kn_ulb/23-ISA.usfm

4855 lines
510 KiB
Plaintext

\id ISA ISA- Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಯೆಶಾಯನು
\toc1 ಯೆಶಾಯನ ಪ್ರವಾದನೆಯ ಗ್ರಂಥ
\toc2 ಯೆಶಾಯನು
\toc3 isa
\mt1 ಯೆಶಾಯನು
\is ಗ್ರಂಥಕರ್ತೃತ್ವ
\ip ಯೆಶಾಯನ ಪುಸ್ತಕವು ಅದರ ಗ್ರಂಥಕರ್ತನಾದ ಯೆಶಾಯನ ಹೆಸರನ್ನು ಹೊಂದಿಕೊಂಡಿದೆ, ಅವನು ಒಬ್ಬ ಪ್ರವಾದಿನಿಯನ್ನು ಮದುವೆಯಾಗಿದ್ದನು, ಆಕೆಯು ಅವನಿಗೆ ಕನಿಷ್ಠ ಎರಡು ಗಂಡುಮಕ್ಕಳನ್ನು ಹೆತ್ತಳು (ಯೆಶಾಯ 7:3; 8:3). ಅವನು ನಾಲ್ಕು ಯೆಹೂದ್ಯ ಅರಸರ ಆಳ್ವಿಕೆಯಡಿಯಲ್ಲಿ ಉಜ್ಜೀಯ, ಯೋತಾಮ್, ಅಹಾಜ್ ಮತ್ತು ಹಿಜ್ಕೀಯನ ಆಳ್ವಿಕೆಯಲ್ಲಿ ಪ್ರವಾದಿಸಿದನು ಮತ್ತು ಬಹುಶಃ ಅವನು ಕೆಟ್ಟ ಅರಸನಾದ ಮನಸ್ಸೆಯ, ಐದನೆಯ ಅರಸನ ಆಳ್ವಿಕೆಯಡಿಯಲ್ಲಿ ಅವನ ಮರಣ ಹೊಂದಿದನು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 740-680 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಈ ಪುಸ್ತಕವು ಅರಸನಾದ ಉಜ್ಜೀಯನ ಆಳ್ವಿಕೆಯ ಅಂತ್ಯದಲ್ಲಿ ಮತ್ತು ಅರಸರಾದ ಯೋತಾಮ್, ಅಹಾಜ್ ಮತ್ತು ಹಿಜ್ಕೀಯನ ಆಳ್ವಿಕೆಯಲ್ಲಿ ಬರೆಯಲ್ಪಟ್ಟಿತು.
\is ಸ್ವೀಕೃತದಾರ
\ip ದೇವರ ಧರ್ಮಶಾಸ್ತ್ರದ ಕರ್ತವ್ಯಗಳ ಪ್ರಕಾರ ಜೀವಿಸಲು ವಿಫಲರಾಗಿದ್ದ ಯೆಹೂದದ ಜನರು ಯೆಶಾಯನು ಸಂಬೋಧಿಸಿರುವ ಪ್ರಾಥಮಿಕ ಪ್ರೇಕ್ಷಕರಾಗಿರುತ್ತಾರೆ.
\is ಉದ್ದೇಶ
\ip ಇಡೀ ಹಳೆಯ ಒಡಂಬಡಿಕೆಯಲ್ಲಿಯೇ ಯೇಸು ಕ್ರಿಸ್ತನ ಸಮಗ್ರವಾದ ಪ್ರವಾದನಾತ್ಮಕ ಚಿತ್ರಣವನ್ನು ನಮಗೆ ಒದಗಿಸುವುದು ಯೆಶಾಯನ ಉದ್ದೇಶವಾಗಿತ್ತು. ಇದು ಆತನ ಜೀವನದ ಸಂಪೂರ್ಣ ವ್ಯಾಪ್ತಿಯನ್ನು ಅಂದರೆ: ಆತನ ಆಗಮನದ ಘೋಷಣೆಯನ್ನು (ಯೆಶಾಯ 40:3-5), ಆತನ ಕನ್ನಿಕೆಯ ಜನನವನ್ನು (7:14), ಶುಭವಾರ್ತೆಯ ಆತನ ಸಾರೋಣವನ್ನು (61:1), ಆತನ ಯಜ್ಞರೂಪವಾದ ಮರಣವನ್ನು (52:13—53:12), ಮತ್ತು ಆತನ ಸ್ವಂತದವರನ್ನು ಕೊಂಡೊಯ್ಯುವುದಕ್ಕಾಗಿರುವ ಆತನ ಪುನರಾಗಮನವನ್ನು ಒಳಗೊಂಡಿದೆ (60:2-3). ಪ್ರವಾದಿಯಾದ ಯೆಶಾಯನು ಪ್ರಾಥಮಿಕವಾಗಿ ಯೆಹೂದ ರಾಜ್ಯದವರಿಗೆ ಪ್ರವಾದಿಸಲು ಕರೆಯಲ್ಪಟ್ಟನಾಗಿದ್ದನು. ಯೆಹೂದವು ಉಜ್ಜೀವನದ ಕಾಲ ಮತ್ತು ಬಂಡಾಯದ ಸಮಯಗಳ ಮೂಲಕ ಹಾದು ಹೋಗುತ್ತಿತ್ತು. ಯೆಹೂದ್ಯವು ಅಶ್ಶೂರ್ಯ ಮತ್ತು ಐಗುಪ್ತಗಳಿಂದ ನಾಶನದ ಬೆದರಿಕೆಗೆ ಒಳಗಾಗಿತ್ತು, ಆದರೆ ದೇವರ ಕರುಣೆಯ ನಿಮಿತ್ತ ಅವರು ಕಾಪಾಡಲ್ಪಟ್ಟರು. ಯೆಶಾಯನು ಪಾಪದಿಂದ ಪಶ್ಚಾತ್ತಾಪಡುವಂಥ ಮತ್ತು ಭವಿಷ್ಯದಲ್ಲಿ ದೇವರ ಬಿಡುಗಡೆಯ ಆಶಾದಾಯಕವಾದ ನಿರೀಕ್ಷೆಯ ಕುರಿತ ಸಂದೇಶವನ್ನು ಸಾರಿದನು.
\is ಮುಖ್ಯಾಂಶ
\ip ರಕ್ಷಣೆ
\iot ಪರಿವಿಡಿ
\io1 1. ಯೆಹೂದದ ಖಂಡನೆ (1:1—12:6)
\io1 2. ಇತರ ರಾಷ್ಟ್ರಗಳ ವಿರುದ್ಧ ಖಂಡನೆ (13:1—23:18)
\io1 3. ಭವಿಷ್ಯದ ಸಂಕಟ (24:1—27:13)
\io1 4. ಇಸ್ರಾಯೇಲ್ ಮತ್ತು ಯೆಹೂದದ ಖಂಡನೆ (28:1—35:10)
\io1 5. ಹಿಜ್ಕೀಯನ ಮತ್ತು ಯೆಶಾಯನ ಚರಿತ್ರೆ (36:1—38:22)
\io1 6. ಮೆಸ್ಸೀಯನ ರಕ್ಷಣೆ (49:1—57:21)
\io1 7. ಸಮಾಧಾನಕ್ಕಾಗಿ ದೇವರ ಯೋಜನೆ (58:1—66:24)
\s5
\c 1
\p
\v 1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
\s ದೈವದ್ರೋಹಿಯಾದ ಜನಾಂಗ
\s5
\q
\v 2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ.
\q ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
\q
\v 3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು.
\q ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
\s5
\q
\v 4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ,
\q ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ.
\q ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ.
\q ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
\s5
\q
\v 5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ?
\q ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
\q
\v 6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ,
\q ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ.
\q ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
\s5
\q
\v 7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ.
\q ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ.
\q ಅದು ಅನ್ಯಜನರಿಂದ ಹಾಳಾಯಿತು.
\q
\v 8 ಯೆರೂಸಲೇಮಿನ ನಗರವೊಂದೇ
\f +
\fr 1:8
\fq ಯೆರೂಸಲೇಮಿನ ನಗರವೊಂದೇ
\ft ಅಥವಾ ಚೀಯೋನ್ ಕುಮಾರ್ತೆಯರು.
\f* ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ,
\q ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
\s5
\q
\v 9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ,
\q ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
\s5
\p
\v 10 ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ.
\q ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
\q
\v 11 ಯೆಹೋವನು ಹೀಗೆನ್ನುತ್ತಾನೆ, <<ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ?
\q ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು.
\q ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
\s5
\q
\v 12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ;
\q ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
\q
\v 13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ;
\q ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
\s5
\q
\v 14 ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ;
\q ಇವು ನನಗೆ ಭಾರ; ಸಹಿಸಲು ಬೇಸರ.
\q
\v 15 ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು.
\q ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ.
\q ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
\s5
\q
\v 16 ನಿಮ್ಮನ್ನು ತೊಳೆದು ಶುದ್ಧರಾಗಿ,
\q ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ,
\q ದುರಾಚಾರವನ್ನು ಬಿಡಿ,
\q
\v 17 ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ.
\q ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ.
\q ಅನಾಥನಿಗೆ ನ್ಯಾಯತೀರಿಸಿರಿ.
\q ವಿಧವೆಯ ಪಕ್ಷವಾಗಿ ವಾದಿಸಿರಿ.>>
\s5
\p
\v 18 <<ಬನ್ನಿರಿ ವಾದಿಸುವ>> ಎಂದು ಯೆಹೋವನು ಅನ್ನುತ್ತಾನೆ.
\q <<ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು.
\q ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
\s5
\q
\v 19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
\q
\v 20 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ>>
\q ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
\s ಅಪನಂಬಿಗಸ್ತ ಯೆರೂಸಲೇಮ್
\s5
\p
\v 21 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ!
\q ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ
\q ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
\q
\v 22 ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
\s5
\q
\v 23 ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ;
\q ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು;
\q ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
\s5
\q
\v 24 ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ,
\q <<ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
\q
\v 25 ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ,
\q ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
\s5
\q
\v 26 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು.
\q ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.>>
\s5
\q
\v 27 ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
\q
\v 28 ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
\s5
\q
\v 29 <<ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ.
\q ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
\q
\v 30 ಎಲೆ ಒಣಗಿದ ಏಲಾ ಮರದಂತೆಯೂ,
\q ನೀರಿಲ್ಲದ ವನದ ಹಾಗೂ ಇರುವಿರಿ.
\s5
\q
\v 31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ,
\q ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.>>
\s5
\c 2
\s ಚೀಯೋನಿನ ಮುಂದಣ ಪ್ರಖ್ಯಾತಿ
\p
\v 1 ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
\q
\v 2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು
\q ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು.
\q ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
\s5
\q
\v 3 ಹೊರಟು ಬಂದ ಬಹು ಜನಾಂಗದವರು,
\q <<ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ,
\q ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು>> ಎಂದು ಹೇಳುವರು.
\q ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
\s5
\q
\v 4 ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು;
\q ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು.
\q ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
\s ಯೆಹೋವನ ನ್ಯಾಯನಿರ್ಣಯದ ದಿನ
\s5
\q
\v 5 ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
\q
\v 6 ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ,
\q ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ,
\q ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.
\s5
\q
\v 7 ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ.
\q ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
\q
\v 8 ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ.
\q ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
\s5
\q
\v 9 ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
\q
\v 10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ,
\q ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
\q
\v 11 ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು.
\q ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
\s5
\q
\v 12 ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು
\q ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
\q
\v 13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ
\q ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,
\s5
\q
\v 14 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
\q
\v 15 ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
\q
\v 16 ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ
\f +
\fr 2:16
\fq ಮನೋಹರವಾದ ಪ್ರತಿಯೊಂದು ವಸ್ತುವಿನ
\ft ಅಥವಾ ಮನೋಹರವಾದ ಹಡಗು.
\f* ಮೇಲೆಯೂ ಆ ದಿನವೂ ತಪ್ಪದೇ ಬರುವುದು.
\s5
\q
\v 17 ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು.
\q ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
\q
\v 18 ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
\q
\v 19 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,
\q ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
\s5
\q
\v 20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ,
\q ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
\q
\v 21 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,
\q ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
\q
\v 22 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ.
\q ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
\s5
\c 3
\s ಯೆಹೂದದ ಕುರಿತಾದ ನ್ಯಾಯತೀರ್ಪು
\q
\v 1 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ
\q ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
\q
\v 2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
\q
\v 3 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
\s5
\q
\v 4 ನಾನು, <<ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
\q
\v 5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು,
\q ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
\s5
\q
\v 6 ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು,
\q <ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ> ಎಂದು ನಿರಾಕರಿಸುವನು.
\q
\v 7 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ,
\q <ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ:
\q ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ> >> ಎಂದು ಹೇಳುವನು.
\s5
\q
\v 8 ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು.
\q ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
\q
\v 9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ.
\q ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
\s5
\q
\v 10 ನೀವು ನೀತಿವಂತರಿಗೆ, <<ನಿಮಗೆ ಒಳ್ಳೆಯದಾಗಲಿ>> ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
\q
\v 11 ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
\q
\v 12 ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು.
\q ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
\s5
\q
\v 13 ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
\q
\v 14 ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು.
\q ಏಕೆಂದರೆ, <<ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
\q
\v 15 ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?>>
\q ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
\s ಯೆರೂಸಲೇಮಿನವರಿಗಾಗುವ ದಂಡನೆಯೂ
\s5
\p
\v 16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ,
\q ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ,
\q ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
\q
\v 17 ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
\s5
\q
\v 18 ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
\q
\v 19 ಜುಮುಕಿ, ಬಳೆ, ಶಿರವಸ್ತ್ರ,
\q
\v 20 ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
\s5
\q
\v 21 ಮುದ್ರೆ ಉಂಗುರ, ಮೂಗುತಿ,
\q
\v 22 ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
\q
\v 23 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
\s5
\q
\v 24 ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ,
\q ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು,
\q ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
\q
\v 25 ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
\q
\v 26 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.
\s5
\c 4
\q
\v 1 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು,
\q <<ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು,
\q ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು>> ಎಂದು ಕೇಳಿಕೊಳ್ಳುವರು.
\s ಚೀಯೋನಿನ ಮುಂದಿನ ಸುಸ್ಥಿತಿ
\p
\v 2 ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
\s5
\v 3 ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
\v 4 ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
\s5
\p
\v 5 ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
\v 6 ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
\s5
\c 5
\s ಯೆಹೋವನ ದ್ರಾಕ್ಷಿಯ ತೋಟದ ಗೀತೆ
\q
\v 1 ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು
\q ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
\q
\v 2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು,
\q ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ,
\q ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
\s5
\q
\v 3 ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ,
\q ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
\q
\v 4 ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು?
\q ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
\s5
\q
\v 5 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ.
\q ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
\q
\v 6 ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು.
\q ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
\s5
\q
\v 7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ,
\q ಯೆಹೂದದ ಜನವೇ, ಆತನ ಇಷ್ಟದ ಗಿಡ.
\q ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
\s ಬರಲಿರುವ ಅಪತ್ತು
\s5
\q
\v 8 ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು,
\q ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
\q
\v 9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ,
\q ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
\q
\v 10 ಏಕೆಂದರೆ ಹತ್ತು ಎಕರೆ
\f +
\fr 5:10
\fq ಎಕರೆ
\ft ಎಕರೆ ಎಂದು ಭಾಷಾಂತರಿಸಲ್ಪಟ್ಟಿರುವ ಹೀಬ್ರೂ ಪದದ ಅಕ್ಷರಶಃವಾದ ಅರ್ಥವು ಒಂದು ದಿನದಲ್ಲಿ ಒಂದು ಜೋಡಿ ಎತ್ತುಗಳು ಉಳುವಷ್ಟು ಪ್ರದೇಶವಾಗಿದೆ. ಇದು ಆಧುನಿಕ ಕಾಲದ ಎಕರೆಯ ಅಳತೆ ಅಲ್ಲ.
\f* ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ
\f +
\fr 5:10
\fq ಕೊಳಗದಷ್ಟೇ
\ft ಬತ್ ಅಂದರೆ 22 ಲೀಟರ್.
\f* ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ
\f +
\fr 5:10
\fq ಖಂಡುಗ
\ft ಹೋಮೆರ್ 220 ಲೀಟರ್ ಏಫಾ 22 ಲೀಟರ್
\f* ಬೀಜದಿಂದ ಕಡಿಮೆ ದವಸವು ಬರುವುದು.
