kn_ulb/45-ACT.usfm

1881 lines
359 KiB
Plaintext
Raw Permalink Blame History

This file contains ambiguous Unicode characters

This file contains Unicode characters that might be confused with other characters. If you think that this is intentional, you can safely ignore this warning. Use the Escape button to reveal them.

\id ACT
\ide UTF-8
\sts ACT, Kannada OV
\h ಅಪೊಸ್ತಲರ ಕೃತ್ಯಗಳ
\toc1 ಅಪೊಸ್ತಲರ ಕೃತ್ಯಗಳ
\toc2 ಅಪೊಸ್ತಲರ ಕೃತ್ಯಗಳ
\toc3 act
\mt1 ಅಪೊಸ್ತಲರ ಕೃತ್ಯಗಳ
\s5
\c 1
\s ಯೇಸು ಸ್ವರ್ಗಾರೋಹಣವಾದದ್ದು
\p
\v 1 ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
\v 2 ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
\p
\v 3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
\s5
\v 4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, <<ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
\v 5 ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು>> ಎಂದು ಅಪ್ಪಣೆ ಕೊಟ್ಟನು.
\s5
\p
\v 6 ಕೂಡಿಬಂದವರು ಆತನನ್ನು,, <<ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?>> ಎಂದು ಕೇಳಲು
\v 7 ಆತನು ಅವರಿಗೆ, <<ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
\v 8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ>> ಅಂದನು.
\s5
\v 9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
\p
\v 10 ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
\v 11 ಅವರ ಹತ್ತಿರ ನಿಂತುಕೊಂಡು <<ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು>> ಎಂದು ಹೇಳಿದರು.
\s5
\p
\v 12 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ
\f +
\fr 1:12
\fk ದೂರ
\ft ಸಬ್ಬತ್ ದಿನದಲ್ಲಿ ಪ್ರಯಾಣಿಸಲು ಧರ್ಮಗುರುಗಳಿಂದ ನೇಮಿಸಲ್ಪಟ್ಟ ದೂರ ಅಂದರೆ ಸುಮಾರು ಒಂದೂವರೆ ಮೈಲು
\f* ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
\v 13 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
\v 14 ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
\s1 ಇಸ್ಕರಿಯೂತ ಯೂದನ ಬದಲಾಗಿ ಮತ್ತೀಯನನ್ನು ಆರಿಸಿಕೊಂಡದ್ದು
\s5
\p
\v 15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
\v 16 <<ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
\s5
\v 17 ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.>>
\v 18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
\v 19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ
\f +
\fr 1:19
\ft ಅರಾಮಿಕ್ ಭಾಷೆಯಲ್ಲಿ.
\f* ಭಾಷೆಯಲ್ಲಿ ‘ಅಕೆಲ್ದಾಮಾ, ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
\s5
\p
\v 20 ಅವನ ವಿಷಯವಾಗಿ,
\q1 ಅವನ ಮನೆ ಹಾಳಾಗಲಿ,
\q2 ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ
\q1 ಅವನ
\q2 ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
\s5
\p
\v 21-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
\v 23 ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ
\s5
\v 24-25 ಮತ್ತೀಯನನ್ನೂ ಎಂಬ ಇಬ್ಬರನು ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ, <<ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು>> ಎಂದು ಪ್ರಾರ್ಥಿಸಿದರು.
\v 26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
\s5
\c 2
\s1 ಪವಿತ್ರಾತ್ಮನು ಬಂದದ್ದು
\p
\v 1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
\v 2 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
\v 3 ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
\v 4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
\s5
\p
\v 5 ಅಂದು ಜಗತ್ತಿನ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
\v 6 ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
\v 7 ಎಲ್ಲರೂ ವಿಸ್ಮಯದಿಂದ ಬೆರಗಾಗಿ, <<ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
\s5
\v 8 ಆದರೆ ನಾವು ಪ್ರತಿಯೊಬ್ಬರು ನಮ್ಮನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
\v 9 ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತೋಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
\v 10 ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
\v 11 ಆಗಿರುವ ನಾವು ನಮ್ಮನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ>> ಎಂದು ಅಂದುಕೊಂಡರು.
\s5
\v 12 ಎಲ್ಲರೂ ಬೆರಗಾಗಿ ಕಳವಳಗೊಂಡು, <<ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?>>
\v 13 ಆದರೆ ಬೇರೆ ಕೆಲವರು, <<ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ>> ಮಾಡಿದರು.
\s1 ಜನಸಮೂಹಕ್ಕೆ ಪೇತ್ರನ ಪ್ರಬೋಧನೆ
\s5
\p
\v 14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; <<ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
\v 15 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
\s5
\v 16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನಂದರೆ,
\q1
\v 17 <<ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು,
\q2 ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು;
\q2 ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;
\q2 ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
\s5
\q1
\v 18 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ
\q2 ನನ್ನ ಆತ್ಮವನ್ನು ಸುರಿಸುವೆನು,
\q2 ಅವರೂ ಪ್ರವಾದಿಸುವರು.
\q1
\v 19-20 ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ
\q2 ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ
\q2 ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು.
\q2 ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು.
\q2 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
\q1
\v 21 ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ>> ಎಂಬುದೇ.
\p
\v 22 <<ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
\v 23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆಜಡಿದು ಕೊಂದಿರಿ.
\v 24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
\v 25 ಆತನ ವಿಷಯದಲ್ಲಿ ದಾವೀದನು;,
\q1 << <ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು;
\q2 ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
\q1
\v 26 ಆದಕಾರಣ ನನ್ನ ಹೃದಯವು ಹರ್ಷಿಸಿತು;
\q2 ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು,
\q2 ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
\q1
\v 27 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ,
\q2 ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
\q1
\v 28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ;
\q2 ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ> ಎಂದು ಹೇಳಿದ್ದಾನೆ.
\p
\v 29 <<ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
\v 30 ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
\v 31 ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
\v 32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
\v 33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
\v 34-35 ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ,
\q1 << <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ
\q2 ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು> ಎಂಬುದೇ.
\p
\v 36 <<ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ>> ಎಂದು ಹೇಳಿದನು.
\p
\v 37 ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, <<ಸಹೋದರರೇ, ನಾವೇನು ಮಾಡಬೇಕು>> ಎಂದು ಕೇಳಲು;
\v 38 ಪೇತ್ರನು ಅವರಿಗೆ, <<ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
\v 39 ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ>> ಎಂದು ಹೇಳಿದನು.
\v 40 ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, <<ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ>> ಎಂದು ಅವರನ್ನು ಎಚ್ಚರಿಸಿದನು.
\v 41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
\p
\v 42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
\p
\v 43 ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
\v 44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
\v 45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
\v 46 ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
\v 47 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
\s5
\c 3
\s1 ಹುಟ್ಟುಕುಂಟನು ನಡೆದಾಡಿದ್ದು
\p
\v 1 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
\v 2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
\v 3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.
\s5
\v 4 ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ <<ನಮ್ಮನ್ನು ನೋಡು>> ಅಂದನು.
\v 5 ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
\v 6 ಆಗ ಪೇತ್ರನು <<ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ>> ಎಂದು ಹೇಳಿ,
\s5
\v 7 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
\v 8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
\s5
\v 9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
\v 10 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
\s1 ಆಶ್ಚರ್ಯಪಟ್ಟು ಜನರಿಗೆ ಪೇತ್ರನ ಪ್ರಸಂಗ
\s5
\p
\v 11 ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೋಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
\v 12 ಪೇತ್ರನು ಇದನ್ನು ನೋಡಿ ಜನರಿಗೆ; <<ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
\s5
\v 13 ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
\v 14 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ
\f +
\fr 3:14
\ft ಮನುಷ್ಯನನ್ನು
\f* ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
\s5
\v 15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
\v 16 ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
\s5
\p
\v 17 <<ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
\v 18 ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
\s5
\v 19 ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
\v 20 ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
\s5
\v 21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
\v 22 ಮೋಶೆಯು ಹೇಳಿದ್ದೇನಂದರೆ, <ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
\v 23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು> ಎಂಬುದೇ.
\s5
\v 24 ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
\v 25 ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ <ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು> ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
\v 26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ>> ಎಂದು ಹೇಳಿದನು.
\s5
\c 4
\s1 ಅಧಿಕಾರಿಗಳ ಮುಂದೆ ಪೇತ್ರ ಯೋಹಾನರು
\p
\v 1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
\v 2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
\v 3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
\v 4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರಕ್ಕೆ ಏರಿತು.
