mr_ulb/01-GEN.usfm

3497 lines
525 KiB
Plaintext
Raw Normal View History

2019-01-21 20:20:50 +00:00
\id GEN - Kannada Unlocked Literal Bible
2018-04-26 17:00:56 +00:00
\ide UTF-8
2019-01-21 20:20:50 +00:00
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h ಆದಿಕಾಂಡ
\toc1 ಮೋಶೆಯ ಧರ್ಮಶಾಸ್ತ್ರದಲ್ಲಿ ಆದಿಕಾಂಡ ಎಂಬ ಪ್ರಥಮಭಾಗ
\toc2 ಆದಿಕಾಂಡ
2018-04-26 17:00:56 +00:00
\toc3 gen
2019-01-21 20:20:50 +00:00
\mt1 ಮೋಶೆಯ ಧರ್ಮಶಾಸ್ತ್ರದಲ್ಲಿ ಆದಿಕಾಂಡ ಎಂಬ ಪ್ರಥಮಭಾಗ
\is ಗ್ರಂಥಕರ್ತೃತ್ವ
\ip ಯೆಹೂದ್ಯ ಸಂಪ್ರದಾಯವು ಮತ್ತು ಸತ್ಯವೇದದ ಇತರ ಗ್ರಂಥಕರ್ತರು, ಪ್ರವಾದಿಯು ಮತ್ತು ಇಸ್ರಾಯೇಲ್ಯರ ವಿಮೋಚಕನು ಆದ ಮೋಶೆಯನ್ನು, ಇಡೀ ಪಂಚಗ್ರಂಥಗಳು ಅಂದರೆ ಹಳೆಯ ಒಡಂಬಡಿಕೆಯ ಮೊದಲ ಐದು ಪುಸ್ತಕಗಳ ಗ್ರಂಥಕರ್ತನು ಎಂದು ಹೆಸರಿಸುತ್ತಾರೆ. ಐಗುಪ್ತದ ರಾಜಾಸ್ಥನಗಳಲ್ಲಿನ ಅವನ ಶಿಕ್ಷಣವು (ಅ. ಕೃ. 7:22) ಮತ್ತು ಹೀಬ್ರೂವಿನಲ್ಲಿ ದೇವರ ಹೆಸರಾದ ಯೆಹೋವನೊಂದಿಗಿನ ಅವನ ನಿಕಟ ಸಂಸರ್ಗವು ಈ ಪ್ರಮೇಯವನ್ನು ಬೆಂಬಲಿಸುತ್ತದೆ. ಸ್ವತಃ ಯೇಸುವೇ ಮೋಶೆಯ ಗ್ರಂಥಕರ್ತೃತ್ವವನ್ನು ದೃಢಪಡಿಸಿದನು (ಯೋಹಾನ 5:45-47), ಆತನ ಸಮಯದ ಶಾಸ್ತ್ರಿಗಳು ಮತ್ತು ಫರಿಸಾಯರು ಹಾಗೆಯೇ ಮಾಡಿದರು (ಮತ್ತಾಯ 19:7; 22:24)
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ. ಪೂ. 1446-1405 ರ ನಡುವಿನ ಸಮಯ.
\ip ಬಹುಶಃ ಮೋಶೆಯು ಈ ಪುಸ್ತಕವನ್ನು ಇಸ್ರಾಯೇಲರು ಸೀನಾಯಿ ಅರಣ್ಯದಲ್ಲಿ ಪಾಳೆಯ ಹಾಕಿಕೊಂಡು ವಾಸಿಸುತ್ತಿದ್ದ ವರ್ಷದಲ್ಲಿ ಬರೆದಿರುವ ಸಾಧ್ಯತೆಯಿದೆ.
\is ಸ್ವೀಕೃತದಾರ
\ip ಐಗುಪ್ತದ ದಾಸತ್ವದಿಂದ ಬಿಡುಗಡೆಗೊಂಡ ಬಳಿಕ ವಾಗ್ದಾನ ದೇಶವಾದ ಕಾನಾನ್ ದೇಶವನ್ನು ಪ್ರವೇಶಿಸುವುದಕ್ಕಿಂತ ಮುಂಚೆಯಿದ್ದ ಇಸ್ರಾಯೇಲ್ಯರು ವಾಚಕರಾಗಿರಬಹುದು.
\is ಉದ್ದೇಶ
\ip ತಮ್ಮ ಜನಾಂಗದ 'ಕುಟುಂಬ-ಇತಿಹಾಸ' ವನ್ನು ವಿವರಿಸಲು ಮೋಶೆ ಈ ಪುಸ್ತಕವನ್ನು ಬರೆದನು. ಆದಿಕಾಂಡವನ್ನು ಬರೆಯುವುದರಲ್ಲಿ ಮೋಶೆಯ ಉದ್ದೇಶವೇನಂದರೆ ಆ ಜನಾಂಗವು ಹೇಗೆ ಐಗುಪ್ತದ ದಾಸತ್ವದಲ್ಲಿ ಸಿಲುಕಿಕೊಂಡಿತ್ತು ಎಂದು ವಿವರಿಸಲು (1:8), ಅವರು ಪ್ರವೇಶಿಸಲಿಕ್ಕಿದ್ದ ದೇಶವು ಏಕೆ ಅವರ "ವಾಗ್ದಾನದ ದೇಶ" ವಾಗಿತ್ತು ಎಂಬುದನ್ನು ವಿವರಿಸಲು (17:8), ಇಸ್ರಾಯೇಲರಿಗೆ ಸಂಭವಿಸಿದ ಎಲ್ಲದರ ಮೇಲಿರುವ ದೇವರ ಸಾರ್ವಭೌಮತ್ವವನ್ನು ಮತ್ತು ಐಗುಪ್ತದಲ್ಲಿನ ಅವರ ದಾಸತ್ವವು ಆಕಸ್ಮಿಕವಲ್ಲ ಆದರೆ ಅದು ದೇವರ ಬೃಹತ್ ಯೋಜನೆಯ ಒಂದು ಭಾಗವಾಗಿದೆ ಎಂದು ತೋರಿಸಲು (15:13-16, 50:20), ಲೋಕವನ್ನು ಸೃಷ್ಟಿಸಿದ ಅದೇ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನು ದೇವರು ಆಗಿದ್ದಾನೆ ಎಂದು ತೋರಿಸಲು (3: 15-16). ಇಸ್ರಾಯೇಲರ ದೇವರು ಅನೇಕ ದೇವರುಗಳಲ್ಲಿ ಒಬ್ಬ ದೇವರಲ್ಲ, ಆದರೆ ಭೂಮ್ಯಾಕಾಶಗಳ ಪರಮ ಸೃಷ್ಟಿಕರ್ತನಾಗಿದ್ದಾನೆ.
\is ಮುಖ್ಯಾಂಶ
\ip ಆರಂಭಗಳು
\iot ಪರಿವಿಡಿ
\io1 1. ಸೃಷ್ಟಿ (1:1—2:25)
\io1 2. ಮನುಷ್ಯನ ಪಾಪ (3:1-24)
\io1 3. ಆದಾಮನ ಸಂತತಿ (4:1—6:8)
\io1 4. ನೋಹನ ಸಂತತಿ (6:9—11:32)
\io1 5. ಅಬ್ರಹಾಮನ ಚರಿತ್ರೆ (12:1—25:18)
\io1 7. ಇಸಾಕ ಮತ್ತು ಅವನ ಮಕ್ಕಳ ಚರಿತ್ರೆ (25:19—36:43)
\io1 8. ಯೋಸೇಫನ ಸಂತತಿ (37:1—50:26)
2018-04-26 17:00:56 +00:00
\s5
\c 1
2019-01-21 20:20:50 +00:00
\s ದೇವರು ವಿಶ್ವವನ್ನು ಸೃಷ್ಟಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
\v 2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು.
\f +
\fr 1:2
\ft ಅಥವಾ ದೇವರ ಶಕ್ತಿ ಅಥವಾ ದೇವರಿಂದ ಬಂದ ಗಾಳಿ.
\f* ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅನಂತರ ದೇವರು <<ಬೆಳಕಾಗಲಿ>> ಎಂದು ಆಜ್ಞಾಪಿಸಲು ಬೆಳಕಾಯಿತು.
\s ಸೃಷ್ಟಿಯ ಎರಡನೆಯ ವಿವರಣೆ
\p
\v 4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
\v 5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ <<ಹಗಲು>> ಎಂದೂ, ಕತ್ತಲೆಗೆ <<ಇರುಳು>> ಎಂದೂ ಹೆಸರಿಟ್ಟನು. ಹೀಗೆ
\f +
\fr 1:5
\ft ಯೆಹೂದ್ಯರು ಸಾಯಂಕಾಲದಿಂದ ಸಾಯಂಕಾಲದವರೆಗೆ ದಿನವೆಂದು ಕರೆಯುತ್ತಿದ್ದರು.
\f* ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ಬಳಿಕ ದೇವರು <<ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ>> ಅಂದನು.
\v 7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
\v 8 ದೇವರು ಆ ಗುಮ್ಮಟಕ್ಕೆ <<ಆಕಾಶ>> ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 9 ಅನಂತರ ದೇವರು, <<ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ>> ಅಂದನು. ಹಾಗೆಯೇ ಆಯಿತು.
\v 10 ದೇವರು ಒಣನೆಲಕ್ಕೆ <<ಭೂಮಿ>> ಎಂದೂ ಜಲರಾಶಿಗೆ <<ಸಮುದ್ರ>> ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 11 ತರುವಾಯ ದೇವರು, <<ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ>> ಎಂದು ಹೇಳಿದನು, ಹಾಗೆಯೇ ಆಯಿತು.
\v 12 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
\v 13 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 14 ಬಳಿಕ ದೇವರು, <<ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
\v 15 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ>> ಅಂದನು. ಹಾಗೆಯೇ ಆಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 16 ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
\v 17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
\v 18 ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
\v 19 ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 20 ತರುವಾಯ ದೇವರು, <<ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ>> ಎಂದು ಹೇಳಿದನು.
\v 21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
2018-04-26 17:00:56 +00:00
\p
\s5
2019-01-21 20:20:50 +00:00
\v 22 ಇದಲ್ಲದೆ ದೇವರು, <<ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ>> ಎಂದು ಹೇಳಿ ಆಶೀರ್ವದಿಸಿದನು.
\v 23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 24 ಬಳಿಕ ದೇವರು, <<ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ>> ಅಂದನು. ಹಾಗೆಯೇ ಆಯಿತು.
\v 25 ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
2018-04-26 17:00:56 +00:00
\p
\s5
2019-01-21 20:20:50 +00:00
\v 26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
\v 27 ಹೀಗೆ ದೇವರು;
\q1 <<ಮನುಷ್ಯನನ್ನು ತನ್ನ ಸ್ವರೂಪದಲ್ಲಿ
\q2 ಉಂಟುಮಾಡಿದನು.
\q1 ದೇವರ ಸ್ವರೂಪದಲ್ಲಿ ಅವನನ್ನು
\q2 ಉಂಟುಮಾಡಿದನು.
\q3 ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.>>
\p
2018-04-26 17:00:56 +00:00
\s5
2019-01-21 20:20:50 +00:00
\v 28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, <<ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ>> ಎಂದು ಅವರಿಗೆ ಹೇಳಿದನು.
2018-04-26 17:00:56 +00:00
\p
2019-01-21 20:20:50 +00:00
\v 29 ಅಲ್ಲದೆ ದೇವರು, <<ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
2018-04-26 17:00:56 +00:00
\s5
2019-01-21 20:20:50 +00:00
\v 30 ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ>> ಎಂದು ಹೇಳಿದನು. ಅದು ಹಾಗೆಯೇ ಆಯಿತು.
\v 31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
2018-04-26 17:00:56 +00:00
\s5
\c 2
\p
2019-01-21 20:20:50 +00:00
\v 1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
\v 2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
\v 3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
\s ಏದೆನ್ ಉದ್ಯಾನವನವೂ ಪಾಪೋತ್ಪತ್ತಿಯೂ
2018-04-26 17:00:56 +00:00
\p
2019-01-21 20:20:50 +00:00
\v 5 ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
\v 6 ಆದರೂ ಭೂಮಿಯಿಂದ ನೀರಿನ
\f +
\fr 2:6
\ft ಅಥವಾ ಮಂಜು
\f* ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
2018-04-26 17:00:56 +00:00
\p
\s5
2019-01-21 20:20:50 +00:00
\v 7 ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
\v 8 ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 9 ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
2018-04-26 17:00:56 +00:00
\p
2019-01-21 20:20:50 +00:00
\v 10 ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 11 ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
\v 12 ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
\s5
\v 13 ಎರಡನೆಯ ನದಿಯ ಹೆಸರು ಗೀಹೋನ್, ಅದು
\f +
\fr 2:13
\ft ಐಥಿಯೋಪ್ಯ
\f* ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
\v 14 ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
2018-04-26 17:00:56 +00:00
\p
\s5
2019-01-21 20:20:50 +00:00
\v 15 ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
\v 16 ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, <<ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
\v 17 ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 18 ಅನಂತರ ಯೆಹೋವನಾದ ದೇವರು, <<ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು>> ಅಂದನು.
\p
\v 19 ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
\v 20 ಹೀಗೆ
\f +
\fr 2:20
\ft ಮನುಷ್ಯನು
\f* ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
2018-04-26 17:00:56 +00:00
\p
\s5
2019-01-21 20:20:50 +00:00
\v 21 ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
\v 22 ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
\q1
\v 23 <<ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
\q2 ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
\q3 ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು>> ಅಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
\p
\v 25 ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
2018-04-26 17:00:56 +00:00
\s5
\c 3
2019-01-21 20:20:50 +00:00
\s ಪಾಪದ ಉತ್ಪತ್ತಿ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, <<ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?>> ಎಂದು ಕೇಳಲು.
2018-04-26 17:00:56 +00:00
\p
2019-01-21 20:20:50 +00:00
\v 2 ಆ ಸ್ತ್ರೀಯು ಸರ್ಪಕ್ಕೆ, <<ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
\v 3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, <ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ> ಎಂದು ದೇವರು ಹೇಳಿದ್ದಾನೆ>> ಅಂದಳು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಆಗ ಸರ್ಪವು ಸ್ತ್ರೀಗೆ, <<ನೀವು ನಿಶ್ಚಯವಾಗಿ ಸಾಯುವುದಿಲ್ಲ.
\v 5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು>> ಎಂದು ಹೇಳಿತು.
2018-04-26 17:00:56 +00:00
\p
2019-01-21 20:20:50 +00:00
\v 6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
2018-04-26 17:00:56 +00:00
\p
2019-01-21 20:20:50 +00:00
\v 8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, <<ನೀನು ಎಲ್ಲಿದ್ದೀ?>> ಎಂದು ಕೇಳಿದನು.
\p
\v 10 ಅದಕ್ಕೆ ಅವನು, <<ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು>> ಎಂದನು.
\p
\v 11 ಅದಕ್ಕಾತನು, <<ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?>> ಎಂದು ಕೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 12 ಅದಕ್ಕೆ ಆ ಮನುಷ್ಯನು, <<ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು>> ಎಂದು ಹೇಳಿದನು.
\p
\v 13 ಯೆಹೋವನಾದ ದೇವರು ಆ ಸ್ತ್ರೀಗೆ, <<ಇದೇನು ನೀನು ಮಾಡಿದ್ದು?>> ಎಂದು ಕೇಳಲು, ಆ ಸ್ತ್ರೀಯು, <<ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು>> ಎಂದು ಉತ್ತರ ಕೊಟ್ಟಳು.
\s ದೇವರ ದಂಡನೆ
2018-04-26 17:00:56 +00:00
\p
\s5
2019-01-21 20:20:50 +00:00
\v 14 ಆಗ ಯೆಹೋವನಾದ ದೇವರು ಸರ್ಪಕ್ಕೆ;
\q <<ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
\q
\v 15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ>> ಎಂದು ಹೇಳಿದನು.
\q
\s5
\v 16 ಆ ನಂತರ ಆ ಸ್ತ್ರೀಗೆ, <<ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು>> ಎಂದು ಹೇಳಿದನು.
\q
\s5
\v 17 ಅನಂತರ ಆ ಪುರುಷನಿಗೆ, <<ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
\q
\v 18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
\q
\v 19 ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 20 ಆ ಮನುಷ್ಯನು ತನ್ನ ಹೆಂಡತಿಗೆ
\f +
\fr 3:20
\ft ಹವ್ವ ಅಂದರೆ ಜೀವ
\f* ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
\v 21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
\s ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು
2018-04-26 17:00:56 +00:00
\p
\s5
2019-01-21 20:20:50 +00:00
\v 22 ಯೆಹೋವ ದೇವರು <<ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು>> ಎಂದು ಆಜ್ಞಾಪಿಸಿದನು.
\v 23 ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
\v 24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
2018-04-26 17:00:56 +00:00
\s5
\c 4
2019-01-21 20:20:50 +00:00
\s ಕಾಯಿನನು ಮತ್ತು ಹೇಬೆಲನು
2018-04-26 17:00:56 +00:00
\p
2019-01-21 20:20:50 +00:00
\v 1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, <<ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ>> ಎಂದು ಹೇಳಿದಳು.
\v 2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
\v 4 ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
\v 5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ಆಗ ಯೆಹೋವನು ಕಾಯಿನನಿಗೆ, <<ನೀನು ಕೋಪಗೊಂಡಿದ್ದೇಕೆ?