\s5
\q
\v 11 ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು,
\q ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
\q
\v 12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು.
\q ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
\s5
\q
\v 13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ.
\q ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
\q
\v 14 ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು,
\q ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.
\s5
\q
\v 15 ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
\q
\v 16 ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
\q
\v 17 ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.
\f +
\fr 5:17
\fq ಕುರಿಮರಿಗಳು ಅಲ್ಲಿ ಮೇಯುವವು.
\ft ಅಂದರೆ ಇತರ ಜನರು ತಿನ್ನುವರು.
\f*
\s5
\q
\v 18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
\q
\v 19 ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ.
\q ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
\s5
\q
\v 20 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ;
\q ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು,
\q ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
\q
\v 21 ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
\s5
\q
\v 22 ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
\q
\v 23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
\s5
\q
\v 24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ,
\q ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ,
\q ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
\s5
\q
\v 25 ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು.
\q ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು.
\q ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
\s5
\q
\v 26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು.
\q ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
\s5
\q
\v 27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ.
\q ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
\q
\v 28 ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ.
\q ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
\s5
\q
\v 29 ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ.
\q ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
\q
\v 30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು.
\q ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
\s5
\c 6
\s ಯೆಶಾಯನಿಗೆ ಯೆಹೋವನ ಕರೆ
\p
\v 1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
\v 2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
\s5
\p
\v 3 ಆಗ ಒಬ್ಬನು ಮತ್ತೊಬ್ಬನಿಗೆ,
\q <<ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ>> ಎಂದು ಕೂಗಿ ಹೇಳಿದನು.
\s5
\p
\v 4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
\v 5 ಆಗ ನಾನು,
\q <<ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು.
\q ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು.
\q ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!>> ಎಂದು ಕೂಗಿಕೊಳ್ಳಲು,
\s5
\p
\v 6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
\v 7 ನನ್ನ ಬಾಯಿಗೆ ಮುಟ್ಟಿಸಿ,
\q <<ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು>> ಎಂದನು.
\s5
\p
\v 8 ಆಗ, <<ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?>> ಎಂಬ ಕರ್ತನ ನುಡಿಯನ್ನು ಕೇಳಿ, <<ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು>> ಎಂದೆನು.
\q
\v 9 ಅದಕ್ಕೆ ಆತನು, <<ನೀನು ಈ ಜನರ ಬಳಿಗೆ ಹೋಗಿ,
\q ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
\s5
\q
\v 10 ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ,
\q ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ>> ಎಂದು ನನಗೆ ಹೇಳಿದನು.
\s5
\p
\v 11 ಅದಕ್ಕೆ ನಾನು, <<ಕರ್ತನೇ, ಇದು ಎಷ್ಟರವರೆಗೆ?>> ಎಂದು ಕೇಳಲು ಅದಕ್ಕೆ ಆತನು,
\q <<ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ,
\q ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
\q
\v 12 ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
\s5
\q
\v 13 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು.
\q ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ,
\q ಉಳಿಯುವುದು ಬುಡ ಮಾತ್ರ>> ಎಂದು ಉತ್ತರಕೊಟ್ಟನು.
\s5
\c 7
\s ಆಹಾಜನಿಗೆ ಯೆಶಾಯನ ಬೋಧನೆ
\p
\v 1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
\v 2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ
\f +
\fr 7:2
\fq ಎಫ್ರಾಯೀಮ್ಯರೊಂದಿಗೆ
\ft ಅಂದರೆ ಇಸ್ರಾಯೇಲ್ಯರ ಉತ್ತರ ರಾಜ್ಯ.
\f* ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
\s5
\p
\v 3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, <<ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
\v 4 <ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.> >>
\s5
\p
\v 5 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
\v 6 <<ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ>> ಎಂದುಕೊಂಡಿದ್ದಾರೆ.
\s5
\q
\v 7 ಕರ್ತನಾದ ಯೆಹೋವನು ಹೇಳುವುದೇನೆಂದರೆ, <<ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
\q
\v 8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ.
\q ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
\q
\v 9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ.
\q ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ>> ಎಂಬುದೇ.
\s ಇಮ್ಮಾನುವೇಲನ ಮುಂಗುರುತು
\s5
\p
\v 10 ಮತ್ತೆ ಯೆಹೋವನು ಆಹಾಜನಿಗೆ,
\v 11 <<ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ>> ಎಂದು ಹೇಳಿದನು.
\v 12 ಆಗ ಆಹಾಜನು, <<ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ>> ಎಂದನು.
\s5
\p
\v 13 ಅದಕ್ಕೆ ಯೆಶಾಯನು ಹೀಗೆ ಹೇಳಿದನು, <<ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
\v 14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
\v 15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
\s5
\p
\v 16 <<ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
\v 17 ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.>>
\s5
\q
\v 18 ಆ ಕಾಲದಲ್ಲಿ
\q ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ,
\q ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
\q
\v 19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ,
\q ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
\s5
\p
\v 20 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ
\q ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
\q
\v 21 ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
\q
\v 22 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು.
\q ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
\s5
\q
\v 23 ಆಗ ಸಾವಿರ ರೂಪಾಯಿ
\f +
\fr 7:23
\fq ಸಾವಿರ ರೂಪಾಯಿ
\ft ಅಂದರೆ 11.5 ಕಿಲೋಗ್ರಾಂ.
\f* ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ,
\q ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
\q
\v 24 ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
\q
\v 25 ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ.
\q ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
\s5
\c 8
\s ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ
\p
\v 1 ಆ ಮೇಲೆ ಯೆಹೋವನು ನನಗೆ, <<ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, <ಮಹೇರ್ ಶಾಲಾಲ್ ಹಾಷ್ ಬಜ್
\f +
\fr 8:1
\fq ಮಹೇರ್ ಶಾಲಾಲ್ ಹಾಷ್ ಬಜ್
\ft ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ.
\f* > ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
\v 2 ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು>> ಎಂದು ಹೇಳಿದನು.
\s5
\p
\v 3 ಅನಂತರ, <<ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ <ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು> ಎಂದು ಹೇಳಿದನು.
\v 4 ಆ ಮಗುವು, <ಅಪ್ಪಾ, ಅಮ್ಮಾ> ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು>> ಎಂದು ಹೇಳಿದನು.
\s5
\p
\v 5 ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,
\q
\v 6 <<ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ,
\q ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,
\q
\v 7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು.
\q ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
\s5
\q
\v 8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು.
\q ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.>>
\s5
\q
\v 9 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ;
\q ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
\q
\v 10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ.
\q ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
\s ದೇವರಿಗೆ ಭಯಪಡಿರಿ
\s5
\p
\v 11 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,
\q
\v 12 <<ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ;
\q ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
\q
\v 13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
\s5
\q
\v 14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ
\f +
\fr 8:14
\fq ಎರಡು ಮನೆತನಕ್ಕೆ
\ft ಇಸ್ರಾಯೇಲ್ ಮತ್ತು ಯೆಹೂದ.
\f* ಎಡವುವ ಕಲ್ಲೂ,
\q ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.
\q
\v 15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.>>
\s5
\p
\v 16
\f +
\fr 8:16
\ft ಕಟ್ಟಿಡು ಎಂಬುದು ಸುರುಳಿಯನ್ನು ಸುತ್ತಿಡುವ ಮತ್ತು ಕಟ್ಟಿಡುವ ಕ್ರಿಯೆಯನ್ನು ವಿವರಿಸುತ್ತದೆ. ಉಪದೇಶವು ಪ್ರಾಯಶಃ, ಸುರುಳಿಯಲ್ಲಿ ಬರೆದಿಟ್ಟಿರುವ ಯೆಶಾಯನ ಮುಂಚಿನ ಮಾತುಗಳನ್ನು ಸೂಚಿಸುತ್ತದೆ.
\f* ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
\q
\v 17 ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
\q
\v 18 ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ
\q ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
\s5
\p
\v 19 <<ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ>> ಎಂದು ಒಂದು ವೇಳೆ ನಿಮಗೆ ಹೇಳಾರು, <<ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
\v 20 ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ>> ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
\s5
\q
\v 21 ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು
\q ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
\q
\v 22 ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ,
\q ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
\s5
\c 9
\s ನಮಗಾಗಿ ಒಂದು ಮಗುವು ಹುಟ್ಟಿತು
\q
\v 1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ.
\q ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು,
\q ಆತನು ಅವಮಾನಕ್ಕೆ ಗುರಿಮಾಡಿದನು.
\q ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
\q
\v 2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು.
\q ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
\s5
\q
\v 3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ.
\q ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ,
\q ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
\s5
\q
\v 4 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ,
\q ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
\q
\v 5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ,
\q ರಕ್ತದಲ್ಲಿ ಅದ್ದಿದ ಉಡುಪುಗಳೂ,
\q ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
\s5
\q
\v 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
\q ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
\q ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
\q ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
\q ಸಮಾಧಾನದ ಪ್ರಭು ಎಂಬುದು ಆತನ ಹೆಸರು.
\q
\v 7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು.
\q ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ
\q ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು.
\q ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
\s ಇಸ್ರಾಯೇಲರ ವಿರುದ್ಧ ಯೆಹೋವನ ಕೋಪ
\s5
\q
\v 8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
\q
\v 9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
\q
\v 10 <<ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು>> ಎಂಬುದೇ.
\s5
\q
\v 11 ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
\q
\v 12 ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು.
\q ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
\s5
\q
\v 13 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
\q
\v 14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
\q
\v 15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
\s5
\q
\v 16 ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
\q
\v 17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ.
\q ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ.
\q ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
\s5
\q
\v 18 ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ,
\q ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
\q
\v 19 ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ.
\q ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
\s5
\q
\v 20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ.
\q ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
\q
\v 21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ.
\q ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
\s5
\c 10
\q
\v 1 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
\q
\v 2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ,
\q ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
\s5
\q
\v 3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ?
\q ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
\q
\v 4 ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ.
\q ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
\s ಯೆಹೋವನು ಅಶ್ಶೂರದಿಂದ ತನ್ನ ಜನರನ್ನು ದಂಡಿಸುವುದು
\s5
\q
\v 5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
\q
\v 6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ,
\q ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
\s5
\q
\v 7 ಅವನ ಅಭಿಪ್ರಾಯವೋ, ಹಾಗಲ್ಲ.
\q ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
\q
\v 8 ಅವನು ಹೇಳುವುದೇನೆಂದರೆ, <<ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
\q
\v 9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ?
\q ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
\s5
\q
\v 10 ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
\q
\v 11 ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ,
\q ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?>> ಎಂಬುದೇ.
\s5
\p
\v 12 ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, <<ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.>>
\v 13 ಏಕೆಂದರೆ ಅವನು ತನ್ನೊಳಗೆ,
\q <<ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ.
\q ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು,
\q ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ
\f +
\fr 10:13
\fq ಮಹಾವೀರನಂತೆ
\ft ಅಥವಾ ಹೋರಿಯಂತೆ.
\f* ಕೆಡವಿಬಿಟ್ಟಿದ್ದೇನೆ.
\s5
\q
\v 14 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ.
\q ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ.
\q ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ>> ಎಂದು ಅಂದುಕೊಂಡನು.
\s5
\p
\v 15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ?
\q ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
\q
\v 16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು.
\q ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
\s5
\q
\v 17 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು.
\q ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
\q
\v 18 ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು.
\q ದೇಶವೋ ರೋಗಿಯಂತೆ ನಾಶವಾಗುವುದು.
\q
\v 19 ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
\s ಅಳಿದುಳಿದ ಇಸ್ರಾಯೇಲರು
\s5
\p
\v 20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ
\f +
\fr 10:20
\fq ಹೊಡೆದವನ
\ft ಅಂದರೆ ಅಶ್ಶೂರದ ಅರಸನ.
\f* ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
\v 21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
\s5
\p
\v 22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
\v 23 ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
\s5
\p
\v 24 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, <<ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
\v 25 ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.>>
\s5
\p
\v 26 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
\v 27 ಆ ದಿನದಲ್ಲಿ,
\q ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು,
\q ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
\s5
\q
\v 28 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ,
\q ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
\q
\v 29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ.
\q ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
\s5
\q
\v 30 ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ,
\q ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
\q
\v 31 ಮದ್ಮೇನ ದಿಕ್ಕಾಪಾಲಾಯಿತು.
\q ಗೇಬೀಮಿನ ನಿವಾಸಿಗಳು ವಲಸೆ ಹೋದರು.
\q
\v 32 ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು.
\q ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
\s5
\p
\v 33 ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು.
\q ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
\q
\v 34 ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
\s5
\c 11
\s ಇಷಯನ ಬೇರಿನಿಂದ ಕೊಂಬೆ
\p
\v 1 ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
\p
\v 2 ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ,
\q ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
\s5
\q
\v 3 ಆತನು ಯೆಹೋವನ ಭಯದಲ್ಲಿ ಆನಂದಿಸುವನು.
\q ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
\q
\v 4 ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು.
\q ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
\q
\v 5 ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
\s5
\q
\v 6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು.
\q ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
\q
\v 7 ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು.
\q ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
\s5
\q
\v 8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು;
\q ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.
\q
\v 9 ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ;
\q ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
\s5
\q
\v 10 ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು;
\q ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
\q
\v 11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು
\q ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ,
\q ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ
\f +
\fr 11:11
\fq ಸಮುದ್ರದ ಕರಾವಳಿ ದ್ವೀಪಗಳಿಂದಲೂ
\ft ಅಂದರೆ ಪ್ರಾರಂಭ ಪ್ರಾಚೀನ ಕಾಲದಲ್ಲಿ ದೂರವಿರುವ ದೇಶಗಳು ಎಂದರ್ಥ.
\f* ಉಳಿದವರನ್ನು ಬರಮಾಡಿಕೊಳ್ಳುವನು.
\s5
\q
\v 12 ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ,
\q ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
\q
\v 13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು.
\q ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
\s5
\q
\v 14 ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು.
\q ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
\q
\v 15 ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ,
\q ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
\s5
\q
\v 16 ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ,
\q ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
\s5
\c 12
\s ಯೆಹೋವನ ಸ್ತೋತ್ರಗೀತೆಗಳು
\p
\v 1 ಆ ದಿನದಲ್ಲಿ ನೀನು ಹೇಳುವುದೇನೆಂದರೆ,
\q <<ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
\q
\v 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;
\q ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.>>
\s5
\q
\v 3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
\q
\v 4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, <<ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,
\q ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
\s5
\q
\v 5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
\q
\v 6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ>> ಎಂಬುದೇ.
\s5
\c 13
\s1 ಬಾಬೆಲಿನ ವಿಷಯವಾದ ದೈವೋಕ್ತಿ
\p
\v 1 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
\q
\v 2 ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ,
\q ಅವರನ್ನು ಕೈಬೀಸಿ ಕರೆಯಿರಿ.
\q
\v 3 ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ.
\q ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
\s5
\q
\v 4 ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ!
\q ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ!
\q ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
\q
\v 5 ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ,
\q ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
\s5
\q
\v 6 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
\q
\v 7 ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.
\q
\v 8 ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು.
\q ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
\s5
\q
\v 9 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ,
\q ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
\q
\v 10 ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ.
\q ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
\s5
\p
\v 11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ,
\q ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
\q
\v 12 ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.
\s5
\q
\v 13 ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ
\q ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ,
\q ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
\q
\v 14 ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ
\f +
\fr 13:14
\fq ಇಲ್ಲದಂಥ
\ft ಅಥವಾ ಕುರುಬನಿಲ್ಲದಂಥ.
\f* ಕುರಿಗಳಂತೆಯೂ
\q ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
\s5
\q
\v 15 ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
\q
\v 16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು.
\q ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
\s5
\q
\v 17 ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು.
\q ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
\q
\v 18 ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು.
\q ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
\s5
\q
\v 19 ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬೆಲೋನಿಗೆ,
\q ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
\q
\v 20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು;
\q ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
\s5
\q
\v 21 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು.
\q ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
\q
\v 22 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.
\s5
\c 14
\p
\v 1 ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
\v 2 ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
\s5
\p
\v 3 ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
\v 4 ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು:
\q1 <<ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
\s5
\q
\v 5 ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
\q
\v 6 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು,
\q ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
\s5
\q1
\v 7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
\q
\v 8 ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ,
\q <ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ> ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
\q
\v 9 ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ.
