2893 lines
361 KiB
Plaintext
2893 lines
361 KiB
Plaintext
\id MAT
|
|
\ide UTF-8
|
|
\sts - Free Bible Kannada
|
|
\h ಮತ್ತಾಯನು ಬರೆದ ಸುವಾರ್ತೆ
|
|
\toc1 ಮತ್ತಾಯನು ಬರೆದ ಸುವಾರ್ತೆ
|
|
\toc2 ಮತ್ತಾಯನು ಬರೆದ ಸುವಾರ್ತೆ
|
|
\toc3 mat
|
|
\mt1 ಮತ್ತಾಯನು ಬರೆದ ಸುವಾರ್ತೆ
|
|
|
|
|
|
\s5
|
|
\c 1
|
|
\s1 ಯೇಸು ಕ್ರಿಸ್ತನ ವಂಶಾವಳಿ
|
|
\p
|
|
\v 1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
|
|
\p
|
|
\v 2 ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹಹೂದನ ಮಕ್ಕಳು.
|
|
\v 3 ಯೆಹೂದನಿಗೆ ತಾಮಾರಳಲ್ಲಿ ಪೆರೆಚನನು, ಜೆರಹನನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.
|
|
\s5
|
|
\v 4 ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನು. ನಹಶೋನ ಮಗನು ಸಲ್ಮೋನನು.
|
|
\v 5
|
|
\f +
|
|
\fr 1:5
|
|
\ft ಲೂಕ 3:28-38
|
|
\f* ಸಲ್ಮೋನನ ಮಗನು ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು
|
|
\f +
|
|
\fr 1:5
|
|
\ft ರೂತ. 4:21-22
|
|
\f* ಓಬೇದನು ರೂತಳಲ್ಲಿ
|
|
\f +
|
|
\fr 1:5
|
|
\ft ರೂತ. 4:21-22
|
|
\f* ಹುಟ್ಟಿದವನು. ಓಬೇದನ ಮಗನು ಇಷಯನು.
|
|
\v 6 ಇಷಯನ ಮಗನು ಅರಸನಾದ ದಾವೀದನು.
|
|
\f +
|
|
\fr 1:6
|
|
\ft 2 ಸಮು. 12:24
|
|
\f* ದಾವೀದನ ಮಗನು ಸೊಲೊಮೋನನು, ಊರೀಯನ ಹೆಂಡತಿಯಿಂದ ಹುಟ್ಟಿದವನು.
|
|
\s5
|
|
\v 7 ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನನು. ಅಬೀಯನ ಮಗನು ಆಸನು.
|
|
\v 8 ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.
|
|
\s5
|
|
\v 9 ಉಜ್ಜೀಯನ ಮಗನು ಯೋತಾಮನನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.
|
|
\v 10 ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.
|
|
\v 11 ಆಮೋನ ಮಗನು ಯೋಷಿಯನು.
|
|
\f +
|
|
\fr 1:11
|
|
\ft 2 ಅರಸು. 24:14, 15; 25-11
|
|
\f* ಬಾಬೆಲೋನಿಗೆ ಸೆರೆಹೋದ ಸಮಯದಲ್ಲಿ ಯೋಷಿಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
|
|
\s5
|
|
\v 12 ಬಾಬೆಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು
|
|
\v 13 ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮದನು. ಎಲ್ಯಕೀಮನ ಮಗನು ಅಜೋರನು.
|
|
\v 14 ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.
|
|
\s5
|
|
\v 15 ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.
|
|
\v 16 ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
|
|
\p
|
|
\v 17 ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
|
|
\s1 ಯೇಸು ಕ್ರಿಸ್ತನ ಜನನವು
|
|
\s5
|
|
\p
|
|
\v 18 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ,
|
|
\f +
|
|
\fr 1:18
|
|
\ft ಲೂಕ 1:27,35
|
|
\f* ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
|
|
\v 19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
|
|
\s5
|
|
\v 20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, <<ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
|
|
\v 21
|
|
\f +
|
|
\fr 1:21
|
|
\ft ಲೂಕ 1:31
|
|
\f* ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,>> ಅಂದನು.
|
|
\s5
|
|
\v 22 ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
|
|
\q1
|
|
\v 23
|
|
\f +
|
|
\fr 1:23
|
|
\ft ಯೆಶಾ. 7:14
|
|
\f* <<ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
|
|
\q1 ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
|
|
\q1 <ದೇವರು ನಮ್ಮ ಕೂಡ ಇದ್ದಾನೆಂದು> ಈ ಹೆಸರಿನ ಅರ್ಥ.>>
|
|
\s5
|
|
\p
|
|
\v 24 ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
|
|
\v 25 ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
|
|
|
|
\s5
|
|
\c 2
|
|
\s1 ಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದು
|
|
\p
|
|
\v 1 ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
|
|
\v 2
|
|
\f +
|
|
\fr 2:2
|
|
\ft ಅರಣ್ಯ 24:17; ಯೆಶಾ 60:3
|
|
\f* <<ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು>> ಎಂದರು.
|
|
\v 3 ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
|
|
\s5
|
|
\v 4 ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, <<ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ>> ಎಂದು ಅವರನ್ನು ಕೇಳಿದನು.
|
|
\v 5 ಅವರು ಅವನಿಗೆ, <<ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
|
|
\q1
|
|
\v 6
|
|
\f +
|
|
\fr 2:6
|
|
\ft ಮೀಕ 5:2; ಯೋಹಾ. 7:42
|
|
\f* << <ಯೆಹೂದ ಸೀಮೆಯ ಬೇತ್ಲೆಹೇಮೇ,
|
|
\q1 ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ.
|
|
\q1 ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು
|
|
\q1 ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.>
|
|
\q1 ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ>> ಎಂದು ಹೇಳಿದರು.
|
|
\s5
|
|
\p
|
|
\v 7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
|
|
\v 8 <<ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು>> ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
|
|
\s5
|
|
\p
|
|
\v 9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
|
|
\v 10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
|
|
\s5
|
|
\v 11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ
|
|
\f +
|
|
\fr 2:11
|
|
\ft ಕೀರ್ತ 72:10
|
|
\f* ಅದಕ್ಕೆ ಚಿನ್ನ, ಪರಿಮಳದ್ರವ್ಯ
|
|
\f +
|
|
\fr 2:11
|
|
\ft ಧೂಪದ್ರವ್ಯ
|
|
\f* ಮತ್ತು ರಕ್ತಬೋಳಗಳನ್ನು
|
|
\f +
|
|
\fr 2:11
|
|
\ft ರಾಳ
|
|
\f* ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
|
|
\v 12 ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
|
|
\s1 ಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದು
|
|
\s5
|
|
\p
|
|
\v 13 ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, <<ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು>> ಎಂದನು.
|
|
\v 14 ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.
|
|
\v 15 ಹೀಗೆ,
|
|
\f +
|
|
\fr 2:15
|
|
\ft ಹೋಶೇ 11:1
|
|
\f* <<ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು>> ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
|
|
\s5
|
|
\p
|
|
\v 16 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರುಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
|
|
\s5
|
|
\v 17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನಂದರೆ,
|
|
\q1
|
|
\v 18
|
|
\f +
|
|
\fr 2:18
|
|
\ft ಯೆರೆ 31:15
|
|
\f* <<ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು>> ಎಂಬುದೇ.
|
|
\s5
|
|
\p
|
|
\v 19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
|
|
\v 20 <<ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು>> ಎಂದು ಹೇಳಿದನು.
|
|
\v 21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
|
|
\s5
|
|
\v 22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
|
|
\v 23 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, <<ಆತನು ನಜರೇತಿನವನೆಂದು ಕರೆಯಲ್ಪಡುವನು>> ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
|
|
|
|
\s5
|
|
\c 3
|
|
\s1 ಸ್ನಾನಿಕನಾದ ಯೋಹಾನನ ಉಪದೇಶ
|
|
\r (ಮಾರ್ಕ 1:2-8; ಲೂಕ 3:1-18; ಯೋಹಾ. 1:6-8,19-34)
|
|
\p
|
|
\v 1 ಆ ದಿನಗಳಲ್ಲಿ
|
|
\f +
|
|
\fr 3:1
|
|
\ft ಯೇಸುವಿನ ಜನನದ ಹಲವು ವರುಷಗಳ ನಂತರ, ಸ್ನಾನಿಕನಾದ ಯೋಹಾನನು ಬೆಳೆದು ಯೌವನಸ್ಥನಾಗಿ ದೇವರ ಹಾಗೂ ಕ್ರಿಸ್ತನ ವಿಷಯವಾಗಿ ಸಾರಿದನು.
|
|
\f* ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,
|
|
\v 2 ಹೇಳಿದ್ದೇನೆಂದರೆ, <<ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.>>
|
|
\q1
|
|
\v 3
|
|
\f +
|
|
\fr 3:3
|
|
\ft ಯೆಶಾ. 40. 3
|
|
\f* << <ಕರ್ತನ ದಾರಿಯನ್ನು ಸಿದ್ಧಮಾಡಿರಿ;
|
|
\q1 ಆತನ ಮಾರ್ಗವನ್ನು ಸರಾಗ ಮಾಡಿರಿ> ಎಂದು ಅಡವಿಯಲ್ಲಿ
|
|
\q1 ಕೂಗುವವನ ಶಬ್ದವಿದೆ>> ಎಂಬುದಾಗಿ ಪ್ರವಾದಿಯಾದ
|
|
\q1 ಯೆಶಾಯನಿಂದ ಸೂಚಿತನಾದವನು ಇವನೇ.
|
|
\s5
|
|
\p
|
|
\v 4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
|
|
\p
|
|
\v 5 ಆಗ ಯೇರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,
|
|
\v 6 ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
|
|
\s5
|
|
\p
|
|
\v 7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, <<ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
|
|
\v 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
|
|
\v 9 ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
|
|
\s5
|
|
\v 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
|
|
\v 11
|
|
\f +
|
|
\fr 3:11
|
|
\ft ಯೋಹಾ. 1:26,33; ಅ. ಕೃ. 1:5
|
|
\f* ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
|
|
\v 12 ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು>> ಎಂದು ಹೇಳಿದನು.
|
|
\s1 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು
|
|
\r (ಮಾರ್ಕ 1:9-11; ಲೂಕ 3:21,22)
|
|
\s5
|
|
\p
|
|
\v 13 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
|
|
\v 14 ಆತನಿಗೆ ಯೋಹಾನನು
|
|
\f +
|
|
\fr 3:14
|
|
\ft ಯೇಸು ಪಾಪವನ್ನೇ ಮಾಡದೆ ಇದ್ದರಿಂದ
|
|
\f* ತಡೆಯುತ್ತಾ, <<ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?>> ಎಂದು ಹೇಳಿದಕ್ಕೆ,
|
|
\v 15 ಯೇಸು ಪ್ರತ್ಯುತ್ತರವಾಗಿ ಅವನಿಗೆ, <<ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ>> ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
|
|
\s5
|
|
\p
|
|
\v 16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
|
|
\v 17 ಆಗ
|
|
\f +
|
|
\fr 3:17
|
|
\ft ಮತ್ತಾ. 12:18; 17:5; ಕೀರ್ತ. 2:7
|
|
\f* <<ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ>> ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
|
|
|
|
\s5
|
|
\c 4
|
|
\s1 ಸೈತಾನನು ಯೇಸುವನ್ನು ಶೋಧಿಸಿದ್ದು
|
|
\r (ಮಾರ್ಕ 1:12,13; ಲೂಕ 4:1-13)
|
|
\p
|
|
\v 1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
|
|
\v 2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
|
|
\p
|
|
\v 3 ಆಗ ಸೈತಾನನು ಆತನ ಬಳಿಗೆ ಬಂದು, <<ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು>> ಎಂದು ಹೇಳಲು,
|
|
\v 4 ಯೇಸು,
|
|
\f +
|
|
\fr 4:4
|
|
\ft ಧರ್ಮೋ 8:3
|
|
\f* << <ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು> ಎಂದು ಬರೆದಿದೆ>> ಅಂದನು.
|
|
\s5
|
|
\p
|
|
\v 5 ಆಗ ಸೈತಾನನು ಯೇಸುವನ್ನು
|
|
\f +
|
|
\fr 4:5
|
|
\ft ಯೆರುಸಲೇಮ್
|
|
\f* ಪರಿಶುದ್ಧ ಪಟ್ಟಣಕ್ಕೆ ಕರದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
|
|
\v 6 ಯೇಸುವಿಗೆ, <<ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು;
|
|
\f +
|
|
\fr 4:6
|
|
\ft ಕೀರ್ತ 91:11,12
|
|
\f* <ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು> ಎಂಬುದಾಗಿ ಬರೆದಿದೆಯಲ್ಲಾ>> ಎಂದು ಹೇಳಿದನು.
|
|
\s5
|
|
\v 7 ಅದಕ್ಕೆ ಯೇಸು,
|
|
\f +
|
|
\fr 4:7
|
|
\ft ಧರ್ಮೋ 6:16
|
|
\f* <<ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ>> ಅಂದನು.
|
|
\v 8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
|
|
\v 9 ಯೇಸುವಿಗೆ, <<ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು>> ಅಂದನು.
|
|
\s5
|
|
\v 10 ಯೇಸು ಅವನಿಗೆ, <<ಸೈತಾನನೇ, ನೀನು ತೊಲಗಿ ಹೋಗು. <ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು>
|
|
\f +
|
|
\fr 4:10
|
|
\ft ಧರ್ಮೋ 6:13; 10:16
|
|
\f* ಎಂಬುದಾಗಿ ಬರೆದಿದೆಯಲ್ಲಾ>> ಎಂದು ಹೇಳಿದನು.
|
|
\p
|
|
\v 11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
|
|
\s1 ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು
|
|
\r (ಮಾರ್ಕ 1:14,15; ಲೂಕ 4:14,15)
|
|
\s5
|
|
\p
|
|
\v 12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
|
|
\v 13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನನ ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
|
|
\s5
|
|
\v 14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು
|
|
\f +
|
|
\fr 4:14
|
|
\ft ಯೆಶಾ. 9:1-2
|
|
\f* ; ಆ ಮಾತು ಏನೆಂದರೆ,
|
|
\v 15
|
|
\f +
|
|
\fr 4:15
|
|
\ft ಯೆಶಾ 9:1,2
|
|
\f* <<ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
|
|
\v 16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು>> ಎಂಬುದು.
|
|
\s5
|
|
\v 17 ಅಂದಿನಿಂದ ಯೇಸು, <<ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು>> ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
|
|
\s1 ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು
|
|
\r (ಮಾರ್ಕ 1:16-20; ಲೂಕ 5:2-11; ಯೋಹಾ. 1:40-42)
|
|
\s5
|
|
\p
|
|
\v 18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
|
|
\v 19 ಅವರಿಗೆ ಆತನು, <<ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು>> ಎಂದು ಹೇಳುತ್ತಲೇ,
|
|
\v 20 ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
|
|
\s5
|
|
\v 21 ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
|
|
\v 22 ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
|
|
\s1 ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು
|
|
\r (ಮಾರ್ಕ 1:39; ಲೂಕ 4:15-44; 6:17-19)
|
|
\s5
|
|
\p
|
|
\v 23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
|
|
\v 24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
|
|
\v 25 ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
|
|
|
|
\s5
|
|
\c 5
|
|
\s1 ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
|
|
\r (ಲೂಕ 6:20-49; 11:1-4,9-13,33-36; 12:22-24,57-59; 16:17,18)
|
|
\p
|
|
\v 1 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
|
|
\v 2 ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
|
|
\q1
|
|
\v 3 <<ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
|
|
\q1
|
|
\v 4 ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
|
|
\s5
|
|
\q1
|
|
\v 5 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.
|
|
\q1
|
|
\v 6 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
|
|
\q1
|
|
\v 7 ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
|
|
\q1
|
|
\v 8
|
|
\f +
|
|
\fr 5:8
|
|
\ft ಕೀರ್ತ. 24:4; ಇಬ್ರಿ. 12:14; 1 ಯೋಹಾ. 3:2-3:
|
|
\f* ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.
|
|
\s5
|
|
\q1
|
|
\v 9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
|
|
\q1
|
|
\v 10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
|
|
\s5
|
|
\p
|
|
\v 11 <<ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
|
|
\v 12
|
|
\f +
|
|
\fr 5:12
|
|
\ft ಅ. ಕೃ. 5:41; ರೋಮಾ. 5:3
|
|
\f* ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
|
|
\s5
|
|
\p
|
|
\v 13 <<ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
|
|
\v 14
|
|
\f +
|
|
\fr 5:14
|
|
\ft ಫಿಲಿ. 2:15
|
|
\f* ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.
|
|
\s5
|
|
\v 15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
|
|
\v 16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
|
|
\s5
|
|
\p
|
|
\v 17 <<ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
|
|
\v 18 ನಿಮಗೆ ಸತ್ಯವಾಗಿ ಹೇಳುತ್ತೇನೆ,
|
|
\f +
|
|
\fr 5:18
|
|
\ft ಮತ್ತಾ. 24:35; ಲೂಕ. 16:17
|
|
\f* ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
|
|
\s5
|
|
\v 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
|
|
\v 20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
|
|
\s5
|
|
\p
|
|
\v 21
|
|
\f +
|
|
\fr 5:21
|
|
\ft ವಿಮೋ. 20:13
|
|
\f* << <ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು> ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
|
|
\v 22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, <ಎಲೈ ಮೂರ್ಖನೇ> ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; <ಎಲೈ ನೀಚನೇ> ಎಂದು ಅನ್ನುವವನು,
|
|
\f +
|
|
\fr 5:22
|
|
\ft ಮೂಲ: ಬೆಂಕಿಯ ಕುಂಡಕ್ಕೆ
|
|
\f* ಅಗ್ನಿನರಕಕ್ಕೆ ಗುರಿಯಾಗುವನು.
|
|
\s5
|
|
\v 23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
|
|
\v 24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
|
|
\s5
|
|
\p
|
|
\v 25 <<ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
|
|
\v 26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\p
|
|
\v 27
|
|
\f +
|
|
\fr 5:27
|
|
\ft ವಿಮೋ 20:14
|
|
\f* << <ವ್ಯಭಿಚಾರ ಮಾಡಬಾರದೆಂದು> ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.