\v 7 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು
\f +
\fr 4:8
\ft ಅಡವಿಗೆ ಹೋಗೋಣ ಬಾ ಎಂದು ಕೆಲವು ಹಸ್ತಪ್ರತಿಗಳಲ್ಲಿದೆ.
\f* ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
2018-04-26 17:00:56 +00:00
\p
2019-01-21 20:20:50 +00:00
\v 9 ಯೆಹೋವನು ಕಾಯಿನನಿಗೆ, <<ನಿನ್ನ ತಮ್ಮನಾದ ಹೇಬೆಲನು ಎಲ್ಲಿ?>> ಎಂದು ಕೇಳಲು ಅವನು, <<ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?>> ಎಂದು ಉತ್ತರ ಕೊಟ್ಟನು.
2018-04-26 17:00:56 +00:00
\p
\s5
2019-01-21 20:20:50 +00:00
\v 10 ಅದಕ್ಕೆ ಯೆಹೋವನು, <<ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
\f +
\fr 4:10
\ft ನಿನ್ನ ತಮ್ಮನ ರಕ್ತವು ಪ್ರತಿಕಾರಕ್ಕಾಗಿ ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
\f* ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
\v 11 ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
\v 12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 13 ಆಗ ಕಾಯಿನನು ಯೆಹೋವನಿಗೆ, <<ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
\v 14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು>> ಎಂದು ಹೇಳಿದನು.
2018-04-26 17:00:56 +00:00
\p
2019-01-21 20:20:50 +00:00
\v 15 ಅದಕ್ಕೆ ಯೆಹೋವನು, <<ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು>> ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 16 ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ
\f +
\fr 4:16
\ft ನೋದ್ ಎಂದರೆ ಅಲೆನಾಡು.
\f* ನೋದ್ ಎಂಬ ದೇಶದಲ್ಲಿ ನೆಲೆಸಿದನು.
\s ಕಾಯಿನನ ಸಂತಾನದವರು
\p
\v 17 ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 18 ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
2018-04-26 17:00:56 +00:00
\p
2019-01-21 20:20:50 +00:00
\v 19 ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 20 ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
\v 21 ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
\v 22 ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
2018-04-26 17:00:56 +00:00
\p
\s5
2019-01-21 20:20:50 +00:00
\v 23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು;
\q1 <<ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ;
\q2 ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ.
2019-01-21 20:23:39 +00:00
\q1 ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು;
\q2 ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
2019-01-21 20:20:50 +00:00
\q1
\v 24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ,
\q2 ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ>> ಎಂದನು.
\s ಸೇತನು ಮತ್ತು ಎನೋಷನು
\p
2018-04-26 17:00:56 +00:00
\s5
2019-01-21 20:20:50 +00:00
\v 25 ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, <<ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು>> ಎಂದು, ಆ ಮಗುವಿಗೆ <<ಸೇತ್>> ಎಂದು ಹೆಸರಿಟ್ಟಳು.
\v 26 ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, <<ಎನೋಷ್>> ಎಂದು ಹೆಸರಿಟ್ಟನು. ಜನರು, <<ಯೆಹೋವ>> ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
2018-04-26 17:00:56 +00:00
\s5
\c 5
2019-01-21 20:20:50 +00:00
\s ಆದಾಮನ ವಂಶಾವಳಿ
\r (1 ಪೂರ್ವ. 1:1-4)
2018-04-26 17:00:56 +00:00
\p
2019-01-21 20:20:50 +00:00
\v 1 ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
\v 2 ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ <<ಮನುಷ್ಯ>> ಎಂದು ಹೆಸರಿಟ್ಟನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
\v 4 ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
\v 5 ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
\v 7 ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
\v 8 ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 9 ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
\v 10 ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
\v 11 ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 12 ಕೇನಾನನು ಎಪ್ಪತ್ತು ವರ್ಷದವನಾದಾಗ,
\f +
\fr 5:12
\ft ಮಹಲಲೇಲ ಎಂದರೆ ದೇವರಿಗೆ ಸ್ತೋತ್ರ.
\f* ಮಹಲಲೇಲನನ್ನು ಪಡೆದನು.
\v 13 ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
\v 14 ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 15 ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.
\v 16 ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
\p
\v 17 ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 18 ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.
\v 19 ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
\v 20 ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.
\v 22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
\v 23 ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.
\v 24 ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
2018-04-26 17:00:56 +00:00
\p
\s5
2019-01-21 20:20:50 +00:00
\v 25 ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.
\v 26 ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
\v 27 ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 28 ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
\v 29 ಅವನಿಗೆ <<ನೋಹ>> ಎಂದು ಹೆಸರಿಟ್ಟು, <<ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 30 ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
\v 31 ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.
2018-04-26 17:00:56 +00:00
\p
\s5
2019-01-21 20:20:50 +00:00
\v 32 ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
2018-04-26 17:00:56 +00:00
\s5
\c 6
2019-01-21 20:20:50 +00:00
\s ಮನುಷ್ಯರ ಕೆಟ್ಟತನ
2018-04-26 17:00:56 +00:00
\p
2019-01-21 20:20:50 +00:00
\v 1 ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
\v 2 ಸೌಂದರ್ಯವುಳ್ಳವರಾಗಿರುವುದನ್ನು ನೋಡಿ
\f +
\fr 6:2
\ft ಪರಲೋಕದ ಆತ್ಮಗಳು.
\f* ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
\v 3 ಆಗ ಯೆಹೋವನು, <<
\f +
\fr 6:3
\ft ಜೀವವನ್ನು ನೀಡುವ ಆತ್ಮ.
\f* ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು>> ಅಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
2018-04-26 17:00:56 +00:00
\p
\s5
2019-01-21 20:20:50 +00:00
\v 5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
\v 6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
2018-04-26 17:00:56 +00:00
\p
\s5
2019-01-21 20:20:50 +00:00
\v 7 ಇದಲ್ಲದೆ ಯೆಹೋವನು, <<ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ>> ಎಂದು ದುಃಖಿಸಿದನು.
\v 8 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
\s ನೋಹನ ಚರಿತ್ರೆ
2018-04-26 17:00:56 +00:00
\p
\s5
2019-01-21 20:20:50 +00:00
\v 9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
\v 10 ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
2018-04-26 17:00:56 +00:00
\p
\s5
2019-01-21 20:20:50 +00:00
\v 11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
\v 12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
2018-04-26 17:00:56 +00:00
\p
\s5
2019-01-21 20:20:50 +00:00
\v 13 ಆಗ ದೇವರು ನೋಹನಿಗೆ, <<ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
\v 14 ನೀನು ನಿನಗೋಸ್ಕರ ತುರಾಯಿ ಮರದಿಂದ
\f +
\fr 6:14
\ft ಪೆಟ್ಟಿಗೆ ಅಥವಾ ಮಂಜೂಷ.
\f* ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
\v 15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
2018-04-26 17:00:56 +00:00
\s5
2019-01-21 20:20:50 +00:00
\v 16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
\v 17 ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
2018-04-26 17:00:56 +00:00
\p
\s5
2019-01-21 20:20:50 +00:00
\v 18 <<ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
\v 19 ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
2018-04-26 17:00:56 +00:00
\s5
2019-01-21 20:20:50 +00:00
\v 20 ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
\v 21 ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು>> ಎಂದು ಹೇಳಿದನು.
\p
\v 22 ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.
2018-04-26 17:00:56 +00:00
\s5
\c 7
2019-01-21 20:20:50 +00:00
\s ಜಲಪ್ರಳಯ
2018-04-26 17:00:56 +00:00
\p
2019-01-21 20:20:50 +00:00
\v 1 ಆಗ ಯೆಹೋವನು ನೋಹನಿಗೆ, <<ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
\v 2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
\v 3 ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
2018-04-26 17:00:56 +00:00
\s5
2019-01-21 20:20:50 +00:00
\v 4 ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ>> ಎಂದು ಹೇಳಿದನು.
2018-04-26 17:00:56 +00:00
\p
2019-01-21 20:20:50 +00:00
\v 5 ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.
\v 7 ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
\v 9 ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
\v 10 ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
2018-04-26 17:00:56 +00:00
\p
\s5
2019-01-21 20:20:50 +00:00
\v 11 ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
\v 12 ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.
2018-04-26 17:00:56 +00:00
\p
\s5
2019-01-21 20:20:50 +00:00
\v 13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
\v 14 ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
2018-04-26 17:00:56 +00:00
\s5
2019-01-21 20:20:50 +00:00
\v 15 ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
\v 16 ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 17 ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
\v 18 ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.
2018-04-26 17:00:56 +00:00
\s5
2019-01-21 20:20:50 +00:00
\v 19 ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
\v 20 ನೀರು ಆ ಬೆಟ್ಟಗಳಿಂತಲೂ
\f +
\fr 7:20
\ft ಏಳು ಮೀಟರುಗಳು.
\f* ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
\s5
\v 21 ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
2018-04-26 17:00:56 +00:00
\p
2019-01-21 20:20:50 +00:00
\v 22 ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
2018-04-26 17:00:56 +00:00
\s5
2019-01-21 20:20:50 +00:00
\v 23 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
\p
\v 24 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
2018-04-26 17:00:56 +00:00
\s5
\c 8
2019-01-21 20:20:50 +00:00
\s ಜಲಪ್ರಳಯದ ಅಂತ್ಯ
2018-04-26 17:00:56 +00:00
\p
2019-01-21 20:20:50 +00:00
\v 1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
\v 2 ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
\v 3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
\v 5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
2018-04-26 17:00:56 +00:00
\p
\s5
2019-01-21 20:20:50 +00:00
\v 6 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
\v 7 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
2018-04-26 17:00:56 +00:00
\s5
2019-01-21 20:20:50 +00:00
\v 8 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
\v 9 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 10 ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
\v 11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
\v 12 ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
2018-04-26 17:00:56 +00:00
\p
\s5
2019-01-21 20:20:50 +00:00
\v 13 ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
\v 14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
2018-04-26 17:00:56 +00:00
\p
\s5
2019-01-21 20:20:50 +00:00
\v 15 ಆಗ ದೇವರು ನೋಹನಿಗೆ,
\v 16 <<ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
\v 17 ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
\v 19 ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
\s ನೋಹನು ಯೆಹೋವನನ್ನು ಆರಾಧಿಸಿದ್ದು
2018-04-26 17:00:56 +00:00
\p
\s5
2019-01-21 20:20:50 +00:00
\v 20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
\v 21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, <<ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
\v 22 ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ>> ಎಂದನು.
2018-04-26 17:00:56 +00:00
\s5
\c 9
2019-01-21 20:20:50 +00:00
\s ನೋಹನೊಡನೆ ಒಡಂಬಡಿಕೆ
2018-04-26 17:00:56 +00:00
\p
2019-01-21 20:20:50 +00:00
\v 1 ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, <<ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
\v 2 ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
2018-04-26 17:00:56 +00:00
\s5
2019-01-21 20:20:50 +00:00
\v 3 ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
\m
\v 4 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
2018-04-26 17:00:56 +00:00
\s5
2019-01-21 20:20:50 +00:00
\v 5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
\m
\v 6 ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
\m
\v 7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
\v 9 <<ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
\v 10 ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
2018-04-26 17:00:56 +00:00
\s5
2019-01-21 20:20:50 +00:00
\v 11 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ>> ಎಂದು ಹೇಳಿದನು.
\p
\v 12 ದೇವರು ಪುನಃ ಹೇಳಿದ್ದೇನಂದರೆ, <<ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
\v 13 ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
2018-04-26 17:00:56 +00:00
\s5
2019-01-21 20:20:50 +00:00
\v 14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.
\v 15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು>> ಅಂದನು.
\p
\v 17 ಮತ್ತು ದೇವರು ನೋಹನಿಗೆ, <<ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು>> ಎಂದು ಹೇಳಿದನು.
\s ಶೇಮ್ ಯೆಫೆತರಿಗೆ ಸಿಕ್ಕ ಆಶೀರ್ವಾದ, ಕಾನಾನ್ಯರಿಗೆ ದೊರೆತ ಶಾಪ
\p
2018-04-26 17:00:56 +00:00
\s5
2019-01-21 20:20:50 +00:00
\v 18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
\v 19 ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
\v 21 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
\v 23 ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,
\v 25 <<ಕಾನಾನನು
\q ಶಾಪಗ್ರಸ್ತನಾಗಲಿ.
\q2 ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಅವನು ಇನ್ನೂ ನುಡಿದದ್ದೇನೆಂದರೆ,
\q <<ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ;
\q2 ಕಾನಾನನು ಅವರಿಗೆ ದಾಸನಾಗಿರಲಿ.
2018-04-26 17:00:56 +00:00
\q
2019-01-21 20:20:50 +00:00
\v 27 ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ,
\q2 ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ,
\q2 ಕಾನಾನನು ಅವರಿಗೆ ದಾಸನಾಗಿರಲಿ>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 28 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.
\v 29 ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.
2018-04-26 17:00:56 +00:00
\s5
\c 10
2019-01-21 20:20:50 +00:00
\s ನೋಹನ ಮಕ್ಕಳ ಸಂತಾನ
\r (1 ಪೂರ್ವ. 1:5-23)
\p
\v 1 ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 2 ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.
\p
\v 3 ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.
\p
\v 4 ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
\v 5 ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.
\p
\v 7 ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.
\v 9 ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ <<ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ>> ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
\v 10 ಶಿನಾರ್ ದೇಶದಲ್ಲಿರುವ
\f +
\fr 10:10
\ft ಬಾಬಿಲೋನ್
\f* ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
\v 12 ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.
\p
\v 13 ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
\v 14 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
\v 16 ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
\v 17 ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.
\v 18 ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
\p
\v 20 ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.
\p
\v 22 ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.
\p
\v 23 ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು.
\p
\v 25 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,
\v 27 ಹದೋರಾಮ್, ಊಜಾಲ್, ದಿಕ್ಲಾ,
\v 28 ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.
\v 29 ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
\p
2018-04-26 17:00:56 +00:00
\s5
2019-01-21 20:20:50 +00:00
\v 30 ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
\p
\v 31 ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
2018-04-26 17:00:56 +00:00
\s5
\c 11
2019-01-21 20:20:50 +00:00
\s ಬಾಬೆಲ್ ಗೋಪುರ ಮತ್ತು ಭಾಷಾಬೇಧ
\p
\v 1 ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
\v 2 ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ
\f +
\fr 11:2
\ft ಬಾಬಿಲೋನ್.
\f* ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 3 <<ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,>> ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
\v 4 ಅವರು, <<ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
\v 6 ನೋಡಿದ ಮೇಲೆ ಯೆಹೋವನು, <<ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
\v 7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
\v 9 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ
\f +
\fr 11:9
\ft ಬಾಬಿಲೋನ್
\f* ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
\s ಶೇಮನ ವಂಶದವರ ಚರಿತ್ರೆ
\p
2018-04-26 17:00:56 +00:00
\s5
2019-01-21 20:20:50 +00:00
\v 10 ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
\v 11 ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು.
\v 13 ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು.
\v 15 ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.
\v 17 ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು.
\v 19 ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು.
\v 21 ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.
\v 23 ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.
\v 25 ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
\p
\v 26 ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
\s ತೆರಹನ ವಂಶದವರ ಚರಿತ್ರೆ
\p
2018-04-26 17:00:56 +00:00
\s5
2019-01-21 20:20:50 +00:00
\v 27 ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
\v 28 ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
2018-04-26 17:00:56 +00:00
\s5
2019-01-21 20:20:50 +00:00
\v 29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
\v 30 ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 31 ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
\p
\v 32 ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.
2018-04-26 17:00:56 +00:00
\s5
\c 12
2019-01-21 20:20:50 +00:00
\s ದೇವರು ಅಬ್ರಾಮನನ್ನು ಕರೆದದ್ದು
\p
\v 1 ಯೆಹೋವನು ಅಬ್ರಾಮನಿಗೆ, <<ನೀನು, ನಿನ್ನ ಸ್ವದೇಶವನ್ನೂ,
\f +
\fr 12:1
\ft ಅಥವಾ ಜನ್ಮಸ್ಥಳದಿಂದ.
\f* ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
\v 2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
\v 3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
\v 5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
\v 7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, <<ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು>> ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
\v 9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.
\s ಅಬ್ರಾಮನು ಮತ್ತು ಸಾರಳು ಐಗುಪ್ತ ದೇಶದಲ್ಲಿ
\p
2018-04-26 17:00:56 +00:00
\s5
2019-01-21 20:20:50 +00:00
\v 10 ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
\v 11 ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, <<ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
\v 12 ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.
\v 13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.
\v 15 ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
\v 16 ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.
\v 18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, <<ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?
\v 19 ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು>> ಎಂದು ಹೇಳಿ,
\v 20 ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
2018-04-26 17:00:56 +00:00
\s5
\c 13
2019-01-21 20:20:50 +00:00
\s ಅಬ್ರಾಮನು ಲೋಟನನ್ನು ಅಗಲಿದ್ದು
\p
\v 1 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
\v 2 ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ
\v 4 ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
2018-04-26 17:00:56 +00:00
\s5
2019-01-21 20:20:50 +00:00
\v 5 ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು,
\f +
\fr 13:5
\ft ಗುಡಾರಗಳು.
\f* ಕುಟುಂಬಗಳು ಇದ್ದವು.
\v 6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.
