kn_ulb/24-JER.usfm

3561 lines
560 KiB
Plaintext

\id JER - Kannada Unlocked Literal Bible
\ide UTF-8
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಯೆರೆಮೀಯನು
\toc1 ಯೆರೆಮೀಯನ ಪ್ರವಾದನೆಯ ಗ್ರಂಥ
\toc2 ಯೆರೆಮೀಯನು
\toc3 jer
\mt1 ಯೆರೆಮೀಯನು
\is ಗ್ರಂಥಕರ್ತೃತ್ವ
\ip ಯೆರೆಮೀಯನು, ಅವನ ಬರಹಗಾರನಾದ ಬಾರೂಕನೊಂದಿಗೆ ಸೇರಿ ಬರೆದದ್ದು. ಯಾಜಕ ಮತ್ತು ಪ್ರವಾದಿಯಾಗಿ ಸೇವೆ ಸಲ್ಲಿಸಿದ ಯೆರೆಮೀಯನು, ಹಿಲ್ಕೀಯ ಎಂಬ ಯಾಜಕನ ಮಗನಾಗಿದ್ದನು (ಮಹಾಯಾಜಕನಲ್ಲ, 2 ಅರಸು 22:8. ಅವನು ಅನಾತೋತ್ ಎಂಬ ಚಿಕ್ಕ ಗ್ರಾಮದಿಂದ ಬಂದವನು ಯೆರೆ. 1:1). ಬಾರೂಕನೆಂಬ ಹೆಸರುಳ್ಳ ಬರಹಗಾರನು ಅವನಿಗೆ ಸೇವೆಯಲ್ಲಿ ಸಹಾಯ ಮಾಡುತ್ತಿದ್ದನು, ಯೆರೆಮೀಯನು ಹೇಳುತ್ತಿದ್ದನು ಮತ್ತು ಅವನು ಬರೆದಿಡುತ್ತಿದ್ದನು ಮತ್ತು ಪ್ರವಾದಿಯ ಸಂದೇಶಗಳಿಂದ ಸಂಕಲಿಸಿದ ಬರಹಗಳನ್ನು ಕಾಪಾಡುತ್ತಿದ್ದನು (ಯೆರೆ 36:4,32; 45:1). ಯೆರೆಮೀಯನು ಕಣ್ಣೀರಿನ ಪ್ರವಾದಿಯೆಂದು ಹೆಸರುವಾಸಿಯಾಗಿದ್ದನು (ಯೆರೆ. 9:1; 13:17; 14:17), ಬಾಬೆಲಿನವರ ಆಕ್ರಮಣದಿಂದ ಉಂಟಾಗುವ ನ್ಯಾಯತೀರ್ಪಿನ ಕುರಿತಾದ ಅವನ ಭವಿಷ್ಯವಾಣಿಗಳ ನಿಮಿತ್ತ ಸಂಘರ್ಷಯಾತನೆಯ ಜೀವನವನ್ನು ನಡೆಸುತ್ತಿದ್ದನು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 626-570 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಬಾಬೆಲಿನ ಸೆರೆವಾಸದ ಸಮಯದಲ್ಲಿ ಬಹುಶಃ ಇದನ್ನು ಪೂರ್ಣಗೊಳಿಸಿದಾದರೂ, ಪುಸ್ತಕದ ಸಂಪಾದನೆಯು ಅದಾದ ನಂತರವೂ ಮುಂದುವರೆದಿದೆ ಎಂದು ಕೆಲವರು ಪರಿಗಣಿಸಿದ್ದಾರೆ.
\is ಸ್ವೀಕೃತದಾರ
\ip ಯೆಹೂದದ ಮತ್ತು ಯೆರೂಸಲೇಮಿನ ಜನರು ಮತ್ತು ಸತ್ಯವೇದದ ಓದುಗಾರರೆಲ್ಲರು.
\is ಉದ್ದೇಶ
\ip ಕ್ರಿಸ್ತನು ಭೂಮಿಗೆ ಬಂದಾಗ ದೇವರು ತನ್ನ ಜನರೊಂದಿಗೆ ಮಾಡಲು ಉದ್ದೇಶಿಸಿದ ಹೊಸ ಒಡಂಬಡಿಕೆಯ ಸ್ಪಷ್ಟ ನೋಟವನ್ನು ಯೆರೆಮೀಯನ ಪುಸ್ತಕವು ನಮಗೆ ಒದಗಿಸುತ್ತದೆ. ಈ ಹೊಸ ಒಡಂಬಡಿಕೆಯು ದೇವರ ಜನರ ಪುನಃಸ್ಥಾಪನೆಯ ವಿಧಾನವಾಗಿದೆ, ಹೇಗೆಂದರೆ ಆತನು ತನ್ನ ಧರ್ಮಶಾಸ್ತ್ರವನ್ನು ಅವರೊಳಗೆ ಇಡುವನು, ಕಲ್ಲಿನ ಹಲಿಗೆಗಳ ಬದಲಿಗೆ ಮಾಂಸದ ಹೃದಯದ ಮೇಲೆ ಬರೆಯುತ್ತಾನೆ. ಯೆಹೂದ್ಯರೊಂದಿಗಿನ ಅಂತಿಮ ಪ್ರವಾದನೆಯನ್ನು, ದೇಶದವರು ಪಶ್ಚಾತ್ತಾಪಪಡದಿದ್ದರೆ ಮುಂಬರುವ ನಾಶದ ಎಚ್ಚರಿಕೆಯನ್ನು ಯೆರೆಮೀಯನ ಪುಸ್ತಕವು ಉಲ್ಲೇಖಿಸುತ್ತದೆ. ಯೆರೆಮೀಯನು ದೇವರ ಕಡೆಗೆ ಹಿಂದಿರುಗುವಂತೆ ದೇಶಕ್ಕೆ ಕರೆ ನೀಡುತ್ತಾನೆ. ಅದೇ ಸಮಯದಲ್ಲಿ, ಯೆಹೂದವು ವಿಗ್ರಹಾರಾಧನೆ ಮತ್ತು ಅನೈತಿಕತೆಯಿಂದ ಪಶ್ಚಾತ್ತಾಪಪಡದ ಕಾರಣದಿಂದಾಗಿ ಅದರ ನಾಶದ ಅನಿವಾರ್ಯತೆಯನ್ನು ಯೆರೆಮೀಯನು ಗುರುತಿಸುತ್ತಾನೆ.
\is ಮುಖ್ಯಾಂಶ
\ip ನ್ಯಾಯತೀರ್ಪು
\iot ಪರಿವಿಡಿ
\io1 1. ಯೆರೆಮೀಯನಿಗೆ ದೇವರ ಕರೆ (1:1-19)
\io1 2. ಯೆಹೂದಕ್ಕೆ ಎಚ್ಚರಿಕೆಗಳು (2:1—35:19)
\io1 3. ಯೆರೆಮೀಯನ ಸಂಕಷ್ಟ (36:1—38:25)
\io1 4. ಯೆರೂಸಲೇಮಿನ ಪತನ ಮತ್ತು ಅದರ ಪರಿಣಾಮಗಳು (39:1—45:5)
\io1 5. ರಾಷ್ಟ್ರಗಳ ಬಗ್ಗೆ ಪ್ರವಾದನೆಗಳು (46:1—51:64)
\io1 6. ಐತಿಹಾಸಿಕ ಅನುಬಂಧ (52:1-34)
\s5
\c 1
\s ಪೀಠಿಕೆ
\p
\v 1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
\v 2 ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
\v 3 ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
\s ಯೆರೆಮೀಯನ ಕರೆ
\s5
\q
\v 4 ಕರ್ತನಾದ ಯೆಹೋವನು ನನಗೆ,
\q
\v 5 <<ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ>> ಎಂಬ ವಾಕ್ಯವನ್ನು ದಯಪಾಲಿಸಿದನು.
\q
\v 6 ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು>> ಎಂದು ಅರಿಕೆ ಮಾಡಿದೆನು.
\s5
\q
\v 7 ಆಗ ಯೆಹೋವನು ನನಗೆ, <<ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
\q
\v 8 ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು.
\s5
\q
\v 9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, <<ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
\q
\v 10 ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ>> ಅಂದನು.
\s ಎರಡು ದರ್ಶನಗಳು
\s5
\p
\v 11 ಇದಲ್ಲದೆ, <<ಯೆರೆಮೀಯನೇ, ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, <<ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ>> ಅಂದೆನು.
\v 12 ಆಗ ಯೆಹೋವನು ನನಗೆ, <<ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ>> ಎಂಬುದಾಗಿ ಹೇಳಿದನು.
\s5
\p
\v 13 ಎರಡನೆಯ ಬಾರಿ, <<ನೀನು ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, <<ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ>> ಅಂದೆನು.
\v 14 ಆಗ ಯೆಹೋವನು ನನಗೆ, <<ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
\s5
\v 15 ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
\v 16 ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ
\f +
\fr 1:16
\fq ನಿರ್ಮಿಸಿದವುಗಳಿಗೆ
\ft ವಿಗ್ರಹಗಳಿಗೆ.
\f* ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
\s5
\v 17 ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
\v 18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
\v 19 ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು.
\s5
\c 2
\s ದೇವರ ಪ್ರೀತಿ
\p
\v 1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\q
\v 2 <<ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, <ಯೆಹೋವನು ಹೀಗೆನ್ನುತ್ತಾನೆ,
\q ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
\q
\v 3 ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.> >>
\s ಇಸ್ರಾಯೇಲಿನ ಪೂರ್ವಿಕರ ದ್ರೋಹ
\s5
\q
\v 4 ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
\q
\v 5 ಯೆಹೋವನು ಹೀಗೆನ್ನುತ್ತಾನೆ, <<ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
\q
\v 6 <ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ,
\q ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?> ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
\s5
\q
\v 7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು.
\q ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
\q
\v 8 ಯಾಜಕರು, <ಯೆಹೋವನು ಎಲ್ಲಿ?> ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
\s5
\q
\v 9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು>> ಎಂದು ಯೆಹೋವನು ನುಡಿಯುತ್ತಾನೆ.
\q
\v 10 <<ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
\q
\v 11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
\s5
\q
\v 12 ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು>> ಎಂದು ಯೆಹೋವನು ನುಡಿಯುತ್ತಾನೆ.
\q
\v 13 <<ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ.
\q ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
\s ಇಸ್ರಾಯೇಲರ ಪಾಪಗಳ ಫಲ
\s5
\q
\v 14 ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
\q
\v 15 ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
\q
\v 16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
\q
\v 17 ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
\s5
\q
\v 18 ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್
\f +
\fr 2:18
\fq ನೈಲ್
\ft ಸಿಹೋರ್.
\f* ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
\q
\v 19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು;
\q ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು>> ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
\s5
\q
\v 20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು <<ನಾನು ಸೇವೆ ಮಾಡುವುದಿಲ್ಲ>> ಎಂದು ಅಂದುಕೊಳ್ಳುತ್ತಿದ್ದಿ,
\q ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
\q
\v 21 <<ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
\q
\v 22 ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ>> ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
\s5
\q
\v 23 <<ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ>> ಎಂದು ಹೇಗೆ ಹೇಳುತ್ತಿ?
\q ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
\q
\v 24 ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ.
\q ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
\q
\v 25 <<ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ>> ಎಂದೆನು,
\q ಆದರೆ ನೀನು, <<ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು>> ಅಂದುಕೊಂಡಿದ್ದಿ.
\s5
\q
\v 26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, <<ನೀನು ನನ್ನ ತಂದೆ>> ಎಂತಲೂ; ಕಲ್ಲಿಗೆ, <<ನೀನು ಹೆತ್ತ ತಾಯಿ>> ಎಂತಲೂ ಹೇಳುವ ಪ್ರಜೆಗಳು.
\q ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
\q
\v 27 ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, <<ಎದ್ದು ನಮ್ಮನ್ನು ಉದ್ಧರಿಸು>> ಎಂದು ಮೊರೆಯಿಡುವರು.
\q
\v 28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ!
\q ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
\s5
\q
\v 29 ಯೆಹೋವನು ಹೀಗೆನ್ನುತ್ತಾನೆ, <<ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
\q
\v 30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ.
\q ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.>>
\q
\v 31 ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, <<ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು?
\q <ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು> >> ಎಂದು ನನ್ನ ಜನರು ಹೇಳುವುದು ಏಕೆ?
\s5
\q
\v 32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
\q
\v 33 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
\q
\v 34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ;
\q ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
\s5
\q
\v 35 ನೀನಾದರೋ, <<ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ>> ಎಂದುಕೊಂಡಿದ್ದಿ;
\q <<ನಾನು ಪಾಪಮಾಡಲಿಲ್ಲ>> ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
\q
\v 36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ
\q ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
\q
\v 37 ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
\s5
\c 3
\s ಇಸ್ರಾಯೇಲಿನ ವಿಶ್ವಾಸಘಾತ
\q
\v 1 ಯೆಹೋವನು ಹೀಗೆನ್ನುತ್ತಾನೆ, <<ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?
\q ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
\q
\v 2 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
\q ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;
\q ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
\s5
\q
\v 3 ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
\q
\v 4 ಈಗ ನನ್ನನ್ನು, <ನನ್ನ ತಂದೆ, ನನ್ನ ಯೌವನದ ಆಪ್ತನು> ಎಂದು ಕರೆಯುತ್ತೀಯಲ್ಲಾ.
\q
\v 5 <ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?> ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.>> ಎಂಬುದೇ.
\s ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು
\s5
\p
\v 6 ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, <<ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
\v 7 ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
\s5
\v 8 ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.
\v 9 ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.
\v 10 ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ>> ಎಂಬುದೇ ಯೆಹೋವನಾದ ನನ್ನ ನುಡಿ.
\s5
\p
\v 11 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, <<ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
\v 12 ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, <ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
\s5
\v 13 ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ> ಇದೇ ಯೆಹೋವನ ನುಡಿ.
\q
\v 14 ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
\q
\v 15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
\s5
\q
\v 16 ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, <ಯೆಹೋವನ ನಿಬಂಧನ ಮಂಜೂಷ> ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು>> ಇದು ಯೆಹೋವನ ನುಡಿ.
\s5
\p
\v 17 ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
\p
\v 18 ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು
\f +
\fr 3:18
\fq ಉತ್ತರ ಸೀಮೆಯನ್ನು
\ft ಇಲ್ಲಿ ಉತ್ತರದ ಸೀಮೆಯು ಅಶ್ಶೂರ್ಯ ಮತ್ತು ಬಾಬೆಲ್ ಅನ್ನು ಒಳಗೊಂಡಿದೆ. ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸಿಗಳಾಗಿ ಈ ಸೀಮೆಗಳಿಗೆ ತೆಗೆದುಕೊಂಡು ಹೋಗಲಾಯಿತು.