|
|
\v 28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
|
|
\s5
|
|
\v 29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
|
|
\v 30
|
|
\f +
|
|
\fr 5:30
|
|
\ft ಮತ್ತಾ. 18:8; ಮಾರ್ಕ 9:43
|
|
\f* ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
|
|
\s5
|
|
\v 31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
|
|
\v 32 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
|
|
\s5
|
|
\p
|
|
\v 33 <<ಮತ್ತು, ನೀನು ಸುಳ್ಳಾಣೆಯಿಡಬಾರದು;
|
|
\f +
|
|
\fr 5:33
|
|
\ft ವಿಮೋ. 20:7; ಯಾಜ. 19:12
|
|
\f* <ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ> ಹೇಳಿದೆ ಎಂದು ಕೇಳಿದ್ದೀರಷ್ಟೆ.
|
|
\v 34 ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.
|
|
\v 35 ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ;
|
|
\f +
|
|
\fr 5:35
|
|
\ft ಕೀರ್ತ. 48:2
|
|
\f* ಅದು ಆ ಮಹಾ ರಾಜನ ಪಟ್ಟಣವಾಗಿದೆ.
|
|
\s5
|
|
\v 36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
|
|
\v 37 ಆದರೆ ನಿಮ್ಮ ಮಾತು <ಹೌದಾದರೆ ಹೌದು ಅಲ್ಲವಾದರೆ ಅಲ್ಲ> ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
|
|
\s5
|
|
\p
|
|
\v 38 << <ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು> ಎಂದು ಹೇಳಿರುವುದು ಕೇಳಿದ್ದೀರಷ್ಟೆ.
|
|
\v 39 ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
|
|
\s5
|
|
\v 40 ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.
|
|
\v 41 ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.
|
|
\v 42 ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.
|
|
\s5
|
|
\p
|
|
\v 43
|
|
\f +
|
|
\fr 5:43
|
|
\ft ಯಾಜ. 19:17,18
|
|
\f* << <ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು> ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
|
|
\v 44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;
|
|
\f +
|
|
\fr 5:44
|
|
\ft ಲೂಕ 3:34; ಅ. ಕೃ. 7:60
|
|
\f* ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
|
|
\v 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
|
|
\s5
|
|
\v 46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.
|
|
\v 47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
|
|
\v 48
|
|
\f +
|
|
\fr 5:48
|
|
\ft ಆದಿ. 17:1; ಎಫೆ. 5:1; ಯಾಕೋಬ. 1:4
|
|
\f* ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
|
|
|
|
\s5
|
|
\c 6
|
|
\s ದಾನಧರ್ಮದ ವಿಧಾನ
|
|
\p
|
|
\v 1 <<ಜನರು ನೋಡಲಿ ಎಂದು ನಿಮ್ಮ <ಧರ್ಮಕಾರ್ಯಗಳನ್ನು> ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ
|
|
\f +
|
|
\fr 6:1
|
|
\ft ಆಶೀರ್ವಾದ
|
|
\f* ಫಲದೊರೆಯುವುದಿಲ್ಲ.
|
|
\p
|
|
\v 2 <<ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\v 3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.
|
|
\v 4
|
|
\f +
|
|
\fr 6:4
|
|
\ft ಮತ್ತಾ. 6:6,18
|
|
\f* ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
|
|
\s ಪ್ರಾರ್ಥನೆಯ ವಿಧಾನ
|
|
\s5
|
|
\p
|
|
\v 5 <<ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 6 ನೀನು ಪ್ರಾರ್ಥನೆಮಾಡುವಾಗ
|
|
\f +
|
|
\fr 6:6
|
|
\ft 2 ಅರಸು 4:33; ದಾನಿ 6:10
|
|
\f* ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
|
|
\v 7 ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.
|
|
\s5
|
|
\v 8 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.
|
|
\p
|
|
\v 9 ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,
|
|
\q1
|
|
\v 10 << ಪರಲೋಕದಲ್ಲಿರುವ ನಮ್ಮ ತಂದೆಯೇ,
|
|
\q2 ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
|
|
\q2 ನಿನ್ನ ರಾಜ್ಯವು ಬರಲಿ.
|
|
\q2 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
|
|
\q3 ಭೂಲೋಕದಲ್ಲಿಯೂ ನೆರವೇರಲಿ.
|
|
\s5
|
|
\q2
|
|
\v 11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
|
|
\q2
|
|
\v 12
|
|
\f +
|
|
\fr 6:12
|
|
\ft ನಮ್ಮ ಸಾಲಗಾರರನ್ನು
|
|
\f* ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ
|
|
\q3 ನಮ್ಮ
|
|
\f +
|
|
\fr 6:12
|
|
\ft ಸಾಲಗಳನ್ನು
|
|
\f* ತಪ್ಪುಗಳನ್ನು ಕ್ಷಮಿಸು.
|
|
\q2
|
|
\v 13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ
|
|
\q3 ಕೆಡುಕನಿಂದ; ನಮ್ಮನ್ನು ತಪ್ಪಿಸು>>
|
|
\f +
|
|
\fr 6:13
|
|
\ft ಕೆಲವು ಪತ್ರಿಕೆಗಳಲ್ಲಿ: ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮವೇ. ಆಮೆನ್; 1 ಪೂರ್ವ 29:11
|
|
\f*
|
|
\m
|
|
\s5
|
|
\v 14 ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
|
|
\v 15 ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
|
|
\s5
|
|
\p
|
|
\v 16 <<ಇದಲ್ಲದೆ
|
|
\f +
|
|
\fr 6:16
|
|
\ft ಯೆಶಾ 58:5
|
|
\f* ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.
|
|
\v 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
|
|
\s ಶಾಶ್ವತ ಸಂಪತ್ತು
|
|
\s5
|
|
\p
|
|
\v 19
|
|
\f +
|
|
\fr 6:19
|
|
\ft ಲೂಕ 12:33; 1 ತಿಮೊ 6:17-19; ರೋಮಾ 9:13
|
|
\f* <<ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
|
|
\v 20 ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
|
|
\v 21 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಹೃದಯ ಇರುತ್ತದಷ್ಟೆ.
|
|
\s5
|
|
\p
|
|
\v 22 <<ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
|
|
\v 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!
|
|
\p
|
|
\v 24 <<ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು
|
|
\f +
|
|
\fr 6:24
|
|
\ft ಅಲಕ್ಷ್ಯಮಾಡಿ
|
|
\f* ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
|
|
\s1 ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
|
|
\s5
|
|
\p
|
|
\v 25 <<ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
|
|
\v 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
|
|
\s5
|
|
\v 27
|
|
\f +
|
|
\fr 6:27
|
|
\ft ಲೂಕ 12:25-31
|
|
\f* ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ
|
|
\f +
|
|
\fr 6:27
|
|
\ft ಆಯುಸ್ಸು ಹೆಚ್ಚು ಮಾಡಿಕೊಳ್ಳುವುದು
|
|
\f* ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?
|
|
\v 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
|
|
\v 29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
|
|
\s5
|
|
\v 30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!
|
|
\v 31 ಹೀಗಿರುವುದರಿಂದ, <ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು> ಎಂದು ಚಿಂತೆಮಾಡಬೇಡಿರಿ.
|
|
\s5
|
|
\v 32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.
|
|
\v 33 ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
|
|
\v 34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
|
|
|
|
\s5
|
|
\c 7
|
|
\s ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ
|
|
\p
|
|
\v 1 <<ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
|
|
\v 2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
|
|
\s5
|
|
\p
|
|
\v 3 <<ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
|
|
\v 4 ನೀನು ನಿನ್ನ ಸಹೋದರನಿಗೆ, <ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ> ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
|
|
\v 5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
|
|
\s5
|
|
\p
|
|
\v 6 <<ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
|
|
\s ಫಲದಾಯಕ ಪ್ರಾರ್ಥನೆ
|
|
\s5
|
|
\p
|
|
\v 7 <<ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
|
|
\v 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
|
|
\p
|
|
\v 9 <<ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
|
|
\v 10 ಮೀನು ಕೇಳಿದರೆ ಹಾವನ್ನು ಕೊಡುವನೋ?
|
|
\s5
|
|
\v 11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
|
|
\v 12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಶ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
|
|
\s ವಿನಾಶದ ಬಾಗಿಲು ವಿಶಾಲ
|
|
\s5
|
|
\p
|
|
\v 13 <<ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
|
|
\v 14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ. ಆದುದರಿಂದ
|
|
\f +
|
|
\fr 7:14
|
|
\ft ಲೂಕ 13:24.
|
|
\f* ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ.
|
|
\s ಸುಳ್ಳ ಪ್ರವಾದಿಗಳಿದ್ದಾರೆ ಎಚ್ಚರಿಕ್ಕೆ
|
|
\s5
|
|
\p
|
|
\v 15 <<ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
|
|
\v 16
|
|
\f +
|
|
\fr 7:16
|
|
\ft ಲೂಕ 6:43, 44.
|
|
\f* ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
|
|
\v 17 ಹಾಗೆಯೇ
|
|
\f +
|
|
\fr 7:17
|
|
\ft ಮತ್ತಾ. 12:33-35.
|
|
\f* ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
|
|
\s5
|
|
\v 18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.
|
|
\v 19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
|
|
\v 20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
|
|
\s ಕಪಟಿಗಳಿಗೆ ದೊರೆಯುವ ತೀರ್ಪು
|
|
\s5
|
|
\p
|
|
\v 21
|
|
\f +
|
|
\fr 7:21
|
|
\ft ಲೂಕ 6:46-49; ಯಾಕೋಬ 1:22.
|
|
\f* ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
|
|
\v 22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತಿರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
|
|
\v 23 ಆಗ ನಾನು ಅವರಿಗೆ, <<ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,> ಎಂದು ಹೇಳಿಬಿಡುವೆನು.
|
|
\s ಸ್ಥಿರವಾದ ಮನೆ
|
|
\s5
|
|
\p
|
|
\v 24 ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
|
|
\v 25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
|
|
\s5
|
|
\v 26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
|
|
\v 27 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
|
|
\s5
|
|
\p
|
|
\v 28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
|
|
\v 29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
|
|
|
|
\s5
|
|
\c 8
|
|
\s1 ಯೇಸು ದಯವುಳ್ಳ ಅದ್ಭುತಕಾರ್ಯಗಳನ್ನು ಮಾಡಿ ತನ್ನ ಮಹಿಮೆಯನ್ನು ತೋರಿಸಿದ್ದು (8:2-9,34)
|
|
\s1 ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು (ಮಾರ್ಕ 1:40-44; ಲೂಕ 5:12-14)
|
|
\p
|
|
\v 1 ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
|
|
\v 2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, <<ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ>> ಅಂದನು.
|
|
\v 3 ಆತನು ಕೈಚಾಚಿ ಆತನನ್ನು ಮುಟ್ಟಿ, <<ನನಗೆ ಮನಸ್ಸುಂಟು; ಶುದ್ಧವಾಗು>> ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
|
|
\s5
|
|
\v 4 ಆಗ ಯೇಸು ಅವನಿಗೆ;
|
|
\f +
|
|
\fr 8:4
|
|
\ft ಮತ್ತಾ. 9:30
|
|
\f* <<ನೋಡು, ಯಾರಿಗೂ ಹೇಳಬೇಡ;
|
|
\f +
|
|
\fr 8:4
|
|
\ft ಯಾಜ 14:2-32; ಲೂಕ 17:14
|
|
\f* ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;>>
|
|
\f +
|
|
\fr 8:4
|
|
\ft ಯಾಜಕರಿಗೆ
|
|
\f* ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
|
|
\s1 ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
|
|
\r (ಲೂಕ 7:1-10,13,28,29)
|
|
\s5
|
|
\p
|
|
\v 5 ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ
|
|
\f +
|
|
\fr 8:5
|
|
\ft ನೂರು ಸಿಪಾಯಿಗಳ ಮೇಲಿರುವ ಸರದಾರ
|
|
\f* ಶತಾಧಿಪತಿಯು ಆತನ ಬಳಿಗೆ ಬಂದು,
|
|
\v 6 <<ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ>> ಎಂದು ಹೇಳಿದನು.
|
|
\v 7 ಯೇಸು ಅವನಿಗೆ, <<ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ>> ಎಂದು ಹೇಳಲು,
|
|
\s5
|
|
\v 8 ಆ ಶತಾಧಿಪತಿಯು, <<ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
|
|
\v 9 ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ <ಹೋಗು> ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ <ಬಾ> ಎಂದು ಹೇಳಿದರೆ ಬರುತ್ತಾನೆ; <ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು> ಎಂದು ಹೇಳಿದರೆ ಮಾಡುತ್ತಾನೆ>> ಅಂದನು.
|
|
\v 10 ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, <<ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
|
|
\s5
|
|
\v 11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
|
|
\v 12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು>> ಎಂದು ಹೇಳಿದನು.
|
|
\v 13 ಬಳಿಕ ಯೇಸು ಆ ಶತಾಧಿಪತಿಗೆ, <<ನೀನು ನಂಬಿದಂತೆ ನಿನಗಾಗಲಿ, ಹೋಗು>> ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
|
|
\s1 ಯೇಸುವಿನ ರೋಗನಿವಾರಕ ಕಾರ್ಯ
|
|
\r (ಮಾರ್ಕ 1:29-34; ಲೂಕ 4:38-41)
|
|
\s5
|
|
\p
|
|
\v 14 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
|
|
\v 15 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
|
|
\s5
|
|
\p
|
|
\v 16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
|
|
\v 17 ಇದರಿಂದ
|
|
\f +
|
|
\fr 8:17
|
|
\ft ಯೆಶಾ 53:4
|
|
\f* <<ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು>> ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
|
|
\s1 ಶಿಷ್ಯರಾಗಬೇಕೆಂದಿರುವವರಿಗೆ ಬೇಲೆಕೋಡುವುದು ಅವಶ್ಯವೆಂದು ಯೇಸು ಬೋಧಿಸಿದ್ದು
|
|
\r (ಲೂಕ 9:57-60)
|
|
\s5
|
|
\p
|
|
\v 18 ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
|
|
\v 19 ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, <<ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ>> ಎಂದು ಹೇಳಲು,
|
|
\v 20 ಯೇಸು ಅವನಿಗೆ, <<ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ>> ಎಂದು ಹೇಳಿದನು.
|
|
\s5
|
|
\v 21 ಶಿಷ್ಯರಲ್ಲಿ ಬೇರೊಬ್ಬನು, <<ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ
|
|
\f +
|
|
\fr 8:21
|
|
\ft ಯೆಹೂದ್ಯರ ಪದ್ಧತಿಯಂತೆ ಸತ್ತವರನ್ನು ಅದೇ ದಿನ ಹೂಳಬೇಕು; ಆದರೆ ಇಲ್ಲಿ ಈ ಶಿಷ್ಯನು ಯೇಸುವನ್ನು ತನ್ನ ತಂದೆ- ತಾಯಿ ಸಾಯುವ ತನಕ ಅವರ ಸೇವೆಮಾಡಿ ಬರುವುದಾಗಿ ಹೇಳುತ್ತಿದ್ದನು.
|
|
\f* ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು>> ಅನ್ನಲಾಗಿ,
|
|
\v 22 ಯೇಸು ಅವನಿಗೆ, <<ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ>> ಎಂದು ಹೇಳಿದನು.
|
|
\s1 ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು
|
|
\r (ಮಾರ್ಕ 4:35-41; ಲೂಕ 8:22-25)
|
|
\s5
|
|
\p
|
|
\v 23 ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
|
|
\v 24 ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತ್ತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
|
|
\v 25 ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, <<ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ>> ಎಂದರು.
|
|
\s5
|
|
\v 26 ಆತನು ಅವರಿಗೆ, <<ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?>> ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
|
|
\v 27 ಆ ಜನರು ಬೆರಗಾಗಿ, <<ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ>> ಅಂದರು.
|
|
\s1 ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು
|
|
\r (ಮಾರ್ಕ 5:1-20; ಲೂಕ 8:26-39)
|
|
\s5
|
|
\p
|
|
\v 28 ಆ ಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರುರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
|
|
\v 29 ಅವರು,
|
|
\f +
|
|
\fr 8:29
|
|
\ft ಮತ್ತಾ. 14:33; 16:16
|
|
\f* <<ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ>> ಎಂದು ಕೂಗಿದರು.
|
|
\s5
|
|
\v 30 ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.
|
|
\v 31 ಆ ದೆವ್ವಗಳು, <<ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು>> ಎಂದು ಬೇಡಿಕೊಂಡವು.
|
|
\v 32 ಆತನು ಅವುಗಳಿಗೆ, <<ಹೋಗಿರಿ>> ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
|
|
\s5
|
|
\v 33 ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;
|
|
\v 34 ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
|
|
|
|
\s5
|
|
\c 9
|
|
\p
|
|
\v 1 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
|
|
\s1 ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು
|
|
\r (ಮಾರ್ಕ 2:1-12; ಲೂಕ 5:17-26)
|
|
\p
|
|
\v 2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, <<ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು.
|
|
\s5
|
|
\v 3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, <<ಇವನು ದೇವದೂಷಣೆ ಮಾಡುತ್ತಾನೆಂದು>> ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
|
\v 4 ಯೇಸು ಅವರ ಆಲೋಚನೆಗಳನ್ನು ತಿಳಿದು, <<ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
|
|
\v 5 ಯಾವುದು ಸುಲಭ? <ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ> ಎಂದು ಅನ್ನುವುದೋ?
|
|
\v 6 ಅಥವಾ <ಎದ್ದು ನಡೆ> ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು>> ಅಂದನು.
|
|
\s5
|
|
\v 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
|
|
\v 8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
|
|
\s1 ಯೇಸು ಮತ್ತಾಯನನ್ನು ಕರೆದದ್ದು
|
|
\r (ಮಾರ್ಕ 2:13-; ಲೂಕ 5:27-32)
|
|
\p
|
|
\v 9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
|
|
\s5
|
|
\p
|
|
\v 10 ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
|
|
\v 11 ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, <<ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಕೇಳಿದರು.