\q ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ,
\q ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
\s5
\q
\v 10 ಅವರೆಲ್ಲರು ನಿನ್ನನ್ನು ಕುರಿತು,
\q <ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?> ಎಂದು ಮಾತನಾಡಿಕೊಳ್ಳುವರು.
\q
\v 11 ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ.
\q ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
\s5
\q
\v 12 ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ!
\q ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
\q
\v 13 ನೀನು ನಿನ್ನ ಮನಸ್ಸಿನಲ್ಲಿ, <ನಾನು ಆಕಾಶಕ್ಕೆ ಏರಿ,
\q ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ,
\q ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
\q
\v 14 ಉನ್ನತವಾದ ಮೇಘಮಂಡಲದ ಮೇಲೆ ಏರಿ
\q ಮಹೋನ್ನತನಿಗೆ ಸಮಾನನಾಗುವೆನು> ಎಂದುಕೊಂಡೆಯಲ್ಲಾ!
\s5
\q
\v 15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
\q
\v 16 ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ,
\q <ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
\q
\v 17 ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?> ಎಂದುಕೊಳ್ಳುವರು.
\s5
\q
\v 18 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ
\q ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
\q
\v 19 ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ;
\q ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
\q
\v 20 ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ,
\q ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ.
\q ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.>>
\s5
\q
\v 21 ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ,
\q ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
\q
\v 22 <<ನಾನು ಅವರ ವಿರುದ್ಧವಾಗಿ ಏಳುತ್ತೇನೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\q <<ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\q
\v 23 <<ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು.
\q ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು>> ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
\s ಅಶ್ಶೂರದ ವಿಷಯವಾದ ದೈವೋಕ್ತಿ
\s5
\p
\v 24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ,
\q <<ನಾನು ಸಂಕಲ್ಪಿಸಿದ್ದೇ ನೆರವೇರುವುದು,
\q ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
\q
\v 25 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು.
\q ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
\s5
\q
\v 26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
\q
\v 27 ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?>> ಎಂಬುದೇ.
\s ಫಿಲಿಷ್ಟಿಯರ ವಿಷಯವಾದ ದೈವೋಕ್ತಿ
\s5
\p
\v 28 ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:
\q
\v 29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ;
\q ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
\q
\v 30 ಬಡವರಲ್ಲಿ ಹಿರಿಯ ಮಕ್ಕಳು
\f +
\fr 14:30
\fq ಬಡವರಲ್ಲಿ ಹಿರಿಯ ಮಕ್ಕಳು
\ft ಅಂದರೆ ಬಡವರಲ್ಲಿ ಕಡು ಬಡವರು.
\f* ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು.
\q ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕ್ಷಾಮವು ಕೊಲ್ಲುವುದು.
\s5
\q
\v 31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ!
\q ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
\q
\v 32 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ
\q ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
\s5
\c 15
\s ಮೋವಾಬಿನ ಬಗ್ಗೆ ದೈವೋಕ್ತಿ
\p
\v 1 ಮೋವಾಬಿನ ಬಗ್ಗೆ ದೈವೋಕ್ತಿ.
\q ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು;
\q ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
\q
\v 2 ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ.
\q ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ.
\q ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
\s5
\q
\v 3 ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ
\q ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
\q
\v 4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ.
\q ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
\s5
\q
\v 5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ,
\q ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ,
\q ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.
\q
\v 6 ನಿಮ್ರೀಮ್ ಹೊಳೆಯು ಹಾಳಾಯಿತು,
\q ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
\q
\v 7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,
\q ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
\s5
\q
\v 8 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ,
\q ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
\q
\v 9 ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ,
\q ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
\s5
\c 16
\q
\v 1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು
\q ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.
\q
\v 2 ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ,
\q ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.
\s5
\q
\v 3 ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ.
\q ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.
\q
\v 4 ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ.
\q ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು,
\q ನಾಶನವು ನಿಂತುಹೋಗುವುದು.
\q ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.
\s5
\q
\v 5 ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು.
\q ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
\s5
\q
\v 6 ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ.
\q ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.
\q
\v 7 ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು.
\q ನೀವು ಕೀರ್ ಹರೆಷೆಥಿನ ಜನರ
\f +
\fr 16:7
\fq ಕೀರ್ ಹರೆಷೆಥಿನ ಜನರ
\ft ಅಥವಾ ಕೀರ್ ಹರೆಷೆಥಿನ ಜನರ ಒಣದ್ರಾಕ್ಷಿ.
\f* ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.
\s5
\q
\v 8 ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ.
\q ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ,
\q ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು,
\q ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
\s5
\q
\v 9 ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು.
\q ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು.
\q ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.
\q
\v 10 ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ.
\q ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.
\s5
\q
\v 11 ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.
\q
\v 12 ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು
\q ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.
\s5
\p
\v 13 ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.
\v 14 ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, <<ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು>> ಎಂಬುದೇ.
\s5
\c 17
\s ದಮಸ್ಕದ ವಿಷಯವಾದ ದೈವೋಕ್ತಿ
\p
\v 1 ದಮಸ್ಕದ ವಿಷಯವಾದ ದೈವೋಕ್ತಿ.
\q <<ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.
\q
\v 2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು.
\q ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.
\q
\v 3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು.
\q ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\s5
\q
\v 4 <<ಆ ದಿನದಲ್ಲಿ,
\q ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
\q
\v 5 ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು.
\q ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.
\s5
\q
\v 6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ,
\q ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು>> ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.
\m
\v 7 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.
\s5
\p
\v 8 ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.
\q
\v 9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ,
\q ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.
\s5
\q
\v 10 ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ.
\q ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
\q
\v 11 ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ.
\q ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.
\s ಅಶ್ಶೂರದ ವಿಷಯವಾದ ದೈವೋಕ್ತಿ
\s5
\q
\v 12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ!
\q ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
\q
\v 13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ.
\q ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
\q
\v 14 ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ.
\q ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
\s5
\c 18
\s ಕೂಷಿನ ವಿಷಯವಾದ ದೈವೋಕ್ತಿ
\q
\v 1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,
\q
\v 2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ,
\q ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ,
\q ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ,
\q ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
\s5
\q
\v 3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ,
\q ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
\s5
\q
\v 4 ಯೆಹೋವನು ನನಗೆ ಹೇಳುವುದೇನೆಂದರೆ, <<ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ,
\q ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು>> ಎಂಬುದೇ.
\q
\v 5 ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ,
\q ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.
\s5
\q
\v 6 ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು.
\q ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.
\p
\v 7 ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
\s5
\c 19
\s ಐಗುಪ್ತದ ವಿಷಯವಾದ ದೈವೋಕ್ತಿ
\p
\v 1 ಐಗುಪ್ತದ ವಿಷಯವಾದ ದೈವೋಕ್ತಿ.
\q ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು.
\q ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
\q
\v 2 <<ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ,
\q ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
\s5
\q
\v 3 ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು.
\q ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
\q
\v 4 ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು>>
\q ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
\s5
\q
\v 5 ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
\q
\v 6 ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು.
\q ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
\s5
\q
\v 7 ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು,
\q ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
\q
\v 8 ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು.
\q ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
\s5
\q
\v 9 ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
\q
\v 10 ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
\s5
\q
\v 11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ.
\q ನೀನು ಫರೋಹನಿಗೆ, <<ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
\q
\v 12 ನಿನ್ನ ಜ್ಞಾನಿಗಳು ಎಲ್ಲಿ?>> ಎಂದು ಅವರು ನಿನಗೆ ತಿಳಿ ಹೇಳಲಿ.
\q ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
\s5
\q
\v 13 ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ
\f +
\fr 19:13
\fq ನೋಫಿನ
\ft ಅಥವಾ ಮೇಂಫಿಸ್.
\f* ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
\q
\v 14 ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ.
\q ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
\q
\v 15 ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
\s5
\p
\v 16 ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
\v 17 ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.
\s5
\p
\v 18 ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು <<ನಾಶಪುರ.>>
\s5
\p
\v 19 ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
\v 20 ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
\s5
\p
\v 21 ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
\v 22 ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
\s5
\p
\v 23 ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
\s5
\p
\v 24 ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
\v 25 <<ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ>> ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.
\s5
\c 20
\s ಐಗುಪ್ತದ ಮತ್ತು ಕೂಷಿನ ವಿಷಯವಾದ ದೈವೋಕ್ತಿ
\p
\v 1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು
\f +
\fr 20:1
\fq ದಳವಾಯಿಯು
\ft ತರ್ತನ್ 2 ಅರಸ 18:17.
\f* ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.
\v 2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, <<ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು>> ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.
\s5
\p
\v 3 ಆಗ ಯೆಹೋವನು ಹೀಗೆ ಹೇಳಿದನು, <<ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.>>
\v 4 ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
\s5
\p
\v 5 ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
\v 6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, <<ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?>> ಎಂದು ಅಂದುಕೊಳ್ಳುವರು.
\s5
\c 21
\s ಬಾಬೆಲಿನ ವಿಷಯವಾದ ದೈವೋಕ್ತಿ
\p
\v 1 ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ.
\q ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ
\q ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
\q
\v 2 ಘೋರದರ್ಶನವು ನನಗೆ ತಿಳಿಯ ಬಂದಿದೆ;
\q ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ.
\q ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು!
\q ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
\s5
\q
\v 3 ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ,
\q ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ,
\q ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
\q
\v 4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ,
\q ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
\s5
\p
\v 5 ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ;
\q ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
\s5
\q
\v 6 ಕರ್ತನು ನನಗೆ ಹೇಳುವುದೇನೆಂದರೆ,
\q <<ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
\q
\v 7 ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ,
\q ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ,
\q ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ>> ಎಂಬುದೇ.
\s5
\q
\v 8 ಬಳಿಕ ಅವನು ಸಿಂಹದಂತೆ ಕೂಗಿ,
\q <<ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ,
\q ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
\q
\v 9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.>>
\q ಅವನು ಕೂಗಿ, <<ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು!
\q ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು>> ಎಂದು ಹೇಳುವನು.
\s5
\p
\v 10 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ!
\q ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ,
\q ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
\s ಎದೋಮಿನ ಬಗ್ಗೆ ದೈವೋಕ್ತಿ
\s5
\p
\v 11 ದೂಮದ
\f +
\fr 21:11
\fq ದೂಮದ
\ft ಇದು ಎದೋಮಿನ ಮತ್ತೊಂದು ಹೆಸರಾಗಿದೆ. ದೂಮ ಎಂದರೆ ಶಾಂತತೆ.
\f* ಬಗ್ಗೆ ದೈವೋಕ್ತಿ.
\p ಆತನು ಸೇಯೀರಿನಿಂದ
\f +
\fr 21:11
\fq ಸೇಯೀರಿನಿಂದ
\ft ಇದು ಸಹ ಎದೋಮಿನ ಮತ್ತೊಂದು ಹೆಸರಾಗಿದೆ. ಆದಿ 32:3.
\f* ನನ್ನನ್ನು ಕರೆದು, <<ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
\v 12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ>> ಎಂದು ಕಾವಲುಗಾರನು ಹೇಳಿದನು.
\s ಅರಬಿಯ ಬಗ್ಗೆ ದೈವೋಕ್ತಿ
\s5
\q
\v 13 ಅರಬಿಯ ವಿಷಯವಾದ ದೈವೋಕ್ತಿ.
\q ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
\q
\v 14 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ,
\q ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
\q
\v 15 ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು,
\q ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
\s5
\p
\v 16 ಕರ್ತನು ನನಗೆ ಹೇಳುವುದೇನೆಂದರೆ, <<ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ
\f +
\fr 21:16
\fq ಕೇದಾರಿನ
\ft ಅರಬಿಯದಲ್ಲಿರುವ ಅಡವಿ ಪ್ರದೇಶ.
\f* ಸಕಲ ವೈಭವವು ಇಲ್ಲವಾಗುವುದು.
\v 17 ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು>> ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.
\s5
\c 22
\s ಯೆರೂಸಲೇಮಿನ ಬಗ್ಗೆ ದೈವೋಕ್ತಿ
\p
\v 1 ದಿವ್ಯದರ್ಶನದ ಕಣಿವೆಯ
\f +
\fr 22:1
\fq ಕಣಿವೆಯ
\ft ಯೆರೂಸಲೇಮಿನ.
\f* ವಿಷಯವಾದ ದೈವೋಕ್ತಿ.
\q ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
\q
\v 2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ;
\q ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
\s5
\q
\v 3 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ;
\q ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
\q
\v 4 ಹೀಗಿರಲು, <<ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು,
\q ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
\s5
\q
\v 5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ,
\q ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
\q
\v 6 ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು.
\q ಕೀರಿನವರು ಗುರಾಣಿಯನ್ನು ತೆಗೆದರು.
\q
\v 7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು,
\q ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.>>
\s5
\q
\v 8 ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ.
\q ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
\q
\v 9 ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ;
\q ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
\s5
\q
\v 10 ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
\f +
\fr 22:10
\fq ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
\ft ಪಟ್ಟಣದ ಹೊರ ಮತ್ತು ಒಳ ಗೋಡೆಗಳ ನಡುವೆ ಕಳಪೆ ಸ್ಥಿತಿಯಲ್ಲಿದ್ದ ಮನೆಗಳನ್ನು ಅವರು ನೆಲಸಮ ಮಾಡಿದರು. ಪಟ್ಟಣದ ಹೊರ ಗೋಡೆಯ ದುರಸ್ತಿಗಾಗಿ ಮನೆಗಳನ್ನು ಕೆಡವಲಾಯಿತು.
\f*
\q
\v 11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ;
\q ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
\s5
\q
\v 12 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು.
\q ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
\q
\v 13 ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು,
\q ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
\q
\v 14 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ,
\q <<ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ>> ಎಂಬುದೇ.
\s ಶೆಬ್ನನ ಬಗ್ಗೆ ದೈವೋಕ್ತಿ
\s5
\p
\v 15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, <<ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
\q
\v 16 <ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು?
\q ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?> >>
\s5
\q
\v 17 ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
\q
\v 18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು;
\q ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
\q
\v 19 ಯೆಹೋವನಾದ ನಾನು, <<ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
\s5
\q
\v 20 ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
\q
\v 21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು;
\q ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
\q
\v 22 ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು;
\q ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
\s5
\q
\v 23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು.
\q ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
\q
\v 24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ,
\q ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು>> ಎಂಬುದೇ.
\s5
\p
\v 25 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. <<ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ>> ಎಂಬುದೇ.
\s5
\c 23
\s ತೂರಿನ ಬಗ್ಗೆ ಪ್ರವಾದನೆ
\p
\v 1 ತೂರಿನ ವಿಷಯವಾದ ದೈವೋಕ್ತಿ.
\q ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ.
\q ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
\q
\v 2 ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ,
\q ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
\q
\v 3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ,
\q ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
\s5
\q
\v 4 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ,
\q <<ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ,
\q ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ>> ಎಂದು ನುಡಿದಿದೆಯಷ್ಟೆ.
\q
\v 5 ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
\s5
\q
\v 6 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
\q
\v 7 ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ;
\q ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
\s5
\q
\v 8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು,
\q ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
\q
\v 9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,
\q ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
\s5
\q
\v 10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
\q
\v 11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ.
\q ಕಾನಾನಿನ
\f +
\fr 23:11
\fq ಕಾನಾನಿನ
\ft ಪೊಯಿನಿಕೆಯ.
\f* ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
\q
\v 12 ಆತನು, <<ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ;
\q ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು>> ಎಂದು ಹೇಳಿದ್ದಾನೆ.
\s5
\q
\v 13 ಇಗೋ, ಕಸ್ದೀಯರ
\f +
\fr 23:13
\fq ಕಸ್ದೀಯರ
\ft ಬಾಬೆಲಿನವರು.
\f* ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು.
\q ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
\q
\v 14 ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
\s5
\p
\v 15 ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
\q
\v 16 ಅದೇನೆಂದರೆ, <<ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ,
\q ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು>> ಎಂಬುದೇ.
\s5
\p
\v 17 ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
\v 18 ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.
\s5
\c 24
\s ಭೂಮಿಗೆ ಬರಲಿರುವ ವಿನಾಶ
\p
\v 1 ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
\q
\v 2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ,
\q ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.
\s5
\q
\v 3 ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು,
\q ಯೆಹೋವನೇ ಇದನ್ನು ನುಡಿದಿದ್ದಾನೆ.
\q
\v 4 ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
\q
\v 5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ,
\q ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
\s5
\q
\v 6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ.