\v 7 ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಹೀಗಿರಲು ಅಬ್ರಾಮನು ಲೋಟನಿಗೆ, <<ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
\v 9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
\v 11 ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
2018-04-26 17:00:56 +00:00
\s5
2019-01-21 20:20:50 +00:00
\v 12 ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
\v 13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
\s ಅಬ್ರಾಮನು ಹೆಬ್ರೋನಿಗೆ ಬಂದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 14 ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, <<ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
\v 15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
2018-04-26 17:00:56 +00:00
\s5
2019-01-21 20:20:50 +00:00
\v 16 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
\v 17 ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು>> ಎಂದು ಹೇಳಿದನು.
\p
\v 18 ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
2018-04-26 17:00:56 +00:00
\s5
\c 14
2019-01-21 20:20:50 +00:00
\s ಅಬ್ರಾಮನು ಲೋಟನನ್ನು ಸೆರೆಯಿಂದ ಬಿಡಿಸಿದ್ದು
\p
\v 1 ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
\v 2 ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
\v 4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
\p
\v 5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
\v 6 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
\p
\v 8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
\v 9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 10 ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
\v 11 ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
\v 12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
\p
\v 14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
\v 16 ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
\s ಅಬ್ರಾಮನನ್ನು ಯಾಜಕನಾದ ಮೆಲ್ಕೀಚೆದೆಕನು ಆಶೀರ್ವದಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 17 ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
\p
\v 18
\f +
\fr 14:18
\ft ಯೆರೂಸಲೇಮ್.
\f* ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಇವನು ಅಬ್ರಾಮನನ್ನು ಆಶೀರ್ವದಿಸಿ, <<ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
\v 20 ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ>> ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಸೊದೋಮಿನ ಅರಸನು, ಅಬ್ರಾಮನಿಗೆ, <<ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ>> ಎಂದು ಹೇಳಿದನು.
\p
\v 22 ಅಬ್ರಾಮನು, ಸೊದೋಮಿನ ಅರಸನಿಗೆ,
\v 23 <<ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. <ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.>
\v 24 ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ>> ಎಂದು ಹೇಳಿದನು.
2018-04-26 17:00:56 +00:00
\s5
\c 15
2019-01-21 20:20:50 +00:00
\s ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು
\p
\v 1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, <<ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.>>
\p
\v 2 ಅದಕ್ಕೆ ಅಬ್ರಾಮನು, <<ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?>> ಎಂದನು.
\v 3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, <<ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, <<ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು>> ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
\v 5 <<ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.>> ನಂತರ ಯೆಹೋವನು ಅಬ್ರಾಮನಿಗೆ, <<ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಅಬ್ರಾಮನು ಯೆಹೋವನನ್ನು ನಂಬಿದನು;
\f +
\fr 15:6
\ft ಗಲಾತ್ಯ. 3:6, ರೋಮಾ. 4:3, ಯಾಕೋಬ 3:26.
\f* ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
\p
\v 7 ನಂತರ ಆತನು ಅಬ್ರಾಮನಿಗೆ, <<ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ>> ಎಂದು ಹೇಳಿದನು.
\p
\v 8 <<ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?>> ಎಂದು ಕೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅದಕ್ಕೆ ಆತನು ಯೆಹೋವನಿಗೆ, <<ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ>> ಎಂದನು.
\p
\v 10 ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
\v 11 ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
\v 13 ಆಗ ಯೆಹೋವನು ಅಬ್ರಾಮನಿಗೆ, <<ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
2018-04-26 17:00:56 +00:00
\s5
2019-01-21 20:20:50 +00:00
\v 14 ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
\v 15 ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
\v 16 ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
\p
\v 18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, <<ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
\v 19 ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,
\v 20 ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
\v 21 ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,>> ಎಂದು ವಾಗ್ದಾನ ಮಾಡಿದನು.
2018-04-26 17:00:56 +00:00
\s5
\c 16
2019-01-21 20:20:50 +00:00
\s ಇಷ್ಮಾಯೇಲನ ಜನನ
2018-04-26 17:00:56 +00:00
\p
2019-01-21 20:20:50 +00:00
\v 1 ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
\v 2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, <<ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು>> ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
\v 3 ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
\p
\v 4 ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಸಾರಯಳು ಅಬ್ರಾಮನಿಗೆ, <<ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ>> ಎಂದು ಹೇಳಿದಳು.
\p
\v 6 ಆಗ ಅಬ್ರಾಮನು, <<ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು>> ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
2018-04-26 17:00:56 +00:00
\p
\s5
2019-01-21 20:20:50 +00:00
\v 7 ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
\v 8 <<ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?>> ಎಂದು ಕೇಳಲು ಅವಳು, <<ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅದಕ್ಕೆ ಯೆಹೋವನ ದೂತನು, <<ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ>> ಎಂದನು.
\v 10 ಅದಲ್ಲದೆ ಯೆಹೋವನ ದೂತನು ಅವಳಿಗೆ, <<ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಯೆಹೋವನ ದೂತನು ಅವಳಿಗೆ, <<ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ
\f +
\fr 16:11
\ft ದೇವರು ಕೇಳುವನು
\f* ಇಷ್ಮಾಯೇಲ್ ಎಂದು ಹೆಸರಿಡಬೇಕು.
\m
\v 12 ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ
\f +
\fr 16:12
\ft ಅಥವಾ ಅವನು ಅವನ ಸಂಬಂಧಿಕರ ಪೂರ್ವದಿಕ್ಕಿನಲ್ಲಿ ವಾಸಿಸುವವನು.
\f* ಎದುರಾಗಿ ವಾಸವಾಗಿರುವನು>> ಎಂದು ಹೇಳಿ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, <<ನೀನು ನನ್ನನ್ನು ನೋಡುವ ದೇವರು>> ಎಂದು ಹೆಸರಿಟ್ಟಳು: ಏಕೆಂದರೆ, <<
\f +
\fr 16:13
\ft ಎಲ್ ರೋಹಿ.
\f* ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ>> ಎಂದುಕೊಂಡಳು.
\v 14 ಈ ಸಂಗತಿಯಿಂದ ಅಲ್ಲಿರುವ ಬಾವಿಗೆ <<
\f +
\fr 16:14
\ft ನನ್ನನ್ನು ನೋಡುವ ಜೀವಸ್ವರೂಪನಾದ ದೇವರ ಬಾವಿ.
\f* ಬೆರ್ ಲಹೈರೋಯಿ>> ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.
\v 16 ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.
2018-04-26 17:00:56 +00:00
\s5
\c 17
2019-01-21 20:20:50 +00:00
\s ಸುನ್ನತಿಯು ಒಡಂಬಡಿಕೆಯ ಸಂಕೇತ
\p
\v 1 ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, <<ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
\v 2 ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
\v 4 <<ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
\v 5 ಇನ್ನು ಮುಂದೆ ನಿನಗೆ
\f +
\fr 17:5
\ft ಮಹಾ ಪಿತೃ.
\f* ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ
\f +
\fr 17:5
\ft ಅನೇಕ ಜನಾಂಗಗಳಿಗೆ ಮಹಾ ಪಿತೃ.
\f* ಅಬ್ರಹಾಮ ಎಂದು ಹೆಸರಿರುವುದು.
\v 6 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
2018-04-26 17:00:56 +00:00
\s5
2019-01-21 20:20:50 +00:00
\v 7 ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
\v 8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
\v 10 ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
\v 11 ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
2018-04-26 17:00:56 +00:00
\s5
2019-01-21 20:20:50 +00:00
\v 12 ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
\v 13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
\v 14 ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ <ಸಾರಾ> (ರಾಣಿ) ಎಂದು ಕರೆಯಬೇಕು.
\v 16 ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಅಬ್ರಹಾಮನು ಅಡ್ಡ ಬಿದ್ದು ನಕ್ಕು, <<ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?>> ಎಂದು ಮನಸ್ಸಿನಲ್ಲಿ ಅಂದುಕೊಂಡನು.
\v 18 ಅಬ್ರಹಾಮನು ದೇವರಿಗೆ, <<ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ>> ಎನ್ನಲು,
\p
2018-04-26 17:00:56 +00:00
\s5
2019-01-21 20:20:50 +00:00
\v 19 ದೇವರು, <<ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ <ಇಸಾಕ> ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
\v 20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
\v 21 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.
\p
\v 23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.
\v 25 ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
\v 26 ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
\v 27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.
2018-04-26 17:00:56 +00:00
\s5
\c 18
2019-01-21 20:20:50 +00:00
\s ಅಬ್ರಹಾಮನಿಗೆ ದೇವರು ಕೊಟ್ಟ ವಾಗ್ದಾನ
\p
\v 1 ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
\v 2 ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ,
2018-04-26 17:00:56 +00:00
\p
\s5
2019-01-21 20:20:50 +00:00
\v 3 <<ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
\v 4 ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
\v 5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು>> ಎನ್ನಲು ಅವರು, <<ನೀನು ಹೇಳಿದಂತೆ ಮಾಡಬಹುದು>> ಅಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, <<ಹಸನಾದ
\f +
\fr 18:6
\ft ಸುಮಾರು 21 ಕಿಲೋಗ್ರಾಂ.
\f* ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು>> ಎಂದು ಹೇಳಿದನು.
\p
\v 7 ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
\v 8 ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಬಳಿಕ ಅವರು ಅವನಿಗೆ, <<ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ>> ಎಂದು ಕೇಳಲು ಅವನು <<ಅಗೋ, ಗುಡಾರದಲ್ಲಿದ್ದಾಳೆ>> ಎಂದನು.
\p
\v 10 ಅದಕ್ಕೆ
\f +
\fr 18:10
\ft ಯೆಹೋವನು.
\f* ಆತನು, <<ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು>> ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 11 ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
\v 12 ಹೀಗಿರಲಾಗಿ ಸಾರಳು, <<ನನ್ನಂಥ ಮುದುಕಿಗೆ ಭೋಗವಾದೀತೇ?>> ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಯೆಹೋವನು ಅಬ್ರಹಾಮನಿಗೆ, <<ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
\v 14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು>> ಎಂದು ಹೇಳಿದನು.
\p
\v 15 ಆಗ ಸಾರಳು ಭಯಪಟ್ಟು, <<ನಾನು ನಗಲಿಲ್ಲ>> ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, <<ಹಾಗಲ್ಲ, ನೀನು ನಕ್ಕಿದ್ದುಂಟು>> ಎಂದನು.
\s ಸೊದೋಮ್ ಪಟ್ಟಣಕ್ಕಾಗಿ ಅಬ್ರಹಾಮನ ವಿಜ್ಞಾಪನೆ
\p
2018-04-26 17:00:56 +00:00
\s5
2019-01-21 20:20:50 +00:00
\v 16 ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
\v 17 ಆಗ ಯೆಹೋವನು ತನ್ನೊಳಗೆ, <<ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
\v 18 ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
\v 19 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು>> ಅಂದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಇದಲ್ಲದೆ ಯೆಹೋವನು, <<ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
\v 21 ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
\p
\v 23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, <<ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
2018-04-26 17:00:56 +00:00
\s5
2019-01-21 20:20:50 +00:00
\v 24 ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
\v 25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ>> ಎಂದು ಹೇಳಲು.
\p
\v 26 ಯೆಹೋವನು, <<ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 27 ಅದಕ್ಕೆ ಅಬ್ರಹಾಮನು, <<ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
\v 28 ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?>> ಎಂದು ಕೇಳಲು ಯೆಹೋವನು, <<ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ>> ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, <<ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು>> ಎನ್ನಲು ಆತನು, <<ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ>> ಎಂದನು.
\p
\v 30 ಅಬ್ರಹಾಮನು, <<ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು>> ಎನ್ನಲು ಆತನು, <<ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ>> ಅಂದನು.
\p
\v 31 ಅವನು, <<ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು>> ಎನ್ನಲು ಆತನು, <<ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ>> ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಅಬ್ರಹಾಮನು, <<ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು>> ಎನ್ನಲು ಆತನು, <<ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.>> ಎಂದನು.
\p
\v 33 ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
2018-04-26 17:00:56 +00:00
\s5
\c 19
2019-01-21 20:20:50 +00:00
\s ಸೊದೋಮ್ ಗೊಮೋರ ಪಟ್ಟಣಗಳ ನಾಶನ
\p
\v 1 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
\v 2 <<ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು>> ಅಂದನು. ಅವರು, <<ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ>> ಎನ್ನಲು
\v 3 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
\v 5 ಲೋಟನಿಗೆ, <<ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು>> ಕೂಗಿ ಹೇಳಿದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,
\v 7 <<ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
\v 8 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅವರು ದಾರಿ ಬಿಡು ಎಂದು ಹೇಳಿ, <<ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ>> ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.
\v 11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
\s ಲೋಟನನ್ನು ಸೊದೋಮಿನಿಂದ ಹೊರಬಂದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 12 ಆಗ ಆ ದೂತರು ಲೋಟನಿಗೆ, <<ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
\v 13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, <<ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ>> ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
\p
\v 15 ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, <<ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು>> ಎಂದು ಹೇಳಿ ತ್ವರೆಪಡಿಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
\v 17 ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, <<ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅದಕ್ಕೆ ಲೋಟನು, <<ಕರ್ತನೇ, ಅದು ನನ್ನಿಂದಾಗದು;
\v 19 ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
\v 20 ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಅದಕ್ಕಾತನು, <<ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
\v 22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ>> ಎಂದನು. ಇದರಿಂದ ಆ ಊರಿಗೆ
\f +
\fr 19:22
\ft ಚಿಕ್ಕ ಊರು.
\f* ಚೋಗರ್ ಎಂದು ಹೆಸರಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.
\v 24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
\v 25 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
\p
\v 27 ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
\v 28 ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
\s ಲೋಟನು ಮತ್ತು ಅವನ ಹೆಣ್ಣುಮಕ್ಕಳು
\p
2018-04-26 17:00:56 +00:00
\s5
2019-01-21 20:20:50 +00:00
\v 30 ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 31 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, <<ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
\v 32 ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು.
\p
\v 33 ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, <<ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು.
\v 35 ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.
\v 37 ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಮೋವಾಬ್>> (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
\v 38 ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಬೆನಮ್ಮಿ>> (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.
2018-04-26 17:00:56 +00:00
\s5
\c 20
2019-01-21 20:20:50 +00:00
\s ಅಬ್ರಹಾಮನು ಮತ್ತು ಅಬೀಮೆಲೆಕನು
\p
\v 1 ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.
\v 2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
\p
\v 3 ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, <<ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, <<ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?
\v 5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಅದಕ್ಕೆ ದೇವರು, <<ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
\v 7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ>> ಎಂದು ಕನಸಿನಲ್ಲಿ ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.
\v 9 ಅಬೀಮೆಲೆಕನು ಅಬ್ರಹಾಮನನ್ನು ಕರೆದು, <<ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ>> ಎಂದು ಹೇಳಿ,
2018-04-26 17:00:56 +00:00
\s5
2019-01-21 20:20:50 +00:00
\v 10 <<ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ>> ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.
\p
\v 11 ಅದಕ್ಕೆ ಅಬ್ರಹಾಮನು, <<ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
\v 12 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.
2018-04-26 17:00:56 +00:00
\s5
2019-01-21 20:20:50 +00:00
\v 13 ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, <ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು> ಎಂದು ತಿಳಿಸಿದೆನು>> ಎಂದನು.
\p
\v 14 ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,
2018-04-26 17:00:56 +00:00
\s5
2019-01-21 20:20:50 +00:00
\v 15 <<ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು>> ಎಂದು ಅಬೀಮೆಲೆಕನು ಹೇಳಿದನು.
\p
\v 16 ಇದಲ್ಲದೆ ಅವನು ಸಾರಳಿಗೆ, <<ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
\v 18 ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.
2018-04-26 17:00:56 +00:00
\s5
\c 21
2019-01-21 20:20:50 +00:00
\s ಇಸಾಕನ ಜನನ
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
\v 2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
\v 3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ <<ಇಸಾಕ>> ಎಂದು ಹೆಸರಿಟ್ಟನು.
\v 4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.
\p
\v 6 ಸಾರಳು, <<ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
\v 7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ>> ಎಂದು ಹೇಳಿಕೊಂಡಳು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
\s ಹಾಗರಳನ್ನು ಮತ್ತು ಇಷ್ಮಾಯೇಲನನ್ನು ಹೊರದೂಡಿದ್ದು
\p
\v 9 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
2018-04-26 17:00:56 +00:00
\s5
2019-01-21 20:20:50 +00:00
\v 10 ಅಬ್ರಹಾಮನಿಗೆ, <<ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು>> ಎಂದು ಹೇಳಿದಳು.
\p
\v 11 ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.
2018-04-26 17:00:56 +00:00
\s5
2019-01-21 20:20:50 +00:00
\v 12 ಆದರೆ ದೇವರು ಅವನಿಗೆ, <<ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
\v 13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
\p
\v 15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
\v 16 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, <<ಮಗುವು ಸಾಯುವುದನ್ನು ನೋಡಲಾರೆನು>> ಎಂದು ಹೇಳಿ ಜೋರಾಗಿ
\f +
\fr 21:16
\ft ಅಥವಾ ಆ ಹುಡುಗನು ಅತ್ತನು.
\f* ಅತ್ತಳು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, <<ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
\v 18 ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
\p
\v 20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
\v 21 ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.
\s ಅಬ್ರಹಾಮನ ಮತ್ತು ಅಬೀಮೆಲೆಕನ ಒಪ್ಪಂದ
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, <<ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
\v 23 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು>> ಎಂದು ಹೇಳಿದನು.
\p
\v 24 ಅದಕ್ಕೆ ಅಬ್ರಹಾಮನು <<ಹಾಗೆಯೇ>> ಪ್ರಮಾಣಮಾಡುತ್ತೇನೆ ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
\v 26 ಅಬೀಮೆಲೆಕನು, <<ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ>> ಎಂದನು.
