kn_ulb/62-2PE.usfm

564 lines
32 KiB
Plaintext

\id 2PE
\ide UTF-8
\sts 2PE, Free Bible Kannada
\h ಪೇತ್ರನು ಬರೆದ ಎರಡನೆಯ ಪತ್ರಿಕೆ
\toc1 ಪೇತ್ರನು ಬರೆದ ಎರಡನೆಯ ಪತ್ರಿಕೆ
\toc2 ಪೇತ್ರನು ಬರೆದ ಎರಡನೆಯ ಪತ್ರಿಕೆ
\toc3 2pe
\mt1 ಪೇತ್ರನು ಬರೆದ ಎರಡನೆಯ ಪತ್ರಿಕೆ
\s5
\c 1
\s1 ಪೀಠಿಕೆ
\p
\v 1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು
\f +
\fr 1:1
\ft ರೋಮಾ. 3:21-26:
\f* ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ
\f +
\fr 1:1
\ft ರೋಮಾ. 1:12; ತೀತ. 1:4:
\f* ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
\v 2 ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ
\f +
\fr 1:2
\ft 2 ಪೇತ್ರ. 1:3,8; 2:20; 3:18. ಯೋಹಾ. 173; ಫಿಲಿ. 3:8:
\f* ಪರಿಜ್ಞಾನದಲ್ಲಿ ನಿಮಗೆ
\f +
\fr 1:2
\ft 1 ಪೇತ್ರ. 1:2; ಯೂದ. 2:
\f* ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
\s1 ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು
\s5
\p
\v 3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ
\f +
\fr 1:3
\ft 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10:
\f* ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
\v 4 ನೀವು ಲೋಕದಲ್ಲಿ
\f +
\fr 1:4
\ft 2 ಪೇತ್ರ. 2:18,20:
\f* ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ
\f +
\fr 1:4
\ft ಎಫೆ. 4:24; ಇಬ್ರಿ. 12:10; 1 ಯೋಹಾ 3:2:
\f* ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
\s5
\v 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ
\f +
\fr 1:5
\ft ಫಿಲಿ. 4:8:
\f* ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
\v 6 ಜ್ಞಾನಕ್ಕೆ
\f +
\fr 1:6
\ft ಅ. ಕೃ. 24:25; ಗಲಾ. 5:22-23:
\f* ದಮೆಯನ್ನೂ, ದಮೆಗೆ
\f +
\fr 1:6
\ft ಇಬ್ರಿ. 10:36; ಯಾಕೋಬ. 1:3;
\f* ತಾಳ್ಮೆಯನ್ನೂ,
\v 7 ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ
\f +
\fr 1:7
\ft ಇಬ್ರಿ. 13:1:
\f* ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ
\f +
\fr 1:7
\ft 1 ಕೊರಿ. 13; 1 ಯೋಹಾ 4:16:
\f* ಪ್ರೀತಿಯನ್ನೂ ಕೂಡಿಸಿರಿ.
\s5
\v 8 ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ,
\f +
\fr 1:8
\ft ಯೋಹಾ. 15:2; ತೀತ. 3:14:
\f* ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
\v 9 ಇವುಗಳಿಲ್ಲದವನು
\f +
\fr 1:9
\ft ಯೋಬ. 5:14; 12:25; ಚೆಫ. 1:17;
\f* ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ
\f +
\fr 1:9
\ft ಎಫೆ. 5:26; ತೀತ. 2:14; 1 ಯೋಹಾ. 1:7; ಪ್ರಕ. 7:14:
\f* ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
\s5
\v 10 ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ,
\f +
\fr 1:10
\ft 1 ಥೆಸ. 1:4:
\f* ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ
\f +
\fr 1:10
\ft ಫಿಲಿ. 2:12; ಇಬ್ರಿ. 3:14:
\f* ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
\v 11 ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ
\f +
\fr 1:11
\ft ಕೊಲೊ. 1:13; ಅ. ಕೃ. 14:22:
\f* ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
\s1 ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು
\s5
\p
\v 12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ
\f +
\fr 1:12
\ft 2 ಯೋಹಾ 2:
\f* ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ
\f +
\fr 1:12
\ft ಯೂದ. 5. ಫಿಲಿ. 3:1:
\f* ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
\v 13 ನಾನು
\f +
\fr 1:13
\ft 2 ಕೊರಿ. 5:1,4:
\f* ನನ್ನ ದೇಹವೆಂಬ ಗುಡಾರದಲ್ಲಿರುವ ತನಕ
\f +
\fr 1:13
\ft 2 ಪೇತ್ರ. 3:1:
\f* ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
\v 14 ಏಕೆಂದರೆ
\f +
\fr 1:14
\ft ಯೋಹಾ 21:18,19:
\f* ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು
\f +
\fr 1:14
\ft 2 ತಿಮೊ. 4:6:
\f* ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
\v 15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
\s5
\v 16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ,
\f +
\fr 1:16
\ft 1 ಥೆಸ. 2:19:
\f* ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ
\f +
\fr 1:16
\ft 1 ಕೊರಿ. 1:17:
\f* ಚಮತ್ಕಾರದಿಂದ ಕಲ್ಪಿಸಿದ
\f +
\fr 1:16
\ft 1 ತಿಮೊ. 1:4:
\f* ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ.