\s5
\p
\v 5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
\v 6 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
\v 7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ <<ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ>> ಎಂದು ಕೇಳಲು,
\s5
\v 8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; <<ಅಧಿಕಾರಿಗಳೇ, ಹಿರಿಯರೇ,
\v 9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
\v 10 ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
\s5
\p
\v 11 <<ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
\v 12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ>> ಎಂದು ಹೇಳಿದನು.
\s5
\p
\v 13 ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
\v 14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
\s5
\v 15 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,
\v 16 <<ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
\v 17 ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನುಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.>>
\v 18 ಆಗಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
\s5
\v 19 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ <<ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
\v 20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು>> ಎಂದು ಉತ್ತರಕೊಟ್ಟರು.
\s5
\v 21 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
\v 22 ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
\s5
\p
\v 23 ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
\v 24 ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, <<ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
\v 25 ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ,
\q1 << <ಅನ್ಯಜನಗಳು ಏಕೆ ಆಕ್ರೋಶಗೊಂಡರು?
\q2 ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
\s5
\q1
\v 26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ
\q2 ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು,
\q2 ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು> ಎಂದು ಹೇಳಿಸಿದಿಯಲ್ಲವೇ?
\m
\s5
\v 27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
\v 28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
\s5
\v 29 ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
\v 30 ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು>> ಅಂದರು.
\v 31 ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
\s1 ವಿಶ್ವಾಸಿಗಳು ಒಟ್ಟಾಗಿ ಆಸ್ತಿಯನ್ನು ಅನುಭೋಗಿಸುತ್ತಿದ್ದರು
\s5
\p
\v 32 ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
\v 33 ಮತ್ತು ಕರ್ತನಾದ ಯೇಸುವಿನ ಪುನುರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
\s5
\v 34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
\v 35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
\s5
\p
\v 36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
\v 37 ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
\s5
\c 5
\s1 ಅನನೀಯ ಮತ್ತು ಸಪ್ಫೈರಳು
\p
\v 1 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
\v 2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
\s5
\v 3 ಆಗ ಪೇತ್ರನು; <<ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
\v 4 ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ>> ಅಂದನು.
\v 5 ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
\v 6 ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
\s5
\p
\v 7 ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
\v 8 ಪೇತ್ರನು ಆಕೆಯನ್ನು ನೋಡಿ, <<ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು>> ಎಂದು ಕೇಳಲು ಆಕೆಯು, <<ಹೌದು, ಇಷ್ಟಕ್ಕೇ>> ಅಂದಳು.
\s5
\v 9 ಆಗ ಪೇತ್ರನು ಆಕೆಗೆ, <<ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು>> ಎಂದು ಹೇಳಿದನು.
\v 10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
\v 11 ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
\s1 ಸೂಚಕಕಾರ್ಯಗಳು ಮತ್ತು ಅದ್ಭುತಕಾರ್ಯಗಳು
\s5
\p
\v 12 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
\v 13 ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
\s5
\v 14 ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
\v 15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
\v 16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
\s1 ಅಪೊಸ್ತಲರಿಗೆ ಆದ ಹಿಂಸೆ
\s5
\p
\v 17 ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
\v 18 ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
\s5
\v 19 ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
\v 20 <<ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ>> ಅಂದನು.
\p
\v 21 ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
\s5
\v 22 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
\v 23 <<ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ>> ಎಂದು ತಿಳಿಸಿದರು.
\s5
\v 24 ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
\p
\v 25 ಅಷ್ಟರಲ್ಲಿ ಒಬ್ಬನು ಬಂದು; <<ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು>> ಅವರಿಗೆ ತಿಳಿಸಿದನು.
\s5
\v 26 ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
\v 27 ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
\v 28 <<ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ>> ಎಂದು ಹೇಳಿದನು.
\s5
\v 29 ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, <<ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
\v 30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
\v 31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನಾಗಿಯೂ,
\f +
\fr 5:31
\ft ಮಾನವನ ಕುಲಕ್ಕೆ ರಕ್ಷಣೆಯ ಮಾರ್ಗವನ್ನು ನಿರ್ಮಿಸಿದ ಏಕೈಕ ನಿರ್ಮಾಪಕ
\f* ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
\v 32 ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ>> ಎಂದು ಹೇಳಿದರು.
\s ಗಮಲಿಯೇಲನ ಸಮರ್ಥನೆ
\s5
\p
\v 33 ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
\v 34 ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
\s5
\v 35 ಅನಂತರ ಸಭೆಯವರಿಗೆ, <<ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
\v 36 ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
\v 37 ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
\s5
\v 38 ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
\v 39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ>> ಎಂದು ಹೇಳಿದನು.
\s5
\p
\v 40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
\v 41 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
\v 42 ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.
\s5
\c 6
\s1 ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು
\p
\v 1 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
\s5
\v 2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, <<ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
\v 3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
\v 4 ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು>> ಎಂದು ಹೇಳಿದರು.
\s5
\v 5 ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
\v 6 ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.
\s5
\p
\v 7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.
\s1 ಸ್ತೆಫನನ್ನು ಬಂಧಿಸಿದ್ದು
\s5
\p
\v 8 ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
\v 9 ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
\s5
\v 10 ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.
\v 11 ಆಗ ಅವರು ಕೆಲವು ಜನರಿಗೆ, <<ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು>> ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
\s5
\v 12 ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
\v 13 ಆ ಸಾಕ್ಷಿಗಳು, <<ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
\v 14 ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ>> ಅಂದರು.
\v 15 ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
\s5
\c 7
\s1 ಸ್ತೆಫನನ ಬೋಧನೆ
\p
\v 1 ಆಗ ಮಹಾಯಾಜಕನು, <<ಈ ಸಂಗತಿಗಳು ಸತ್ಯವೋ?>> ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, <<ಸಹೋದರರೇ, ತಂದೆಗಳೇ, ಕೇಳಿರಿ.
\v 2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
\v 3 <ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು> ಎಂದು ಹೇಳಿದನು.
\s5
\p
\v 4 <<ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
\v 5 ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
\s5
\v 6 ಇದಲ್ಲದೆ ದೇವರು ಹೇಳಿದ್ದೇನಂದರೆ, <ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.>
\v 7 ಮತ್ತು <ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು> ಎಂಬುದೇ.
\v 8 ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.
\s5
\p
\v 9 <<ಮೂಲಪಿತೃಗಳು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
\v 10 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
\s5
\p
\v 11 <<ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪಿತೃಗಳಿಗೆ ಆಹಾರ ಸಿಕ್ಕಲಿಲ್ಲ.
\v 12 ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
\v 13 ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
\s5
\v 14 ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
\v 15 ಯಾಕೋಬನು ಇಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪಿತೃಗಳೂ ತೀರಿಹೋದರು.
\v 16 ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
\s5
\p
\v 17 <<ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
\v 18 ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.
\v 19 ಈ ಅರಸನು ನಮ್ಮ ಪಿತೃಗಳ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪಿತೃಗಳನ್ನು ಕ್ರೂರವಾಗಿ ಹಿಂಸಿಸಿಸನು.
\s5
\v 20 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
\v 21 ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
\s5
\v 22 ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
\p
\v 23 <<ಅವನಿಗೆ ನಲವತ್ತು ವರುಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
\v 24 ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
\v 25 ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
\s5
\v 26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, <ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?> ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
\p
\v 27 <<ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, <ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
\v 28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?> ಎಂದು ಅವನನ್ನು ನೂಕಿಬಿಟ್ಟನು.
\s5
\v 29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‍ ದೇಶದಲ್ಲಿ ಪ್ರವಾಸಿಯಾಗಿದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
\p
\v 30 <<ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
\s5
\v 31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
\v 32 <ನಾನು ನಿನ್ನ ಪಿತೃಗಳಾದ, ಅಬ್ರಹಾಮ ಇಸಾಕ ಯಾಕೋಬರ ದೇವರು> ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
\s5
\v 33 ಮತ್ತು ಕರ್ತನು ಅವನಿಗೆ, <ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
\v 34 ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ,> ಎಂದು ಹೇಳಿದನು.
\s5
\p
\v 35 <<ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ <ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?> ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
\v 36 ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರುಷ ಮರಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
\p
\v 37 ಆ ಮೋಶೆಯೇ, <<ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು>> ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
\s5
\v 38 ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
\p
\v 39 <<ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
\p
\v 40 <<ಅವರು ಆರೋನನಿಗೆ, <ಐಗುಪ್ತದೇಶದಿಂದ ನಮ್ಮನ್ನು ಕರದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು> ಎಂದು ಕೇಳಿಕೊಂಡರು.