\f* ಬಿಟ್ಟು ಬರುವವು.
\s ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು
\s5
\q
\v 19 <<ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು <ತಂದೆ> ಎನ್ನುವಿ ಅಂದುಕೊಂಡೆನು.
\q
\v 20 ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ>> ಎಂದು ಯೆಹೋವನು ನುಡಿಯುತ್ತಾನೆ.
\s5
\p
\v 21 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
\q
\v 22 <<ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು>> ಎಂದು ಯೆಹೋವನು ನುಡಿಯುತ್ತಾನೆ.
\q ಅದಕ್ಕೆ ಜನರು, <<ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
\s5
\q
\v 23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
\q
\v 24 ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ
\q ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
\q
\v 25 ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ.
\q ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ>> ಎಂದು ಮೊರೆಯಿಡುತ್ತಾರೆ.
\s5
\c 4
\q
\v 1 ಯೆಹೋವನು, <<ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ;
\q ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.
\q
\v 2 <ಯೆಹೋವನ ಜೀವದಾಣೆ> ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ,
\q ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು>> ಎಂದು ಹೇಳುತ್ತಾನೆ.
\s ಯೆಹೂದಕ್ಕೆ ಉತ್ತರ ದಿಕ್ಕಿನಿಂದ ಬರುವ ಕ್ರೂರ ದಂಡನೆ
\p
\v 3 ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, <<ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
\s5
\v 4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು>> ಎಂದು ಹೇಳುತ್ತಾನೆ.
\p
\v 5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, <<ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
\v 6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.
\s5
\v 7 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
\v 8 ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
\s5
\v 9 ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು>> ಎಂದು ಯೆಹೋವನು ನುಡಿಯುತ್ತಾನೆ.
\p
\v 10 ಆಗ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, <ನಿಮಗೆ ಸಮಾಧಾನವಾಗುವುದು> ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ>> ಅಂದೆನು.
\s5
\v 11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, <<ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
\v 12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು>> ಎಂಬುದೇ.
\s5
\p
\v 13 ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
\v 14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
\v 15 ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
\s5
\v 16 ಇಗೋ, ಜನಾಂಗಗಳಿಗೆ ಅರುಹಿರಿ, <<ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ>> ಎಂದು ಪ್ರಚುರಪಡಿಸಿರಿ.
\v 17 ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.
\v 18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
\s5
\p
\v 19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
\v 20 ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.
\s5
\v 21 ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!
\p
\v 22 ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
\s ಬರಲಿರುವ ವಿನಾಶದ ದೃಶ್ಯ
\s5
\p
\v 23 ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
\v 24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.
\v 25 ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.
\v 26 ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
\s5
\v 27 ಯೆಹೋವನು, <<ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
\v 28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು>> ಎಂದು ನುಡಿಯುತ್ತಾನೆ.
\v 29 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
\s5
\v 30 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
\v 31 ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, <<ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ>> ಎಂದು ಅರಚಿಕೊಳ್ಳುತ್ತಾಳೆ.
\s5
\c 5
\s ಯೆಹೂದದವರ ಪಾಪಗಳು
\q
\v 1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ;
\q ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ?
\q ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
\q
\v 2 ಜನರು, <<ಯೆಹೋವನ ಜೀವದಾಣೆ>> ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
\q
\v 3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ.
\q ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
\s5
\q
\v 4 ಹೀಗಿರುವಲ್ಲಿ ನಾನು, <<ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
\q
\v 5 ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು>> ಅಂದುಕೊಂಡೆನು.
\q ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
\q
\v 6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು,
\q ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
\s5
\q
\v 7 ಯೆಹೋವನು, <<ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ.
\q ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
\q
\v 8 ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
\q
\v 9 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ>> ಎಂದು ಯೆಹೋವನು ನುಡಿಯುತ್ತಾನೆ.
\s5
\q
\v 10 <<ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ
\f +
\fr 5:10
\fq ದ್ರಾಕ್ಷಿ ತೋಟದ
\ft ಗೋಡೆಗಳ
\f* ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ.
\q ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
\q
\v 11 ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
\q
\v 12 ಅವರು ಯೆಹೋವನನ್ನು ಅಲ್ಲಗಳೆದು, <ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
\q
\v 13 ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ> >> ಅಂದುಕೊಂಡಿದ್ದಾರೆ.
\s5
\q
\v 14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು,
\q <<ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
\q
\v 15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು.
\q ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
\s5
\q
\v 16 ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
\q
\v 17 ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ,
\q ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು.
\q ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
\s5
\q
\v 18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ>> ಎಂದು ಹೇಳುತ್ತಾನೆ.
\p
\v 19 <<ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?>> ಎಂದು ನಿನ್ನ ಜನರು
\f +
\fr 5:19
\fq ನಿನ್ನ ಜನರು
\ft ಅಥವಾ ನೀವು.
\f* ಅನ್ನುವಾಗ ನೀನು ಅವರಿಗೆ, <<ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ>> ಎಂದು ಹೇಳು.
\s ದೇವಜನರಿಗೆ ಎಚ್ಚರಿಕೆ
\s5
\q
\v 20 ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
\q
\v 21 ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
\q
\v 22 ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ.
\q ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
\s5
\q
\v 23 ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
\q
\v 24 <<ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ,
\q ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ>> ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
\q
\v 25 ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.
\s5
\q
\v 26 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ;
\q ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
\q
\v 27 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ;
\q ಇದರಿಂದ ಧನವಂತರಾಗಿದ್ದಾರೆ.
\q
\v 28 ಕೊಬ್ಬಿ ಡಾಂಭಿಕರಾದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ.
\q ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
\q
\v 29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
\s5
\q
\v 30 ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;
\q
\v 31 ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ.
\q ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
\s5
\c 6
\s ಯೆರೂಸಲೇಮಿನ ಜನರಿಗೆ ಎಚ್ಚರಿಕೆ
\p
\v 1 <<ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
\q
\v 2 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
\q
\v 3 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
\s5
\q
\v 4 ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
\q
\v 5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.
\s5
\q
\v 6 ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ.
\q ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
\q
\v 7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ.
\q ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
\q
\v 8 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
\s5
\q
\v 9 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
\s ದಂಗೆಕೋರ ಯೆಹೂದ
\q
\v 10 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ.
\f +
\fr 6:10
\fq ಅವರ ಕಿವಿ ಮುಚ್ಚಲ್ಪಟ್ಟಿವೆ.
\ft ಅವರ ಕಿವಿಗಳು ಸುನ್ನತಿ ಇಲ್ಲದವು,
\f*
\q ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
\s5
\q
\v 11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು.
\q ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು.
\q ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
\q
\v 12 ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
\s5
\q
\v 13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
\q
\v 14 ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
\q
\v 15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.
\q ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು>> ಎಂದು ಯೆಹೋವನು ನುಡಿಯುತ್ತಾನೆ.
\s ಯೆಹೋವನ ಮಾರ್ಗವನ್ನು ತಿರಸ್ಕರಿಸಿದ ಯೆಹೂದ
\s5
\q
\v 16 ಯೆಹೋವನು, <<ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು.
\q ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು <ಅದರಲ್ಲಿ ನಾವು ನಡೆಯುವುದೇ ಇಲ್ಲ> ಎಂದರು.
\q
\v 17 <ತುತ್ತೂರಿಯ ಶಬ್ದವನ್ನು ಕೇಳಿರಿ> ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, <ನಾವು ಕೇಳುವುದಿಲ್ಲ> ಎಂದು ಹೇಳಿದರು.
\q
\v 18 ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
\q
\v 19 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
\s5
\q
\v 20 ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ?
\q ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
\q
\v 21 ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು.
\q ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು>> ಎಂದು ನುಡಿಯುತ್ತಾನೆ.
\s ಉತ್ತರ ದಿಕ್ಕಿನಿಂದ ಆಕ್ರಮಣ
\q
\v 22 <<ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
\s5
\q
\v 23 ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ.
\q ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ>> ಎಂದು ಯೆಹೋವನು ನುಡಿಯುತ್ತಾನೆ.
\q
\v 24 ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
\s5
\q
\v 25 ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
\q
\v 26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು.
\q ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
\s5
\q
\v 27 ಯೆಹೋವನು ನನಗೆ, <<ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
\q
\v 28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು.
\q ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
\q
\v 29 ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ.
\q ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
\q
\v 30 ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು <ಕಂದು ಬೆಳ್ಳಿ> ಎನಿಸಿಕೊಳ್ಳುವರು>> ಎಂದು ಹೇಳಿದ್ದಾನೆ.
\s5
\c 7
\s ದೇವಾಲಯದಲ್ಲಿ ಯೆರೆಮೀಯನಿಗೆ ಬೋಧನೆ
\p
\v 1 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
\v 2 <<ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
\s5
\v 3 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
\v 4 <ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ> ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
\s5
\v 5 ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
\v 6 ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,
\v 7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.
\s5
\v 8 ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.
\v 9 ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
\v 10 ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, <ನಮಗೆ ಪರಿಹಾರವಾಯಿತು> ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
\v 11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ>> ಎಂಬುದು ಯೆಹೋವನಾದ ನನ್ನ ನುಡಿ.
\s5
\p
\v 12 <<ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
\v 13 ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
\v 14 ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
\v 15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.
\s ಯೆಹೋವನ ಎಚ್ಚರಿಕೆ
\s5
\p
\v 16 <<ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
\v 17 ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?
\v 18 ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
\s5
\v 19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ>> ಎಂದು ಯೆಹೋವನು ನುಡಿಯುತ್ತಾನೆ.
\v 20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, <<ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.>>
\s5
\p
\v 21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, <<ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
\v 22 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
\v 23 ಆದರೆ, <ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ> ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
\s5
\v 24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
\p
\v 25 <<ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
\v 26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
\s5
\p
\v 27 <<ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.
\v 28 ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ>> ಎಂದು ಹೇಳು.
\s ಸಂಹಾರದ ತಗ್ಗು
\s5
\p
\v 29 ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
\v 30 ಯೆಹೋವನು ಹೀಗೆನ್ನುತ್ತಾನೆ, <<ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
\s5
\v 31 ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ <ತೋಫೆತ್> ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
\v 32 ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ <ಸಂಹಾರದ ತಗ್ಗು> ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
\s5
\v 33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
\v 34 ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು>> ಇದು ಯೆಹೋವನ ನುಡಿ.
\s5
\c 8
\p
\v 1 ಯೆಹೋವನು ಹೀಗೆನ್ನುತ್ತಾನೆ, <<ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
\v 2 ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
\v 3 ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು>> ಇದು ಯೆಹೋವನ ನುಡಿ.
\s ಯೆಹೂದ್ಯರ ದುಷ್ಟತನಕ್ಕೆ ಅದ ಭಂಗ
\s5
\q
\v 4 ನೀನು ಅವರಿಗೆ ಹೀಗೆ ಹೇಳಬೇಕು, <<ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
\q
\v 5 ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
\s5
\q
\v 6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು <ಆಹಾ, ನಾನು ಎಂಥಾ ಕೆಲಸ ಮಾಡಿದೆ> ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
\q
\v 7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
\s5
\q
\v 8 ಹೀಗಿರಲು <ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ> ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
\q
\v 9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
\q
\v 10 ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು.
\q ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
\s5
\q
\v 11 ಸಮಾಧಾನವಿಲ್ಲದ್ದಿದ್ದರೂ, <ಸಮಾಧಾನ> ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
\q
\v 12 ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.
\q ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
\q
\v 13 ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು>> ಇದು ಯೆಹೋವನ ನುಡಿ.
\s5
\q
\v 14 ಆ ಕಾಲದಲ್ಲಿ ಜನರು, <<ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ.
\q ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
\q
\v 15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
\s5
\q
\v 16 ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ.
\q ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು>> ಎಂದು ಹೇಳುವರು.
\q
\v 17 ಅದಕ್ಕೆ ಯೆಹೋವನು, <<ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು>> ಎಂದು ನುಡಿದಿದ್ದಾನೆ.
\s ಕುಗ್ಗಿದ ಹೃದಯದಿಂದ ಮೊರೆಯಿಡುವ ಯೆರೆಮೀಯನು
\s5
\q
\v 18 ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
\q
\v 19 ಆಹಾ, ನನ್ನ ಪ್ರಜೆಯೆಂಬಾಕೆಯು, <<ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?>> ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ.
\q ಅದಕ್ಕೆ ಯೆಹೋವನು, <<ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ>> ಎಂದು ನುಡಿಯುತ್ತಾನೆ.
\s5
\q
\v 20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
\q
\v 21 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
\q
\v 22 ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?
\s5
\c 9
\q
\v 1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು!
\q ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
\q
\v 2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು!
\q ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
\s ಯೆರೆಮೀಯನಿಗೆ ಯೆಹೋವನ ಉತ್ತರ
\q
\v 3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ.
\q ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
\s5
\q
\v 4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ.
\q ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
\q
\v 5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ.
\q ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
\q
\v 6 ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
\s5
\q
\v 7 ಹೀಗಿರಲು ಸೇನಾಧೀಶ್ವರನಾದ ಯೆಹೋವನು, <<ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
\q
\v 8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ;
\q ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
\q
\v 9 ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?>> ಎಂದು ನುಡಿಯುತ್ತಾನೆ.
\s5
\q
\v 10 <<ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
\q
\v 11 ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು
\q ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು>> ಎಂದು ಯೆಹೋವನು ಹೇಳಿದ್ದಾನಲ್ಲಾ.
\s ದೇಶವು ಸುಟ್ಟು ಹೋಗುವುದಕ್ಕೆ ಕಾರಣ
\q
\v 12 ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ?
\q ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
\s5
\q
\v 13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, <<ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
\q
\v 14 ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
\s5
\q
\v 15 ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.
\q
\v 16 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು>> ಎಂದು ಹೇಳುತ್ತಾನೆ.
\s ಯೆರೂಸಲೇಮಿನ ಶೋಕಗೀತೆ
\s5
\q
\v 17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, <<ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
\q
\v 18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
\s5
\q
\v 19 <ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ> >> ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
\q
\v 20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ.
\q ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
\s5
\q
\v 21 ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
\q
\v 22 <<ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು>> ಎಂದು ನನಗೆ ಅಪ್ಪಣೆಯಾಯಿತು.