\f +
\fr 1:16
\ft ಮತ್ತಾ 17:1,2,6; ಮಾರ್ಕ. 9:2; ಯೋಹಾ. 1:14:
\f* ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
\v 17 ಏಕೆಂದರೆ,
\f +
\fr 1:17
\ft ಮತ್ತಾ 17:5; 3:17; ಲೂಕ. 9:35:
\f* <<ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
\v 18 ನಾವು
\f +
\fr 1:18
\ft ವಿಮೋ. 3:5; ಯೆಹೋ. 5:15:
\f* ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.
\s5
\v 19 ಇದಲ್ಲದೆ
\f +
\fr 1:19
\ft 1 ಪೇತ್ರ. 1:10:
\f* ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು
\f +
\fr 1:19
\ft ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ. 2:28; 22:16:
\f* ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ
\f +
\fr 1:19
\ft ಕೀರ್ತ. 119:105; ಯೋಹಾ 5:35:
\f* ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
\v 20 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
\v 21 ಏಕೆಂದರೆ
\f +
\fr 1:21
\ft 2 ತಿಮೊ. 3:16:
\f* ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು
\f +
\fr 1:21
\ft 1 ಪೇತ್ರ. 1:11; 2 ಸಮು. 23:2; ಅ. ಕೃ. 1:16; ಯಾಕೋಬ. 5:10:
\f* ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
\s5
\c 2
\s1 ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)
\p
\v 1 ಆದರೆ ಇಸ್ರಾಯೇಲ್ ಜನರೊಂದಿಗೆ
\f +
\fr 2:1
\ft ಧರ್ಮೋ. 13:1-3; ಯೆರೆ. 14:14; 23:16; ಅ. ಕೃ. 13:6; 1 ಯೋಹಾ 4:1:
\f* ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ
\f +
\fr 2:1
\ft ಅ. ಕೃ. 20:30; 2 ಕೊರಿ. 11:13; 1 ತಿಮೊ. 4:1:
\f* ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು
\f +
\fr 2:1
\ft ಯೂದ. 4; ಗಲಾ. 2:4:
\f* ರಹಸ್ಯವಾಗಿ ಒಳಗೆತರುವವರೂ
\f +
\fr 2:1
\ft 1 ಕೊರಿ. 6:20; 7:23; ಗಲಾ. 3:13; 4:5; ವಿಮೋ. 15:16:
\f* ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ
\f +
\fr 2:1
\ft ಮತ್ತಾ 10:33:
\f* ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
\v 2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು.
\f +
\fr 2:2
\ft ರೋಮಾ. 2:24:
\f* ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
\v 3 ಅವರು
\f +
\fr 2:3
\ft 1 ತಿಮೊ. 6:5; ತೀತ. 1:11:
\f* ದ್ರವ್ಯಾಶೆಯುಳ್ಳವರಾಗಿ
\f +
\fr 2:3
\ft ರೋಮಾ. 16:18; ಕೊಲೊ. 2:4:
\f* ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ
\f +
\fr 2:3
\ft ಧರ್ಮೋ. 32:35; ಫಿಲಿ. 3:19:
\f* ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
\s5
\v 4 ಹೇಗೆಂದರೆ
\f +
\fr 2:4
\ft ಯೂದ. 6:
\f* ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ
\f +
\fr 2:4
\ft ಮತ್ತಾ 25:41:
\f* ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ
\f +
\fr 2:4
\ft ಪ್ರಕ. 20:2,3,10:
\f* ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
\v 5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ
\f +
\fr 2:5
\ft 2 ಪೇತ್ರ. 3:6; 1 ಪೇತ್ರ. 3:20; ಆದಿ. 7:10, 8:14:
\f* ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ
\f +
\fr 2:5
\ft 1 ಪೇತ್ರ. 3:20:
\f* ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
\v 6
\f +
\fr 2:6
\ft ಆದಿ. 19:24:
\f* ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ
\f +
\fr 2:6
\ft ಅರಣ್ಯ. 26:10:
\f* ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
\s5
\v 7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ
\f +
\fr 2:7
\ft ಆದಿ. 19:16:
\f* ಲೋಟನನ್ನು ಕಾಪಾಡಿದನು.