\s5
\v 41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
\v 42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ,
\q1 << <ಇಸ್ರಾಯೇಲ್ ವಂಶದವರೇ, ನೀವು
\q2 ಅರಣ್ಯದಲ್ಲಿದ್ದ ನಲವತ್ತು ವರುಷ
\q1 ನನಗೆ ಯಜ್ಞಗಳನ್ನೂ, ಬಲಿಗಳನ್ನೂ
\q2 ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
\s5
\q1
\v 43 ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು
\q2 ಮಾಡಿಕೊಂಡ ಮೂರ್ತಿಗಳನ್ನು
\q1 ಅಂದರೆ ಮೊಲೋಖನ ಗುಡಾರವನ್ನೂ
\q1 ರೆಫಾನ್ ದೇವತೆಯ ನಕ್ಷತ್ರರೂಪವನ್ನೂ
\q2 ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ.
\q1 ಆದುದರಿಂದ ನಾನು ನಿಮ್ಮನ್ನು ಬಾಬೆಲೋನಿನ ಆಚೆಗೆ
\q2 ಗಡಿಪಾರು ಮಾಡುವೆನು> ಎಂಬುದೇ ಆಗಿದೆ.
\s5
\p
\v 44 <<ದೇವದರ್ಶನ ಗುಡಾರವು ಮರಭೂಮಿಯಲ್ಲಿ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
\v 45 ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
\v 46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
\s5
\v 47 ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
\v 48 ಆದರೂ ಪರಾತ್ಪರನು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
\q1
\v 49 << <ಆಕಾಶವು ನನಗೆ ಸಿಂಹಾಸನ,
\q1 ಭೂಮಿಯು ನನ್ನ ಪಾದಗಳಿಗೆ ಪೀಠ;
\q1 ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ?
\q1 ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
\q1
\v 50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ
\q1 ಎಂಬುದಾಗಿ ಕರ್ತನು ಹೇಳುತ್ತಾನೆ> ಎಂದು ಪ್ರವಾದಿಯು ನುಡಿದಿದ್ದಾನೆ.
\s5
\p
\v 51 <<ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
\v 52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
\v 53 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ>> ಎಂದು ಹೇಳಿದನು.
\s1 ಸ್ತೆಫನನ ಮೇಲೆ ಕಲ್ಲೆಸೆದದ್ದು
\s5
\p
\v 54 ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
\v 55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೇನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
\v 56 <<ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ>> ಎಂದು ಹೇಳಿದನು.
\s5
\p
\v 57 ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,
\v 58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
\s5
\p
\v 59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, <<ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ>> ಎಂದು ಪ್ರಾರ್ಥಿಸಿ,
\v 60 ಮೊಣಕಾಲೂರಿ, <<ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು>> ಮಹಾಶಬ್ದದಿಂದ ಕೂಗಿದನು.
\p ಇದನ್ನು ಹೇಳಿ ನಿದ್ರೆಹೋದನು.
\s5
\c 8
\p
\v 1 ಸೌಲನಿಗೆ ಅವನನ್ನು ಕೊಂದದ್ದು ಸಮ್ಮತವಾಯಿತು.
\s1 ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು
\p ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೋಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
\v 2 ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
\v 3 ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
\s1 ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು
\s5
\p
\v 4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
\v 5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
\s5
\v 6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
\v 7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
\v 8 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
\s5
\p
\v 9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
\v 10 ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, <<ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ>> ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
\p
\v 11 ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
\s5
\p
\v 12 ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
\v 13 ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
\s5
\p
\v 14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
\v 15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
\v 16 ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
\v 17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
\s5
\v 18 ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
\v 19 <<ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ>> ಅಂದನು.
\s5
\v 20 ಆದರೆ ಪೇತ್ರನು ಅವನಿಗೆ, <<ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
\v 21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
\v 22 ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
\v 23 ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ>> ಅಂದನು
\s5
\v 24 ಅದಕ್ಕೆ ಸೀಮೋನನು, <<ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ>> ಎಂದು ಹೇಳಿದನು.
\s5
\p
\v 25 ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
\s1 ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು
\s5
\p
\v 26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, <<ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ>> ಎಂದು ಹೇಳಿದನು.
\v 27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಶದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
\v 28 ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
\s5
\v 29 ದೇವರಾತ್ಮನು ಫಿಲಿಪ್ಪನಿಗೆ, <<ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ>> ಎಂದು ಹೇಳಿದನು.
\v 30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, <<ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?>> ಎಂದು ಕೇಳಿದನು.
\v 31 ಅದಕ್ಕೆ ಅವನು, <<ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?>> ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
\s5
\v 32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,
\q1 <<ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು;
\q1 ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ
\q1 ಆತನು ಬಾಯಿ ತೆರೆಯದೆ ಮೌನವಾಗಿದ್ದನು.
\q1
\v 33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ.
\q1 ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು?
\q1 ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ>> ಎಂಬುದೇ.
\s5
\p
\v 34 ಕಂಚುಕಿಯು ಈ ವಚನವನ್ನು ಕುರಿತು, <<ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?>> ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
\v 35 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
\s5
\p
\v 36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
\v 37 ಕಂಚುಕಿಯು, <<ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?>> ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
\v 38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
\s5
\v 39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
\v 40 ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
\s5
\c 9
\s1 ಸೌಲನು ಯೇಸುವಿನ ಶಿಷ್ಯನಾದದ್ದು
\p
\v 1 ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಸೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ;
\v 2 ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು ,ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
\s5
\v 3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.
\v 4 ಅವನು ನೆಲಕ್ಕೆ ಬಿದ್ದನು. ಆಗ, <<ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?>> ಎಂದು ಹೇಳುವ ವಾಣಿಯನ್ನು ಕೇಳಿದನು.
\s5
\p
\v 5 ಅದಕ್ಕೆ ಸೌಲನು;, <<ಕರ್ತನೇ, ನೀನಾರು?>> ಎಂದು ಕೇಳಿದ್ದಕ್ಕೆ, ಕರ್ತನು, <<ನೀನು ಹಿಂಸೆಪಡಿಸುವ ಯೇಸುವೇ ನಾನು;
\v 6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು>> ಎಂದು ಹೇಳಿದನು.
\v 7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
\s5
\v 8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
\v 9 ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.
\s5
\p
\v 10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; <<ಅನನೀಯನೇ,>> ಎಂದು ಅವನನ್ನು ಕರೆಯಲು, ಅವನು; <<ಕರ್ತನೇ, ಇಗೋ, ಇದ್ದೇನೆ>> ಅಂದನು.
\v 11 ಕರ್ತನು ಅವನಿಗೆ, <<ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
\v 12 ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ>> ಎಂದು ಹೇಳಿದನು.
\s5
\v 13 ಅದಕ್ಕೆ ಅನನೀಯನು, <<ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
\v 14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ>> ಅಂದನು.
\v 15 ಕರ್ತನು ಅವನಿಗೆ, <<ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
\v 16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು>> ಎಂದು ಹೇಳಿದನು.
\s5
\v 17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, <<ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಿದನು.
\v 18 ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
\p
\v 19 ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.
\s5
\v 20 ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
\v 21 ಕೇಳಿದವರೆಲ್ಲರು ಬೆರಗಾಗಿ; <<ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ>> ಎಂದು ಮಾತನಾಡಿಕೊಂಡರು.
\v 22 ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
\s5
\p
\v 23 ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
\v 24 ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
\v 25 ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.
\s5
\p
\v 26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
\v 27 ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
\s5
\v 28 ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.
\v 29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
\v 30 ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರದುಕೊಂಡುಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
\s5
\p
\v 31 ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
\s1 ಐನೇಯನು ವಾಸಿಯಾದದ್ದು
\p
\v 32 ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.
\s5
\v 33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
\v 34 ಪೇತ್ರನು ಅವನಿಗೆ, <<ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ>> ಎಂದು ಹೇಳಿದನು. ಕೂಡಲೆ ಅವನು ಎದ್ದನು.
\v 35 ಮತ್ತು ಲುದ್ದದಲ್ಲಿಯೂ, ಶಾರೋನನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.
\s1 ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು
\s5
\p
\v 36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ <<ದೊರ್ಕ>> ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
\v 37 ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.
\s5
\v 38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, <<ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು>> ಬೇಡಿಕೊಂಡರು.
\v 39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
\s5
\v 40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; <<ತಬಿಥಾ, ಎದ್ದೇಳು>> ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
\v 41 ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.