\q ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
\q
\v 7 ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.
\s5
\q
\v 8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ,
\q ಕಿನ್ನರಿಯ ಆನಂದವು ಅಡಗಿದೆ.
\q
\v 9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.
\s5
\q
\v 10 ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
\q
\v 11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.
\s5
\q
\v 12 ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.
\q
\v 13 ಎಣ್ಣೆಯ ಮರವನ್ನು ಕಡಿದ ಬಳಿಕ,
\q ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
\s5
\q
\v 14 ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು.
\q ಸಮುದ್ರದ ಕಡೆಯಿಂದ ಆರ್ಭಟಿಸುವರು.
\q
\v 15 ಮೂಡಣದವರೇ, <<ಯೆಹೋವನನ್ನು ಸನ್ಮಾನಿಸಿರಿ.
\q ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ>> ಎಂದು ಕೂಗುವರು.
\s5
\p
\v 16 ಭೂಮಂಡಲದ ಕಟ್ಟಕಡೆಯಿಂದ, <<ನೀತಿವಂತರಿಗೆ ಮಹಿಮೆಯಾಗಲಿ>> ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ <<ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ!
\q ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ>> ಎಂದುಕೊಂಡೆನು.
\s5
\q
\v 17 ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
\q
\v 18 ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು,
\q ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು,
\q ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
\s5
\q
\v 19 ಭೂಮಿಯು ಒಡೆದೇ ಇದೆ, ಬಿರಿದಿದೆ,
\q ಕದಲಿಯೇ ಹೋಗಿದೆ.
\q
\v 20 ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ;
\q ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.
\s5
\p
\v 21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ,
\q ಭೂಮಂಡಲದ ಒಡೆಯರನ್ನೂ ದಂಡಿಸುವನು.
\q
\v 22 ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು.
\q ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.
\q
\v 23 ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು;
\q ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು.
\q ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
\s5
\c 25
\s ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ
\q
\v 1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ,
\q ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
\q
\v 2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ,
\q ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
\q
\v 3 ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.
\s5
\q
\v 4 ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ,
\q ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು
\q ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
\q
\v 5 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ
\q ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ;
\q ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.
\s5
\q
\v 6 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ,
\q ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
\q
\v 7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ,
\q ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
\q
\v 8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು;
\q ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು;
\q ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
\s5
\q
\v 9 ಆ ದಿನದಲ್ಲಿ ಜನರು, <<ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು,
\q ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು>> ಎಂದು ಹೇಳಿಕೊಳ್ಳುವರು.
\q
\v 10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು;
\q ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
\s5
\q
\v 11 ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.
\q
\v 12 ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.
\s5
\c 26
\s ಸ್ತೋತ್ರಗೀತೆ
\p
\v 1 ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು,
\q <<ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
\q
\v 2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!
\s5
\q
\v 3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
\q
\v 4 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
\s5
\q
\v 5 ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ.
\q ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
\q
\v 6 ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
\s5
\q
\v 7 ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
\q
\v 8 ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ;
\q ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
\q
\v 9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ.
\q ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
\s5
\q
\v 10 ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು;
\q ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
\s5
\q
\v 11 ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು.
\q ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
\q
\v 12 ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
\s5
\q
\v 13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
\q
\v 14 ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ.
\q ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
\s5
\q
\v 15 ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ;
\q ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
\s5
\q
\v 16 ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
\q
\v 17 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ,
\q ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
\s5
\q
\v 18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ,
\q ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.
\s5
\q
\v 19 ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ!
\q ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
\s ಯೆಹೋವನ ಶಿಕ್ಷೆ
\s5
\q
\v 20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ;
\q ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
\q
\v 21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ;
\q ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.>>
\s5
\c 27
\q
\v 1 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ
\q ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ,
\q ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
\s ಯೆಹೋವನ ದ್ರಾಕ್ಷಿ ತೋಟದ ಗೀತೆ
\q
\v 2 ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
\q
\v 3 <<ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ;
\q ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
\s5
\q
\v 4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ,
\q ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
\q
\v 5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
\s5
\q
\v 6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು,
\q ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.>>
\s ಯೆಹೋವನು ಇಸ್ರಾಯೇಲನ್ನು ಶಿಕ್ಷಿಸುವುದು
\s5
\q
\v 7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
\q
\v 8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ
\f +
\fr 27:8
\fq ಹೋರಾಡುತ್ತಿದ್ದೀ
\ft ಆಳತೆಗಳಗನುಸಾರವಾಗಿ.
\f* ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
\s5
\q
\v 9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ,
\q ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು
\q ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
\s5
\q
\v 10 ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ;
\q ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.
\q
\v 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು.
\q ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
\s ಇಸ್ರಾಯೇಲರ ಪುನರಾಗಮನ
\s5
\p
\v 12 ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ
\q ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ;
\q ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
\q
\v 13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು
\q ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು
\q ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.
\s5
\c 28
\s ಇಸ್ರಾಯೇಲರಿಗೆ ಎಚ್ಚರಿಕೆ
\q
\v 1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ
\f +
\fr 28:1
\fq ಕಿರೀಟದ
\ft ಅಥವಾ ಜಯಮಾಲೆ.
\f* ಗತಿಯೇ!
\q ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
\q
\v 2 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ,
\q ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
\s5
\q
\v 3 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
\q
\v 4 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ,
\q ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು,
\q ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
\s5
\q
\v 5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
\q
\v 6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
\s ಯೆಶಾಯನು ಯೆರೂಸಲೇಮಿನ ಅಧಿಪತಿಗಳನ್ನು ಖಂಡಿಸಿದ್ದು
\s5
\q
\v 7 ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ;
\q ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ,
\q ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
\q
\v 8 ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
\s5
\q
\v 9 ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ?
\q ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
\q
\v 10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.
\s5
\p
\v 11 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
\q
\v 12 ಆತನು ಮೊದಲು, <<ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ,
\q ನಿಮಗೆ ಅನುಕೂಲವಾದ ಉಪಶಮನವು ಇದೇ>> ಎಂದು ಹೇಳುವಾಗ ಇವರು ಕೇಳದೆ ಹೋದರು.
\s5
\q
\v 13 ಹೀಗಿರಲು ಯೆಹೋವನ ಮಾತು
\q ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ,
\q ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು;
\q ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
\s ಯೆಹೂದಕ್ಕೆ ಎಚ್ಚರಿಕೆ
\s5
\q
\v 14 ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ,
\q ಯೆಹೋವನ ಮಾತನ್ನು ಕೇಳಿರಿ,
\q
\v 15 ನೀವು ನಿಮ್ಮೊಳಗೆ, <<ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ;
\q ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು;
\q ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ>> ಎಂದು ಅಂದುಕೊಂಡಿದ್ದೀರಿ.
\s5
\q
\v 16
\f +
\fr 28:16
\ft ಕೀರ್ತನೆ 118:22-23; ರೋಮಾ. 9:33; 1 ಪೇತ್ರ 2:6 ನೋಡಿರಿ.
\f* ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ,
\q <<ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ,
\q ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
\s5
\q
\v 17 ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು,
\q ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
\s5
\q
\v 18 ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು;
\q ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.
\q
\v 19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು;
\q ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು;
\q ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
\s5
\q
\v 20 ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.>>
\q
\v 21 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ
\q ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
\s5
\q
\v 22 ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ;
\q ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
\s ಯೆಹೋವನ ಕಾರ್ಯಗಳ ವಿವೇಕವು
\s5
\q
\v 23 ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
\q
\v 24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
\s5
\q
\v 25 ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ,
\q ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
\q
\v 26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.
\s5
\q
\v 27 ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ;
\q ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
\q
\v 28 ಗೋದಿಯ ಕಾಳನ್ನು ನುಚ್ಚು ಮಾಡುವನೋ?
\q ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
\s5
\q
\v 29 ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,
\q ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
\s5
\c 29
\s ಯೆರೂಸಲೇಮಿಗೆ ಎಚ್ಚರಿಕೆ
\q
\v 1 ಅಯ್ಯೋ, ಅರೀಯೇಲೇ,
\f +
\fr 29:1
\fq ಅರೀಯೇಲೇ,
\ft ದೇವರ ಕ್ರೋಧ ಅಥವಾ ಯಜ್ಞವೇದಿಯ ಬೆಂಕಿ ಸ್ಥಳ ಅಥವಾ ಯೆರೂಸಲೇಮ್
\f* ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!
\q ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
\q
\v 2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು;
\q ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
\s5
\q
\v 3 ನಾನು ನಿನ್ನ ಸುತ್ತಲೂ ದಂಡಿಳಿಸಿ,
\q ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
\q
\v 4 ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು,
\q ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
\s5
\q
\v 5 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು;
\q ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
\q
\v 6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ
\q ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
\s5
\q
\v 7 ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ,
\q ಬಾಧಿಸುವ ಸಕಲ ಜನಾಂಗಗಳ ಗುಂಪು,
\q ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
\q
\v 8 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು.
\q ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು.
\q ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
\s ಯೆರೂಸಲೇಮಿನ ಮೂಢಭಕ್ತಿ
\s5
\q
\v 9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ!
\q ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
\q
\v 10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ,
\q ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
\s5
\p
\v 11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, <<ಇದನ್ನು ಓದು>> ಎಂದು ಹೇಳಿದರೆ ಅವನು, <<ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ>> ಎಂದು ಹೇಳುವನು.
\v 12 ಅಕ್ಷರವಿಲ್ಲದವನಿಗೆ, <<ಇದನ್ನು ಓದು>> ಎಂದು ಹೇಳಿದರೆ ಅವನು, <<ನನಗೆ ಓದಲು ಬರುವುದಿಲ್ಲ>> ಎಂದು ಹೇಳುವನು.
\s5
\q
\v 13 ಯೆಹೋವನು ಹೇಳುವುದೇನೆಂದರೆ, <<ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ,
\q ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು,
\q ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
\q
\v 14 ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು;
\q ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು>> ಎಂದು ಹೇಳಿದನು.
\s ಭವ್ಯಭವಿಷ್ಯದ ಭರವಸೆ
\s5
\q
\v 15 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ
\q ಹೋಗಿ, <<ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?>> ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
\s5
\q
\v 16 ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.
\q ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, <<ಆತನು ಕೆಲಸ ಮಾಡಲಿಲ್ಲ>> ಎಂದು ಹೇಳುವುದೋ? ಇಲ್ಲವೇ,
\q ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, <<ಆತನಿಗೆ ವಿವೇಕವಿಲ್ಲ>> ಎಂದು ಹೇಳುವುದೋ?
\s5
\q
\v 17 ಇನ್ನು ಸ್ವಲ್ಪ ಕಾಲದೊಳಗೆ
\q ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
\q
\v 18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು
\q ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
\q
\v 19 ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು,
\q ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
\s5
\q
\v 20 ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
\q
\v 21 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ,
\q ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
\s5
\q
\v 22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ,
\q <<ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
\q
\v 23 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ,
\q ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
\q
\v 24 ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು>> ಎಂದು ಹೇಳುತ್ತಾನೆ.
\s5
\c 30
\s ಐಗುಪ್ತರೊಡನೆ ಸಂಧಾನ ವ್ಯರ್ಥ
\q
\v 1 ಯೆಹೋವನು ಹೀಗೆ ನುಡಿಯುತ್ತಾನೆ, <<ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ>>
\q <<ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ
\q ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
\q
\v 2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು,
\q ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
\s5
\q
\v 3 ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು,
\q ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
\q
\v 4 ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
\q
\v 5 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ,
\q ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.>>
\s5
\p
\v 6 ದಕ್ಷಿಣ ಸೀಮೆಯ
\f +
\fr 30:6
\fq ದಕ್ಷಿಣ ಸೀಮೆಯ
\ft ನೆಗೆವ್.
\f* ನೀರಾನೆಯ ವಿಷಯವಾದ ದೈವೋಕ್ತಿ.
\q ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು,
\q ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ
\q ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
\q
\v 7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ;
\q ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
\s ಐಗುಪ್ತದ ಆಶ್ರಯದಿಂದಾಗುವ ದುರ್ಗತಿ
\s5
\q
\v 8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ,
\q ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
\q
\v 9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು,
\q ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
\s5
\q
\v 10 ಇವರು ದಿವ್ಯದರ್ಶಿಗಳಿಗೆ, <<ನಿಮಗೆ ದರ್ಶನವಾಗದಿರಲಿ>> ಎನ್ನುತ್ತಾರೆ,
\q ಮತ್ತು ಪ್ರವಾದಿಗಳಿಗೆ, <<ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ,
\q ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
\q
\v 11 ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ;
\q ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ>> ಎಂದು ಹೇಳುತ್ತಾರೆ.
\s5
\q
\v 12 ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ,
\q <<ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ,
\q ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
\q
\v 13 ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ,
\q ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ,
\q ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.>>
\s5
\q
\v 14 ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ,
\q ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ,
\q ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
\s5
\q
\v 15 ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು,
\q <<ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ,
\q ನೀವು ಒಪ್ಪಿಕೊಂಡಿಲ್ಲ.
\q
\v 16 ನೀವು, <ಬೇಡವೇ ಬೇಡ,
\q ಕುದುರೆಗಳ ಮೇಲೆ ಓಡುವೆವು> ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ,
\q ನೀವು, <ವೇಗವಾಗಿ ಸವಾರಿ ಮಾಡುವೆವು> ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
\s5
\q
\v 17 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು;
\q ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ;
\q ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.>>
\s ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ
\s5
\q
\v 18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;
\q ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
\q
\v 19 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ,
\q ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
\s5
\q
\v 20 ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ,
\q ನಿಮ್ಮ ಬೋಧಕನು ಇನ್ನು ಮರೆಯಾಗಿರನು,
\q ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
\q
\v 21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ,
\q <<ಇದೇ ಮಾರ್ಗ, ಇದರಲ್ಲೇ ನಡೆಯಿರಿ>> ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
\s5
\q
\v 22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ,
\q ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, <<ತೊಲಗಿ ಹೋಗಿರಿ>> ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
\s5
\q
\v 23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು;
\q ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು;
\q ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
\q
\v 24 ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ,
\q ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
\s5
\q
\v 25 ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ,
\q ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
\q
\v 26 ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ,
\q ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
\s ಯೆಹೋವನಿಂದ ಅಶ್ಶೂರ್ಯರಿಗಾದ ವಿನಾಶ
\s5
\q
\v 27 ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ;
\q ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
\q
\v 28 ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ.
\q ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
\s5
\q
\v 29 ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ.
\q ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
\s5
\q
\v 30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ,
\q ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
\s5
\q
\v 31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
\q
\v 32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು,
\q ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
\s5
\q
\v 33 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ.
\q ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ;
\q ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
\s5
\c 31
\s ಯೆಹೋವನೇ ಯೆಹೂದ್ಯರಿಗೆ ನಿಜವಾದ ರಕ್ಷಕ
\q
\v 1 ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ!
\q ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ.
\q ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
\q
\v 2 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು.
\q ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
\s5
\q
\v 3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು.
\q ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
\s5
\q
\v 4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ,
\q <<ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ,
\q ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ,
\q ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ
\q ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
\s5
\q
\v 5 ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು.
\q ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
\p
\v 6 <<ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
\v 7 ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
\q
\v 8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ.
\q ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
\q
\v 9 ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು>>
\q ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
\s5
\c 32
\s ಮುಂದಿನ ಧರ್ಮರಾಜ್ಯದ ಸುಲಕ್ಷಣ
\q
\v 1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
\q
\v 2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ,
\q ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
\q
\v 3 ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
\s5
\q
\v 4 ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
\q
\v 5 ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
\q
\v 6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು.
\q ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ,
\q ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
\s5
\q
\v 7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ,
\q ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
\q
\v 8 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
\s ಯೆರೂಸಲೇಮಿನ ನಿಶ್ಚಿಂತ ಹೆಂಗಸರನ್ನು ಎಚ್ಚರಿಸಿದ್ದು
\s5
\p
\v 9 ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ.
\q ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
\q
\v 10 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ.
\q ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
\s5
\q
\v 11 ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!
\q ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
\q
\v 12 ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
\q
\v 13 ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.
\q ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
\s5
\q
\v 14 ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ,
\q ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ,
\q ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
\p
\v 15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು,
\q ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
\s5
\q
\v 16 ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
\q
\v 17 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
\q
\v 18 ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
\s5
\q
\v 19 ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
\v 20 ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
\s5
\c 33
\s ಅಪಾಯವೂ ಮುಂದಿನ ಸಂರಕ್ಷಣೆಯೂ
\q
\v 1 ಸೂರೆಯಾಗದಿದ್ದರೂ ಸೂರೆಮಾಡಿದಿ!