\v 8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ
\f +
\fr 2:8
\ft ಕೀರ್ತ. 119:136,158; ಯೆಹೆ. 9:4:
\f* ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
\v 9 ಕರ್ತನು
\f +
\fr 2:9
\ft 1 ಕೊರಿ. 10:13; ಪ್ರಕ. 3:10:
\f* ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
\s5
\v 10 ಮುಖ್ಯವಾಗಿ
\f +
\fr 2:10
\ft ಯೂದ. 16,18.
\f* ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು
\f +
\fr 2:10
\ft ಯೂದ. 8.
\f* ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ.
\f +
\fr 2:10
\ft ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ.
\f* ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
\v 11
\f +
\fr 2:11
\ft ಯೂದ. 9:
\f* ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
\s5
\v 12
\f +
\fr 2:12
\ft ಯೂದ. 10; ಯೆರೆ. 12:3:
\f* ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ
\f +
\fr 2:12
\ft ಫಿಲಿ. 3:19:
\f* ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
\v 13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು.
\f +
\fr 2:13
\ft ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ.
\f* ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು
\f +
\fr 2:13
\ft 1 ಕೊರಿ. 11:21:
\f* ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು
\f +
\fr 2:13
\ft ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12:
\f* ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
\v 14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ,
\f +
\fr 2:14
\ft 1 ಪೇತ್ರ. 4:1:
\f* ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ,
\f +
\fr 2:14
\ft ಎಫೆ. 2:3:
\f* ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
\s5
\v 15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ
\f +
\fr 2:15
\ft ಅರಣ್ಯ. 22:5,7; ಧರ್ಮೋ. 23:4; ನೆಹೆ. 13:2; ಯೂದ 11:
\f* ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
\v 16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು.
\f +
\fr 2:16
\ft ಅರಣ್ಯ. 22:21,23,28:
\f* ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
\s5
\v 17 ಇವರು
\f +
\fr 2:17
\ft ಯೂದ 12:
\f* ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ.
\f +
\fr 2:17
\ft ಯೂದ 13:
\f* ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
\v 18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ
\f +
\fr 2:18
\ft 2 ಪೇತ್ರ. 1:4; 2:20:
\f* ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ
\f +
\fr 2:18
\ft ಯೂದ 16:
\f* ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
\v 19 ಇಂಥವರು
\f +
\fr 2:19
\ft ಗಲಾ. 5:13; ಯಾಕೋಬ. 1:25:
\f* ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ
\f +
\fr 2:19
\ft ಯೋಹಾ 8:34; ರೋಮಾ. 6:16:
\f* ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
\s5
\p
\v 20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ
\f +
\fr 2:20
\ft ವ. 18:
\f* ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ
\f +
\fr 2:20
\ft ಮತ್ತಾ 12:45:
\f* ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
\v 21
\f +
\fr 2:21
\ft ಯೆಹೆ. 18:24; ಲೂಕ. 12:47; ಯಾಕೋಬ. 4:17:
\f* ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
\v 22
\f +
\fr 2:22
\ft ಜ್ಞಾ. 26:11:
\f* <<ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.>> ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
\s5
\c 3
\s1 ದೇವರ ದಿನವು ತಡವಾದರೂ ಅದು ಬರುವುದು ನಿಶ್ಚಯ
\p
\v 1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
\v 2
\f +
\fr 3:2
\ft ಲೂಕ. 1:70; ಅ. ಕೃ. 3:21:
\f* ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ
\f +
\fr 3:2
\ft ಯೂದ. 17:
\f* ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ
\f +
\fr 3:2
\ft 2 ಪೇತ್ರ. 1:13:
\f* ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
\s5
\p
\v 3 ಕಡೆ ದಿನಗಳಲ್ಲಿ
\f +
\fr 3:3
\ft ಯೂದ. 18:
\f* ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
\v 4
\f +
\fr 3:4
\ft 1 ಥೆಸ. 2:19:
\f* <<ಆತನ ಪ್ರತ್ಯಕ್ಷತೆಯ ವಿಷಯವಾದ
\f +
\fr 3:4
\ft ಯೆಶಾ. 5:19; ಯೆರೆ. 17:15; ಯೆಹೆ. 11:3; 12:22, 27; ಮಲಾ. 2:17:
\f* ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?>> ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
\s5
\v 5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು
\f +
\fr 3:5
\ft ಆದಿ. 1:6, 7, 9; ಕೀರ್ತ. 33:6; ಇಬ್ರಿ. 11:3:
\f* ದೇವರ ವಾಕ್ಯದ ಮೂಲಕ
\f +
\fr 3:5
\ft ಕೀರ್ತ. 24:2; 136:6:
\f* ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
\v 6
\f +
\fr 3:6
\ft ಆದಿ. 7:11, 21; 2 ಪೇತ್ರ. 2:5:
\f* ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
\v 7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು
\f +
\fr 3:7
\ft 2 ಥೆಸ. 1:9:
\f* ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
\s5
\p
\v 8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ
\f +
\fr 3:8
\ft ಕೀರ್ತ. 90. 4:
\f* ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
\v 9
\f +
\fr 3:9
\ft ಹಬ. 2:3; ಇಬ್ರಿ. 10:37; ಪ್ರಸಂಗಿ. 8:11:
\f* ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ.
