಗೂ ವೈರಿಗಳೇ ಆಗಿದ್ದಾರೆ.
\s5
\q
\v 23 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,
\q ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
\q
\v 24 ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ,
\q ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
\s5
\c 140
\ms ಶತ್ರುಪೀಡಿತನ ಪ್ರಾರ್ಥನೆ
\d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ.
\r (ಕೀರ್ತ. 7; 35; 64; 141—143)
\q
\v 1 ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು,
\q ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.
\q
\v 2 ಅವರು ಕೇಡು ಕಲ್ಪಿಸುತ್ತಾರೆ,
\q ಯಾವಾಗಲೂ ಜಗಳವೆಬ್ಬಿಸುತ್ತಾರೆ.
\q
\v 3 ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ,
\q ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ.
\qs ಸೆಲಾ
\qs*
\s5
\q
\v 4 ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,
\q ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು.
\q ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
\q
\v 5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ
\q ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ,
\q ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ,
\q ನನಗಾಗಿ ಬಲೆಬೀಸಿಟ್ಟಿದ್ದಾರೆ.
\qs ಸೆಲಾ
\qs*
\s5
\q
\v 6 ನಾನು ಯೆಹೋವನಿಗೆ, <<ನೀನೇ ನನ್ನ ದೇವರು,
\q ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
\q
\v 7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,
\q
\f +
\fr 140:7
\ft ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ.
\f* ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
\q
\v 8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,
\q ಅವರ ಆಶೆಗಳನ್ನು ನೆರವೇರಿಸಬೇಡ,
\q ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ>> ಎಂದು ಹೇಳುತ್ತೇನೆ.
\qs ಸೆಲಾ
\qs*
\s5
\q
\v 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು
\q ಅವರ ತಲೆಯ ಮೇಲೆಯೇ ಬರಲಿ,
\q
\v 10 ಅವರ ಮೇಲೆ ಕೆಂಡಗಳು ಸುರಿಯಲಿ,
\q ಅವರು ಅಗ್ನಿಕುಂಡದೊಳಕ್ಕೂ,
\q ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
\q
\v 11 ಚಾಡಿಗಾರನು ದೇಶದಲ್ಲಿ ಉಳಿಯನು,
\q ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
\s5
\q
\v 12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ,
\q ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
\q
\v 13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು,
\q ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
\s5
\c 141
\ms ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
\d ದಾವೀದನ ಕೀರ್ತನೆ.
\r (ಕೀರ್ತ. 140)
\b
\q
\v 1 ಯೆಹೋವನೇ, ಮೊರೆಯಿಡುತ್ತೇನೆ,
\q ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
\q
\v 2 ನನ್ನ ಪ್ರಾರ್ಥನೆಯು ಧೂಪದಂತೆಯೂ,
\q ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
\s5
\q
\v 3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು,
\q ನನ್ನ ತುಟಿಗಳೆಂಬ ಕದವನ್ನು ಕಾಯಿ.
\q
\v 4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ,
\q ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು.
\q ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
\s5
\q
\v 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ,
\q ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ,
\q ನನ್ನ ತಲೆಯು ಅದನ್ನು ಬೇಡವೆನ್ನದಿರಲಿ.
\q ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
\q
\v 6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ,
\q ಜನರು ನನ್ನ ಮಾತುಗಳಿಗೆ ಕಿವಿಗೊಡುವರು,
\q ಅವು ಅವರಿಗೆ ಹಿತವಾಗಿರುವವು.
\q
\v 7 ಒಬ್ಬನು ಹೊಲವನ್ನು ಉಳುತ್ತಾ,
\q ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ,
\q ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.
\s5
\q
\v 8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ,
\q ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ,
\q ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
\q
\v 9 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು,
\q ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
\q
\v 10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ,
\q ಆಗ ನಾನು ತಪ್ಪಿಸಿಕೊಳ್ಳುವೆನು.
\s5
\c 142
\ms ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ
\d ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
\r (ಕೀರ್ತ. 140; 1 ಸಮು. 22; 24)
\b
\q
\v 1 ನಾನು ಯೆಹೋವನಿಗೆ ಮೊರೆಯಿಡುವೆನು,
\q ಯೆಹೋವನಿಗೆ ಕೂಗಿ ಬಿನ್ನೈಸುವೆನು.