\s ಯೆಹೋವನಲ್ಲಿ ಹೆಚ್ಚಳಪಡುವುದು
\s5
\q
\v 23 ಯೆಹೋವನು ಹೀಗೆನ್ನುತ್ತಾನೆ, <<ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
\q
\v 24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ>> ಎಂದು ಯೆಹೋವನು ನುಡಿಯುತ್ತಾನೆ.
\s5
\p
\v 25 <<ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
\v 26 ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು>> ಎಂದು ಯೆಹೋವನು ನುಡಿಯುತ್ತಾನೆ.
\s5
\c 10
\s ನಿರ್ಜೀವ ದೇವರುಗಳಿಗೆ ಭಯಪಡಬಾರದು
\q
\v 1 ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
\q
\v 2 ಯೆಹೋವನು, <<ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.
\s5
\q
\v 3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
\q
\v 4 ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
\q
\v 5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು;
\q ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ>> ಎಂದು ಹೇಳುತ್ತಾನೆ
\s5
\q
\v 6 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
\q
\v 7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.
\s5
\q
\v 8 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
\q
\v 9 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ.
\q ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
\q
\v 10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ.
\q ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
\s5
\q
\v 11 ನೀವು ಅವುಗಳಿಗೆ, <<ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು>> ಎಂದು ಹೇಳಿರಿ.
\q
\v 12 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
\q
\v 13 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ.
\q ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
\s5
\q
\v 14 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು.
\q ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
\q
\v 15 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
\q
\v 16 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು.
\q ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.
\s ಬರಲಿರುವ ವಿನಾಶ
\s5
\q
\v 17 ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
\q
\v 18 <<ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು,
\q ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು>> ಎಂದು ಯೆಹೋವನು ನುಡಿಯುತ್ತಾನೆ.
\s5
\q
\v 19 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, <<ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು>> ಅಂದುಕೊಂಡಿದ್ದೇನೆ.
\q
\v 20 ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ.
\q ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
\s5
\q
\v 21 ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ.
\q ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
\q
\v 22 ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
\s ಯೆರೆಮೀಯನ ವಿಜ್ಞಾಪನೆ
\s5
\q
\v 23 ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು.
\q ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
\q
\v 24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ.
\q ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
\q
\v 25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.
\q ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
\s5
\c 11
\s ಒಡಂಬಡಿಕೆಯ ಉಲ್ಲಂಘನೆ
\p
\v 1 ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
\v 2 <<ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
\s5
\v 3 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
\v 4 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
\v 5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು> ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ>> ಎಂದು ಸಾರಬೇಕು ಎಂದನು. ಆಗ ನಾನು, <<ಅಪ್ಪಣೆಯಂತಾಗಲಿ, ಯೆಹೋವನೇ>> ಎಂದು ಉತ್ತರಕೊಟ್ಟೆನು.
\s5
\p
\v 6 ಯೆಹೋವನು ನನಗೆ, <<ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, <ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
\v 7 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
\v 8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು> >> ಎಂದು ಹೇಳಿದನು.
\s ಯೆಹೂದದ ದ್ರೋಹದ ನಿಮಿತ್ತ ಸಂಭವಿಸುವ ಕೇಡು
\s5
\p
\v 9 ಯೆಹೋವನು ನನಗೆ, <<ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
\v 10 ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
\s5
\v 11 ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, <ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
\v 12 ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.>
\v 13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
\s5
\v 14 ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ>> ಎಂದು ಹೇಳಿದನು.
\q
\v 15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
\q
\v 16 ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
\s5
\p
\v 17 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, <<ನಿನಗೆ ಕೆಡುಕಾಗಲಿ>> ಎಂದು ಶಪಿಸಿದ್ದಾನೆ.
\s ಯೆರೆಮೀಯನಿಗೆ ವಿರುದ್ಧವಾದ ಒಳಸಂಚು
\s5
\p
\v 18 ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
\v 19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. <<ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ>> ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
\q
\v 20 ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ,
\q ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
\s5
\p
\v 21 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, <<ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
\v 22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
\v 23 ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು>> ಎಂದು ಹೇಳಿದ್ದಾನೆ.
\s5
\c 12
\s ನ್ಯಾಯಕ್ಕಾಗಿ ಚರ್ಚಿಸಿದ ಯೆರೆಮೀಯ
\q
\v 1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು.
\q ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
\q
\v 2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ.
\q ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.
\s5
\q
\v 3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ.
\q ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.
\q
\v 4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ.
\q <<ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ>> ಎಂದು ಹೇಳಿದ್ದಾರಷ್ಟೆ.
\s ದೇವರ ಉತ್ತರ
\s5
\q
\v 5 ಇಂತೆನ್ನುವ ಯೆಹೋವನು ನನಗೆ, <<ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ?
\q ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
\q
\v 6 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ.
\q ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ>> ಎಂದು ಹೇಳಿದ್ದಾನೆ.
\s5
\q
\v 7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
\q
\v 8 ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
\q
\v 9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ,
\f +
\fr 12:9
\fq ಬೇಟೆಯ ಹಕ್ಕಿಯಂತಿದೆ,
\ft ರಣಹದ್ದು.
\f* ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ?
\q ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.
\s5
\q
\v 10 ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
\q
\v 11 ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.
\s5
\q
\v 12 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ;
\q ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.
\q
\v 13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ.
\q ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ
\f +
\fr 12:13
\fq ನಿಮ್ಮ
\ft ಅವರ
\f* ಬೆಳೆಯ ವಿಷಯವಾಗಿ ನಿಮಗೆ
\f +
\fr 12:13
\fq ನಿಮಗೆ
\ft ಅಥವಾ ಅವರಿಗೆ.
\f* ನಾಚಿಕೆಯಾಗುವುದು.
\s ಯೆಹೂದದ ಕೆಟ್ಟ ನೆರೆಯವರ ಗತಿ
\s5
\p
\v 14 ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, <<ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
\v 15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.
\s5
\v 16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ <ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.
\v 17 ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ>> ಎಂದು ಹೇಳುತ್ತಾನೆ.
\s5
\c 13
\s ನಡುಕಟ್ಟಿನ ಸಾಮ್ಯ
\p
\v 1 ಯೆಹೋವನು ನನಗೆ, <<ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ>> ಎಂದು ಅಪ್ಪಣೆಕೊಟ್ಟನು.
\v 2 ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು.
\v 3 ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು.
\v 4 ಅವನು ನನಗೆ, <<ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು>> ಎಂಬುದಾಗಿ ನುಡಿದನು.
\s5
\v 5 ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.
\v 6 ಬಹು ದಿನಗಳ ಮೇಲೆ ಯೆಹೋವನು ನನಗೆ, <<ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ>> ಎಂದು ಹೇಳಿದನು.
\v 7 ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
\s5
\v 8 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
\v 9 <<ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
\v 10 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.
\v 11 ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ>> ಎಂಬುದೇ.
\s ಗಡಿಗೆಗಳ ಸಾಮ್ಯ
\s5
\p
\v 12 <<ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು>> ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, <<ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ>> ಎಂದು ಹೇಳುವರು.
\v 13 ಆಗ ನೀನು ಅವರಿಗೆ, <<ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,
\v 14 ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು>> ಇದು ಯೆಹೋವನ ನುಡಿ.
\s ಯೆಹೂದವನ್ನು ಎಚ್ಚರಿಸಿದ್ದು
\s5
\q
\v 15 ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.
\q
\v 16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು.
\q ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
\q
\v 17 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು.
\q ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
\s ರಾಜನನ್ನು ರಾಜಮಾತೆಯನ್ನೂ ಎಚ್ಚರಿಸಿದ್ದು
\s5
\q
\v 18 ರಾಜನಿಗೂ ಮತ್ತು ರಾಜಮಾತೆಗೂ, <<ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ>> ಎಂದು ಹೇಳಿರಿ.
\q
\v 19 ದಕ್ಷಿಣ ಯೆಹೂದ ದೇಶದ ಪಟ್ಟಣಗಳು
\f +
\fr 13:19
\fq ದಕ್ಷಿಣ ಯೆಹೂದ ದೇಶದ ಪಟ್ಟಣಗಳು
\ft ನೆಗೆವ್
\f* ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
\s ಬಾಬೆಲಿನಿಂದ ಯೆಹೂದಕ್ಕೆ ಬರುವ ದುರ್ಗತಿ
\s5
\q
\v 20 ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು.
\q ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
\q
\v 21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ?
\q ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
\s5
\q
\v 22 <<ಇವು ನನಗೆ ಏಕೆ ಸಂಭವಿಸಿದವು>> ಎಂದು ನೀನು ಮನದೊಳಗೆ ಅಂದುಕೊಂಡರೆ,
\q ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
\q
\v 23 ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ?
\q ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
\q
\v 24 ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.
\s5
\q
\v 25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.
\q
\v 26 ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.
\q
\v 27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ.
\q ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
\s5
\c 14
\s ಯೆಹೂದಕ್ಕೆ ಸಂಭವಿಸುವ ಕ್ಷಾಮ
\p
\v 1 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
\q
\v 2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ,
\q ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
\q
\v 3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ.
\q ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ,
\q ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ.
\q ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
\s5
\q
\v 4 ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
\q
\v 5 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
\q
\v 6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
\s ಪ್ರವಾದಿಯು ಸ್ವಜನರಿಗಾಗಿ ಮಾಡಿದ ಪ್ರಾರ್ಥನೆ
\s5
\q
\v 7 ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ,
\q ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು.
\q ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
\q
\v 8 ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ,
\q ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ,
\q ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
\q
\v 9 ಏಕೆ ಸ್ತಬ್ಧನಂತೆಯೂ
\f +
\fr 14:9
\fq ಸ್ತಬ್ಧನಂತೆಯೂ
\ft ಅಥವಾ ಗಲಿಬಿಲಿಗೊಂಡವನಂತೆಯೂ
\f* , ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ?
\q ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
\s ಯೆಹೋವನು ತನ್ನ ಜನರನ್ನೂ ಮತ್ತು ಅವರನ್ನು ವಂಚಿಸಿದ ಪ್ರವಾದಿಗಳನ್ನೂ ಗದರಿಸಿದ್ದು
\s5
\q
\v 10 ಯೆಹೋವನು ಈ ಜನರನ್ನು ಕುರಿತು, <<ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ.
\q ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು;
\q ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು>> ಎಂದು ಹೇಳಿದ್ದಾನೆ.
\q
\v 11 ಮತ್ತು ಯೆಹೋವನು ನನಗೆ, <<ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
\q
\v 12 ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು.
\q ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು>> ಎಂದು ಹೇಳಿದನು.
\s5
\p
\v 13 ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, <ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ> >> ಎಂಬುದಾಗಿ ಹೇಳಿದೆನು.
\v 14 ಆಗ ಯೆಹೋವನು ನನಗೆ ಹೀಗೆ ನುಡಿದನು, <<ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
\s5
\v 15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, <ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು> >> ಎಂದು ಹೇಳುತ್ತೇನೆ.
\v 16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
\s5
\v 17 ನೀನು ಅವರಿಗೆ, <<ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
\v 18 ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು>> ಎಂದನು.
\s ಪ್ರವಾದಿಯು ಸ್ವಜನರಿಗಾಗಿ ಮಾಡಿದ ಇನ್ನೊಂದು ಪ್ರಾರ್ಥನೆ
\s5
\q
\v 19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
\q ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ?
\q ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
\q
\v 20 ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ,
\q ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ;
\q ನಾವು ನಿನಗೇ ಪಾಪಮಾಡಿದ್ದೇವೆ.
\s5
\q
\v 21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ.
\q ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ,
\q ಅದನ್ನು ಭಂಗಪಡಿಸದಿರು.
\q
\v 22 ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ?
\q ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ?
\q ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು.
\q ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
\s5
\c 15
\s ಯೆಹೂದಕ್ಕೆ ಕಠಿಣ ದಂಡನೆ
\p
\v 1 ಯೆಹೋವನು ನನಗೆ ಹೀಗೆ ಹೇಳಿದನು, <<ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
\v 2 ಅವರು, <ನಾವು ಎಲ್ಲಿಗೆ ಹೋಗೋಣ?> ಎಂದು ನಿನ್ನನ್ನು ಕೇಳಲು ನೀನು ಅವರಿಗೆ,
\q <ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ.
\q ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ> >> ಎಂದು ಹೇಳು.
\s5
\q
\v 3 <<ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು,
\q ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು>> ಎಂಬುದು ಯೆಹೋವನಾದ ನನ್ನ ಮಾತು.
\q
\v 4 <<ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ,
\q ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
\s5
\q
\v 5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು?
\q ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
\q
\v 6 ಯೆಹೋವನ ಈ ಮಾತನ್ನು ಕೇಳು, <ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ.
\q ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
\q
\v 7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು.
\q ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
\s5
\q
\v 8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು.
\q ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು.
\q ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
\q
\v 9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ,
\q ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ.
\q ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು> >> ಇದು ಯೆಹೋವನ ನುಡಿ.
\s ಪ್ರವಾದಿಯ ಪ್ರಲಾಪ
\s5
\q
\v 10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ.
\q ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
\q
\v 11 ಇದಕ್ಕೆ ಯೆಹೋವನು, <<ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು.
\q ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
\q
\v 12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು?
\q ತಾಮ್ರವನ್ನು ಮುರಿಯುವುದು ಯಾರಿಂದಾದೀತು?>> ಎಂದು ಹೇಳಿದನು.
\s5
\q
\v 13 <<ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
\q
\v 14 ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.>>
\s5
\q
\v 15 ಅದಕ್ಕೆ ನಾನು, <<ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು;
\q ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು.
\q ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ.
\q ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
\q
\v 16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು.
\q ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
\s5
\q
\v 17 ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ.
\q ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
\q
\v 18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ?
\q ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?>> ಎಂದು ಅರಿಕೆಮಾಡಿಕೊಂಡೆನು.
\s ಯೆಹೋವನು ಪ್ರವಾದಿಯನ್ನು ಧೈರ್ಯಗೊಳಿಸಿದ್ದು
\s5
\q
\v 19 ಇದರಿಂದ ಯೆಹೋವನು, <<ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು.
\q ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ.
\q ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
\q
\v 20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು.
\q ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ.
\q ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
\q
\v 21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು,
\q ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು>> ಎಂದಿದ್ದಾನೆ.
\s5
\c 16
\s ಅಪತ್ತಿನ ದಿನ
\p
\v 1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
\v 2 <<ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.
\v 3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,
\v 4 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು>> ಎಂಬುದೇ.
\s5
\p
\v 5 ಯೆಹೋವನು ನನಗೆ, <<ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.
\v 6 ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
\s5
\v 7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.
\v 8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.