\p
\v 27 ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 28 ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,
\v 29 ಅಬೀಮೆಲೆಕನು ಅಬ್ರಹಾಮನಿಗೆ <<ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?>> ಎಂದು ಕೇಳಿದನು.
\p
\v 30 ಅದಕ್ಕೆ ಅಬ್ರಹಾಮನು, <<ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು>> ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ
\f +
\fr 21:31
\ft ಅಂದರೆ ಏಳು ಬಾವಿಗಳು ಅಥವಾ ಒಡಂಬಡಿಕೆಯ ಬಾವಿ.
\f* ಬೇರ್ಷೆಬ ಎಂದು ಹೆಸರಾಯಿತು.
\p
\v 32 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
\v 34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.
2018-04-26 17:00:56 +00:00
\s5
\c 22
2019-01-21 20:20:50 +00:00
\s ಅಬ್ರಹಾಮನನ್ನು ದೇವರು ಪರೀಕ್ಷಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
\v 2 ಹೇಗೆಂದರೆ ಆತನು ಅವನನ್ನು, <<ಅಬ್ರಹಾಮನೇ>> ಎಂದು ಕರೆಯಲು ಅವನು, <<ಇಗೋ, ಇದ್ದೇನೆ>> ಎಂದನು. ಆಗ ಆತನು, <<ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು>> ಎಂದನು.
\v 3 ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
2018-04-26 17:00:56 +00:00
\s5
2019-01-21 20:20:50 +00:00
\v 4 ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,
\v 5 <<ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ>> ಎಂದು ಅಬ್ರಹಾಮನು ಹೇಳಿದನು.
\v 6 ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
2018-04-26 17:00:56 +00:00
\s5
2019-01-21 20:20:50 +00:00
\v 7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, <<ಅಪ್ಪಾ>> ಎಂದು ಕರೆಯಲು ಅಬ್ರಹಾಮನು, <<ಏನು ಮಗನೇ>> ಎಂದನು. ಇಸಾಕನು, <<ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ>> ಎಂದು ಕೇಳಿದ್ದಕ್ಕೆ,
\v 8 ಅಬ್ರಹಾಮನು, <<ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
\v 10 ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಆಗ ಯೆಹೋವನ ದೂತನು ಆಕಾಶದೊಳಗಿನಿಂದ, <<ಅಬ್ರಹಾಮನೇ, ಅಬ್ರಹಾಮನೇ>> ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, <<ಇಗೋ, ಇದ್ದೇನೆ>> ಎಂದನು.
\v 12 ಆ ದೂತನು ಅವನಿಗೆ, <<ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 13 ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
\v 14 ಆ ಸ್ಥಳಕ್ಕೆ ಅಬ್ರಹಾಮನು <<ಯೆಹೋವ ಯೀರೆ>> ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ
\f +
\fr 22:14
\ft ಯೆಹೋವ ಯೀರೆ.
\f* ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,
\v 16 <<ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
\v 17 ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
2018-04-26 17:00:56 +00:00
\s5
2019-01-21 20:20:50 +00:00
\v 18 ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.>> ಎಂದನು.
\v 19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
\s ನಾಹೋರನ ಮಕ್ಕಳು
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
\v 21 ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
\v 22 ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.
2018-04-26 17:00:56 +00:00
\s5
2019-01-21 20:20:50 +00:00
\v 23 ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
\v 24 ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.
2018-04-26 17:00:56 +00:00
\s5
\c 23
2019-01-21 20:20:50 +00:00
\s ಸಾರಳ ಮರಣ ಮತ್ತು ಸಮಾಧಿ
2018-04-26 17:00:56 +00:00
\p
2019-01-21 20:20:50 +00:00
\v 1 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು.
\v 2 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,
\v 4 <<ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ>> ಎಂದು ಕೇಳಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಹಿತ್ತಿಯರು ಅಬ್ರಹಾಮನಿಗೆ,
\v 6 <<ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ>> ಎಂದು ಉತ್ತರ ಕೊಡಲು
2018-04-26 17:00:56 +00:00
\s5
2019-01-21 20:20:50 +00:00
\v 7 ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.
\v 8 ಅವನು ಅವರ ಸಂಗಡ ಪುನಃ ಮಾತನಾಡಿ, <<ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
\v 9 ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
\v 11 <<ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು>>
2018-04-26 17:00:56 +00:00
\s5
2019-01-21 20:20:50 +00:00
\v 12 ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ
\v 13 ಎಫ್ರೋನನಿಗೆ, <<ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 14 ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,
\v 15 <<ಸ್ವಾಮಿ, ನನ್ನ ಮಾತನ್ನು ಲಾಲಿಸು;
\f +
\fr 23:15
\ft ಸುಮಾರು ನಾಲ್ಕುವರೆ ಕಿಲೋಗ್ರಾಂ.
\f* ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು>> ಎಂದನು.
\v 16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
\v 18 ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
\v 20 ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
2018-04-26 17:00:56 +00:00
\s5
\c 24
2019-01-21 20:20:50 +00:00
\s ಇಸಾಕನು ರೆಬೆಕ್ಕಳನ್ನು ಮದುವೆಯಾದ್ದದು
\p
\v 1 ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.
\v 2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, <<
\f +
\fr 24:2
\ft ಇದು ಆಗಿನ ಕಾಲದಲ್ಲಿ ಒಪ್ಪಂದವನ್ನು ದೃಢಪಡಿಸುವ ರೀತಿಯಾಗಿತ್ತು.
\f* ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
\v 3 ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,
\v 4 ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 5 ಅದಕ್ಕೆ ಆ ಸೇವಕನು, <<ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?>> ಎಂದು ಕೇಳಿದನು.
\p
\v 6 ಅಬ್ರಹಾಮನು ಅವನಿಗೆ, <<ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.
\v 7 ನನ್ನ ತಂದೆಯ ಮನೆಯಿಂದಲೂ ನಾನು
\f +
\fr 24:7
\ft ಅಥವಾ ಬಂಧುಬಳಗದ ದೇಶದಿಂದ.
\f* ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, <ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು> ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.
2018-04-26 17:00:56 +00:00
\s5
2019-01-21 20:20:50 +00:00
\v 8 ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು>> ಎಂದು ಹೇಳಿದನು.
\v 9 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು,
\f +
\fr 24:10
\ft ಮೆಸಪೊಟೋಮಿಯಾ.
\f* ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
\v 11 ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ,
\p
2018-04-26 17:00:56 +00:00
\s5
2019-01-21 20:20:50 +00:00
\v 12 <<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
\v 13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.
\v 14 ನಾನು ಯಾವ ಹುಡುಗಿಗೆ, <ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು> ಎಂದು ಹೇಳುವಾಗ, <ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ> ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
\v 16 ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, <<ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು>> ಎಂದು ಕೇಳಿಕೊಳ್ಳಲು ಆಕೆಯು,
\p
\v 18 ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ <<ಕುಡಿಯಿರಿ>> ಎಂದು ಕುಡಿಯಲು ಕೊಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ನೀರು ಕೊಟ್ಟ ಮೇಲೆ, <<ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ>> ಎಂದು ಹೇಳಿ,
\v 20 ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
2018-04-26 17:00:56 +00:00
\s5
2019-01-21 20:20:50 +00:00
\v 21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
\p
\v 22 ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, <<ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
\v 23 ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?>> ಎಂದು ಕೇಳಲು,
\p
2018-04-26 17:00:56 +00:00
\s5
2019-01-21 20:20:50 +00:00
\v 24 ಆಕೆಯು ಅವನಿಗೆ, <<ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು>> ಎಂದು ಉತ್ತರಕೊಟ್ಟಳು.
\v 25 ಇದಲ್ಲದೆ ಆಕೆಯು ಅವನಿಗೆ, <<ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,
\v 27 <<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.
\v 29 ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
\v 30 ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.
2018-04-26 17:00:56 +00:00
\s5
2019-01-21 20:20:50 +00:00
\v 31 ಅವನಿಗೆ, <<ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ>> ಎಂದು ಹೇಳಿದನು.
\p
\v 32 ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 33 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, <<ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ>> ಅನ್ನಲು ಲಾಬಾನನು, <<ಹೇಳು>> ಎಂದನು.
\p
\v 34 ಆಗ ಅವನು, <<ನಾನು ಅಬ್ರಹಾಮನ ಸೇವಕನು.
\v 35 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
\m
2018-04-26 17:00:56 +00:00
\s5
2019-01-21 20:20:50 +00:00
\v 36 ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.
\v 37 ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, <ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ
\v 38 ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.>
\m
2018-04-26 17:00:56 +00:00
\s5
2019-01-21 20:20:50 +00:00
\v 39 ನಾನು ನನ್ನ ದಣಿಗೆ, <ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ> >> ಎಂದು ಹೇಳಲು,
\p
\v 40 ಅವನು ನನಗೆ, <<ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.
\v 41 ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 42 ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, <<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
\v 43 ನೀರಿಗೆ ಬರುವ ಯಾವ ಸ್ತ್ರೀಗೆ, <ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ> ಎಂದು ನಾನು ಕೇಳುವಾಗ, ಅವಳು,
\v 44 <ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ> ಎಂದು,
\m
2018-04-26 17:00:56 +00:00
\s5
2019-01-21 20:20:50 +00:00
\v 45 ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, <ನನಗೆ ಕುಡಿಯುವುದಕ್ಕೆ ನೀರನ್ನು ಕೊಡು> ಎಂದು ಕೇಳಿದೆನು.
\v 46 ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, <ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ> ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
\m
2018-04-26 17:00:56 +00:00
\s5
2019-01-21 20:20:50 +00:00
\v 47 ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, <ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು> ಎಂದಳು.
\v 48 ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ>> ಎಂದು ವಿವರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 50 ಅದಕ್ಕೆ ಲಾಬಾನನೂ, ಬೆತೂವೇಲನೂ, <<ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;
\v 51 ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.
\v 53 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 54 ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, <<ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ>> ಎಂದು ಕೇಳಲು,
\p
\v 55 ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, <<ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು>> ಎಂದು ಹೇಳಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 56 ಅವನು ಅವರಿಗೆ, <<ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು>> ಎಂದು ಹೇಳಲು,
\p
\v 57 ಅವರು, <<ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ>> ಎಂದರು.
\v 58 ಅವರು ರೆಬೆಕ್ಕಳನ್ನು ಕರೆದು ಆಕೆಗೆ, <<ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?>> ಎಂದು ಕೇಳಿದರು. ಅದಕ್ಕೆ ಅವಳು <<ಹೋಗುತ್ತೇನೆ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 59 ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
\v 60 ಮತ್ತು ರೆಬೆಕ್ಕಳಿಗೆ,
\q1 <<ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ;
\q2 ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ>> ಎಂದು ಹೇಳಿ ಹರಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 61 ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
\p
\v 62 ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 63 ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.
\v 64 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.
\v 65 ಆಕೆಯು ಆ ಸೇವಕನಿಗೆ, <<ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?>> ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
\p
2018-04-26 17:00:56 +00:00
\s5
2019-01-21 20:20:50 +00:00
\v 66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.
\v 67 ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
2018-04-26 17:00:56 +00:00
\s5
\c 25
2019-01-21 20:20:50 +00:00
\s ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು
\r (1 ಪೂರ್ವ. 1:32-33)
\p
\v 1 ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
\v 2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
\v 3 ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
\v 4 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
2018-04-26 17:00:56 +00:00
\p
\s5
2019-01-21 20:20:50 +00:00
\v 5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
\v 6 ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
\s ಅಬ್ರಹಾಮನ ಮರಣ ಮತ್ತು ಸಮಾಧಿ
\p
2018-04-26 17:00:56 +00:00
\s5
2019-01-21 20:20:50 +00:00
\v 7 ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
\v 8 ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
\v 10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
\v 11 ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
\s ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
\v 14 ಮಿಷ್ಮಾ, ದೂಮಾ, ಮಸ್ಸಾ,
\v 15 ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
\v 16 ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
2018-04-26 17:00:56 +00:00
\p
2019-01-21 20:20:50 +00:00
\s5
\v 17 ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
\v 18 ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ
\f +
\fr 25:18
\ft ಪೂರ್ವದಿಕ್ಕಿನಲ್ಲಿ ವಾಸಿಸಿದರು.
\f* ಎದುರಾಗಿ ವಾಸಿಸಿದರು.
\s ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು
2018-04-26 17:00:56 +00:00
\p
\s5
2019-01-21 20:20:50 +00:00
\v 19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
\v 20 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
\v 22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, <<ಹೀಗಾದರೆ ನಾನು ಹೇಗೆ ಬದುಕಬೇಕು>> ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯೆಹೋವನು ಆಕೆಗೆ,
\q <<ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ;
\q ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು;
\q ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು;
\q ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
\v 25 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ <<
\f +
\fr 25:25
\ft ಮೈತುಂಬಾ ರೋಮವುಳ್ಳವನು.
\f* ಏಸಾವ>> ಎಂದು ಹೆಸರಿಟ್ಟರು.
\v 26 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ <<ಯಾಕೋಬ>> ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
\s ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
\v 28 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, <<ನಾನು ಬಹಳ ದಣಿದು ಬಂದಿದ್ದೇನೆ;
\v 30 ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು>> ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ <<ಎದೋಮ್>> ಎಂದು ಹೆಸರಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಯಾಕೋಬನು ಅವನಿಗೆ, <<ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು>> ಅನ್ನಲು,
\p
\v 32 ಏಸಾವನು, <<ಆಗಲಿ>> ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
\p
\v 33 ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
\p
\v 34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
2018-04-26 17:00:56 +00:00
\s5
\c 26
2019-01-21 20:20:50 +00:00
\s ಇಸಾಕನು ಗೆರಾರಿನಲ್ಲಿ
2018-04-26 17:00:56 +00:00
\p
2019-01-21 20:20:50 +00:00
\v 1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 2 ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, <<ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
\v 3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
2018-04-26 17:00:56 +00:00
\s5
2019-01-21 20:20:50 +00:00
\v 4 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
\v 5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು>> ಎಂದನು.
\s ಇಸಾಕನು ಹೆಂಡತಿಯನ್ನು ತಂಗಿಯೆಂದು ಹೇಳಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 6 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
\v 7 ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
\p
\v 8 ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
2018-04-26 17:00:56 +00:00
\s5
2019-01-21 20:20:50 +00:00
\v 9 ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, <<ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ>> ಎಂದು ಕೇಳಲು ಇಸಾಕನು, <<ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು>> ಎಂದನು.
\p
\v 10 ಅದಕ್ಕೆ ಅಬೀಮೆಲೆಕನು, <<ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?>>
\p
\v 11 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, <<ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು>> ಎಂದು ಆಜ್ಞೆ ಮಾಡಿದನು.
\s ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
\v 13 ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.
\v 14 ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 15 ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
\p
\v 16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, <<ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;
\v 17 ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು>> ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.
\v 20 ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ <<
\f +
\fr 26:20
\ft ಅಂದರೆ ಜಗಳ.
\f* ಏಸೆಕ್>> ಎಂದು ಹೆಸರಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 21 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ <<
\f +
\fr 26:21
\ft ಅಂದರೆ ವಿರೋಧಿಗಳಾವುದು.
\f* ಸಿಟ್ನಾ>> ಎಂದು ಹೆಸರಿಟ್ಟನು.
\v 22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, <<ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು>> ಎಂದು ಹೇಳಿ ಅದಕ್ಕೆ <<
\f +
\fr 26:22
\ft ಅಂದರೆ ವಿಶಾಲ ಸ್ಥಳ.
\f* ರೆಹೋಬೋತ್>> ಎಂದು ಹೆಸರಿಟ್ಟನು.
\s ಇಸಾಕನ ಮತ್ತು ಅಬೀಮೆಲೆಕನ ಒಡಂಬಡಿಕೆ
\p
2018-04-26 17:00:56 +00:00
\s5
2019-01-21 20:20:50 +00:00
\v 23 ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.
\v 24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, <<ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು>> ಎಂದು ಹೇಳಿದನು.
\p
\v 25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು,
\p
\v 27 ನೀವು, <<ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ>> ಎಂದು ಅವರನ್ನು ಕೇಳಿದ್ದಕ್ಕೆ ಅವರು,
\p
2018-04-26 17:00:56 +00:00
\s5
2019-01-21 20:20:50 +00:00
\v 28 <<ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
\v 29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ>> ಎಂದು ಹೇಳಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
\v 31 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, <<ನಮಗೆ ನೀರು ಸಿಕ್ಕಿತು>> ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
\v 33 ಅವನು ಆ ಬಾವಿಗೆ <<
\f +
\fr 26:33
\ft ಅಂದರೆ ಪ್ರಮಾಣ.
\f* ಷಿಬಾ>> ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ <<ಬೇರ್ಷೆಬ>> ಎಂದು ಹೆಸರಾಯಿತು.
\s ಏಸಾವನು ಹಿತ್ತಿಯರಲ್ಲಿ ಹೆಣ್ಣನ್ನು ಮದುವೆಯಾದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
\v 35 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.
2018-04-26 17:00:56 +00:00
\s5
\c 27
2019-01-21 20:20:50 +00:00
\s ಯಾಕೋಬನು ಮೋಸದಿಂದ ಆಶೀರ್ವಾದವನ್ನು ಪಡೆದುಕೊಂಡದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, <<ಮಗನೇ>> ಎನ್ನಲು ಏಸಾವನು, <<ಇಗೋ ಇದ್ದೇನೆ>> ಅಂದನು.