\q
\v 2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು,
\q ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
\s5
\q
\v 3 ನನ್ನ ಆತ್ಮವು ಕುಂದಿಹೋದಾಗ,
\q ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ,
\q ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
\q
\v 4 ನಾನು ನನ್ನ ಬಲಗಡೆಗೆ ನೋಡಲು,
\q ಅಲ್ಲಿ ಸಹಾಯಕರು ಯಾರೂ ಇಲ್ಲ,
\q ಆಶ್ರಯವೂ ನಾಶವಾಯಿತು,
\q ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
\q
\v 5 ಯೆಹೋವನೇ, ನಾನು ನಿನಗೆ, <<ನೀನೇ ನನ್ನ ಶರಣನೂ,
\q ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ>> ಎಂದು ಕೂಗಿ ಮೊರೆಯಿಟ್ಟಿದ್ದೇನೆ.
\s5
\q
\v 6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ.
\q ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು,
\q ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
\q
\v 7 ಸೆರೆಯಿಂದ ನನ್ನನ್ನು ಬಿಡಿಸು,
\q ನಿನ್ನ ನಾಮವನ್ನು ಕೀರ್ತಿಸುವೆನು.
\q ನೀತಿವಂತರು ನಿನ್ನ ಮಹೋಪಕಾರಕ್ಕಾಗಿ,
\q ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
\s5
\c 143
\ms ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ
\d ದಾವೀದನ ಕೀರ್ತನೆ.
\r (ಕೀರ್ತ. 140)
\b
\q
\v 1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;
\q ನನ್ನ ಬಿನ್ನಹಕ್ಕೆ ಕಿವಿಗೊಡು;
\q ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
\q
\v 2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;
\q ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
\s5
\q
\v 3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;
\q ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ.
\q ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ;
\q ಬಹು ಕಾಲದಿಂದ ಸತ್ತವರಂತಿದ್ದೇನೆ.
\q
\v 4 ನನ್ನ ಆತ್ಮವು ಕುಂದಿಹೋಗಿದೆ;
\q ನನ್ನ ಮನಸ್ಸು ಬೆರಗಾಗಿದೆ.
\s5
\q
\v 5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;
\q ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;
\q ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
\q
\v 6 ಕೈಚಾಚಿ ಬೇಡುತ್ತೇನೆ;
\q ಒಣನೆಲವು ನೀರಿಗಾಗಿ ಹೇಗೋ,
\q ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ.
\qs ಸೆಲಾ
\qs*
\s5
\q
\v 7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;
\q ನನ್ನ ಆತ್ಮವು ಕುಂದಿಹೋಗಿದೆ.
\q ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
\q
\v 8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
\q ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
\q ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
\q ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
\s5
\q
\v 9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;
\q ಶತ್ರುಗಳಿಂದ ನನ್ನನ್ನು ಬಿಡಿಸು.
\q
\v 10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,
\q ನನ್ನ ದೇವರು ನೀನಲ್ಲವೋ?
\q ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
\s5
\q
\v 11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;
\q ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
\q
\v 12 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.
\q ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;
\q ನಾನು ನಿನ್ನ ಸೇವಕನಲ್ಲವೇ.
\s5
\c 144
\ms ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ
\d ದಾವೀದನ ಕೀರ್ತನೆ.
\r (ಕೀರ್ತ. 18; ಧರ್ಮೋ. 33:26-29)
\q
\v 1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
\q ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
\q ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
\q
\v 2 ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು,
\q ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು,
\q
\f +
\fr 144:2
\ft ಅಥವಾ ನನ್ನ ಜನವನ್ನು
\f* ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
\s5
\q
\v 3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು?
\q ಅವನನ್ನು ನೀನು ಏಕೆ ನೆನಸಬೇಕು?
\q ಮಾನವನು ಎಷ್ಟರವನು?
\q ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
\q
\v 4 ಮನುಷ್ಯನು ಬರೀ ಉಸಿರೇ,
\q ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
\s5
\q
\v 5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ,
\q ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
\q
\v 6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು,
\q ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
\s5
\q
\v 7 ಮೇಲಣ ಲೋಕದಿಂದ ಕೈಚಾಚಿ,
\q ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
\q
\v 8 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ
\q ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
\s5
\q
\v 9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು,
\q ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
\q
\v 10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು
\q ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
\q
\v 11 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ
\q ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
\s5
\q
\v 12 ಯೌವನಸ್ಥರಾದ ನಮ್ಮ ಗಂಡುಮಕ್ಕಳು
\q ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು,
\q ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
\q
\v 13 ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು,
\q ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
\s5
\q
\v 14 ನಮ್ಮ ಪಶುಗಳು ಅಸಂಖ್ಯಾತವಾಗಲಿ,
\q ವೈರಿಗಳು ಒಳಗೆ ನುಗ್ಗುವುದಾಗಲಿ,
\q ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ,
\q ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
\q
\v 15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು,
\q ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
\s5
\c 145
\ms ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ
\d ದಾವೀದನ ಕೀರ್ತನೆ.