\v 9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, <ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.>
\s5
\v 10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, <ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?> ಎಂದು ಕೇಳುವಾಗ,
\v 11 ನೀನು ಅವರಿಗೆ ಹೀಗೆ ಹೇಳಬೇಕು, <ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,
\s5
\v 12 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
\v 13 ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ> >> ಎಂದು ಹೇಳಿದನು.
\s ಮುಂದಿನ ಅತಿಶಯವಾದ ಉದ್ಧಾರ
\s5
\p
\v 14 <<ಇಗೋ, ಮುಂದಿನ ಕಾಲದಲ್ಲಿ ಜನರು, <ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ> ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
\v 15 <ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ>> ಎಂದು ಯೆಹೋವನು ಘೋಷಿಸುತ್ತಾನೆ.
\s ಯೆಹೂದ್ಯರಲ್ಲಿ ನೆಲೆಗೊಂಡ ಪಾಪ, ತಪ್ಪಿಸಿಕೊಳ್ಳಲಾಗದ ದಂಡನೆ
\s5
\p
\v 16 ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.
\v 17 ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.
\v 18 ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.>>
\s ಬಲಪಡಿಸುವ ಯೆಹೋವನು
\s5
\p
\v 19 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, <<ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ>> ಎಂದು ಅರಿಕೆ ಮಾಡುವರು.
\v 20 ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
\p
\v 21 ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು <<ಯೆಹೋವ>> ಎಂದು ಅವರಿಗೆ ಗೊತ್ತಾಗುವುದು.
\s5
\c 17
\s ಯೆಹೂದವನ್ನು ಶಿಕ್ಷಿಸುವ ಯೆಹೋವನು
\q
\v 1 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ.
\q ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
\q
\v 2 ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ,
\q ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
\s5
\q
\v 3 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ,
\q ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
\q
\v 4 ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ.
\q ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು.
\q ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
\s ದೇವರನ್ನು ನಂಬುವವರಿಗೂ ಮನುಷ್ಯರನ್ನು ನಂಬುವವರಿಗೂ ಇರುವ ವ್ಯತ್ಯಾಸ
\s5
\q
\v 5 ಯೆಹೋವನು ಹೀಗೆನ್ನುತ್ತಾನೆ, <<ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು,
\q ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
\q
\v 6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು.
\q ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
\s5
\q
\v 7 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
\q
\v 8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
\q ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.>>
\s5
\q
\v 9 ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ;
\q ಅದನ್ನು ತಿಳಿದವರು ಯಾರು?
\q
\v 10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು,
\q ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
\q
\v 11 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು.
\q ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
\s5
\q
\v 12 ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
\q
\v 13 ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು.
\q ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ;
\q ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
\s ಪ್ರವಾದಿಯ ವಿಜ್ಞಾಪನೆ
\q
\v 14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.
\q ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
\s5
\q
\v 15 ಆಹಾ, ಜನರು ನನಗೆ, <<ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ>> ಎಂದು ಹೇಳುತ್ತಾರೆ.
\q
\v 16 ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ.
\q ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ.
\q ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
\s5
\q
\v 17 ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
\q
\v 18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ.
\q ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ.
\q ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
\s ಸಬ್ಬತ್ ದಿನವನ್ನು ಆಚರಿಸಬೇಕೆಂಬ ಬೋಧನೆ
\s5
\p
\v 19 ಯೆಹೋವನು ನನಗೆ ಇಂತೆಂದನು, <<ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ
\f +
\fr 17:19
\fq ಸಾಮಾನ್ಯ ಜನರ ಬಾಗಿಲಿನಲ್ಲಿಯೂ
\ft ಬೆನ್ಯಾಮೀನನ ಬಾಗಿಲು.
\f* , ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
\v 20 <ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
\s5
\v 21 ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
\v 22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
\v 23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
\s5
\v 24 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
\v 25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
\s5
\v 26 ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ
\f +
\fr 17:26
\fq ದಕ್ಷಿಣಪ್ರಾಂತ್ಯ
\ft ನೆಗೆವ್.
\f* ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
\v 27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ> >> ಎಂದು ಹೇಳಿದನು.
\s5
\c 18
\s ಕುಂಬಾರ ಮತ್ತು ಜೇಡಿಮಣ್ಣು
\p
\v 1 ಯೆಹೋವನು ಯೆರೆಮೀಯನಿಗೆ,
\v 2 <<ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು>> ಎಂಬ ಮಾತನ್ನು ದಯಪಾಲಿಸಿದನು.
\v 3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.
\v 4 ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.
\s5
\p
\v 5 ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,
\v 6 <<ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
\v 7 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
\v 8 ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
\s5
\v 9 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,
\v 10 ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
\s5
\v 11 ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, <ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ> ಎಂಬ ಮಾತನ್ನು ಹೇಳು.
\v 12 ಅವರೋ, <ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು> ಎಂದು ಹೇಳುತ್ತಾರೆ.>>
\s5
\q
\v 13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, <<ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ?
\q ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.
\q
\v 14 ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?
\s5
\q
\v 15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ;
\q ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ,
\q ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
\q
\v 16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು;
\q ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.
\q
\v 17 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು.
\q ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.>>
\s ಜನರ ಒಳಸಂಚು ಪ್ರವಾದಿಯ ಪ್ರಾರ್ಥನೆ
\s5
\q
\v 18 ಆಗ ಅವರು, <<ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ;
\q ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು.
\q ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ>> ಎಂದುಕೊಂಡರು.
\q
\v 19 ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.
\q
\v 20 ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ.
\q ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
\s5
\q
\v 21 ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು;
\q ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ;
\q ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ.
\q ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
\q
\v 22 ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ.
\q ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
\q
\v 23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ.
\q ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ.
\q ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
\s5
\c 19
\s ಮಣ್ಣಿನ ಮಡಕೆಯ ಸಾಮ್ಯ
\p
\v 1 ಯೆಹೋವನು ನನಗೆ ಹೀಗೆ ಹೇಳಿದನು, <<ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
\v 2 ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.
\v 3 ನೀನು ಅವರಿಗೆ, <ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
\s5
\p
\v 4 << <ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.
\v 5 ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
\s5
\v 6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.
\v 7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
\v 8 ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
\v 9 ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.> >>
\s5
\p
\v 10 ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,
\v 11 <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
\s5
\v 12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.
\v 13 ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.> >>
\s5
\p
\v 14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,
\v 15 <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು>> ಎಂದು ಸಮಸ್ತ ಜನರಿಗೆ ಸಾರಿದನು.
\s5
\c 20
\s ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು
\p
\v 1 ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
\v 2 ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
\s5
\v 3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, <<ಯೆಹೋವನು ನಿನ್ನ ಹೆಸರನ್ನು ಪಷ್ಹೂರ್
\f +
\fr 20:3
\fq ಪಷ್ಹೂರ್
\ft ಅಂದರೆ ಬಿಡುಗಡೆ.
\f* ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್
\f +
\fr 20:3
\fq ಮಾಗೋರ್ ಮಿಸ್ಸಾಬೀಬ್
\ft ಅಂದರೆ ಎಲ್ಲೆಡೆ ಭಯ.
\f* ಎಂದು ಹೇಳಿದ್ದಾನೆ.
\v 4 ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
\s5
\v 5 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲೋನಿಗೆ ತೆಗೆದುಕೊಂಡು ಹೋಗುವರು.
\v 6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ>> ಎಂದು ನುಡಿದಿದ್ದಾನೆ.
\s ಪ್ರವಾದಿಯ ಪ್ರಲಾಪ
\s5
\q
\v 7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ;
\q ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
\q
\v 8 ನಾನು ಮಾತನಾಡುವುದೆಲ್ಲಾ ಅರಚಾಟವೇ. <<ಬಲಾತ್ಕಾರ, ಕೊಳ್ಳೆ>> ಎಂದೇ ಕೂಗಿಕೊಳ್ಳುತ್ತೇನೆ.
\q ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
\q
\v 9 <<ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ>> ಎಂದುಕೊಂಡರೆ,
\q ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ,
\q ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
\s5
\q
\v 10 <<ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು>> ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ.
\q ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ <<ಇವನು ಎಡವಿ ಬೀಳಲಿ>> ಎಂದು ನನ್ನನ್ನು ಹೊಂಚಿನೋಡುತ್ತಾ,
\q <<ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು>> ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
\q
\v 11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು.
\q ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
\s5
\q
\v 12 ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ,
\q ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
\q
\v 13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
\s5
\q
\v 14 ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
\q
\v 15 <<ನಿನಗೆ ಗಂಡುಮಗು ಹುಟ್ಟಿದೆ>> ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
\s5
\q
\v 16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ.
\q ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
\q
\v 17 ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
\q
\v 18 ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
\s5
\c 21
\s ದೇವರು ಚಿದ್ಕೀಯನ ಬಿನ್ನಹವನ್ನು ತಿರಸ್ಕರಿಸಿದ್ದು
\p
\v 1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,
\v 2 <<ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು>> ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
\s5
\p
\v 3 ಆಗ ಯೆರೆಮೀಯನು, <<ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ>> ಎಂದು ಅವರಿಗೆ ಹೇಳಿದನು.
\v 4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.
\v 5 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.
\s5
\v 6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.
\v 7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.
\s5
\p
\v 8 <<ನೀನು ಈ ಜನರಿಗೆ ಹೀಗೆ ಹೇಳು>> ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
\v 9 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
\v 10 ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.>>
\s ಯೆಹೂದದ ರಾಜಮನೆತನಕ್ಕೆ ಶಾಪ
\s5
\p
\v 11 ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.
\q
\v 12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು,
\q ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ,
\q ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ>> ಎಂಬುದೇ.
\s5
\q
\v 13 ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ.
\q <<ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?>> ಎಂದು ಹೇಳುವವರೇ,
\q
\v 14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು,
\q ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
\s5
\c 22
\s ಯೆಹೂದದ ಅರಸರ ವಿಷಯವಾದ ದೈವೋಕ್ತಿಗಳು
\p
\v 1 ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, <<ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,
\v 2 ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
\v 3 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ>> ಎಂದು ಹೇಳುತ್ತಾನೆ.
\s5
\p
\v 4 <<ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
\v 5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ>> ಎಂಬುದೇ.
\s5
\v 6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ,
\q <<ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ,
\q ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
\q
\v 7 ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
\s5
\q
\v 8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, <ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
\q
\v 9 <ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು> ಎಂದು ಅಂದುಕೊಳ್ಳುವರು.>>
\s ಅರಸನಾದ ಶಲ್ಲೂಮನು
\s5
\q
\v 10 ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ;
\q ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
\s5
\q
\v 11 ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, <<ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
\q
\v 12 ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು>> ಎಂಬುದೇ.
\s ಅರಸನಾದ ಯೆಹೊಯಾಕೀಮನು
\s5
\q
\v 13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ!
\q ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
\q
\v 14 ಆಹಾ, <<ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು>> ಎಂದು ಹೇಳಿ,
\q ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
\s5
\q
\v 15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ?
\q ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
\q
\v 16 ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
\s5
\q
\v 17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
\q
\v 18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು.
\q <<ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
\q
\v 19 ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು>> ಎನ್ನುತ್ತಾನೆ.
\s5
\q
\v 20 ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ!
\q ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
\q
\v 21 ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ <<ನಾನು ಕೇಳುವುದಿಲ್ಲ>> ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
\s5
\q
\v 22 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು.
\q ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.
\q
\v 23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!
\s5
\p
\v 24 ಯೆಹೋವನು ಹೀಗೆನ್ನುತ್ತಾನೆ, <<ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
\v 25 ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
\v 26 ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.
\s5
\v 27 ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ>> ಎಂಬುದೇ.
\q
\v 28 ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ,
\q ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ?
\q ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
\s5
\q
\v 29 ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
\q
\v 30 ಯೆಹೋವನು, <<ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ;
\q ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು>> ಎಂದು ಹೇಳುತ್ತಾನೆ.
\s5
\c 23
\s ಧರ್ಮರಾಜನು ಪಟ್ಟಕ್ಕೆ ಬರುವ ವಾಗ್ದಾನ
\p
\v 1 <<ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ>> ಎಂಬುದು ಯೆಹೋವನ ನುಡಿ.
\p
\v 2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, <<ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
\s5
\v 3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
\v 4 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ>> ಎಂಬುದೇ.
\s5
\q
\v 5 ಯೆಹೋವನು, <<ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು.
\q ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
\q
\v 6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು;
\q <ಯೆಹೋವ ಚಿದ್ಕೇನು> ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು>> ಎಂದು ನುಡಿಯುತ್ತಾನೆ.
\s5
\p
\v 7 ಆಹಾ, ಮುಂದಿನ ಕಾಲದಲ್ಲಿ ಜನರು, <<ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
\v 8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.>> ಇದು ಯೆಹೋವನ ನುಡಿ.
\s ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು
\s5
\q
\v 9 ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ.
\q ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ.
\q ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
\q
\v 10 ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ.
\q ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
\s5
\q
\v 11 ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು.
\q ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
\q
\v 12 ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು.
\q ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
\s5
\q
\v 13 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ;
\q ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.
\q
\v 14 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ.
\q ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ.
\q ಅವರೆಲ್ಲರು ಸೊದೋಮಿನಂತೆ,
\f +
\fr 23:14
\fq ಸೊದೋಮಿನಂತೆ,
\ft ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ. 18:20; 19:24-25 ನೋಡಿರಿ).
\f* ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
\q
\v 15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, <<ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು;
\q ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ>> ಎಂದು ನುಡಿಯುತ್ತಾನೆ.
\s ಯೆಹೋವನು ಕೊಡುವ ಎಚ್ಚರಿಕೆ
\s5
\q
\v 16 ಸೇನಾಧೀಶ್ವರನಾದ ಯೆಹೋವನು, <<ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ.
\q ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
\q
\v 17 ನನ್ನನ್ನು ಅಸಡ್ಡೆಮಾಡುವವರಿಗೆ, <ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ> ಎಂದು ಹೇಳುತ್ತಲೇ ಇದ್ದಾರೆ.
\q ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, <ನಿಮಗೆ ಯಾವ ಕೇಡೂ ಸಂಭವಿಸದು> ಎಂದು ನುಡಿಯುತ್ತಾರೆ.
\q
\v 18 ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ?
\q ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
\s5
\q
\v 19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ.
\q ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
\q
\v 20 ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ.
\q ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
\s5
\q
\v 21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು;
\q ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
\q
\v 22 ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ,
\q ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು>> ಎಂದು ಹೇಳುತ್ತಾನೆ.
\s5
\q
\v 23 ಯೆಹೋವನು ಇಂತೆನ್ನುತ್ತಾನೆ, <<ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ?
\q
\v 24 ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ?