|
|
\s5
|
|
\v 12 ಯೇಸು ಅದನ್ನು ಕೇಳಿ, <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
|
|
\v 13 ನೀವು ಹೋಗಿ, <ನಾನು ಯಜ್ಞವನ್ನಲ್ಲ,
|
|
\f +
|
|
\fr 9:13
|
|
\ft ಹೋಶೇ. 6:6; ಮತ್ತಾ. 12:7; ಮೀಕ 6:8
|
|
\f* ಕರುಣೆಯನ್ನೇ ಅಪೇಕ್ಷಿಸುತ್ತೇನೆ> ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು.
|
|
\s ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39)
|
|
\s5
|
|
\p
|
|
\v 14 ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, <<ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ>> ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
|
|
\v 15 <<ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
|
|
\s5
|
|
\v 16 ಆ ತ್ಯಾಪೆಯು ಹಳೆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
|
|
\s5
|
|
\v 17 ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು>> ಎಂದು ಹೇಳಿದನು.
|
|
\s1 ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು
|
|
\r (ಮಾರ್ಕ 5:22-43; ಲೂಕ 8:41-56)
|
|
\s5
|
|
\p
|
|
\v 18 ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, <<ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು>> ಎಂದು ಬೇಡಿಕೊಂಡನು.
|
|
\v 19 ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
|
|
\s5
|
|
\p
|
|
\v 20 ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,
|
|
\v 21 <<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ>> ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
|
|
\v 22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, <<ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು>> ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
|
|
\s5
|
|
\p
|
|
\v 23 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
|
|
\v 24 <<ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ>> ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
|
|
\s5
|
|
\v 25 ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
|
|
\v 26 ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
|
|
\s5
|
|
\p
|
|
\v 27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, <<ದಾವೀದ ಕುಮಾರನೇ, ನಮ್ಮನ್ನು ಕರುಣಿಸು>> ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
|
|
\v 28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, <<ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ>> ಎಂದು ಕೇಳಿದ್ದಕ್ಕೆ, ಅವರು <<ಹೌದು, ಕರ್ತನೇ, ನಂಬುತ್ತೇವೆ>> ಅಂದರು.
|
|
\s5
|
|
\v 29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, <<ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ>> ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
|
|
\v 30 ನಂತರ ಯೇಸು ಅವರಿಗೆ, <<ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ>> ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
|
|
\v 31 ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
|
|
\s5
|
|
\p
|
|
\v 32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
|
|
\v 33 ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, <<ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು>> ಆಶ್ಚರ್ಯಚಕಿತರಾದರು.
|
|
\v 34 ಆದರೆ ಫರಿಸಾಯರು, <<ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ>> ಎಂದು ಹೇಳಿದರು.
|
|
\s1 ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು
|
|
\r (ಮಾರ್ಕ 3:13-19; 6:6-13; ಲೂಕ 6:12-16; 9:1-6)
|
|
\s5
|
|
\p
|
|
\v 35 ತರುವಾಯ ಯೇಸು ಎಲ್ಲಾ ಪಟ್ಟಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
|
|
\v 36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
|
|
\s5
|
|
\v 37 ಆತನು ತನ್ನ ಶಿಷ್ಯರಿಗೆ, <<ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.
|
|
\v 38 ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ>> ಎಂದು ಹೇಳಿದನು.
|
|
|
|
\s5
|
|
\c 10
|
|
\p
|
|
\v 1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
|
|
\s5
|
|
\p
|
|
\v 2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
|
|
\v 3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,
|
|
\v 4 ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.
|
|
\s5
|
|
\p
|
|
\v 5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, <<ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
|
|
\v 6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
|
|
\v 7 <ಪರಲೋಕ ರಾಜ್ಯವು ಸಮೀಪವಾಯಿತೆಂದು> ಸಾರಿಹೇಳುತ್ತಾ ಹೋಗಿರಿ.
|
|
\s5
|
|
\v 8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
|
|
\v 9 ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
|
|
\v 10 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
|
|
\s5
|
|
\v 11 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
|
|
\v 12 ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.
|
|
\v 13 ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
|
|
\s5
|
|
\v 14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
|
|
\v 15
|
|
\f +
|
|
\fr 10:15
|
|
\ft ಮತ್ತಾ. 11:24
|
|
\f* ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\p
|
|
\v 16 <<ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
|
|
\v 17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
|
|
\v 18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
|
|
\s5
|
|
\v 19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
|
|
\v 20 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
|
|
\s5
|
|
\v 21 ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
|
|
\v 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
|
|
\v 23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\p
|
|
\v 24
|
|
\f +
|
|
\fr 10:24
|
|
\ft ಮಾರ್ಕ 3:22; ಲೂಕ 6:40; ಯೋಹಾ. 13:16
|
|
\f* <<ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.
|
|
\v 25 ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ
|
|
\f +
|
|
\fr 10:25
|
|
\ft ಪಿಶಾಚಿಗಳ ಒಡೆಯನು
|
|
\f* ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
|
|
\s5
|
|
\v 26 ಆದರೂ ಅವರಿಗೆ ಹೆದರಬೇಡಿರಿ.
|
|
\f +
|
|
\fr 10:26
|
|
\ft ಮಾರ್ಕ 4:22; ಲೂಕ 8:17; 12:2-9.
|
|
\f* ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
|
|
\v 27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
|
|
\s5
|
|
\v 28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
|
|
\v 29 ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
|
|
\v 30 ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
|
|
\v 31 ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
|
|
\s5
|
|
\p
|
|
\v 32 <<ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
|
|
\v 33 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
|
|
\s5
|
|
\p
|
|
\v 34
|
|
\f +
|
|
\fr 10:34
|
|
\ft ಲೂಕ 12:51-53.
|
|
\f* <<ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
|
|
\v 35 ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
|
|
\v 36
|
|
\f +
|
|
\fr 10:36
|
|
\ft ಮೀಕ 7:6.
|
|
\f* ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.
|
|
\s5
|
|
\v 37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
|
|
\v 38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
|
|
\v 39 ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಾಪಾಡಿಕೊಳ್ಳುತ್ತಾನೆ.
|
|
\s5
|
|
\p
|
|
\v 40
|
|
\f +
|
|
\fr 10:40
|
|
\ft ಲೂಕ 10:16.
|
|
\f* <<ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುವವನಾಗಿದ್ದಾನೆ;
|
|
\f +
|
|
\fr 10:40
|
|
\ft ಮಾರ್ಕ 9:37; ಲೂಕ 9:48.
|
|
\f* ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುವವನಾಗಿದ್ದಾನೆ.
|
|
\v 41 ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವಾಗತಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
|
|
\s5
|
|
\v 42 ಮತ್ತು
|
|
\f +
|
|
\fr 10:42
|
|
\ft ಮತ್ತಾ. 25:40; ಮಾರ್ಕ 9:41.
|
|
\f* ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಅಂದನು.
|
|
|
|
\s5
|
|
\c 11
|
|
\p
|
|
\v 1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
|
|
\s1 ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು
|
|
\p
|
|
\v 2
|
|
\f +
|
|
\fr 11:2
|
|
\ft ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು [ಯೆಶಾ. 35:5, 6; 61:1] ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ.
|
|
\f* ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
|
|
\v 3 <<ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ>> ಎಂದು ಅವರ ಮೂಲಕ ಹೇಳಿ ಕೇಳಿಸಿದನು.
|
|
\s5
|
|
\v 4 ಯೇಸು ಅವರಿಗೆ ಪ್ರತ್ಯುತ್ತರವಾಗಿ, <<ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
|
|
\v 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
|
|
\v 6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು>> ಎಂದು ಹೇಳಿದನು.
|
|
\s5
|
|
\p
|
|
\v 7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, <<ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
|
|
\v 8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
|
|
\s5
|
|
\v 9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
|
|
\v 10
|
|
\f +
|
|
\fr 11:10
|
|
\ft ಮಲಾ. 3:1:
|
|
\f* <ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು> ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
|
|
\s5
|
|
\v 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 12 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
|
|
\s5
|
|
\v 13 ಎಲ್ಲಾ ಪ್ರವಾದಿಗಳೂ, ಧರ್ಮನಿಯಮವು ಯೋಹಾನನ ತನಕ ಪ್ರವಾದಿಸಿದರು.
|
|
\v 14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
|
|
\v 15 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
|
|
\s5
|
|
\v 16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
|
|
\v 17 <ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ> ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
|
|
\s5
|
|
\v 18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, <ದೆವ್ವ ಹಿಡಿದಿದೆ> ಅನ್ನುತ್ತಾರೆ.
|
|
\v 19 ಮನುಷ್ಯಕುಮಾರನು ಬಂದನು,
|
|
\f +
|
|
\fr 11:19
|
|
\ft ಮತ್ತಾ. 9:10; ಲೂಕ. 15:2:
|
|
\f* ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು <ಇಗೋ ಇವನು ಹೊಟ್ಟೆಬಾಕನು ಕುಡುಕನು
|
|
\f +
|
|
\fr 11:19
|
|
\ft ಕೆಲವು ಪ್ರತಿಗಳಲ್ಲಿ ಭ್ರಷ್ಟರ ಎಂಬುದಾಗಿದೆ.
|
|
\f* ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು> ಅನ್ನುತ್ತಾರೆ.
|
|
\f +
|
|
\fr 11:19
|
|
\ft ಆದರೆ ನಿಜವಾದ ಜ್ಞಾನಿಯು ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮೂಲಕ ಜ್ಞಾನವನ್ನು ತೋರ್ಪಡಿಸುತ್ತಾನೆ ಅಂದನು.
|
|
\f* ಆದರೆ ಜ್ಞಾನವು ಅದರ
|
|
\f +
|
|
\fr 11:19
|
|
\ft ಕೆಲವು ಪ್ರತಿಗಳಲ್ಲಿ ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ. 7:35 ನೋಡಿರಿ.
|
|
\f* ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ>> ಅಂದನು.
|
|
\s1 ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
|
|
\r (ಲೂಕ 10:12—15:21-22)
|
|
\s5
|
|
\p
|
|
\v 20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
|
|
\v 21 ಹೇಗಂದರೆ, <<ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
|
|
\v 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
|
|
\s5
|
|
\v 23 ಎಲೈ ಕಪೆರ್ನೌಮೇ
|
|
\f +
|
|
\fr 11:23
|
|
\ft ಯೆಶಾ. 14:13-15:
|
|
\f* ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
|
|
\v 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು>> ಎಂದು ನಿಮಗೆ ಹೇಳುತ್ತೇನೆ ಅಂದನು.
|
|
\s5
|
|
\p
|
|
\v 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, <<ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
|
|
\v 26 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
|
|
\v 27
|
|
\f +
|
|
\fr 11:27
|
|
\ft ಮತ್ತಾ. 28:18; ಯೋಹಾ. 1:18; 6, 46:
|
|
\f* ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.
|
|
\s1 ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
|
|
\s5
|
|
\p
|
|
\v 28 <<ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
|
|
\v 29
|
|
\f +
|
|
\fr 11:29
|
|
\ft ಯೆರೆ. 6:16; ಯೋಹಾ. 13:15; ಫಿಲಿ. 2:5, 7, 8:
|
|
\f* ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
|
|
\v 30 ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ>> ಅಂದನು.
|
|
|
|
\s5
|
|
\c 12
|
|
\s1 ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು
|
|
\r (ಮಾರ್ಕ 2:23; 3:6; ಲೂಕ 6:1-11)
|
|
\p
|
|
\v 1 ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
|
|
\v 2 ಆದರೆ ಫರಿಸಾಯರು ಅದನ್ನು ಕಂಡು, <<ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ>> ಎಂದು ಆತನಿಗೆ ಹೇಳಿದರು.
|
|
\s5
|
|
\v 3 ಆತನು ಅವರಿಗೆ, <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
|
|
\v 4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
|
|
\s5
|
|
\v 5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
|
|
\v 6
|
|
\f +
|
|
\fr 12:6
|
|
\ft ಮತ್ತಾ. 1:41,42:
|
|
\f* ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.
|
|
\s5
|
|
\v 7
|
|
\f +
|
|
\fr 12:7
|
|
\ft ಹೋಶೇ. 6:6:
|
|
\f* <ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ> ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
|
|
\v 8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು>> ಹೇಳಿದನು.
|
|
\s5
|
|
\p
|
|
\v 9 ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
|
|
\v 10 ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, <<ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?>> ಎಂದು ಕೇಳಿದರು.
|
|
\s5
|
|
\v 11 ಅದಕ್ಕಾತನು, <<ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
|
|
\v 12 ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ>> ಎಂದು ಉತ್ತರ ಕೊಟ್ಟನು.
|
|
\s5
|
|
\v 13 ತರುವಾಯ ಯೇಸು ಆ ಮನುಷ್ಯನಿಗೆ <<ನಿನ್ನ ಕೈ ಚಾಚು>> ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
|
|
\v 14 ಆದರೆ ಫರಿಸಾಯರು ಹೊರಕ್ಕೆ ಹೋಗಿ
|
|
\f +
|
|
\fr 12:14
|
|
\ft ಮತ್ತಾ. 22:15; 27:1, 7; 28:12; ಯೋಹಾ. 5:18; 10:39; 11:5 3:
|
|
\f* ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.
|
|
\s1 ಯೇಸು ದೇವರು ಆರಿಸಿಕೊಂಡ ಸೇವಕ
|
|
\s5
|
|
\p
|
|
\v 15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
|
|
\v 16 ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
|
|
\v 17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,
|
|
\s5
|
|
\v 18
|
|
\f +
|
|
\fr 12:18
|
|
\ft ಯೆಶಾ. 42:1-4:
|
|
\f* <<ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
|
|
\s5
|
|
\v 19 ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.
|
|
\v 20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
|
|
\v 21 ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.>>
|
|
\s1 ಯೇಸು ಮತ್ತು ಬೆಲ್ಜೆಬೂಲನು
|
|
\r (ಮಾರ್ಕ 3:22-30; ಲೂಕ 11:14-32; 12:10)
|
|
\s5
|
|
\p
|
|
\v 22 ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
|
|
\v 23 ಅದಕ್ಕೆ ಜನರೆಲ್ಲರೂ ಬೆರಗಾಗಿ, <<ಈತನು ದಾವೀದನ ಕುಮಾರನೇ ಇರಬಹುದೇನೋ>> ಎಂದು ಮಾತನಾಡಿಕೊಳ್ಳುತ್ತಿದ್ದರು.
|
|
\s5
|
|
\v 24 ಆದರೆ ಫರಿಸಾಯರು ಅದನ್ನು ಕೇಳಿ, <<ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ>> ಅಂದರು.
|
|
\v 25 ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, <<ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇಧ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
|
|
\s5
|
|
\v 26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
|
|
\v 27 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
|
|
\s5
|
|
\v 28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
|
|
\v 29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
|
|
\v 30
|
|
\f +
|
|
\fr 12:30
|
|
\ft ಮಾರ್ಕ. 9:40; ಲೂಕ. 9:50.
|
|
\f* ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
|
|
\s5
|
|
\v 31 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
|
|
\v 32 ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.
|
|
\s1 ಮರ ಮತ್ತು ಫಲ
|
|
\s5
|
|
\p
|
|
\v 33
|
|
\f +
|
|
\fr 12:33
|
|
\ft ಮತ್ತಾ. 7:16-20; ಲೂಕ. 6:44:
|
|
\f* ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
|
|
\v 34 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?
|
|
\f +
|
|
\fr 12:34
|
|
\ft ಲೂಕ. 6:45:
|
|
\f* ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
|
|
\v 35 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
|
|
\s5
|
|
\v 36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
|
|
\v 37 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ>> ಅಂದನು.
|
|
\s1 ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು
|
|
\s5
|
|
\p
|
|
\v 38 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, <<ಬೋಧಕನೇ,
|
|
\f +
|
|
\fr 12:38
|
|
\ft ಮಾರ್ಕ. 8:11, 12; ಯೋಹಾ. 2:18; 1 ಕೊರಿ. 1:22:
|
|
\f* ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು>> ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
|
|
\v 39
|
|
\f +
|
|
\fr 12:39
|
|
\ft ಅಂದರೆ, ದೇವದ್ರೋಹಿಯಾದ.
|
|
\f* <<ವ್ಯಭಿಚಾರಿಣಿ ಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
|
|
\v 40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
|
|
\s5
|
|
\v 41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
|
|
\s5
|
|
\v 42 ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
|
|
\s ವಿಶ್ರಾಂತಿ ಸಿಕ್ಕದ ದೆವ್ವ
|
|
\s5
|
|
\p
|
|
\v 43 <<ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
|
|
\v 44 ವಿಶ್ರಾಂತಿ ಸಿಕ್ಕದ ಕಾರಣ ಅದು, <ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ> ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
|
|
\v 45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು>> ಅಂದನು.
|
|
\s1 ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
|
|
\r (ಮಾರ್ಕ 3:31-35; ಲೂಕ 8:19-21)
|
|
\s5
|
|
\p
|
|
\v 46 ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
|
|
\v 47 ಆಗ ಒಬ್ಬನು, <<ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ>> ಅಂದನು.
|
|
\s5
|
|
\v 48 ಅದಕ್ಕಾತನು ಆ ಮಾತು ಹೇಳಿದವನಿಗೆ, <<ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?>> ಎಂದು ಹೇಳಿ
|
|
\v 49 ಶಿಷ್ಯರ ಕಡೆಗೆ ಕೈ ಚಾಚಿ, <<ಇಗೋ ನನ್ನ ತಾಯಿ, ನನ್ನ ಸಹೋದರರು.
|
|
\v 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ>> ಆಗಿದ್ದಾರೆ ಅಂದನು.
|
|
|
|
\s5
|
|
\c 13
|
|
\s1 ಪರಲೋಕ ರಾಜ್ಯವನ್ನು ಕುರಿತ ಸಾಮ್ಯಗಳು
|
|
\r (ಮಾರ್ಕ 4:1-20,30-34; ಲೂಕ 8:4-15; 13:18,19)
|
|
\s1 ಬಿತ್ತುವವನ ಸಾಮ್ಯ
|
|
\p
|
|
\v 1 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
|
|
\v 2 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
|
|
\s5
|
|
\v 3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
|
|
\p
|
|
\v 4 <<ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
|
|
\v 5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.