\b
\q
\v 1 ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು,
\q ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
\q
\v 2 ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು,
\q ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
\q
\v 3 ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
\q ಆತನ ಮಹತ್ತು ಅಪಾರವಾದದ್ದು.
\s5
\q
\v 4 ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು,
\q ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
\q
\v 5
\f +
\fr 145:5
\ft ಕೆಲವು ಹಸ್ತಪ್ರತಿಗಳಲ್ಲಿ ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವೆನು ಎಂದು ಇದೆ.
\f* ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು,
\q ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
\s5
\q
\v 6 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು.
\q ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
\q
\v 7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು,
\q ನಿನ್ನ ನೀತಿಯನ್ನು ಹೊಗಳುವರು.
\s5
\q
\v 8 ಯೆಹೋವನು ದಯೆಯು, ಕನಿಕರವು ಉಳ್ಳವನು,
\q ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
\q
\v 9 ಯೆಹೋವನು ಸರ್ವೋಪಕಾರಿಯು,
\q ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
\s5
\q
\v 10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು,
\q ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
\q
\v 11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು,
\q ನಿನ್ನ ಪ್ರತಾಪವನ್ನು ವರ್ಣಿಸುವರು.
\q
\v 12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ,
\q ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
\s5
\q
\v 13
\f +
\fr 145:13
\ft ಕೆಲವು ಹಸ್ತಪ್ರತಿಗಳಲ್ಲಿ ಯೆಹೋವನು ತನ್ನ ಎಲ್ಲ ವಾಗ್ದಾನಗಳಲ್ಲಿ ನಂಬಿಗಸ್ತನು, ತನ್ನ ಎಲ್ಲಾ ಕ್ರಿಯೆಗಳಲ್ಲಿ ಕರುಣೆಯುಳ್ಳವನು ಆಗಿದ್ದಾನೆ ಎಂದು ಇದೆ.
\f* ನಿನ್ನ ರಾಜ್ಯವು ಶಾಶ್ವತವಾಗಿದೆ,
\q ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
\s5
\q
\v 14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ,
\q ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
\q
\v 15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ,
\q ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
\q
\v 16 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
\s5
\q
\v 17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು,
\q ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
\q
\v 18 ಯೆಹೋವನಿಗೆ ಮೊರೆಯಿಡುವವರು,
\q ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
\q
\v 19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ,
\q ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
\s5
\q
\v 20 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ,
\q ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
\q
\v 21 ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು,
\q ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು
\q ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
\s5
\c 146
\ms ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು
\q
\v 1 ಯೆಹೋವನಿಗೆ ಸ್ತೋತ್ರ!
\q ನನ್ನ ಮನವೇ, ಯೆಹೋವನನ್ನು ಸ್ತುತಿಸು.
\q
\v 2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು,
\q ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
\s5
\q
\v 3 ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,
\q ಅವರು ಸಹಾಯ ಮಾಡ ಶಕ್ತರಲ್ಲ,
\q
\v 4 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,
\q ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
\s5
\q
\v 5 ಯಾರಿಗೆ ಯಾಕೋಬನ ದೇವರು ಸಹಾಯಕನೋ,
\q ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ,
\q ಅವನೇ ಧನ್ಯನು.
\q
\v 6 ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ,
\q ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
\s5
\q
\v 7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ,
\q ಹಸಿದವರಿಗೆ ಆಹಾರ ಕೊಡುವವನೂ ಆತನೇ.
\q ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
\q
\v 8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
\q ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
\q ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
\s5
\q
\v 9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ.
\q ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ.
\q ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
\q
\v 10 ಯೆಹೋವನು ಸದಾಕಾಲವೂ ಅರಸನಾಗಿರುವನು,
\q ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು,
\q ಯೆಹೋವನಿಗೆ ಸ್ತೋತ್ರ!
\s5
\c 147
\ms ಸ್ವಪ್ರಜಾರಕ್ಷಕನಾಗಿರುವ ಸೃಷ್ಟಿಪಾಲಕನಿಗೆ ಸ್ತೋತ್ರ
\r (ಕೀರ್ತ. 33)
\q
\v 1 ಯೆಹೋವನಿಗೆ ಸ್ತೋತ್ರ!
\q ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ,
\q ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
\s5
\q
\v 2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ,
\q ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
\q
\v 3 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
\q ಅವರ ಗಾಯಗಳನ್ನು ಕಟ್ಟುತ್ತಾನೆ.
\s5
\q
\v 4 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ,
\q ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
\q
\v 5 ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ,
\q ಆತನ ಜ್ಞಾನವು ಅಪರಿಮಿತವಾಗಿದೆ.