\q ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.>>
\s5
\p
\v 25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
\v 26 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
\v 27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
\s5
\v 28 ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
\v 29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
\s ಯೆಹೋವನ ಭಾರ ಎಂದು ನುಡಿಯುವ ಜನರಿಗೆ ಆಗುವ ಶಿಕ್ಷೆ
\p
\v 30 ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
\s5
\v 31 ಆಹಾ, ತಮ್ಮ ನಾಲಿಗೆಗಳನ್ನು ಚಾಚಿ <<ಯೆಹೋವನು ನುಡಿಯುತ್ತಾನೆ>> ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
\v 32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
\s5
\p
\v 33 ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ <<ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?>> ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, <<ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
\v 34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, <ಯೆಹೋವನ ಹೊರೆ> ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
\s5
\v 35 ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, <ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?>
\v 36 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
\s5
\v 37 ನೀವು <ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ> ಎಂದು ಪ್ರವಾದಿಯನ್ನು ಕೇಳಿರಿ.
\v 38 ಒಂದು ವೇಳೆ ನೀವು <ಯೆಹೋವನ ಹೊರೆ> ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, <ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
\v 39 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
\v 40 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.> >>
\s5
\c 24
\s ಒಳ್ಳೆಯ ಮತ್ತು ಕೆಟ್ಟ ಹಣ್ಣುಗಳ ಸಾಮ್ಯ
\p
\v 1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
\v 2 ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
\v 3 ಆಗ ಯೆಹೋವನು ನನ್ನನ್ನು, <<ಯೆರೆಮೀಯನೇ, ಏನು ನೋಡುತ್ತೀ?>> ಎಂದು ಕೇಳಲು ನಾನು, <<ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ>> ಎಂದು ಉತ್ತರ ಕೊಟ್ಟೆನು.
\s5
\v 4 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
\v 5 <<ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
\v 6 ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
\v 7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು>> ಎಂಬುದೇ.
\s5
\p
\v 8 ಇದಲ್ಲದೆ ಯೆಹೋವನು, <<ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
\v 9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
\v 10 ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು>> ಎಂದು ಹೇಳುತ್ತಾನೆ.
\s5
\c 25
\s ಯೆಹೂದ್ಯರ ದ್ರೋಹ
\p
\v 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
\v 2 ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.
\s5
\p
\v 3 ಆತನು, <<ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
\v 4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
\s5
\v 5 ಆತನು ನಿಮಗೆ ಹೇಳಿದ ಮಾತೇನೆಂದರೆ, <ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
\v 6 ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ> ಎಂಬುದೇ.
\s5
\v 7 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ>> ಎಂದು ಹೇಳಿದನು.
\s ಎಪ್ಪತ್ತು ವರ್ಷಗಳ ಸೆರೆ
\p
\v 8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, <<ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
\v 9 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
\s5
\v 10 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
\v 11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
\s5
\v 12 ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
\v 13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
\v 14 ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು>> ಎಂಬುದೇ.
\s ಯೆಹೋವನು ವಿಧಿಸುವ ದುರ್ಗತಿ
\s5
\p
\v 15 ಇಸ್ರಾಯೇಲರ ದೇವರಾದ ಯೆಹೋವನು ನನಗೆ, <<ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
\v 16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು>> ಎಂದು ಅಪ್ಪಣೆಕೊಟ್ಟನು.
\s5
\v 17 ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
\v 18 ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
\s5
\v 19 ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
\v 20 ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
\v 21 ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
\s5
\v 22 ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
\v 23 ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
\s5
\v 24 ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
\v 25 ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
\v 26 ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ
\f +
\fr 25:26
\fq ಶೇಷಕಿನ
\ft ಬಾಬೆಲಿನ ರಹಸ್ಯವಾದ ಹೆಸರು.
\f* ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
\s5
\v 27 ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.>>
\v 28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
\v 29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ>> ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
\s5
\v 30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು,
\q <<ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು.
\q ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು.
\q ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
\q
\v 31 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು,
\q ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ,
\q ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು>> ಇದು ಯೆಹೋವನ ನುಡಿ.
\s ಜನಾಂಗಕ್ಕೆ ಬರುವ ಕೇಡು
\s5
\q
\v 32 ಸೇನಾಧೀಶ್ವರನಾದ ಯೆಹೋವನು, <<ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
\q
\v 33 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು;
\q ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
\s ಯೆಹೂದ್ಯ ನಾಯಕರಿಗಾಗುವ ಶಿಕ್ಷೆ
\s5
\q
\v 34 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ!
\q ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು;
\q ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.
\q
\v 35 ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
\q
\v 36 ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ!
\q ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
\s5
\q
\v 37 ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
\q
\v 38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ.
\q ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ>> ಎಂದು ನುಡಿಯುತ್ತಾನೆ.
\s5
\c 26
\s ಯೆರೆಮೀಯನು ಮರಣದಿಂದ ಪಾರಾದ್ದದು
\p
\v 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
\v 2 <<ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
\v 3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
\s5
\v 4 ನೀನು ಅವರಿಗೆ, <ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
\v 5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
\v 6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು> >> ಎಂದು ಹೇಳು ಎಂದನು.
\s5
\v 7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
\v 8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, <<ನೀನು ಸಾಯಲೇಬೇಕು!
\v 9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, <ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು> ಎಂದು ಏಕೆ ಹೇಳಿದೆ>> ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
\s5
\p
\v 10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
\v 11 ಆಗ ಯಾಜಕರೂ ಮತ್ತು ಪ್ರವಾದಿಗಳೂ, <<ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ>> ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
\v 12 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, <<ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
\s5
\v 13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
\v 14 ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
\v 15 ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ>> ಎಂದು ಹೇಳಿದನು.
\s5
\v 16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, <<ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ>> ಎಂದು ಹೇಳಿದರು.
\v 17 ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
\s5
\v 18 <<ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, <ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು> ಎಂದು ಹೇಳಲಾಗಿ
\v 19 ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ>> ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
\s5
\p
\v 20 ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
\v 21 ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
\s5
\v 22 ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
\v 23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
\p
\v 24 ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
\s5
\c 27
\s ಬಾಬೆಲೋನಿಗೆ ಅಧೀನವಾಗಬೇಕೆಂದು ಯೆರೆಮೀಯನು ಎಚ್ಚರಿಸಿದ್ದು
\p
\v 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
\v 2 <<ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,
\v 3 ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
\v 4 ನೀನು ಆ ರಾಯಭಾರಿಗಳಿಗೆ, <ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.>
\s5
\v 5 <ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
\v 6 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
\v 7 ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
\s5
\v 8 ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು> ಇದು ಯೆಹೋವನ ನುಡಿ.
\s5
\v 9 <ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ> ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
\v 10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
\v 11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.>>
\s5
\p
\v 12 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, <<ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
\v 13 ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
\s5
\v 14 <ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ> ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
\v 15 ಯೆಹೋವನು ಇಂತೆನ್ನುತ್ತಾನೆ, <ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.> >>
\s5
\p
\v 16 ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, <<ಯೆಹೋವನು ಇಂತೆನ್ನುತ್ತಾನೆ, <ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು> ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
\v 17 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
\v 18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
\s5
\v 19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
\v 20 ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
\s5
\v 21 ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
\v 22 <ಅವು ಬಾಬೆಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.> >>
\s5
\c 28
\s ಯೆರೆಮೀಯನು ಹನನ್ಯನನ್ನು ಗದರಿಸಿದ್ದು
\p
\v 1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
\v 2 <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
\s5
\v 3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
\p
\v 4 << <ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.> >>
\s5
\p
\v 5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
\v 6 <<ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
\v 7 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
\s5
\v 8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
\v 9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು>> ಎಂದು ಹೇಳಿದನು.
\s5
\p
\v 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
\v 11 <<ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು>> ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
\s5
\p
\v 12 ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
\v 13 <<ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, <ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
\v 14 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ> ಎಂದು ಹೇಳು>> ಎಂಬುದೇ.
\s5
\v 15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, <<ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
\v 16 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ>> ಎಂದು ಹೇಳಿದನು.
\v 17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
\s5
\c 29
\s ಯೆರೆಮೀಯನು ಬಾಬೆಲಿನಲ್ಲಿ ಸೆರೆಯಾಗಿದ್ದವರಿಗೆ ಕಳುಹಿಸಿದ ಕಾಗದ
\p
\v 1 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
\v 2 ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.
\v 3 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
\s5
\v 4 ಅದರಲ್ಲಿ, <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
\v 5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
\s5
\v 6 ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
\v 7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
\s5
\v 8 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
\v 9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ>> ಎಂದು ಬರೆಯಲ್ಪಟ್ಟಿತು.
\s5
\p
\v 10 ಯೆಹೋವನು ಇಂತೆನ್ನುತ್ತಾನೆ, <<ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
\v 11 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
\s5
\v 12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
\v 13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
\v 14 ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ>> ಎಂಬುದೇ.
\s5
\v 15 ನೀವೋ, <<ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ>> ಅಂದುಕೊಂಡಿದ್ದೀರಿ.
\p
\v 16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
\v 17 <<ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
\s5
\v 18 ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
\v 19 ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.>>
\s5
\p
\v 20 ನಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.
\v 21 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, <<ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
\s5
\v 22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು <ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ> ಎಂದು ಶಪಿಸುವರು.
\v 23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ>> ಎಂಬುದೇ.
\s ಶೆಮಾಯನ ಆಕ್ಷೇಪಣೆ, ಯೆರೆಮೀಯನ ಉತ್ತರ
\s5
\p
\v 24 ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
\v 25 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
\v 26 <<ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
\s5
\v 27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?
\v 28 ಇವನು, <ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ> ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.>>
\p
\v 29 ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
\s5
\v 30 ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.
\v 31 ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, <<ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
\v 32 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ>> ಎಂಬುದೇ.
\s5
\c 30
\s ಸುಸ್ಥಿತಿಗೆ ತರುವ ವಾಗ್ದಾನ
\p
\v 1 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
\v 2 <<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
\v 3 ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ>> ಎಂಬುದೇ.
\s ಇಸ್ರಾಯೇಲಿಗೆ ಸಂಭವಿಸುವ ಬಾಧೆಯೂ ಉದ್ಧಾರವೂ
\s5
\p
\v 4 ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
\v 5 <<ಯೆಹೋವನು ಇಂತೆನ್ನುತ್ತಾನೆ,
\q ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
\s5
\q
\v 6 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ?
\q ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
\q
\v 7 ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ,
\q ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.>>
\s5
\p
\v 8 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
\v 9 ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.>>
\s5
\q
\v 10 ಯೆಹೋವನು ಇಂತೆನ್ನುತ್ತಾನೆ, <<ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ!
\q ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು.
\q ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.>>
\q
\v 11 ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ;
\q ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು.
\q ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.>>
\s ಹಾಳಾಗಿ ಹೋದ ಚೀಯೋನನ್ನು ಯೆಹೋವನು ಉನ್ನತಿಗೆ ತರುವುದು
\s5
\q
\v 12 ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
\q
\v 13 ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.
\s5
\q
\v 14 ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು.
\q ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
\q
\v 15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ?
\q ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
\s5
\q
\v 16 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು.
\q ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.>>
\q
\v 17 ಯೆಹೋವನು ಇಂತೆನ್ನುತ್ತಾನೆ, <<ಇಗೋ, <ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ> ಎಂದು ಜನರು ಹೇಳಿ,
\q ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.>>
\s5
\q
\v 18 ಯೆಹೋವನು ಹೀಗೆನ್ನುತ್ತಾನೆ, <<ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು.
\q ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
\q
\v 19 ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು.
\q ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
\s5
\q
\v 20 ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು,
\q ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
\q
\v 21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು.
\q ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು.
\q ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.>>
\q
\v 22 ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
\s ಯೆಹೋವನ ರೋಷವೆಂಬ ಬಿರುಗಾಳಿ
\s5
\q
\v 23 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ;
\q ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
\q
\v 24 ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು,
\q ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
\s5
\c 31
\s ಇಸ್ರಾಯೇಲ್ ಸೆರೆಯಿಂದ ಹಾಯಾಗಿ ಹಿಂದಿರುಗುವುದು
\p
\v 1 ಯೆಹೋವನು, <<ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು>> ಎಂದು ಹೇಳುತ್ತಾನೆ.
\q
\v 2 ಕರ್ತನಾದ ಯೆಹೋವನು, <<ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು;
\q ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,
\q
\v 3 <ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,
\s5
\q
\v 4 ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು.
\q ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
\q
\v 5 ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.
\q
\v 6 ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ> ಎಂದು ಕೂಗುವರು>> ಎಂದು ಹೇಳುವನು.
\s5
\q
\v 7 ಯೆಹೋವನು ಇಂತೆನ್ನುತ್ತಾನೆ, <<ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ.
\q ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
\s5
\q
\v 8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು.
\q ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
\q
\v 9 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು.
\q ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು.
\q ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
\s5
\q
\v 10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ,
\q ದೂರ ದ್ವೀಪಗಳಲ್ಲಿ ಸಾರಿರಿ!
\q ಇಸ್ರಾಯೇಲರನ್ನು ಚದರಿಸಿದಾತನು, <ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು> ಎಂದು ಪ್ರಕಟಿಸಿರಿ.
\q ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
\q
\v 11 ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.
\s5
\q
\v 12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು.
\q ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು.
\q ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
\s5
\q
\v 13 ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು;
\q ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು.
\q ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ,
\q ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
\q
\v 14 ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು;
\q ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.>>
\s ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ
\s5
\q
\v 15 ಯೆಹೋವನು ಇಂತೆನ್ನುತ್ತಾನೆ, <<ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ,
\q ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.>>
\s5
\q
\v 16 ಯೆಹೋವನು, <<ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ.
\q ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು>> ಎನ್ನುತ್ತಾನೆ.
\q
\v 17 ಯೆಹೋವನು ಇಂತೆನ್ನುತ್ತಾನೆ, <<ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.
\s5
\q
\v 18 ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, <ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು.
\q ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
\q
\v 19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು
\f +
\fr 31:19
\fq ತೊಡೆಯನ್ನು ಬಡಿದುಕೊಂಡೆನು
\ft ಎದೆಯನ್ನು ಬಡಿದುಕೊಂಡೆನು
\f* .
\q ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.> >>
\q
\v 20 ಯೆಹೋವನು ಇಂತೆನ್ನುತ್ತಾನೆ, <<ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ?
\q ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
\s5
\q
\v 21 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ;
\q ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ.
\q ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
\q
\v 22 ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ?
\q ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.>>
\s ಯೆಹೂದದ ಮತ್ತು ಇಸ್ರಾಯೇಲಿನ ಮುಂದಿನ ಸಂತತಿ
\s5
\p
\v 23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <<ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, <ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ> ಎಂದು ಮತ್ತೆ ಮಾತನಾಡುವರು.