\v 42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
\v 43 ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.
\s5
\c 10
\s1 ಪೇತ್ರನು ಮತ್ತು ಕೊರ್ನೇಲ್ಯನು
\p
\v 1 ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
\v 2 ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
\s5
\v 3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; <<ಕೊರ್ನೆಲ್ಯನೇ>> ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
\v 4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; <<ಕರ್ತನೇ, ಇದೇನು?>> ಎಂದು ಕೇಳಲು, ಆ ದೂತನು ಅವನಿಗೆ; <<ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
\v 5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.
\v 6 ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ>> ಎಂದು ಹೇಳಿದನು.
\s5
\v 7 ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
\v 8 ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪಕ್ಕೆ ಪಟ್ಟಣಕ್ಕೆ ಕಳುಹಿಸಿದನು.
\s1 ಪೇತ್ರನಿಗಾದ ದರ್ಶನ
\s5
\p
\v 9 ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
\v 10 ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
\v 11 ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
\v 12 ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.
\s5
\v 13 ಆಗ; <<ಪೇತ್ರನೇ, ಎದ್ದು, ಕೊಯ್ದು ತಿನ್ನು>> ಎಂದು ಅವನಿಗೆ ಒಂದು ವಾಣಿ ಕೇಳಿಸಿತು.
\v 14 ಅದಕ್ಕೆ ಪೇತ್ರನು; <<ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ>> ಅಂದನು.
\v 15 ಅದಕ್ಕೆ;<<ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು>> ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
\v 16 ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.
\s5
\p
\v 17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
\v 18 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
\s5
\v 19 ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; <<ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
\v 20 ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ>> ಎಂದು ಹೇಳಿದನು.
\v 21 ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; <<ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?>> ಎಂದು ಕೇಳಲು,
\s5
\v 22 ಅವರು; <<ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ>> ಎಂದು ಹೇಳಿದರು.
\v 23 ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
\s1 ಕೊರ್ನೇಲ್ಯನ ಮನೆಯಲ್ಲಿ ಪೇತ್ರನು
\s5
\p
\v 24 ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
\s5
\v 25 ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
\v 26 ಆದರೆ ಪೇತ್ರನು; <<ಏಳು, ನಾನೂ ಸಹಾ ಮನುಷ್ಯನೇ>> ಎಂದು ಹೇಳಿ, ಅವನನ್ನು ಎತ್ತಿ,
\s5
\v 27 ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.
\v 28 ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; <<ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮ್ಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
\v 29 ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು>> ಎಂದು ಕೇಳಿದನು.
\s5
\p
\v 30 ಅದಕ್ಕೆ ಕೊರ್ನೇಲ್ಯನು; <<ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
\v 31 ಕೊರ್ನೆಲ್ಯನೇ <ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
\v 32 ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ> ಅಂದನು.
\v 33 ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ>> ಅಂದನು.
\s5
\p
\v 34 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; <<ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
\v 35 ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
\s5
\v 36 ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
\v 37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
\v 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
\s5
\v 39 ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
\v 40 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
\v 41 ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
\s5
\v 42 ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
\v 43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ>> ಅಂದನು.
\s5
\p
\v 44 ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.
\v 45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
\s5
\v 46 ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.
\v 47 ನಡೆದ ಸಂಗತಿಯನ್ನು ಪೇತ್ರನು ನೋಡಿ; <<ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?>> ಎಂದು ಹೇಳಿ ಅವರಿಗೆ,
\v 48 ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.
\s5
\c 11
\s1 ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು
\p
\v 1 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
\v 2 ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
\v 3 <<ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ>> ಎಂದು ಅವನ ಕೂಡ ವಾದಿಸಿದರು.
\s5
\v 4 ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
\v 5 ಹೇಳಿದ್ದೇನಂದರೆ; <<ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು>> ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
\v 6 ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
\s5
\v 7 ಆಗ; <<ಪೇತ್ರನೇ, ಎದ್ದು, ಕೊಯ್ದು ತಿನ್ನು>> ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
\p
\v 8 ಅದಕ್ಕೆ ನಾನು; <<ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ>> ಅಂದೆನು.
\p
\v 9 ಅದಕ್ಕೆ; <<ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು>> ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
\v 10 ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
\s5
\p
\v 11 ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
\v 12 ದೇವರಾತ್ಮನು, ನನಗೆ ನೀನು ಏನೂ ಬೇಧಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
\v 13 ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; <<ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
\v 14 ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು>> ಎಂದು ಹೇಳಿದನೆಂಬುದಾಗಿ ತಿಳಿಸಿದನು.
\s5
\p
\v 15 ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
\v 16 ಆಗ; <<ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು>> ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
\s5
\v 17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
\p
\v 18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; <<ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ>> ಎಂದು ದೇವರನ್ನು ಕೊಂಡಾಡಿದರು.
\s1 ಅಂತಿಯೋಕ್ಯ ಪಟ್ಟಣದಲ್ಲಿ ಕ್ರೈಸ್ತಸಭೆ
\s5
\p
\v 19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನೀಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
\v 20 ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
\v 21 ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
\s5
\v 22 ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
\v 23 ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
\v 24 ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
\s5
\v 25 ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
\v 26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
\s1 ಅಂತಿಯೋಕ್ಯ ಸಭೆಯ ಸಹಾಯ
\s5
\p
\v 27 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
\v 28 ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮ ನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
\s5
\v 29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
\v 30 ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.
\s5
\c 12
\s1 ಪೇತ್ರನನ್ನು ಸೆರೆಯಿಂದ ಹಾಕಿಸಿದ್ದು
\p
\v 1 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.
\v 2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
\s5
\v 3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
\v 4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
\s5
\v 5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
\s ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು
\p
\v 6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
\s5
\v 7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; <<ತಟ್ಟನೆ ಏಳು>> ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
\v 8 ಆ ದೂತನು ಅವನಿಗೆ; <<ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ>> ಎಂದು ಹೇಳಲು, ಅವನು ಹಾಗೆಯೇ ಮಾಡಿದನು. <<ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ>> ಅಂದನು.
\s5
\v 9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
\v 10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
\s5
\p
\v 11 ಆಗ ಪೇತ್ರನು ಎಚ್ಚರಗೊಂಡು; <<ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು>> ಎಂದು ಅಂದುಕೊಂಡನು.
\v 12 ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
\s5
\v 13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
\v 14 ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; <<ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ>> ಎಂದು ತಿಳಿಸಿದಳು. ಅವರು ಅವಳಿಗೆ; <<ನಿನಗೆ ಹುಚ್ಚು ಹಿಡಿದದೆ>> ಎಂದು ಹೇಳಿದರು.
\p
\v 15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; <<ಅವನ ದೂತನಾಗಿರಬೇಕು>> ಅಂದರು.
\s5
\v 16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
\v 17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; <<ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು>> ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
\s5
\p
\v 18 ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.
\v 19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
\s1 ಅರಸನಾದ ಹೆರೋದನು ಸತ್ತದ್ದು
\s5
\p
\v 20 ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
\v 21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
\s5
\v 22 ಕೂಡಿದ್ದ ಜನರು; <<ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ>> ಎಂದು ಆರ್ಭಟಿಸಿದರು.
\v 23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
\s5
\p
\v 24 ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.
\v 25 ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
\s5
\c 13
\s1 ಸುವಾರ್ತೆ ಸಾರುವುದಕ್ಕೆ ಪೌಲನು ಮಾಡಿದ ಮೊದಲನೆಯ ಪ್ರಯಾಣ (13:1, 14:28)
\p
\v 1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಹೆರೋದನ ರಾಜ್ಯದ ಕಾಲುಭಾಗಕ್ಕೆ ರಾಜನಾದ ಹೆರೋದ ಅಂತಿಪನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
\v 2 ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; <<ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ>> ಎಂದು ಹೇಳಿದನು.
\v 3 ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
\s5
\p
\v 4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
\v 5 ಸಲಾಮಿಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
\s5
\v 6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
\v 7 ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
\v 8 ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
\s5
\v 9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
\v 10 ಅವನನ್ನು ದೃಷ್ಟಿಸಿನೋಡಿ; <<ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
\s5
\v 11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ>> ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
\v 12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
\s1 ಪಿಸಿದ್ಯದ ಅಂತಿಯೋಕ್ಯದಲ್ಲಿ ಪೌಲ ಮತ್ತು ಬಾರ್ನಬ
\s5
\p
\v 13 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
\v 14 ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
\v 15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; <<ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ>> ಎಂದು ಅವರಿಗೆ ಹೇಳಿ ಕಳುಹಿಸಿದರು.