\s5
\q
\v 6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ,
\q ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
\q
\v 7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
\q ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
\s5
\q
\v 8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ,
\q ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ,
\q ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
\q
\v 9 ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ
\q ಬೇಕಾದ ಆಹಾರಕೊಡುತ್ತಾನೆ.
\s5
\q
\v 10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ,
\q ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
\q
\v 11 ಯೆಹೋವನು ಆನಂದಿಸುವುದು
\q ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
\s5
\q
\v 12 ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು,
\q ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
\q
\v 13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ,
\q ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
\q
\v 14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ,
\q ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
\s5
\q
\v 15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ,
\q ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
\q
\v 16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ,
\q ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
\s5
\q
\v 17 ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ,
\q ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
\q
\v 18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ,
\q ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
\s5
\q
\v 19 ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ,
\q ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
\q
\v 20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ,
\q ಆತನ ನ್ಯಾಯವಿಧಿಗಳನ್ನು ಅವರು ಅರಿಯರು.
\q ಯೆಹೋವನಿಗೆ ಸ್ತೋತ್ರ!
\s5
\c 148
\ms ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ
\q
\v 1 ಯೆಹೋವನಿಗೆ ಸ್ತೋತ್ರ!
\q ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ,
\q ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
\q
\v 2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,
\q ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
\s5
\q
\v 3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ,
\q ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
\q
\v 4 ಉನ್ನತೋನ್ನತವಾದ ಆಕಾಶವೇ,
\q ಅದರ ಮೇಲಿರುವ ಜಲರಾಶಿಗಳೇ,
\q ಆತನನ್ನು ಸ್ತುತಿಸಿರಿ.
\s5
\q
\v 5 ಅವು ಯೆಹೋವನ ನಾಮವನ್ನು ಸ್ತುತಿಸಲಿ,
\q ಆತನು ಅಪ್ಪಣೆಕೊಡಲು ಅವು ಉಂಟಾದವು.
\q
\v 6 ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ,
\q ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
\s5
\q
\v 7 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ.
\q ತಿಮಿಂಗಿಲಗಳು, ಆದಿಸಾಗರಗಳು
\q
\v 8 ಬೆಂಕಿ,
\f +
\fr 148:8
\fq ಬೆಂಕಿ,
\ft ಮಿಂಚು.
\f* ಕಲ್ಮಳೆ, ಹಿಮ, ಹಬೆ ಇವುಗಳು,
\q ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
\s5
\q
\v 9 ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು,
\q ಎಲ್ಲಾ ತುರಾಯಿ ಮರಗಳು,
\q
\v 10 ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
\s5
\q
\v 11 ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
\q
\v 12 ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
\s5
\q
\v 13 ಯೆಹೋವನನ್ನು ಕೊಂಡಾಡಲಿ.
\q ಆತನ ನಾಮವೊಂದೇ ಮಹತ್ವವುಳ್ಳದ್ದು,
\q ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
\q
\v 14 ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ.
\q ಆದುದರಿಂದ ಆತನ ಎಲ್ಲಾ ಭಕ್ತರು,
\q ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ.
\q ಯೆಹೋವನಿಗೆ ಸ್ತೋತ್ರ!
\s5
\c 149
\ms ಜಯಗೀತೆ
\r (ಪ್ರಕ. 19)
\q
\v 1 ಯೆಹೋವನಿಗೆ ಸ್ತೋತ್ರ!
\q ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
\q ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
\s5
\q
\v 2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;
\q ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
\q
\v 3 ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
\q ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
\s5
\q
\v 4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;
\q ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
\q
\v 5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;
\q ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
\s5
\q
\v 6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,
\q ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
\q
\v 7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;
\q ಅನ್ಯಜನಗಳನ್ನು ದಂಡಿಸುವರು;
\s5
\q
\v 8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;
\q ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
\q
\v 9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;
\q ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
\q ಯೆಹೋವನಿಗೆ ಸ್ತೋತ್ರ.
\s5
\c 150
\ms ಸಮಾಪ್ತಿಯ ಕೀರ್ತನೆ
\q
\v 1 ಯೆಹೋವನಿಗೆ ಸ್ತೋತ್ರ!
\q ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
\q ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
\q
\v 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;
\q ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
\s5
\q
\v 3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;
\q ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
\q
\v 4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
\q ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
\q
\v 5 ತಾಳದಿಂದ ಆತನನ್ನು ಸ್ತುತಿಸಿರಿ;
\q ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
\s5
\q
\v 6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;
\q ಯೆಹೋವನಿಗೆ ಸ್ತೋತ್ರ!