\q2 ಬಾಧೆಪಡದಿದ್ದರೂ ಬಾಧಿಸಿದಿ!
\q ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ.
\q2 ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
\s5
\q
\v 2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
\q ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
\s5
\q
\v 3 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
\q
\v 4 ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
\s5
\q
\v 5 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
\q
\v 6 ಜ್ಞಾನವೂ, ತಿಳಿವಳಿಕೆಯೂ,
\q ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ
\f +
\fr 33:6
\fq ನಿನಗೆ
\ft ಅಥವಾ ಚೀಯೋನಿಗೆ
\f* ನಿಧಿಯಾಗುವುದು.
\s5
\p
\v 7 ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
\q
\v 8 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ;
\q ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು
\f +
\fr 33:8
\fq ಪಟ್ಟಣಗಳನ್ನು
\ft ಅಥವಾ ಸಾಕ್ಷಿಗಳನ್ನು.
\f* ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
\s5
\q
\v 9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ,
\q ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
\s5
\q
\v 10 ಯೆಹೋವನು ಹೀಗೆನ್ನುತ್ತಾನೆ, <<ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
\q
\v 11 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
\q
\v 12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
\s5
\q
\v 13 ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
\s ಯೆಹೋವನ ರಕ್ಷಣೆಯನ್ನು ಹೊಂದತಕ್ಕವರು
\p
\v 14 <<ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ,
\q ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು>> ಎಂದುಕೊಳ್ಳುತ್ತಾರೆ.
\s5
\q
\v 15 ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು,
\q ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
\q
\v 16 ಇವನಿಗೆ ಗಿರಿದುರ್ಗಗಳೇ, ಆಶ್ರಯ
\q ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
\s ಯೆರೂಸಲೇಮಿನ ಮುಂದಿನ ಸುಸ್ಥಿತಿ
\s5
\p
\v 17 ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
\q
\v 18 ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, <<ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?>> ಎಂದುಕೊಳ್ಳುವಿರಿ.
\q
\v 19 ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
\s5
\q
\v 20 ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ,
\q ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ,
\q ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
\q
\v 21 ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು.
\q ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
\s5
\q
\v 22 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
\s5
\q
\v 23 ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ.
\q ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
\q
\v 24 ಚೀಯೋನಿನ ಯಾವ ನಿವಾಸಿಯೂ <<ನಾನು ಅಸ್ವಸ್ಥನು>> ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.
\s5
\c 34
\s ಯೆಹೋವನು ಜನಾಂಗಗಳನ್ನು ದಂಡಿಸುವುದು
\q
\v 1 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
\q
\v 2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.
\s5
\q
\v 3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
\q
\v 4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
\s5
\q
\v 5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
\q
\v 6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
\s5
\q
\v 7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.
\s5
\q
\v 8 ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
\q
\v 9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
\q
\v 10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
\s5
\q
\v 11 ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
\q
\v 12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.
\s5
\q
\v 13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
\q
\v 14 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
\q
\v 15 ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
\s5
\q
\v 16 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
\q
\v 17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
\s5
\c 35
\s ಇಸ್ರಾಯೇಲಿನ ಮುಂದಿನ ಸೌಭಾಗ್ಯ
\q
\v 1 ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ
\q ತಾವರೆಯಂತೆ ಕಳಕಳಿಸುವುದು.
\q
\v 2 ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ,
\q ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು;
\q ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
\s5
\q
\v 3 ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
\q
\v 4 ಭಯಭ್ರಾಂತ ಹೃದಯದವರಿಗೆ, <<ಬಲಗೊಳ್ಳಿರಿ, ಹೆದರಬೇಡಿರಿ!
\q ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ,
\q ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು>> ಎಂದು ಹೇಳಿರಿ.
\s5
\q
\v 5 ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
\q
\v 6 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು,
\q ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
\q
\v 7 ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು;
\q ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
\s5
\q
\v 8 ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು.
\q ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
\q
\v 9 ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ.
\q ಬಿಡುಗಡೆಯಾದವರೇ ಅಲ್ಲಿ ನಡೆಯುವರು.
\s5
\q
\v 10 ಯೆಹೋವನು ವಿಮೋಚಿಸಿದವರು ಹಿಂದಿರುಗಿ,
\q ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
\q ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
\s5
\c 36
\s ಸನ್ಹೇರೀಬನು ಯೆರೂಸಲೇಮನ್ನು ಮುತ್ತಿದ್ದು
\p
\v 1 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
\v 2 ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ
\f +
\fr 36:2
\fq ರಬ್ಷಾಕೆ
\ft ಅವನ ಸೈನ್ಯಾಧಿಕಾರಿ.
\f* ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
\v 3 ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.
\s5
\p
\v 4 ರಬ್ಷಾಕೆಯು ಅವರಿಗೆ, <<ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, <ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
\v 5 ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?
\s5
\p
\v 6 <<ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
\v 7 ಒಂದು ವೇಳೆ ನೀನು, <ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ> ಎಂದು ಹೇಳಬಹುದು. ಹಿಜ್ಕೀಯನು, <ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು> ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
\s5
\p
\v 8 <<ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
\s5
\p
\v 9 <<ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
\v 10 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? <ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು> ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ>> ಎಂದು ಹೇಳಿದನು.
\s5
\p
\v 11 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, <<ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ
\f +
\fr 36:11
\fq ಯೂದಾಯ ಭಾಷೆಯಲ್ಲಿ
\ft ಇಬ್ರಿಯ ಭಾಷೆಯಲ್ಲಿ.
\f* ಮಾತನಾಡಬೇಡ>> ಎಂದು ಹೇಳಿದರು.
\v 12 ಅದಕ್ಕೆ ರಬ್ಷಾಕೆಯು, <<ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು>> ಎಂದು ಉತ್ತರಕೊಟ್ಟನು.
\s5
\p
\v 13 ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ,
\f +
\fr 36:13
\fq ಯೂದಾಯ ಭಾಷೆಯಲ್ಲಿ,
\ft ಇಬ್ರಿಯ ಭಾಷೆಯಲ್ಲಿ.
\f* <<ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
\v 14 ಅರಸನು ನಿಮಗೆ, <ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.>
\v 15 ಹಿಜ್ಕೀಯನು ನಿಮಗೆ, <ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ> >> ಎಂಬುದಾಗಿ ಹೇಳಿದರೆ,
\s5
\v 16 ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, <<ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
\v 17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.>>
\s5
\p
\v 18 <<ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
\v 19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
\v 20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ>> ಎಂದು ಹೇಳಿದನು.
\s5
\p
\v 21 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
\v 22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
\s5
\c 37
\s ಹಿಜ್ಕೀಯನು ದೇವರಾಲೋಚನೆ ವಿಚಾರಿಸಿದ್ದು
\p
\v 1 ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
\v 2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, <<ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ>> ಎಂದು ಆಜ್ಞಾಪಿಸಿದನು.
\s5
\v 3 ಆಗ ಅವರು ಯೆಶಾಯನಿಗೆ, <<ಹಿಜ್ಕೀಯನು ಹೀಗೆ ಹೇಳುತ್ತಾನೆ, <ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
\v 4 ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು> >> ಎಂದು ಹೇಳಿದರು.
\s5
\v 5 ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
\v 6 <<ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
\v 7 ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ>> ಎಂಬುದಾಗಿ ಉತ್ತರಕೊಟ್ಟನು.
\s5
\p
\v 8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
\v 9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
\v 10 <<ಹಿಜ್ಕೀಯನೇ, ನೀನು ನಂಬುವ ದೇವರು, <ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.>
\s5
\v 11 ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
\v 12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
\v 13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ>> ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
\s ಹಿಜ್ಕೀಯನ ಪ್ರಾರ್ಥನೆ
\s5
\p
\v 14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
\v 15 ಹಿಜ್ಕೀಯನು ಯೆಹೋವನನ್ನು ಕುರಿತು
\v 16 <<ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
\s5
\v 17 ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
\v 18 ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
\s5
\v 19 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
\v 20 ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.>>
\s ಯೆಶಾಯನ ಮೂಲಕ ಬಂದ ದೈವೋಕ್ತಿ
\s5
\p
\v 21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, <<ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, <ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.>
\v 22 ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, <ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
\v 23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!>
\s5
\v 24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, <ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
\v 25 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ> ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
\s5
\v 26 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
\v 27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
\s5
\v 28 ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
\v 29 ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು>> ಎಂಬುದಾಗಿ ಹೇಳಿದ್ದಾನೆ.
\s5
\v 30 ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
\s5
\v 31 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
\v 32 ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
\s5
\v 33 ಆತನು ಅಶ್ಶೂರದ ಅರಸನನ್ನು ಕುರಿತು, <<ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
\v 34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
\s5
\v 35 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು>> ಎಂದು ಹೇಳುತ್ತಾನೆ ಎಂಬುದೇ.
\s ಸನ್ಹೇರೀಬನ ಅಪಜಯವೂ ಮರಣವೂ
\s5
\p
\v 36 ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
\v 37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
\s5
\v 38 ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
\s5
\c 38
\s ಹಿಜ್ಕೀಯನ ರೋಗನಿವಾರಣೆ
\p
\v 1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, <<ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ>> ಎಂದು ಹೇಳಿದನು.
\v 2 ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.
\v 3 ಹಿಜ್ಕೀಯನು, <<ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ>> ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
\s5
\p
\v 4 ಆಗ ಯೆಹೋವನು ಯೆಶಾಯನಿಗೆ,
\v 5 <<ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, <ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
\v 6 ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
\s5
\v 7 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.
\v 8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು> ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು>> ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
\s5
\p
\v 9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
\q
\v 10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು,
\q <<ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.
\q
\v 11 ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ,
\q ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
\s5
\q
\v 12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ.
\q ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು
\f +
\fr 38:12
\fq ನನ್ನ ಜೀವಮಾನವನ್ನು
\ft ನನ್ನ ವಾಸಸ್ಥಳವನ್ನು.
\f* ಸುತ್ತಿಬಿಟ್ಟಿದ್ದೇನೆ,
\q ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
\q
\v 13 ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು.
\q ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ,
\q ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
\s5
\q
\v 14 ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು,
\q ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
\q
\v 15 ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ!
\q ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
\s5
\q
\v 16 ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ.
\q ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
\q
\v 17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು,
\q ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ.
\q ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
\s5
\q
\v 18 ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ,
\q ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.
\q
\v 19 ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.
\q ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
\s5
\q
\v 20 ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ.
\q ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.>>
\s5
\p
\v 21 ಯೆಶಾಯನು, <<ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು>> ಎಂದು ಅಪ್ಪಣೆಕೊಟ್ಟನು.
\v 22
\f +
\fr 38:22
\ft ಈ ಅಧ್ಯಾಯದ 21-22 ವಚನಗಳನ್ನು 6 ಮತ್ತು 7 ವಚನಗಳ ನಡುವೆ ಓದಬೇಕು.
\f* ಹಿಜ್ಕೀಯನು, <<ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?>> ಎಂದು ಕೇಳಿದ್ದನು.
\s5
\c 39
\s ಬಾಬೆಲಿನ ಬಂದ ದೂತರು
\p
\v 1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
\v 2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
\s5
\p
\v 3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, <<ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?>> ಎಂದು ಕೇಳಲು ಅವನು, <<ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು>> ಎಂದು ಉತ್ತರಕೊಟ್ಟನು.
\v 4 ಯೆಶಾಯನು ತಿರುಗಿ ಹಿಜ್ಕೀಯನಿಗೆ, <<ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?>> ಎಂದು ಕೇಳಲು ಅವನು, <<ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ>> ಎಂದನು.
\s5
\p
\v 5 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, <<ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
\v 6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
\s5
\p
\v 7 <<ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ>> ಎಂದು ಹೇಳಿದನು.
\v 8 <<ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು>> ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, <<ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ>> ಎಂದು ಉತ್ತರಕೊಟ್ಟನು.
\s5
\c 40
\s ದೇವಜನರಿಗೆ ಸಂತೈಯಿಸುವಿಕೆ
\q
\v 1 <<ನನ್ನ ಸಂತೈಸಿರಿ, ಸಂತೈಸಿರಿ>> ಎಂದು ನಿಮ್ಮ ದೇವರು ಹೇಳುತ್ತಾನೆ.
\q
\v 2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ;
\q ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು,
\q ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
\s5
\q
\v 3 ಇಗೋ ಒಂದು ವಾಣಿ!
\q <<ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ,
\q ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ>>
\q
\v 4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು,
\q ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
\q
\v 5 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
\s5
\q
\v 6 ಆಹಾ, ವಾಣಿಯು ಮತ್ತೆ ಕೇಳಿಸಿ, <<ಕೂಗು ಎನ್ನುತ್ತದೆ>> ಅದಕ್ಕೆ ನಾನು, <<ಏನು ಕೂಗಲಿ?>> ಎಂದು ಕೇಳಲು,
\q <<ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
\q
\v 7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
\q
\v 8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು>> ಎಂದು ಉತ್ತರವಾಯಿತು.
\s5
\q
\v 9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ,
\f +
\fr 40:9
\fq ಚೀಯೋನೇ,
\ft ಚೀಯೋನಿಂದ.
\f* ನೀನು ಉನ್ನತಪರ್ವತವನ್ನು ಏರು;
\q ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ,
\f +
\fr 40:9
\fq ಯೆರೂಸಲೇಮೇ,
\ft ಯೆರೂಸಲೇಮಿನಿಂದ.
\f* ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ,
\q ಯೆಹೂದದ ಪಟ್ಟಣಗಳಿಗೆ, <<ಇಗೋ, ನಿಮ್ಮ ದೇವರು!
\q
\v 10 ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ,
\q ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
\s5
\q
\v 11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು,
\q ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು>> ಎಂದು ಸಾರು.
\s ಯೆಹೋವನ ಅಸಮಾನವಾದ ಮಹಿಮೆ
\s5
\q
\v 12 ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು?
\q ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ,
\q ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
\s5
\q
\v 13 ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
\q
\v 14 ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು?
\q ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
\s5
\q
\v 15 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.
\q ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
\q
\v 16 (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು,
\q ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
\q
\v 17 ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
\s5
\q
\v 18 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
\q
\v 19 ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ,
\q ಬೆಳ್ಳಿಯ ಸರಪಣಿಗಳನ್ನು ಹಾಕುವನು.
\q
\v 20 (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು,
\q ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
\s5
\q
\v 21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ?
\q ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
\q
\v 22 ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ;
\q ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
\s5
\q
\v 23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
\q
\v 24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ,
\q ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
\s5
\q
\v 25 ಹೀಗಿರಲು, <<ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?>> ಎಂದು ಸದಮಲಸ್ವಾಮಿಯು ಕೇಳುತ್ತಾನೆ.
\q
\v 26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು?
\q ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ;
\q ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
\s ಯೆಹೋವನು ಬಳಲಿದವರನ್ನು ಬಲಪಡಿಸುವುದು
\s5
\q
\v 27 ಯಾಕೋಬೇ, ಇಸ್ರಾಯೇಲೇ,
\q <<ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ>> ಎಂದು ಏಕೆ ಅಂದುಕೊಳ್ಳುತ್ತೀ?
\q
\v 28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?
\q ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
\q ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
\s5
\q
\v 29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
\q
\v 30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
\q
\v 31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
\q ಅವರು ಓಡಿ ದಣಿಯರು, ನಡೆದು ಬಳಲರು.
\s5
\c 41
\s ಇಸ್ರಾಯೇಲರಿಗೆ ಯೆಹೋವನ ಸಹಾಯ
\q
\v 1 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ;
\q ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.
\q
\v 2 ಮೂಡಣದಿಂದ ಒಬ್ಬನನ್ನು
\f +
\fr 41:2
\fq ಮೂಡಣದಿಂದ ಒಬ್ಬನನ್ನು
\ft ಇದು ಪಾರಸಿಯ ಚಕ್ರವರ್ತಿಯಾದ ಕೋರೆಷನು.
\f* ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು,
\q ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ,
\q ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.
\s5
\q
\v 3 ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು.
\q
\v 4 ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ
\q ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.
\s5
\q
\v 5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು,
\q ಎಲ್ಲರೂ ನೆರೆದು ಬಂದರು.