|
|
\v 6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.
|
|
\s5
|
|
\v 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
|
|
\v 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
|
|
\v 9 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.
|
|
\s5
|
|
\p
|
|
\v 10 ತರುವಾಯ ಆತನ ಶಿಷ್ಯರು ಬಂದು, <<ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?>> ಎಂದು ಕೇಳಿದರು.
|
|
\v 11 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
|
|
\v 12 ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
|
|
\s5
|
|
\v 13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ಗ್ರಹಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
|
|
\q1
|
|
\v 14 <<ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನಂದರೆ,
|
|
\q1
|
|
\f +
|
|
\fr 13:14
|
|
\ft ಯೆಶಾ. 6:9, 10:
|
|
\f* <ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.
|
|
\q1 ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
|
|
\s5
|
|
\q1
|
|
\v 15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು.
|
|
\q1 ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ,
|
|
\q1 ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು
|
|
\q1 ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ> >> ಎಂಬುದೇ.
|
|
\m
|
|
\s5
|
|
\v 16 <<ಆದರೆ ನೀವು ಧನ್ಯರು ಏಕೆಂದರೆ
|
|
\f +
|
|
\fr 13:16
|
|
\ft ಲೂಕ. 10:23, 24:
|
|
\f* ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
|
|
\v 17 ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\f +
|
|
\fr 13:17
|
|
\ft ಯೋಹಾ. 8:56; ಇಬ್ರಿ. 11:13; 1 ಪೇತ್ರ. 1:10, 11.
|
|
\f* ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
|
|
\s5
|
|
\p
|
|
\v 18 <<ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.
|
|
\v 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ
|
|
\f +
|
|
\fr 13:19
|
|
\ft ಮೂಲ:ಕೆಡುಕನು
|
|
\f* ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
|
|
\s5
|
|
\v 20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
|
|
\v 21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
|
|
\s5
|
|
\v 22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
|
|
\v 23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ.>> ಎಂದು ಹೇಳಿದನು.
|
|
\s1 ಗೋದಿ ಮತ್ತು ಕಳೆಗಳ ಸಾಮ್ಯ
|
|
\s5
|
|
\p
|
|
\v 24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
|
|
\v 25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.
|
|
\v 26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.
|
|
\s5
|
|
\v 27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, <ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?> ಎಂದು ಕೇಳಿದರು.
|
|
\v 28 ಅದಕ್ಕೆ ಅವನು, <ಇದು ವೈರಿ ಮಾಡಿದ ಕೆಲಸ> ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, <ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮ್ಮಗೆ ಇಷ್ಟವಿದೆಯೋ?> ಎಂದು ಕೇಳಿದರು.
|
|
\s5
|
|
\v 29 ಅವರಿಗೆ ಅವನು, <ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.
|
|
\v 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,
|
|
\f +
|
|
\fr 13:30
|
|
\ft ಮತ್ತಾ. 3:12:
|
|
\f* ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು> >> ಅಂದನು.
|
|
\s1 ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ
|
|
\s5
|
|
\p
|
|
\v 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
|
|
\v 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ>> ಎಂದು ಹೇಳಿದನು.
|
|
\s5
|
|
\v 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.>>
|
|
\s5
|
|
\p
|
|
\v 34 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
|
|
\v 35 ಹೀಗೆ,
|
|
\f +
|
|
\fr 13:35
|
|
\ft ಕೀರ್ತ. 78:2:
|
|
\f* <<ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು>> ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
|
|
\s5
|
|
\v 36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
|
|
\v 37 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
|
|
\v 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ
|
|
\f +
|
|
\fr 13:38
|
|
\ft ಮತ್ತಾ. 13:43; 8:12; ಮಾರ್ಕ 16:15; ಕೊಲೊ. 1:6:
|
|
\f* ರಾಜ್ಯದ ಮಕ್ಕಳು.
|
|
\v 39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.
|
|
\s5
|
|
\v 40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.
|
|
\v 41
|
|
\f +
|
|
\fr 13:41
|
|
\ft ಮತ್ತಾ. 18:7; 24:31.
|
|
\f* ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
|
|
\v 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
|
|
\v 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
|
|
\s1 ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ
|
|
\s5
|
|
\p
|
|
\v 44 <<ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
|
|
\v 45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
|
|
\v 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
|
|
\s5
|
|
\p
|
|
\v 47 <<ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
|
|
\v 48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
|
|
\s5
|
|
\v 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ
|
|
\f + ಮತ್ತಾ. 13:49; ಮಾರ್ಕ. 9:43:
|
|
\f* ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.
|
|
\v 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
|
|
\s5
|
|
\p
|
|
\v 51 <<ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ>> ಎಂದು ಕೇಳಲು, ಶಿಷ್ಯರು, <<ಅರ್ಥವಾಯಿತು>> ಅಂದರು.
|
|
\v 52 ಆಗ ಆತನು ಅವರಿಗೆ, <<ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ>> ಎಂದು ಹೇಳಿದನು.
|
|
\p
|
|
\v 53 ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.
|
|
\s1 ಯೇಸುವಿನನ್ನು ನಾಜರೆತ್ ಊರಿನವರು ತಾತ್ಸಾರ ಮಾಡಿದ್ದು
|
|
\r (ಮಾರ್ಕ 6:1-6; ಲೂಕ 4:15-30)
|
|
\s5
|
|
\p
|
|
\v 54 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, <<ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
|
|
\v 55 ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
|
|
\v 56 ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?>> ಎಂದು ಅಂದುಕೊಂಡು
|
|
\f +
|
|
\fr 13:56
|
|
\ft ಮತ್ತಾ. 11:6:
|
|
\f* ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
|
|
\s5
|
|
\v 57 ಆದರೆ ಯೇಸುವು ಅವರಿಗೆ
|
|
\f +
|
|
\fr 13:57
|
|
\ft ಯೋಹಾ. 4:44
|
|
\f* <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ>> ಅಂದನು.
|
|
\v 58 ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.
|
|
|
|
\s5
|
|
\c 14
|
|
\s1 ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು
|
|
\r (ಮಾರ್ಕ 6:14-29; ಲೂಕ 9:7-9)
|
|
\p
|
|
\v 1 ಆ ಕಾಲದಲ್ಲಿ
|
|
\f +
|
|
\fr 14:1
|
|
\ft ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತದ ನಾಲ್ಕನೆಯ ಒಂದು ಭಾಗದ ಅಧಿಪತಿ.
|
|
\f* ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
|
|
\v 2 ತನ್ನ ಸೇವಕರಿಗೆ, <<ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ>> ಎಂದು ಹೇಳಿದನು.
|
|
\s5
|
|
\v 3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
|
|
\v 4 ಯೋಹಾನನು ಹೆರೋದನಿಗೆ <<ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು>> ಹೇಳುತ್ತಿದ್ದನು.
|
|
\v 5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
|
|
\s5
|
|
\v 6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
|
|
\v 7 ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಅಣೆಯಿಟ್ಟು ವಾಗ್ದಾನ ಮಾಡಿದನು.
|
|
\s5
|
|
\v 8 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, <<ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು>> ಅಂದಳು.
|
|
\v 9 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಅಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
|
|
\s5
|
|
\v 10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
|
|
\v 11 ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
|
|
\v 12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
|
|
\s1 ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು
|
|
\r (ಮಾರ್ಕ 6:30-44; ಲೂಕ 9:10-17; ಯೋಹಾ. 6:1-14)
|
|
\s5
|
|
\p
|
|
\v 13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
|
|
\v 14 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
|
|
\s5
|
|
\v 15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, <<ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು>> ಎಂದು ಹೇಳಿದರು.
|
|
\s5
|
|
\v 16 ಆದರೆ ಯೇಸು, <<ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ>> ಅಂದನು.
|
|
\v 17 ಅದಕ್ಕವರು, <<ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ>> ಅನ್ನಲಾಗಿ,
|
|
\v 18 ಆತನು, <<ಅವುಗಳನ್ನು ನನಗೆ ತಂದು ಕೊಡಿರಿ>> ಅಂದನು.
|
|
\s5
|
|
\v 19 ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರ ಕೊಟ್ಟರು.
|
|
\v 20 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
|
|
\v 21 ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
|
|
\s1 ಯೇಸು ಸಮುದ್ರದ ಮೇಲೆ ನಡೆದದ್ದು
|
|
\r (ಮಾರ್ಕ 6:45-52; ಯೋಹಾ. 6:15-21)
|
|
\s5
|
|
\p
|
|
\v 22 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
|
|
\v 23 ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ
|
|
\f +
|
|
\fr 14:23
|
|
\ft ಲೂಕ. 6:12; 9:18, 28; 11:1.
|
|
\f* ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
|
|
\v 24 ಆದರೆ ದೋಣಿಯು
|
|
\f +
|
|
\fr 14:24
|
|
\ft ಮೂಲ:ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ
|
|
\f* ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
|
|
\s5
|
|
\v 25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
|
|
\v 26 ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು <<ಭೂತವೆಂದು>> ದಿಗಿಲುಬಿದ್ದು ಭಯದಿಂದ ಕೂಗಿದರು.
|
|
\v 27 ಕೂಡಲೆ ಯೇಸು ಮಾತನಾಡಿ ಅವರಿಗೆ, <<ಧೈರ್ಯವಾಗಿರಿ ನಾನೇ ಭಯಪಡಬೇಡಿರಿ>> ಎಂದು ಹೇಳಿದನು.
|
|
\s5
|
|
\v 28 ಅದಕ್ಕೆ ಪೇತ್ರನು, <<ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು>> ಅನ್ನಲು,
|
|
\v 29 ಆತನು, <<ಬಾ>> ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
|
|
\v 30 ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, <<ಕರ್ತನೇ, ನನ್ನನ್ನು ಕಾಪಾಡು>> ಎಂದು ಕೂಗಿಕೊಂಡನು.
|
|
\s5
|
|
\v 31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, <<ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ>> ಎಂದು ಹೇಳಿದನು.
|
|
\v 32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
|
|
\v 33 ಆಗ ದೋಣಿಯಲ್ಲಿದ್ದ ಶಿಷ್ಯರು
|
|
\f +
|
|
\fr 14:33
|
|
\ft ಮತ್ತಾ. 8:29; 16:16; ಮಾರ್ಕ. 1:1; ಲೂಕ. 1:35; ಕೀರ್ತ. 2:7:
|
|
\f* <<ನಿಜವಾಗಿ ನೀನು ದೇವಕುಮಾರನು>> ಎಂದು ಹೇಳಿ ಆತನನ್ನು ಆರಾಧಿಸಿದರು.
|
|
\s5
|
|
\p
|
|
\v 34 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
|
|
\v 35 ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
|
|
\v 36 ಅವರು ಆತನನ್ನು
|
|
\f +
|
|
\fr 14:36
|
|
\ft ಮತ್ತಾ. 9:20; ಲೂಕ. 6:19:
|
|
\f* ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
|
|
|
|
\s5
|
|
\c 15
|
|
\s1 ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು
|
|
\r (ಮಾರ್ಕ 7:1-23)
|
|
\p
|
|
\v 1 ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
|
|
\v 2 <<ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ>> ಎಂದು ಕೇಳಿದರು.
|
|
\v 3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
|
|
\s5
|
|
\v 4 ಹೇಗಂದರೆ
|
|
\f +
|
|
\fr 15:4
|
|
\ft ವಿಮೋ. 20:12:
|
|
\f* <ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ
|
|
\f +
|
|
\fr 15:4
|
|
\ft ವಿಮೋ. 21:17:
|
|
\f* ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ> ದೇವರು ಹೇಳಿದ್ದಾನೆ.
|
|
\v 5 ನೀವೋ, <ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯಾನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ> ಎಂದು ಹೇಳಿದರೆ,
|
|
\v 6 ಅವನು <ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ> ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
|
|
\s5
|
|
\v 7 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
|
|
\q1
|
|
\v 8
|
|
\f +
|
|
\fr 15:8
|
|
\ft ಯೆಶಾ. 29:13:
|
|
\f* <<ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ
|
|
\q1 ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
|
|
\q1
|
|
\v 9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು>> ಎಂಬುದೇ.
|
|
\m
|
|
\s5
|
|
\v 10 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಕೇಳಿ ತಿಳಿದುಕೊಳ್ಳಿರಿ,
|
|
\v 11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು>> ಎಂದು ಹೇಳಿದನು.
|
|
\s5
|
|
\p
|
|
\v 12 ಆಗ ಶಿಷ್ಯರು ಬಂದು ಆತನನ್ನು, <<ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ>> ಎಂದು ಕೇಳಿದರು.
|
|
\v 13 ಅದಕ್ಕೆ ಆತನು <<ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲ್ಪಡುವವು.
|
|
\v 14 ಅವರನ್ನು ಬಿಡಿರಿ, ಅವರು
|
|
\f +
|
|
\fr 15:14
|
|
\ft ಮತ್ತಾ. 23:16, 24; ಲೂಕ. 6:39.
|
|
\f* ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು>> ಅಂದನು.
|
|
\s5
|
|
\v 15 ಆಗ ಪೇತ್ರನು, <<ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು>> ಅಂದನು,
|
|
\v 16 ಅದಕ್ಕೆ ಯೇಸು, <<ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
|
|
\v 17 ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
|
|
\s5
|
|
\v 18 ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
|
|
\v 19 ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
|
|
\v 20 ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ.>> ಅಂದನು.
|
|
\s1 ಕಾನಾನ್ಯ ಸ್ತ್ರೀಯ ನಂಬಿಕೆ
|
|
\r (ಮಾರ್ಕ 7:24-30)
|
|
\s5
|
|
\p
|
|
\v 21 ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತಗಳಿಗೆ ಹೋದನು.
|
|
\v 22 ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, <<ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ>> ಎಂದು ಕೂಗಿಕೊಂಡಳು.
|
|
\v 23 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, <<ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು>> ಎಂದು ಆತನನ್ನು ಬೇಡಿಕೊಂಡರು.
|
|
\s5
|
|
\v 24 ಆದರೆ ಯೇಸು ಹೇಳಿದ್ದೇನೆಂದರೆ
|
|
\f +
|
|
\fr 15:24
|
|
\ft ಮತ್ತಾ. 10:6:
|
|
\f* <<ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ>> ಅಂದನು.
|
|
\v 25 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, <<ಕರ್ತನೇ ನನಗೆ ಸಹಾಯಮಾಡು>> ಅಂದಳು.
|
|
\v 26 ಅದಕ್ಕಾತನು, <<ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ>> ಎಂದು ಉತ್ತರಕೊಟ್ಟನು.
|
|
\s5
|
|
\v 27 ಆಕೆಯು, <<ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ>> ಅಂದಳು.
|
|
\v 28 ಆಗ ಯೇಸು ಆಕೆಗೆ, <<ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ>> ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
|
|
\s1 ಯೇಸು ಅನೇಕರನ್ನು ಸ್ವಸ್ಥಮಾಡಿದ್ದು
|
|
\s5
|
|
\p
|
|
\v 29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
|
|
\v 30 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
|
|
\v 31 ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
|
|
\s1 ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು
|
|
\r (ಮಾರ್ಕ 8:1-10)
|
|
\s5
|
|
\p
|
|
\v 32 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು>> ಎಂದು ಹೇಳಿದನು.
|
|
\v 33 ಶಿಷ್ಯರು ಆತನಿಗೆ, <<ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?>> ಎಂದು ಹೇಳಿದರು.
|
|
\v 34 ಅದಕ್ಕೆ ಯೇಸು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?>> ಎಂದು ಕೇಳಿದ್ದಕ್ಕೆ ಅವರು, <<ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ>> ಅಂದರು.
|
|
\v 35 ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
|
|
\s5
|
|
\v 36 ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
|
|
\v 37 ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
|
|
\v 38 ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
|
|
\v 39 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.
|
|
|
|
\s5
|
|
\c 16
|
|
\s1 ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು
|
|
\r (ಮಾರ್ಕ 9:11-21)
|
|
\p
|
|
\v 1 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
|
|
\v 2
|
|
\f +
|
|
\fr 16:2
|
|
\ft ಕೆಲವು ಪ್ರತಿಗಳಲ್ಲಿ 2 ನೆಯ 3 ನೆಯ ವಚನಗಳು ಇಲ್ಲ.
|
|
\f* ಆತನು ಅವರಿಗೆ, << <ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ> ಅನ್ನುತ್ತೀರಿ.
|
|
\s5
|
|
\v 3 ಬೆಳಗ್ಗೆ, <ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ> ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
|
|
\v 4
|
|
\f +
|
|
\fr 16:4
|
|
\ft ಅಂದರೆ ದೇವದ್ರೋಹಿಯಾದ.
|
|
\f* ವ್ಯಭಿಚಾರಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ>> ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
|
|
\s1 ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
|
|
\s5
|
|
\p
|
|
\v 5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
|
|
\v 6 ಯೇಸು ಅವರಿಗೆ <<ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ
|
|
\f +
|
|
\fr 16:6
|
|
\ft 1 ಕೊರಿ. 5:6-8; ಗಲಾ. 5:9.
|
|
\f* ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ>> ಎಂದು ಹೇಳಿದನು.
|
|
\v 7 ಅದಕ್ಕೆ ಅವರು, <<ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ>> ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
|
\v 8 ಯೇಸು ಅದನ್ನು ತಿಳಿದು, <<ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
|
|
\s5
|
|
\v 9 ಆ ಐದು ರೊಟ್ಟಿಗಳನ್ನು
|
|
\f +
|
|
\fr 16:9
|
|
\ft ಮತ್ತಾ. 14:17-21.
|
|
\f* ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
|
|
\v 10 ಇಲ್ಲವೆ ಆ
|
|
\f +
|
|
\fr 16:10
|
|
\ft ಮತ್ತಾ. 15:34-38:
|
|
\f* ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
|
|
\s5
|
|
\v 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ>> ಅಂದನು.
|
|
\v 12 ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
|
|
\s1 ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
|
|
\r (ಮಾರ್ಕ 8:27-29; ಲೂಕ 9:18-21)
|
|
\s5
|
|
\p
|
|
\v 13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತಕ್ಕೆ ಬಂದಾಗ, <<ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ>> ಎಂದು ತನ್ನ ಶಿಷ್ಯರನ್ನು ಕೇಳಿದನು.