\v 24 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.
\v 25 ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ>> ಎಂಬುದೇ.
\v 26 ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.
\s5
\p
\v 27 ಕರ್ತನಾದ ಯೆಹೋವನು, <<ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.
\v 28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.
\s5
\v 29 <ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ> ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.
\v 30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು>> ಎಂದು ಹೇಳುತ್ತಾನೆ.
\s ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ
\s5
\p
\v 31 ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
\v 32 ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
\s5
\v 33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
\v 34 ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, <ಯೆಹೋವನ ಜ್ಞಾನವನ್ನು ಪಡೆಯಿರಿ> ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ>> ಎಂಬುದೇ.
\s ಯೆಹೋವನು ಇಸ್ರಾಯೇಲನ್ನು ಎಂದಿಗೂ ತ್ಯಜಿಸನು
\s5
\q
\v 35 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ,
\q ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ,
\q ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
\q
\v 36 <<ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ,
\q ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.>>
\s5
\q
\v 37 ಯೆಹೋವನು, <<ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ,
\q ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ,
\q ನಾನು ಆ ವಂಶವನ್ನು ನಿರಾಕರಿಸಿಬಿಡುವೆನು>> ಎಂದು ಹೇಳುತ್ತಾನೆ.
\s ಯೆರೂಸಲೇಮಿಗೆ ಆಗುವ ಅಭಿವೃದ್ಧಿ
\s5
\p
\v 38 ಯೆಹೋವನು, <<ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.
\v 39 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.
\v 40 ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ>> ಎನ್ನುತ್ತಾನೆ.
\s5
\c 32
\s ಯೆರೆಮೀಯನು ಹೊಲವನ್ನು ಕೊಂಡುಕೊಂಡದ್ದು
\p
\v 1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
\v 2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
\s5
\v 3 ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ನೀನು ಪ್ರವಾದನೆ ಮಾಡುತ್ತಾ, <ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
\v 4 ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
\v 5 ಆ ಅರಸನು ಚಿದ್ಕೀಯನನ್ನು ಬಾಬೆಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?> >> ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
\s5
\p
\v 6 ಅದಕ್ಕೆ ಯೆರೆಮೀಯನು, <<ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
\v 7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು <ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು> >> ಎಂದು ತಿಳಿಸಿದನು.
\s5
\v 8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, <<ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ>> ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
\v 9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು
\f +
\fr 32:9
\fq ಹದಿನೇಳು ತೊಲಾ ಬೆಳ್ಳಿಯನ್ನು
\ft 200 ಗ್ರಾಂ ಬೆಳ್ಳಿ.
\f* ತೂಕಮಾಡಿ ಅವನಿಗೆ ಕೊಟ್ಟೆನು.
\s5
\v 10 ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
\v 11 ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
\v 12 ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
\s5
\v 13 ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
\v 14 <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
\v 15 ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ> >> ಎಂದು ಖಂಡಿತವಾಗಿ ಹೇಳಿದೆನು.
\s ಯೆರೆಮೀಯನ ವಿಜ್ಞಾಪನೆ
\s5
\p
\v 16 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
\v 17 <<ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
\v 18 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
\s5
\v 19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
\v 20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
\v 21 ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
\s5
\v 22 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
\v 23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
\s5
\v 24 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
\v 25 ಕರ್ತನಾದ ಯೆಹೋವನೇ, ನೀನು ನನಗೆ, <ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ> ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ>> ಎಂದು ವಿಜ್ಞಾಪನೆ ಮಾಡಿದೆನು.
\s ಯೆಹೋವನ ಉತ್ತರ
\s5
\p
\v 26 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
\v 27 <<ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
\v 28 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
\s5
\v 29 ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
\v 30 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
\s5
\v 31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
\v 32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
\s5
\v 33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
\v 34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
\v 35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ>> ಎಂಬುದೇ.
\s5
\p
\v 36 ಹೀಗಿರಲು <<ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
\v 37 <ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
\s5
\v 38 ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
\v 39 ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
\v 40 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು> ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
\s5
\v 41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.>>
\v 42 ಯೆಹೋವನು ಇಂತೆನ್ನುತ್ತಾನೆ, <<ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
\s5
\v 43 ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
\v 44 ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.>> ಇದು ಯೆಹೋವನ ನುಡಿ.
\s5
\c 33
\s ಪುನಃಸ್ಥಾಪನೆಯ ವಾಗ್ದಾನ
\p
\v 1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.
\v 2 <<ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,
\v 3 <ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
\s5
\v 4 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,
\v 5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.
\s5
\v 6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
\v 7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.
\v 8 ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
\v 9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.> >>
\s5
\v 10 ಯೆಹೋವನು ಇಂತೆನ್ನುತ್ತಾನೆ, <<ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
\v 11 ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.>>
\s5
\v 12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.
\v 13 ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ>> ಎಂಬುದೇ.
\s ದಾವೀದನ ಸಂತತಿಯ ಧರ್ಮದ ಆಳ್ವಿಕೆ
\s5
\p
\v 14 ಯೆಹೋವನು ಇಂತೆನ್ನುತ್ತಾನೆ, <<ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
\v 15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.
\v 16 ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; <ಯೆಹೋವ ಚಿದ್ಕೇನು> ಅಂದರೆ ಯೆಹೋವನೇ <ನಮ್ಮ ಸದ್ಧರ್ಮ> ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.>>
\s5
\v 17 ಯೆಹೋವನು ಇಂತೆನ್ನುತ್ತಾನೆ, <<ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.
\v 18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.>>
\s5
\v 19 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
\v 20 <<ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
\v 21 ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
\v 22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.>>
\s5
\v 23 ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
\v 24 <<ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
\s5
\v 25 ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,
\v 26 ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.>>
\s5
\c 34
\ms ಯೆರೆಮೀಯನು ಅನುಭವಿಸಿದ ಹಿಂಸೆಗಳೂ ಮಾಡಿದ ಪ್ರವಾದನೆಗಳೂ
\s ಯೆರೆಮೀಯನು ಚಿದ್ಕೀಯನನ್ನು ಎಚ್ಚರಿಸಿದ್ದು
\p
\v 1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
\v 2 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, <ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
\v 3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬೆಲೋನಿಗೆ ಗಡಿ ಪಾರಾಗುವಿ.
\s5
\v 4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
\v 5 ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ> >> ಎಂದನು.
\s5
\p
\v 6 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
\v 7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
\s ಯೆರೆಮೀಯನು ಯೆರೂಸಲೇಮಿನವರನ್ನು ಖಂಡಿಸಿದ್ದು
\s5
\p
\v 8 ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
\v 9 <<ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ>> ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
\s5
\v 10 ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
\v 11 ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
\s5
\v 12 ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
\v 13 <<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
\v 14 <ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು> ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
\s5
\v 15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
\v 16 ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ>> ಎಂಬುದೇ.
\s5
\p
\v 17 ಆದಕಾರಣ ಯೆಹೋವನು, <<ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
\v 18 ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
\v 19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
\s5
\v 20 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
\v 21 ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು>> ಎನ್ನುತ್ತಾನೆ.
\v 22 ಯೆಹೋವನು, <<ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು>> ಎಂದು ನುಡಿಯುತ್ತಾನೆ.
\s5
\c 35
\s ರೇಕಾಬ್ಯರ ವಿಧೇಯತೆ, ಯೆಹೂದ್ಯರ ಅವಿಧೇಯತೆ
\p
\v 1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
\v 2 <<ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು>> ಎಂಬುದೇ.
\s5
\v 3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
\v 4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.
\s5
\v 5 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, <<ದ್ರಾಕ್ಷಾರಸವನ್ನು ಕುಡಿಯಿರಿ>> ಅಂದನು.
\v 6 ಅದಕ್ಕೆ ಅವರು, <<ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, <ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
\v 7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು> >> ಎಂದು ಅಪ್ಪಣೆಕೊಟ್ಟಿದ್ದಾನೆ.
\s5
\v 8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
\v 9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.
\v 10 ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.
\v 11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, <<ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ>> ಎಂದು ಹೇಳಿದರು.
\s5
\p
\v 12 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
\v 13 <<ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, <ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?> ಎಂದು ಯೆಹೋವನು ಅನ್ನುತ್ತಾನೆ.
\v 14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
\s5
\v 15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
\v 16 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
\s5
\v 17 ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ>> ಎಂಬುದೇ.
\s5
\v 18 ಮತ್ತು ಯೆರೆಮೀಯನು ರೇಕಾಬ್ಯರಿಗೆ, <<ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
\v 19 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ> >> ಎಂಬುದೇ.
\s5
\c 36
\s ಯೆರೆಮೀಯನ ಪ್ರವಾದನೆಯ ಸುರುಳಿಯನ್ನು ಓದಿದ್ದು
\p
\v 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
\v 2 <<ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
\v 3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು>> ಎಂಬ ಮಾತನ್ನು ತಿಳಿಸಿದನು.
\s5
\v 4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
\v 5 ಮತ್ತು ಯೆರೆಮೀಯನು ಬಾರೂಕನಿಗೆ, <<ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
\v 6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
\s5
\v 7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ>> ಎಂದು ಅಪ್ಪಣೆಕೊಟ್ಟನು.
\v 8 ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
\s5
\v 9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
\v 10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
\s5
\v 11 ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
\v 12 ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
\s5
\v 13 ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
\v 14 ಸಕಲ ಪ್ರಧಾನರು ಬಾರೂಕನಿಗೆ, <<ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ>> ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
\v 15 ಅವರು ಅವನಿಗೆ, <<ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು>> ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
\s5
\v 16 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, <<ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು>> ಎಂದು ಬಾರೂಕನಿಗೆ ಹೇಳಿದರು.
\v 17 ಮತ್ತು, <<ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು>> ಎಂದು ಅವನನ್ನು ಕೇಳಿದರು.
\v 18 ಬಾರೂಕನು ಅವರಿಗೆ, <<ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು>> ಎಂದು ಉತ್ತರಕೊಟ್ಟನು.
\v 19 ಆಗ ಪ್ರಧಾನರು ಬಾರೂಕನಿಗೆ, <<ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು>> ಎಂದು ಹೇಳಿದನು.
\s ಯೆಹೋಯಾಕೀಮನು ಪ್ರವಾದನೆಯ ಸುರುಳಿಯನ್ನು ಸುಟ್ಟದ್ದು
\s5
\p
\v 20 ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
\v 21 ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
\v 22 ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
\s5
\v 23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
\v 24 ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
\s5
\v 25 ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, <<ದಯಮಾಡಿ ಸುರುಳಿಯನ್ನು ಸುಡಬಾರದು>> ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
\v 26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
\s ಯೆರೆಮೀಯನ ಎರಡನೆಯ ಸುರುಳಿ
\s5
\p
\v 27 ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
\v 28 <<ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
\v 29 ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, <ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
\s5
\v 30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
\v 31 ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು> >> ಎಂದು ಹೇಳಿದನು.
\s5
\v 32 ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.
\s5
\c 37
\s ಚಿದ್ಕೀಯನು ಯೆರೆಮೀಯನಿಗೆ ಮಾಡಿದ ಮನವಿ
\p
\v 1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
\v 2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
\s5
\p
\v 3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, <<ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು>> ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
\v 4 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.
\v 5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
\s5
\v 6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.
\v 7 <<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, <ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
\v 8 ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು> >> ಎಂಬುದು.
\s5
\p
\v 9 ಯೆಹೋವನು ಇಂತೆನ್ನುತ್ತಾನೆ, <<ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
\v 10 ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.>>
\s ಪ್ರಧಾನರು ಯೆರೆಮೀಯನನ್ನು ಸೆರೆಗೆ ಹಾಕಿಸಿದ್ದು
\s5
\p
\v 11 ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
\v 12 ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
\v 13 ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, <<ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ>> ಎಂದು ಹೇಳಿದನು.
\s5
\v 14 ಅದಕ್ಕೆ ಯೆರೆಮೀಯನು, <<ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ>> ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
\v 15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
\s5
\v 16 ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
\v 17 ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, <<ಯೆಹೋವನಿಂದ ದೈವೋಕ್ತಿಯು ದೊರೆಯಿತೋ?>> ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, <<ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ>> ಅಂದನು.
\s5
\v 18 ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, <<ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
\v 19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
\v 20 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ>> ಎಂದು ಅರಿಕೆಮಾಡಿದನು.
\s5
\v 21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
\s5
\c 38
\s ಎಬೆದ್ಮೆಲೆಕನು ಯೆರೆಮೀಯನನ್ನು ಬಾವಿಯಿಂದ ರಕ್ಷಿಸಿದ್ದು
\p
\v 1 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
\v 2 ಯೆರೆಮೀಯನು ಸಮಸ್ತ ಜನರಿಗೆ, <<ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
\v 3 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ>> ಎಂದು ಸಾರುತ್ತಿದ್ದನು.
\s5
\v 4 ಆ ಮೇಲೆ ಆ ಪ್ರಧಾನರು ಅರಸನಿಗೆ, <<ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ>> ಎಂದು ಹೇಳಿದರು.
\v 5 ಅದಕ್ಕೆ ಅರಸನಾದ ಚಿದ್ಕೀಯನು, <<ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ>> ಎಂದು ಹೇಳಿದನು.
\s5
\v 6 ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
\s5
\v 7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
\v 8 ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,
\v 9 <<ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ>> ಎಂದು ಅರಿಕೆಮಾಡಿದನು.
\s5
\v 10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, <<ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು>> ಎಂದು ಅಪ್ಪಣೆಕೊಟ್ಟನು.
\v 11 ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
\s5
\v 12 <<ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ>> ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
\v 13 ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.
\s ಕಸ್ದೀಯರನ್ನು ಮೊರೆಹೋಗುವಂತೆ ಯೆರೆಮೀಯನು ಚಿದ್ಕೀಯನನ್ನು ಪ್ರೇರೇಪಿಸಿದ್ದು
\s5
\p
\v 14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, <<ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ>>
\v 15 ಎನ್ನಲು ಯೆರೆಮೀಯನು ಚಿದ್ಕೀಯನಿಗೆ, <<ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ>> ಎಂದು ಉತ್ತರಕೊಟ್ಟನು.
\v 16 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ>> ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
\s5
\v 17 ಆಗ ಯೆರೆಮೀಯನು ಚಿದ್ಕೀಯನಿಗೆ, <<ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
\v 18 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ>> ಎಂದು ಹೇಳಿದನು.
\s5
\v 19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ>> ಎಂದು ಉತ್ತರಕೊಟ್ಟನು.
\s5
\v 20 ಅದಕ್ಕೆ ಯೆರೆಮೀಯನು, <<ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
\v 21 ಆದರೆ ನೀನು, <ಶತ್ರುವಿನ ಮೊರೆಹೋಗೆನು> ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
\s5
\v 22 ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
\v 23 ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು>> ಎಂದು ಹೇಳಿದನು.