\s5
\v 16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
\v 17 <<ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪಿತೃಗಳು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
\v 18 ಆತನು ಸುಮಾರು ನಲವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
\s5
\v 19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವಾಸ್ಥ್ಯವಾಗಿ ಹಂಚಿಕೊಟ್ಟನು.
\v 20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
\s5
\v 21 ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರುಷ ಆಳಿದನು.
\v 22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; <ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು> ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
\s5
\p
\v 23 <<ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
\v 24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
\v 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; <ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ> ಎಂದು ಹೇಳಿದನು.
\s5
\p
\v 26 <<ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
\v 27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
\s5
\v 28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
\v 29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
\s5
\p
\v 30 <<ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
\v 31 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
\s5
\p
\v 32 <<ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
\v 33 <ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ> ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
\p
\v 34 <<ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; <ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ> ಎಂಬುದೆ.
\s5
\v 35 ಅದಕ್ಕೆ ಅನುಸಾರವಾಗಿ ಆತನು; <ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು> ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
\p
\v 36 <<ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
\v 37 ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
\s5
\p
\v 38 <<ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
\v 39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
\s5
\v 40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
\q1
\v 41 << <ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ.
\q1 ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು;
\q1 ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ
\q1 ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ> >> ಎಂಬುದೇ ಎಂದು ಹೇಳಿದನು.
\s5
\p
\v 42 ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
\v 43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
\s5
\p
\v 44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
\v 45 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
\s5
\v 46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
\v 47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗಂದರೆ;
\q1 ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ
\q1 ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
\s5
\p
\v 48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
\v 49 ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
\s5
\v 50 ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
\v 51 ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
\v 52 ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
\s5
\c 14
\s1 ಇಕೋನ್ಯ ಪಟ್ಟಣದಲ್ಲಿ ಪೌಲ ಮತ್ತು ಬಾರ್ನಬ
\p
\v 1 ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
\v 2 ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.
\s5
\v 3 ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
\v 4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
\s5
\v 5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
\v 6 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲೂಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
\v 7 ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
\s ಪೌಲ ಮತ್ತು ಬಾರ್ನಬನು ಲುಸ್ತ್ರದಲ್ಲಿ
\s5
\p
\v 8 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
\v 9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
\p
\v 10 <<ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ>> ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
\s5
\p
\v 11 ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; <<ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು>> ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
\v 12 ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ
\f +
\fr 14:12
\ft ದ್ಯೌಸ್‍ದೇವರು ಅಂದರೆ ಸ್ವರ್ಗಾಧಿಪತಿ
\f* ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
\v 13 ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
\s5
\v 14 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿಹೇಳಿದರು;
\v 15 <<ಜನರೇ, ನೀವು ಹೀಗೇಕೆ ಮಾಡುತ್ತಿರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
\v 16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
\s5
\v 17 ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ>> ಎಂದು ಹೇಳಿದರು.
\v 18 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
\s5
\p
\v 19 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
\v 20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
\s ಪೌಲನು ಮತ್ತು ಬಾರ್ನಬನು ಅಂತಿಯೋಕ್ಯಕ್ಕೆ ಹಿಂತಿರುಗಿದ್ದು
\s5
\p
\v 21 ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
\v 22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
\s5
\v 23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
\v 24 ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
\v 25 ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
\v 26 ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
\s5
\v 27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
\v 28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.
\s5
\c 15
\s1 ಯೇರುಸಲೇಮ್ ಸಭೆಹಿರಿಯರ ಆಲೋಚನಾಸಭೆ
\p
\v 1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; <<ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು>> ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
\v 2 ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
\s5
\v 3 ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಪೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
\v 4 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
\s5
\v 5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; <<ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು>> ಎಂದು ಹೇಳಿದರು.
\v 6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
\s5
\p
\v 7 <<ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
\v 8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
\v 9 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಬೇಧಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
\s5
\v 10 ಹೀಗಿರುವುದರಿಂದ ನಮ್ಮ ಪಿತೃಗಳಾಗಲಿ, ನಾವಾಗಲಿ ಹೊರಲಾಗದ ಭಾರವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
\v 11 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು>> ಎಂದು ಹೇಳಿದನು.
\s5
\p
\v 12 ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
\s5
\v 13 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
\p
\v 14 <<ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
\s5
\v 15 ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ;
\q1
\v 16 << <ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು.
\q1 ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ
\q1 ಸುಭದ್ರವಾಗಿ ನಿಲ್ಲಿಸುವೆನು.
\q1
\v 17 ಮನುಷ್ಯರಲ್ಲಿ ಉಳಿದ ಜನರು
\q1 ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ
\q1 ಕರ್ತನನ್ನು ಹುಡುಕುವರು ಎಂದು
\q1
\v 18 ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ> ಎಂದು ಬರೆದದೆ.
\s5
\p
\v 19 <<ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
\v 20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತಿರ್ಮಾನಿಸಿದರು.
\v 21 ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ>> ಎಂದು ಹೇಳಿದನು.
\s5
\p
\v 22 ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
\v 23 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; <<ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
\s5
\p
\v 24 <<ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
\v 25 ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
\v 26 ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
\s5
\v 27 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
\v 28 ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
\v 29 ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.>>
\s5
\p
\v 30 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
\v 31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
\v 32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
\s5
\v 33 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
\v 34 (ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.)
\v 35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
\s1 ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22)
\s5
\p
\v 36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; <<ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ>> ಎಂದು ಹೇಳಿದನು.
\v 37 ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
\v 38 ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
\s5
\v 39 ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
\v 40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
\v 41 ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.
\s5
\c 16
\s1 ಪೌಲನು ತಿಮೊಥೆಯನನ್ನು ಆರಿಸಿಕೊಂಡದ್ದು
\p
\v 1 ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
\v 2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
\v 3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
\s5
\v 4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
\v 5 ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
\s1 ಪೌಲನಿಗೆ ಬಂದ ಮಕೆದೋನ್ಯದ ಕರೆ
\s5
\p
\v 6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
\v 7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
\v 8 ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
\s5
\v 9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; <<ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು>> ಅವನನ್ನು ಬೇಡಿಕೊಳ್ಳುತ್ತಿದ್ದನು.
\v 10 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
\s5
\v 11 ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
\s1 ಫಿಲಿಪ್ಪಿಯಲ್ಲಿ ಲುದ್ಯಳ ಮನಃಪರಿವರ್ತನೆ
\p
\v 12 ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
\v 13 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
\s5
\v 14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
\v 15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; <<ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು>> ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
\s1 ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು
\s5
\p
\v 16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ
\f +
\fr 16:16
\ft ಭವಿಷ್ಯ ಹೇಳುವ ದುರಾತ್ಮವುಳ್ಳ ಹೆಣ್ಣುಮಗಳು
\f* ಒಬ್ಬ ಸ್ತ್ರೀಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
\v 17 ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; <<ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ>> ಎಂದು ಕೂಗಿ ಹೇಳುತ್ತಿದ್ದಳು.
\v 18 ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; <<ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ>> ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
\s5
\p
\v 19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
\v 20 ಅವರನ್ನು ಅಧಿಕಾರಿಗಳ ಮುಂದೆ ತಂದು; <<ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
\v 21 ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ>> ಅಂದರು.
\s5
\v 22 ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
\v 23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
\v 24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
\s1 ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
\s5
\p
\v 25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
\v 26 ಅಕಸ್ಮಾತವಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
\s5
\v 27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
\v 28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; <<ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ>> ಎಂದು ಹೇಳಿದನು.
\s5
\v 29 ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡಬಿದ್ದನು.
\v 30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; <<ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?>> ಕೇಳಲು,
\v 31 ಅವರು; <<ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು>> ಎಂದು ಹೇಳಿ,
\s5
\v 32 ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
\v 33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
\v 34 ತರುವಾಯ ಅವರನ್ನು ತನ್ನ ಮನೆಗೆ ಕರದುಕೊಂಡುಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
\s5
\p
\v 35 ಬೆಳಗಾದ ಮೇಲೆ ಅಧಿಕಾರಿಗಳು; <<ಆ ಮನುಷ್ಯರನ್ನು ಬಿಟ್ಟುಬಿಡು>> ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
\v 36 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; <<ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ>> ಎಂದು ಹೇಳಿದನು.
\s5
\v 37 ಅದಕ್ಕೆ ಪೌಲನು; <<ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ>> ಎಂದು ಹೇಳಿದನು.