\p
\v 2 ಇಸಾಕನು ಅವನಿಗೆ, <<ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 3 ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು
\v 4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
\v 6 ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, <<ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ,
\v 7 <ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ> ಎಂದು ಹೇಳುವುದನ್ನು ಕೇಳಿದ್ದೇನೆ.
2018-04-26 17:00:56 +00:00
\s5
2019-01-21 20:20:50 +00:00
\v 8 ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.
\v 9 ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
\v 10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, <<ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
\v 12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಅವನ ತಾಯಿಯು ಅವನಿಗೆ, <<ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ>> ಎಂದು ಹೇಳಿದಳು.
\p
\v 14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.
\v 16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.
\v 17 ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅವನು ತಂದೆಯ ಬಳಿಗೆ ಹೋಗಿ, <<ಅಪ್ಪಾ>> ಎಂದು ಕರೆಯಲು, ತಂದೆಯು, <<ಏನು ಮಗನೇ, ನೀನು ಯಾರು?>> ಎಂದು ಕೇಳಿದನು.
\p
\v 19 ಯಾಕೋಬನು ಅವನಿಗೆ, <<ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಲು,
\p
2018-04-26 17:00:56 +00:00
\s5
2019-01-21 20:20:50 +00:00
\v 20 ಇಸಾಕನು, <<ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು>> ಎಂದು ಕೇಳಿದ್ದಕ್ಕೆ ಅವನು, <<ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು>> ಎಂದನು.
\p
\v 21 ಇಸಾಕನು ಯಾಕೋಬನಿಗೆ, <<ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, <<ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು>> ಎಂದು ಹೇಳಿದನು.
\v 23 ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಅವನು, <<ನೀನು ನಿಜವಾದ ನನ್ನ ಮಗನಾದ ಏಸಾವನೋ>> ಎಂದು ಕೇಳಿದ್ದಕ್ಕೆ ಯಾಕೋಬನು, <<ಹೌದು>> ಎನ್ನಲು,
\p
\v 25 ಇಸಾಕನು, <<ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು>> ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, <<ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು>> ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.
\p
\v 27 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ,
\q <<ಆಹಾ, ನನ್ನ ಮಗನ ಸುವಾಸನೆಯು,
\q ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
\q
2018-04-26 17:00:56 +00:00
\s5
2019-01-21 20:20:50 +00:00
\v 28 ದೇವರು ನಿನಗೆ ಆಕಾಶದ ಮಂಜನ್ನೂ,
\q ಸಾರವುಳ್ಳ ಭೂಮಿಯನ್ನೂ ಕೊಟ್ಟು
\q ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
\q
2018-04-26 17:00:56 +00:00
\s5
2019-01-21 20:20:50 +00:00
\v 29 ಜನಗಳು ನಿನ್ನನ್ನು ಆರಾಧಿಸಲಿ,
\q ಜನಾಂಗಗಳು ನಿನಗೆ ಅಧೀನವಾಗಲಿ.
\q ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು,
\q ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ.
\q ನಿನ್ನನ್ನು ಶಪಿಸುವವರಿಗೆ ಶಾಪವೂ,
\q ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ>> ಎಂದನು.
\s ಏಸಾವನು ಆಶೀರ್ವಾದಗಳನ್ನು ಕಳೆದುಕೊಂಡಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 30 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.
\v 31 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, <<ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಅವನ ತಂದೆಯಾದ ಇಸಾಕನು, <<ನೀನು ಯಾರು?>> ಎಂದು ಅವನನ್ನು ಕೇಳಲು ಅವನು, <<ನಾನು ನಿನ್ನ ಚೊಚ್ಚಲ ಮಗನಾದ ಏಸಾವನು>> ಎಂದನು.
\p
\v 33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, <<ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, <<ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು>> ಎಂದು ಬೇಡಿಕೊಳ್ಳಲು ಇಸಾಕನು,
\p
\v 35 <<ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 36 ಅದಕ್ಕೆ ಏಸಾವನು, <<
\f +
\fr 27:36
\ft ಯಾಕೋಬ ಅಂದರೆ ಪಾದವನ್ನು ಹಿಡಿದು ಎಳೆದವನು ಅಥವಾ ವಂಚಕನು.
\f* ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ>> ಎಂದು ಹೇಳಿ ತನ್ನ ತಂದೆಯನ್ನು, <<ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ>> ಎಂದು ಕೇಳಲು,
\p
\v 37 ಇಸಾಕನು ಏಸಾವನಿಗೆ, <<ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 38 ಏಸಾವನು ಅವನಿಗೆ, <<ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು>> ಎಂದು ಹೇಳಿ ಗೋಳಾಡುತ್ತಾ ಅಳಲು,
\p
2018-04-26 17:00:56 +00:00
\s5
2019-01-21 20:20:50 +00:00
\v 39 ಅವನ ತಂದೆಯಾದ ಇಸಾಕನು ಅವನಿಗೆ,
\q <<ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು
\q ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
\q
\v 40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ
\q ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ
\q ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ>> ಎಂದು ಹೇಳಿದನು.
\s ಯಾಕೋಬನು ಓಡಿಹೋದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 41 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, <<ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು>> ಎಂದುಕೊಂಡನು.
\p
\v 42 ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, <<ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
2018-04-26 17:00:56 +00:00
\s5
2019-01-21 20:20:50 +00:00
\v 43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.
\v 44 ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.
\v 45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?>> ಎಂದು ಹೇಳಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 46 ರೆಬೆಕ್ಕಳು ಇಸಾಕನಿಗೆ, <<ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?>> ಎಂದು ಹೇಳಿದಳು.
2018-04-26 17:00:56 +00:00
\s5
\c 28
\p
2019-01-21 20:20:50 +00:00
\v 1 ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, <<ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.
\v 2 ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
2018-04-26 17:00:56 +00:00
\s5
2019-01-21 20:20:50 +00:00
\v 3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
\v 4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
\s ಏಸಾವನು ಇಷ್ಮಾಯೇಲನ ತಂಗಿಯನ್ನು ಮದುವೆಯಾದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.
\v 7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.
\v 9 ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.
\s ಯಾಕೋಬನ ಕನಸು
\p
2018-04-26 17:00:56 +00:00
\s5
2019-01-21 20:20:50 +00:00
\v 10 ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
\v 11 ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 12 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
\v 13 ಇದಲ್ಲದೆ ಯೆಹೋವನು
\f +
\fr 28:13
\ft ಅಥವಾ ಅವನ ಬಳಿಯಲ್ಲಿ ನಿಂತು.
\f* ಅದರ ಮೇಲೆ ನಿಂತುಕೊಂಡು, <<ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
2018-04-26 17:00:56 +00:00
\s5
2019-01-21 20:20:50 +00:00
\v 14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
\v 15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಯಾಕೋಬನು ನಿದ್ದೆಯಿಂದ ಎಚ್ಚೆತ್ತು, <<ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು>> ಎಂದನು.
\v 17 ಅವನು ಭಯಪಟ್ಟವನಾಗಿ, <<ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
\v 19 ಇದಲ್ಲದೆ ಅವನು ಆ ಸ್ಥಳಕ್ಕೆ <<
\f +
\fr 28:19
\ft ಬೇತೇಲ್ ಅಂದರೆ ದೇವರ ಮನೆ.
\f* ಬೇತೇಲ್>> ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ <<ಲೂಜ್>> ಎಂದು ಹೆಸರಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, <<ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
\v 21 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.
\v 22 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು>> ಎಂದು ಹರಕೆಮಾಡಿಕೊಂಡನು.
2018-04-26 17:00:56 +00:00
\s5
\c 29
2019-01-21 20:20:50 +00:00
\s ಯಾಕೋಬನು ರೆಬೆಕ್ಕಳನ್ನು ಸಂಧಿಸಿದ್ದು
\p
\v 1 ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.
\v 2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
\v 3 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಯಾಕೋಬನು ಅವರಿಗೆ, <<ಅಣ್ಣಂದಿರೇ, ನೀವು ಎಲ್ಲಿಯವರು?>> ಎಂದು ಕೇಳಲು ಅವರು, <<ನಾವು ಖಾರಾನ್ ಊರಿನವರು>> ಎಂದರು.
\p
\v 5 ಅದಕ್ಕೆ ಅವನು ಅವರಿಗೆ, <<ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?>> ಎಂದು ಕೇಳಿದ್ದಕ್ಕೆ, <<ನಾವು ಅವನನ್ನು ಬಲ್ಲೆವು>> ಎಂದರು.
\p
\v 6 ಅವನು ಅವರಿಗೆ, <<ಅವನು ಕ್ಷೇಮವಾಗಿದ್ದಾನೋ?>> ಎಂದು ಕೇಳಲು ಅವರು, <<ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಯಾಕೋಬನು ಅವರಿಗೆ, <<ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
\v 8 ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ>> ಎಂದರು.
\s ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
\v 10 ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,
\v 12 <<ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು>> ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
\v 14 ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, <<ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, <<ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?>> ಎಂದು ಕೇಳಿದನು.
\p
\v 16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.
\v 17 ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.
\v 18 ಯಾಕೋಬನು ರಾಹೇಲಳನ್ನು ಪ್ರೀತಿಸಿ, <<ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು>> ಎಂದು ಹೇಳಲು,
2018-04-26 17:00:56 +00:00
\s5
2019-01-21 20:20:50 +00:00
\v 19 ಲಾಬಾನನು, <<ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು>> ಎಂದನು.
\v 20 ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ತರುವಾಯ ಯಾಕೋಬನು ಲಾಬಾನನಿಗೆ, <<ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು>> ಎಂದು ಕೇಳಿದನು.
\p
\v 22 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
\v 24 ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.
\p
\v 25 ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, <<ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ>> ಎಂದು ಕೇಳಿದ್ದಕ್ಕೆ,
\p
2018-04-26 17:00:56 +00:00
\s5
2019-01-21 20:20:50 +00:00
\v 26 ಲಾಬಾನನು, <<ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
\v 27 ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು>> ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
\v 29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.
\v 30 ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.
\s ಯಾಕೋಬನಿಗೆ ಮಕ್ಕಳು ಹುಟ್ಟಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 31 ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
\v 32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ <ರೂಬೇನ್ ಎಂದು> ಹೆಸರಿಟ್ಟಳು.>>
\p
2018-04-26 17:00:56 +00:00
\s5
2019-01-21 20:20:50 +00:00
\v 33 ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ <ಸಿಮೆಯೋನ್> ಎಂದು ಹೆಸರಿಟ್ಟಳು.>>
\p
\v 34 ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, <<ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ>> ಎಂದು ಹೇಳಿ ಅದಕ್ಕೆ <<ಲೇವಿಯೆಂದು>> ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 35 ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು>> ಎಂದು ಹೇಳಿ ಅದಕ್ಕೆ <<ಯೆಹೂದಾ>> ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.
2018-04-26 17:00:56 +00:00
\s5
\c 30
\p
2019-01-21 20:20:50 +00:00
\v 1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, <<ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು>> ಎಂದು ಹೇಳಿದಳು.
\p
\v 2 ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, <<ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 3 ಅದಕ್ಕೆ ಆಕೆಯು, <<ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು>> ಎಂದು ಹೇಳಿ,
\v 4 ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
2018-04-26 17:00:56 +00:00
\s5
2019-01-21 20:20:50 +00:00
\v 5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,
\v 6 ರಾಹೇಲಳು, <<ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ>> ಎಂದು ಹೇಳಿ ಅದಕ್ಕೆ <<ದಾನ್>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
\v 8 ರಾಹೇಲಳು, <<ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ>> ಎಂದು ಹೇಳಿ ಅದಕ್ಕೆ <<ನಫ್ತಾಲಿ>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
\v 10 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,
\v 11 ಲೇಯಳು, <<ನನಗೆ ಶುಭವಾಯಿತೆಂದು>> ಹೇಳಿ ಅದಕ್ಕೆ <<ಗಾದ್>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,
\v 13 ಲೇಯಳು, <<ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು>> ಎಂದು ಹೇಳಿ ಅದಕ್ಕೆ <<ಆಶೇರ್>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ
\f +
\fr 30:14
\ft ಈ ಹಣ್ಣುಗಳು ಸುವಾಸನೆಯುಳ್ಳವುಗಳು, ಕಾಮೋತ್ತೇಜಕವಾದವುಗಳು ಮತ್ತು ಸ್ತ್ರೀಯರಿಗೆ ಗರ್ಭಧರಿಸಲು ಉಪಯುಕ್ತವಾದವುಗಳು.
\f* ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, <<ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು>> ಎಂದು ಕೇಳಿಕೊಂಡಳು.
\p
\v 15 ಅದಕ್ಕೆ ಲೇಯಳು, <<ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?>> ಎಂದು ಹೇಳಲು ರಾಹೇಲಳು, <<ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, <<ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ>> ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
\p
\v 17 ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
\v 18 ಲೇಯಳು, <<ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅದಕ್ಕೆ <<
\f +
\fr 30:18
\ft ಇಸ್ಸಾಕಾರ್ ಅಂದರೆ ಪ್ರತಿಫಲ.
\f* ಇಸ್ಸಾಕಾರ್>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
\v 20 ಲೇಯಳು, <<ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು>> ಎಂದು ಹೇಳಿ ಅದಕ್ಕೆ <<
\f +
\fr 30:20
\ft ಜೆಬುಲೂನ್ ಅಂದರೆ ಗೌರವ.
\f* ಜೆಬುಲೂನ್>> ಎಂದು ಹೆಸರಿಟ್ಟಳು.
\p
\v 21 ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ <<ದೀನಾ>> ಎಂದು ಹೆಸರಿಟ್ಟಳು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.
\v 23 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ>> ಎಂದಳು.
\v 24 ಇದಲ್ಲದೆ ಆಕೆಯು, <<ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು>> ಎಂದು ಹೇಳಿ ಅದಕ್ಕೆ <<ಯೋಸೇಫ್>> ಎಂದು ಹೆಸರಿಟ್ಟಳು.
\s ಯಾಕೋಬನ ಮತ್ತು ಲಾಬಾನನ ಆಡುಕುರಿಗಳು
\p
2018-04-26 17:00:56 +00:00
\s5
2019-01-21 20:20:50 +00:00
\v 25 ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, <<ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
\v 26 ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
\m
2018-04-26 17:00:56 +00:00
\s5
2019-01-21 20:20:50 +00:00
\v 27 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ>> ಎಂದು ಹೇಳಲು ಲಾಬಾನನು ಅವನಿಗೆ, <<ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
\v 28 ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಅದಕ್ಕೆ ಯಾಕೋಬನು, <<ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
\v 30 ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಅದಕ್ಕೆ ಲಾಬಾನನು, <<ನಿನಗೆ ನಾನೇನು ಕೊಡಬೇಕು ಹೇಳು>> ಅನ್ನಲು ಯಾಕೋಬನು, <<ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು>>
\v 32 ಅದೇನೆಂದರೆ, <<ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
2018-04-26 17:00:56 +00:00
\s5
2019-01-21 20:20:50 +00:00
\v 33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು>> ಎಂದನು.
\p
\v 34 ಅದಕ್ಕೆ ಲಾಬಾನನು, <<ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 35 ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
\v 36 ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 37 ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,
\v 38 ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.
2018-04-26 17:00:56 +00:00
\s5
2019-01-21 20:20:50 +00:00
\v 39 ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
\v 40 ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.
\v 42 ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.
2018-04-26 17:00:56 +00:00
\s5
2019-01-21 20:20:50 +00:00
\v 43 ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.
2018-04-26 17:00:56 +00:00
\s5
\c 31
2019-01-21 20:20:50 +00:00
\s ಯಾಕೋಬನು ಲಾಬಾನನಿಂದ ಓಡಿ ಹೋದದ್ದು
\p
\v 1 <<ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು>> ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
\v 2 ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.
\p
\v 3 ಮತ್ತು ಯೆಹೋವನು ಯಾಕೋಬನಿಗೆ, <<ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ
\v 5 ಅವರಿಗೆ ಹೇಳಿದ್ದೇನಂದರೆ, <<ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.
\v 6 ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.
2018-04-26 17:00:56 +00:00
\s5
2019-01-21 20:20:50 +00:00
\v 7 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
\v 8 ನಿಮ್ಮ ತಂದೆ ನನಗೆ, <ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು <ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
\v 9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 10 <<ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
\v 11 ಆ ಕನಸಿನಲ್ಲಿ ದೇವದೂತನು, <ಯಾಕೋಬನೇ> ಎಂದು ಕರೆಯಲು ನಾನು, <ಇದ್ದೇನೆ> ಎಂದು ಹೇಳಿದಾಗ
2018-04-26 17:00:56 +00:00
\s5
2019-01-21 20:20:50 +00:00
\v 12 ಆತನು ನನಗೆ, <ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.
\v 13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು> >> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, <<ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?
\v 15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.
\v 16 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು>> ಎಂದು ಉತ್ತರ ಕೊಟ್ಟರು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.
\v 18 ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
\v 20 ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.
\v 21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.
\s ಲಾಬಾನನ್ನು ಯಾಕೋಬನನ್ನು ಬೆನ್ನಟ್ಟಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 22 ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,
\v 23 ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, <<ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು>> ಎಂದನು.
\p
\v 25 ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 26 ಲಾಬಾನನು ಯಾಕೋಬನಿಗೆ, <<ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
\v 27 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
\v 28 ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.