\f +
\fr 3:9
\ft ಯೆಹೆ. 18:23, 32; 33:11:
\f* ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ
\f +
\fr 3:9
\ft 1 ತಿಮೊ. 2:4:
\f* ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ
\f +
\fr 3:9
\ft ಯೆಶಾ. 30. 18; ಲೂಕ. 18:7; 1 ಪೇತ್ರ. 3:20:
\f* ದೀರ್ಘಶಾಂತಿಯುಳ್ಳವನಾಗಿದ್ದಾನೆ.
\s5
\v 10 ಆದರೂ
\f +
\fr 3:10
\ft ಮತ್ತಾ 24:42-51; ಲೂಕ. 12:39-46; 1 ಥೆಸ. 5:2; ಪ್ರಕ. 3:3:
\f* ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ.
\f +
\fr 3:10
\ft ಮತ್ತಾ 24:35; ಇಬ್ರಿ. 12:26, 27; ಪ್ರಕ. 6:14; 20:11; 21:1:
\f* ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು.
\f +
\fr 3:10
\ft ಯೆಶಾ. 34:4:
\f* ಮೂಲಧಾತುಗಳು ಉರಿದು ಲಯವಾಗಿ ಹೋಗುವವು.
\f +
\fr 3:10
\ft ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ.
\f* ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
\s1 ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
\s5
\p
\v 11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು?
\f +
\fr 3:11
\ft 1 ಪೇತ್ರ. 1:15:
\f* ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
\v 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ
\f +
\fr 3:12
\ft ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ.
\f* ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
\v 13 ಆದರೂ ನಾವು ದೇವರ ವಾಗ್ದಾನದ ಪ್ರಕಾರ
\f +
\fr 3:13
\ft ಯೆಶಾ. 65:17; 66:22; ಪ್ರಕ. 21:1:
\f* ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ.
\f +
\fr 3:13
\ft ಯೆಶಾ. 60. 21; ಪ್ರಕ. 21:27:
\f* ಅವುಗಳಲ್ಲಿ ನೀತಿಯು ವಾಸವಾಗಿರುವುದು.
\s5
\p
\v 14
\f +
\fr 3:14
\ft 1 ಕೊರಿ. 15:58; 1 ಥೆಸ. 3:13; 5:23:
\f* ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು
\f +
\fr 3:14
\ft ಯಾಕೋಬ 1:27; ಫಿಲಿ. 2:15:
\f* ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
\v 15
\f +
\fr 3:15
\ft ವ. 9:
\f* ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ.
\f +
\fr 3:15
\ft ಅ. ಕೃ. 15:25:
\f* ನಮ್ಮ ಪ್ರಿಯ ಸಹೋದರನಾದ ಪೌಲನು ಸಹ
\f +
\fr 3:15
\ft 1 ಕೊರಿ. 3:10:
\f* ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ
\f +
\fr 3:15
\ft ರೋಮಾ. 2:4:
\f* ನಿಮಗೆ ಬರೆದಿದ್ದಾನೆ.
\v 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ
\f +
\fr 3:16
\ft ರೋಮಾ. 8:19; 1 ಕೊರಿ. 15:24; 1 ಥೆಸ. 4:15:
\f* ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು
\f +
\fr 3:16
\ft ಯೆಶಾ. 28:13:
\f* ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
\s5
\v 17 ಆದಕಾರಣ ಪ್ರಿಯರೇ,
\f +
\fr 3:17
\ft 2 ಪೇತ್ರ. 1:12:
\f* ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ
\f +
\fr 3:17
\ft 2 ಪೇತ್ರ. 1:10; 1:1 ಕೊರಿ. 10:12:
\f* ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
\v 18 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ
\f +
\fr 3:18
\ft 2 ಪೇತ್ರ. 1:5; ಎಫೆ. 4:15; ಕೊಲೊ. 1:10; 2:19; 1 ಪೇತ್ರ. 2:2:
\f* ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ.
\f +
\fr 3:18
\ft ರೋಮಾ. 11:36:
\f* ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.