\v 38 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
\v 39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
\s5
\v 40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
\s5
\c 17
\s1 ಥೆಸಲೋನೀಕ ಪಟ್ಟಣದಲ್ಲಿ ಪೌಲನ ಸೇವೆ
\p
\v 1 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನೀಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
\v 2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
\s5
\v 3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ <<ನಾನು ನಿಮಗೆ ಪ್ರಸಿದ್ದಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ>> ಸ್ಥಿರಪಡಿಸಿದನು.
\v 4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
\s5
\p
\v 5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
\v 6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; <<ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
\v 7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ>> ಎಂದು ಕೂಗಿದರು.
\s5
\v 8 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
\v 9 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
\s1 ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ
\s5
\p
\v 10 ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
\v 11 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
\v 12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
\s5
\v 13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೊನೀಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
\v 14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
\v 15 ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
\s1 ಅಥೇನೆ ಪಟ್ಟಣದಲ್ಲಿ ಪೌಲನ ಸೇವೆ
\s5
\p
\v 16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
\v 17 ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
\s5
\v 18 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; <<ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?>> ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; <<ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು>> ಬೇರೆ ಕೆಲವರು ಹೇಳಿದರು.
\s5
\v 19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ
\f +
\fr 17:19
\ft ಅಂದರೆ, ಹಿರೀಸಭೆಯು ಕೂಡುವ ಸ್ಥಳಕ್ಕೆ.
\f* ಕರೆದುಕೊಂಡು ಹೋಗಿ; <<ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
\v 20 ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ>> ಅಂದರು.
\v 21 ಅಥೇನರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
\s5
\p
\v 22 ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; <<ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
\v 23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
\s5
\p
\v 24 <<ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
\v 25 ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
\s5
\v 26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
\v 27 ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
\s5
\v 28 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, <ನಾವು ಆತನ ಸಂತಾನದವರೇ> ಎಂದು ಹೇಳಿದ್ದಾರೆ.
\p
\v 29 <<ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
\s5
\v 30 ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
\v 31 ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ>> ಅಂದನು.
\s5
\p
\v 32 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; <<ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ>> ಅಂದರು.
\v 33 ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
\v 34 ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
\s5
\c 18
\s1 ಕೊರಿಂಥದಲ್ಲಿ ಪೌಲನ ಸೇವೆ
\p
\v 1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
\v 2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗ ಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
\v 3 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
\s5
\v 4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
\p
\v 5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
\v 6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; <<ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ>> ಎಂದು ಹೇಳಿ,
\s5
\v 7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
\v 8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
\s5
\v 9 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; <<ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
\v 10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ>> ಎಂದು ಹೇಳಿದನು.
\v 11 ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.
\s5
\p
\v 12 ಗಲ್ಲಿಯೋನನು ಅಖಾಯ ಪ್ರಾತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
\v 13 <<ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು>> ದೂರುಹೇಳಿದರು.
\s5
\v 14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; <<ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
\v 15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ>> ಎಂದು ಹೇಳಿ,
\s5
\v 16 ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
\v 17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
\s5
\p
\v 18 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
\v 19 ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
\s5
\v 20 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
\v 21 <<ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು>> ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
\s5
\v 22 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.
\s1 ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಮೂರನೆಯ ಪ್ರಯಾಣ [18:23, 21:17]
\p
\v 23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
\s5
\p
\v 24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
\v 25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
\v 26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
\s5
\v 27 ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
\v 28 ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
\s5
\c 19
\s1 ಎಫೆಸ ಪಟ್ಟಣದಲ್ಲಿ ಪೌಲನ ಸೇವೆ
\p
\v 1 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
\v 2 <<ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?>> ಎಂದು ಅವರನ್ನು ಕೇಳಲು ಅವರು ಅವನಿಗೆ; <<ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ>> ಅಂದರು.
\s5
\v 3 ಅವನು; <<ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ>> ಎಂದು ಕೇಳಿದ್ದಕ್ಕೆ ಅವರು; <<ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು>> ಅಂದರು.
\v 4 ಅದಕ್ಕೆ ಪೌಲನು; <<ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು>> ಎಂದು ಹೇಳಲು,
\s5
\v 5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
\v 6 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
\v 7 ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.
\s5
\p
\v 8 ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
\v 9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
\v 10 ಇದು ಎರಡು ವರುಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
\s5
\p
\v 11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
\v 12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
\s5
\v 13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; <<ಪೌಲನು ಸಾರುವ ಯೇಸುವಿನ ಆಣೆ>> ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
\v 14 ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
\s5
\v 15 ಆದರೆ ದುರಾತ್ಮವು ಅವರಿಗೆ; <<ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?>> ಎಂದು ಹೇಳಿತು;
\v 16 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
\v 17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
\s5
\v 18 ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
\v 19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟ-ಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
\v 20 ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
\s5
\p
\v 21 ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; <<ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು>> ಹೇಳಿದನು.
\v 22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
\s1 ಎಫೆಸ ಪಟ್ಟಣದಲ್ಲಿ ದಂಗೆ
\s5
\p
\v 23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
\v 24 ಹೇಗಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
\v 25 ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; <<ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
\s5
\v 26 ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
\v 27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು>> ಹೇಳಿದನು.
\s5
\p
\v 28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; <<ಎಫೆಸದವರ ಅರ್ತೆಮೀದೇವಿ ಮಹಾದೇವಿ>> ಎಂದು ಅರ್ಭಟಿಸಿದರು.
\v 29 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯೋಸನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
\s5
\v 30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
\v 31 ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
\p
\v 32 ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
\s5
\v 33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
\v 34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; <<ಎಫೆಸದವರ ಅರ್ತೆಮೀದೇವಿ ಮಹಾದೇವಿ>> ಎಂದು ಎರಡು ಘಂಟೆ ಹೊತ್ತು ಕೂಗಿದರು.
\s5
\p
\v 35 ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; <<ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
\v 36 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
\v 37 ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
\s5
\v 38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
\v 39 ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
\v 40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ>> ಎಂದು ಹೇಳಿದನು.
\v 41 ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.
\s5
\c 20
\s1 ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ
\p
\v 1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
\v 2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
\v 3 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
\s5
\v 4 ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೊನೀಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯೋಸನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
\v 5 ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
\v 6 ಹುಳಿಯಿಲ್ಲದ ರೊಟ್ಟಿಯ
\f +
\fr 20:6
\ft ಪಸ್ಕ ಹಬ್ಬ
\f* ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
\s5
\p
\v 7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
\v 8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
\s5
\v 9 ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
\v 10 ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; <<ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ>> ಎಂದು ಹೇಳಿದನು.
\s5
\v 11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
\v 12 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
\s1 ಪೌಲನು ಮಿಲೇತ ದ್ವೀಪಕ್ಕೆ ಹೋದದ್ದು
\s5
\p
\v 13 ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
\v 14 ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನ ಪಟ್ಟಣಕ್ಕೆ ಹೊರಟೆವು.
\s5
\v 15 ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
\v 16 ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
\s ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು
\s5
\p
\v 17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
\v 18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; <<ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
\v 19 ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
\v 20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
\v 21 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
\s5
\v 22 ಇಗೋ, ನಾನು ಈಗ ಪವಿತ್ರಾತ್ಮನಿಂದ ಬಂಧಿಸಲ್ಪಟ್ಟವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
\v 23 ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
\v 24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
\s5
\v 25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
\v 26 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
\v 27 ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
\s5
\v 28 ಕರ್ತನು
\f +
\fr 20:28
\ft ಕೆಲವು ಪ್ರತಿಗಳಲ್ಲಿ ‘ದೇವರು’ ಎಂದಿದೆ
\f* ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನೇ ಆ ಗುಂಪಿನಲ್ಲಿ ಸಭಾಧ್ಯಕ್ಷರಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
\v 29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
\v 30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
\s5
\v 31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
\v 32 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
\s5
\v 33 ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
\v 34 ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
\v 35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; <ಪಡೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ> ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು>> ಅಂದನು.
\s5
\p
\v 36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
\v 37 ಬಳಿಕ ಪೌಲನು; <<ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ>> ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
\v 38 ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
\s5
\c 21
\s1 ಪೌಲನು ಯೆರೂಸಲೇಮಿಗೆ ಮಾಡಿದ ಪ್ರಯಾಣ
\p
\v 1 ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್‍ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.
\v 2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು.
\s5
\v 3 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
\v 4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
\s5
\v 5 ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
\v 6 ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.
\s5
\p
\v 7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
\v 8 ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳುಮಂದಿಯಲ್ಲಿ ಒಬ್ಬನಾಗಿದ್ದನು.