|
|
\v 14 ಅವರು, <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು>> ಅನ್ನುತ್ತಾರೆ ಎಂದು ಹೇಳಿದರು.
|
|
\v 15 ಆತನು ಅವರನ್ನು, <<ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?>>
|
|
\v 16 ಆಗ ಸೀಮೋನ ಪೇತ್ರನು,
|
|
\f +
|
|
\fr 16:16
|
|
\ft ಮತ್ತಾ. 27:54; ಯೋಹಾ. 6:69.
|
|
\f* <<ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು>> ಎಂದು ಉತ್ತರ ಕೊಟ್ಟನು.
|
|
\s5
|
|
\v 17 ಅದಕ್ಕೆ ಯೇಸು, <<ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು>> ಎಂದು ಹೇಳಿದನು.
|
|
\v 18 ನಾನು ಇದನ್ನು ಸಹ ನಿನಗೆ ಹೇಳುತ್ತೇನ, <<ನೀನು
|
|
\f +
|
|
\fr 16:18
|
|
\ft ಮೂಲ:ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು.
|
|
\f* ಪೇತ್ರನು, ಈ
|
|
\f +
|
|
\fr 16:18
|
|
\ft ಮೂಲ:ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ. 2:20.
|
|
\f* ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
|
|
\s5
|
|
\v 19 ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.
|
|
\f +
|
|
\fr 16:19
|
|
\ft ಮತ್ತಾ. 18:18; ಯೋಹಾ. 20:23:
|
|
\f* ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು>> ಅಂದನು.
|
|
\v 20 ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
|
|
\s1 ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
|
|
\r (ಮಾರ್ಕ 8:31—9:1; ಲೂಕ 9:22-27)
|
|
\s5
|
|
\p
|
|
\v 21 ಅಂದಿನಿಂದ
|
|
\f +
|
|
\fr 16:21
|
|
\ft ಕೆಲವು ಪ್ರತಿಗಳಲ್ಲಿ ಯೇಸು ಕ್ರಿಸ್ತನೆಂಬ ಪದವಿದೆ.
|
|
\f* ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
|
|
\v 22 ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, <<ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು>> ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
|
|
\v 23 ಆತನು ತಿರುಗಿಕೊಂಡು ಪೇತ್ರನಿಗೆ, <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳಹಾಗೇ ಯೋಚಿಸದೇ ಮನುಷ್ಯರ ವಿಷಯಗಳಂತ್ತೆ ಯೋಚಿಸುತ್ತೀ>> ಎಂದು ಹೇಳಿದನು.
|
|
\s5
|
|
\v 24 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ
|
|
\f +
|
|
\fr 16:24
|
|
\ft ಮತ್ತಾ. 10:38, 39; ಲೂಕ. 14:27; 17:33; ಯೋಹಾ. 12:25:
|
|
\f* <<ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
|
|
\v 25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
|
|
\v 26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
|
|
\s5
|
|
\v 27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
|
|
\p
|
|
\v 28 <<ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ>> ಅಂದನು.
|
|
|
|
\s5
|
|
\c 17
|
|
\s1 ಯೇಸು ರೂಪಾಂತರಗೊಂಡಿದ್ದು
|
|
\r (ಮಾರ್ಕ 9:2-13; ಲೂಕ 9:28-36)
|
|
\p
|
|
\v 1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
|
|
\v 2 ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
|
|
\s5
|
|
\v 3 ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
|
|
\v 4 ಆಗ ಪೇತ್ರನು ಯೇಸುವಿಗೆ, <<ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು>> ಎಂದು ಹೇಳಿದನು.
|
|
\s5
|
|
\v 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ
|
|
\f +
|
|
\fr 17:5
|
|
\ft ಮತ್ತಾ. 3:17:
|
|
\f* <<ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ>> ಎಂದು ಹೇಳುವ ವಾಣಿವುಂಟಾಯಿತು.
|
|
\v 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
|
|
\v 7 ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, ಏಳಿರಿ ಹೆದರಬೇಡಿರಿ ಅಂದನು.
|
|
\v 8 ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
|
|
\s5
|
|
\p
|
|
\v 9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, <<ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದೆಂದು>> ಆಜ್ಞಾಪಿಸಿದನು.
|
|
\v 10 ಆಗ ಆತನ ಶಿಷ್ಯರು, <<ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?>> ಎಂದು ಆತನನ್ನು ಕೇಳಿದರು.
|
|
\s5
|
|
\v 11 ಯೇಸು ಅವರಿಗ,
|
|
\f +
|
|
\fr 17:11
|
|
\ft ಮಲಾ. 4:5, 6:
|
|
\f* <<ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
|
|
\v 12 ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು>> ಎಂದು ಉತ್ತರ ಕೊಟ್ಟನು.
|
|
\v 13 ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
|
|
\s1 ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು
|
|
\r (ಮಾರ್ಕ 9:14-29; ಲೂಕ 9:37-42)
|
|
\s5
|
|
\p
|
|
\v 14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
|
|
\v 15 <<ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
|
|
\v 16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ>> ಅಂದನು.
|
|
\s5
|
|
\v 17 ಅದಕ್ಕೆ ಯೇಸು, <<ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ>> ಅಂದನು.
|
|
\v 18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
|
|
\s5
|
|
\v 19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?>>
|
|
\v 20 ಆತನು ಅವರಿಗೆ, <<ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.
|
|
\f +
|
|
\fr 17:20
|
|
\ft ಮತ್ತಾ. 21:21; ಮಾರ್ಕ. 11:23:
|
|
\f* ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
|
|
\v 21 ನೀವು ಈ ಬೆಟ್ಟಕ್ಕೆ, <ಇಲ್ಲಿಂದ ಅಲ್ಲಿಗೆ ಸರಿದು ಹೋಗು> ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
|
|
\f +
|
|
\fr 17:21
|
|
\ft ಮೂಲ ಗ್ರಂಥದಲ್ಲಿ ಇಲ್ಲ. ಆದರೆ ಕೆಲವು ಪ್ರತಿಗಳಲ್ಲಿ, ಆತನು, ಈ ರೀತಿಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
|
|
\f*
|
|
\s1 ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು
|
|
\r (ಮಾರ್ಕ 9:30-32; ಲೂಕ 9:43-45)
|
|
\s5
|
|
\p
|
|
\v 22 ಅವರು
|
|
\f +
|
|
\fr 17:22
|
|
\ft ಲೂಕ. 2:44 ನೋಡಿರಿ; ಕೆಲವು ಪ್ರತಿಗಳಲ್ಲಿ, ಗಲಿಲಾಯದಲ್ಲಿರುವಾಗ ಎಂದು ಬರೆದದೆ.
|
|
\f* ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, <<ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
|
|
\v 23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
|
|
\s1 ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು
|
|
\s5
|
|
\p
|
|
\v 24 ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ
|
|
\f +
|
|
\fr 17:24
|
|
\ft ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ. 30. 13; 38:26:
|
|
\f* ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, <<ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ>> ಎಂದು ಕೇಳಲು, <<ಹೌದು ಕಟ್ಟುವನು>> ಅಂದನು.
|
|
\v 25 ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನುಗೆ, <<ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?>> ಎಂದು ಕೇಳಿದನು.
|
|
\s5
|
|
\v 26 ಅವನು, <<ಪರರಿಂದ>> ಎಂದು ಉತ್ತರ ಕೊಡಲು, ಯೇಸು ಅವನಿಗೆ, <<ಹಾಗಾದರೆ ಪ್ರಜೆಗಳು ಅದ್ದನ್ನು ಕೊಡಬೇಕಾಗಿಲ್ಲವೇ.
|
|
\v 27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು
|
|
\f +
|
|
\fr 17:27
|
|
\ft ಮೂಲ: ಶೆಕೆಲ್
|
|
\f* ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು>> ಎಂದು ಹೇಳಿದನು.
|
|
|
|
\s5
|
|
\c 18
|
|
\s1 ದೇವರ ರಾಜ್ಯದಲ್ಲಿ ದೊಡ್ಡವನು
|
|
\r (ಮಾರ್ಕ 9:33-37; ಲೂಕ 9:46-48)
|
|
\p
|
|
\v 1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, <<ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?>> ಎಂದು ಕೇಳಿದರು.
|
|
\v 2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
|
|
\v 3 ಅವರಿಗೆ, <<ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\v 4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
|
|
\v 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
|
|
\v 6 ಆದರೆ
|
|
\f +
|
|
\fr 18:6
|
|
\ft ಲೂಕ. 17:1, 2:
|
|
\f* ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
|
|
\s5
|
|
\p
|
|
\v 7 <<ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
|
|
\v 8
|
|
\f +
|
|
\fr 18:8
|
|
\ft ಮತ್ತಾ. 5:29, 30; ಮಾರ್ಕ. 9:43-47:
|
|
\f* ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
|
\s5
|
|
\v 9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
|
\s5
|
|
\v 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ
|
|
\f +
|
|
\fr 18:10
|
|
\ft ಕೀರ್ತ. 34:7; ಲೂಕ. 1:19; ಇಬ್ರಿ. 1:14:
|
|
\f* ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
|
|
\v 11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
|
|
\f +
|
|
\fr 18:11
|
|
\ft 11 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಲೂಕ. 19:10 ನೋಡಿರಿ. ಮನುಷ್ಯಕುಮಾರನು ಕಳೆದುಹೋಗಿರುವುದನ್ನು ಹುಡುಕಿ ರಕ್ಷಿಸುವುದಕೋಸ್ಕರ ಬಂದನು.
|
|
\f*
|
|
\s1 ಕಳೆದುಹೋದ ಕುರಿಯ ಸಾಮ್ಯ
|
|
\s5
|
|
\p
|
|
\v 12 <<ನಿಮ್ಮಲ್ಲಿ
|
|
\f +
|
|
\fr 18:12
|
|
\ft ಲೂಕ. 15:4, 7:
|
|
\f* ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
|
|
\v 13 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
|
|
\s1 ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
|
|
\s5
|
|
\p
|
|
\v 15 ನಿನ್ನ ಸಹೋದರನು ನಿನ್ನ ವಿರುದ್ಧ
|
|
\f +
|
|
\fr 18:15
|
|
\ft ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ.
|
|
\f* ತಪ್ಪು ಮಾಡಿದರೆ, ಹೋಗಿ ನೀನೂ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
|
|
\v 16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ
|
|
\f +
|
|
\fr 18:16
|
|
\ft ಧರ್ಮೋ. 19:15:
|
|
\f* ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರದುಕೊಂಡು ಹೋಗು.
|
|
\s5
|
|
\v 17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ
|
|
\f +
|
|
\fr 18:17
|
|
\ft ಕೆಲವು ಪ್ರತಿಗಳಲ್ಲಿ, ಭ್ರಷ್ಟನಂತೆಯೂ ಎಂದು ಬರೆದದೆ.
|
|
\f* ಸುಂಕದವನಂತೆಯೂ ಇರಲಿ.
|
|
\s5
|
|
\p
|
|
\v 18 <<ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 19
|
|
\f +
|
|
\fr 18:19
|
|
\ft ಮತ್ತಾ. 7:7, 11; ಯೋಹಾ. 15:7; 16:23:
|
|
\f* ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
|
|
\v 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ>> ಅಂದನು.
|
|
\s1 ಕರುಣೆಯಿಲ್ಲದ ಸೇವಕನ ಸಾಮ್ಯ
|
|
\s5
|
|
\p
|
|
\v 21 ಆಗ ಪೇತ್ರನು ಆತನ ಬಳಿಗೆ ಬಂದು, <<ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?>> ಎಂದು ಕೇಳಿದನು.
|
|
\v 22 ಯೇಸು ಅವನಿಗೆ, <<ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
|
|
\s5
|
|
\v 23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
|
|
\v 24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ
|
|
\f +
|
|
\fr 18:24
|
|
\ft ಮೂಲ 10,000 ತಲಾಂತು; ತಲಾಂತು ಅಂದರೆ ಸುಮಾರು 3,000 ರೂಪಾಯಿ.
|
|
\f* ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
|
|
\v 25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
|
|
\s5
|
|
\v 26 ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, <ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು> ಹೇಳಿದನು.
|
|
\v 27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
|
|
\s5
|
|
\v 28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, <ನನ್ನ ಸಾಲ ತೀರಿಸು> ಎಂದು ಹೇಳಿದನು.
|
|
\v 29 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, <ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ> ಎಂದು ಬೇಡಿಕೊಂಡನು.
|
|
\s5
|
|
\v 30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
|
|
\v 31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
|
|
\s5
|
|
\v 32 ಆಗ ಅವನ ಒಡೆಯನು ಅವನನ್ನು ಕರಸಿ, <ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?.
|
|
\v 33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?> ಎಂದು ಹೇಳಿ,
|
|
\s5
|
|
\v 34 ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
|
|
\v 35
|
|
\f +
|
|
\fr 18:35
|
|
\ft ಮತ್ತಾ. 6:14, 15; ಯಾಕೋಬ 2:13:
|
|
\f* ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು>> ಅಂದನು.
|
|
|
|
\s5
|
|
\c 19
|
|
\s1 ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಭೋದಿಸಿದ್ದು
|
|
\r (ಮಾರ್ಕ 10:1-12)
|
|
\p
|
|
\v 1 ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
|
|
\v 2 ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.
|
|
\s5
|
|
\p
|
|
\v 3 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು,
|
|
\f +
|
|
\fr 19:3
|
|
\ft ಮತ್ತಾ. 5:31, 32:
|
|
\f* <<ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?>> ಎಂದು ಕೇಳಲು,
|
|
\v 4 ಆತನು ಪ್ರತ್ಯುತ್ತರವಾಗಿ, <<ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
|
|
\s5
|
|
\v 5
|
|
\f +
|
|
\fr 19:5
|
|
\ft ಆದಿ. 2:24; 1 ಕೊರಿ. 6:16:
|
|
\f* <ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?>
|
|
\v 6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಅಂದನು.
|
|
\s5
|
|
\p
|
|
\v 7 ಅದಕ್ಕೆ ಅವರು ಆತನನ್ನು,
|
|
\f +
|
|
\fr 19:7
|
|
\ft ಧರ್ಮೋ. 24:1.
|
|
\f* <<ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?>> ಎಂದು ಕೇಳಿದರು.
|
|
\v 8 ಅದಕ್ಕೆ ಯೇಸು ಅವರಿಗೆ, <<ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
|
|
\v 9 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;
|
|
\f +
|
|
\fr 19:9
|
|
\ft ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ.
|
|
\f* ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ>> ಎಂದು ನಿಮಗೆ ಹೇಳುತ್ತೇನೆ ಅಂದನು.
|
|
\s5
|
|
\v 10 ಅದಕ್ಕೆ ಶಿಷ್ಯರು ಯೇಸುವಿಗೆ, <<ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ>> ಅಂದರು.
|
|
\v 11 ಆದರೆ ಯೇಸು ಅವರಿಗೆ, <<ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
|
|
\v 12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು
|
|
\f +
|
|
\fr 19:12
|
|
\ft 1 ಕೊರಿ. 7:32:
|
|
\f* ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ>> ಎಂದು ಹೇಳಿದನು.
|
|
\s1 ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
|
|
\r (ಮಾರ್ಕ 10:13-16; ಲೂಕ 13:15-17)
|
|
\s5
|
|
\p
|
|
\v 13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
|
|
\v 14 ಆದರೆ ಯೇಸು, <<ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ>> ಎಂದು ಹೇಳಿದನು.
|
|
\v 15 ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
|
|
\s1 ಐಶ್ವರ್ಯವಂತನಾದ ಯುವಕನು
|
|
\r (ಮಾರ್ಕ 10:17-27; ಲೂಕ 18:18-27)
|
|
\s5
|
|
\p
|
|
\v 16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, <<ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?>> ಎಂದು ಕೇಳಿದನು.
|
|
\v 17 ಆತನು ಅವನಿಗೆ, <<ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.
|
|
\f +
|
|
\fr 19:17
|
|
\ft ಯಾಜ. 18:5; ನೆಹೆ. 9:29; ರೋಮಾ. 10:5; ಗಲಾ. 3:12:
|
|
\f* ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ>> ಎಂದು ಹೇಳಿದನು.
|
|
\s5
|
|
\v 18 ಅದಕ್ಕೆ ಅವನು, <<ಅವು ಯಾವುವು?>> ಎಂದು ಕೇಳಲು ಯೇಸು, <<ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.
|
|
\v 19
|
|
\f +
|
|
\fr 19:19
|
|
\ft ವಿಮೋ. 20:12-17; ಯಾಜ. 19:18; ಲೂಕ. 10:27:
|
|
\f* ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು.>> ಇವುಗಳೇ ಅಂದನು.
|
|
\s5
|
|
\v 20 ಆ ಯೌವನಸ್ಥನು ಆತನಿಗೆ, <<ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?>> ಎಂದು ಕೇಳಿದನು.
|
|
\v 21 ಯೇಸು ಅವನಿಗೆ, <<ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.
|
|
\v 22 ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
|
|
\s5
|
|
\p
|
|
\v 23 ಆಗ ಯೇಸು ತನ್ನ ಶಿಷ್ಯರಿಗೆ, << ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 24 <<ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ>> ಅಂದನು.
|
|
\s5
|
|
\v 25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, <<ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?>> ಎಂದು ಕೇಳಿದರು.
|
|
\v 26 ಯೇಸು ಅವರನ್ನು ದೃಷ್ಟಿಸಿ ನೋಡಿ
|
|
\f +
|
|
\fr 19:26
|
|
\ft ಯೋಬ. 42:2; ಮಾರ್ಕ 14:36; ಲೂಕ. 1:37:
|
|
\f* <<ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ>> ಅಂದನು.
|
|
\s1 ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ
|
|
\r (ಮಾರ್ಕ 10:28-31; ಲೂಕ 18:28-30)
|
|
\p
|
|
\v 27 ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
|
|
\s5
|
|
\v 28 ಯೇಸು ಅವರಿಗೆ, <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ
|
|
\f +
|
|
\fr 19:28
|
|
\ft ಲೂಕ. 22:30; ಪ್ರಕ. 3:21.