2018-04-26 17:00:56 +00:00
\s5
2019-01-21 20:20:50 +00:00
\v 29 ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, <ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು> ಎಂದು ಹೇಳಿದನು.
\v 30 ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?>> ಎಂದು ಕೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಅದಕ್ಕೆ ಯಾಕೋಬನು ಲಾಬಾನನಿಗೆ, <<ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.
\v 32 ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ>> ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 33 ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
2018-04-26 17:00:56 +00:00
\s5
2019-01-21 20:20:50 +00:00
\v 34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.
\p
\v 35 ರಾಹೇಲಳು ತನ್ನ ತಂದೆಗೆ, <<ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ>> ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 36 ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, <<ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
\v 37 ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
\p
2018-04-26 17:00:56 +00:00
\s5
2019-01-21 20:20:50 +00:00
\v 38 <<ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.
\v 39 ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.
\v 40 ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 41 ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
\v 42 ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು>> ಎಂದನು.
\s ಯಾಕೋಬನಿಗೂ ಲಾಬಾನನಿಗೂ ಆದ ಒಪ್ಪಂದ
\p
2018-04-26 17:00:56 +00:00
\s5
2019-01-21 20:20:50 +00:00
\v 43 ಅದಕ್ಕೆ ಲಾಬಾನನು ಯಾಕೋಬನಿಗೆ, <<ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?
\v 44 ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.
\v 46 ಯಾಕೋಬನು ತನ್ನ ಕಡೆಯವರಿಗೆ, <<ಕಲ್ಲುಗಳನ್ನು ಕೂಡಿಸಿರಿ>> ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
\v 47 ಆ ಗುಡ್ಡೆಗೆ ಲಾಬಾನನು <<
\f +
\fr 31:47
\ft ಯಗರಸಾಹದೂತ ಅಂದರೆ ಸಾಕ್ಷಿಯ ಗುಡ್ಡೆ.
\f* ಯಗರಸಾಹದೂತ>> ಎಂದೂ ಯಾಕೋಬನು <<
\f +
\fr 31:47
\ft ಗಲೇದ್ ಅಂದರೆ ಸಾಕ್ಷಿಯ ಗುಡ್ಡೆ.
\f* ಗಲೇದ್>> ಎಂದೂ ಹೆಸರಿಟ್ಟರು.
\p
2018-04-26 17:00:56 +00:00
\s5
2019-01-21 20:20:50 +00:00
\v 48 ಆಗ ಲಾಬಾನನು, <<ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ>> ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.
\v 49 ಅದಲ್ಲದೆ ಅವನು, <<ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು>> ಎಂದು ಹೇಳಿದ್ದರಿಂದ ಅದಕ್ಕೆ
\f +
\fr 31:49
\ft ಮಿಚ್ಪಾ ಅಂದರೆ ಕಾವಲು ಗೋಪುರ ಅಥವಾ ಉನ್ನತ ಸ್ಥಳ.
\f* ಮಿಚ್ಪಾ ಎಂದು ಹೆಸರಾಯಿತು
\v 50 ಮತ್ತು ಲಾಬಾನನು, <<ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 51 ಇದಲ್ಲದೆ ಲಾಬಾನನು ಯಾಕೋಬನಿಗೆ, <<ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.
\v 52 ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
\v 53 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ>> ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 54 ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
\p
\v 55 ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.
2018-04-26 17:00:56 +00:00
\s5
\c 32
2019-01-21 20:20:50 +00:00
\s ಯಾಕೋಬನ ದೈವಪುರುಷನೊಂದಿಗೆ ಹೋರಾಟ
\p
\v 1 ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
\v 2 ಯಾಕೋಬನು ಅವರನ್ನು ನೋಡಿದಾಗ, <<ಇದು ದೇವರ ಸೇನಾನಿವೇಶ>> ಎಂದು ಹೇಳಿ ಆ ಸ್ಥಳಕ್ಕೆ <<
\f +
\fr 32:2
\ft ಮಹನಯಿಮ್ ಅಂದರೆ ಸುತ್ತವರೆದ ಸೈನ್ಯ.
\f* ಮಹನಯಿಮ್>> ಎಂದು ಹೆಸರಿಟ್ಟನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
\v 4 ಕಳುಹಿಸುವಾಗ ಅವರಿಗೆ <<ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, <ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
\v 5 ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ> >> ಎಂದು ಹೇಳಿರಿ ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, <<ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ>> ಎಂದು ಹೇಳಿದಾಗ,
\p
\v 7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
\v 8 ಏಕೆಂದರೆ, <<ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು>> ಅಂದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, <<ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, <ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು> ನನಗೆ ವಾಗ್ದಾನ ಮಾಡಿದ ಯೆಹೋವನೇ,
\v 10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
2018-04-26 17:00:56 +00:00
\s5
2019-01-21 20:20:50 +00:00
\v 11 ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
\v 12 <ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?> >> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
\v 14 ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
\v 15 ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
\v 16 ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, <<ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, <<ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, <ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?> >> ಎಂದು ಕೇಳಿದರೆ,
\v 18 ಆಗ ನೀನು, <<ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ>> ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, <<ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ>> ಎಂದು ಅಪ್ಪಣೆಕೊಟ್ಟನು.
\v 20 ಯಾಕೋಬನು ತನ್ನೊಳಗೆ, <<ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ>> ಎಂದುಕೊಂಡನು.
\v 21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
\v 23 ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ
2018-04-26 17:00:56 +00:00
\s5
2019-01-21 20:20:50 +00:00
\v 24 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
\v 25 ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
\v 26 ಆ ಪುರುಷನು, <<ನನ್ನನ್ನು ಬಿಡು, ಬೆಳಗಾಗುತ್ತಿದೆ>> ಎನ್ನಲು, ಯಾಕೋಬನು, <<ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 27 ಆ ಪುರುಷನು, <<ನಿನ್ನ ಹೆಸರೇನು?>> ಎಂದು ಕೇಳಿದ್ದಕ್ಕೆ ಅವನು, <<ಯಾಕೋಬನು>> ಎಂದಾಗ,
\p
\v 28 ಅವನು ಯಾಕೋಬನಿಗೆ, <<ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ <ಇಸ್ರಾಯೇಲ್> ಎಂದು ಹೆಸರಾಗುವುದು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಯಾಕೋಬನು, <<ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು>> ಎಂದು ಅವನನ್ನು ಕೇಳಿಕೊಂಡಾಗ ಆತನು, <<ನನ್ನ ಹೆಸರನ್ನು ವಿಚಾರಿಸುವುದೇಕೆ?>> ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
\p
\v 30 ಆಗ ಯಾಕೋಬನು, <<ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ>> ಎಂದು ಹೇಳಿ ಆ ಸ್ಥಳಕ್ಕೆ
\f +
\fr 32:30
\ft ಪೆನೀಯೇಲ್ ಅಂದರೆ ದೇವರ ಮುಖ.
\f* ಪೆನೀಯೇಲ್ ಎಂದು ಹೆಸರಿಟ್ಟನು,
\p
2018-04-26 17:00:56 +00:00
\s5
2019-01-21 20:20:50 +00:00
\v 31 ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
\v 32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
2018-04-26 17:00:56 +00:00
\s5
\c 33
2019-01-21 20:20:50 +00:00
\s ಯಾಕೋಬನು ಏಸಾವನನ್ನು ಸಂಧಿಸಿದ್ದು
\p
\v 1 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
\v 2 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
\v 3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
\v 5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, <<ನಿನ್ನ ಜೊತೆಯಲ್ಲಿರುವ ಜನರು ಯಾರು?>> ಎಂದು ಕೇಳಲು ಯಾಕೋಬನು ಅವನಿಗೆ, <<ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.
\v 7 ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
\p
\v 8 ಏಸಾವನು, <<ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?>> ಎಂದು ಕೇಳಲು ಯಾಕೋಬನು, <<ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಏಸಾವನು ಅದಕ್ಕೆ, <<ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ>> ಎನ್ನಲು,
\p
\v 10 ಯಾಕೋಬನು, <<ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
\v 11 ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು>> ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ತರುವಾಯ ಏಸಾವನು, <<ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ>> ಎಂದನು.
\p
\v 13 ಅದಕ್ಕೆ ಯಾಕೋಬನು, <<ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
\v 14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಏಸಾವನು, <<ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ>> ಎನ್ನಲು ಯಾಕೋಬನು, <<ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು>> ಎಂದು ಹೇಳಿದನು.
\p
\v 16 ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.
\v 17 ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ <<ಸುಕ್ಕೋತ್>> ಎಂದು ಹೆಸರಾಯಿತು.
\s ಯಾಕೋಬನು ಶೆಕೆಮ್ ಪಟ್ಟಣವನ್ನು ಸೇರಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
\v 19 ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
\v 20 ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ <<
\f +
\fr 33:20
\ft ದೇವರು, ಇಸ್ರಾಯೇಲರ ದೇವರು, ಶಕ್ತಿವಂತನಾದ ದೇವರು.
\f* ಏಲ್ ಎಲೋಹೆ ಇಸ್ರಾಯೇಲ್>> ಎಂದು ಹೆಸರಿಟ್ಟನು.
2018-04-26 17:00:56 +00:00
\s5
\c 34
2019-01-21 20:20:50 +00:00
\s ದೀನ ಮತ್ತು ಶೆಕೆಮಿನವರು
2018-04-26 17:00:56 +00:00
\p
2019-01-21 20:20:50 +00:00
\v 1 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
\v 2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
\v 3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಶೆಕೆಮನು ತನ್ನ ತಂದೆಯಾದ ಹಮೋರನಿಗೆ, <<ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು>> ಎಂದು ಕೇಳಿಕೊಂಡನು.
\p
\v 5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
\v 7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಹಮೋರನು ಅವರಿಗೆ, <<ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
\v 9 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
\v 10 ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, <<ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
\v 12 ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ>> ಎಂದನು.
\p
\v 13 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 14 ಯಾಕೋಬನ ಮಕ್ಕಳು ಅವರಿಗೆ, <<ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
\v 15 ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
\v 16 ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
\v 17 ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
\v 19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
\v 21 <<ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
\p
2018-04-26 17:00:56 +00:00
\s5
2019-01-21 20:20:50 +00:00
\v 22 <<ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
\v 23 ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
\s ದೀನಳ ಸಹೋದರರು ಪ್ರತಿಕಾರ ಮಾಡಿದ್ದು
\p
\v 25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
\v 26 ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
\v 28 ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
\v 29 ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
\p
2018-04-26 17:00:56 +00:00
\s5
2019-01-21 20:20:50 +00:00
\v 30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, <<ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು>> ಎಂದನು.
\v 31 ಅದಕ್ಕೆ ಅವರು, <<ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ>> ಎಂದು ಕೇಳಿದರು.
2018-04-26 17:00:56 +00:00
\s5
\c 35
2019-01-21 20:20:50 +00:00
\s ಯಾಕೋಬನು ಬೇತೇಲಿಗೆ ಬಂದದ್ದು
\p
\v 1 ದೇವರು ಯಾಕೋಬನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು.
2018-04-26 17:00:56 +00:00
\p
2019-01-21 20:20:50 +00:00
\v 2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ <<ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
\v 3 ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
\v 5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
\v 7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ
\f +
\fr 35:7
\ft ಏಲ್ ಬೇತೇಲ್ ಅಂದರೆ ಬೇತೇಲಿನ ದೇವರು.
\f* ಏಲ್ ಬೇತೇಲ್ ಎಂದು ಹೆಸರಿಟ್ಟನು.
\p
\v 8 ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ
\f +
\fr 35:8
\ft ಅಲ್ಲೋನ್ ಬಾಕೂತ್ ಅಂದರೆ ಅಳುವ ಮರ.
\f* ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
\s ದೇವರು ಯಾಕೋಬನಿಗೆ ಮಾಡಿದ ವಾಗ್ದಾನ
\p
2018-04-26 17:00:56 +00:00
\s5
2019-01-21 20:20:50 +00:00
\v 9 ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
\v 10 ದೇವರು ಅವನಿಗೆ, <<ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ <ಇಸ್ರಾಯೇಲ್> ಎಂದು ಕರೆಯಿಸಿಕೊಳ್ಳುವೆ>> ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ದೇವರು ಅವನಿಗೆ, <<ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
\v 12 ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು>> ಎಂದು ಹೇಳಿದನು.
\v 13 ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
\v 15 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ <<ಬೇತೇಲ್>> ಎಂದು ಹೆಸರಿಟ್ಟನು.
\s ಬೆನ್ಯಾಮೀನ ಜನನ, ರಾಹೇಲಳ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 16 ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
\v 17 ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, <<ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು>> ಎಂದು ಹೇಳಿದಳು.
\v 18 ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, <<
\f +
\fr 35:18
\ft ದುಃಖ ಪುತ್ರನು.
\f* ಬೆನೋನಿ>> ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, <<
\f +
\fr 35:18
\ft ನನ್ನ ಬಲಗೈ ಪುತ್ರನು.
\f* ಬೆನ್ಯಾಮೀನ>> ಎಂದು ಹೆಸರಿಟ್ಟನು.
\p
\v 19 ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
\v 20 ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ <<ರಾಹೇಲಳ ಸಮಾಧಿಯ ಸ್ತಂಭ>> ಎಂದೇ ಎನಿಸಿಕೊಂಡಿದೆ.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
\r (1 ಪೂರ್ವ. 2:1-2)
\p
\v 22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
\p
\v 24 ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
\p
\v 25 ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
\s ಇಸಾಕನ ಮರಣ
\p
\v 27 ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
\p
\v 29 ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
2018-04-26 17:00:56 +00:00
\s5
\c 36
2019-01-21 20:20:50 +00:00
\s ಏಸಾವನ ವಂಶಸ್ಥರು
\r (1 ಪೂರ್ವ. 2:34-37)
\p
\v 1 ಎದೋಮ್ ಎಂಬ ಏಸಾವನ ವಂಶಾವಳಿ ಇದು:
\p
\v 2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
\v 3 ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
\v 5 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
\p
2018-04-26 17:00:56 +00:00
\s5
2019-01-21 20:20:50 +00:00
\v 6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
\v 7 ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
\v 8 ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
\p
\v 10 ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
\p
\v 11 ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
\p
\v 12 ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
\p
\v 14 ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
\v 16 ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
\p
\v 18 ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
\v 19 ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.
\s ಸೇಯೀರನ ವಂಶಸ್ಥರು
\r (1 ಪೂರ್ವ. 1:38-42)
\p
2018-04-26 17:00:56 +00:00
\s5
2019-01-21 20:20:50 +00:00
\v 20 ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
\v 21 ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
\p
\v 22 ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
\p
\v 24 ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ
\f +
\fr 36:24
\ft ಕಾಡುಕತ್ತೆಗಳು.
\f* ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
\p
\v 26 ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
\p
\v 27 ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
\p
\v 28 ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
\v 30 ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
\s ಎದೋಮ್ಯರ ಅರಸುಗಳು
\r (1 ಪೂರ್ವ. 1:43-54)
\p
2018-04-26 17:00:56 +00:00
\s5
2019-01-21 20:20:50 +00:00
\v 31 ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
\p
\v 32 ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
\p
\v 33 ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.
\p
\v 35 ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
\p
\v 36 ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 37 ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
\p
\v 38 ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
\v 39 ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
\p
2018-04-26 17:00:56 +00:00
\s5
2019-01-21 20:20:50 +00:00
\v 40 ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
\v 41 ಒಹೋಲಿಬಾಮ, ಏಲಾ, ಪೀನೋನ್,
\v 42 ಕೆನೆಜ್, ತೇಮಾನ್, ಮಿಪ್ಚಾರ್
\v 43 ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.
2018-04-26 17:00:56 +00:00
\s5
\c 37
2019-01-21 20:20:50 +00:00
\s ಯೋಸೇಫನ ಕನಸು
\p
\v 1 ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
\p
\v 2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
\v 4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
\v 6 ಅವನು ಅವರಿಗೆ, <<ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.
2018-04-26 17:00:56 +00:00
\s5
2019-01-21 20:20:50 +00:00
\v 7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು>> ಎಂದು ಹೇಳಿದನು.
\p
\v 8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, <<ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?>> ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, <<ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು>> ಎಂದು ಹೇಳಿದನು.
\p
\v 10 ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, <<ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?>> ಎಂದು ಹೇಳಿ ಗದರಿಸಿದನು.
\v 11 ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
\s ಯೋಸೇಫನನ್ನು ಮಾರಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.
\v 13 ಇಸ್ರಾಯೇಲನು ಯೋಸೇಫನಿಗೆ, <<ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು>> ಎಂದು ಹೇಳಿದನು. ಅದಕ್ಕೆ ಅವನು, <<ಆಗಲಿ, ಹೋಗುತ್ತೇನೆ>> ಎಂದನು.
\p
\v 14 ಇಸ್ರಾಯೇಲ್ಯನು ಅವನಿಗೆ, <<ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ>> ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, <<ಏನು ಹುಡುಕುತ್ತೀ?>> ಎಂದು ವಿಚಾರಿಸಿದನು.
\p
\v 16 ಅದಕ್ಕೆ ಅವನು, <<ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು>> ಎಂದನು.
\p
\v 17 ಅದಕ್ಕೆ ಆ ಮನುಷ್ಯನು, <<ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು>> ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
2018-04-26 17:00:56 +00:00
\s5
2019-01-21 20:20:50 +00:00
\v 18 ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.
\p
\v 19 ಅವರು ಒಬ್ಬರಿಗೊಬ್ಬರು, <<ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ
\v 20 ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ>> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ರೂಬೇನನು ಈ ಮಾತನ್ನು ಕೇಳಿ, <<ನಾವು ಅವನ ಪ್ರಾಣವನ್ನು ತೆಗೆಯಬಾರದು>> ಎಂದು ಹೇಳಿದನು.