\q
\v 6 ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, <<ಧೈರ್ಯವಾಗಿರು>> ಎಂದು ಹೇಳಿದನು.
\q
\v 7 ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು.
\q <<ಬೆಸಿಗೆ ಚೆನ್ನಾಗಿದೆ>> ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.
\s ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು
\s5
\p
\v 8 ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ,
\q ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,
\q
\v 9 ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, <<ನೀನು ನನ್ನ ಸೇವಕನು,
\q ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ>> ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,
\s5
\q
\v 10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
\q ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
\s5
\q
\v 11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು,
\q ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.
\s5
\q
\v 12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು.
\q ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.
\q
\v 13 ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.
\q <<ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
\s5
\q
\v 14 ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ,
\q ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು>> ಎಂದು ಯೆಹೋವನು ಹೇಳುತ್ತಾನೆ.
\q
\v 15 <<ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ,
\q ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
\s5
\q
\v 16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು.
\q ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
\s5
\q
\v 17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು,
\q ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
\q
\v 18 ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ,
\q ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.
\s5
\q
\v 19 ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು.
\q ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
\q
\v 20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ>> ಎಂದು
\q ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.
\s ದೇವತೆಗಳಿಗೆ ಕಾಲಜ್ಞಾನವಿಲ್ಲದಿರುವುದು
\s5
\p
\v 21 ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ,
\q <<ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ>>
\q
\v 22 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ;
\q ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ,
\q ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.
\s5
\q
\v 23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ.
\q ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
\q
\v 24 ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!
\s5
\q
\v 25 ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ.
\q ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.
\q
\v 26 ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ <<ಅವನು ಸತ್ಯವಂತನು>> ಎಂದು ಯಾರು ಮುಂತಿಳಿಸಿದ್ದಾರೆ?
\q ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.
\s5
\q
\v 27 ನಾನು ಮೊದಲನೆಯವನಾಗಿ ಚೀಯೋನಿಗೆ, <<ಇಗೋ, ಅವರನ್ನು ನೋಡು>> ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
\q
\v 28 ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ.
\q ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
\q
\v 29 ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ,
\q ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.
\s5
\c 42
\s ಯೆಹೋವನ ಸೇವಕನ ಗುಣಲಕ್ಷಣಗಳೂ ಕರ್ತವ್ಯವೊ
\q
\v 1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು.
\q ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
\q
\v 2 ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
\s5
\q
\v 3 ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,
\q ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
\q
\v 4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ,
\q ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು.
\q ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
\s5
\q
\v 5 ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ,
\q ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು,
\q ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
\q
\v 6 <<ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು,
\q ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
\s5
\q
\v 7 ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ,
\q ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
\s5
\q
\v 8 ನಾನೇ ಯೆಹೋವನು; ಇದೇ ನನ್ನ ನಾಮವು;
\q ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
\q
\v 9 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ,
\q ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ.
\q ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.>>
\s ಯೆಹೋವನ ರಕ್ಷಣಾಸಂಕಲ್ಪ
\s5
\q
\v 10 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,
\q ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
\q
\v 11 ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ,
\q ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
\s5
\q
\v 12 ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
\q
\v 13 ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು.
\q ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
\s5
\q
\v 14 ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು.
\q ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
\q
\v 15 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,
\q ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
\s5
\q
\v 16 ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು,
\q ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು.
\q ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
\s5
\q
\v 17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, <<ನೀವೇ ನಮ್ಮ ದೇವರುಗಳು>> ಎಂದು
\q ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
\s ಯೆಹೋವನ ಸೇವಕನ ಈಗಿನ ದುಸ್ಥಿತಿ ಹಾಗು ಮುಂದಿನ ಉದ್ಧಾರ
\s5
\q
\v 18 ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
\q
\v 19 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು?
\q ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
\s5
\q
\v 20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
\q
\v 21 ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
\s5
\q
\v 22 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ.
\q ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು,
\q ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
\s5
\q
\v 23 ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?
\q
\v 24 ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು?
\q ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ.
\q ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
\s5
\q
\v 25 ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು.
\q ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
\s5
\c 43
\s ಇಸ್ರಾಯೇಲರ ರಕ್ಷಕನು
\q
\v 1 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
\q <<ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
\s5
\q
\v 2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
\q ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
\q
\v 3 ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
\q ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
\s5
\q
\v 4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
\q ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
\q
\v 5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ;
\q ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
\s5
\q
\v 6 <ಅವರನ್ನು ಒಪ್ಪಿಸಿಬಿಡು> ಎಂದು ಉತ್ತರದಿಕ್ಕಿಗೂ <ತಡೆಯಬೇಡ> ಎಂದು ದಕ್ಷಿಣಕ್ಕೂ ಹೇಳಿ,
\q ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
\q
\v 7 ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
\s ಇಸ್ರಾಯೇಲ್ ಯೆಹೋವನ ಸಾಕ್ಷಿ
\s5
\q
\v 8 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
\q
\v 9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು?
\q ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ.
\q ಆ ಸಾಕ್ಷಿಗಳು ಇವರ ಮಾತನ್ನು ಕೇಳಿ <ಇದು ನಿಜ> ಎಂದು ಹೇಳಲಿ.
\s5
\q
\v 10 ಯೆಹೋವನ ಮಾತೇನೆಂದರೆ, <ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು.
\q ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು.
\q ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
\q
\v 11 ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
\s5
\q
\v 12 ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ;
\q ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
\q
\v 13 ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ.
\q ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?> >> ಎಂಬುದೇ ಯೆಹೋವನ ಮಾತು.
\s ಬಾಬೆಲೋನಿಗೆ ಸಮೀಪಿಸಿರುವ ನಾಶನ
\s5
\q
\v 14 ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
\q <<ನಾನು ನಿಮಗೋಸ್ಕರ ದೂತನನ್ನು ಬಾಬೆಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
\q
\v 15 ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.
\s5
\q
\v 16 ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
\q
\v 17 ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ,
\q ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು>> ಯೆಹೋವನು ಹೀಗೆನ್ನುತ್ತಾನೆ,
\s5
\q
\v 18 ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
\q
\v 19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
\q ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
\s5
\q
\v 20 ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ.
\q ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.
\q ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
\q
\v 21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
\s ಇಸ್ರಾಯೇಲಿನ ಉದಾಸೀನತೆ
\s5
\q
\v 22 <<ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
\q
\v 23 ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
\s5
\q
\v 24 ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
\s5
\q
\v 25 ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
\q
\v 26 ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
\s5
\q
\v 27 ನಿನ್ನ ಮೂಲಪಿತೃ
\f +
\fr 43:27
\fq ಮೂಲಪಿತೃ
\ft ಯಾಕೋಬ. ಧರ್ಮೋ 26:5, ಹೋಶೇಯ 12:2-4, 12.
\f* ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
\q
\v 28 ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.>>
\s5
\c 44
\s ಇಸ್ರಾಯೇಲಿನ ಮುಂದಿನ ವೃದ್ಧಿ
\q
\v 1 ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
\q
\v 2 ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ,
\q <<ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ,
\f +
\fr 44:2
\fq ಯೆಶುರೂನೇ,
\ft ಇಸ್ರಾಯೇಲ್
\f* ಭಯಪಡಬೇಡ!
\s5
\q
\v 3 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು,
\q ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
\q
\v 4 ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
\s5
\q
\v 5 (ಅನ್ಯಜನರಲ್ಲಿ) ಒಬ್ಬನು, <ನಾನು ಯೆಹೋವನ ಭಕ್ತನು> ಎಂದು ಹೇಳಿಕೊಳ್ಳುವನು.
\q ಇನ್ನೊಬ್ಬನು, <ನಾನು ಯಾಕೋಬ್ಯನ ಹೆಸರಿನವನು> ಮತ್ತೊಬ್ಬನು ತನ್ನ ಕೈಯ ಮೇಲೆ, <ದಾಸನು> ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.>>
\s ಯೆಹೋವನು ಇಸ್ರಾಯೇಲಿನ ರಕ್ಷಕ
\s5
\q
\v 6 ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ,
\q <<ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
\s5
\q
\v 7 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ?
\q ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.
\s5
\q
\v 8 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ.
\q ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ
\f +
\fr 44:8
\ft ಕೀರ್ತನೆ 18:2 ಅನ್ನು ನೋಡಿರಿ.
\f* ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.>>
\s ವಿಗ್ರಹಾರಾಧನೆಯ ಮೂಢತನ
\s5
\q
\v 9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ,
\q ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
\q
\v 10 ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?
\s5
\q
\v 11 ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ.
\q ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
\s5
\q
\v 12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ,
\q ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು.
\q ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.
\s5
\q
\v 13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು
\q ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ,
\q ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.
\s5
\q
\v 14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು.
\q ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.
\s5
\q
\v 15 ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು.
\q ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
\q
\v 16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು.
\q ತನ್ನನ್ನು ಕಾಯಿಸಿಕೊಳ್ಳುತ್ತಾ, <<ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು>> ಎಂದುಕೊಳ್ಳುವನು.
\s5
\q
\v 17 ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ,
\q <<ನೀನೇ ನನ್ನ ದೇವರು, ನನ್ನನ್ನು ರಕ್ಷಿಸು>> ಎಂದು ಪ್ರಾರ್ಥಿಸುವನು.
\s5
\q
\v 18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
\s5
\q
\v 19 <<ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ,
\q ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?>>
\q ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
\s5
\q
\v 20 ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, <<ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ>> ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
\s5
\q
\v 21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ.
\q ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
\q
\v 22 ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ,
\q ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
\s5
\q
\v 23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು.
\q ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ.
\q ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
\s ಯೆಹೋವನ ಸರ್ವಾಧಿಕಾರ
\s5
\q
\v 24 ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ,
\q <<ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ,
\q ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
\q
\v 25 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ,
\q ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
\s5
\q
\v 26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ.
\q ಯೆರೂಸಲೇಮಿಗೆ, <ನೀನು ಜನ ನಿವಾಸವಾಗುವಿ> ಎಂದು ಯೆಹೂದದ ಪಟ್ಟಣಗಳಿಗೆ, <ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು> ಎಂದು ಮುಂತಿಳಿಸಿ
\q
\v 27 ಜಲರಾಶಿಗೆ, <ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು> ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
\s5
\q
\v 28 ಕೋರೆಷನ ವಿಷಯವಾಗಿ, <ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ> ಎಂದು ಹೇಳಿ, <ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು> >> ಎಂಬುದಾಗಿ ಮಾತನಾಡುವವನು ನಾನೇ.
\s5
\c 45
\s ಯೆಹೋವನು ಕೋರೆಷನನ್ನು ಕರೆದ ಉದ್ದೇಶ
\q
\v 1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,
\q ರಾಜರ ನಡುಕಟ್ಟನ್ನು ಬಿಚ್ಚಿ,
\q ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
\s5
\q
\v 2 <<ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.
\q ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
\q
\v 3 ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ
\q ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
\s5
\q
\v 4 ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ
\q ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.
\q
\v 5 ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ.
\q ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
\q
\v 6 ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ,
\q ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
\s5
\q
\v 7 ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು,
\q ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
\q
\v 8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು.
\q ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ,
\q ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
\s ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು
\s5
\q
\v 9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!
\q ಮಣ್ಣು ಕುಂಬಾರನಿಗೆ, <ನೀನು ಏನು ಮಾಡುತ್ತೀ?> ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, <ಅವನಿಗೆ ಕೈಯಿಲ್ಲ> ಅಂದೀತೇ?
\s5
\q
\v 10 <ನೀನು ಹುಟ್ಟಿಸುವುದೇನು> ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! <ನೀನು ಹೆರುವುದೇನು> ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
\s5
\q
\v 11 ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ,
\q <ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
\s5
\q
\v 12 ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ.
\q ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.
\s5
\q
\v 13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು.
\q ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು> >> ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
\s ಆಫ್ರಿಕ ಖಂಡದ ಕೆಲವು ಜನಾಂಗಗಳು ಇಸ್ರಾಯೇಲಿಗೆ ಅಧೀನವಾಗುವುದು
\s5
\q
\v 14 ಯೆಹೋವನ ಈ ಮಾತನ್ನು ಕೇಳಿರಿ,
\q <<ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ
\q ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು
\q ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು,
\q <ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.> >>
\q
\v 15 ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
\s5
\q
\v 16 ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
\q
\v 17 ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.
\q ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
\s ಯೆಹೋವನು ದಿಗಂತಗಳವರನ್ನು ತನ್ನ ಕಡೆಗೆ ಕರೆಯುವುದು
\s5
\q
\v 18 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು.
\q ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು.
\q ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು.
\q ಈತನು ಹೀಗೆನ್ನುತ್ತಾನೆ, <<ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
\s5
\q
\v 19 ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ.
\q ಶೂನ್ಯವನ್ನೋ ಎಂಬಂತೆ, <ನನ್ನನ್ನು ಹುಡುಕಿರಿ> ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ.
\q ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
\s5
\q
\v 20 ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ!
\q ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
\s5
\q
\v 21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ.
\q ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು?
\q ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
\s5
\q
\v 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ.
\q ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
\q
\v 23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ,
\q ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು.
\q ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
\s5
\q
\v 24 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು.
\q ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
\q
\v 25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು>> ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.
\s5
\c 46
\s ಬಾಬೆಲಿನ ಅಶಕ್ತ ದೇವತೆಗಳು ಮತ್ತು ಸರ್ವಶಕ್ತ ಯೆಹೋವ
\q
\v 1 ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ,
\f +
\fr 46:1
\fq ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ,
\ft ಮರ್ದುಕ್ ಎಂದೂ ಕರೆಯಲ್ಪಡುವ ಬೇಲ್, ಬಾಬೆಲಿನ ಮುಖ್ಯ ದೇವರುಗಳಲ್ಲಿ ಒಬ್ಬನಾಗಿದ್ದಾನೆ. ನೆಬೋ ಸಹ ಮತ್ತೊಬ್ಬನಾಗಿದ್ದಾನೆ; ಇವನು ಮರ್ದುಕ್ ನ ಮಗನು.
\f*
\q ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
\q
\v 2 ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ,
\q ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
\s5
\q
\v 3 ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ,
\q ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
\q
\v 4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು.
\q ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
\s5
\q
\v 5 ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
\q
\v 6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ,
\q ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
\s5
\q
\v 7 ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು.
\q ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
\s5
\q
\v 8 <<ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
\q
\v 9 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ;
\q ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
\s5
\q
\v 10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. <ನನ್ನ ಸಂಕಲ್ಪವು ನಿಲ್ಲುವುದು,
\q ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು> ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
\q
\v 11 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ.
\q ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
\s5
\q
\v 12 ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
\q
\v 13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು,
\q ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.>>
\s5
\c 47
\s ಬಾಬೆಲಿನ ಗೀತೆ
\q
\v 1 ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ,
\q ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ!
\q ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
\q
\v 2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ,
\q ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.
\s5
\q
\v 3 ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ,
\q ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
\q
\v 4 ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
\q
\v 5 ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು.
\q ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
\s5
\q
\v 6 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು.
\q ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
\q
\v 7 <<ನಾನು ಶಾಶ್ವತವಾದ ರಾಣಿ>> ಎಂದು ನೀನು ಅಂದುಕೊಂಡು
\q ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
\s5
\q
\v 8 <<ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ,
\q ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ>> ಎಂದು
\q ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
\q
\v 9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ,
\q ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು.
\q ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
\s5
\q
\v 10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, <<ನನ್ನನ್ನು ಯಾರೂ ನೋಡರು?>> ಎಂದುಕೊಂಡಿದ್ದಿ.
\q ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ,
\q <<ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ>> ಎಂದು ಯೋಚಿಸಿಕೊಂಡಿದ್ದಿ.
\q
\v 11 ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು,
\q ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು.
\q ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
\s5
\q
\v 12 ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ,
\q ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು.
\q ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
\q
\v 13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ.
\q ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ,
\q ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
\s5
\q
\v 14 ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು;
\q ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು;
\q ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
\q
\v 15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ;
\q ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.
\s5
\c 48
\s ಮೊಂಡರಾದ ಇಸ್ರಾಯೇಲರು
\q
\v 1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ,
\q ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು,
\q ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ.
\q ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
\q
\v 2 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು,
\q ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ.
\q ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
\s5
\q
\v 3 ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು.
\q ನಾನು ತಟ್ಟನೆ ನಡೆಸಲು ಅವು ನೆರವೇರಿದವು.