|
|
\f* ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
|
|
\s5
|
|
\v 29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
|
|
\v 30 ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.
|
|
|
|
\s5
|
|
\c 20
|
|
\s1 ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ
|
|
\p
|
|
\v 1 <<ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
|
|
\v 2 ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
|
|
\s5
|
|
\v 3 ಅವನು ಪುನಃ ಸುಮಾರು
|
|
\f +
|
|
\fr 20:3
|
|
\ft ಮೂಲ:ಮೂರು ಗಂಟೆಗೆ
|
|
\f* ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
|
|
\v 4 ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ> ಅಂದನು. ಆಗ ಅವರು ಕೆಲಸಕ್ಕೆ ಹೋದರು.
|
|
\s5
|
|
\v 5 ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು
|
|
\f +
|
|
\fr 20:5
|
|
\ft ಮೂಲ:ಆರು ಗಂಟೆಗೆ ಮತ್ತು ಒಂಭತ್ತು ಗಂಟೆಗೆ.
|
|
\f* ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
|
|
\v 6 ಮತ್ತೊಂದು ಸಾರಿ
|
|
\f +
|
|
\fr 20:6
|
|
\ft ಮೂಲ:ಹನ್ನೊಂದು ಗಂಟೆಗೆ.
|
|
\f* ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, <ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?> ಎಂದು ಕೇಳಿದನು.
|
|
\v 7 ಅವರು ಅವನಿಗೆ, <ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ> ಎಂದರು, ಆಗ ಅವನು ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ> ಅಂದನು.
|
|
\s5
|
|
\v 8 ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, <ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು> ಎಂದು ಹೇಳಿದನು.
|
|
\v 9 ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
|
|
\v 10 ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
|
|
\s5
|
|
\v 11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
|
|
\v 12 <ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ> ಅಂದರು.
|
|
\s5
|
|
\v 13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, <ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
|
|
\v 14 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
|
|
\s5
|
|
\v 15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿ ಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?> ಎಂದು ಹೇಳಿದನು.
|
|
\v 16 ಹೀಗೆ
|
|
\f +
|
|
\fr 20:16
|
|
\ft ಮತ್ತಾ. 19:30.
|
|
\f* ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು>> ಎಂದು ಹೇಳಿದನು.
|
|
\s1 ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
|
|
\r (ಮಾರ್ಕ 10:32-34; ಲೂಕ 18:31-35)
|
|
\s5
|
|
\p
|
|
\v 17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
|
|
\v 18 <<ನೋಡಿರಿ
|
|
\f +
|
|
\fr 20:18
|
|
\ft ಮತ್ತಾ. 16:21; ಲೂಕ. 9:22:
|
|
\f* ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
|
|
\v 19 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು
|
|
\f +
|
|
\fr 20:19
|
|
\ft ಹೋಶೇ. 6:2:
|
|
\f* ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು.
|
|
\s1 ಯಾಕೋಬ, ಯೋಹಾನರ ತಾಯಿಯ ಬೇಡಿಕೆ
|
|
\r (ಮಾರ್ಕ 10:35-45)
|
|
\s5
|
|
\p
|
|
\v 20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
|
|
\v 21 ಆತನು ಆಕೆಯನ್ನು, <<ನಿನ್ನ ಅಪೇಕ್ಷೆ ಏನು?>> ಎಂದು ಕೇಳಲು ಆಕೆ ಆತನಿಗೆ, <<ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು>> ಅಂದಳು.
|
|
\s5
|
|
\v 22 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, <<ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?>> ಎಂದು ಕೇಲಳಿದನು. ಅವರು ಆತನಿಗೆ, <<ನಮ್ಮಿಂದ ಆಗುವುದು>> ಅಂದರು.
|
|
\v 23 ಆಗ ಆತನು ಅವರಿಗೆ, <<ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು.>> ಎಂದು ಹೇಳಿದನು.
|
|
\p
|
|
\v 24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
|
|
\s5
|
|
\v 25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, <<ಅನ್ಯಜನರ
|
|
\f +
|
|
\fr 20:25
|
|
\ft ಲೂಕ. 22:25-27:
|
|
\f* ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
|
|
\v 26 ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
|
|
\v 27 ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
|
|
\v 28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು>> ಎಂದು ಹೇಳಿದನು.
|
|
\s1 ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು
|
|
\r (ಮಾರ್ಕ 10:46-52; ಲೂಕ 18:35-43)
|
|
\s5
|
|
\p
|
|
\v 29 ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
|
|
\v 30 ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, <<ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು>> ಎಂದು ಕೂಗಿಕೊಂಡರು.
|
|
\v 31 ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, <<ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು>> ಎಂದು ಗಟ್ಟಿಯಾಗಿ ಕೂಗಿಕೊಂಡರು.
|
|
\s5
|
|
\v 32 ಆಗ ಯೇಸು ನಿಂತು ಅವರನ್ನು ಕರೆದು, <<ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?>> ಎಂದು ಕೇಳಿದನು.
|
|
\v 33 ಅವರು, <<ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು>> ಅಂದರು.
|
|
\v 34 ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
|
|
|
|
\s5
|
|
\c 21
|
|
\s1 ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
|
|
\r (ಮಾರ್ಕ 11:1-11; ಲೂಕ 10:29-40; ಯೋಹಾ. 12:12-19)
|
|
\p
|
|
\v 1 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
|
|
\v 2 ಆತನು ಇಬ್ಬರು ಶಿಷ್ಯರನ್ನು ಕರೆದು, <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
|
|
\v 3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, <ಇವು ನಮ್ಮ ಕರ್ತನಿಗೆ ಬೇಕಾಗಿವೆ> ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು>> ಎಂದು ಹೇಳಿ ಕಳುಹಿಸಿದನು.
|
|
\s5
|
|
\v 4 ಪ್ರವಾದಿಯ
|
|
\f +
|
|
\fr 21:4
|
|
\ft ಯೆಶಾಯ
|
|
\f* ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,
|
|
\v 5
|
|
\f +
|
|
\fr 21:5
|
|
\ft ಯೆಶಾ. 62:11; ಜೆಕ. 9:9
|
|
\f* <<ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು>> ಹೇಳಿರಿ ಎಂಬುದು.
|
|
\s5
|
|
\v 6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
|
|
\v 7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.
|
|
\v 8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
|
|
\s5
|
|
\v 9 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು,
|
|
\q1
|
|
\f +
|
|
\fr 21:9
|
|
\ft ದಾವೀದನ ಕುಮಾರನೇ ರಕ್ಷಿಸು.
|
|
\f* <<ದಾವೀದನ ಕುಮಾರನಿಗೆ ಹೊಸನ್ನ!
|
|
\q1
|
|
\f +
|
|
\fr 21:9
|
|
\ft ಕೀರ್ತ 118:25, 26
|
|
\f* ಕರ್ತನ ಹೆಸರಿನಲ್ಲಿ ಬರುವವನು ಧನ್ಯನು!
|
|
\q1 ಮೇಲಣ ಲೋಕಗಳಲ್ಲಿ
|
|
\f +
|
|
\fr 21:9
|
|
\ft ರಕ್ಷಿಸು.
|
|
\f* ಹೊಸನ್ನ!>> ಎಂದು ಆರ್ಭಟಿಸಿದರು.
|
|
\m
|
|
\v 10 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, <<ಈತನು ಯಾರು?>> ಅಂದರು.
|
|
\v 11 ಅದಕ್ಕೆ ಆ ಗುಂಪಿನ ಜನರು, <<ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು>> ಅಂದರು.
|
|
\s1 ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು
|
|
\r (ಮಾರ್ಕ 11:11-24; ಲೂಕ 19:45-48)
|
|
\s5
|
|
\p
|
|
\v 12 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
|
|
\v 13 ಆತನು ಅವರಿಗೆ,
|
|
\f +
|
|
\fr 21:13
|
|
\ft ಯೆಶಾ. 56:7
|
|
\f* << <ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ> ಎಂದು ಬರೆದಿದೆ; ಆದರೆ
|
|
\f +
|
|
\fr 21:13
|
|
\ft ಯೆರೆ. 7:11
|
|
\f* ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ>> ಎಂದು ಹೇಳಿದನು.
|
|
\v 14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
|
|
\s5
|
|
\v 15 ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು <<ದಾವೀದನ ಕುಮಾರನಿಗೆ ಹೊಸನ್ನ>> ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
|
|
\v 16 ಆತನಿಗೆ, <<ಇವರು ಹೇಳುವುದನ್ನು ಕೇಳುತ್ತಿರುವೆಯಾ>> ಎಂದು ಹೇಳಲು ಯೇಸು, <<ಹೌದು, ಕೇಳುತ್ತಿದ್ದೇನೆ, ಆದರೆ <ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಪಡಿಸಿರುವಿ> ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?>> ಎಂದು ಕೇಳಿದನು.
|
|
\v 17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.
|
|
\s5
|
|
\p
|
|
\v 18 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
|
|
\v 19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, <<ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ>> ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
|
|
\s5
|
|
\v 20 ಶಿಷ್ಯರು ಅದನ್ನು ನೋಡಿ ಬೆರಗಾಗಿ, <<ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ>> ಎಂದು ಆಚಾರ್ಯಗೊಂಡರು.
|
|
\v 21 ಅದಕ್ಕೆ ಯೇಸು,
|
|
\f +
|
|
\fr 21:21
|
|
\ft ಮತ್ತಾ. 7:7; 17:20; ಅ. ಕೃ. 10:20; ರೋಮಾ. 4:20; ಯಾಕೋಬ 1:6
|
|
\f* <<ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು> ಎಂದು ಹೇಳಿದರೆ ಅದೂ ಆಗುವುದು.
|
|
\v 22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ>> ಅಂದನು.
|
|
\s1 ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು
|
|
\r (ಮಾರ್ಕ 11:27-12:12; ಲೂಕ 20:1-19; 14:16-24)
|
|
\s5
|
|
\p
|
|
\v 23 ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?>> ಎಂದು ಕೇಳಿದರು.
|
|
\v 24 ಯೇಸು ಅವರಿಗೆ ಹೇಳಿದ್ದೇನೆಂದರೆ, <<ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
|
|
\s5
|
|
\v 25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?>> ಅಂದನು. ಆಗ ಅವರು, << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, <ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ> ಎಂದು ನಮಗೆ ಕೇಳಿಯಾನು;
|
|
\v 26 <ಮನುಷ್ಯರಿಂದ ಬಂದಿತೆಂದು> ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ>> ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
|
\v 27 ಅನಂತರ ಅವರು, <<ನಾವರಿಯೆವು>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, <<ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
|
|
\s5
|
|
\v 28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, <ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು> ಎಂದು ಹೇಳಲು
|
|
\v 29 ಅವನು ಪ್ರತ್ಯುತ್ತರವಾಗಿ, <ನಾನು ಹೋಗುವುದಿಲ್ಲವೆಂದು> ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
|
|
\v 30 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, <ನಾನು ಹೋಗುತ್ತೇನಪ್ಪಾ> ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
|
|
\s5
|
|
\v 31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, <ಮೊಲನೆಯವನೇ> >> ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 32 ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
|
|
\s5
|
|
\p
|
|
\v 33 <<ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು
|
|
\f +
|
|
\fr 21:33
|
|
\ft ಯೆಶಾ. 5:1,2
|
|
\f* ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು
|
|
\f +
|
|
\fr 21:33
|
|
\ft ಕೋರಿಗೆ
|
|
\f* ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
|
|
\v 34 ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
|
|
\s5
|
|
\v 35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
|
|
\v 36 ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
|
|
\v 37 ಕಡೆಯಲ್ಲಿ <ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು> ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
|
|
\s5
|
|
\v 38 ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, <ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
|
|
\v 39 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
|
|
\s5
|
|
\v 40 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?>> ಅಂದನು.
|
|
\v 41 ಅವರು ಆತನಿಗೆ, <<ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು>> ಎಂದು ಹೇಳಿದರು.
|
|
\s5
|
|
\v 42 ಯೇಸು ಅವರಿಗೆ,
|
|
\f +
|
|
\fr 21:42
|
|
\ft ಕೀರ್ತ 118:22-23
|
|
\f* << <ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?>
|
|
\s5
|
|
\v 43 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
|
|
\v 44
|
|
\f +
|
|
\fr 21:44
|
|
\ft ಕೆಲವು ಪತ್ರಿಗಳಲ್ಲಿ 44 ನೆಯ ವಚನವಿಲ್ಲ; ಯೆಶಾ. 8:14-15; ದಾನಿ. 2:34-35, 44
|
|
\f* ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು>> ಎಂದು ಹೇಳಿದನು.
|
|
\s5
|
|
\v 45 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
|
|
\v 46 ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
|
|
|
|
\s5
|
|
\c 22
|
|
\s ಮದುವೆ ಔತಣದ ಸಾಮ್ಯ
|
|
\p
|
|
\v 1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ
|
|
\f +
|
|
\fr 22:1
|
|
\ft ಶಾಸ್ತ್ರಿಗಳು
|
|
\f* ಹೇಳಿದ್ದೇನೆಂದರೆ,
|
|
\v 2 <<ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
|
|
\v 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
|
|
\s5
|
|
\v 4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, <ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ> ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
|
|
\s5
|
|
\v 5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
|
|
\v 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
|
|
\v 7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
|
|
\s5
|
|
\v 8 ಆಗ ತನ್ನ ಆಳುಗಳಿಗೆ, <ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
|
|
\v 9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ> ಎಂದು ಹೇಳಿದನು.
|
|
\v 10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಜನರಿಂದ ತುಂಬಿಹೋಯಿತು.
|
|
\s5
|
|
\v 11 ಆ ಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
|
|
\v 12 ಅವನಿಗೆ <ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?> ಎಂದು ಕೇಳಲು ಅವನು ಮೌನವಾಗಿದ್ದನು.
|
|
\s5
|
|
\v 13 ಆಗ ಅರಸನು ಸೇವಕರಿಗೆ, <ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.>
|
|
\v 14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಿಕೊಳ್ಳಲ್ಪಟ್ಟವರು ಸ್ವಲ್ಪ ಜನ>> ಅಂದನು.
|
|
\s1 ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
|
|
\r (ಮಾರ್ಕ 12:13-37; ಲೂಕ 20:20-44)
|
|
\s5
|
|
\p
|
|
\v 15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
|
|
\v 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, <<ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
|
|
\v 17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು>> ಅಂದರು.
|
|
\s5
|
|
\v 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, <<ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
|
|
\v 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ>> ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
|
|
\s5
|
|
\v 20 ಆತನು, <<ಈ ಸ್ವರೂಪವು ಈ ಮುದ್ರೆಯೂ ಯಾರದು?>> ಎಂದು ಕೇಳಿದ್ದಕ್ಕೆ
|
|
\v 21 ಅವರು, <<ಕೈಸರನದು>> ಅಂದರು. ಆಗ ಆತನು ಅವರಿಗೆ,
|
|
\f +
|
|
\fr 22:21
|
|
\ft ರೋಮಾ. 13:7
|
|
\f* <<ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ>> ಎಂದು ಹೇಳಿದನು.
|
|
\v 22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
|
|
\s1 ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು
|
|
\s5
|
|
\p
|
|
\v 23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
|
|
\v 24 ಇವರು ಆತನಿಗೆ, <<ಬೋಧಕನೇ,
|
|
\f +
|
|
\fr 22:24
|
|
\ft ಧರ್ಮೋ. 25:5
|
|
\f* <ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.>
|
|
\s5
|
|
\v 25 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
|
|
\v 26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
|
|
\v 27 ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
|
|
\v 28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ>> ಎಂದು ಪ್ರಶ್ನಿಸಿದರು.
|
|
\s5
|
|
\v 29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ,
|
|
\f +
|
|
\fr 22:29
|
|
\ft ಯೋಹಾ. 20:9; 1 ಕೊರಿ. 6:14
|
|
\f* <<ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
|
|
\v 30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
|
|
\s5
|
|
\v 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
|
|
\v 32
|
|
\f +
|
|
\fr 22:32
|
|
\ft ವಿಮೋ. 3:6
|
|
\f* <ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು> ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ>> ಎಂದು ಹೇಳಿದನು.
|
|
\v 33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
|
|
\s1 ಮುಖ್ಯವಾದ ಆಜ್ಞೆ
|
|
\s5
|
|
\p
|
|
\v 34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
|
|
\v 35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
|
|
\v 36 <<ಗುರುವೇ, ಧರ್ಮನಿಯಮದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು>> ಎಂದು ಆತನನ್ನು ಕೇಳಿದ್ದಕ್ಕೆ
|
|
\s5
|
|
\v 37 ಯೇಸು ಅವನಿಗೆ,
|
|
\f +
|
|
\fr 22:37
|
|
\ft ಧರ್ಮೋ. 6:5
|
|
\f* << <ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು>
|
|
\v 38 ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
|
|
\s5
|
|
\v 39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ,
|
|
\f +
|
|
\fr 22:39
|
|
\ft ಯಾಜ. 19:18
|
|
\f* <ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು> ಎಂಬುದೇ.
|
|
\v 40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ>> ಎಂದು ಹೇಳಿದನು.
|
|
\s1 ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು
|
|
\s5
|
|
\p
|
|
\v 41 ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
|
|
\v 42 <<ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?>> ಎಂದು ಕೇಳಿದ್ದಕ್ಕೆ
|
|
\s5
|
|
\v 43 ಅವರು ಆತನಿಗೆ, <<ದಾವೀದನ ಮಗನು>> ಎಂದು ಹೇಳಿದರು. ಅದಕ್ಕೆ ಆತನು, <<ಹಾಗಾದರೆ, ದಾವೀದನೇ, ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
|
|
\q1
|
|
\v 44
|
|
\f +
|
|
\fr 22:44
|
|
\ft ಕೀರ್ತ 110:1
|
|
\f* << <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು
|
|
\q1 ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು> ಎಂದು
|
|
\q1 ಕರ್ತನು ನನ್ನ ಒಡೆಯನಿಗೆ ನುಡಿದನು.
|
|
\m
|
|
\s5
|
|
\v 45 ಈ ಮಾತಿನಲ್ಲಿ ದಾವೀದನೇ ಆತನನ್ನು <ಕರ್ತನೆಂದು> ಕರೆದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?>> ಅಂದನು.