\v 9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
\s5
\v 10 ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,
\v 11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; <<ಈ ನಡುಕಟ್ಟು ಯಾವನದೋ ಅವನನ್ನು <ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ> >> ಹೇಳಿದನು.
\s5
\v 12 ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
\v 13 ಅದಕ್ಕೆ ಪೌಲನು; <<ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ>> ಅಂದನು.
\v 14 ಅವನು ಒಪ್ಪದೆ ಇದ್ದುದರಿಂದ; <<ಕರ್ತನ ಚಿತ್ತದಂತೆ ಆಗಲಿ>> ಎಂದು ಹೇಳಿ ನಾವು ಸುಮ್ಮನಾದೆವು.
\s5
\p
\v 15 ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
\v 16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
\s1 ಪೌಲನು ಯಾಕೋಬನನ್ನು ಬೇಟ್ಟಿಯಾದದ್ದು
\s5
\p
\v 17 ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
\v 18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಹಿರಿಯರೆಲ್ಲರು ಸಹ ಬಂದರು.
\v 19 ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
\s5
\p
\v 20 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; <<ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
\v 21 ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; <ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ> ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
\s5
\v 22 ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?
\v 23 ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.
\v 24 ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
\s5
\v 25 ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ>> ಎಂದು ಹೇಳಿದರು.
\p
\v 26 ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
\s5
\p
\v 27 ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
\v 28 <<ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ>> ಎಂದು ಕೂಗಿದರು.
\v 29 ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
\s5
\p
\v 30 ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
\v 31 ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
\s5
\v 32 ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
\p
\v 33 ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
\s5
\v 34 ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
\v 35 ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
\v 36 ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; <<ಅವನನ್ನು ಕೊಲ್ಲಿರಿ>> ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.
\s5
\p
\v 37 ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, <<ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ>>? ಎಂದು ಕೇಳಲು ಅವನು; <<ಗ್ರೀಕ್ ಭಾಷೆ ನಿನಗೆ ಬರುತ್ತದೋ?
\v 38 ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ>> ಎಂದು ಕೇಳಿದನು.
\s5
\p
\v 39 ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
\p
\v 40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಬಿಸಿದನು.,
\s5
\c 22
\p
\v 1 <<ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ>> ಎಂದು ಹೇಳಿದನು.
\p
\v 2 ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ;
\s5
\p
\v 3 <<ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
\v 4 ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
\v 5 ಈ ವಿಷಯದಲ್ಲಿ ಮಹಾಯಾಜಕನೂ, ಹಿರಿಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
\s5
\p
\v 6 <<ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
\v 7 ಆಗ; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ>? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
\p
\v 8 << <ಅದಕ್ಕೆ ನಾನು; ಕರ್ತನೇ, ನೀನಾರು?> ಎಂದು ಕೇಳಲು ಆತನು; <ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು> ಎಂದು ನನಗೆ ಹೇಳಿದನು.
\s5
\v 9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.
\p
\v 10 <<ಆಗ ನಾನು; <ಕರ್ತನೇ, ನಾನೇನು ಮಾಡಬೇಕು>? ಎಂದು ಕೇಳಲು ಕರ್ತನು ನನಗೆ; <ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು> ಎಂದು ಹೇಳಿದನು.
\v 11 ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
\s5
\p
\v 12 <<ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ
\v 13 ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; <ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ> ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
\s5
\p
\v 14 <<ಆಗ ಅವನು; <ನಮ್ಮ ಪಿತೃಗಳ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
\v 15 ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
\v 16 ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ> ಅಂದನು.
\s5
\p
\v 17 <<ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
\v 18 ಆತನು; <ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ> ಅಂದನು.
\s5
\p
\v 19 <<ಅದಕ್ಕೆ ನಾನು; <ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
\v 20 ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ> ಎಂಬುದು ಅವರೇ ಬಲ್ಲವರಾಗಿದ್ದಾರೆ.
\v 21 ಆದರೆ ಆತನು; <ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು> >> ಹೇಳಿದನು.
\s1 ಪೌಲನ ರೋಮನ್ ಪೌರತ್ವ ರಕ್ಷಣೆ
\s5
\p
\v 22 ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; <<ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು>> ಕೂಗಿ ಹೇಳಿದರು.
\v 23 ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,
\v 24 ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
\s5
\v 25 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; <<ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?>> ಎಂದು ಕೇಳಿದನು.
\p
\v 26 ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; <<ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು>> ಎಂದು ಹೇಳಲು,
\s5
\v 27 ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; <<ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು>> ಎಂದು ಅವನನ್ನು ಕೇಳಿದನು. ಅವನು, <<ಹೌದು>> ಅಂದನು.
\v 28 ಅದಕ್ಕೆ ಸಹಸ್ರಾಧಿಪತಿಯು; <<ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು>> ಅನ್ನಲು ಪೌಲನು; <<ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು>> ಅಂದನು.
\v 29 ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
\s1 ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತನಾಡಿದ್ದು
\s5
\p
\v 30 ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
\s5
\c 23
\p
\v 1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; <<ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ>> ಅಂದನು.
\v 2 ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;
\v 3 <<ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?>> ಅಂದನು.
\s5
\p
\v 4 ಹತ್ತಿರ ನಿಂತಿದ್ದವರು; <<ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?>> ಅನ್ನಲು,
\p
\v 5 ಪೌಲನು; <<ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ>> ಅಂದನು.
\s5
\p
\v 6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; <<ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ>> ಎಂದು ಕೂಗಿದನು.
\v 7 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.
\v 8 ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.
\s5
\p
\v 9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; <<ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು>> ಎಂದು ವಾದಿಸಿದರು.
\v 10 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
\s5
\p
\v 11 ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; <<ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು>> ಅಂದನು.
\s1 ಪೌಲನನ್ನು ಕೊಲ್ಲುವ ಪ್ರಯತ್ನ
\s5
\p
\v 12 ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
\v 13 ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.
\s5
\v 14 ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; <<ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.
\v 15 ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ>> ಅಂದರು.
\s5
\v 16 ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
\p
\v 17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; <<ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ>> ಎಂದು ಹೇಳಿದನು.
\s5
\v 18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; <<ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ>> ಎಂದು ಹೇಳಲು,
\v 19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; <<ನೀನು ನನಗೆ ಹೇಳಬೇಕಾದದ್ದು ಏನು?>> ಎಂದು ಕೇಳಿದನು.
\s5
\v 20 ಅವನು; <<ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
\v 21 ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ>> ಅಂದನು.
\s5
\v 22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; <<ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ>> ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
\s1 ಕೈಸರೈಯಕ್ಕೆ ಪೌಲನನ್ನು ಕಳುಹಿಸಿದ್ದು
\p
\v 23 ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; <<ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.>>
\v 24 ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
\s5
\v 25 ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನಂದರೆ;
\p
\v 26 <<ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
\v 27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
\s5
\v 28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
\v 29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
\v 30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು>> ಎಂಬುದೇ.
\s5
\p
\v 31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
\v 32 ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
\v 33 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
\s5
\v 34 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;
\v 35 <<ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ>> ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
\s5
\c 24
\s1 ಫೇಲಿಕ್ಸನ ಮುಂದೆ ನಡೆದ ನ್ಯಾಯವಿಚಾರಣೆ
\p
\v 1 ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
\v 2 ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; <<ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ
\v 3 ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.
\s5
\v 4 ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.
\p
\v 5 <<ಈ ಮನುಷ್ಯನನು <ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.>
\v 6 ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
\s5
\v 7 (ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)
\v 8 ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು>> ಎಂದು ಹೇಳಿದನು.
\p
\v 9 ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.
\s5
\p
\v 10 ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; <<ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
\v 11 ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.
\v 12 ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
\v 13 ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
\s5
\v 14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
\v 15 ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
\v 16 ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
\s5
\p
\v 17 <<ಕೆಲವು ವರುಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
\v 18 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
\v 19 ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.
\s5
\v 20 ಇಲ್ಲವಾದ್ದರಿಂದ ನಾನು ಹಿರಿಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.
\v 21 ನಾನು ಇವರ ನಡುವೆ ನಿಂತು; <ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ> ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು>> ಅಂದನು.
\s5
\p
\v 22 ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; <<ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು>> ಹೇಳಿ, ವಿಚಾರಣೆಯನ್ನು ತಡೆಮಾಡಿದನು.
\v 23 ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
\s1 ಪೌಲನು ಎರಡು ವರುಷ ಕಾವಲಿನಲ್ಲಿದ್ದದ್ದು
\s5
\p
\v 24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.