\v 22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, <<ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
\v 24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
\p
\v 26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, <<ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
2018-04-26 17:00:56 +00:00
\s5
2019-01-21 20:20:50 +00:00
\v 27 ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ>> ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
\p
\v 28 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ
\f +
\fr 37:28
\ft 230 ಗ್ರಾಂ ಬೆಳ್ಳಿ, ಇದು ಯುವ ದಾಸನಿಗಿರುವ ಬೆಲೆ.
\f* ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
\v 30 ಅವನು ತನ್ನ ತಮ್ಮಂದಿರ ಬಳಿಗೆ ಬಂದು, <<ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?>> ಎಂದು ಗೋಳಾಡಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
\v 32 ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, <<ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು>> ಎಂದು ಅವನಿಗೆ ಹೇಳಿದರು.
\p
\v 33 ಯಾಕೋಬನು ಅದರ ಗುರುತು ಹಿಡಿದು, <<ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
\v 35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, <<ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು>> ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.
\p
\v 36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
2018-04-26 17:00:56 +00:00
\s5
\c 38
2019-01-21 20:20:50 +00:00
\s ಯೆಹೂದನು ಮತ್ತು ತಾಮಾರಳು
2018-04-26 17:00:56 +00:00
\p
2019-01-21 20:20:50 +00:00
\v 1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
\v 2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು
2018-04-26 17:00:56 +00:00
\s5
2019-01-21 20:20:50 +00:00
\v 3 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು <<ಏರ್>> ಎಂದು ಹೆಸರಿಟ್ಟನು.
\v 4 ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ <<ಓನಾನ್>> ಎಂದು ಹೆಸರಿಟ್ಟಳು.
\v 5 ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ <<ಶೇಲಹ>> ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ <<ತಾಮಾರ್>> ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.
\v 7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಬಳಿಕ ಯೆಹೂದನು ಓನಾನನಿಗೆ, <<ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು>> ಎಂದನು.
\v 9 ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.
\v 10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, <<ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು>> ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
2018-04-26 17:00:56 +00:00
\s5
2019-01-21 20:20:50 +00:00
\v 12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.
\v 13 ಆಗ ತಾಮಾರಳಿಗೆ, <<ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ>> ಎಂದು ತಿಳಿದು ಬಂದಿತು
\v 14 ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
2018-04-26 17:00:56 +00:00
\s5
2019-01-21 20:20:50 +00:00
\v 15 ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
\v 16 ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, <<ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು>> ಆಕೆ, <<ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?>> ಎಂದು ಕೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 17 ಅವನು, <<ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ>> ಅಂದಾಗ ಆಕೆ, <<ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು>> ಎಂದು ಹೇಳಿದ್ದಕ್ಕೆ,
\v 18 ಅವನು, <<ಏನು ಒತ್ತೇ ಇಡಲಿ>> ಎಂದು ಕೇಳಿದನು. ಆಗ ಆಕೆಯು <<ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು>> ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
2018-04-26 17:00:56 +00:00
\s5
2019-01-21 20:20:50 +00:00
\v 19 ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
\v 20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 21 ಅವನು ಅವಳ ಊರಿನವರನ್ನು, <<ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು>> ಎಂದು ಕೇಳಿದ್ದಕ್ಕೆ ಅವರು, <<ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ>> ಎಂದರು.
\v 22 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, <<ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು>> ಎಂದು ತಿಳಿಸಿದನು.
\v 23 ಅದಕ್ಕೆ ಯೆಹೂದನು, <<ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, <<ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ>> ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, <<ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು>> ಎಂದು ಹೇಳಿದನು.
\v 25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, <<ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು>> ಎಂದು ಕೇಳಿಕೊಂಡಳು.
\v 26 ಯೆಹೂದನು ಅವುಗಳ ಗುರುತನ್ನು ತಿಳಿದು, <<ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು>> ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.
\v 28 ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, <<ಇದು ಮೊದಲು ಹೊರಗೆ ಬಂದದ್ದು>> ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
2018-04-26 17:00:56 +00:00
\s5
2019-01-21 20:20:50 +00:00
\v 29 ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, <<ನೀನು ಛೇದಿಸಿಕೊಂಡು ಬಂದೆಯಾ?>> ಎಂದು ಹೇಳಿ, ಅದಕ್ಕೆ <<
\f +
\fr 38:29
\ft ಛೇಧಿಸು.
\f* ಪೆರೆಚ್>> ಎಂದು ಹೆಸರಾಯಿತು.
\v 30 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ <<
\f +
\fr 38:30
\ft ಕೆಂಪು ಬಣ್ಣದ ಹೊಳಪು.
\f* ಜೆರಹ>> ಎಂದು ಹೆಸರಾಯಿತು.
2018-04-26 17:00:56 +00:00
\s5
\c 39
2019-01-21 20:20:50 +00:00
\s ಯೋಸೇಫನು ಮತ್ತು ಪೋಟೀಫರನ ಹೆಂಡತಿ
2018-04-26 17:00:56 +00:00
\p
2019-01-21 20:20:50 +00:00
\v 1 ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
\v 2 ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.
\v 4 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.
\p
\v 6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ <<ನನ್ನ ಸಂಗಡ ಸಂಗಮಿಸಲು ಬಾ>> ಎಂದಳು.
\p
\v 8 ಆದರೆ ಅವನು ಒಪ್ಪದೆ, <<ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
\v 9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?>> ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.
\p
\v 11 ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.
\v 12 ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, <<ನನ್ನೊಂದಿಗೆ ಸಂಗಮಿಸಲು ಬಾ>> ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,
\v 14 ಮನೆಯ ಸೇವಕರನ್ನು ಕರೆದು ಅವರಿಗೆ, <<ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.
\v 15 ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.
\v 17 ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, <<ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.
\v 18 ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು>> ಎಂದು ಹೇಳಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 19 ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.
\v 20 ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
\v 22 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
\v 23 ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
2018-04-26 17:00:56 +00:00
\s5
\c 40
2019-01-21 20:20:50 +00:00
\s ಯೋಸೇಫನು ಕನಸುಗಳ ಅರ್ಥವನ್ನು ತಿಳಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
\v 2 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,
\v 3 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು
2018-04-26 17:00:56 +00:00
\s5
2019-01-21 20:20:50 +00:00
\v 4 ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
\p
\v 5 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.
\v 7 ಅದನ್ನು ಅವನು ನೋಡಿ, <<ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?>> ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
\p
\v 8 ಅವರು ಅವನಿಗೆ, <<ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ>> ಎಂದು ಹೇಳಲು ಯೋಸೇಫನು ಅವರಿಗೆ, <<ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, <<ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.
\v 10 ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.
\v 11 ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅದಕ್ಕೆ ಯೋಸೇಫನು, <<ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.
\v 13 ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
2018-04-26 17:00:56 +00:00
\s5
2019-01-21 20:20:50 +00:00
\v 14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
\v 15 ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು>> ಅಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, <<ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
\v 17 ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಅದಕ್ಕೆ ಯೋಸೇಫನು, <<ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.
\v 19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
\v 21 ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
\v 22 ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
\p
\v 23 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
2018-04-26 17:00:56 +00:00
\s5
\c 41
2019-01-21 20:20:50 +00:00
\s ಫರೋಹನ ಕನಸುಗಳು
2018-04-26 17:00:56 +00:00
\p
2019-01-21 20:20:50 +00:00
\v 1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
\v 2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
\v 3 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
2018-04-26 17:00:56 +00:00
\s5
2019-01-21 20:20:50 +00:00
\v 4 ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
\p
\v 5 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
\v 6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
2018-04-26 17:00:56 +00:00
\s5
2019-01-21 20:20:50 +00:00
\v 7 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
\p
\v 8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, <<ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
\v 10 ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
\v 11 ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 12 ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
\v 13 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
\p
\v 15 ಆಗ ಫರೋಹನು ಯೋಸೇಫನಿಗೆ, <<ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ>> ಎಂದು ಹೇಳಿದನು.
\p
\v 16 ಅದಕ್ಕೆ ಯೋಸೇಫನು, <<ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆಗ ಫರೋಹನು ಯೋಸೇಫನಿಗೆ, <<ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.>>
\v 18 ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
\v 20 ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
\v 21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 22 <<ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
\v 23 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
\v 24 ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಯೋಸೇಫನು ಫರೋಹನಿಗೆ, <<ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
\v 26 ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
2018-04-26 17:00:56 +00:00
\s5
2019-01-21 20:20:50 +00:00
\v 27 ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
\v 28 ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
\v 29 ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
2018-04-26 17:00:56 +00:00
\s5
2019-01-21 20:20:50 +00:00
\v 30 ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
\v 31 ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
\v 32 ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
\p
2018-04-26 17:00:56 +00:00
\s5
2019-01-21 20:20:50 +00:00
\v 33 <<ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
\v 34 ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
2018-04-26 17:00:56 +00:00
\s5
2019-01-21 20:20:50 +00:00
\v 35 ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
\v 36 ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 37 ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
\v 38 ಫರೋಹನು ತನ್ನ ಸೇವಕರಿಗೆ, <<ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 39 ಫರೋಹನು ಯೋಸೇಫನಿಗೆ, <<ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
\v 40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು>> ಎಂದು ಹೇಳಿದನು.
\p
\v 41 ಫರೋಹನು ಯೋಸೇಫನಿಗೆ, <<ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ>> ಎಂದು ಹೇಳಿ,
2018-04-26 17:00:56 +00:00
\s5
2019-01-21 20:20:50 +00:00
\v 42 ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
\v 43 ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, <<ಅವನ ಮುಂದೆ ಅಡ್ಡ ಬೀಳಿರಿ>> ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 44 ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, <<ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು>> ಎಂದು ಹೇಳಿದನು.
\v 45 ಇದಲ್ಲದೆ ಫರೋಹನು ಯೋಸೇಫನಿಗೆ <<ಸಾಫ್ನತ್ಪನ್ನೇಹ>> ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
\s ಏಳು ವರ್ಷ ಬರಗಾಲ
\p
2018-04-26 17:00:56 +00:00
\s5
2019-01-21 20:20:50 +00:00
\v 46 ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
\v 47 ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
2018-04-26 17:00:56 +00:00
\s5
2019-01-21 20:20:50 +00:00
\v 48 ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
\v 49 ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 50 ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
\v 51 ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, <<ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು>> ಎಂದು ಹೇಳಿ ಅವನಿಗೆ <<
\f +
\fr 41:51
\ft ಮರೆತುಹೋಗುವಂತೆ ಮಾಡುವುದು.
\f* ಮನಸ್ಸೆ>> ಎಂದು ಹೆಸರಿಟ್ಟನು.
\v 52 ಎರಡನೆಯ ಮಗನು ಹುಟ್ಟಿದಾಗ, <<ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ>> ಎಂದು ಹೇಳಿ ಆ ಮಗನಿಗೆ <<
\f +
\fr 41:52
\ft ಎರಡರಷ್ಟು ಅಭಿವೃದ್ಧಿ.
\f* ಎಫ್ರಾಯೀಮ್>> ಎಂದು ಹೆಸರಿಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 53 ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
\v 54 ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 55 ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, <<ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ>> ಎಂದು ಹೇಳಿದನು.
\p
\v 56 ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
\v 57 ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
2018-04-26 17:00:56 +00:00
\s5
\c 42
2019-01-21 20:20:50 +00:00
\s ಯೋಸೇಫನ ಸಹೋದರರು ಐಗುಪ್ತಕ್ಕೆ ಹೋದದ್ದು
\p
\v 1 ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, <<ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?>>
\v 2 <<ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ>> ಎಂದು ಹೇಳಿದನು.
\p
\v 3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
\v 4 ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ <<ಕೇಡು ಉಂಟಾದೀತೆಂದು>> ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
2018-04-26 17:00:56 +00:00
\p
\s5
2019-01-21 20:20:50 +00:00
\v 5 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
\p
\v 6 ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 7 ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, <<ನೀವು ಎಲ್ಲಿಂದ ಬಂದವರು>> ಎಂದು ಕೇಳಿದನು. ಅವರು, <<ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ>> ಎಂದರು.
\p
\v 8 ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 9 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, <<ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು>> ಎಂದು ಹೇಳಿದನು.
\p
\v 10 ಅದಕ್ಕೆ ಅವರು, <<ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
\v 11 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ>> ಅಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಅವನು ಅವರಿಗೆ, <<ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ>> ಎಂದು ಹೇಳಿದನು.
\p
\v 13 ಅದಕ್ಕೆ ಅವರು, <<ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯೋಸೇಫನು ಅವರಿಗೆ, <<ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
\v 15 ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
\v 16 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ>> ಎಂದು ಹೇಳಿದನು.
\v 17 ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, <<ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
\v 19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
\v 20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ>> ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, <<ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ>> ಎಂದು ಮಾತನಾಡಿಕೊಂಡರು.
\p
\v 22 ಅದಕ್ಕೆ ರೂಬೇನನು, <<ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
\p
\v 24 ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
\s ಯೋಸೇಫನ ಸಹೋದರರು ಕಾನಾನ್ ದೇಶಕ್ಕೆ ಮರಳಿಬಂದದ್ದು
\p
\v 25 ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 26 ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
\p
\v 27 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
\v 28 ಅವನು ತನ್ನ ಅಣ್ಣತಮ್ಮಂದಿರಿಗೆ, <<ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ>> ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, <<ದೇವರು ನಮಗೆ ಹೀಗೆ ಮಾಡಿದ್ದೇನು?>> ಎಂದು ಅಂದುಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
\v 30 ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
\v 31 ನಾವು ಅವನಿಗೆ, <<ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
\v 32 ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ>> ಎಂದು ಹೇಳಿದೆವು.
\p
2018-04-26 17:00:56 +00:00
\s5
2019-01-21 20:20:50 +00:00
\v 33 ಅದಕ್ಕೆ <<ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
\v 34 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು>> ಎಂದು ಹೇಳಿದನು ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 35 ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
\v 36 ಆಗ ಅವರ ತಂದೆಯಾದ ಯಾಕೋಬನು, <<ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 37 ರೂಬೇನನು ತನ್ನ ತಂದೆಗೆ, <<ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ>> ಎಂದು ಹೇಳಿದನು.
\p
\v 38 ಆದರೆ ಯಾಕೋಬನು ಅವರಿಗೆ, <<ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ>> ಎಂದು ಹೇಳಿದನು.
2018-04-26 17:00:56 +00:00
\s5
\c 43
2019-01-21 20:20:50 +00:00
\s ಯೋಸೇಫನ ಸಹೋದರರು ಎರಡನೆಯ ಸಾರಿ ಐಗುಪ್ತಕ್ಕೆ ಹೋದದ್ದು
\p
\v 1 ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.
\v 2 ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, <<ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ>> ಎಂದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, <<ಆ ಮನುಷ್ಯನು ನಮಗೆ <ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು> ಎಂದು ಖಂಡಿತವಾಗಿ>> ಹೇಳಿದ್ದಾನೆ.
\v 4 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.
\v 5 ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ <<ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು>> ಎಂದು ಹೇಳಿದ್ದಾನೆ.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಅದಕ್ಕೆ ಇಸ್ರಾಯೇಲನು, <<ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?>> ಎಂದು ಹೇಳಿದನು.
\p
\v 7 ಅವರು, <<ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು>> ಎಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, <<ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.
\v 9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.
\v 10 ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, <<ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
\v 12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.
2018-04-26 17:00:56 +00:00
\s5
2019-01-21 20:20:50 +00:00
\v 13 ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.
\v 14 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ>> ಎಂದು ಹೇಳಿದನು.
\p
\v 15 ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, <<ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು>> ಎಂದು ಅಪ್ಪಣೆಕೊಟ್ಟನು.
\p
\v 17 ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, <<ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ>> ಎಂದುಕೊಂಡರು.
\p
\v 19 ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,
\v 20 <<ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.
2018-04-26 17:00:56 +00:00
\s5
2019-01-21 20:20:50 +00:00
\v 21 ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
\v 22 ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು>> ಎಂದು ಹೇಳಿದರು.
\p
\v 23 ಅದಕ್ಕೆ ಅವನು, <<ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು>> ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
\v 25 ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
\v 27 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, <<ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?>> ಎಂದು ಕೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 28 ಅವರು ಅದಕ್ಕೆ, <<ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ>> ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.
\p
\v 29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, <<ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?>> ಎಂದು ಕೇಳಿ ಅವನಿಗೆ, <<ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 30 ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
\p
\v 31 ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, <<ಊಟಕ್ಕೆ ಬಡಿಸಿರಿ>> ಎಂದು ಅಪ್ಪಣೆ ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
\v 33 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
\v 34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
2018-04-26 17:00:56 +00:00
\s5
\c 44
2019-01-21 20:20:50 +00:00
\s ಯೋಸೇಫನ ಬೆಳ್ಳಿಯ ಪಾತ್ರೆ
\p
\v 1 ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, <<ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
\v 2 ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು>> ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಅವರೆಲ್ಲರೂ ಬೆಳಿಗ್ಗೆ ಹೊತ್ತು ಅವರು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.
\v 4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, <<ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
\v 5 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ>> ಎಂದು ಅವರಿಗೆ ಹೇಳು ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.
\v 7 ಅವರು ಅವನಿಗೆ, <<ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
\v 9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು>> ಎಂದರು.