\q
\v 4 ಏಕೆಂದರೆ ನೀನು ಹಟವಾದಿ
\q ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
\q
\v 5 ಆದುದರಿಂದಲೇ, <<ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ>> ಎಂದು
\q ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
\s5
\q
\v 6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
\q
\v 7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, <<ಮೊದಲೇ ನಾನು ತಿಳಿದುಕೊಂಡಿದ್ದೆನು>> ಎಂದು,
\q ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
\s5
\q
\v 8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ;
\q ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
\s5
\q
\v 9 ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
\q
\v 10 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
\q
\v 11 ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?
\q ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
\s ಬಾಬೆಲಿನಿಂದ ಬಿಡುಗಡೆ
\s5
\q
\v 12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು,
\q ನಾನೇ ಆದಿಯೂ, ನಾನೇ ಅಂತ್ಯ
\q
\v 13 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು,
\q ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
\s5
\q
\v 14 ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು?
\q ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
\q
\v 15 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
\s5
\q
\v 16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ,
\q ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ.
\q ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
\s5
\q
\v 17 ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
\q <<ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ,
\q ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
\q
\v 18 ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು!
\q ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
\s5
\q
\v 19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು.
\q ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
\s5
\q
\v 20 ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ!
\q ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ.
\q <ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ> >> ಎಂದು ಹೇಳಿರಿ.
\s5
\q
\v 21 ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ;
\q ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು;
\q ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
\q
\v 22 <<ದುಷ್ಟರಿಗೆ ಸಮಾಧಾನವೇ ಇಲ್ಲ>> ಎಂದು ಯೆಹೋವನು ನುಡಿಯುತ್ತಾನೆ.
\s5
\c 49
\s ಯೆಹೋವನ ಸೇವಕನ ಶ್ರೇಷ್ಠ ಕರ್ತವ್ಯ
\q
\v 1 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ!
\q ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
\q
\v 2 ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ.
\q ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
\s5
\q
\v 3 ಆತನು ನನಗೆ, <<ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ>> ಎಂದು ಹೇಳಿದನು.
\q
\v 4 ಅದಕ್ಕೆ ನಾನು, <<ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ.
\q ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು>> ಎಂದು ಅಂದುಕೊಂಡೆನು.
\s5
\q
\v 5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು.
\q ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ
\q ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
\q
\v 6 ಆತನು ಹೀಗೆನ್ನುತ್ತಾನೆ, <<ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ,
\q ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ.
\q ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.>>
\s5
\q
\v 7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ,
\q ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ,
\q <<ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ
\q ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.>>
\s ಇಸ್ರಾಯೇಲಿನ ಪುನಃಸ್ಥಾಪನೆ
\s5
\q
\v 8 ಇದೇ ಯೆಹೋವನ ನುಡಿ,
\q <<ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ.
\q ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ.
\q ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
\s5
\q
\v 9 ನೀನು ಬಂದಿಸಲ್ಪಟ್ಟವರಿಗೆ <ಹೊರಟುಹೋಗಿರಿ> ಎಂದು, ಕತ್ತಲಲ್ಲಿರುವವರಿಗೆ, <ಬೆಳಕಿಗೆ ಹೊರಡಿರಿ> ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು.
\q ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
\s5
\q
\v 10 ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ.
\q ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
\q
\v 11 ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.
\s5
\q
\v 12 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್
\f +
\fr 49:12
\fq ಸೀನೀಮ್
\ft ಅಥವಾ ಅಸ್ವಾನ್
\f* ದೇಶದಿಂದ ಬರುತ್ತಿದ್ದಾರೆ.
\q
\v 13 ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ!
\q ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.>>
\s5
\q
\v 14 ಚೀಯೋನ್ ನಗರಿಯಾದರೋ, <<ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ>> ಎಂದುಕೊಂಡಳು.
\q
\v 15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
\q ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
\s5
\q
\v 16 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
\q
\v 17 ನಿನ್ನ ಮಕ್ಕಳು
\f +
\fr 49:17
\fq ನಿನ್ನ ಮಕ್ಕಳು
\ft ಅಥವಾ ನಿನ್ನನ್ನು ಪುನಃ ಕಟ್ಟುವವರು.
\f* ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.
\q
\v 18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ,
\q <<ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.
\s5
\q
\v 19 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ.
\q ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.
\q
\v 20 ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು,
\q <ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ> ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
\s5
\q
\v 21 ಆಗ ನೀನು ನಿನ್ನ ಮನದೊಳಗೆ, <ನನಗೋಸ್ಕರ ಇವರನ್ನು ಯಾರು ಹೆತ್ತರು?
\q ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು?
\q ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?> >> ಎಂದುಕೊಳ್ಳುವಿ.
\s5
\q
\v 22 ಕರ್ತನಾದ ಯೆಹೋವನು ಹೀಗೆನ್ನುತ್ತಾನೆ,
\q <<ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು.
\q ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.
\s5
\q
\v 23 ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು.
\q ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು.
\q ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ>> ಎಂದು ನಿನಗೆ ಗೊತ್ತಾಗುವುದು.
\s5
\q
\v 24 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
\q
\v 25 ಯೆಹೋವನು ಹೀಗೆನ್ನುತ್ತಾನೆ,
\q <<ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು.
\q ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
\s5
\q
\v 26 ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು.
\q ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು>> ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
\s5
\c 50
\q
\v 1 ಯೆಹೋವನು ಹೀಗೆನ್ನುತ್ತಾನೆ,
\q <<ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ?
\q ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ?
\q ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
\s5
\q
\v 2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ?
\q ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ?
\q ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ.
\q ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
\q
\v 3 ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.>>
\s ಯೆಹೋವನ ಸೇವಕನ ಭರವಸೆ
\s5
\q
\v 4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
\q ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
\q ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
\s5
\q
\v 5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ.
\q ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
\q
\v 6 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು.
\q ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
\s5
\q
\v 7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ;
\q ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
\s5
\q
\v 8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ.
\q ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
\q
\v 9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು?
\q ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
\s5
\q
\v 10 ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು?
\q ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು?
\q ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.
\s5
\q
\v 11 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ,
\q ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ.
\q ಇಗೋ, <<ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.>>
\s5
\c 51
\s ಚೀಯೋನಿಗೆ ಶಾಶ್ವತವಾದ ರಕ್ಷಣೆ
\q
\v 1 ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ,
\q ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
\s5
\q
\v 2 ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ
\q ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
\s5
\q
\v 3 ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ,
\q ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು.
\q ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
\s5
\q
\v 4 <<ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ!
\q ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
\q
\v 5 ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು,
\q ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
\s5
\q
\v 6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ.
\q ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು.
\q ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
\s5
\q
\v 7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ,
\q ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
\q
\v 8 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು.
\q ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.>>
\s5
\q
\v 9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ!
\q ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ,
\q ರಹಬನ್ನು
\f +
\fr 51:9
\fq ರಹಬನ್ನು
\ft ಕಾನಾನ್ಯರ ಪುರಾಣದಲ್ಲಿ ರಹಾಬ ಎಂಬುದು ಸೃಷ್ಟಿಯಲ್ಲಿ ಸ್ಥಾಪಿಸಲಾದ ವ್ಯವಸ್ಥೆಯಿಂದ ಅಸ್ತವ್ಯಸ್ತ ಸ್ಥಿತಿಗೆ ಮರಳಿ ಕೊಂಡ್ಯೊಯುವ ಬೆದರಿಕೆಯನ್ನೊಡುವ ನೀರನ್ನು ಸೂಚಿಸುತ್ತದೆ. ಇದು ಸಮುದ್ರ ಮತ್ತು ಘಟಸರ್ಪಕ್ಕೆ ಸಂಬಂಧಿಸಿದ್ದಾಗಿದೆ.
\f* ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
\q
\v 10 ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ,
\q ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
\s5
\q
\v 11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
\q ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
\s5
\q
\v 12 ನಾನೇ, ನಾನೇ ನಿನ್ನನ್ನು ಸಂತೈಸುವವನು.
\q ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
\s5
\q
\v 13 ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ?
\q ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ?
\q ಆ ಹಿಂಸಕನ ಕ್ರೋಧವು ಎಲ್ಲಿ ಇದೆ?
\s5
\q
\v 14 ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು,
\q ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
\q
\v 15 ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,
\q ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.
\s5
\q
\v 16 ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ,
\q ಚೀಯೋನಿಗೆ, <<ನೀವು ನನ್ನ ಜನರು>> ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
\s ಯೆಹೋವನ ರೋಷ ಪಾತ್ರೆ
\s5
\q
\v 17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,
\q ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು!
\q ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
\q
\v 18 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ.
\q ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
\s5
\q
\v 19 ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ?
\q ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ.
\q ನಾನು ನಿನ್ನನ್ನು ಹೇಗೆ ಸಂತೈಸಲಿ?
\q
\v 20 ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ.
\q ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
\s5
\q
\v 21 ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ.
\q ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.
\q
\v 22 ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ,
\q <<ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು.
\q ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
\s5
\q
\v 23 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು.
\q ಅವರು ನಿನಗೆ, <ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು> ಎಂದು ಹೇಳಲು,
\q ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.>>
\s5
\c 52
\s ಯೆರೂಸಲೇಮಿನ ಬಿಡುಗಡೆ
\q
\v 1 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ!
\q ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ!
\q ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
\s5
\q
\v 2 ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ!
\q ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!
\q
\v 3 ಯೆಹೋವನ ಈ ಮಾತನ್ನು ಕೇಳಿರಿ, <<ಲಾಭಪಡೆಯದೆ ನಿಮ್ಮನ್ನು ಮಾರಿದೆನು,
\q ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.>>
\s5
\q
\v 4 ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, <<ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು.
\q ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.>>
\s5
\q
\v 5 ಕರ್ತನಾದ ಯೆಹೋವನು ಹೇಳುವುದೇನೆಂದರೆ, <<ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ
\q ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ.
\f +
\fr 52:5
\fq ಅರಚುತ್ತಾರೆ.
\ft ಅಥವಾ ಪರಿಹಾಸ್ಯ ಮಾಡುತ್ತಾರೆ.
\f*
\q ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
\q
\v 6 ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು.
\q ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ>> ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
\s5
\q
\v 7 ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!
\q ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, <<ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ>> ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
\q
\v 8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
\s5
\q
\v 9 ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ!
\q ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
\q
\v 10 ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ.
\q ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
\s5
\q
\v 11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ,
\q ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
\q
\v 12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ.
\q ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು.
\q ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
\s ಯೆಹೋವನ ಸೇವಕನ ಶ್ರಮೆ, ಪ್ರಾಣತ್ಯಾಗ ಅದರ ಪ್ರತಿಫಲ
\s5
\q
\v 13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು.
\q ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
\q
\v 14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ,
\q ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ,
\q ಅನೇಕರು ಹೇಗೆ ಹೆದರಿದರೋ,
\s5
\q
\v 15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.
\q ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು.
\q ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
\s5
\c 53
\q
\v 1 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
\q
\v 2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು.
\q ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
\s5
\q
\v 3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
\q ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
\s5
\q
\v 4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
\q ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
\s5
\q
\v 5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
\q ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
\s5
\q
\v 6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು;
\q ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
\s5
\q
\v 7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;
\q ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
\q ಬಾಯಿ ತೆರೆಯಲೇ ಇಲ್ಲ.
\s5
\q
\v 8 ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ.
\q ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
\q
\v 9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ,
\q ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
\s5
\q
\v 10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು,
\q ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು,
\q ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
\q
\v 11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು;
\q ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
\s5
\q
\v 12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು,
\q ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು,
\q ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
\s5
\c 54
\s ಚೀಯೋನಿನ ಮುಂದಿನ ವೃದ್ಧಿಯೂ ವೈಭವವೂ
\q
\v 1 <<ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು!
\q ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು>> ಎಂದು ಯೆಹೋವನು ಹೇಳುತ್ತಾನೆ.
\s5
\q
\v 2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ;
\q ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
\q
\v 3 ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.
\s5
\q
\v 4 <<ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು;
\q ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
\s5
\p
\v 5 <<ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ;
\q ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
\q
\v 6 ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ>> ಎಂಬುದು ನಿನ್ನ ದೇವರ ನುಡಿ.
\s5
\q
\v 7 <<ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
\q
\v 8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು,
\q ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು>> ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
\s5
\q
\v 9 <<ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
\q
\v 10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
\s5
\q
\v 11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ,
\q ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
\q
\v 12 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ,
\q ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.
\s5
\q
\v 13 ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
\q
\v 14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
\s5
\q
\v 15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ;
\q ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
\q
\v 16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ,
\q ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
\s5
\q
\v 17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.
\q ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ>> ಎಂದು ಯೆಹೋವನು ಅನ್ನುತ್ತಾನೆ.
\s5
\c 55
\s ಯೆಹೋವನ ಕರೆ
\q
\v 1 <<ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!
\q ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
\s5
\q
\v 2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?
\q ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
\s5
\q
\v 3 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ;
\q ಆಲಿಸಿದರೆ ಬದುಕಿ ಬಾಳುವಿರಿ.
\q ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ>> ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
\q
\v 4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ,
\q ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
\s5
\q
\v 5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ,
\q ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ
\q ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
\s5
\q
\v 6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
\q ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
\q
\v 7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
\q ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
\q ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
\s5
\q
\v 8 ಯೆಹೋವನು ಹೀಗೆನ್ನುತ್ತಾನೆ, <<ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
\q
\v 9 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
\q ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
\s5
\q
\v 10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ,
\q ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,
\q
\v 11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
\q ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
\s5
\q
\v 12 ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ;
\q ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
\q
\v 13 ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು;
\q ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.>>
\s5
\c 56
\s ಸಕಲ ಜನಾಂಗಗಳಿಗೂ ದೇವರ ಆಶೀರ್ವಾದ
\q
\v 1 ಯೆಹೋವನು ಹೀಗೆನ್ನುತ್ತಾನೆ, <<ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ;
\q ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
\q
\v 2 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು,
\q ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
\s5
\q
\v 3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು, <ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು> ಎಂದು ಮಾತನಾಡದಿರಲಿ;
\q ಮತ್ತು ನಪುಂಸಕನು, <ಅಯ್ಯೋ, ನಾನು ಗೊಡ್ಡುಮರ> >> ಎಂದು ಅಂದುಕೊಳ್ಳದಿರಲಿ.
\s5
\q
\v 4 ಯೆಹೋವನು ಹೀಗೆನ್ನುತ್ತಾನೆ, <<ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
\q
\v 5 ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು
\q ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು;
\q ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
\s5
\q
\v 6 ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ
\q ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ
\q ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
\q
\v 7 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು;
\q ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು;
\q ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
\s5
\q
\v 8 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ,
\q <ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು> >> ಎಂಬುದೇ.
\s ಅಧಿಪತಿಗಳ ಅತ್ಯಾಶೆ, ಜನರ ದೇವದ್ರೋಹ, ಇವುಗಳ ಖಂಡನೆ
\s5
\q
\v 9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
\q
\v 10 ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ;
\q ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
\s5
\q
\v 11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು.
\q ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ,
\q ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
\q
\v 12 <<ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ;
\q ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು>> ಎಂದು ಹರಟೆ ಕೊಚ್ಚಿಕೊಳ್ಳುವರು.
\s5
\c 57
\q
\v 1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ,
\q ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
\q
\v 2 ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;
\q ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
\s ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು
\s5
\q
\v 3 ಮಾಟಗಾತಿಯ ಮಕ್ಕಳೇ,
\q ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
\q
\v 4 ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ?
\q ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?
\s5
\q
\v 5 ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು,
\q ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು
\q ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.
\s5
\q
\v 6 ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು;
\q ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ.
\q ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
\s5
\q
\v 7 ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.
\q
\v 8 ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ;
\q ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು,
\q ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ.
\q ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ.
\s5
\q
\v 9 ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ
\f +
\fr 57:9
\fq ಪರರಾಜನ
\ft ಅಥವಾ ಮೊಲೆಕೆಂಬ ವಿಗ್ರಹ.
\f* ಬಳಿಗೆ ಪ್ರಯಾಣಮಾಡಿದ್ದಿ;
\q ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
\q
\v 10 ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ;
\q ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.
\s5
\q
\v 11 ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ?
\q ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.
\q
\v 12 ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
\s5
\q
\v 13 ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ.
\q ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು.