|
|
\v 46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
|
|
|
|
\s5
|
|
\c 23
|
|
\s1 ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು
|
|
\r (ಮಾರ್ಕ 12:38-40; ಲೂಕ 20:45-47)
|
|
\p
|
|
\v 1 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
|
|
\v 2 <<ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ
|
|
\f +
|
|
\fr 23:2
|
|
\ft ಮೋಶೆಯ ಅಧಿಕಾರದಲ್ಲಿ
|
|
\f* ಕುಳಿತುಕೊಂಡಿದ್ದಾರೆ;
|
|
\v 3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
|
|
\s5
|
|
\v 4
|
|
\f +
|
|
\fr 23:4
|
|
\ft ಯಾರು ಹೊರಲಾರದಂಥ
|
|
\f* ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು
|
|
\f +
|
|
\fr 23:4
|
|
\ft ಕದಲಿಸಲೊಲ್ಲರು
|
|
\f* ಮುಟ್ಟಲೊಲ್ಲರು.
|
|
\v 5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ
|
|
\f +
|
|
\fr 23:5
|
|
\ft ಧರ್ಮೋ. 6:8; 11, 18
|
|
\f* ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
|
|
\s5
|
|
\v 6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
|
|
\v 7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ <ಗುರುಗಳೆನ್ನಿಸಿಕೊಳ್ಳುವುದು,> ಇವುಗಳೇ ಅವರಿಗೆ ಇಷ್ಟ.
|
|
\s5
|
|
\v 8 ಆದರೆ ನೀವು <ಬೋಧಕರೆನ್ನಿಸಿಕೊಳ್ಳಬೇಡಿರಿ;> ಏಕೆಂದರೆ ಕ್ರಿಸ್ತ ನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
|
|
\v 9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
|
|
\v 10 ಮತ್ತು <ಗುರುವೆಂದು> ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
|
|
\s5
|
|
\v 11 ಆದರೆ
|
|
\f +
|
|
\fr 23:11
|
|
\ft ಮತ್ತಾ. 20:26; ಮಾರ್ಕ 9:35
|
|
\f* ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
|
|
\v 12 ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
|
|
\s5
|
|
\p
|
|
\v 13 <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
|
|
\v 14 ಅಯ್ಯೋ, ಕಪಟಿಗಳಾದ
|
|
\f +
|
|
\fr 23:14
|
|
\ft 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47
|
|
\f* ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
|
|
\p
|
|
\v 15 <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.
|
|
\s5
|
|
\p
|
|
\v 16 <<ಅಯ್ಯೋ, ಕುರುಡು ಮಾರ್ಗದರ್ಶಿಗಳೇ, <ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ.
|
|
\v 17 ಕುರುಡರ್ರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
|
|
\s5
|
|
\v 18 ಮತ್ತು <ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ.
|
|
\v 19 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
|
|
\s5
|
|
\v 20 ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
|
\v 21 ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
|
\v 22 ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
|
\s5
|
|
\v 23 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದಿನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮನಿಯಮದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
|
|
\v 24 ಕುರುಡ ಮಾರ್ಗದರ್ಶಿಗಳೇ, ನೀವು
|
|
\f +
|
|
\fr 23:24
|
|
\ft ಗುಂಗರೆ
|
|
\f* ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.
|
|
\s5
|
|
\p
|
|
\v 25 <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
|
|
\v 26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.
|
|
\s5
|
|
\p
|
|
\v 27 <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
|
|
\v 28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
|
|
\s5
|
|
\v 29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
|
|
\v 30 <ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ> ಅನ್ನುತ್ತೀರಿ.
|
|
\v 31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
|
|
\s5
|
|
\v 32 ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
|
|
\v 33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
|
|
\s5
|
|
\v 34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
|
|
\v 35
|
|
\f +
|
|
\fr 23:35
|
|
\ft ಆದಿ. 4:8; 2 ಪೂರ್ವ. 24:20,21; ಪ್ರಕ. 18:24
|
|
\f* ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
|
|
\v 36 ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\s5
|
|
\p
|
|
\v 37 <<ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!
|
|
\f +
|
|
\fr 23:37
|
|
\ft ಧರ್ಮೋ. 32:11; ರೂತ 2:12
|
|
\f* ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
|
|
\v 38 ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
|
|
\v 39 ಈಗಿಂದ,
|
|
\f +
|
|
\fr 23:39
|
|
\ft ಕೀರ್ತ 118:26
|
|
\f* <ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ> >> ಅಂದನು.
|
|
|
|
\s5
|
|
\c 24
|
|
\s1 ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು
|
|
\r (ಮಾರ್ಕ 13:1-31; ಲೂಕ 21:5-33)
|
|
\p
|
|
\v 1 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
|
|
\v 2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, <<ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಅಂದನು.
|
|
\s5
|
|
\p
|
|
\v 3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, <<ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ
|
|
\f +
|
|
\fr 24:3
|
|
\ft ಕ್ರಿಸ್ತನ ಮರುಬರೋಣ
|
|
\f* ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?>> ನಮಗೆ ಹೇಳು ಅನ್ನಲು
|
|
\v 4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, <<ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
|
|
\v 5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, <ನಾನು ಕ್ರಿಸ್ತನು> ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
|
|
\s5
|
|
\v 6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
|
|
\v 7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
|
|
\v 8 ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
|
|
\s5
|
|
\p
|
|
\v 9 <<ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
|
|
\v 10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
|
|
\v 11 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
|
|
\s5
|
|
\v 12 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
|
|
\v 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
|
|
\v 14 ಇದಲ್ಲದೆ
|
|
\f +
|
|
\fr 24:14
|
|
\ft ಮತ್ತಾ. 4:23; ರೋಮಾ 10:18
|
|
\f* ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
|
|
\s5
|
|
\p
|
|
\v 15 <<ಪ್ರವಾದಿಯಾದ ದಾನಿಯೇಲನು ಹೇಳಿದಹಾಗೆ
|
|
\f +
|
|
\fr 24:15
|
|
\ft ದಾನಿ. 9:27; 11:31; 12:11
|
|
\f* ವಿನಾಶಕಾರಕ ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
|
|
\v 16 ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
|
|
\v 17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
|
|
\v 18 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
|
|
\s5
|
|
\v 19 ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ.
|
|
\v 20 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
|
|
\v 21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
|
|
\v 22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬನಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
|
|
\s5
|
|
\v 23 ಆಗ ಯಾರಾದರು ನಿಮಗೆ, <ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ> ಎಂದು ಹೇಳಿದರೆ ನಂಬಬೇಡಿರಿ.
|
|
\v 24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
|
|
\v 25 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
|
|
\s5
|
|
\v 26 ಆದಕಾರಣ ಯಾರಾದರು ನಿಮಗೆ, <ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು> ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; <ಇಗೋ ಒಳಕೋಣೆಗಳಲ್ಲಿದ್ದಾನೆಂದು> ಹೇಳಿದರೆ ನಂಬಬೇಡಿರಿ.
|
|
\v 27 ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
|
|
\v 28
|
|
\f +
|
|
\fr 24:28
|
|
\ft ಯೋಬ 39:30; ಲೂಕ 17:37
|
|
\f* ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
|
|
\s5
|
|
\p
|
|
\v 29 <<ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
|
|
\s5
|
|
\v 30 ಆಗ
|
|
\f +
|
|
\fr 24:30
|
|
\ft ಮತ್ತಾ. 24:3; 26:64; ದಾನಿ. 7:13; ಜೆಕ. 12:12; ಪ್ರಕ. 1:7
|
|
\f* ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
|
|
\v 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
|
|
\s ಅಂಜೂರ ಮರದ ದೃಷ್ಟಾಂತ
|
|
\s5
|
|
\p
|
|
\v 32 <<ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
|
|
\v 33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ
|
|
\f +
|
|
\fr 24:33
|
|
\ft ಆತನು ಹತ್ತಿರದಲ್ಲಿದ್ದಾನೆ, ಬಾಗಿಲಲ್ಲೇ ಇದ್ದಾನೆ
|
|
\f* ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
|
|
\s5
|
|
\v 34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 35
|
|
\f +
|
|
\fr 24:35
|
|
\ft ಕೀರ್ತ 102:26; 27; ಯೆಶಾ. 51:6; 1 ಪೇತ್ರ 1:25
|
|
\f* ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
|
|
\s1 ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
|
|
\r (ಮಾರ್ಕ 13:32-37; ಲೂಕ 21:34-36; 19:12-27)
|
|
\s5
|
|
\p
|
|
\v 36 <<ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
|
|
\s5
|
|
\v 37
|
|
\f +
|
|
\fr 24:37
|
|
\ft ಲೂಕ 17:26-30; 34-36
|
|
\f* ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
|
|
\v 38 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
|
|
\v 39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
|
|
\s5
|
|
\v 40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
|
|
\v 41 ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
|
|
\p
|
|
\v 42 <<ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
|
|
\s5
|
|
\v 43
|
|
\f +
|
|
\fr 24:43
|
|
\ft ಲೂಕ 12:39-46
|
|
\f* ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
|
|
\v 44 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
|
|
\s5
|
|
\v 45 ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
|
|
\v 46 ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
|
|
\v 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
|
|
\s5
|
|
\v 48 ಆದರೆ ಆ ದುಷ್ಟ ಆಳು, <ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ> ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
|
|
\v 49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದ್ದಾದರೆ,
|
|
\v 50 ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
|
|
\v 51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
|
|
|
|
\s5
|
|
\c 25
|
|
\s ಹತ್ತುಮಂದಿ ಕನ್ಯೆಯರ ಸಾಮ್ಯ
|
|
\p
|
|
\v 1 <<ಪರಲೋಕ ರಾಜ್ಯವು
|
|
\f +
|
|
\fr 25:1
|
|
\ft ದೀವಟಿಗೆಗಳನ್ನು
|
|
\f* ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
|
|
\v 2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
|
|
\v 3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
|
|
\v 4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
|
|
\s5
|
|
\v 5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
|
|
\v 6 ಆದರೆ ಅರ್ಧರಾತ್ರಿಯಲ್ಲಿ, <ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ> ಎಂಬ ಕೂಗು ಕೇಳಿಸಿತು.
|
|
\s5
|
|
\v 7 ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
|
|
\v 8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, <ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
|
|
\v 9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ> ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗಲ್ಲಾ <ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು> ಅಂದರು.
|
|
\s5
|
|
\v 10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
|
|
\v 11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, <ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ> ಅಂದರು.
|
|
\v 12 ಆದರೆ ಆತನು ಅವರಿಗೆ ಉತ್ತರವಾಗಿ, <ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅಂದನು.
|
|
\v 13
|
|
\f +
|
|
\fr 25:13
|
|
\ft ಮತ್ತಾ. 24:42
|
|
\f* ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
|
|
\s ತಲಾಂತುಗಳ ಸಾಮ್ಯ
|
|
\s5
|
|
\p
|
|
\v 14 <<ದೇವರ ರಾಜ್ಯವು ಹೇಗೆಂದರೆ
|
|
\f +
|
|
\fr 25:14
|
|
\ft ಲೂಕ 9:12-27
|
|
\f* ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
|
|
\v 15 ಅವನು ಒಬ್ಬನಿಗೆ ಐದು
|
|
\f +
|
|
\fr 25:15
|
|
\ft 3,000 ರೂಪಾಯಿ
|
|
\f* ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
|
|
\v 16 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
|
|
\s5
|
|
\v 17 ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
|
|
\v 18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗಿದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
|
|
\s5
|
|
\v 19 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
|
|
\v 20 ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು, <ಯಜಮಾನನೇ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ> ಅಂದನು.
|
|
\v 21 ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಅಂದನು.
|
|
\s5
|
|
\v 22 ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, <ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ> ಅಂದನು.
|
|
\v 23 ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಎಂದು ಹೇಳಿದನು.
|
|
\s5
|
|
\v 24 ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, <ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
|
|
\v 25 ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ> ಅಂದನು.
|
|
\s5
|
|
\v 26 ಆಗ ಅವನ ಯಜಮಾನನು ಅವನಿಗೆ, <ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
|
|
\v 27 ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
|
|
\s5
|
|
\v 28 ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
|
|
\v 29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
|
|
\v 30 ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.>
|
|
\s5
|
|
\p
|
|
\v 31 <<
|
|
\f +
|
|
\fr 25:31
|
|
\ft ಯೋವೇ. 3:12
|
|
\f* ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
|
|
\v 32 ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
|
|
\v 33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
|
|
\s5
|
|
\v 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, <ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
|
|
\v 35 ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
|
|
\v 36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ> ಎಂದು ಹೇಳುವನು.
|
|
\s5
|
|
\v 37 ಅದಕ್ಕೆ ಉತ್ತರವಾಗಿ ನೀತಿವಂತರು, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
|
|
\v 38 ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
|
|
\v 39 ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು> ಎಂದು ಕೇಳುವರು.
|
|
\v 40 ಅದಕ್ಕೆ ಉತ್ತರವಾಗಿ ಅರಸನು,
|
|
\f +
|
|
\fr 25:40
|
|
\ft ಮತ್ತಾ. 10:42
|
|
\f* <ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು.
|
|
\s5
|
|
\v 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, <ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
|
|
\v 42 ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
|
|
\v 43 ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು> ಹೇಳುವನು.
|
|
\s5
|
|
\v 44 ಅದಕ್ಕೆ ಉತ್ತರವಾಗಿ ಅವರೂ ಸಹ, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?> ಅನ್ನುವರು.
|
|
\v 45 ಆಗ ಆತನು ಉತ್ತರವಾಗಿ ಅವರಿಗೆ, <ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು.
|
|
\v 46 ಮತ್ತು ಅನೀತಿವಂತರಾದ ಇವರು
|
|
\f +
|
|
\fr 25:46
|
|
\ft ದಾನಿ. 12:2; ಯೋಹಾ. 5:29
|
|
\f* ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು>> ಎಂದು ಹೇಳಿದನು.
|
|
|
|
\s5
|
|
\c 26
|
|
\s1 ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು
|
|
\r (ಮಾರ್ಕ 14:1-11; ಲೂಕ 22:1-6; ಯೋಹಾ. 12:1-8)
|
|
\p
|
|
\v 1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, <<ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;
|
|
\v 2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು>> ಎಂದು ಹೇಳಿದನು.
|
|
\s5
|
|
\p
|
|
\v 3 ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
|
|
\v 4 ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
|
|
\v 5 <<ಆದರೂ ಹಬ್ಬದಲ್ಲಿ
|
|
\f +
|
|
\fr 26:5
|
|
\ft ಪಸ್ಕ ಹಬ್ಬ
|
|
\f* ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು>> ಎಂದು ಮಾತನಾಡಿಕೊಂಡರು.
|
|
\s1 ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯಿದದ್ದು
|
|
\s5
|
|
\p
|
|
\v 6 ಯೇಸು ಬೆಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
|
|
\v 7
|
|
\f +
|
|
\fr 26:7
|
|
\ft ಚಂದ್ರಕಾಂತಶಿಲೆಯ ಭರಣಿಯನ್ನು
|
|
\f* ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
|
|
\v 8 ಶಿಷ್ಯರು ಇದನ್ನು ಕಂಡು ಕೋಪಗೊಂಡು, <<ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?
|
|
\v 9 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ>> ಅಂದರು.
|
|
\s5
|
|
\v 10 ಯೇಸು ಅದನ್ನು ತಿಳಿದು ಅವರಿಗೆ, <<ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
|
|
\v 11 ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
|
|
\s5
|
|
\v 12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
|
|
\v 13 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ>> ಹೇಳುವರು.
|
|
\s1 ಇಸ್ಕರಿಯೋತನು ಯೇಸುವನು ಹಿಡಿದುಕೊಡಲು ಒಪ್ಪಿಕೊಂಡದ್ದು
|
|
\s5
|
|
\p
|
|
\v 14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರು ಬಳಿಗೆ ಹೋಗಿ,
|
|
\v 15 <<ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?>> ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
|
|
\v 16 ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
|
|
\s1 ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು
|
|
\r (ಮಾರ್ಕ 14:12-31; ಲೂಕ 22:7-34; ಯೋಹಾ. 13:21-26)
|
|
\s5
|
|
\p
|
|
\v 17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, <<ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ>> ಎಂದು ಕೇಲಿದರು.
|
|
\v 18 ಆತನು, <<ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, <ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ> ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ>> ಅಂದನು.
|
|
\v 19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
|
|
\s5
|
|
\p
|
|
\v 20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
|
|
\v 21 ಅವರು ಊಟಮಾಡುತ್ತಿರುವಾಗ ಆತನು, <<ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು>> ಅಂದನು.
|
|
\v 22 ಆಗ ಅವರು ಬಹಳ ದುಃಖಪಟ್ಟು, <<ಕರ್ತನೇ, ನಾನಲ್ಲವಲ್ಲಾ?>> ಎಂದು ಪ್ರತಿಯೊಬ್ಬರು ಕೇಳತೊಡಗಿದರು.
|
|
\s5
|
|
\v 23 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, <<ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.
|
|
\v 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು>> ಅಂದನು.
|
|
\v 25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, <<ಗುರುವೇ, ನಾನೋ?>> ಎಂದು ಕೇಳಲು ಯೇಸು ಅವನಿಗೆ, <<ನೀನೇ ಹಾಗೆ ಹೇಳಿದ್ದೀ>> ಎಂದು ಹೇಳಿದನು.
|
|
\s5
|
|
\v 26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, <<ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ>> ಅಂದನು.
|
|
\s5
|
|
\v 27 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, <<ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
|
|
\v 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ
|
|
\f +
|
|
\fr 26:28
|
|
\ft ಹೊಸ ಒಡಂಬಡಿಕೆಯ
|
|
\f* ಒಡಂಬಡಿಕೆಯ ರಕ್ತ.
|
|
\v 29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ>> ಅಂದನು.