\v 25 ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; <<ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು>> ಎಂದು ಹೇಳಿದನು.
\s5
\v 26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.
\v 27 ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
\s5
\c 25
\s1 ಪೌಲನು ಫೆಸ್ತನ ಮುಂದೆ ವಿಚಾರಣೆಗೆ
\p
\v 1 ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
\v 2 ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
\v 3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
\s5
\v 4 ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
\v 5 ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
\s5
\p
\v 6 ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
\v 7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
\v 8 ಪೌಲನು; <<ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು>> ಪ್ರತ್ಯುತ್ತರ ಹೇಳಿದನು.
\s5
\p
\v 9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; <<ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು, ಪೌಲನು;
\p
\v 10 <<ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
\s5
\v 11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ>> ಎಂದನು.
\p
\v 12 ಅಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; <<ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು>> ಎಂದು ಹೇಳಿದನು.
\s1 ಫೆಸ್ತನು ಅಗ್ರಿಪ್ಪರಾಜನ ಸಲಹೆ ಪಡೆದದ್ದು
\s5
\p
\v 13 ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
\v 14 ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; <<ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
\v 15 ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
\p
\v 16 <<ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು>> ಹೇಳಿದೆನು.
\s5
\v 17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
\v 18 ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
\v 19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
\v 20 ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
\s5
\v 21 ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
\p
\v 22 ಅದಕ್ಕೆ ಅಗ್ರಿಪ್ಪನು; <<ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ>> ಎಂದು ಹೇಳಲು, ಫೆಸ್ತನು; <<ನಾಳೆ ಕೇಳಬಹುದು>> ಎಂದನು.
\s1 ಅಗ್ರಿಪ್ಪನ ಮುಂದೆ ಪೌಲನು
\s5
\p
\v 23 ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
\v 24 ಆಗ ಫೆಸ್ತನು; <<ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
\s5
\v 25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
\v 26 ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
\v 27 ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ>> ಅಂದನು.
\s5
\c 26
\p
\v 1 ಆಗ ಅಗ್ರಿಪ್ಪನು, ಪೌಲನಿಗೆ; <<ನೀನು ನಿನ್ನ ಪರವಾಗಿ ಮಾತನಾಡಬಹುದು>> ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;
\p
\v 2 <<ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
\v 3 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
\s5
\p
\v 4 <<ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
\v 5 ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
\s5
\v 6 ಈಗಲೂ ದೇವರು ನಮ್ಮ ಪಿತೃಗಳಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
\v 7 ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
\v 8 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
\s5
\v 9 ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
\v 10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
\v 11 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
\s5
\v 12 ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
\v 13 ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
\v 14 ನಾವೆಲ್ಲರು ನೆಲಕ್ಕೆ ಬೀಳಲು; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು> ಕೇಳಿದೆನು.
\s5
\v 15 ಆಗ ನಾನು; <ಕರ್ತನೇ, ನೀನಾರು?> ಅನ್ನಲು ಕರ್ತನು; <ನೀನು ಹಿಂಸೆಪಡಿಸುವ ಯೇಸುವೇ ನಾನು.
\v 16 ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಿಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
\v 17 ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
\v 18 ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ> ಅಂದನು.
\s5
\v 19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
\v 20 ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
\v 21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.
\s5
\v 22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
\v 23 ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು>> ಎಂಬುದೇ.
\s5
\p
\v 24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; <<ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,>> ಎಂದು ಹೇಳಿದನು.
\v 25 ಅದಕ್ಕೆ ಪೌಲನು; <<ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
\v 26 ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಅದ್ದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
\s5
\v 27 ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?>> ಉಂಟೆಂದು ನಾನು ಬಲ್ಲೆನು ಅಂದನು.
\v 28 ಅದಕ್ಕೆ ಅಗ್ರಿಪ್ಪನು; <<ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?>> ಎಂದು ಹೇಳಲು
\v 29 ಪೌಲನು; <<ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ>> ಅಂದನು.
\s5
\p
\v 30 ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;
\v 31 <<ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ>> ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
\v 32 ಅಗ್ರಿಪ್ಪನು ಫೆಸ್ತನಿಗೆ; <<ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು>> ಎಂದು ಹೇಳಿದನು.
\s5
\c 27
\s1 ಪೌಲನು ರೋಮಾಪುರಕ್ಕೆ ಪ್ರಯಾಣ ಮಾಡಿದ್ದು
\p
\v 1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ
\f +
\fr 27:1
\ft ಸೈನಿಕರ ತಂಡ
\f* ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
\v 2 ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನೀಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
\s5
\p
\v 3 ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
\v 4 ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
\v 5 ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
\v 6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
\s5
\v 7 ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಸ್ನೀಡಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
\v 8 ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
\s5
\p
\v 9 ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
\v 10 <<ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ>> ಎಂದು ಅವರನ್ನು ಎಚ್ಚರಿಸಿದನು.
\v 11 ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
\s5
\p
\v 12 ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.
\s1 ಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು
\p
\v 13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
\s5
\v 14 ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
\v 15 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
\v 16 ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
\s5
\v 17 ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
\v 18 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
\s5
\v 19 ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
\v 20 ಅನೇಕ ದಿನಗಳತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
\s5
\p
\v 21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; <<ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
\v 22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
\s5
\v 23 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
\v 24 <ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು> ನನ್ನ ಸಂಗಡ ಹೇಳಿದನು.
\v 25 ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
\v 26 ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ>> ಎಂದು ಹೇಳಿದನು.
\s1 ಹಡಗು ಒಡೆದುಹೊದದ್ದು
\s5
\p
\v 27 ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
\v 28 ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
\v 29 ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
\s5
\v 30 ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
\v 31 ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; <<ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು>> ಹೇಳಿದನು.
\v 32 ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
\s5
\p
\v 33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; <<ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
\v 34 ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು>> ಹೇಳಿ,
\v 35 ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
\s5
\v 36 ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
\v 37 ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
\v 38 ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
\s5
\p
\v 39 ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
\v 40 ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
\v 41 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
\s5
\v 42 ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
\v 43 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
\v 44 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
\s5
\c 28
\s1 ಪೌಲನು ಮೆಲೀತೆದ್ವೀಪದಲ್ಲಿ
\p
\v 1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.
\v 2 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
\s5
\v 3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.
\v 4 ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; <<ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು>> ತಮ್ಮತಮ್ಮೊಳಗೆ ಮಾತನಾಡಿಕೊಂಡರು.
\s5
\v 5 ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಒದರಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
\v 6 ಅವರು; <<ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ>> ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು <<ಇವನೊಬ್ಬ ದೇವನೇ>> ಇರಬೇಕು ಎಂದುಕೊಂಡರು.
\s1 ಮೆಲೀತೆದ್ವೀಪದಲ್ಲಿ ನಡೆದ ಸೇವೆ
\s5
\p
\v 7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
\v 8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
\v 9 ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.
\v 10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
\s1 ಪೌಲನು ರೋಮಾಪುರಕ್ಕೆ ಬಂದದ್ದು
\s5
\p
\v 11 ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
\v 12 ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.
\s5
\v 13 ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
\v 14 ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.
\v 15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
\s5
\p
\v 16 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
\p
\v 17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; <<ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
\v 18 ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
\s5
\v 19 ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
\v 20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ>> ಎಂದು ಹೇಳಿದನು.
\s5
\v 21 ಅದಕ್ಕೆ ಅವರು ಅವನಿಗೆ; <<ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
\v 22 ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ>> ಅಂದರು.
\s5
\p
\v 23 ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
\v 24 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
\s5
\v 25 ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; <<ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
\v 26 ನಿಮ್ಮ ಪಿತೃಗಳಿಗೆ ವಿವರವಾಗಿ ಹೇಳಿದ್ದೇನೆಂದರೆ;
\q1 << <ನೀನು ಈ ಜನರ ಬಳಿಗೆ ಹೋಗಿ ಅವರಿಗೆ;
\q2 ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ;
\q2 ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
\s5
\q1
\v 27 ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ;
\q2 ಇವರ ಕಿವಿ ಕಿವುಡಾಗಿದೆ;
\q2 ಇವರು ಕಣ್ಣು ಮುಚ್ಚಿಕೊಂಡಿದ್ದಾರೆ;
\q2 ತಾವು ಕಣ್ಣಿನಿಂದ ಕಂಡು,
\q2 ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು
\q2 ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ> ಎಂಬುದೇ.
\s5
\p
\v 28 <<ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು>> ಎಂದು ಹೇಳಿದನು.
\v 29 ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
\s5
\p
\v 30 ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರುಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
\v 31 ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.