\p
\v 10 ಅದಕ್ಕೆ ಅವನು, <<ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು>> ಎಂದು ಹೇಳಿದಾಗ,
\p
2018-04-26 17:00:56 +00:00
\s5
2019-01-21 20:20:50 +00:00
\v 11 ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
\v 12 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
\v 13 ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
\v 15 ಯೋಸೇಫನು ಅವರಿಗೆ, <<ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?>> ಎಂದು ಕೇಳಲು,
\p
2018-04-26 17:00:56 +00:00
\s5
2019-01-21 20:20:50 +00:00
\v 16 ಯೆಹೂದನು, <<ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು>> ಎಂದನು.
\p
\v 17 ಯೋಸೇಫನು, <<ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಯೆಹೂದನು ಹತ್ತಿರಕ್ಕೆ ಬಂದು, <<ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
\v 19 ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, <ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?> ಎಂದು ಕೇಳಲು,
2018-04-26 17:00:56 +00:00
\s5
2019-01-21 20:20:50 +00:00
\v 20 ನಾವು <ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು> ಎಂದು ಹೇಳಿದೆವು.
\p
\v 21 <<ಅದಕ್ಕೆ ತಾವು, <ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ> ಎಂದು ಅಪ್ಪಣೆಕೊಡಲು,
\v 22 ನಾವು ಸ್ವಾಮಿಯವರಿಗೆ, <ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು> ಎಂದು ಹೇಳಿದೆವು.
2018-04-26 17:00:56 +00:00
\s5
2019-01-21 20:20:50 +00:00
\v 23 ಅದಕ್ಕೆ ನೀವು, <ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು> ಎಂದು ಅಪ್ಪಣೆಕೊಟ್ಟಿರಿ.
\v 24 ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು.
\p
\v 25 <<ನಮ್ಮ ತಂದೆಯು, <ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ> ಎಂದು ಹೇಳಿದಾಗ,
\v 26 ನಾವು ಆತನಿಗೆ, <ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ> ಎಂದು ಹೇಳಿದೆವು.
2018-04-26 17:00:56 +00:00
\s5
2019-01-21 20:20:50 +00:00
\v 27 ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, <ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
\v 28 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
\v 29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 30 <<ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,
\v 31 ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.
\v 32 ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, <ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು> ಎಂದು ಮಾತು ಕೊಟ್ಟಿದ್ದೇನೆ.
\p
2018-04-26 17:00:56 +00:00
\s5
2019-01-21 20:20:50 +00:00
\v 33 <<ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
\v 34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು>> ಎಂದನು.
2018-04-26 17:00:56 +00:00
\s5
\c 45
2019-01-21 20:20:50 +00:00
\s ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು
\p
\v 1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, <<ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ>> ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
\v 2 ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.
2018-04-26 17:00:56 +00:00
\p
2019-01-21 20:20:50 +00:00
\v 3 ಅವನು, <<ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?>> ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
2018-04-26 17:00:56 +00:00
\s5
2019-01-21 20:20:50 +00:00
\v 4 ಯೋಸೇಫನು, <<ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ>> ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ <<ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
\v 5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
\v 6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 7 ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
\p
\v 8 <<ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
2018-04-26 17:00:56 +00:00
\s5
2019-01-21 20:20:50 +00:00
\v 9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, <ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
\v 10 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
\v 11 ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು> ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
\p
2018-04-26 17:00:56 +00:00
\s5
2019-01-21 20:20:50 +00:00
\v 12 <<ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
\v 13 ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು>> ಎಂದು ಹೇಳಿ,
\p
2018-04-26 17:00:56 +00:00
\s5
2019-01-21 20:20:50 +00:00
\v 14 ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
\v 15 ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
\v 17 ಫರೋಹನು ಯೋಸೇಫನನ್ನು ಕರೆಯಿಸಿ, <<ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ <ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
\v 18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
2018-04-26 17:00:56 +00:00
\s5
2019-01-21 20:20:50 +00:00
\v 19 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
\v 20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ> >> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
\v 22 ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ
\f +
\fr 45:22
\ft 3.4 ಕಿಲೋಗ್ರಾಂ ಬೆಳ್ಳಿ.
\f* ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
\v 23 ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಆಗ ತನ್ನ ಅಣ್ಣತಮ್ಮಂದಿರಿಗೆ, <<ನೀವು ದಾರಿಯಲ್ಲಿ ಜಗಳಮಾಡಬೇಡಿರಿ>> ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
\p
\v 25 ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
\v 26 ಅವನಿಗೆ, <<ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ>> ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
\v 28 ಆಗ ಇಸ್ರಾಯೇಲನು, <<ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು>> ಎಂದನು.
2018-04-26 17:00:56 +00:00
\s5
\c 46
2019-01-21 20:20:50 +00:00
\s ಯಾಕೋಬನು ಐಗುಪ್ತಕ್ಕೆ ಹೋದದ್ದು
\p
\v 1 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.
\p
\v 2 ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, <<ಯಾಕೋಬನೇ, ಯಾಕೋಬನೇ>> ಎಂದು ಕರೆಯಲು, ಅವನು, <<ಇಗೋ ಇದ್ದೇನೆ>> ಎಂದನು.
\p
\v 3 ಆತನು ಅವನಿಗೆ, <<ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
\v 4 ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 5 ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
\v 6 ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.
\v 7 ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
\p
\v 9 ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.
\p
\v 10 ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.
\p
\v 11 ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.
\p
\v 13 ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.
\p
\v 14 ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್
\v 15 ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;
\v 17 ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.
\p
\v 18 ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.
\p
2018-04-26 17:00:56 +00:00
\s5
2019-01-21 20:20:50 +00:00
\v 19 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.
\v 20 ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
\p
\v 21 ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.
\p
\v 22 ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ದಾನನ ಮಗನು: ಹುಶೀಮ್.
\p
\v 24 ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.
\p
\v 25 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.
\v 27 ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.
\s ಯಾಕೋಬನು ಗೋಷೆನಿನಲ್ಲಿ ವಾಸಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 28 ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,
\v 29 ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.
\p
\v 30 ಇಸ್ರಾಯೇಲನು ಯೋಸೇಫನಿಗೆ, <<ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 31 ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು <<ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;
\v 32 ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ>> ಎಂದು ಹೇಳುತ್ತೇನೆ.
2018-04-26 17:00:56 +00:00
\s5
2019-01-21 20:20:50 +00:00
\v 33 ಫರೋಹನು ನಿಮ್ಮನ್ನು ಕರೆಯಿಸಿ, <<ನಿಮ್ಮ ಕಸುಬು ಏನು?>> ಎಂದು ಕೇಳಿದರೆ,
\v 34 <<ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು>> ಎಂದನು.
2018-04-26 17:00:56 +00:00
\s5
\c 47
2019-01-21 20:20:50 +00:00
\s ಫರೋಹನೊಡನೆ ಸಂದರ್ಶನ
\p
\v 1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, <<ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ>> ಎಂದನು.
\v 2 ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, <<ನಿಮ್ಮ ಕಸುಬು ಏನು?>> ಎಂದು ಅವರನ್ನು ಕೇಳಲು ಅವರು, <<ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು>> ಎಂದು ಹೇಳಿದರು.
\v 4 ಅದಲ್ಲದೆ ಅವರು ಫರೋಹನಿಗೆ, <<ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು>> ಎಂದು ಬೇಡಿಕೊಂಡರು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಫರೋಹನು ಯೋಸೇಫನಿಗೆ, <<ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;
\v 6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
\v 8 ಫರೋಹನು, <<ನಿನಗೆ ಈಗ ಎಷ್ಟು ವರ್ಷ?>> ಎಂದು ಕೇಳಿದನು.
\p
\v 9 ಯಾಕೋಬನು ಫರೋಹನಿಗೆ, <<ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ>> ಎಂದು ಹೇಳಿದನು.
\v 10 ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
\v 12 ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
\s ಬರಗಾಲದಲ್ಲಿ ಯೋಸೇಫನ ಆಡಳಿತ
\p
2018-04-26 17:00:56 +00:00
\s5
2019-01-21 20:20:50 +00:00
\v 13 ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
\v 14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, <<ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?>> ಎಂದು ಹೇಳಿದರು.
\p
\v 16 ಅದಕ್ಕೆ ಯೋಸೇಫನು, <<ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ>> ಎಂದನು.
\v 17 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, <<ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ>> ಎಂದರು.
\v 19 <<ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು>> ಎಂದು ಹೇಳಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
\v 21 ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ
\f +
\fr 47:21
\ft ನೆಲೆಗೊಳಿಸಿದನು.
\f* ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
\p
\v 22 ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯೋಸೇಫನು ಪ್ರಜೆಗಳಿಗೆ, <<ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
\v 24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ಅದಕ್ಕೆ ಅವರು, <<ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ>> ಎಂದರು.
\p
\v 26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
\s ಯಾಕೋಬನ ಆಜ್ಞೆ
\p
2018-04-26 17:00:56 +00:00
\s5
2019-01-21 20:20:50 +00:00
\v 27 ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
\p
\v 28 ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, <<ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
\v 30 ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು>> ಎಂದು ಹೇಳಲು, ಅವನು, <<ನೀನು ಹೇಳಿದಂತೆಯೇ ಮಾಡುತ್ತೇನೆ>> ಎಂದನು.
\p
\v 31 ಇಸ್ರಾಯೇಲನು, <<ಪ್ರಮಾಣಮಾಡು>> ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ
\f +
\fr 47:31
\ft ಮಂಚದ ಅಥವಾ ಹಾಸಿಗೆಯ ತಲೆದೆಸೆಯಲ್ಲಿ.
\f* ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.
2018-04-26 17:00:56 +00:00
\s5
\c 48
2019-01-21 20:20:50 +00:00
\s ಯಾಕೋಬನು ಯೋಸೇಫನ ಮಕ್ಕಳನ್ನು ಆಶೀರ್ವದಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಕೆಲವು ಕಾಲವಾದ ಮೇಲೆ ಯೋಸೇಫನಿಗೆ, <<ಅವನ ತಂದೆಯು ಅಸ್ವಸ್ಥನಾಗಿದ್ದಾನೆ>> ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.
\v 2 <<ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ>> ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.
2018-04-26 17:00:56 +00:00
\p
\s5
2019-01-21 20:20:50 +00:00
\v 3 ಯಾಕೋಬನು, ಯೋಸೇಫನಿಗೆ, <<ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.
\v 4 ಆತನು ನನಗೆ, <ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು> >> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 5 ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.
\v 6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.
\v 7 ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 8 ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, <<ಇವರು ಯಾರು?>> ಎಂದು ಕೇಳಲು,
\p
\v 9 ಯೋಸೇಫನು ತನ್ನ ತಂದೆಗೆ, <<ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು>> ಎಂದು ಹೇಳಿದನು. ಅದಕ್ಕವನು, <<ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ>> ಎಂದನು.
\v 10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಆಗ ಇಸ್ರಾಯೇಲನು ಯೋಸೇಫನಿಗೆ, <<ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ>> ಎಂದನು.
\p
\v 12 ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.
\v 13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 14 ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.
\p
\v 15 ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ,
\q1 <<ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ,
\q2 ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
\q1
\v 16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ
\q2 ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ.
2019-01-21 20:23:39 +00:00
\q1 ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ,
\q2 ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ>> ಎಂದನು.
2019-01-21 20:20:50 +00:00
\p
2018-04-26 17:00:56 +00:00
\s5
2019-01-21 20:20:50 +00:00
\v 17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
\v 18 ಯೋಸೇಫನು ತಂದೆಗೆ, <<ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು>> ಎಂದು ಹೇಳಿದನು.
2018-04-26 17:00:56 +00:00
\p
\s5
2019-01-21 20:20:50 +00:00
\v 19 ಆದರೆ ಅವನ ತಂದೆ ಒಪ್ಪದೆ, <<ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು>> ಎಂದು ಹೇಳಿದನು.
\v 20 ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, <<ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ>> ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 21 ಇಸ್ರಾಯೇಲನು ಯೋಸೇಫನಿಗೆ, <<ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
\v 22 ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\c 49
\s ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ
\p
\v 1 ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
\q1
\v 2 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ.
\q1 ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.
\q1
\s5
\v 3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,
\q1 ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
\q1
\v 4 ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ.
\q1 ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ,
\q1 ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!
\b
\q1
\s5
\v 5 ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು.
\q1 ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.
\q1
\v 6 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು.
\q1 ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ.
\q1 ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು.
\q1 ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
\q1
\s5
\v 7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು
\q1 ಅದು ಶಾಪಗ್ರಸ್ಥವಾದುದಾಗಿದೆ.
\q1 ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು.
\q1 ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
\q1
\s5
\v 8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು.
\q1 ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು.
\q1 ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
\q1
\s5
\v 9 ಯೆಹೂದನು
\f +
\fr 49:9
\ft ಅಥವಾ ಸಿಂಹಿಣಿ.
\f* ಪ್ರಾಯದ ಸಿಂಹದಂತಿದ್ದಾನೆ.
\q1 ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ.
\q1 ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ.
\q1 ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
\q1
\s5
\v 10
\f +
\fr 49:10
\ft ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಅದು ಯಾರಿಗೆ ಸೇರಲ್ಪಟ್ಟದಾಗಿರುತ್ತದೇ?
\f* ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ.
\q1 ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ.
\q1 ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
\q1
\s5
\v 11 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು.
\q1 ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು;
\q1 ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು;
\q1 ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
\q1
\v 12 ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು.
\q1 ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
\b
\q1
\s5
\v 13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು.
\q1 ಅವನಿಗೆ ಹಡಗುಗಳು ಸೇರುವ ಬಂದರು ಇರುವುದು.
\q1 ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
\b
\q1
\s5
\v 14 ಇಸ್ಸಾಕಾರನು
\f +
\fr 49:14
\ft ದನಕುರಿಗಳ ಎರಡು ಮಂದೆ ಅಥವಾ ಹಿಂಡುಗಳ ನಡುವೆ.
\f* ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.
\q1
\v 15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ
\q1 ಸುಖಾಸ್ಪದವೂ ಆಗಿರುವುದನ್ನು ಕಂಡನು.
\q1 ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು
\q1 ಬಿಟ್ಟೀ ಸೇವೆಮಾಡುವನು.
\b
\q1
\s5
\v 16 ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ
\q1 ತನ್ನ ಜನರಿಗೆ ನ್ಯಾಯತೀರಿಸುವನು.
\q1
\v 17 ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು
\q1 ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು.
\q1 ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
\b
\q1
\v 18 ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.
\b
\q1
\s5
\v 19 ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು,
\q1 ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.
\b
\q1
\v 20 ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು.
\q1 ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.
\b
\q1
\v 21 ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ.
\q1 ಅವನಿಂದ ಇಂಪಾದ ಮಾತುಗಳುಂಟಾಗುವವು.
\b
\q1
\s5
\v 22 ಯೋಸೇಫನು ಫಲಭರಿತವಾದ ವೃಕ್ಷವು,
\q1 ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ.
\q1 ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
\q1
\v 23 ಬಿಲ್ಲುಗಾರರು ಅವನನ್ನು ಆಕ್ರಮಿಸುವರು,
\q1 ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.
\q1
\s5
\v 24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ,
\q1 ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ
\q1 ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು.
\q1 ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
\q1
\s5
\v 25 ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ.
\q1 ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು,
\q1 ಆತನು ಮೇಲಣ ಆಕಾಶದಿಂದಲೂ,
\q1 ಕೆಳಗಣ ಸಾಗರದ ಸೆಲೆಗಳಿಂದಲೂ,
\q1 ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
\q1
\s5
\v 26
\f +
\fr 49:26
\ft ನಿನ್ನ ತಂದೆಯ ಆಶೀರ್ವಾದಗಳು ಸದಾಕಾಲವಾಗಿರುವ ಬೆಟ್ಟಗಳಿಗಿಂತ ಮಿಗಿಲಾಗಿದೆ.
\f* ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
\q1
\s5
\v 27 <<ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ.
\q1 ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ.
\q1 ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು>> ಎಂದನು.
\m
\s5
\v 28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
\s ಯಾಕೋಬನ ಮರಣ ಮತ್ತು ಸಮಾಧಿ
\p
\v 29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, <<ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
\v 30 ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
\s5
\v 31 ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
\v 32 ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು>> ಎಂದನು.
\p
\v 33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.
2018-04-26 17:00:56 +00:00
\s5
\c 50
\p
2019-01-21 20:20:50 +00:00
\v 1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
\v 2 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, <<ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ>> ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
\v 3 ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 4 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, <<ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
\v 5 <ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ> >> ಎಂದನು.
\p
\v 6 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, <<ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು>> ಎಂದು ಅಪ್ಪಣೆಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
\v 8 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
\v 9 ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
\v 11 ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ <<
\f +
\fr 50:11
\ft ಐಗುಪ್ತ್ಯರ ಶೋಕ.
\f* ಆಬೇಲ್ ಮಿಚ್ರಯಿಮ್>> ಎಂದು ಹೆಸರಾಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 12 ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
\v 13 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
\p
\v 14 ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
\s ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, <<ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
\v 16 ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
\v 17 <<ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ>> ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, <<ಇಗೋ ನಾವು ನಿನಗೆ ಗುಲಾಮರು>> ಎಂದರು.
\v 19 ಯೋಸೇಫನು ಅವರಿಗೆ, <<ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
\v 20 ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು>> ಎಂದನು.
\v 21 ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
\s ಯೋಸೇಫನ ಅಂತ್ಯ ದಿನಗಳು ಮತ್ತು ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 22 ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
\v 23 ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, <<ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು>> ಎಂದು ತಿಳಿದುಕೊಳ್ಳಿರಿ.
\v 25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, <<ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು>> ಎಂದು ಅವರಿಂದ ಪ್ರಮಾಣಮಾಡಿಸಿದನು.
\p
\v 26 ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.