\q ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
\s ಪಶ್ಚಾತ್ತಾಪ ಪಡುವವರಿಗೆ ಕ್ಷಮಾಪಣೆ
\s5
\q
\v 14 <<ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ;
\q ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ>> ಎಂದು ಒಂದು ವಾಣಿಯು ನುಡಿಯುತ್ತದೆ.
\q
\v 15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ,
\q <<ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು,
\q ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
\s5
\q
\v 16 ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,
\q ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
\q
\v 17 ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು,
\q ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು;
\q ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
\s5
\q
\v 18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,
\q ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.>>
\q
\v 19 ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, <<ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,
\q ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು>> ಎಂದು ಹೇಳುತ್ತಾನೆ.
\s5
\q
\v 20 ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ;
\q ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
\q
\v 21 <<ದುಷ್ಟರಿಗೆ ಸಮಾಧಾನವೇ ಇಲ್ಲ>> ಎಂದು ನನ್ನ ದೇವರು ನುಡಿಯುತ್ತಾನೆ.
\s5
\c 58
\s ನಿಜವಾದ ಉಪವಾಸ
\q
\v 1 ಸ್ವರವೆತ್ತಿ ಕೂಗು, ಸಂಕೋಚಪಡಬೇಡ,
\q ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
\q
\v 2 ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ;
\q ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ,
\q ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
\s5
\q
\v 3 <<ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ,
\q ನೀನು ಗಮನಿಸದಿರುವುದೇಕೆ>> ಅಂದುಕೊಳ್ಳುತ್ತಾರೆ.
\q ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
\s5
\q
\v 4 ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
\q
\v 5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,?
\q ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು
\q ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
\s5
\q
\v 6 ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು,
\q ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
\q
\v 7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು,
\q ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು,
\q ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
\s5
\q
\v 8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು,
\q ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು,
\q ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
\s5
\q
\v 9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, <<ಇಗೋ, ಇದ್ದೇನೆ>> ಅನ್ನುವನು.
\q ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,
\q
\v 10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ,
\q ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
\s5
\q
\v 11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ,
\q ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು;
\q ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
\s5
\q
\v 12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು.
\q ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ;
\q <<ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ>>
\q ಎಂಬ ಬಿರುದುಗಳು ನಿಮಗುಂಟಾಗುವವು.
\s ಸಬ್ಬತ್ ದಿನದ ಆಚರಣೆ
\s5
\q
\v 13 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ,
\q ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ,
\q ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
\s5
\q
\v 14 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ,
\q ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು.
\q ಯೆಹೋವನೇ ಇದನ್ನು ನುಡಿದಿದ್ದಾನೆ.
\s5
\c 59
\s ರಕ್ಷಣೆಗೆ ಪಾಪವೇ ಅಡ್ಡಿ
\q
\v 1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
\q
\v 2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ;
\q ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
\s5
\q
\v 3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ;
\q ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
\q
\v 4 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ;
\q ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
\s5
\q
\v 5 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ;
\q ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
\q
\v 6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು;
\q ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
\s5
\q
\v 7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ,
\q ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
\q
\v 8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ,
\q ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
\s5
\q
\v 9 ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ;
\q ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
\q
\v 10 ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ,
\q ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ
\f +
\fr 59:10
\fq ಪುಷ್ಟರ
\ft ಅಥವಾ ನಿರ್ಜನ್ಯ ಸ್ಥಳ.
\f* ನಡುವೆ ಸತ್ತವರ ಹಾಗಿದ್ದೇವೆ.
\s5
\q
\v 11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ;
\q ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು,
\q ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
\s5
\q
\v 12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ;
\q ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
\q
\v 13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ.
\q ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
\s5
\q
\v 14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ,
\q ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
\q
\v 15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.
\s ತನ್ನ ಜನರನ್ನು ರಕ್ಷಿಸಲು ಯೆಹೋವನು ಕ್ರಮ ಕೈಗೊಂಡದ್ದು
\s5
\q
\v 16 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು;
\q ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
\s5
\q
\v 17 ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು;
\q ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
\q
\v 18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ,
\q ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.
\s5
\q
\v 19 ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು;
\q
\f +
\fr 59:19
\ft ಯೆಹೋವನ ಆತ್ಮವು ಅವನಿಗೆ ವಿರುದ್ಧವಾಗಿ ಧ್ವಜವನ್ನು ಎತ್ತುವನು.
\f* ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
\q
\v 20 <<ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು>>, ಯೆಹೋವನೇ ಇದನ್ನು ನುಡಿದಿದ್ದಾನೆ.
\s5
\p
\v 21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;
\q <<ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
\q ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ>> ಎಂದು ಯೆಹೋವನು ಹೇಳುತ್ತಾನೆ.
\s5
\c 60
\s ಯೆರೂಸಲೇಮಿನ ಮುಂದಿನ ಮಹಾವೈಭವವು
\q
\v 1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
\s5
\q
\v 2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ;
\q ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
\q
\v 3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
\s5
\q
\v 4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ;
\q ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
\q
\v 5 ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು;
\q ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
\s5
\q
\v 6 ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು;
\q ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
\q
\v 7 ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು.
\q ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
\s5
\q
\v 8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ!
\q ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
\q
\v 9 ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು,
\q ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ
\q ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
\s5
\q
\v 10 ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು;
\q ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
\q
\v 11 ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು.
\q ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
\s5
\q
\v 12 ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
\q
\v 13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು;
\q ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
\s5
\q
\v 14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು
\q ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
\s5
\q
\v 15 ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು,
\q ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
\q
\v 16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು;
\q ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
\s5
\p
\v 17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು;
\q ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
\q
\v 18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ;
\q ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
\s5
\q
\v 19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ;
\q ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
\q
\v 20 ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು;
\q ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
\s5
\q
\v 21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ,
\q ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
\q
\v 22 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು.
\q ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
\s5
\c 61
\s ಚೀಯೋನಿಗೆ ರಕ್ಷಣೆಯ ವಾಗ್ದಾನಗಳು
\q
\v 1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
\q ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
\s5
\q
\v 2 ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
\s5
\q
\v 3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
\q ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
\q ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
\s5
\q
\v 4 ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು,
\q ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
\q
\v 5 ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
\s5
\q
\v 6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು;
\q ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
\q
\v 7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು;
\q ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
\s5
\q
\v 8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ.
\f +
\fr 61:8
\fq ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ.
\ft ಅಥವಾ ಕೊಳ್ಳೆ ಹೊಡೆದ ವಸ್ತುಗಳೊಂದಿಗೆ ಅರ್ಪಿಸುವ ಯಜ್ಞವನ್ನು ದ್ವೇಷಿಸುತ್ತೇನೆ
\f*
\q ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
\q
\v 9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು.
\q ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
\s5
\q
\v 10 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
\q ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
\q ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
\q
\v 11 ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ,
\q ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.
\s5
\c 62
\s ಯೆರೂಸಲೇಮಿಗಾಗಿ ಯೆಶಾಯನ ಪ್ರಾರ್ಥನೆ
\q
\v 1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ,
\q ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
\q
\v 2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು;
\q ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
\s5
\q
\v 3 ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
\q
\v 4 ನೀನು ಇನ್ನು ಮೇಲೆ <<ತ್ಯಜಿಸಲ್ಪಟ್ಟವಳು>> ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ <<ನಿರ್ಜನ ಪ್ರದೇಶ>> ಎಂಬ ಹೆಸರು ಇನ್ನು ಇರದು;
\q ನೀನು <<ನನ್ನ ಉಲ್ಲಾಸಿನಿ
\f +
\fr 62:4
\fq ಉಲ್ಲಾಸಿನಿ
\ft ಎಫ್ಸಿಬ್.
\f* >> ಎನಿಸಿಕೊಳ್ಳುವಿ, ನಿನ್ನ ಸೀಮೆಗೆ <<ವಿವಾಹಿತೆ
\f +
\fr 62:4
\fq ವಿವಾಹಿತೆ
\ft ಬ್ಯೂಲ್.
\f* >> ಎಂಬ ಹೆಸರಾಗುವುದು;
\q ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
\f +
\fr 62:4
\fq ನಿನ್ನ ಸೀಮೆಗೆ ವಿವಾಹವಾಗುವುದು.
\ft ನೀನು ನಿನ್ನ ದೇಶಕ್ಕೆ ಮದಲಿಂಗಿತ್ತಿಯಂತೆ ಇರುವಿ.
\f*
\s5
\q
\v 5 ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು
\f +
\fr 62:5
\fq ಮಕ್ಕಳು
\ft ನಿನ್ನನ್ನು ಉಂಟುಮಾಡಿದವನು.
\f* ನಿನ್ನನ್ನು ವರಿಸುವರು;
\q ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
\s5
\q
\v 6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ;
\q ಅವರು ಹಗಲೂ, ಇರುಳೂ ಮೌನವಾಗಿರರು.
\q ಯೆಹೋವನನ್ನು ಸ್ಮರಿಸುವವರೇ,
\q
\v 7 ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
\s5
\q
\v 8 ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು,
\q <<ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
\q
\v 9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು.
\q ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು>> ಎಂದು ಹೇಳಿದ್ದಾನೆ.
\s5
\q
\v 10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ,
\q ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ.
\q ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
\s5
\q
\v 11 <<ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ>>
\q ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
\q
\v 12 ನಿನ್ನ ಜನರು, <<ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು>> ಎಂದು ಅನ್ನಿಸಿಕೊಳ್ಳುವರು, ನಿನಗೋ, <<ಪತಿಯು ವರಿಸಿ,
\f +
\fr 62:12
\fq ವರಿಸಿ,
\ft ಅಥವಾ ಪ್ರೀತಿಸಿ.
\f* ತ್ಯಜಿಸದ ಪಟ್ಟಣ>> ಎಂದು ಹೆಸರು ಬರುವುದು.
\s5
\c 63
\s ಯೆಹೋವನು ಶತ್ರುಗಳನ್ನು ಧ್ವಂಸಮಾಡುವುದು
\q
\v 1 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ,
\q ಎದೋಮಿನ ಬೊಚ್ರದಿಂದ ಬರುವ ಇವನು ಯಾರು?
\q ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
\q
\v 2 ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
\s5
\q
\v 3 ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ.
\q ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು;
\q ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
\q
\v 4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
\s5
\q
\v 5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು;
\q ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
\q
\v 6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ,
\q ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
\s ಕೃಪಾಕಾರ್ಯಗಳಿಗೆ ಪ್ರಾರ್ಥನೆ
\s5
\q
\v 7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು,
\q ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
\q
\v 8 <<ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು>> ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
\s5
\q
\v 9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು;
\q ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
\s5
\q
\v 10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
\s5
\q
\v 11 ಆಗ ಆತನ ಜನರು
\f +
\fr 63:11
\fq ಆತನ ಜನರು
\ft ಆತನು ಅಥವಾ ದೇವರು
\f* ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, <<ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
\s5
\q
\v 12 ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ
\q ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
\q
\v 13 ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
\s5
\q
\v 14 ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು;
\q ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
\s5
\q
\v 15 ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು;
\q ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ?
\q ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
\q
\v 16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ;
\q ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು;
\q ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ <ನಮ್ಮ ವಿಮೋಚಕನು> ಅನ್ನಿಸಿಕೊಂಡಿದ್ದಿ.
\s5
\q
\v 17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ?
\q ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
\s5
\q
\v 18 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು;
\q ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
\q
\v 19 ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
\f +
\fr 63:19
\fq ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
\ft ಪುರಾತನ ಕಾಲದಿಂದಲೂ ನಾವು ನಿನ್ನ ಜನರಾಗಿದ್ದೇವೆ.
\f*
\s5
\c 64
\q
\v 1 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ!
\q ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
\q
\v 2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ,
\q ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
\s5
\q
\v 3 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
\q
\v 4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ,
\q ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
\s5
\q
\v 5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ;
\q ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
\s5
\q
\v 6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ;
\q ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
\q
\v 7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ;
\q ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
\s5
\q
\v 8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;
\q ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
\q
\v 9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
\s5
\q
\v 10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
\q
\v 11 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ,
\q ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
\q
\v 12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ?
\q ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?>>
\s5
\c 65
\s ನ್ಯಾಯತೀರ್ಪು ಮತ್ತು ರಕ್ಷಣೆ
\q
\v 1 <<ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,
\q ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, <ಇಗೋ, ನಾನಿದ್ದೇನೆ! ನಾನಿದ್ದೇನೆ> ಎನ್ನುತ್ತಿದ್ದೆನು.
\q
\v 2 ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.
\s5
\q
\v 3 ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
\q
\v 4 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ,
\q ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
\s5
\q
\v 5 ಅವರು, <ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ> ಎನ್ನುತ್ತಾ,
\q ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
\s5
\q
\v 6 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;
\q
\v 7 ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು>> ಎಂದು ಯೆಹೋವನು ಹೇಳುತ್ತಾನೆ.
\s5
\q
\v 8 ಯೆಹೋವನು ಹೀಗನ್ನುತ್ತಾನೆ, <<ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, <ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ> ಎನ್ನುವಂತೆ,
\q ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
\s5
\q
\v 9 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು,
\q ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
\q
\v 10 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ,
\q ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
\s5
\q
\v 11 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ,
\q ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.
\s5
\q
\v 12 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ;
\q ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.>>
\s5
\q
\v 13 ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ;
\q ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ;
\q ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
\q
\v 14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು,
\q ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.
\s5
\q
\v 15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು;
\q ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
\q
\v 16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ
\q ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು;
\q ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
\s ನೂತನ ಸೃಷ್ಟಿ
\s5
\p
\v 17 <<ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;
\q ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
\q
\v 18 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ;
\q ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ,
\q ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
\q
\v 19 ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು.
\q ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
\s5
\q
\v 20 ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ;
\q ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
\q
\v 21 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
\s5
\q
\v 22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು;
\q ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
\q
\v 23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು.
\q ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
\s5
\q
\v 24 ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
\q
\v 25 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು.
\q ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ>> ಎಂದು ಯೆಹೋವನು ಅನ್ನುತ್ತಾನೆ.
\s5
\c 66
\s ನ್ಯಾಯತೀರ್ಪು ಮತ್ತು ನಿರೀಕ್ಷೆ
\q
\v 1 ಯೆಹೋವನು ಹೀಗೆನ್ನುತ್ತಾನೆ:
\q <<ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ?
\q ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
\s5
\q
\v 2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು.
\q ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
\s5
\q
\v 3 ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ;
\q ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ;
\q ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
\s5
\q
\v 4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು;
\q ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ;
\q ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.>>
\s5
\q
\v 5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ!
\q ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು,
\q <<ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ>> ಎಂದು ಹೇಳಿದ್ದಾರಲ್ಲಾ;
\q ಅವರಿಗಂತು ಅವಮಾನವಾಗುವುದು.
\s5
\q
\v 6 ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ!
\q ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
\s5
\q
\v 7 ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.
\q
\v 8 ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು?
\q ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ?
\q ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.
\s5
\p
\v 9 <<ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?>> ಎಂದು ಯೆಹೋವನು ಹೇಳುತ್ತಾನೆ.
\q <<ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?>> ಎಂದು ನಿನ್ನ ದೇವರು ನುಡಿಯುತ್ತಾನೆ.
\s5
\q
\v 10 ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ,
\q ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
\q
\v 11 ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ.
\q ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
\s5
\q
\v 12 ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ,
\q ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು;
\q ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
\q
\v 13 ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು;
\q ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
\s5
\q
\v 14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು;
\q ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
\s5
\q
\v 15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು;
\q ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
\q
\v 16 ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು;
\q ಆಗ ಆತನಿಂದ ಹತರಾಗುವವರು ಬಹು ಜನರು.
\s5
\q
\v 17 ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು,
\q ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ,
\q ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು>> ಎಂದು ಯೆಹೋವನು ನುಡಿಯುತ್ತಾನೆ.
\s5
\p
\v 18 <<ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
\v 19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.>>
\s5
\p
\v 20 ಯೆಹೋವನು ಹೀಗೆನ್ನುತ್ತಾನೆ, <<ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
\q
\v 21 ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು>> ಎಂದು ಯೆಹೋವನು ಹೇಳುತ್ತಾನೆ.
\s5
\q
\v 22 <<ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
\q
\v 23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ,
\q ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು>> ಇದು ಯೆಹೋವನ ನುಡಿ.
\s5
\q
\v 24 <<ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು;
\q ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ;
\q ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.>>