\s5
\v 24 ಆಗ ಚಿದ್ಕೀಯನು ಯೆರೆಮೀಯನಿಗೆ, <<ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.
\v 25 ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, <ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು> ಎಂದು ಪ್ರಶ್ನೆಮಾಡಬಹುದು.
\v 26 ಆಗ ನೀನು ಅವರಿಗೆ, <ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು> ಎಂಬುದಾಗಿ ಹೇಳು>> ಎಂದು ಅಪ್ಪಣೆಕೊಟ್ಟೆನು.
\s5
\v 27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
\v 28 ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
\s5
\c 39
\s ಯೆರೂಸಲೇಮಿನ ಪತನ
\p
\v 1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
\v 2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
\v 3 ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
\s5
\v 4 ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ
\f +
\fr 39:4
\fq ಅರಾಬಾ
\ft ಯೊರ್ದನ್ ಕಣಿವೆ.
\f* ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
\v 5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
\s5
\v 6 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
\v 7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
\s5
\v 8 ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
\v 9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬೆಲೋನಿಗೆ ಸೆರೆಯೊಯ್ದನು.
\v 10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
\s ಕಸ್ದೀಯರ ಮುಖ್ಯಾಧಿಕಾರಿಗಳು ಯೆರೆಮೀಯನನ್ನು ಕಾಪಾಡಿದ್ದು
\s5
\p
\v 11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
\v 12 <<ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು>> ಎಂದು ಅಪ್ಪಣೆಕೊಟ್ಟನು.
\v 13 ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
\v 14 ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
\s ಎಬೆದ್ಮೆಲೆಕನಿಗೆ ಆದ ವಾಗ್ದಾನ
\s5
\p
\v 15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
\v 16 <<ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, <ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
\s5
\v 17 ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
\v 18 ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ> >> ಎಂಬುದೇ.
\s5
\c 40
\s ಯೆರೆಮೀಯನ ಬಿಡುಗಡೆ
\p
\v 1 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
\v 2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, <<ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
\s5
\v 3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
\v 4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು>> ಎಂದು ಹೇಳಿದನು.
\s5
\v 5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, <<ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು>> ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
\v 6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
\s ಯೆಹೂದದ ದೇಶಾಧಿಪತಿಯಾದ ಗೆದಲ್ಯ
\s5
\p
\v 7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬೆಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
\v 8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
\s5
\v 9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, <<ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
\v 10 ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ>> ಎಂದು ಖಂಡಿತವಾಗಿ ಹೇಳಿದನು.
\s5
\v 11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
\v 12 ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
\s ಗೆದಲ್ಯನ ಮರಣ
\s5
\p
\v 13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
\v 14 ಅವರು, <<ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?>> ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
\s5
\v 15 ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, <<ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?>> ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
\v 16 ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, <<ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು>> ಎಂದು ಉತ್ತರಕೊಟ್ಟನು.
\s5
\c 41
\p
\v 1 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
\v 2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
\v 3 ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.
\s5
\v 4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,
\v 5 ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
\s5
\v 6 ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, <<ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ>> ಎಂದು ಹೇಳಿದನು.
\v 7 ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
\s5
\v 8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, <<ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ>> ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.
\v 9 ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.
\s5
\v 10 ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.
\s5
\p
\v 11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,
\v 12 ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
\s5
\v 13 ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
\v 14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
\s5
\v 15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.
\s ಜನರು ಐಗುಪ್ತಕ್ಕೆ ವಲಸೆಹೋದದ್ದು
\p
\v 16 ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.
\s5
\v 17 ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
\v 18 ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.
\s5
\c 42
\ms ಜನರ ಬಿನ್ನಹ, ಯೆರೆಮೀಯನ ಉತ್ತರ
\p
\v 1 ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
\v 2 ಅವರು ಅವನಿಗೆ, <<ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
\v 3 ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು>> ಎಂದು ವಿಜ್ಞಾಪಿಸಿದರು.
\s5
\v 4 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, <<ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು>> ಎಂದು ಉತ್ತರಕೊಟ್ಟನು.
\v 5 ಅವರು ಯೆರೆಮೀಯನಿಗೆ, <<ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
\v 6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು>> ಎಂಬುದಾಗಿ ಹೇಳಿದರು.
\s5
\p
\v 7 ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.
\v 8 ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,
\v 9 <<ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
\v 10 <ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
\s5
\v 11 ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.
\v 12 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು> ಎಂದೆನು.
\s5
\v 13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ <ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;
\v 14 ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು> ಎಂದುಕೊಂಡರೆ,
\s5
\v 15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, <ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,
\v 16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
\v 17 ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
\s5
\v 18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.> >>
\s ಯೆರೆಮೀಯನು ಜನರನ್ನು ಎಚ್ಚರಿಸಿದ್ದು
\p
\v 19 <<ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, <ಐಗುಪ್ತಕ್ಕೆ ಹೋಗಬೇಡಿರಿ> ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
\s5
\v 20 ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, <ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು> ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
\v 21 ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
\v 22 ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ>> ಎಂದು ಹೇಳಿದನು.
\s5
\c 43
\s ಯೆರೆಮೀಯನ ಮಾತಿಗೆ ಅವಿಧೇಯರಾದ ಜನರು
\p
\v 1 ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.
\v 2 ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, <<ನಿನ್ನ ಮಾತು ಸುಳ್ಳು, <ಐಗುಪ್ತಕ್ಕೆ ಹೋಗಿ ವಾಸಮಾಡಬಾರದು> ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.
\v 3 ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬೆಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ>> ಎಂದು ಹೇಳಿದರು.
\s5
\v 4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.
\v 5 ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
\v 6 ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
\v 7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
\s ನೆಬೂಕದ್ನೆಚ್ಚರನು ಐಗುಪ್ತವನ್ನು ಸ್ವಾಧೀನಮಾಡಿಕೊಳ್ಳುವನು ಎಂದು ಯೆರೆಮೀಯನು ಮುಂತಿಳಿಸಿದ್ದು
\s5
\p
\v 8 ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.
\v 9 ಆತನು, <<ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
\v 10 <ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.
\s5
\v 11 ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.
\v 12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ
\f +
\fr 43:12
\fq ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ
\ft ಕುರುಬನು ತನ್ನ ವಸ್ತ್ರವನ್ನು ಸ್ವಚ್ಛಗೊಳಿಸುವಂತೆ.
\f* ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
\v 13 ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.> >>
\s5
\c 44
\s ವಿಗ್ರಹಾರಾಧನೆ ನಿಮಿತ್ತ ವಿನಾಶ
\p
\v 1 ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
\v 2 <<ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
\v 3 ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
\s5
\v 4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, <ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ> ಎಂದು ಪ್ರಕಟಿಸುತ್ತಾ ಬಂದರೂ,
\v 5 ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
\v 6 ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
\s5
\v 7 ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
\v 8 ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.
\s5
\v 9 ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
\v 10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
\s5
\p
\v 11 <<ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
\v 12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
\s5
\v 13 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.
\v 14 ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
\s5
\p
\v 15 <<ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ>> ಹೀಗೆ ಹೇಳಿದರು,
\v 16 <<ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.
\v 17 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
\s5
\v 18 ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
\v 19 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?>> ಎಂದರು.
\s5
\v 20 ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,
\v 21 <<ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
\s5
\v 22 ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
\v 23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ>> ಎಂದನು.
\s5
\p
\v 24 ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, <<ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.
\v 25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
\s5
\v 26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, <ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
\v 27 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
\v 28 ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
\s5
\v 29 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
\v 30 ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ> >> ಎಂಬುದೇ.
\s5
\c 45
\s ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು
\p
\v 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
\v 2 <<ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, <ನನ್ನ ಗತಿಯನ್ನು ಏನು ಹೇಳಲಿ?
\v 3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು> ಎಂದು ನೀನು ಹೇಳಿದೆಯಲ್ಲಾ,
\s5
\v 4 ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
\v 5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.>>
\s5
\c 46
\s ಐಗುಪ್ತದ ವಿಷಯವಾದ ದೈವೋಕ್ತಿ
\p
\v 1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
\v 2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
\q
\v 3 <<ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!
\q
\v 4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
\s5
\q
\v 5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ.
\q ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
\q
\v 6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು.
\q ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.
\s5
\q
\v 7 ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು?
\q ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?
\q
\v 8 ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ;
\q <ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು> ಅಂದುಕೊಳ್ಳುತ್ತದೆ.
\q
\v 9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ!
\q ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!
\s5
\q
\v 10 ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ;
\q ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು.
\q ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.
\s5
\q
\v 11 ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು;
\q ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
\q
\v 12 ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ;
\q ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.
\s5
\q
\v 13 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು>> ಎಂಬುದಾಗಿ
\q ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
\q
\v 14 <<ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ,
\q <ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ> ಎಂದು ಸಾರಿರಿ.
\s5
\q
\v 15 ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.
\q
\v 16 ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು;
\q <ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ> ಎಂದುಕೊಂಡರು.
\q
\v 17 ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು>> ಎಂದು ಅಲ್ಲಿ ಕೂಗಿದರು.
\s5
\q
\v 18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ,
\q <<ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ,
\q ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
\q
\v 19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
\s5
\v 20 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.
\v 21 ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
\v 22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
\s5
\v 23 ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
\v 24 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು>> ಎಂಬುದೇ.
\s5
\v 25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
\v 26 ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
\s5
\v 27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
\v 28 ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.>>
\s5
\c 47
\s ಫಿಲಿಷ್ಟಿಯದ ವಿಷಯವಾದ ದೈವೋಕ್ತಿ
\p
\v 1 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
\p
\v 2 ಯೆಹೋವನು ಇಂತೆನ್ನುತ್ತಾನೆ,
\q <<ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ,
\q ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು.
\q ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
\s5
\q
\v 3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ,
\q ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
\q
\v 4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು;
\q ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
\s5
\p
\v 5 <<ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
\v 6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
\v 7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.>>
\s5
\c 48
\s ಮೋವಾಬಿನ ವಿಷಯವಾದ ದೈವೋಕ್ತಿ
\p
\v 1 ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
\q <<ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ,
\q ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
\q
\v 2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ,
\q <ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ> ಎಂದು ಆಲೋಚಿಸಿಕೊಂಡಿದ್ದಾರೆ.
\q ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
\s5
\q
\v 3 <ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು> ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!
\q
\v 4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.
\q
\v 5 ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
\s5
\q
\v 6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.
\q
\v 7 ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ;
\q ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
\s5
\q
\v 8 ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು;
\q ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
\q
\v 9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
\q
\v 10 ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ;
\q ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
\s5
\q
\v 11 ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ;
\q ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.>>
\q
\v 12 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, <<ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು,
\q ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು>> ಎಂಬುದೇ.
\s5
\p
\v 13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.
\q
\v 14 << <ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು> ಎಂದು ನೀವು ಅಂದುಕೊಳ್ಳುವುದು ಹೇಗೆ?
\s5
\q
\v 15 ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ.
\q ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
\q
\v 16 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.
\q
\v 17 ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ.
\q <ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ> ಎಂದು ಪ್ರಲಾಪಿಸಿರಿ.
\s5
\q
\v 18 ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ!
\q ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
\q
\v 19 ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ;
\q ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ <ಏನಾಯಿತು?> ಎಂದು ವಿಚಾರಿಸಿರಿ.
\q
\v 20 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ;
\q ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
\s5
\q
\v 21 ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,
\q
\v 22 ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
\q
\v 23 ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,
\q
\v 24 ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.
\q
\v 25 ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ>> ಎಂಬುದೇ.
\s5
\p
\v 26 <<ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
\v 27 ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
\s5
\q
\v 28 ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
\q
\v 29 ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.>>
\s5
\p
\v 30 ಯೆಹೋವನು ಹೇಳುವುದೇನೆಂದರೆ, <<ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.
\q
\v 31 ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು;
\q ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
\q
\v 32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು;
\q ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ;
\q ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
\s5
\q
\v 33 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ;
\q ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
\s5
\q
\v 34 ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ,
\q ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
\q
\v 35 ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.>>
\s5
\q
\v 36 ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ;
\q ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
\q
\v 37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
\s5
\q
\v 38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ;
\q <<ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ>> ಎಂದು ಯೆಹೋವನು ಅನ್ನುತ್ತಾನೆ.
\q
\v 39 ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
\s5
\p
\v 40 ಯೆಹೋವನು ಇಂತೆನ್ನುತ್ತಾನೆ, <<ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.
\q
\v 41 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
\s5
\q
\v 42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.>>
\q
\v 43 ಯೆಹೋವನು ಇಂತೆನ್ನುತ್ತಾನೆ, <<ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
\q
\v 44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು;
\q ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.>>
\s5
\q
\v 45 ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ;
\q ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
\s5
\q
\v 46 <<ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ
\f +
\fr 48:46
\fq ಕೆಮೋಷಿನ
\ft ಕೆಮೋಷ್ ಮೋವಾಬ್ಯರ ದೇವರು, ಮತ್ತು ಮೋವಾಬ್ಯ ಜನರನ್ನು ಸಾಮಾನ್ಯವಾಗಿ ಕೆಮೋಷಿನ ಜನರು ಎಂದು ಕರೆಯಲಾಗುತ್ತಿತ್ತು.
\f* ಭಕ್ತರು ನಾಶವಾದರು;
\q ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
\q
\v 47 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ>>.
\q ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
\s5
\c 49
\s ಅಮ್ಮೋನಿನ ವಿಷಯವಾದ ದೈವೋಕ್ತಿ
\q
\v 1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ,
\q <<ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ?
\q ಮಲ್ಕಾಮ್
\f +
\fr 49:1
\fq ಮಲ್ಕಾಮ್
\ft ಮಲ್ಕಾಮ್ ಅನ್ನು ಆರಾಧಿಸುವವರು ಅಥವಾ ಅವರ ಅರಸನು.
\f* ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ?
\q ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
\q
\v 2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು,
\q ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು;
\q ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು;
\q ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.>>
\s5
\q
\v 3 <<ಹೆಷ್ಬೋನಿನವರೇ, ಗೋಳಾಡಿರಿ; <ಆಯಿ> ಎಂಬ ಊರು ಹಾಳಾಯಿತು,
\q ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ;
\q ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
\q
\v 4 <ನನ್ನ ಮೇಲೆ ಯಾರು ತಾನೆ ಬಿದ್ದಾರು?> ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ,
\q <ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು> ಏಕೆ ಕೊಚ್ಚಿಕೊಳ್ಳುತ್ತೀ?