|
|
\s5
|
|
\v 30 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
|
|
\p
|
|
\v 31 ಆಗ ಯೇಸು, ಅವರಿಗೆ,
|
|
\f +
|
|
\fr 26:31
|
|
\ft ಜೆಕ. 13:7
|
|
\f* <<ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.>>
|
|
\v 32 ಆದರೆ ನಾನು ಜೀವಿತನಾಗಿ ಎದ್ದ ಮೇಲೆ
|
|
\f +
|
|
\fr 26:32
|
|
\ft ಮತ್ತಾ. 28:7, 10, 16; ಮಾರ್ಕ 16:7
|
|
\f* ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.
|
|
\s5
|
|
\v 33 ಆದರೆ ಪೇತ್ರನು ಆತನಿಗೆ, <<ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ>> ಎಂದು ಉತ್ತರ ಕೊಟ್ಟನು.
|
|
\v 34 ಯೇಸು ಪೇತ್ರನಿಗೆ, <<ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ>> ಅಂದನು.
|
|
\v 35 ಪೇತ್ರನು ಆತನಿಗೆ, <<ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ>> ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
|
|
\s1 ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು
|
|
\r (ಮಾರ್ಕ 14:32-50; ಲೂಕ 22:40-53; ಯೋಹಾ. 18:1-12)
|
|
\s5
|
|
\p
|
|
\v 36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, <<ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ>> ಎಂದು ಹೇಳಿ,
|
|
\v 37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
|
|
\v 38 ಮತ್ತು ಅವರಿಗೆ, <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ>> ಎಂದು ಹೇಳಿದನು.
|
|
\s5
|
|
\v 39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು,
|
|
\f +
|
|
\fr 26:39
|
|
\ft ಇಬ್ರಿ. 5:7
|
|
\f* <<ನನ್ನ ತಂದೆಯೇ, ಸಾಧ್ಯವಾದರೆ ಈ
|
|
\f +
|
|
\fr 26:39
|
|
\ft ಕಷ್ಟಾನುಭವ
|
|
\f* ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ>> ಎಂದು ದೇವರನ್ನು ಪ್ರಾರ್ಥಿಸಿದನು.
|
|
\v 40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, <<ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
|
|
\v 41
|
|
\f +
|
|
\fr 26:41
|
|
\ft ಮಾರ್ಕ. 13:33; ಕೊಲೊ 4:2
|
|
\f* ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ>> ಎಂದು ಹೇಳಿದನು.
|
|
\s5
|
|
\v 42 ತಿರುಗಿ ಎರಡನೇ ಸಾರಿ ಹೋಗಿ, <<ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ>> ಎಂದು ದೇವರನ್ನು ಪ್ರಾರ್ಥಿಸಿದನು.
|
|
\v 43 ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.
|
|
\v 44 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
|
|
\s5
|
|
\v 45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, <<ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
|
|
\v 46 ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ>> ಎಂದು ಹೇಳಿದನು.
|
|
\s1 ಶತ್ರುಗಳು ಯೇಸುವನು ಹಿಡಿದದ್ದು
|
|
\s5
|
|
\p
|
|
\v 47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
|
|
\v 48 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ>> ಎಂದು ಮುನ್ಸೂಚನೆ ನೀಡಿದ್ದನು.
|
|
\s5
|
|
\v 49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, <<ಗುರುವೇ ನಮಸ್ಕಾರ>> ಎಂದು ಹೇಳಿ ಆತನಿಗೆ ಮುದ್ದಿಟ್ಟನು.
|
|
\v 50 ಯೇಸು ಅವನಿಗೆ, <<ಗೆಳೆಯನೇ, ನೀನು ಯಾಕೆ ಬಂದಿರುವೇ>> ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
|
|
\s5
|
|
\v 51 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
|
|
\v 52 ಆಗ ಯೇಸು ಅವನಿಗೆ, <<ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
|
|
\v 53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
|
|
\v 54 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ? ಎಂದು ಹೇಳಿದನು.
|
|
\s5
|
|
\v 55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;
|
|
\v 56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು>> ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
|
|
\s1 ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು
|
|
\r (ಮಾರ್ಕ 14:53-72; ಲೂಕ 22:54-71; ಯೋಹಾ. 18:12-27)
|
|
\s5
|
|
\p
|
|
\v 57 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
|
|
\v 58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
|
|
\s5
|
|
\v 59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
|
|
\v 60 ಅನಂತರ ಇಬ್ಬರು ಮುಂದೆ ಬಂದು,
|
|
\v 61 <<ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು <ಈ ಮನುಷ್ಯನು ಹೇಳಿದನು> >> ಅಂದರು;
|
|
\s5
|
|
\v 62 ಆಗ ಮಹಾಯಾಜಕನು ಎದ್ದು ನಿಂತು, <<ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?>> ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
|
|
\v 63 ಮಹಾಯಾಜಕನು ಯೇಸುವಿಗೆ, <<ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು>> ಅಂದನು.
|
|
\v 64 ಯೇಸು ಪ್ರತ್ಯುತ್ತರವಾಗಿ, <<ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ
|
|
\f +
|
|
\fr 26:64
|
|
\ft ಮತ್ತಾ. 16:7; ಕೀರ್ತ 110:1
|
|
\f* ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ>> ಅಂದನು.
|
|
\s5
|
|
\v 65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
|
|
\v 66 ನಿಮಗೆ ಹೇಗೆ ತೋರುತ್ತದೆ?>> ಅನ್ನಲು, <<ಇವನು ಮರಣದಂಡನೆಗೆ ಯೋಗ್ಯನು>> ಎಂದು ಅವರು ಉತ್ತರಕೊಟ್ಟರು.
|
|
\s5
|
|
\v 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
|
|
\v 68 <<ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು>> ಅಂದರು.
|
|
\s1 ಪೇತ್ರನು ಯೇಸುವಿನನ್ನು ಅರಿಯೆನೆಂದು ಹೇಳಿದ್ದು
|
|
\s5
|
|
\p
|
|
\v 69 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, <<ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು>> ಅಲ್ಲವೇ ಎನ್ನಲು.
|
|
\v 70 ಅವನು ನಿರಾಕರಿಸಿ, <<ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ>> ಎಂದು ಎಲ್ಲರ ಮುಂದೆ ಹೇಳಿದನು.
|
|
\s5
|
|
\v 71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, <<ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು>> ಎಂದು ಹೇಳಿದಳು.
|
|
\v 72 ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, <<ಆ ಮನುಷ್ಯನನ್ನು ನಾನರಿಯೆನು>> ಎಂದು ಹೇಳಿದನು.
|
|
\s5
|
|
\v 73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, <<ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ>> ಎಂದು ಹೇಳಲು
|
|
\v 74 ಅವನು, <<ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು>> ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
|
|
\v 75 ಪೇತ್ರನಿಗೆ ಯೇಸು, <<ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸಿ ಹೇಳುವಿ>> ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
|
|
|
|
\s5
|
|
\c 27
|
|
\p
|
|
\v 1 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
|
|
\v 2 ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪೋನಥ್ಯ ಪಿಲಾತನಿಗೆ ಒಪ್ಪಿಸಿದರು.
|
|
\s1 ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು
|
|
\s5
|
|
\p
|
|
\v 3 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ
|
|
\f +
|
|
\fr 27:3
|
|
\ft ಮತ್ತಾ. 26:14-15
|
|
\f* ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
|
|
\v 4 <<ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ>> ಅಂದನು. ಅದಕ್ಕವರು, <<ಅದು ನಮಗೇನು? ನೀನೇ ನೋಡಿಕೋ>> ಅಂದರು.
|
|
\v 5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
|
|
\s5
|
|
\v 6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು <<ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು>> ಎಂದರು.
|
|
\v 7 ಬಳಿಕ ಆಲೋಚನೆಮಾಡಿ
|
|
\f +
|
|
\fr 27:7
|
|
\ft ಅ. ಕೃ. 1:18,19
|
|
\f* ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
|
|
\v 8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ <<ಜೀವಹತ್ಯದ
|
|
\f +
|
|
\fr 27:8
|
|
\ft ರಕ್ತದ ಹೊಲವೆಂದು
|
|
\f* ಹೊಲವೆಂಬ>> ಹೆಸರು ಇದೆ.
|
|
\s5
|
|
\v 9 ಅದೇನಂದರೆ,
|
|
\f +
|
|
\fr 27:9
|
|
\ft ಜೆಕ. 11:12,13
|
|
\f* <<ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
|
|
\v 10 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.>> ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
|
|
\s1 ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು
|
|
\r (ಮಾರ್ಕ 15:2-15; ಲೂಕ 23:2,3,13-25; ಯೋಹಾ. 18:29-40; 19:16)
|
|
\s5
|
|
\p
|
|
\v 11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, <<ನೀನು ಯೆಹೂದ್ಯರ ಅರಸನೋ?>> ಎಂದು ಕೇಳಿದನು. ಯೇಸು, <<ನೀನೇ ಹೇಳಿದ್ದೀ>> ಅಂದನು.
|
|
\v 12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
|
|
\v 13 ನಂತರ ಪಿಲಾತನು ಆತನನ್ನು, <<ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?>> ಎಂದು ಕೇಳಿದನು.
|
|
\v 14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
|
|
\s5
|
|
\v 15 ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
|
|
\v 16 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
|
|
\s5
|
|
\v 17 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, <<ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?>> ಎಂದು ಅವರನ್ನು ಕೇಳಿದನು.
|
|
\v 18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
|
|
\v 19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, <<ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು>> ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
|
|
\s5
|
|
\v 20 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
|
|
\v 21 ಅದಕ್ಕೆ ದೇಶಾಧಿಪತಿಯು ಅವರನ್ನು, <<ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?>> ಎಂದು ಕೇಳಲು ಅವರು <<ಬರಬ್ಬನನ್ನು>> ಅಂದರು.
|
|
\v 22 ಪಿಲಾತನು ಅವರನ್ನು, <<ಹಾಗಾದರೆ ಕ್ರಿಸ್ತನೆನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?>> ಎಂದು ಕೇಳಲು ಎಲ್ಲರೂ, <<ಅವನನ್ನು ಶಿಲುಬೆಗೆ ಹಾಕಿಸು>> ಅಂದರು.
|
|
\s5
|
|
\v 23 ಅದಕ್ಕವನು <<ಏಕೆ? ಈತನು ಮಾಡಿದ ಅಪರಾಧವೇನು?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಬಹಳವಾಗಿ ಆರ್ಭಟಿಸಿದರು.
|
|
\v 24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ
|
|
\f +
|
|
\fr 27:24
|
|
\ft ಮತ್ತಾ. 26:5
|
|
\f* ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು
|
|
\f +
|
|
\fr 27:24
|
|
\ft ಧರ್ಮೋ. 21:6-8
|
|
\f* ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, <<ಈ ನೀತಿವಂತನನ್ನು
|
|
\f +
|
|
\fr 27:24
|
|
\ft ರಕ್ತದಲ್ಲಿ
|
|
\f* ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ>> ಎನ್ನಲು
|
|
\s5
|
|
\v 25 ಜನರೆಲ್ಲಾ, <<
|
|
\f +
|
|
\fr 27:25
|
|
\ft ಆತನನ್ನು ಕೊಲ್ಲಿಸಿದ್ದ ಅಪರಾಧವು
|
|
\f* ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ>> ಅಂದರು.
|
|
\v 26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
|
|
\s1 ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು
|
|
\r (ಮಾರ್ಕ 15:16-41; ಲೂಕ 23:26,33-49; ಯೋಹಾ. 19:2-3,16-30)
|
|
\s5
|
|
\p
|
|
\v 27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
|
|
\v 28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,
|
|
\v 29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನನ್ನು ಪರಿಹಾಸ್ಯಮಾಡಿ
|
|
\s5
|
|
\v 30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
|
|
\v 31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
|
|
\s ಗೊಲ್ಗೊಥಾಕ್ಕೆ ಪ್ರಯಾಣ
|
|
\s5
|
|
\p
|
|
\v 32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
|
|
\v 33 ಅವರೆಲ್ಲರೂ ಗೊಲ್ಗೊಥಾ ಅಂದರೆ <<ಕಪಾಲಸ್ಥಳ>> ಎಂಬ ಸ್ಥಾನಕ್ಕೆ ಬಂದಾಗ
|
|
\v 34
|
|
\f +
|
|
\fr 27:34
|
|
\ft ಕೀರ್ತ 69:21
|
|
\f* ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
|
|
\s5
|
|
\v 35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
|
|
\v 36 ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.
|
|
\v 37 ಇದಲ್ಲದೆ ಆತನ ಮೇಲೆ ಹೊರಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ, <<ಈತನು ಯೇಸು, ಯೆಹೂದ್ಯರ ಅರಸನು>> ಎಂಬುದೇ.
|
|
\s5
|
|
\v 38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
|
|
\v 39 ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
|
|
\v 40 <<ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ>> ಎಂದು ಆತನನ್ನು ಹಂಗಿಸುತ್ತಿದ್ದರು.
|
|
\s5
|
|
\v 41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
|
\v 42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
|
|
\s5
|
|
\v 43 ಅವನು
|
|
\f +
|
|
\fr 27:43
|
|
\ft ಕೀರ್ತ 22:8
|
|
\f* ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; <ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ> >> ಎಂದು ಅಣಕಿಸಿ ಮಾತನಾಡುತ್ತಿದ್ದರು.
|
|
\v 44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
|
|
\s ಯೇಸುವಿನ ಮರಣ
|
|
\s5
|
|
\p
|
|
\v 45
|
|
\f +
|
|
\fr 27:45
|
|
\ft 6 ತಾಸಿನಿಂದ 9 ತಾಸಿನ ತನಕ
|
|
\f* ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
|
|
\v 46 ಸುಮಾರು ಮೂರು ಘಂಟೆಗೆ ಯೇಸು,
|
|
\f +
|
|
\fr 27:46
|
|
\ft ಕೀರ್ತ 22:1
|
|
\f* <<ಏಲೀ, ಏಲೀ, ಲಮಾ ಸಬಕ್ತಾನೀ>> ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, <<ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.>>
|
|
\v 47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ಇವನು ಎಲೀಯನನ್ನು ಕರೆಯುತ್ತಿದ್ದಾನೆ>> ಅಂದನು.
|
|
\s5
|
|
\v 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
|
|
\v 49 ಮಿಕ್ಕಾದವರು, <<ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ>> ಅಂದರು
|
|
\f +
|
|
\fr 27:49
|
|
\ft ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ. 19:34
|
|
\f* .
|
|
\v 50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
|
|
\s5
|
|
\v 51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
|
|
\v 52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ
|
|
\f +
|
|
\fr 27:52
|
|
\ft ಸತ್ತುಹೋಗಿದ್ದ
|
|
\f* ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
|
|
\v 53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
|
|
\s5
|
|
\v 54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, <<ನಿಜವಾಗಿ ಈತನು
|
|
\f +
|
|
\fr 27:54
|
|
\ft ದಾನಿ. 3:25
|
|
\f* ದೇವಕುಮಾರನಾಗಿದ್ದನು>> ಅಂದರು.
|
|
\v 55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
|
|
\v 56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
|
|
\s1 ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು
|
|
\r (ಮಾರ್ಕ 15:42-47; ಲೂಕ 23:50-56; ಯೋಹಾ. 19:38-42)
|
|
\s5
|
|
\p
|
|
\v 57 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
|
|
\v 58 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
|
|
\s5
|
|
\v 59 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
|
|
\v 60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
|
|
\v 61 ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
|
|
\s5
|
|
\p
|
|
\v 62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
|
|
\v 63 <<ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ <ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ> ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
|
|
\v 64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ>> ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
|
|
\s5
|
|
\v 65 ಪಿಲಾತನು ಅವರಿಗೆ, <<ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ>> ಎಂದು ಹೇಳಲು
|
|
\v 66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.
|
|
|
|
\s5
|
|
\c 28
|
|
\s1 ಯೇಸುವಿನ ಪುನರುತ್ಥಾನ
|
|
\r (ಮಾರ್ಕ 16:1-10; ಲೂಕ 24:1-10; ಯೋಹಾ. 20:1-18)
|
|
\p
|
|
\v 1 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ
|
|
\f +
|
|
\fr 28:1
|
|
\ft ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ
|
|
\f* ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
|
|
\v 2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
|
|
\s5
|
|
\v 3 ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
|
|
\v 4 ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
|
|
\s5
|
|
\v 5 ಆಗ ದೂತನು ಆ ಹೆಂಗಸರಿಗೆ, <<ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
|
|
\v 6 ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
|
|
\v 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, <ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು,
|
|
\f +
|
|
\fr 28:7
|
|
\ft ಮತ್ತಾ. 28:10,16; 26:32
|
|
\f* ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ> ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,>> ಎಂದು ಹೇಳಿದನು.
|
|
\s5
|
|
\v 8 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
|
|
\v 9 ಆಗ ಯೇಸು ಅವರನ್ನು ಭೇಟಿಯಾಗಿ, <<ನಿಮಗೆ ಶುಭವಾಗಲಿ>> ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
|
|
\v 10 ಆಗ ಯೇಸು ಅವರಿಗೆ, <<ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು>> ಎಂದು ಹೇಳಿದನು.
|
|
\s1 ಕಾವಲು ಗಾರನ ಸುದ್ಧಿ
|
|
\s5
|
|
\p
|
|
\v 11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
|
|
\v 12 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
|
|
\v 13 << <ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು> ಎಂದು ಹೇಳಿರಿ;
|
|
\s5
|
|
\v 14 ಈ ಸುದ್ದಿಯು ಶತಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ>> ಎಂದರು.
|
|
\v 15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
|
|
\s1 ಯೇಸುವಿನ ಕಡೆಯ ಅಪ್ಪಣೆ
|
|
\s5
|
|
\p
|
|
\v 16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
|
|
\v 17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
|
|
\s5
|
|
\v 18 ಯೇಸು ಅವರ ಹತ್ತಿರಕ್ಕೆ ಬಂದು, <<ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
|
|
\v 19
|
|
\f +
|
|
\fr 28:19
|
|
\ft ಮಾರ್ಕ 16:15,16; ಲೂಕ 24:47
|
|
\f* ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
|
|
\s5
|
|
\v 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು
|
|
\f +
|
|
\fr 28:20
|
|
\ft ಮತ್ತಾ. 18:20; ಯೋಹಾ. 14:18,19
|
|
\f* ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ>> ಎಂದು ಹೇಳಿದನು. |