\s5
\q
\v 5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ,
\q ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು,
\q ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
\q
\v 6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.>>
\s ಎದೋಮಿನ ವಿಷಯವಾದ ದೈವೋಕ್ತಿ
\s5
\q
\v 7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
\q <<ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ?
\q ಅವರ ಜ್ಞಾನವು ಮಾಯವಾಯಿತೋ?
\q
\v 8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ;
\q ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
\s5
\q
\v 9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ;
\q ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
\q
\v 10 ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು;
\q ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
\q
\v 11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
\s5
\q
\v 12 ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ,
\q ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
\q
\v 13 ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ.
\q ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.>>
\s5
\q
\v 14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,
\q <<ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
\q
\v 15 ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
\s5
\q
\v 16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ,
\q ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;
\q ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ,
\q ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.>>
\s5
\q
\v 17 ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು;
\q ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
\q
\v 18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ
\q ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
\s5
\q
\v 19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ
\q ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು;
\q ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು;
\q ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು?
\q ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
\s5
\q
\v 20 ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
\q ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು;
\q ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
\s5
\q
\v 21 ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
\q
\v 22 ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು;
\q ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
\s ದಮಸ್ಕದ ವಿಷಯವಾದ ದೈವೋಕ್ತಿ
\s5
\q
\v 23 ದಮಸ್ಕವನ್ನು ಕುರಿತದ್ದು,
\p <<ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
\q
\v 24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
\q
\v 25 ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
\s5
\q
\v 26 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
\q
\v 27 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು,
\q ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು>> ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
\s ಕೇದಾರಿನ ವಿಷಯವಾದ ದೈವೋಕ್ತಿ
\s5
\q
\v 28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು.
\p <<ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ>> ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
\q
\v 29 <<ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು.
\q ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, <ಸುತ್ತಮುತ್ತಲು ದಿಗಿಲು> ಎಂಬುದಾಗಿ ಅವರ ಕಡೆಗೆ ಕೂಗುವರು.>>
\s5
\q
\v 30 ಯೆಹೋವನು ಇಂತೆನ್ನುತ್ತಾನೆ, <<ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ,
\q ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು
\q ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
\q
\v 31 ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
\s5
\q
\v 32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು;
\q ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
\q
\v 33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು;
\q ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.>>
\s ಏಲಾಮಿನ ವಿಷಯವಾದ ದೈವೋಕ್ತಿ
\s5
\q
\v 34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
\q
\v 35 <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
\q
\v 36 ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ,
\q ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
\s5
\q
\v 37 ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು;
\q ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
\q
\v 38 ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
\q
\v 39 ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.>>
\s5
\c 50
\s ಬಾಬೆಲಿನ ವಿಷಯವಾದ ದೈವೋಕ್ತಿ
\p
\v 1 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
\q
\v 2 <<ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ,
\q <ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ,
\q ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
\s5
\q
\v 3 ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು,
\q ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
\q
\v 4 ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ
\q ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
\q
\v 5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ,
\q ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ> ಎಂದು ಹೇಳುವರು.
\s5
\q
\v 6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ;
\q ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
\q
\v 7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, <ನಾವು ಅವರನ್ನು ನುಂಗಿದ್ದು ದೋಷವಲ್ಲ,
\q ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ> ಅಂದುಕೊಂಡರು.
\s5
\q
\v 8 ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
\q
\v 9 ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು;
\q ಅವು ಬಾಬೆಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು;
\q ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
\q
\v 10 ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ>> ಎಂಬುದೇ.
\s ಬಾಬೆಲಿನ ಪತನ
\s5
\q
\v 11 <<ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ,
\q ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
\q
\v 12 ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು;
\q ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
\q
\v 13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು;
\q ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
\s5
\q
\v 14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲೋನಿಗೆ ಮುತ್ತಿಗೆ ಹಾಕಿರಿ,
\q ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
\q
\v 15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು.
\q ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
\s5
\q
\v 16 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ;
\q ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
\s ಇಸ್ರಾಯೇಲರು ಹಿಂದಿರುಗುವರು
\s5
\q
\v 17 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ;
\q ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು,
\q ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
\q
\v 18 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
\q ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
\s5
\q
\v 19 ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು;
\q ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
\q
\v 20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ;
\q ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ;
\q ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.>>
\s ಬಾಬೆಲೋನಿಗೆ ದೇವರ ದಂಡನೆ
\s5
\q
\v 21 ಯೆಹೋವನು ಇಂತೆನ್ನುತ್ತಾನೆ, <<ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ,
\q ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
\q
\v 22 ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.
\s5
\q
\v 23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು!
\q ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
\q
\v 24 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ;
\q ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
\s5
\q
\v 25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು;
\q ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
\q
\v 26 ಲೋಕದ ಕಟ್ಟಕಡೆಯಿಂದ ಬಾಬೆಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ;
\q ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
\s5
\q
\v 27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ!
\q ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
\q
\v 28 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ!
\q ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು
\q ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
\s5
\q
\v 29 ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬೆಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ;
\q ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ;
\q ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
\q
\v 30 ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು,
\q ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ>> ಎಂಬುದೇ.
\s5
\q
\v 31 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, <<ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ;
\q ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
\q
\v 32 ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು;
\q ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.>>
\s5
\q
\v 33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
\q <<ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ;
\q ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
\q
\v 34 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ;
\q ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.>>
\s5
\q
\v 35 ಯೆಹೋವನು ಇಂತೆನ್ನುತ್ತಾನೆ, <<ಖಡ್ಗವು ಕಸ್ದೀಯರ ಮೇಲೆ ಬೀಳಲಿ!
\q ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
\q
\v 36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು.
\q ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
\q
\v 37 ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ!
\q ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
\s5
\q
\v 38 ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು.
\q ಅದು ಬೊಂಬೆಗಳಿಂದ ತುಂಬಿದ ದೇಶ,
\q ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
\q
\v 39 ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು;
\q ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
\q
\v 40 ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ,
\q ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
\s5
\q
\v 41 ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
\q
\v 42 ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು;
\q ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ;
\q ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ>> ಎಂದು ಯೆಹೋವನು ಅನ್ನುತ್ತಾನೆ.
\q
\v 43 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು,
\q ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
\s5
\q
\v 44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು;
\q ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು;
\q ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು?
\q ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
\s5
\q
\v 45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
\q ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ,
\q ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು;
\q ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
\q
\v 46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ,
\q ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.
\s5
\c 51
\q
\v 1 ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ
\f +
\fr 51:1
\fq ಲೇಬ್ ಕಾಮೈ
\ft ಕಸ್ಧೀಯರ ಅಥವಾ ಕಲ್ದೀಯರ ದೇಶದ ರಹಸ್ಯವಾದ ಹೆಸರು.
\f* ದೇಶದವರ ಮೇಲೂ ನಾಶನದ ಗಾಳಿಯನ್ನು
\f +
\fr 51:1
\fq ನಾಶನದ ಗಾಳಿಯನ್ನು
\ft ನಾಶನದ ಆತ್ಮವನ್ನು.
\f* ಬೀಸಮಾಡುವೆನು.
\q
\v 2 ಅನ್ಯಜನರನ್ನು ಬಾಬೆಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು.
\q ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
\s5
\q
\v 3 ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ.
\q ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
\q
\v 4 ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.
\s5
\q
\v 5 ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ,
\q ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
\q
\v 6 ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ.
\q ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲೋನಿಗೆ ಪ್ರತಿಕಾರ ಮಾಡುವನು.
\s5
\q
\v 7 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು;
\q ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
\q
\v 8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ;
\q ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
\s5
\q
\v 9 ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ;
\q ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ;
\q ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
\q
\v 10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ;
\q ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
\s5
\q
\v 11 ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ,
\q ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ.
\q ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ;
\q ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ
\f +
\fr 51:11
\fq ಗುರಾಣಿಗಳನ್ನು ಸನ್ನದ್ಧ ಮಾಡಿರಿ
\ft ಗುರಾಣಿಗಳನ್ನು ತೆಗೆದುಕೊಳ್ಳಿರಿ
\f* !
\q
\v 12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ,
\q ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ;
\q ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
\s5
\q
\v 13 ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ,
\q ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
\q
\v 14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು,
\q <ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
\s ಯೆಹೋವನಿಗೆ ಸ್ತುತಿಗೀತೆ
\s5
\q
\v 15 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ
\q ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
\q
\v 16 ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ;
\q ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;
\q ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
\s5
\q
\v 17 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ;
\q ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು;
\q ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
\q
\v 18 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ;
\q ದಂಡನೆಯಾಗುವಾಗ ಅಳಿದುಹೋಗುವವು.
\q
\v 19 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು;
\q ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
\s5
\q
\v 20 ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು,
\q ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
\q
\v 21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ;
\q ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
\s5
\q
\v 22 ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ;
\q ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
\q
\v 23 ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ;
\q ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು;
\q ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
\s5
\q
\v 24 ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ,
\q ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬೆಲೋನಿಗೆ ಮುಯ್ಯಿತೀರಿಸುವೆನು> >> ಎಂದು ಯೆಹೋವನು ಅನ್ನುತ್ತಾನೆ.
\s5
\q
\v 25 ಯೆಹೋವನು ಇಂತೆನ್ನುತ್ತಾನೆ, <<ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ;
\q ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
\q
\v 26 ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು,
\q ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ>> ಎಂಬುದೇ.
\s5
\q
\v 27 <<ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ,
\q ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ,
\q ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
\q
\v 28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು,
\q ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
\s5
\q
\v 29 ದೇಶವೆಲ್ಲಾ ನೊಂದು ನಡುಗುತ್ತದೆ;
\q ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
\s5
\q
\v 30 ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ;
\q ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
\q
\v 31 ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ,
\q ಅರಸನ ಬಳಿ ಬಂದು, <ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
\q
\v 32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ> ಎಂದು ತಿಳಿಸುವರು.>>
\s5
\q
\v 33 ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
\q <<ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ;
\q ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
\s5
\q
\v 34 ಯೆಹೂದವು ಹೀಗೆ ಪ್ರಲಾಪಿಸುತ್ತದೆ, <ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ,
\q ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ,
\q ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
\q
\v 35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲೋನಿಗೆ ತಟ್ಟಲಿ> ಎಂದು ಚೀಯೋನಿನವರು ಅನ್ನುತ್ತಾರೆ;
\q <ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ> ಎಂದು ಯೆರೂಸಲೇಮಿನವರು ಹೇಳುತ್ತಾರೆ.>>
\s ಬಾಬೆಲೋನಿಗೆ ಪ್ರತಿಕಾರ
\s5
\q
\v 36 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು;
\q ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
\q
\v 37 ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು;
\q ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
\s5
\q
\v 38 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
\q
\v 39 ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು,
\q ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ
\q ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ>> ಎಂಬುದೇ.
\q
\v 40 <<ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.
\s5
\q
\v 41 ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
\q
\v 42 ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
\s5
\q
\v 43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ.
\q ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
\q
\v 44 ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ,
\q ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು;
\q ಪ್ರವಾಹಪ್ರವಾಹವಾಗಿ ಬಾಬೆಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ;
\q ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
\s ಸೆರೆವಾಸಿಗಳಿಗೆ ಸಂದೇಶ
\s5
\q
\v 45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
\q
\v 46 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ;
\q ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು;
\q ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
\s5
\q
\v 47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ.
\q ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
\q
\v 48 ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು;
\q ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.>>
\q
\v 49 <<ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ,
\q ಹಾಗೆಯೇ ಬಾಬೆಲೂ ಹತವಾಗುವುದು.
\s5
\q
\v 50 ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ;
\q ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
\q
\v 51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು,
\q <ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ
\q ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ> ಎಂಬುದಾಗಿ ಅಂದುಕೊಳ್ಳುತ್ತಿರೋ?
\s5
\q
\v 52 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, <ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ;
\q ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
\q
\v 53 ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ,
\q ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.> ಇದು ಯೆಹೋವನ ನುಡಿ.>>
\s ಬಾಬೆಲಿನ ಸಂಪೂರ್ಣ ವಿನಾಶ
\s5
\q
\v 54 <<ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
\q
\v 55 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;
\q ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
\q
\v 56 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ,
\q ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು,
\q ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
\s5
\q
\v 57 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು,
\q ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು;
\q ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು
\q ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.>>
\q
\v 58 ಸೇನಾಧೀಶ್ವರನಾದ ಯೆಹೋವನು,
\q <<ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು.
\q ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ,
\q ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು>> ಎಂದು ನುಡಿಯುತ್ತಾನೆ.
\s ಯೆರೆಮೀಯನ ಸಂದೇಶವನ್ನು ಬಾಬೆಲೋನಿಗೆ ಕಳುಹಿಸಿದ್ದು
\s5
\q
\v 59 ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ
\q ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬೆಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
\p
\v 60 ಯೆರೆಮೀಯನು ಬಾಬೆಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
\s5
\v 61 ಅವನು ಸೆರಾಯನಿಗೆ ಹೀಗೆ ಹೇಳಿದನು, <<ನೋಡು, ನೀನು ಬಾಬೆಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
\v 62 <ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ> ಎಂಬುದಾಗಿ ಅರಿಕೆಮಾಡಬೇಕು.
\s5
\v 63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
\v 64 ಯೆಹೋವನು ಬಾಬೆಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು>> ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
\s5
\c 52
\s ಯೆರೂಸಲೇಮಿನ ಪತನ
\p
\v 1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು
\f +
\fr 52:1
\fq ಯೆರೆಮೀಯನ ಮಗಳು
\ft ಈ ಯೆರೆಮೀಯನು ಈ ಪುಸ್ತಕದ ಗ್ರಂಥಕರ್ತನಲ್ಲ ಆದರೆ ಬೇರೊಬ್ಬ ಯೆರೆಮೀಯನಾಗಿದ್ದಾನೆ.
\f* ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
\v 2 ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
\v 3 ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
\s5
\p
\v 4 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
\v 5 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
\s5
\v 6 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
\v 7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
\v 8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
\s5
\p
\v 9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
\v 10 ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
\v 11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬೆಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
\s5
\p
\v 12 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
\v 13 ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
\v 14 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
\s5
\v 15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
\v 16 ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
\s5
\v 17 ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
\v 18 ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲೋನಿಗೆ ತೆಗೆದುಕೊಂಡು ಹೋದರು.
\v 19 ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
\s5
\p
\v 20 ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
\v 21 ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
\s5
\v 22 ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
\v 23 ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
\s5
\v 24 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
\v 25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
\s5
\v 26 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
\v 27 ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
\s5
\v 28 ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
\v 29 ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
\v 30 ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
\s ಯೆಹೋಯಾಖೀನನ ಬಿಡುಗಡೆ
\s5
\p
\v 31 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
\s5
\v 32 ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
\v 33 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
\v 34 ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.